< ಯೋಹಾನನು 3 >
1 ಯೆಹೂದ್ಯರ ಆಡಳಿತ ಮಂಡಳಿಯ ಸದಸ್ಯನೂ ಫರಿಸಾಯನೂ ಆದ ನಿಕೊದೇಮನೆಂಬ ಮನುಷ್ಯನಿದ್ದನು.
有一個法利賽人,名叫尼苛德摩,是個猶太人首領。
2 ಇವನು ಒಂದು ರಾತ್ರಿ ಯೇಸುವಿನ ಬಳಿಗೆ ಬಂದು, “ಗುರುವೇ, ನೀವು ದೇವರ ಬಳಿಯಿಂದ ಬಂದ ಬೋಧಕರೆಂದು ನಾವು ಬಲ್ಲೆವು. ಏಕೆಂದರೆ ದೇವರು ಒಬ್ಬನ ಸಂಗಡ ಇಲ್ಲದಿದ್ದರೆ ನೀವು ಮಾಡುವ ಸೂಚಕಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು,” ಎಂದನು.
有一夜,他來到耶穌前,向衪說:「辣彼,我們知道你是由天主來的師傅,因為天主若不同他在一起,誰也不能行你所行的神跡。」
3 ಯೇಸು ಅವನಿಗೆ, “ಒಬ್ಬನು ಮತ್ತೊಮ್ಮೆ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.”
耶穌回答說:「我實實在在告訴你:人除非由上而生,不能見到天主的國。」
4 ನಿಕೊದೇಮನು ಯೇಸುವಿಗೆ, “ಒಬ್ಬನು ವಯಸ್ಸಾದ ಮೇಲೆ ಮತ್ತೆ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಾದೀತೇ?” ಎಂದು ಕೇಳಿದನು.
尼苛德摩說:「人已年老,怎麼能重生呢?難道他還能再入母腹而重生嗎?」
5 ಯೇಸು ಅವನಿಗೆ, “ಯಾರು ನೀರಿನಿಂದಲೂ ಆತ್ಮದಿಂದಲೂ ಹುಟ್ಟುವದಿಲ್ಲವೋ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.
耶穌回答說:「我實實在在告訴你:人除非由水和聖神而生,不能進天主的國:
6 ಮಾಂಸದಿಂದ ಹುಟ್ಟಿದ್ದು ಮಾಂಸವೇ, ದೇವರಾತ್ಮದಿಂದ ಹುಟ್ಟಿದವರು ಆತ್ಮವೇ.
由肉的生的屬肉,由神生的屬於神。
7 ‘ನೀವು ಮತ್ತೆ ಹುಟ್ಟಬೇಕಾಗಿದೆ,’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ.
你不要驚奇,因我給你說了:你們應該由上而生。
8 ಗಾಳಿಯು ಅದರ ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಅದರಂತೆಯೇ ಆತ್ಮದಿಂದ ಹುಟ್ಟಿದ ಪ್ರತಿಯೊಬ್ಬರೂ ಹೀಗೇ ಇದ್ದಾರೆ,” ಎಂದು ಉತ್ತರಕೊಟ್ಟರು.
風隨意向裏吹,你到風的響聲,卻不知道風從裏來,往那裏去:凡由聖神而生的就是這樣。」
9 ನಿಕೊದೇಮನು ಯೇಸುವಿಗೆ, “ಇದೆಲ್ಲಾ ಹೇಗೆ ಸಾಧ್ಯ?” ಎಂದು ಕೇಳಿದನು.
尼苛德摩問說:「這事怎麼能成就呢?」
10 ಯೇಸು ಅವನಿಗೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಇವುಗಳು ತಿಳಿಯುವುದಿಲ್ಲವೋ?
耶穌回答說:「你是以色列的師傅;連這事你都不知道嗎?
11 ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ಕಂಡಿದ್ದಕ್ಕೆ ಸಾಕ್ಷಿ ನೀಡುತ್ತೇವೆ. ನೀವಾದರೋ ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.
我實實在在告訴你:我們知道的,我們才講論;我們見過的,我們才作證;而你們卻不接受我們的作證。
12 ನಾನು ಭೂಲೋಕದ ಕಾರ್ಯಗಳನ್ನು ನಿಮಗೆ ಹೇಳುವಾಗಲೇ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?
若我給你說地上的事,你們尚且不信;若我給你們說天上的事,你們怎麼會信呢?
13 ಪರಲೋಕದಿಂದ ಇಳಿದು ಬಂದ ಮನುಷ್ಯಪುತ್ರನಾದ ನನ್ನನ್ನು ಹೊರತು ಯಾರೂ ಪರಲೋಕಕ್ಕೆ ಏರಿ ಹೋದವರಿಲ್ಲ.
沒有人上過天,除了那自天降下而仍在天上的人子。
14 ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಮೇಲೆ ಎತ್ತಿದ ಹಾಗೆಯೇ ಮನುಷ್ಯಪುತ್ರನಾದ ನನ್ನನ್ನು ಸಹ ಮೇಲಕ್ಕೆ ಏರಿಸಬೇಕು.
正如梅瑟曾在曠野裏高舉了蛇,人子也應照樣被舉起來,
15 ಹೀಗೆ ಮನುಷ್ಯಪುತ್ರನಾದ ನನ್ನನ್ನು ನಂಬುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವರು.” (aiōnios )
使凡信的人,在衪內得永生。 (aiōnios )
16 ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು. (aiōnios )
天主這樣愛了世界,甚至賜下了的獨生子,使凡信衪的人不至喪亡,反而獲得永生, (aiōnios )
17 ದೇವರು ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ತಮ್ಮ ಪುತ್ರನ ಮುಖಾಂತರ ಲೋಕದ ಜನರನ್ನು ರಕ್ಷಿಸುವುದಕ್ಕಾಗಿಯೇ ಅವರನ್ನು ಲೋಕಕ್ಕೆ ಕಳುಹಿಸಿದರು.
因為天主沒有派遺子到世界上來宣判世界,而是叫世界藉著衪而獲救。
18 ಮಗನನ್ನು ನಂಬುವವನಿಗೆ ತೀರ್ಪು ಆಗುವುದಿಲ್ಲ. ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ ಅವನು ದೇವರ ಒಬ್ಬನೇ ಪುತ್ರನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
那信從衪的,不受審判;那不信的,已受了審判,因為他沒有信從天主獨生子的名字。
19 ಆ ತೀರ್ಪು ಏನೆಂದರೆ: ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
審判就在於此:光明來到了世界,世人卻愛黑暗甚於光明,因為他們的行為是邪惡的。
20 ಕೇಡನ್ನು ಮಾಡುವವರು ಬೆಳಕನ್ನು ದ್ವೇಷಿಸುತ್ತಾರೆ ಮತ್ತು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವರು ಮಾಡಿರುವ ಕೆಟ್ಟ ಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ.
的確,凡作惡的,都憎惡光明,也不來就光明,怕自己的行為彰顯出來;
21 ಆದರೆ ಸತ್ಯವನ್ನು ಅನುಸರಿಸುವವರು ನಡೆದಿರುವ ತಮ್ಮ ಕೃತ್ಯಗಳು ದೇವರಿಂದ ಆದವುಗಳೆಂದು ಪ್ರಕಟಿಸುವಂತೆ ಬೆಳಕಿಗೆ ಬರುತ್ತಾರೆ.
然而履行真理的,卻來就光明,為顯示出他的行為是在天主內完成的。
22 ಇವುಗಳಾದ ಮೇಲೆ ಯೇಸುವೂ ಅವರ ಶಿಷ್ಯರೂ ಯೂದಾಯ ಪ್ರಾಂತಕ್ಕೆ ಬಂದರು. ಅಲ್ಲಿ ಯೇಸು ಅವರೊಂದಿಗೆ ಇದ್ದು ದೀಕ್ಷಾಸ್ನಾನ ಮಾಡಿಸುತ್ತಿದ್ದರು.
此後,耶穌和門徒來到猶太地,同他們一起住在那裏施洗。
23 ಇದಲ್ಲದೆ ಯೋಹಾನನು ಸಹ ಸಲೀಮ್ ಎಂಬ ಊರಿನ ಸಮೀಪದಲ್ಲಿದ್ದ ಐನೋನ್ ಎಂಬ ಸ್ಥಳದಲ್ಲಿ ದೀಕ್ಷಾಸ್ನಾನ ಮಾಡಿಸುತ್ತಿದ್ದನು. ಏಕೆಂದರೆ ಅಲ್ಲಿ ಬಹಳ ನೀರು ಇತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
那時若翰也在臨近撒林的艾農施洗,因為那裡水多,人們常來受洗。
24 ಆಗ ಯೋಹಾನನು ಇನ್ನೂ ಸೆರೆಯಲ್ಲಿ ಬಂಧಿತನಾಗಿರಲಿಲ್ಲ.
那時,若翰尚未被投在監獄裏。
25 ಯೋಹಾನನ ಶಿಷ್ಯರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಿವಾದ ಉಂಟಾಯಿತು.
若翰的門徒和一個猶太人,關於取潔禮發生了爭辯。
26 ಅವರು ಯೋಹಾನನ ಬಳಿಗೆ ಬಂದು ಅವನಿಗೆ, “ಗುರುವೇ, ಯೊರ್ದನ್ ನದಿಯ ಆಚೆದಡದಲ್ಲಿ ನಿನ್ನೊಡನೆ ಇದ್ದ ಒಬ್ಬರ ಬಗ್ಗೆ ನೀನು ಸಾಕ್ಷಿ ಕೊಟ್ಟೆಯಲ್ಲಾ. ಇಗೋ, ಅವರು ದೀಕ್ಷಾಸ್ನಾನ ಮಾಡಿಸುತ್ತಿದ್ದಾರೆ ಮತ್ತು ಎಲ್ಲರೂ ಅವರ ಬಳಿಗೆ ಹೋಗುತ್ತಿದ್ದಾರೆ,” ಎಂದರು.
他們便來到若翰前對他說:「辣彼,曾同你一起在約旦河對岸,你給他作證的那位,看,他也施洗;並且眾人都到他那裏去了。」
27 ಅದಕ್ಕೆ ಯೋಹಾನನು, “ಪರಲೋಕದಿಂದ ಒಬ್ಬ ಮನುಷ್ಯನಿಗೆ ದಯಪಾಲಿಸದ ಹೊರತು ಅವನು ಯಾವುದನ್ನೂ ಹೊಂದಲಾರನು.
若翰回答說:「人不能領受什麼,除非有天主的賞賜。
28 ‘ನಾನು ಕ್ರಿಸ್ತನಲ್ಲ, ಆದರೆ ಅವರ ಮುಂದೂತನೆಂದು,’ ಹೇಳಿದ್ದಕ್ಕೆ ನೀವೇ ಸಾಕ್ಷಿ.
你們自己可以給我作證,我曾說過:我不是默西亞,我只是被派遺作衪前驅的。
29 ಮದುಮಗಳು ಮದುಮಗನಿಗೆ ಸೇರಿದವಳು. ಆದರೂ ಮದುಮಗನ ಸ್ನೇಹಿತನು ನಿಂತುಕೊಂಡು ಆತನ ಮಾತಿಗೆ ಕಿವಿಗೊಟ್ಟು, ಮದುಮಗನ ಸ್ವರ ಕೇಳಿ ಸಂತೋಷಪಡುತ್ತಾನೆ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.
有新娘的是新郎;新郎的朋友,侍立靜聽,一聽得新郎的聲音,就非常喜樂:我的喜樂已滿足了。
30 ಆತನು ಹೆಚ್ಚಾಗಬೇಕು ನಾನು ಕಡಿಮೆಯಾಗಬೇಕು.
衪應該興盛,我卻應該衰微。
31 “ಮೇಲಿನಿಂದ ಬರುವವರೇ ಎಲ್ಲರಿಗಿಂತಲೂ ಮೇಲಾದವರು, ಭೂಲೋಕದವನಾದರೋ ಭೂಮಿಗೆ ಸೇರಿದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವವರು ಎಲ್ಲವುಗಳಿಗಿಂತಲೂ ಮೇಲಾದವರು.
那由上而來的,超越一切。那出於下地的,是屬於下地,且講論下地的事;那由上天而來的,超越萬有之上,
32 ಅವರು ಯಾವುದನ್ನು ಕಂಡು ಕೇಳಿದರೋ ಅದಕ್ಕೆ ಸಾಕ್ಷಿಕೊಡುತ್ತಾರೆ. ಆದರೆ ಅವರ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.
衪對所見所聞的,予以作證,卻沒有人接受衪的見證。
33 ಅವರ ಸಾಕ್ಷಿಯನ್ನು ಸ್ವೀಕರಿಸಿದವರು ದೇವರು ಸತ್ಯವಂತರೆಂದು ಮುದ್ರೆ ಹಾಕಿದ್ದಾರೆ.
那接受衪見證的人,就證實天主是真實的。
34 ದೇವರು ಕಳುಹಿಸಿದವರಾದರೋ ದೇವರ ಮಾತುಗಳನ್ನೇ ಆಡುತ್ತಾರೆ. ಏಕೆಂದರೆ ದೇವರು ಅವರಿಗೆ ಆತ್ಮವನ್ನು ಮಿತಿಯಿಲ್ಲದೆ ಕೊಟ್ಟಿದ್ದಾರೆ.
天主所派遺的,講論天主的話,因為天主把聖神無限量的賞賜了衪。
35 ತಂದೆಯು ಪುತ್ರನನ್ನು ಪ್ರೀತಿಸಿ ಎಲ್ಲವನ್ನೂ ಅವರ ಕೈಯಲ್ಲಿ ಕೊಟ್ಟಿದ್ದಾರೆ.
父愛子,並把一切交在衪手中。
36 ಯಾರು ದೇವಪುತ್ರ ಆಗಿರುವವರನ್ನು ನಂಬುವರೋ ಅವರು ನಿತ್ಯಜೀವ ಪಡೆದಿರುತ್ತಾರೆ. ದೇವಪುತ್ರ ಆಗಿರುವವರನ್ನು ನಂಬದವರು ನಿತ್ಯಜೀವವನ್ನು ಕಾಣುವುದಿಲ್ಲ. ಆದರೆ ದೇವರ ಕೋಪಾಗ್ನಿಯು ಅವರ ಮೇಲೆ ನೆಲೆಗೊಂಡಿರುವುದು,” ಎಂದು ಹೇಳಿದನು. (aiōnios )
那信從衪的,便有永生,那不信從子的,不但不會見到生命,反有天主的義怒常在他身上。 (aiōnios )