< ಯೋಹಾನನು 2 >

1 ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು.
כעבור יומיים נערכה חתונה בכפר־קנה שבגליל, ובין האורחים היו ישוע, אמו ותלמידיו.
2 ಯೇಸು ಮತ್ತು ಅವರ ಶಿಷ್ಯರು ಮದುವೆಗೆ ಆಮಂತ್ರಿತರಾಗಿದ್ದರು.
3 ಅಲ್ಲಿ ದ್ರಾಕ್ಷಾರಸವು ಮುಗಿದು ಹೋದಾಗ, ಯೇಸುವಿನ ತಾಯಿ, “ಅವರಲ್ಲಿ ದ್ರಾಕ್ಷಾರಸ ಮುಗಿದು ಹೋಗಿದೆ,” ಎಂದು ಯೇಸುವಿಗೆ ತಿಳಿಸಿದಳು.
כשראתה אמו של ישוע כי אזל היין, פנתה אל בנה ואמרה:”אזל היין.“
4 ಯೇಸು ಆಕೆಗೆ, “ಅಮ್ಮಾ, ನಾನು ನಿಮಗೆ ಏನು ಮಾಡಲು ಬಯಸುತ್ತೀರಿ? ನನ್ನ ಸಮಯವು ಇನ್ನೂ ಬಂದಿಲ್ಲ,” ಎಂದು ಹೇಳಿದರು.
אולם ישוע השיב:”למה את אומרת לי את זה? עדיין לא הגיע זמני.“
5 ಯೇಸುವಿನ ತಾಯಿಯು ಸೇವಕರಿಗೆ, “ಆತನು ನಿಮಗೆ ಹೇಳಿದಂತೆ ಮಾಡಿರಿ,” ಎಂದು ಹೇಳಿದಳು.
למרות תשובה זאת אמרה אמו של ישוע למשרתים:”עשו כל מה שיגיד לכם לעשות.“
6 ಯೆಹೂದ್ಯರ ಶುದ್ಧಾಚಾರದ ಪ್ರಕಾರ ಅಲ್ಲಿ ಕಲ್ಲಿನ ಆರು ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಡದ ಅಳತೆಯುಳ್ಳದ್ದಾಗಿತ್ತು.
ששה כדים גדולים מאבן עמדו שם; בכל כד אפשר להכיל מאה עד מאה־חמישים ליטר (אלה היו סוג הכדים שהיהודים השתמשו בהם למנהג הטהרה).
7 ಯೇಸು ಸೇವಕರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ,” ಎಂದರು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು.
”מלאו את הכדים במים“, ביקש ישוע, והמשרתים מלאו את הכדים עד הסוף.
8 ಅನಂತರ ಯೇಸು ಅವರಿಗೆ, “ಈಗ ಇದನ್ನು ತೆಗೆದುಕೊಂಡು ಔತಣದ ಮೇಲ್ವಿಚಾರಕನಿಗೆ ಕೊಡಿರಿ,” ಎಂದರು. ಸೇವಕರು ತೆಗೆದುಕೊಂಡು ಹೋದರು.
”הגישו מן המשקה לראש המסיבה“, המשיך ישוע, והם עשו כדבריו.
9 ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂತೆಂದು ಅವನಿಗೆ ತಿಳಿದಿರಲಿಲ್ಲ. ಆದರೆ ನೀರನ್ನು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು,
ראש המסיבה לא ידע מאיפה היין, אבל המשרתים ידעו. כשטעם את המים שהפכו ליין, קרא לחתן ואמר:
10 “ಪ್ರತಿಯೊಬ್ಬನು ಉತ್ತಮ ದ್ರಾಕ್ಷಾರಸವನ್ನು ಮೊದಲು ತಂದಿಟ್ಟು ಜನರು ತುಂಬಾ ಕುಡಿದ ಮೇಲೆ ಸಾಧಾರಣವಾದದ್ದನ್ನು ಕೊಡುತ್ತಾರೆ, ನೀನಾದರೋ ಉತ್ತಮ ದ್ರಾಕ್ಷಾರಸವನ್ನು ಇನ್ನೂ ಇಟ್ಟುಕೊಂಡಿರುವೆ,” ಎಂದನು.
”זהו יין משובח מאוד! בדרך־כלל מגיש המארח תחילה את היין המשובח, ולאחר ששתו כולם לרוויה וכבר לא מסוגלים להבחין כל כך בטעם, הוא מגיש את היין הזול. אבל אתה שמרת את היין המשובח לסוף!“
11 ಯೇಸು ಗಲಿಲಾಯದ ಕಾನಾದಲ್ಲಿ ಮಾಡಿದ ಸೂಚಕಕಾರ್ಯಗಳಲ್ಲಿ ಇದು ಮೊದಲನೆಯದಾಗಿತ್ತು. ಹೀಗೆ ಯೇಸು ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಯೇಸುವಿನ ಶಿಷ್ಯರು ಅವರಲ್ಲಿ ನಂಬಿಕೆಯಿಟ್ಟರು.
הנס הזה בכפר־קנה היה הראשון שישוע חולל. הוא הביא את תלמידיו לידי אמונה בו.
12 ಇದಾದ ಮೇಲೆ ಯೇಸು ತಮ್ಮ ತಾಯಿ, ಸಹೋದರರು ಮತ್ತು ಶಿಷ್ಯರೊಡನೆ ಕಪೆರ್ನೌಮಿಗೆ ಹೋದರು. ಅಲ್ಲಿ ಅವರು ಕೆಲವು ದಿವಸ ಇದ್ದರು.
לאחר החתונה הלכו ישוע, אמו, אחיו ותלמידיו לכפר־נחום למספר ימים.
13 ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋದರು.
חג הפסח התקרב, וישוע עלה לירושלים.
14 ಅವರು ದೇವಾಲಯದ ಅಂಗಳದಲ್ಲಿ ದನ, ಕುರಿ ಹಾಗೂ ಪಾರಿವಾಳಗಳನ್ನು ಮಾರುವವರೂ ಹಣ ಬದಲಾಯಿಸುವವರೂ ಕುಳಿತಿರುವುದನ್ನು ಕಂಡರು.
הוא הלך לבית־המקדש ומצא שם סוחרי צאן, בקר ויונים (לצורך הקרבת הקרבנות) ומחליפי כספים.
15 ಯೇಸು ಹಗ್ಗಗಳಿಂದ ಕೊರಡೆ ಮಾಡಿ ಕುರಿ, ದನ ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ, ಹಣ ಬದಲಾಯಿಸುವವರ ನಾಣ್ಯಗಳನ್ನು ಮತ್ತು ಮೇಜುಗಳನ್ನು ಕೆಡವಿದರು.
הוא לקח מספר חבלים, שזר אותם לשוט עבה וגירש משם את כל האנשים ואת הצאן והבקר; הוא פיזר לכל עבר את מטבעותיהם של החלפנים, והפך את שולחנותיהם.
16 ಯೇಸು ಪಾರಿವಾಳ ಮಾರುವವರಿಗೆ, “ಇವುಗಳನ್ನು ತೆಗೆದುಕೊಂಡು ಹೋಗಿರಿ, ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯನ್ನಾಗಿ ಮಾಡಬೇಡಿರಿ,” ಎಂದರು.
ישוע פנה אל סוחרי היונים וקרא:”הוציאו מכאן את כל היונים, ואל תהפכו את בית אבי לשוק!“
17 ಯೇಸುವಿನ ಶಿಷ್ಯರು, “ನಿನ್ನ ಆಲಯದ ಮೇಲಿನ ಆಸಕ್ತಿಯು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,” ಎಂದು ಪವಿತ್ರ ವೇದದಲ್ಲಿ ಬರೆದಿರುವುದನ್ನು ಜ್ಞಾಪಕಮಾಡಿಕೊಂಡರು.
תלמידיו נזכרו בנבואה מתהלים:”כי קנאת ביתך אכלתני.“
18 ಆಗ ಯೆಹೂದ್ಯರು ಯೇಸುವಿಗೆ, “ಇವುಗಳನ್ನು ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು.
”באיזו רשות אתה עושה את כל הדברים האלה? תן לנו אות או הוכחה כדי שנאמין לך.“
19 ಅದಕ್ಕೆ ಯೇಸು ಅವರಿಗೆ, “ಈ ದೇವಾಲಯವನ್ನು ಕೆಡವಿರಿ. ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು,” ಎಂದು ಉತ್ತರಕೊಟ್ಟರು.
”הרסו את המקדש הזה, “ענה ישוע,”ואני אקים אותו מחדש תוך שלושה ימים!“
20 ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳಾದವು. ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆಯೋ?” ಎಂದರು.
”מה?“קראו בתמיהה.”המקדש הזה ניבנה במשך ארבעים־ושש שנים, ואתה טוען שתוכל להקימו מחדש תוך שלושה ימים?“
21 ಆದರೆ ಯೇಸು ತಮ್ಮ ದೇಹವೆಂಬ ಆಲಯವನ್ನು ಕುರಿತು ಹೇಳಿದ್ದರು.
ואולם באומרו”מקדש“הוא התכוון לגופו.
22 ಆದ್ದರಿಂದ ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದಾಗ, ಅವರ ಶಿಷ್ಯರು ಅವರು ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಪವಿತ್ರ ವೇದವನ್ನೂ ಯೇಸು ತಮಗೆ ಹೇಳಿದ ಮಾತನ್ನೂ ನಂಬಿದರು.
לאחר שקם לתחייה נזכרו תלמידיו בדבריו והאמינו בכתוב ובדברי ישוע, כי ראו שהכול התקיים.
23 ಯೇಸು ಪಸ್ಕಹಬ್ಬದಂದು ಯೆರೂಸಲೇಮಿನಲ್ಲಿದ್ದಾಗ ಮಾಡಿದ ಸೂಚಕಕಾರ್ಯಗಳನ್ನು ಅನೇಕರು ಕಂಡು ಅವರ ಹೆಸರಿನಲ್ಲಿ ನಂಬಿಕೆ ಇಟ್ಟರು.
כאשר היה ישוע בירושלים בחג הפסח, אנשים רבים האמינו שהוא המשיח, כי הם ראו את הנסים והנפלאות שחולל.
24 ಆದರೆ ಯೇಸು ಎಲ್ಲರನ್ನೂ ಅರಿತವರಾದ್ದರಿಂದ ತಮ್ಮನ್ನು ಒಪ್ಪಿಸಿಕೊಡಲಿಲ್ಲ.
אך ישוע לא השתכנע שהם באמת מאמינים, משום שידע מה הפכפך אופיו של האדם.
25 ಯೇಸು ಮನುಷ್ಯರ ಅಂತರಂಗವನ್ನು ತಿಳಿದವರಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಅವರಿಗೆ ಸಾಕ್ಷಿ ಕೊಡಬೇಕಾದ ಅವಶ್ಯವಿರಲಿಲ್ಲ.

< ಯೋಹಾನನು 2 >