< ಯೋಹಾನನು 6 >
1 ಇವುಗಳಾದ ಮೇಲೆ ಯೇಸು ತಿಬೇರಿಯದ ಗಲಿಲಾಯ ಸರೋವರದ ಆಚೆಗೆ ಹೋದರು.
こうした事ののち,イエスはティベリアスの海とも呼ばれるガリラヤの海の向こう岸へ出発した。
2 ಯೇಸು ರೋಗಿಗಳಲ್ಲಿ ನಡೆಸಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ ಜನರ ದೊಡ್ಡ ಗುಂಪು ಯೇಸುವನ್ನು ಹಿಂಬಾಲಿಸಿತು.
大群衆が彼に従った。彼が病気の人に対して行なったしるしを見たからである。
3 ಯೇಸು ಬೆಟ್ಟವನ್ನೇರಿ ಅಲ್ಲಿ ತಮ್ಮ ಶಿಷ್ಯರೊಂದಿಗೆ ಕುಳಿತುಕೊಂಡರು.
イエスは山の中に上って行き,弟子たちと共にそこに座った。
4 ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು.
ところで,ユダヤ人の過ぎ越しの祭りが近づいていた。
5 ಯೇಸು ಕಣ್ಣೆತ್ತಿ ನೋಡಿ ಮತ್ತು ಜನರ ದೊಡ್ಡ ಗುಂಪು ಅವರ ಕಡೆಗೆ ಬರುವುದನ್ನು ಕಂಡು ಫಿಲಿಪ್ಪನಿಗೆ, “ಇವರು ಊಟ ಮಾಡಲು ನಾವು ರೊಟ್ಟಿಯನ್ನು ಎಲ್ಲಿಂದ ಕೊಂಡುಕೊಳ್ಳೋಣ?” ಎಂದರು.
それで,イエスは目を上げて,大群衆が自分のもとに来ているのを見ると,フィリポに言った,「この人々に食べさせるために,どこでパンを買えるだろうか」 。
6 ಅವನನ್ನು ಪರೀಕ್ಷಿಸುವುದಕ್ಕಾಗಿ ಯೇಸು ಇದನ್ನು ಹೇಳಿದರು. ಏಕೆಂದರೆ ತಾನು ಮಾಡಲಿರುವುದು ಏನೆಂದು ಯೇಸುವಿಗೆ ತಿಳಿದಿತ್ತು.
イエスは彼を試すためにこのことを言った。自分が行なおうとしていることを知っていたからである。
7 ಫಿಲಿಪ್ಪನು ಯೇಸುವಿಗೆ, “ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಆರು ತಿಂಗಳ ಕೂಲಿಯಷ್ಟು ರೊಟ್ಟಿಗಳೂ ಅವರಿಗೆ ಸಾಲುವುದಿಲ್ಲ,” ಎಂದನು.
フィリポは答えた,「みんなが少しずつ受け取るとしても,二百デナリ分のパンでも彼らのためには十分ではないでしょう」。
8 ಆಗ ಯೇಸುವಿನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು
弟子の一人で,シモン・ペトロの兄弟アンデレが言った,
9 ಯೇಸುವಿಗೆ, “ಇಲ್ಲಿ ಒಬ್ಬ ಹುಡುಗನ ಬಳಿ ಐದು ಜವೆಗೋಧಿಯ ರೊಟ್ಟಿಗಳೂ ಎರಡು ಮೀನುಗಳೂ ಇವೆ. ಆದರೆ ಅಷ್ಟೊಂದು ಜನರಿಗೆ ಇವು ಹೇಗೆ ಸಾಕಾಗುತ್ತವೆ?” ಎಂದನು.
「ここに,大麦のパン五つと二匹の魚を持っている少年がいます。それでも,こんなに大勢の人の間ではいったい何になるでしょう」。
10 ಯೇಸು, “ಜನರನ್ನು ಊಟಕ್ಕೆ ಕುಳಿತುಕೊಳ್ಳಲು ಹೇಳಿರಿ,” ಎಂದರು. ಆ ಸ್ಥಳದಲ್ಲಿ ಬಹಳ ಹುಲ್ಲು ಇದ್ದುದರಿಂದ ಜನರೆಲ್ಲರೂ ಕುಳಿತುಕೊಂಡರು, ಗಂಡಸರೇ ಐದು ಸಾವಿರ ಮಂದಿ ಇದ್ದರು.
イエスは言った,「人々を座らせなさい」 。ところで,その場所には草がたくさんあった。そこで人々は座った。数にして,およそ五千人であった。
11 ಆಮೇಲೆ ಯೇಸು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಬೇಕಾದಷ್ಟು ಹಂಚಿದರು. ಅದೇ ರೀತಿಯಲ್ಲಿ ಮೀನುಗಳನ್ನು ಅವರಿಗೆ ಹಂಚಿದರು.
イエスはパンを取り,感謝をささげてから,弟子たちに配り,弟子たちが座っている者たちに配った。魚も同じようにして,人々が望むだけ配った。
12 ಅವರೆಲ್ಲರೂ ತಿಂದು ತೃಪ್ತಿಯಾದ ಮೇಲೆ ಯೇಸು ತಮ್ಮ ಶಿಷ್ಯರಿಗೆ, “ಏನೂ ನಷ್ಟವಾಗದಂತೆ ಉಳಿದ ತುಂಡುಗಳನ್ನು ಕೂಡಿಸಿರಿ,” ಎಂದರು.
人々が満ち足りると,弟子たちに言った,「何も無駄にならないように,残された切れ端を拾い集めなさい」 。
13 ಅದರಂತೆ ಅವರು ಐದು ಜವೆಗೋಧಿಯ ರೊಟ್ಟಿಗಳಲ್ಲಿ ತಿಂದವರಿಂದ ಉಳಿದ ತುಂಡುಗಳನ್ನು ಕೂಡಿಸಿ, ಹನ್ನೆರಡು ಬುಟ್ಟಿಗಳಲ್ಲಿ ತುಂಬಿದರು.
そこで彼らは拾い集め,大麦のパン五つから出た切れ端で十二のかごを一杯にした。それは,食べた人々が残したものであった。
14 ಆ ಜನರು ಯೇಸು ಮಾಡಿದ ಸೂಚಕಕಾರ್ಯವನ್ನು ಕಂಡು, “ಸತ್ಯವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಇವರೇ,” ಎಂದರು.
そのため,イエスの行なったしるしを見たとき,人々は言った,「これこそ本当に,世に来ることになっている預言者だ」。
15 ಅವರು ಬಂದು ತನ್ನನ್ನು ಹಿಡಿದುಕೊಂಡುಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ಯೇಸು ತಿಳಿದು ತಾವೊಬ್ಬರೇ ಪುನಃ ಬೆಟ್ಟದ ಕಡೆಗೆ ಹೋದರು.
それでイエスは,人々が来て,自分を王とするために力ずくで連れて行こうとしているのに気づき,ひとりで再び山へ退いた。
16 ಸಂಜೆಯಾದಾಗ ಯೇಸುವಿನ ಶಿಷ್ಯರು ಸರೋವರಕ್ಕೆ ಹೋಗಿ,
夕方になった時,弟子たちは海に下りて行った。
17 ದೋಣಿಯನ್ನು ಹತ್ತಿ ಸರೋವರ ಮಾರ್ಗವಾಗಿ ಕಪೆರ್ನೌಮಿಗೆ ಸಾಗಿದರು. ಆಗಲೇ ಕತ್ತಲಾಗಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.
そして彼らは舟に乗り込み,カペルナウムに向けて海を渡った。すでに暗くなっていたが,イエスは彼らのもとへ来ていなかった。
18 ಆಗ ರಭಸವಾದ ಗಾಳಿಯು ಬೀಸಿದ್ದರಿಂದ ಸರೋವರವು ಅಲ್ಲೋಲಕಲ್ಲೋಲವಾಯಿತು.
大風が吹いて,海は荒れていた。
19 ಅವರು ದೋಣಿಯನ್ನು ನಡೆಸುತ್ತಾ ಸುಮಾರು ಐದಾರು ಕಿಲೋಮೀಟರಿನಷ್ಟು ದೂರ ಹೋದ ಮೇಲೆ ಯೇಸು ಸರೋವರದ ಮೇಲೆ ನಡೆದು ದೋಣಿಯ ಕಡೆಗೆ ಸಮೀಪಿಸುತ್ತಿರುವುದನ್ನು ಅವರು ಕಂಡು, ಭಯಪಟ್ಟರು.
それで,二十五ないし三十スタディアほどこいできたとき,彼らは海の上を歩いて舟に近づいて来るイエスを見た。それで彼らは恐れた。
20 ಆದರೆ ಯೇಸು ಅವರಿಗೆ, “ನಾನೇ, ಭಯಪಡಬೇಡಿರಿ,” ಎಂದರು.
しかし彼は彼らに言った,「わたしはある。恐れてはいけない」 。
21 ಆಗ ಶಿಷ್ಯರು ಯೇಸುವನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಅಷ್ಟರಲ್ಲಿ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಸೇರಿತು.
それで彼らは彼を舟の中に迎えようとした。すぐに舟は彼らが向かっていた土地に着いた。
22 ಮರುದಿನ ಅಲ್ಲಿ ಒಂದೇ ದೋಣಿಯ ಹೊರತು ಬೇರೆ ಇರಲಿಲ್ಲವೆಂದೂ ಯೇಸುವಿನ ಶಿಷ್ಯರು ಮಾತ್ರ ಆ ದೋಣಿಯಲ್ಲಿ ಹೋದರೆಂದೂ ಯೇಸು ತಮ್ಮ ಶಿಷ್ಯರ ಸಂಗಡ ದೋಣಿಯಲ್ಲಿ ಹೋಗಲಿಲ್ಲವೆಂದೂ ಸರೋವರದ ಆಚೆಯಲ್ಲಿ ನಿಂತಿದ್ದ ಜನರು ಅರಿತುಕೊಂಡರು.
次の日,湖の向こう岸に立っていた大群衆は,弟子たちが乗り込んだ一そうのほかにはそこに舟がなかったこと,またイエスが弟子たちと共に舟に乗ることなく,弟子たちだけで出発したことに気が付いた。
23 ಬೇರೆ ದೋಣಿಗಳು ತಿಬೇರಿಯದಿಂದ ಹೊರಟು, ಕರ್ತ ಯೇಸು ಕೃತಜ್ಞತೆ ಸಲ್ಲಿಸಿ ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.
しかしながら,主が感謝をささげてから彼らがパンを食べた場所の近くの岸に,ティベリアスから数そうの舟が来た。
24 ಆಗ ಯೇಸು ಮತ್ತು ಅವರ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ನೋಡಿ, ದೋಣಿಗಳಲ್ಲಿ ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.
それで群衆は,そこにイエスも弟子たちもいないことに気が付くと,舟に乗り込み,イエスを探してカペルナウムに来た。
25 ಜನರು ಯೇಸುವನ್ನು ಸರೋವರದ ಆಚೆ ಕಡೆಯಲ್ಲಿ ಕಂಡು ಅವರಿಗೆ, “ಗುರುವೇ, ನೀವು ಇಲ್ಲಿಗೆ ಬಂದದ್ದು ಯಾವಾಗ?” ಎಂದರು.
湖の向こう岸で彼を見つけると,彼らは尋ねた,「ラビ,いつここにおいでになったのですか」。
26 ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.
イエスは彼らに答えた,「本当にはっきりとあなた方に告げる。あなた方がわたしを探しているのは,しるしを見たからではなく,パンを食べて満ち足りたからだ。
27 ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು. (aiōnios )
滅びる食物のためではなく,永遠の命へと残る食物のために働きなさい。それは人の子があなた方に与えるものだ。神なる父が彼に証印を押されたからだ」 。 (aiōnios )
28 ಆಗ ಅವರು ಯೇಸುವಿಗೆ, “ನಾವು ದೇವರ ಕಾರ್ಯವನ್ನು ಮಾಡಬೇಕಾದರೆ ಏನು ಮಾಡಬೇಕು?” ಎಂದು ಕೇಳಿದ್ದಕ್ಕೆ,
それで彼らは彼に言った,「神の業を行なうために,わたしたちは何をしなければなりませんか」。
29 ಯೇಸು ಅವರಿಗೆ, “ದೇವರು ಕಳುಹಿಸಿದ ನನ್ನನ್ನು ನೀವು ನಂಬುವುದೇ ದೇವರು ಮೆಚ್ಚುವ ಕಾರ್ಯ,” ಎಂದರು.
イエスは彼らに答えた,「その方が遣わされた者を信じること,これが神の業だ」 。
30 ಅದಕ್ಕೆ ಅವರು ಯೇಸುವಿಗೆ, “ಹಾಗಾದರೆ ನಾವು ನೋಡಿ ನಿಮ್ಮನ್ನು ನಂಬುವಂತೆ ಯಾವ ಸೂಚಕಕಾರ್ಯವನ್ನು ಮಾಡುತ್ತೀರಿ?
それで彼らは彼に言った,「わたしたちがそれを見てあなたを信じることができるよう,どんなしるしを行なわれるのですか。あなたはどんな業を行なってくださいますか。
31 ‘ಅವರಿಗೆ ಪರಲೋಕದಿಂದ ರೊಟ್ಟಿ ಕೊಡಲಾಯಿತು’ ಎಂದು ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅರಣ್ಯದಲ್ಲಿ ಮನ್ನಾ ಎಂಬ ಆಹಾರವನ್ನು ತಿಂದರು,” ಎಂದು ಕೇಳಿದರು.
わたしたちの父祖たちは荒野でマンナを食べました。『天からパンを与えて彼らに食べさせた』と書いてあるとおりです」。
32 ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮಗೆ ಪರಲೋಕದಿಂದ ರೊಟ್ಟಿಯನ್ನು ಮೋಶೆ ಕೊಡಲಿಲ್ಲ. ನನ್ನ ತಂದೆಯೇ ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದಲೇ ಕೊಡುತ್ತಾರೆ.
それでイエスは彼らに言った,「本当にはっきりとあなた方に告げる。あなた方に天からのパンを与えたのはモーセではない。だが,わたしの父はあなた方に天からの真のパンを与えておられる。
33 ಪರಲೋಕದಿಂದ ಇಳಿದುಬಂದು ಲೋಕಕ್ಕೆ ಜೀವವನ್ನು ಕೊಡುವ ದೇವರ ರೊಟ್ಟಿಯು ನಾನೇ,” ಎಂದರು.
神のパンは,天から下って来て世に命を与えるものだからだ」 。
34 ಅದಕ್ಕವರು ಯೇಸುವಿಗೆ, “ಸ್ವಾಮೀ, ಈ ರೊಟ್ಟಿಯನ್ನೇ ನಮಗೆ ಯಾವಾಗಲೂ ಕೊಡು,” ಎಂದರು.
それで彼らは彼に言った,「主よ,このパンをいつもわたしたちにお与えください」。
35 ಯೇಸು ಅವರಿಗೆ, “ನಾನೇ ಜೀವದ ರೊಟ್ಟಿ. ನನ್ನ ಬಳಿಗೆ ಬರುವವರಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವರಿಗೆ ಎಂದಿಗೂ ದಾಹವಾಗುವುದಿಲ್ಲ.
イエスは彼らに言った,「わたしがその命のパンだ。わたしのところに来る者は決して飢えることがなく,わたしを信じる者は決して渇くことがない。
36 ಆದರೆ, ‘ನೀವು ನನ್ನನ್ನು ಕಂಡಿದ್ದರೂ ನಂಬಲಿಲ್ಲ,’ ಎಂದು ನಾನು ನಿಮಗೆ ಹೇಳಿದೆನು.
だが,わたしはあなた方に告げた。あなた方はわたしを見たのに信じないと。
37 ತಂದೆಯು ನನಗೆಂದು ಕೊಟ್ಟಿರುವ ಪ್ರತಿಯೊಬ್ಬರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವರನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.
父がわたしにお与えになる者はみな,わたしのところに来る。わたしのところに来た者を,わたしは決して追い払わない。
38 ನಾನು ನನ್ನ ಚಿತ್ತವನ್ನು ಮಾಡುವುದಕ್ಕಲ್ಲ. ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ಮಾಡುವುದಕ್ಕೆ ಪರಲೋಕದಿಂದ ಬಂದೆನು.
わたしが天から下って来たのは,自分の意志ではなく,わたしを遣わした方のご意志を行なうためだからだ。
39 ನನ್ನನ್ನು ಕಳುಹಿಸಿಕೊಟ್ಟ ತಂದೆಯ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ಕಡೆಯ ದಿನದಲ್ಲಿ ಅವರನ್ನು ಎಬ್ಬಿಸುವುದೇ.
わたしを遣わしたわたしの父のご意志とは,その方がわたしに与えられたすべての者をわたしが一人も失わずに,終わりの日にその者を生き返らせることだ。
40 ನನ್ನ ತಂದೆಯ ಚಿತ್ತವೇನೆಂದರೆ ನನ್ನನ್ನು ನೋಡಿ ನನ್ನಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವುದೇ; ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು,” ಎಂದು ಹೇಳಿದರು. (aiōnios )
わたしを遣わした方のご意志とは,子を見て信じる者がみな永遠の命を持ち,わたしが終わりの日に彼らすべてを生き返らせることだ」 。 (aiōnios )
41 “ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ,” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಯೇಸುವಿನ ವಿಷಯವಾಗಿ ಗೊಣಗುಟ್ಟಿ,
それでユダヤ人たちは,彼が「わたしが天から下って来たパンだ」 と言ったことで,彼に関してつぶやいた。
42 “ಈತನು ಯೋಸೇಫನ ಪುತ್ರ ಯೇಸು ಅಲ್ಲವೇ? ಈತನ ತಂದೆತಾಯಿ ನಮಗೆ ಗೊತ್ತಿಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಬಂದೆನು,’ ಎಂದು ಈತನು ಹೇಳುವುದು ಹೇಗೆ?” ಎಂದರು.
彼らは言った,「このイエスはヨセフの子であり,我々はその父と母を知っているではないか。それならどうして『わたしは天から下って来た』 と言うのだろう」。
43 ಯೇಸು ಅವರಿಗೆ, “ನಿಮ್ಮನಿಮ್ಮೊಳಗೆ ಗೊಣಗುಟ್ಟಬೇಡಿರಿ.
それでイエスは彼らに答えた,「互いにつぶやくのはやめなさい。
44 ನನ್ನನ್ನು ಕಳುಹಿಸಿದ ತಂದೆ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬರಲಾರರು. ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು.
わたしを遣わした父が引き寄せてくださるのでなければ,だれもわたしのところに来ることはできない。そして,わたしは終わりの日にその人を生き返らせる。
45 ‘ಅವರೆಲ್ಲರೂ ದೇವರಿಂದಲೇ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ.
預言者たちの中に,『彼らはみな神によって教えられるだろう』と書いてある。それで,父から聞いて学んだ者はみなわたしのところへ来る。
46 ದೇವರಿಂದ ಬಂದಿರುವ ನಾನೇ ತಂದೆಯನ್ನು ನೋಡಿದ್ದೇನೆ, ಬೇರೆ ಯಾರೂ ತಂದೆಯನ್ನು ನೋಡಲಿಲ್ಲ.
神からの者のほかには,だれも父を見た者はいない。その者が父を見たのだ。
47 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. (aiōnios )
本当にはっきりとあなた方に告げる。わたしを信じる者は永遠の命を持っている。 (aiōnios )
49 ನಿಮ್ಮ ಪಿತೃಗಳು ಅರಣ್ಯದಲ್ಲಿ ‘ಮನ್ನಾ’ ತಿಂದರೂ ಸತ್ತುಹೋದರು.
あなた方の父祖たちは荒野でマンナを食べたが,死んでしまった。
50 ಯಾರು ತಿಂದರೂ ಸಾಯದೇ ಇರುವಂತೆ ಪರಲೋಕದಿಂದ ಇಳಿದು ಬಂದ ಜೀವದ ರೊಟ್ಟಿ ಇದೇ.
これは,だれでもそれから食べてなお死なないようにするために,天から下って来るパンだ。
51 ನಾನೇ ಪರಲೋಕದಿಂದ ಬಂದ ಜೀವದ ರೊಟ್ಟಿ. ಈ ರೊಟ್ಟಿಯನ್ನು ಯಾರು ತಿನ್ನುವರೋ ಅವರು ಸದಾಕಾಲವೂ ಬದುಕುವರು. ಲೋಕದ ಜೀವಕ್ಕಾಗಿ ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ,” ಎಂದರು. (aiōn )
わたしは天から下って来た生きたパンだ。だれでもこのパンから食べる者は永遠に生きる。そう,世の命のためにわたしが与えるパンは,わたしの肉だ」 。 (aiōn )
52 ಆದ್ದರಿಂದ ಯೆಹೂದ್ಯರು ಒಬ್ಬರಿಗೊಬ್ಬರು ಚರ್ಚೆಮಾಡುತ್ತಾ, “ಈ ಮನುಷ್ಯನು ತನ್ನ ಮಾಂಸವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೆ?” ಎಂದರು.
それでユダヤ人たちは互いに論じ合って言った,「この人はどうやって自分の肉を与えて我々に食べさせることができるのか」。
53 ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಪುತ್ರನಾದ ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ಜೀವವಿರುವುದಿಲ್ಲ.
それでイエスは彼らに言った,「本当にはっきりとあなた方に告げる。人の子の肉を食べ,その血を飲まないなら,あなた方は自分の内に命を持っていない。
54 ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನಿತ್ಯಜೀವವನ್ನು ಹೊಂದಿದ್ದಾರೆ, ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು. (aiōnios )
わたしの肉を食べ,わたしの血を飲む者は永遠の命を持っている。そして,わたしはその者を終わりの日に生き返らせる。 (aiōnios )
55 ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.
わたしの肉は本当の食物であり,わたしの血は本当の飲み物だからだ。
56 ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನನ್ನಲ್ಲಿ ನೆಲೆಸಿರುತ್ತಾರೆ. ನಾನು ಅವರಲ್ಲಿ ನೆಲೆಸಿರುತ್ತೇನೆ.
わたしの肉を食べ,わたしの血を飲む者はわたしの内にとどまっており,わたしも彼の内にとどまっている。
57 ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿದ್ದಾರೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುವಂತೆಯೇ ನನ್ನನ್ನು ತಿನ್ನುವವರು ನನ್ನ ನಿಮಿತ್ತವಾಗಿಯೇ ಜೀವಿಸುವರು.
生ける父がわたしを遣わされ,わたしが父によって生きているのと同じように,わたしを食物とする者はわたしによって生きる。
58 ಪರಲೋಕದಿಂದ ಬಂದ ರೊಟ್ಟಿಯು ಇದೇ. ನಿಮ್ಮ ಪಿತೃಗಳು ‘ಮನ್ನಾ’ ತಿಂದರೂ ಸತ್ತರು. ಇದು ಹಾಗಲ್ಲ, ಈ ರೊಟ್ಟಿಯನ್ನು ತಿನ್ನುವವರು ಸದಾಕಾಲಕ್ಕೂ ಜೀವಿಸುವರು,” ಎಂದರು. (aiōn )
これは天から下って来たパンだ。これは,わたしたちの父祖たちが食べても死んだようなものではない。このパンを食べる者は永遠に生きる」 。 (aiōn )
59 ಕಪೆರ್ನೌಮಿನ ಸಭಾಮಂದಿರದಲ್ಲಿ ಬೋಧಿಸುತ್ತಿರುವಾಗ ಯೇಸು ಈ ಮಾತುಗಳನ್ನು ಹೇಳಿದರು.
カペルナウムで教えていた際,彼は会堂でこれらの事を言った。
60 ಯೇಸುವಿನ ಶಿಷ್ಯರಲ್ಲಿ ಅನೇಕರು ಈ ಮಾತುಗಳನ್ನು ಕೇಳಿ, “ಇದು ಕಠಿಣವಾದ ಮಾತು. ಇದನ್ನು ಯಾರು ಪಾಲಿಸುವರು?” ಎಂದರು.
それで大勢の弟子たちは,この事を聞いて,こう言った。「わけが分からない。だれがこれを聞いていられようか」。
61 ತಮ್ಮ ಶಿಷ್ಯರು ಇದನ್ನು ಕುರಿತು ಗೊಣಗುಟ್ಟುತ್ತಾರೆಂದು ಯೇಸು ತಮ್ಮಲ್ಲಿ ತಿಳಿದುಕೊಂಡು ಅವರಿಗೆ, “ಇದು ನಿಮಗೆ ಬೇಸರವಾಯಿತೋ?
しかしイエスは,弟子たちがこのことでつぶやいているのを自分の内で知っていて,彼らに言った,「このことがあなた方をつまずかせるのか。
62 ಹಾಗಾದರೆ ಮನುಷ್ಯಪುತ್ರನಾದ ನಾನು ಮೊದಲಿದ್ದ ಕಡೆಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?
それなら,自分が以前いた所へ上って行く人の子を見たならどうだろう。
63 ಬದುಕಿಸುವುದು ದೇವರ ಆತ್ಮವೇ, ನರಮಾಂಸವಾದರೋ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ನುಡಿದ ಮಾತುಗಳೇ ದೇವರಾತ್ಮವೂ ಜೀವವೂ ಆಗಿರುತ್ತವೆ.
命を与えるものは霊だ。肉は少しも益にならない。わたしがあなた方に語った言葉は霊であり,命だ。
64 ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ,” ಎಂದರು. ನಂಬದವರು ಯಾರೆಂದೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸು ಮೊದಲಿನಿಂದಲೂ ತಿಳಿದಿದ್ದರು.
だが,あなた方のうちのある者は信じていない」 。というのは,イエスは,信じていない者,また自分を売り渡す者を,はじめから知っていたからである。
65 ಯೇಸು ಮುಂದುವರಿಸಿ ಹೇಳಿದ್ದೇನೆಂದರೆ, “ಯಾರನ್ನಾದರೂ ನನ್ನ ತಂದೆಯು ನನಗೆ ಕೊಟ್ಟರಷ್ಟೇ ಅವರು ನನ್ನ ಬಳಿಗೆ ಬರಲು ಸಾಧ್ಯ, ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ.”
彼は言った,「この理由のために,わたしはあなた方に,父が与えてくださったのでなければ,だれもわたしのところに来ることはできないと言ったのだ」 。
66 ಅಂದಿನಿಂದ ಯೇಸುವಿನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟು ಹೋದರು ಮತ್ತು ಯೇಸುವಿನ ಸಂಗಡ ಸಂಚಾರ ಮಾಡಲಿಲ್ಲ.
このために,大勢の弟子たちが戻って行き,もはや彼と共に歩かなかった。
67 ಆದಕಾರಣ ಯೇಸು ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಸಹ ಹೋಗಬೇಕೆಂದು ಇದ್ದೀರಾ?” ಎಂದು ಕೇಳಲು,
それでイエスは十二人に言った,「あなた方も去って行こうと思っているわけではないだろう」 。
68 ಸೀಮೋನ್ ಪೇತ್ರನು ಯೇಸುವಿಗೆ, “ಸ್ವಾಮೀ, ನಾವು ಯಾರ ಬಳಿಗೆ ಹೋಗೋಣ? ನಿಮ್ಮಲ್ಲಿಯೇ ನಿತ್ಯಜೀವದ ವಾಕ್ಯಗಳಿವೆ. (aiōnios )
シモン・ペトロが彼に答えた,「主よ,わたしたちはだれのところへ行きましょう。あなたは永遠の命の言葉を持っておられます。 (aiōnios )
69 ನೀವು ದೇವರ ಪರಿಶುದ್ಧರು ಎಂದು ನಾವು ನಂಬಿ ತಿಳಿದಿದ್ದೇವೆ,” ಎಂದನು.
わたしたちは,あなたがキリスト,生ける神の子だということを,信じ,知るようになりました」。
70 ಅದಕ್ಕೆ ಯೇಸು ಅವರಿಗೆ, “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿಕೊಂಡೆನಲ್ಲವೇ? ಆದರೆ ನಿಮ್ಮಲ್ಲಿಯೂ ಒಬ್ಬನು ಪಿಶಾಚನಾಗಿದ್ದಾನೆ,” ಎಂದರು.
イエスは彼らに答えた,「わたしがあなた方十二人を選んだのではないか。だが,あなた方のうちの一人は悪魔だ」 。
71 ಸೀಮೋನನ ಮಗ ಇಸ್ಕರಿಯೋತ ಯೂದನ ವಿಷಯವಾಗಿ ಯೇಸು ಹೀಗೆ ಹೇಳಿದರು. ಏಕೆಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದ ಇವನೇ ಯೇಸುವನ್ನು ಹಿಡಿದು ಕೊಡುವುದಕ್ಕಿದ್ದನು.
ところで,彼はシモン・イスカリオトの子ユダに関して話したのであった。十二人の一人でありながら,彼を売り渡そうとしていたからである。