< ಯೋಹಾನನು 7 >

1 ಇವುಗಳಾದ ಮೇಲೆ ಯೇಸು ಗಲಿಲಾಯದ ಪ್ರಾಂತದಲ್ಲಿ ಸಂಚಾರ ಮಾಡಿದರು. ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದುದರಿಂದ ಯೂದಾಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.
Hessafe guye, Ayhudeti Yesuusa wodhanaw koyaa gisho I Yihuda aggidi Galiilan simerettees.
2 ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.
Ayhudeti bonchchiya Shaqara Baaley bonchchettanaw matis.
3 ಆದ್ದರಿಂದ ಯೇಸುವಿನ ಸಹೋದರರು, “ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು.
Hessa gisho, Yesuusa ishati, “Ne tamaareti neeni oothiya malaatata be7ana mela hayssafe denddada Yihuda biittaa ba.
4 ಏಕೆಂದರೆ ಪ್ರಖ್ಯಾತನಾಗಲು ಬಯಸುವ ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದಾದರೆ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ,” ಎಂದು ಯೇಸುವಿಗೆ ಹೇಳಿದರು.
Baw erettanaw koya asi oonikka ba oosuwa genthenna. Neeni hayssata oothada nebaa alamiya erisa” yaagidosona.
5 ಏಕೆಂದರೆ ಯೇಸುವಿನ ಸಹೋದರರು ಸಹ ಅವರನ್ನು ನಂಬಲಿಲ್ಲ.
Iya ishati hessa giday iyan ammaniboonna gishossa.
6 ಅದಕ್ಕೆ ಯೇಸು ಅವರಿಗೆ, “ನನ್ನ ಸಮಯವು ಇನ್ನೂ ಬಂದಿಲ್ಲ. ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
Yesuusi enttako, “Taw injje wodey gakkibeenna, shin hinttew ubba wodey injjetees.
7 ಲೋಕವು ನಿಮ್ಮನ್ನು ದ್ವೇಷಿಸಲಾರದು. ಲೋಕದ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯದಲ್ಲಿ ನಾನು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.
Alamey hinttena ixxanaw dandda7enna, shin taani alamiya oosoy iita gideyssa markkattiya gisho tana ixxees.
8 ನೀವು ಈ ಹಬ್ಬಕ್ಕೆ ಹೋಗಿರಿ. ನಾನು ಈ ಹಬ್ಬಕ್ಕೆ ಹೋಗುವುದಿಲ್ಲ. ಏಕೆಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ,” ಎಂದರು.
Hintte baaliya biite; ta wodey gakkiboonna gisho taani baaliya biikke” yaagis.
9 ಯೇಸು ಈ ಮಾತುಗಳನ್ನು ಅವರಿಗೆ ಹೇಳಿದ ಮೇಲೆ ಗಲಿಲಾಯದಲ್ಲಿಯೇ ಉಳಿದರು.
I hessa gidi Galiilan attis.
10 ಆದರೆ ಯೇಸುವಿನ ಸಹೋದರರು ಹಬ್ಬಕ್ಕೆ ಹೋದರು. ಯೇಸು ಸಹ ಬಹಿರಂಗವಾಗಿ ಹೋಗದೆ ರಹಸ್ಯವಾಗಿ ಅಲ್ಲಿಗೆ ಹೋದರು.
Iya ishati baaliya bonchchanaw bidaappe guye Yesuusi oonakka erisonna qosan he bessaa bis.
11 ಯೆಹೂದ್ಯರು ಆ ಹಬ್ಬದಲ್ಲಿ, “ಆ ಮನುಷ್ಯನು ಎಲ್ಲಿ?” ಎಂದು ಹುಡುಕುತ್ತಿದ್ದರು.
Ayhudeti baaliya bonchchiya bessan, “I awun de7ii?” yaagidi iya koyidosona.
12 ಜನರ ಗುಂಪುಗಳಲ್ಲಿ ಯೇಸುವಿನ ವಿಷಯವಾಗಿ ಬಹಳ ಗೊಣಗುಟ್ಟುವಿಕೆ ಇತ್ತು. ಏಕೆಂದರೆ ಕೆಲವರು, “ಆತ ಒಳ್ಳೆಯ ಮನುಷ್ಯ,” ಎಂದರು. ಬೇರೆ ಕೆಲವರು, “ಇಲ್ಲ ಆತ ಜನರಿಗೆ ಮೋಸಮಾಡುತ್ತಾನೆ,” ಎಂದರು.
Asay kalkkashidi iyabaa odettoosona. Baggay, “I lo77o asi” giya wode harati qassi, “Akkay, I asaa balethees” yaagosona.
13 ಆದರೂ ಯೆಹೂದ್ಯರ ಭಯದ ನಿಮಿತ್ತ ಯೇಸುವಿನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.
Shin Ayhude halaqatas yayyida gisho oonikka iyabaa qonccen odettenna.
14 ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾಲಯಕ್ಕೆ ಹೋಗಿ ಬೋಧಿಸಿದರು.
Baaliya bonchchidi giddo gathiya wode Yesuusi Xoossa Keethi bidi tamaarsso oykkis.
15 ಯೆಹೂದ್ಯರು ಆಶ್ಚರ್ಯಪಟ್ಟು, “ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಷ್ಟೆಲ್ಲಾ ಜ್ಞಾನ ತಿಳಿದಿರುವುದು ಹೇಗೆ?” ಎಂದರು.
Ayhudeti, “Ha addey timirtte tamaaronna hayssa ubbaa waati eridee?” yaagidi malaalettidosona.
16 ಅದಕ್ಕೆ ಯೇಸು ಅವರಿಗೆ, “ನನ್ನ ಬೋಧನೆಯು ನನ್ನದಲ್ಲ, ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.
Yesuusi zaaridi, “Ta tamaarssiya timirttey tana kiittida Xoossaa matappe yaa timirttefe attin tabaa gidenna.
17 ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ತಿಳಿಯುವುದು.
Xoossaa sheniya oothanaw koyaa oonikka ha timirttey Xoossaa matappe yiyaakkonne woykko taani taappe odiyakko erana.
18 ತಮ್ಮಷ್ಟಕ್ಕೆ ತಾವೇ ಮಾತನಾಡುವವರು ತಮ್ಮ ಸ್ವಂತ ಮಹಿಮೆಯನ್ನು ಹುಡುಕುತ್ತಾರೆ. ಆದರೆ ತನ್ನನ್ನು ಕಳುಹಿಸಿದ ತಂದೆಯ ಮಹಿಮೆಯನ್ನು ಹುಡುಕುವ ಮನುಷ್ಯನು ಸತ್ಯವಂತನು; ಆತನಲ್ಲಿ ಅನೀತಿಯಿಲ್ಲ.
Babaa odiya oonikka ba huu7e bonchcho koyees. Shin bana kiittidayssa bonchchuwa koyaa oonikka I tumanchcho; iyan worddoy baawa.
19 ಮೋಶೆಯು ನಿಮಗೆ ನಿಯಮವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಯಾರೂ ಆ ನಿಯಮದಂತೆ ನಡೆಯುವುದಿಲ್ಲ. ನೀವು ನನ್ನನ್ನು ಕೊಲ್ಲಲು ಹುಡುಕುವುದೇಕೆ?” ಎಂದು ಕೇಳಿದರು.
Musey hinttew higgiya immis, shin hinttefe oonikka higgiya naagibeenna. Yaatin ays tana wodhanaw koyeetii?” yaagis.
20 ಅದಕ್ಕೆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಹುಡುಕುವವರು ಯಾರು?” ಎಂದರು.
Asay zaaridi, “Nena Xalahey oykkis; nena wodhanaw oonee koyey?” yaagidosona.
21 ಯೇಸು ಅವರಿಗೆ, “ನಾನು ಒಂದು ಕ್ರಿಯೆಯನ್ನು ಮಾಡಿದೆನು. ಅದಕ್ಕೆ ನೀವೆಲ್ಲರೂ ಆಶ್ವರ್ಯಪಡುತ್ತೀರಿ.
Yesuusi, “Taani issi malaata oothin hintte ubbay malaalettideta.
22 ಮೋಶೆ ನಿಮಗೆ ಸುನ್ನತಿಯನ್ನು ಇದಕ್ಕಾಗಿಯೇ ಕೊಟ್ಟನು. ಅದು ಮೋಶೆಯಿಂದಾಗಿರದೆ ನಿಮ್ಮ ಪಿತೃಗಳಿಂದಾದದ್ದು. ಆದರೆ ನೀವು ಸಬ್ಬತ್ ದಿನದಲ್ಲಿಯೂ ಸುನ್ನತಿ ಮಾಡುತ್ತೀರಿ.
Hinttee, hintte nayta qaxxarana mela Musey kiittis. Shin qaxxaro hintte mayzati doomidosonappe attin Muse gidenna. Hessa gisho, hintte Sambbaata gallas adde nayta qaxxareeta.
23 ಮೋಶೆಯ ನಿಯಮವನ್ನು ಉಲ್ಲಂಘಿಸದೆ ನೀವು ಸಬ್ಬತ್ ದಿನದಲ್ಲಿ ಒಬ್ಬನಿಗೆ ಸುನ್ನತಿಯನ್ನು ಮಾಡುವುದಾದರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?
Muse higgey kiittida gisho, hintte Sambbaata gallas qaxxariyabaa gidikko, taani issi asa kumetha asatethaa pathida gisho, taara ays kacceetii?
24 ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ಆದರೆ ನೀತಿಯ ತೀರ್ಪನ್ನು ಮಾಡಿರಿ,” ಎಂದರು.
Tuma pirdda pirdditeppe attin asa som77o be7idi pirddofite” yaagis.
25 ಆಮೇಲೆ ಯೆರೂಸಲೇಮಿನ ಕೆಲವರು, “ಅವರು ಕೊಲ್ಲಬೇಕೆಂದು ಹುಡುಕುವುದು ಈತನನ್ನೇ ಅಲ್ಲವೇ?
Yerusalaame asaappe issoti issoti, “Entti wodhanaw koyaa uray hayssa gidennee?
26 ಇಗೋ, ಈತನು ಬಹಿರಂಗವಾಗಿ ಮಾತನಾಡುತ್ತಿದ್ದಾನೆ. ಆದರೆ ಅವರು ಈತನಿಗೆ ಏನೂ ಹೇಳುವುದಿಲ್ಲ. ಬಹುಶಃ ಈತನೇ ನಿಜವಾದ ಕ್ರಿಸ್ತ ಎಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೋ?
Hekko, i qonccen I odees; entti iya aykkoka gookkona. I Kiristtoosa gideyssa Ayhude halaqati tuma eridonaashsha?
27 ಆದರೆ ಈತನು ಎಲ್ಲಿಂದ ಬಂದವನೆಂದು ನಾವು ಬಲ್ಲೆವು. ಆದರೂ ಕ್ರಿಸ್ತನು ಬಂದಾಗ ಆತನು ಎಲ್ಲಿಂದ ಬಂದವನೆಂದು ಯಾರಿಗೂ ತಿಳಿಯದು,” ಎಂದರು.
Kiristtoosi yaa wode I awuppe yiyaakko oonikka erenna, shin i awuppe yidaakko nu eroos” yaagidosona.
28 ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ. ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ತಂದೆಯನ್ನು ನೀವು ಅರಿತವರಲ್ಲ.
Yesuusi Xoossa Keethan tamaarssishe ba qaala dhoqqu oothidi, “Tuma hintte taani ooneekkonne ta awuppe yidaakko ereetii? Taani ta maatan yabiikke, shin tana kiittidayssi tumanchcho; hintte iya erekketa.
29 ನಾನಾದರೋ ಅವರನ್ನು ಅರಿತಿದ್ದೇನೆ. ಏಕೆಂದರೆ ನಾನು ಅವರ ಕಡೆಯಿಂದ ಬಂದವನು. ಅವರೇ ನನ್ನನ್ನು ಕಳುಹಿಸಿಕೊಟ್ಟಿದ್ದಾರೆ,” ಎಂದು ಗಟ್ಟಿಯಾಗಿ ಕೂಗಿ ಹೇಳಿದರು.
Shin taani I kiittin iya matappe yida gisho iya erays” yaagis.
30 ಆಗ ಅವರು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಸಮಯ ಇನ್ನೂ ಬಾರದೆ ಇದ್ದುದರಿಂದ ಅವರ ಮೇಲೆ ಯಾರೂ ಕೈಹಾಕಲಿಲ್ಲ.
Hessa gisho, entti iya oykkanaw koyidosona. Shin iya wodey buroo gakkiboonna gisho oonikka iya bolla kushe wothibeenna.
31 ಜನರಲ್ಲಿ ಅನೇಕರು ಯೇಸುವನ್ನು ನಂಬಿ, “ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕಕಾರ್ಯಗಳನ್ನು ಮಾಡುವನೋ?” ಎಂದರು.
Shin daro asay Yesuusa ammanidi, “Kiristtoosi yaa wode ha uray oothida malaatatappe dariya malaata oothaneeyye?” yaagidosona.
32 ಯೇಸುವಿನ ವಿಷಯವಾಗಿ ಜನರು ತಮ್ಮತಮ್ಮೊಳಗೆ ಮಾತನಾಡುವುದನ್ನು ಫರಿಸಾಯರು ಕೇಳಿದರು. ಫರಿಸಾಯರು ಮತ್ತು ಮುಖ್ಯಯಾಜಕರು ಯೇಸುವನ್ನು ಬಂಧಿಸಲು ಕಾವಲುಗಾರರನ್ನು ಕಳುಹಿಸಿದರು.
Farisaaweti daro asay Yesuusabaa kalkkasheyssa si7idosona. Kahine halaqatinne Farisaaweti iya oythidi qashisanaw Xoossa Keethi naageyssata kiittidosona.
33 ಯೇಸು ಅವರಿಗೆ, “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಅನಂತರ ನನ್ನನ್ನು ಕಳುಹಿಸಿದ ತಂದೆಯ ಬಳಿಗೆ ಹೋಗುತ್ತೇನೆ.
Yesuusi, “Taani hinttera guutha wode gam77ana; hessafe guye tana kiittidayssako baana.
34 ನೀವು ನನ್ನನ್ನು ಹುಡುಕುವಿರಿ. ಆದರೆ ನನ್ನನ್ನು ಕಾಣುವುದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ,” ಎಂದರು.
Hintte tana koyana, shin demmeketa. Taani de7iyasuwa hintte yaanaw dandda7ekketa” yaagis.
35 ಆಗ ಯೆಹೂದಿ ನಾಯಕರು, “ನಾವು ಈತನನ್ನು ಕಾಣದ ಹಾಗೆ ಈತ ಎಲ್ಲಿಗೆ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿ ಹೋದವರ ಬಳಿಗೆ ಹೋಗಿ ಗ್ರೀಕರಿಗೆ ಬೋಧಿಸುವನೋ?
Ayhudeti issoy issuwara, “Hayssi nuuni demmonnaso aw baana hanii? Girike kataman de7iya Ayhudetakko bidi Giriketa tamaarssanaw haniyye?
36 ಈತನು, ‘ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವುದಿಲ್ಲ ಮತ್ತು ನಾನಿರುವಲ್ಲಿಗೆ ನೀವು ಬರಲಾರಿರಿ,’ ಎಂದು ಹೇಳಿದ ಮಾತು ಏನಾಗಿರಬಹುದು?” ಎಂದು ತಮ್ಮೊಳಗೆ ಮಾತನಾಡಿಕೊಂಡರು.
‘Hintte tana koyana, shin demmeketa’ qassi, ‘Taani de7iyasuwa hintte yaanaw dandda7ekketa’ guussay ay guussee?” yaagidosona.
37 ಹಬ್ಬದ ಆ ಮಹಾದಿವಸವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು, “ಯಾರಿಗಾದರೂ ಬಾಯಾರಿಕೆಯಾಗಿದ್ದರೆ ಅವರು ನನ್ನ ಬಳಿಗೆ ಬಂದು ಕುಡಿಯಲಿ.
Baaliya bonchchiya gallasatappe wolqqaamanne wurssetha gallasan Yesuusi denddidi, ba qaalaa dhoqqu oothidi, “Saamottida oonikka taakko yidi uyo.
38 ಪವಿತ್ರ ವೇದವು ಹೇಳಿದ ಪ್ರಕಾರ ನನ್ನಲ್ಲಿ ನಂಬಿಕೆಯಿಡುವವರ ಅಂತರಂಗದಿಂದ ಜೀವಜಲದ ಹೊಳೆಗಳು ಹರಿಯುವವು,” ಎಂದು ಕೂಗಿ ಹೇಳಿದರು.
Tana ammaniyaa oonikka Geeshsha Maxaafay gidayssada de7o immiya pultto haathay iyappe goggana” yaagis.
39 ಆದರೆ ಯೇಸು ತಮ್ಮಲ್ಲಿ ನಂಬಿಕೆಯಿಡುವವರು ಹೊಂದಲಿರುವ ಪವಿತ್ರಾತ್ಮರನ್ನು ಕುರಿತು ಹೀಗೆ ಹೇಳಿದರು. ಯೇಸು ಇನ್ನೂ ಮಹಿಮೆ ಹೊಂದಿರಲಿಲ್ಲ. ಈ ಕಾರಣದಿಂದ ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ.
I hessa giday iya ammanidayssati ekkanaw de7iya Geeshsha Ayyaanabaa. Yesuusi buroo bonchchettiboonna gisho, he wode Geeshsha Ayyaanay imettibeenna.
40 ಆದ್ದರಿಂದ ಜನರಲ್ಲಿ ಕೆಲವರು ಈ ಮಾತನ್ನು ಕೇಳಿದಾಗ, “ಈತನು ನಿಜವಾಗಿಯೂ ಪ್ರವಾದಿಯಾಗಿದ್ದಾನೆ,” ಎಂದರು.
He asaappe daroti I geyssa si7idi, “Tuma hayssi nabiya” yaagidosona.
41 ಬೇರೆಯವರು, “ಈತನೇ ಕ್ರಿಸ್ತನು,” ಎಂದರು. ಆದರೆ ಇನ್ನೂ ಕೆಲವರು, “ಕ್ರಿಸ್ತನು ಗಲಿಲಾಯದಿಂದ ಬರುವುದು ಹೇಗೆ?
Harati qassi, “Hayssi Kiristtoosa” yaagidosona. Shin harati qassi, “Kiristtoosi Galiilappe waanidi keyi?
42 ‘ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತ್ಲೆಹೇಮೆಂಬ ಊರಿನಿಂದಲೂ ಬರುವನು,’ ಎಂದು ಪವಿತ್ರ ವೇದವು ಹೇಳುತ್ತದಲ್ಲವೇ?” ಎಂದರು.
Geeshsha Maxaafay, ‘Kiristtoosi Dawite sheeshaappe Dawitey de7ida Beeteleme katamaappe yaana’ yaagenneyye?” yaagidosona.
43 ಹೀಗೆ ಯೇಸುವಿನ ನಿಮಿತ್ತವಾಗಿ ಜನರಲ್ಲಿ ಭೇದ ಉಂಟಾಯಿತು.
Hessa gisho, Yesuusa gaason asay bantta giddon shaakettidosona.
44 ಅವರಲ್ಲಿ ಕೆಲವರು ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಯಾರೂ ಯೇಸುವಿನ ಮೇಲೆ ಕೈಹಾಕಲಿಲ್ಲ.
He asaappe issoti issoti iya oykkanaw koyidosona, shin oonikka iya bolla kushe wothibeenna.
45 ಬಳಿಕ ಕಾವಲುಗಾರರು, ಮುಖ್ಯಯಾಜಕರ ಹಾಗೂ ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಹಿಡಿದು ತರಲಿಲ್ಲ?” ಎಂದು ಕೇಳಿದರು.
Xoossa Keetha naageyssati kahine halaqatakkonne Farisaawetakko guye simmi yin entti, “Ays iya ehibeekketii?” yaagidi oychchidosona.
46 ಅದಕ್ಕೆ ಕಾವಲುಗಾರರು, “ಯಾವ ಮನುಷ್ಯನೂ ಎಂದೂ ಈತನು ಮಾತನಾಡುವಂತೆ ಮಾತನಾಡಿದ್ದಿಲ್ಲ,” ಎಂದರು.
Xoossa Keetha naageyssati enttako, “Ha addey odetteyssatho oonikka odettenna” yaagidi zaaridosona.
47 ಆಗ ಫರಿಸಾಯರು ಅವರಿಗೆ, “ನೀವು ಸಹ ಮರುಳಾದೀರಾ?
Farisaaweti zaaridi, “I hinttenakka balethidee?
48 ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಯೇಸುವನ್ನು ನಂಬಿದ್ದುಂಟೇ?
Ayhude halaqatappe woykko Farisaaweteppe iya ammanida asi de7ii?
49 ಆದರೆ ಮೋಶೆಯ ನಿಯಮವನ್ನು ಅರಿಯದ ಈ ಜನರು ಶಾಪಗ್ರಸ್ತರೇ,” ಎಂದು ಹೇಳಿದರು.
Muse higgiya eronna ha asay qanggettidabaa” yaagidosona.
50 ಯೇಸುವಿನ ಬಳಿಗೆ ಒಮ್ಮೆ ಬಂದಿದ್ದ ನಿಕೊದೇಮನು ಅವರಲ್ಲಿ ಒಬ್ಬನಾಗಿದ್ದನು. ಅವನು ಅವರಿಗೆ,
Farisaawetappe issoy qamma Yesuusakko bida Niqodimoosi enttako,
51 “ಒಬ್ಬ ಮನುಷ್ಯನನ್ನು ಮೊದಲು ವಿಚಾರಿಸಿ, ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ನಮ್ಮ ನಿಯಮವು ಅವನಿಗೆ ತೀರ್ಪುಮಾಡುವುದುಂಟೇ?” ಎಂದನು.
“Issi asi giyabaa si7onna woykko I ay oothidaakko eronna de7ishe koyrottidi iya bolla pirddeyssi nu higgiyan de7ii?” yaagis.
52 ಅವರು ಅವನಿಗೆ, “ನೀನು ಸಹ ಗಲಿಲಾಯದವನೋ? ಗಲಿಲಾಯದಿಂದ ಒಬ್ಬ ಪ್ರವಾದಿಯೂ ಏಳುವುದಿಲ್ಲ, ನೀನೇ ಪರಿಶೋಧಿಸಿ ನೋಡು,” ಎಂದರು.
Entti zaaridi, “Neenikka qassi Galiila biitta ase? Galiila biittaafe nabey keyonnayssa Geeshsha Maxaafaappe pilggada demma” yaagidosona.
53 ಬಳಿಕ ಎಲ್ಲರೂ ತಮ್ಮ ತಮ್ಮ ಮನೆಗೆ ಹೋದರು.

< ಯೋಹಾನನು 7 >