< ಯೋಹಾನನು 18 >

1 ಯೇಸು ಪ್ರಾರ್ಥನೆಯನ್ನು ಮುಗಿಸಿದ ಮೇಲೆ ತಮ್ಮ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದರು. ಮತ್ತೊಂದು ಕಡೆ ಇರುವ ತೋಟದೊಳಗೆ ಯೇಸು ಮತ್ತು ಅವರ ಶಿಷ್ಯರು ಪ್ರವೇಶಿಸಿದರು.
tAH kathAH kathayitvA yIshuH shiShyAnAdAya kidronnAmakaM srota uttIryya shiShyaiH saha tatratyodyAnaM prAvishat|
2 ಅವರನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು. ಏಕೆಂದರೆ ಅನೇಕ ಸಾರಿ ಯೇಸು ತಮ್ಮ ಶಿಷ್ಯರೊಂದಿಗೆ ಅಲ್ಲಿ ಸೇರುತ್ತಿದ್ದರು.
kintu vishvAsaghAtiyihUdAstat sthAnaM parichIyate yato yIshuH shiShyaiH sArddhaM kadAchit tat sthAnam agachChat|
3 ಯೂದನು ಸೈನಿಕರ ತಂಡವನ್ನೂ ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಕಾವಲಾಳುಗಳನ್ನೂ ಕರೆದುಕೊಂಡು ತೋಟಕ್ಕೆ ಬಂದನು. ಸೈನಿಕರು ಮತ್ತು ಕಾವಲಾಳುಗಳು ದೀಪಗಳನ್ನು, ಪಂಜುಗಳನ್ನು ಮತ್ತು ಆಯುಧಗಳನ್ನು ಹಿಡಿದುಕೊಂಡಿದ್ದರು.
tadA sa yihUdAH sainyagaNaM pradhAnayAjakAnAM phirUshinA ncha padAtigaNa ncha gR^ihItvA pradIpAn ulkAn astrANi chAdAya tasmin sthAna upasthitavAn|
4 ಆಗ ಯೇಸು ತಮಗೆ ಸಂಭವಿಸುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ, “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು,
svaM prati yad ghaTiShyate taj j nAtvA yIshuragresaraH san tAnapR^ichChat kaM gaveShayatha?
5 ಅವರು ಯೇಸುವಿಗೆ, “ನಜರೇತಿನ ಯೇಸುವನ್ನು,” ಎಂದರು. ಅದಕ್ಕೆ ಯೇಸು ಅವರಿಗೆ, “ನಾನೇ ಆತನು,” ಎಂದರು. ಅವರನ್ನು ಹಿಡಿದುಕೊಡಲಿದ್ದ ಯೂದನು ಸಹ ಅವರೊಂದಿಗೆ ನಿಂತಿದ್ದನು.
te pratyavadan, nAsaratIyaM yIshuM; tato yIshuravAdId ahameva saH; taiH saha vishvAsaghAtI yihUdAshchAtiShThat|
6 ಯೇಸು ಅವರಿಗೆ, “ನಾನೇ ಆತನು,” ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.
tadAhameva sa tasyaitAM kathAM shrutvaiva te pashchAdetya bhUmau patitAH|
7 ಆಗ ಯೇಸು ಅವರಿಗೆ ತಿರುಗಿ, “ನೀವು, ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು, ಅವರು, “ನಜರೇತಿನ ಯೇಸುವನ್ನು,” ಎಂದರು.
tato yIshuH punarapi pR^iShThavAn kaM gaveShayatha? tataste pratyavadan nAsaratIyaM yIshuM|
8 ಅದಕ್ಕೆ ಯೇಸು, “ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ, ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಬಿಟ್ಟುಬಿಡಿರಿ,” ಎಂದರು.
tadA yIshuH pratyuditavAn ahameva sa imAM kathAmachakatham; yadi mAmanvichChatha tarhImAn gantuM mA vArayata|
9 ಹೀಗೆ, “ನೀನು ನನಗೆ ಕೊಟ್ಟವರಲ್ಲಿ ಯಾರನ್ನೂ ನಾನು ಕಳೆದುಕೊಳ್ಳಲಿಲ್ಲ,” ಎಂದು ತಾವೇ ಹೇಳಿದ ಮಾತು ನೆರವೇರಿತು.
itthaM bhUte mahyaM yAllokAn adadAsteShAm ekamapi nAhArayam imAM yAM kathAM sa svayamakathayat sA kathA saphalA jAtA|
10 ಆಗ ಸೀಮೋನ ಪೇತ್ರನು ತನ್ನಲ್ಲಿದ್ದ ಕತ್ತಿಯನ್ನು ತೆಗೆದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಸೇವಕನ ಹೆಸರು ಮಲ್ಕ.
tadA shimonpitarasya nikaTe kha NgalsthiteH sa taM niShkoShaM kR^itvA mahAyAjakasya mAlkhanAmAnaM dAsam Ahatya tasya dakShiNakarNaM ChinnavAn|
11 ಆಗ ಯೇಸು ಪೇತ್ರನಿಗೆ, “ನಿನ್ನ ಕತ್ತಿಯನ್ನು ಒರೆಯಲ್ಲಿ ಹಾಕು! ನನ್ನ ತಂದೆಯು ನನಗೆ ಕೊಟ್ಟ ಪಾತ್ರೆಯಿಂದ ನಾನು ಕುಡಿಯಬಾರದೋ?” ಎಂದು ಹೇಳಿದರು.
tato yIshuH pitaram avadat, kha NgaM koShe sthApaya mama pitA mahyaM pAtuM yaM kaMsam adadAt tenAhaM kiM na pAsyAmi?
12 ತರುವಾಯ ಸೈನಿಕರೂ ಸೈನ್ಯಾಧಿಕಾರಿಯೂ ಯೆಹೂದ್ಯರ ಕಾವಲಾಳುಗಳೂ ಯೇಸುವನ್ನು ಹಿಡಿದು ಕಟ್ಟಿದರು.
tadA sainyagaNaH senApati ryihUdIyAnAM padAtayashcha yIshuM ghR^itvA baddhvA hAnannAmnaH kiyaphAH shvashurasya samIpaM prathamam anayan|
13 ಅವರನ್ನು ಮೊದಲು ಅನ್ನನ ಬಳಿಗೆ ಕರೆದುಕೊಂಡು ಹೋದರು. ಅವನು ಆ ವರ್ಷದ ಮಹಾಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.
sa kiyaphAstasmin vatsare mahAyAjatvapade niyuktaH
14 “ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವುದು ಹಿತ,” ಎಂದು ಯೆಹೂದ್ಯರಿಗೆ ಸಲಹೆ ಕೊಟ್ಟ ಕಾಯಫನು ಇವನೇ.
san sAdhAraNalokAnAM ma NgalArtham ekajanasya maraNamuchitam iti yihUdIyaiH sArddham amantrayat|
15 ಸೀಮೋನ ಪೇತ್ರನು ಮತ್ತು ಇನ್ನೊಬ್ಬ ಶಿಷ್ಯನು ಯೇಸುವನ್ನು ಹಿಂಬಾಲಿಸಿದರು. ಆ ಶಿಷ್ಯನು ಮಹಾಯಾಜಕನಿಗೆ ಪರಿಚಯವಿದ್ದುದರಿಂದ ಯೇಸುವಿನ ಸಂಗಡ ಮಹಾಯಾಜಕನ ಅಂಗಳದೊಳಗೆ ಹೋದನು.
tadA shimonpitaro. anyaikashiShyashcha yIshoH pashchAd agachChatAM tasyAnyashiShyasya mahAyAjakena parichitatvAt sa yIshunA saha mahAyAjakasyATTAlikAM prAvishat|
16 ಆದರೆ ಪೇತ್ರನು ಬಾಗಿಲಿನ ಬಳಿಯಲ್ಲಿ ಹೊರಗೆ ನಿಂತಿದ್ದನು. ಮಹಾಯಾಜಕನಿಗೆ ಪರಿಚಯವಿದ್ದ ಆ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.
kintu pitaro bahirdvArasya samIpe. atiShThad ataeva mahAyAjakena parichitaH sa shiShyaH punarbahirgatvA dauvAyikAyai kathayitvA pitaram abhyantaram Anayat|
17 ಆಗ ದ್ವಾರಪಾಲಕಿಯು ಪೇತ್ರನಿಗೆ, “ನೀನು ಸಹ ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅದಕ್ಕವನು, “ನಾನಲ್ಲ,” ಎಂದನು.
tadA sa dvArarakShikA pitaram avadat tvaM kiM na tasya mAnavasya shiShyaH? tataH sovadad ahaM na bhavAmi|
18 ಆಗ ಚಳಿಯಿದ್ದುದರಿಂದ ಸೇವಕರೂ ಕಾವಲುಗಾರರೂ ಬೆಂಕಿಮಾಡಿ ಚಳಿ ಕಾಯಿಸಿಕೊಳ್ಳುತ್ತಿದ್ದರು. ಪೇತ್ರನೂ ಅವರೊಂದಿಗೆ ನಿಂತು ಚಳಿ ಕಾಯಿಸಿಕೊಳ್ಳುತ್ತಿದ್ದನು.
tataH paraM yatsthAne dAsAH padAtayashcha shItahetora NgArai rvahniM prajvAlya tApaM sevitavantastatsthAne pitarastiShThan taiH saha vahnitApaM sevitum Arabhata|
19 ಆಗ ಮಹಾಯಾಜಕನು ಯೇಸುವನ್ನು ಅವರ ಶಿಷ್ಯರ ವಿಷಯವಾಗಿಯೂ ಅವರ ಬೋಧನೆಯ ವಿಷಯವಾಗಿಯೂ ಪ್ರಶ್ನಿಸಿದನು.
tadA shiShyeShUpadeshe cha mahAyAjakena yIshuH pR^iShTaH
20 ಯೇಸು ಅವನಿಗೆ, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿಬರುವ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸುತ್ತಿದ್ದೆನು. ನಾನು ಮುಚ್ಚುಮರೆಯಾಗಿ ಏನೂ ಮಾತನಾಡಲಿಲ್ಲ.
san pratyuktavAn sarvvalokAnAM samakShaM kathAmakathayaM guptaM kAmapi kathAM na kathayitvA yat sthAnaM yihUdIyAH satataM gachChanti tatra bhajanagehe mandire chAshikShayaM|
21 ನೀನು ನನ್ನನ್ನು ಪ್ರಶ್ನಿಸುವುದೇಕೆ? ನಾನು ಅವರಿಗೆ ಏನು ಮಾತನಾಡಿದ್ದೇನೆಂದು ಕೇಳಿದವರನ್ನೇ ಪ್ರಶ್ನಿಸು, ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ,” ಎಂದರು.
mattaH kutaH pR^ichChasi? ye janA madupadesham ashR^iNvan tAneva pR^ichCha yadyad avadaM te tat jAninta|
22 ಯೇಸು ಇವುಗಳನ್ನು ಹೇಳಿದಾಗ, ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು.
tadetthaM pratyuditatvAt nikaTasthapadAti ryIshuM chapeTenAhatya vyAharat mahAyAjakam evaM prativadasi?
23 ಯೇಸು ಅವನಿಗೆ, “ನಾನು ಕೆಟ್ಟದ್ದನ್ನು ಮಾತನಾಡಿದ್ದರೆ ಕೆಟ್ಟದ್ದರ ವಿಷಯವಾಗಿ ಸಾಕ್ಷಿಕೊಡು; ಒಳ್ಳೆಯದನ್ನು ಮಾತನಾಡಿದ್ದರೆ ನೀನು ನನ್ನನ್ನು ಹೊಡೆಯುವುದೇಕೆ?” ಎಂದರು.
tato yIshuH pratigaditavAn yadyayathArtham achakathaM tarhi tasyAyathArthasya pramANaM dehi, kintu yadi yathArthaM tarhi kuto heto rmAm atADayaH?
24 ಆಗ ಅನ್ನನು ಯೇಸುವನ್ನು ಕಟ್ಟಿಸಿ ಮಹಾಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.
pUrvvaM hAnan sabandhanaM taM kiyaphAmahAyAjakasya samIpaM praiShayat|
25 ಇತ್ತ ಸೀಮೋನ ಪೇತ್ರನು ಚಳಿಕಾಯಿಸಿಕೊಳ್ಳುತ್ತಾ ನಿಂತಿರುವಾಗ, ಒಬ್ಬನು ಅವನಿಗೆ, “ನೀನು ಸಹ ಆತನ ಶಿಷ್ಯನಲ್ಲವೇ?” ಎಂದು ಕೇಳಿದರು. ಅದಕ್ಕೆ ಅವನು ಅದನ್ನು ನಿರಾಕರಿಸಿ, “ನಾನಲ್ಲ,” ಎಂದನು.
shimonpitarastiShThan vahnitApaM sevate, etasmin samaye kiyantastam apR^ichChan tvaM kim etasya janasya shiShyo na? tataH sopahnutyAbravId ahaM na bhavAmi|
26 ಮಹಾಯಾಜಕನ ಸೇವಕರಲ್ಲಿ ಕಿವಿ ಕತ್ತರಿಸಿದವನ ಬಂಧುವಾಗಿದ್ದ ಒಬ್ಬನು ಪೇತ್ರನಿಗೆ, “ನಾನು ನಿನ್ನನ್ನು ತೋಟದಲ್ಲಿ ಆತನ ಸಂಗಡ ಕಾಣಲಿಲ್ಲವೋ?” ಎಂದು ಕೇಳಿದ್ದಕ್ಕೆ,
tadA mahAyAjakasya yasya dAsasya pitaraH karNamachChinat tasya kuTumbaH pratyuditavAn udyAne tena saha tiShThantaM tvAM kiM nApashyaM?
27 ಪೇತ್ರನು ತಿರುಗಿ ನಿರಾಕರಿಸಿದನು. ಆಗ ಕೂಡಲೇ ಹುಂಜ ಕೂಗತೊಡಗಿತು.
kintu pitaraH punarapahnutya kathitavAn; tadAnIM kukkuTo. araut|
28 ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ರೋಮನ್ ರಾಜ್ಯಪಾಲನ ನಿವಾಸಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಅಶುದ್ಧವಾಗದಂತೆ ಪಸ್ಕದ ಊಟಮಾಡುವುದಕ್ಕೆ ಅಡ್ಡಿಯಾದೀತೆಂದು ಅವರು ರಾಜ್ಯಪಾಲನ ನಿವಾಸದ ಒಳಗೆ ಹೋಗಲಿಲ್ಲ.
tadanantaraM pratyUShe te kiyaphAgR^ihAd adhipate rgR^ihaM yIshum anayan kintu yasmin ashuchitve jAte tai rnistArotsave na bhoktavyaM, tasya bhayAd yihUdIyAstadgR^ihaM nAvishan|
29 ಆಗ ಪಿಲಾತನೇ ಹೊರಗೆ ಅವರ ಬಳಿಗೆ ಬಂದು, “ನೀವು ಈತನ ಮೇಲೆ ಏನು ದೂರು ತಂದಿದ್ದೀರಿ?” ಎಂದು ಕೇಳಿದ್ದಕ್ಕೆ,
aparaM pIlAto bahirAgatya tAn pR^iShThavAn etasya manuShyasya kaM doShaM vadatha?
30 ಯೆಹೂದಿ ನಾಯಕರು, “ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ್ಲ,” ಎಂದು ಹೇಳಿದರು.
tadA te petyavadan duShkarmmakAriNi na sati bhavataH samIpe nainaM samArpayiShyAmaH|
31 ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡುಹೋಗಿ ನಿಮ್ಮ ನಿಯಮದ ಪ್ರಕಾರ ಆತನಿಗೆ ತೀರ್ಪು ಮಾಡಿರಿ,” ಎಂದನು. ಅದಕ್ಕೆ ಯೆಹೂದ್ಯರು ಅವನಿಗೆ, “ಮರಣದಂಡನೆ ವಿಧಿಸುವ ಅಧಿಕಾರ ನಮಗೆ ಇಲ್ಲ,” ಎಂದು ಹೇಳಿದರು.
tataH pIlAto. avadad yUyamenaM gR^ihItvA sveShAM vyavasthayA vichArayata| tadA yihUdIyAH pratyavadan kasyApi manuShyasya prANadaNDaM karttuM nAsmAkam adhikAro. asti|
32 ಹೀಗೆ ಯೇಸು ತಾನು ಎಂಥಾ ಮರಣದಿಂದ ಸಾಯಲಿದ್ದೇನೆಂಬುದನ್ನು ಸೂಚಿಸಿ ಹೇಳಿದ ಮಾತು ನೆರವೇರಿತು.
evaM sati yIshuH svasya mR^ityau yAM kathAM kathitavAn sA saphalAbhavat|
33 ಆದ್ದರಿಂದ ಪಿಲಾತನು ತಿರುಗಿ ತನ್ನ ನಿವಾಸದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಅವರಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.
tadanantaraM pIlAtaH punarapi tad rAjagR^ihaM gatvA yIshumAhUya pR^iShTavAn tvaM kiM yihUdIyAnAM rAjA?
34 ಅದಕ್ಕೆ ಯೇಸು ಅವನಿಗೆ, “ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ ಇಲ್ಲವೆ ಬೇರೆಯವರು ನನ್ನನ್ನು ಕುರಿತು ನಿನಗೆ ಹೇಳಿದ್ದಾರೋ?” ಎಂದರು.
yIshuH pratyavadat tvam etAM kathAM svataH kathayasi kimanyaH kashchin mayi kathitavAn?
35 ಪಿಲಾತನು, “ನಾನೇನು ಯೆಹೂದ್ಯನೋ? ನಿನ್ನ ಜನಾಂಗವೂ ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದನು.
pIlAto. avadad ahaM kiM yihUdIyaH? tava svadeshIyA visheShataH pradhAnayAjakA mama nikaTe tvAM samArpayana, tvaM kiM kR^itavAn?
36 ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನನ್ನನ್ನು ಯೆಹೂದ್ಯರಿಗೆ ಒಪ್ಪಿಸದಂತೆ ನನ್ನ ಸೇವಕರು ಹೋರಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ,” ಎಂದು ಉತ್ತರಕೊಟ್ಟರು.
yIshuH pratyavadat mama rAjyam etajjagatsambandhIyaM na bhavati yadi mama rAjyaM jagatsambandhIyam abhaviShyat tarhi yihUdIyAnAM hasteShu yathA samarpito nAbhavaM tadarthaM mama sevakA ayotsyan kintu mama rAjyam aihikaM na|
37 ಪಿಲಾತನು ಯೇಸುವಿಗೆ, “ನೀನು ಅರಸನೋ?” ಎಂದು ಕೇಳಲು, ಯೇಸು, “ನಾನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿ, ಇದಕ್ಕಾಗಿಯೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸೇರಿದ ಎಲ್ಲರೂ ನನ್ನ ಸ್ವರವನ್ನು ಕೇಳುತ್ತಾರೆ,” ಎಂದರು.
tadA pIlAtaH kathitavAn, tarhi tvaM rAjA bhavasi? yIshuH pratyuktavAn tvaM satyaM kathayasi, rAjAhaM bhavAmi; satyatAyAM sAkShyaM dAtuM janiM gR^ihItvA jagatyasmin avatIrNavAn, tasmAt satyadharmmapakShapAtino mama kathAM shR^iNvanti|
38 ಪಿಲಾತನು ಯೇಸುವಿಗೆ, “ಸತ್ಯ ಎಂದರೇನು?” ಎಂದನು. ಅವನು ಇದನ್ನು ಕೇಳಿದ ಮೇಲೆ ತಿರುಗಿ ಯೆಹೂದ್ಯರ ಬಳಿಗೆ ಹೋಗಿ ಅವರಿಗೆ, “ನಾನು ಈತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.
tadA satyaM kiM? etAM kathAM paShTvA pIlAtaH punarapi bahirgatvA yihUdIyAn abhAShata, ahaM tasya kamapyaparAdhaM na prApnomi|
39 ಆದರೆ ಪಸ್ಕಹಬ್ಬದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟುಕೊಡುವ ಪದ್ಧತಿಯಿದೆಯಷ್ಟೆ; ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟುಕೊಡುವುದು ನಿಮಗೆ ಇಷ್ಟವೋ?” ಎಂದು ಕೇಳಿದನು.
nistArotsavasamaye yuShmAbhirabhiruchita eko jano mayA mochayitavya eShA yuShmAkaM rItirasti, ataeva yuShmAkaM nikaTe yihUdIyAnAM rAjAnaM kiM mochayAmi, yuShmAkam ichChA kA?
40 ಅದಕ್ಕೆ ಅವರೆಲ್ಲರೂ ತಿರುಗಿ, “ಇವನು ಬೇಡ, ನಮಗೆ ಬರಬ್ಬನನ್ನು ಬಿಟ್ಟುಕೊಡು,” ಎಂದು ಕೂಗಿಕೊಂಡರು. ಆ ಬರಬ್ಬನು ದರೋಡೆಕೋರನಾಗಿದ್ದನು.
tadA te sarvve ruvanto vyAharan enaM mAnuShaM nahi barabbAM mochaya| kintu sa barabbA dasyurAsIt|

< ಯೋಹಾನನು 18 >