< ಯೋಹಾನನು 8 >

1 ಯೇಸುವಾದರೋ ಓಲಿವ್ ಮರಗಳ ಗುಡ್ಡಕ್ಕೆ ಹೋದರು.
耶穌上了橄欖山。
2 ಬೆಳಿಗ್ಗೆ ಯೇಸು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಅವರ ಬಳಿಗೆ ಬಂದರು. ಯೇಸು ಕುಳಿತುಕೊಂಡು ಅವರಿಗೆ ಬೋಧಿಸಿದರು.
清晨他又來到聖殿,眾百姓都到他跟前來,他便坐下教訓他們。
3 ಆಗ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಸ್ತ್ರೀಯನ್ನು ನಿಯಮ ಬೋಧಕರು ಮತ್ತು ಫರಿಸಾಯರು ಹಿಡಿದು ಯೇಸುವಿನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿದರು.
那時,經師和法利賽人帶來了一個犯姦淫時被捉住的婦人,叫她站在中間,
4 ಅವರು ಯೇಸುವಿಗೆ, “ಬೋಧಕರೇ, ಈ ಸ್ತ್ರೀ ವ್ಯಭಿಚಾರ ಮಾಡುವಾಗಲೇ ಸಿಕ್ಕಿಬಿದ್ದಳು.
便向耶穌說:「師傅! 這婦人是正在犯姦淫時被捉住的,
5 ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯು ನಿಯಮದಲ್ಲಿ ನಮಗೆ ಆಜ್ಞಾಪಿಸಿದ್ದಾನೆ. ಆದ್ದರಿಂದ ನೀವು ಏನು ಹೇಳುತ್ತೀರಿ?” ಎಂದು ಕೇಳಿದರು.
在法律上,梅瑟命令我們該用石頭砸死這樣的婦人;可是,你說什麼呢?」
6 ಅವರು ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿ ತಪ್ಪು ಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದರು.
他們說這話,是要試探耶穌,好能控告他;耶穌卻彎下身去,用指頭在地上畫字。
7 ಅವರು ಬಿಡದೆ ಪ್ರಶ್ನೆಗಳನ್ನು ಕೇಳುತ್ತಿರಲು ಯೇಸು ನೆಟ್ಟಗೆ ಕುಳಿತುಕೊಂಡು, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಇವಳ ಮೇಲೆ ಕಲ್ಲು ಎಸೆಯಲಿ,” ಎಂದು ಅವರಿಗೆ ಹೇಳಿದರು.
因為他們不斷地追問,他便直起身來,向他們說:「你們中間誰沒有罪,先向她投石罷! 」
8 ತಿರುಗಿ ಯೇಸು ಬಗ್ಗಿಕೊಂಡು ನೆಲದ ಮೇಲೆ ಬರೆಯತೊಡಗಿದರು.
他又彎下身去,在地上寫字。
9 ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಕಿರಿಯರವರೆಗೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬರೇ ಉಳಿದರು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.
他們一聽這話,就從年老的開始到年幼的,一個一個地都溜走了,只留下耶穌一人和站在那裡的婦人。
10 ಯೇಸು ನೆಟ್ಟಗೆ ಕುಳಿತುಕೊಂಡು ಆಕೆಗೆ, “ಅಮ್ಮಾ ಅವರು ಎಲ್ಲಿದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ?” ಎಂದರು.
耶穌遂直起身來向說: 「婦人!他們在那裏呢?沒有人定你的罪嗎?」
11 ಅದಕ್ಕೆ ಆಕೆಯು, “ಸ್ವಾಮಿ, ಯಾರೂ ಶಿಕ್ಷೆ ವಿಧಿಸಲಿಲ್ಲ,” ಎಂದಳು. ಯೇಸು ಆಕೆಗೆ, “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.
她說: 「主!沒有人。」耶穌向她說: 「我也不定你的罪;去罷! 從今以後,不要再犯罪了! 」
12 ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವರು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ. ಅವರು ಜೀವದ ಬೆಳಕನ್ನು ಹೊಂದಿರುವರು,” ಎಂದು ಹೇಳಿದರು.
耶穌又向眾人講說: 「我是世界的光;跟隨我的,決不在黑暗中行走,必有生命的光。」
13 ಫರಿಸಾಯರು ಯೇಸುವಿಗೆ, “ನಿನ್ನ ವಿಷಯವಾಗಿ ನೀನೇ ಸಾಕ್ಷಿ ನೀಡುತ್ತಿರುವೆ, ನಿನ್ನ ಸಾಕ್ಷಿಯು ಸತ್ಯವಾದುದ್ದಲ್ಲ,” ಎಂದು ಹೇಳಿದರು.
法利賽於是對對他說: 「你為你自己作證,你的證據是不可憑信的。」
14 ಯೇಸು ಅವರಿಗೆ, “ನಾನೇ ನನ್ನ ವಿಷಯವಾಗಿ ನಾನು ಸಾಕ್ಷಿ ನೀಡಿದರೂ ನನ್ನ ಸಾಕ್ಷಿ ಸತ್ಯವಾದದ್ದು. ಏಕೆಂದರೆ ನಾನು ಎಲ್ಲಿಂದ ಬಂದೆ ಮತ್ತು ಎಲ್ಲಿಗೆ ಹೋಗುತ್ತೇನೆಂದು ನನಗೆ ತಿಳಿದಿದೆ. ಆದರೆ ನಾನು ಎಲ್ಲಿಂದ ಬಂದೆ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನಿಮಗೆ ತಿಳಿಯದು.
耶穌回答說:「我即便為我自己作證,我的證據是可憑信的,因為我知道:我從那裏來,往那裏去;你們卻不知道: 我從那裏來,或往那裏去。
15 ನೀವು ಮಾನವ ರೀತಿಯಲ್ಲಿ ತೀರ್ಪು ಮಾಡುತ್ತೀರಿ. ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.
你們只憑肉眼判斷,我卻不判斷任何人;
16 ನಾನು ತೀರ್ಪು ಮಾಡಿದರೂ ನನ್ನ ತೀರ್ಪು ಸತ್ಯವಾದದ್ದೇ. ಏಕೆಂದರೆ ನಾನು ಒಂಟಿಗನಲ್ಲ. ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.
即使我判斷,我的判斷仍是真實的,因為我不是獨自一個,而是有我,還有派遣我來的父。
17 ‘ಇಬ್ಬರ ಸಾಕ್ಷಿಯು ಸತ್ಯವಾದದ್ದು’ ಎಂದು ನಿಮ್ಮ ನಿಯಮದಲ್ಲಿಯೇ ಬರೆದಿದೆ.
在你們的法律上也記載著: 兩個人的作證是可憑信的。
18 ನನ್ನ ವಿಷಯವಾಗಿ ಸಾಕ್ಷಿ ನೀಡುವವನು ನಾನೇ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿ ನೀಡುತ್ತಾರೆ,” ಎಂದರು.
今有我為我自己作證,也有派遣我的父,為我作證。」
19 ಆಗ ಅವರು, “ನಿನ್ನ ತಂದೆ ಎಲ್ಲಿ?” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ತಿಳಿದಿಲ್ಲ, ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿಯುತ್ತಿದ್ದೀರಿ,” ಎಂದು ಉತ್ತರಕೊಟ್ಟರು.
他們使問他說: 「你的父在那裏?」耶穌答覆說:「你們不認識我,也不認識我的父;若是你們認識了我,也就認識我的父了。」
20 ಯೇಸು ದೇವಾಲಯದ ಕಾಣಿಕೆ ಪೆಟ್ಟಿಗೆಗಳನ್ನಿಟ್ಟ ಸ್ಥಳದಲ್ಲಿ ಬೋಧಿಸುತ್ತಿದ್ದಾಗ ಈ ಮಾತುಗಳನ್ನು ಹೇಳಿದರು. ಆದರೆ ಯೇಸುವಿನ ಸಮಯ ಇನ್ನೂ ಬಾರದಿದ್ದ ಕಾರಣ ಯಾರೂ ಅವರನ್ನು ಬಂಧಿಸಲಿಲ್ಲ.
這些話是耶穌於聖殿施教時,在銀庫院裏所講的。誰也沒有捉拿,因為的時辰還沒有到。
21 ಯೇಸು ತಿರುಗಿ ಅವರಿಗೆ, “ನಾನು ಹೊರಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು.
那時,耶穌又向他們說:「我去了,你們要尋找我,你們必要死在你們的罪惡中;我所去的地方,你們不能去。」
22 ಅದಕ್ಕೆ ಯೆಹೂದ್ಯರು, “ಈತನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದಾನೋ? ಏಕೆಂದರೆ, ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ,’ ಎಂದು ಹೇಳುತ್ತಾನಲ್ಲಾ?” ಎಂದರು.
猶太人便說: 「他說: 我所去的地方,你你們不能去;莫非他要自殺嗎?」
23 ಯೇಸು ಅವರಿಗೆ, “ನೀವು ಕೆಳಗಿನವರು, ನಾನು ಮೇಲಿನವನು. ನೀವು ಈ ಲೋಕದವರು, ನಾನು ಈ ಲೋಕದವನಲ್ಲ.
耶穌向他們說: 「你們是出於下,我卻是出於上;你們是出於這個世界,我卻不是出於這個世界。
24 ಆದ್ದರಿಂದ, ‘ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,’ ಎಂದು ನಾನು ನಿಮಗೆ ಹೇಳಿದೆನು. ಏಕೆಂದರೆ ನೀವು ನನ್ನನ್ನು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,” ಎಂದು ಹೇಳಿದರು.
因此,我對你們說過: 你但要死在你們的罪惡中。的確,你們若不相信我就是那一位,你們必要死在你們的罪惡中。」
25 ಅವರು ಯೇಸುವಿಗೆ, “ನೀನು ಯಾರು?” ಎಂದರು. ಅದಕ್ಕೆ ಯೇಸು ಅವರಿಗೆ, “ಮೊದಲಿನಿಂದ ನಾನು ನಿಮಗೆ ಹೇಳಿದಂತವನೇ.
於是,他們問耶穌說: 「你到底是誰?」耶穌回答他們說: 「難道從起初我沒有對你們講論過嗎?
26 ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ ತೀರ್ಪುಮಾಡುವುದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ನಾನು ಅವರಿಂದ ಕೇಳಿದವುಗಳನ್ನು ಮಾತ್ರವೇ ಲೋಕಕ್ಕೆ ಹೇಳುತ್ತೇನೆ,” ಎಂದರು.
對你們我有許多事要說,要譴責;但是派遣我來者是真實的;我由他聽來的,我就講給世界聽。」
27 ಯೇಸು ತಂದೆಯ ವಿಷಯವಾಗಿ ಅವರೊಂದಿಗೆ ಮಾತನಾಡಿದರೆಂದು ಅವರು ತಿಳಿಯಲಿಲ್ಲ.
們不明白他是在給他們講論父。
28 ಯೇಸು ಅವರಿಗೆ, “ಮನುಷ್ಯಪುತ್ರನಾದ ನನ್ನನ್ನು ನೀವು ಮೇಲಕ್ಕೇರಿಸಿದಾಗ ‘ನಾನೇ ಆತನು’ ಎಂದು ನಿಮಗೆ ತಿಳಿಯುವುದು. ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ಬೋಧಿಸಿದಂತೆ ನಾನು ಈ ಸಂಗತಿಗಳನ್ನು ಮಾತನಾಡುತ್ತೇನೆ ಎಂದೂ ನೀವು ತಿಳಿದುಕೊಳ್ಳುವಿರಿ.
耶穌遂說: 「當你們高舉了人子以後,你們便知道我就是那一位。我由我自己不作什麼;我所講論的,都是依照父所教訓我的。
29 ನನ್ನನ್ನು ಕಳುಹಿಸಿದ ತಂದೆ ನನ್ನ ಸಂಗಡ ಇದ್ದಾರೆ. ಅವರು ನನ್ನನ್ನು ಒಬ್ಬಂಟಿಗನನ್ನಾಗಿ ಬಿಡಲಿಲ್ಲ, ಏಕೆಂದರೆ ಅವರಿಗೆ ಮೆಚ್ಚಿದವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ,” ಎಂದರು.
派遣我來者與我在一起,他沒有留下我獨自一個,因為我常作他所喜悅的事。」
30 ಯೇಸು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಅವರಲ್ಲಿ ನಂಬಿಕೆಯಿಟ್ಟರು.
當耶穌講這些話時,許多人便信了他。
31 ಯೇಸು ತಮ್ಮನ್ನು ನಂಬಿದ್ದ ಯೆಹೂದ್ಯರಿಗೆ ಹೇಳಿದ್ದೇನೆಂದರೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾಗಿಯೂ ನೀವು ನನ್ನ ಶಿಷ್ಯರಾಗುವಿರಿ.
於是,耶穌對那些信他的猶太人說: 「你們如果固守我的話,就確是我的門徒,
32 ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಸತ್ಯವು ನಿಮ್ಮನ್ನು ಸ್ವತಂತ್ರರಾಗಿ ಮಾಡುವುದು,” ಎಂದು ಹೇಳಿದರು.
也會認識真理,而真理必會使你們獲得自由。」
33 ಅದಕ್ಕೆ ಅವರು ಯೇಸುವಿಗೆ, “ನಾವು ಅಬ್ರಹಾಮನ ಸಂತತಿಯವರು, ನಾವು ಯಾರಿಗೂ ಎಂದೂ ಗುಲಾಮರಾಗಿರಲಿಲ್ಲ. ನೀವು ಸ್ವತಂತ್ರರಾಗುವಿರಿ ಎಂದು ನೀನು ಹೇಳುವುದು ಹೇಗೆ?” ಎಂದು ಕೇಳಿದರು.
他們回答說: 「我們是亞巴郎的後裔,從未給人做過奴隸;怎麼你說:你們要成為自由的呢?」
34 ಅದಕ್ಕೆ ಯೇಸು ಉತ್ತರವಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರು ಪಾಪಕ್ಕೆ ಗುಲಾಮರಾಗಿದ್ದಾರೆ.
耶穌答覆說: 「我實實在在告訴你們: 凡是犯罪的,就是罪惡的奴隸。
35 ಗುಲಾಮರು ಕುಟುಂಬದಲ್ಲಿ ಶಾಶ್ವತವಾಗಿ ಇರುವುದಿಲ್ಲ. ಆದರೆ ಪುತ್ರನು ಶಾಶ್ವತವಾಗಿ ಇರುತ್ತಾನೆ. (aiōn g165)
奴隸不能永遠住在家裏,兒子卻永遠居住。 (aiōn g165)
36 ಆದ್ದರಿಂದ ದೇವಪುತ್ರನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿ ನೀವು ಬಿಡುಗಡೆಯಾಗುವಿರಿ.
那麼,如果天主子使你們自由了,你們的確是自由的。
37 ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು. ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲಲು ಹುಡುಕುತ್ತೀರಿ.
我知道你們是亞巴郎後裔,你們圖謀殺害我,因為你們容納不下我的話。
38 ನಾನು ತಂದೆಯ ಬಳಿಯಲ್ಲಿ ಕಂಡದ್ದನ್ನೇ ಮಾತನಾಡುತ್ತೇನೆ. ನೀವಾದರೋ ನಿಮ್ಮ ತಂದೆಯಿಂದ ಕೇಳಿದ್ದನ್ನು ಮಾಡುತ್ತೀರಿ,” ಎಂದರು.
我說的,是我在父那裏所看見的;而你們行的,卻是你們從你們的父那裏所學習的。」
39 ಯೆಹೂದ್ಯರು ಯೇಸುವಿಗೆ, “ಅಬ್ರಹಾಮನು ನಮ್ಮ ತಂದೆ,” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನು ಮಾಡಿದ ಕ್ರಿಯೆಗಳನ್ನೇ ಮಾಡುತ್ತಿದ್ದಿರಿ.
他們回答說: 「我們的父是亞巴郎。」耶穌對他們說: 「假如你們是亞巴郎的子女,你們就該作啞巴郎的事。
40 ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲಲು ಪ್ರಯತ್ನಿಸುತ್ತೀರಿ. ಇಂತಹ ಕ್ರಿಯೆಗಳನ್ನು ಅಬ್ರಹಾಮನು ಮಾಡಲಿಲ್ಲ.
如今,你們竟圖謀殺害我──這個給你們說出從天主那裏所聽到的真理的人──亞巴郎卻沒有做過言這樣的事。
41 ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ,” ಎಂದರು. ಅದಕ್ಕವರು, “ನಾವು ಅನೈತಿಕತೆಯಿಂದ ಹುಟ್ಟಿದವರಲ್ಲ. ನಮಗೆ ದೇವರೇ ತಂದೆ,” ಎಂದು ಪ್ರತಿಭಟಿಸಿದರು.
你們正做你們父親的事業。」他們向他說:「我們不是由淫亂生的,我們只有一個父親: 就是天主。」
42 ಯೇಸು ಅವರಿಗೆ, “ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ. ಏಕೆಂದರೆ ನಾನು ದೇವರಿಂದ ಹೊರಟು ಬಂದಿದ್ದೇನೆ. ನಾನು ನನ್ನಷ್ಟಕ್ಕೆ ಬರಲಿಲ್ಲ. ಆದರೆ ದೇವರೇ ನನ್ನನ್ನು ಕಳುಹಿಸಿದ್ದು.
耶穌回答說:「假如天主是你們的父親,你們必愛我,因為我是由天主出發而來的,並不是由我自己來的,而是那一位派遣了我。
43 ನೀವು ನನ್ನ ಮಾತನ್ನು ಅರ್ಥಮಾಡಿಕೊಳ್ಳದಿರುವುದು ಯಾಕೆ? ನಾನು ಹೇಳುವುದನ್ನು ನೀವು ಕೇಳದೇ ಇರುವುದೇ ಇದಕ್ಕೆ ಕಾರಣ.
為什麼你們不明白我的講論呢?無非是你們不肯聽我的話。
44 ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.
你們是出於你們的父親魔鬼並願意追隨你們父親的慾望。從起初,他就是殺人的兇手,不站在真理上,因為在他內沒有真理;他幾時撒謊,正出於他的本性,因為他是撒謊者,而且又是撒謊者的父親。
45 ಆದರೆ ನಾನು ಸತ್ಯವನ್ನು ಹೇಳುವವನಾದ್ದರಿಂದ ನೀವು ನನ್ನನ್ನು ನಂಬುವುದಿಲ್ಲ.
至於我,因為我說真理,你們卻不信我。
46 ನನ್ನಲ್ಲಿ ಪಾಪವಿದೆಯೆಂದು ರುಜುವಾತು ಪಡಿಸುವವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಹೇಳುವುದಾದರೆ ನೀವು ನನ್ನನ್ನು ಏಕೆ ನಂಬುವುದಿಲ್ಲ?
你們中誰能指證我有罪?若是我說真理,為什麼你們卻不信我呢?
47 ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲ. ಆದ್ದರಿಂದ ನೀವು ಕಿವಿಗೊಡುವುದಿಲ್ಲ,” ಎಂದು ಹೇಳಿದರು.
出於天主的,必聽天主的話;你們所以不聽,因為你們不是出於天主。」
48 ಅದಕ್ಕೆ ಯೆಹೂದಿ ನಾಯಕರು ಯೇಸುವಿಗೆ, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವ ಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೇ?” ಎಂದು ಕೇಳಿದರು.
猶太人遂向他說: 「我們說你是個撒瑪黎雅人,並附有魔鬼,豈不正對嗎?」
49 ಅದಕ್ಕೆ ಯೇಸು, “ನನಗೆ ದೆವ್ವ ಹಿಡಿದಿಲ್ಲ. ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ. ನೀವು ನನ್ನನ್ನು ಅವಮಾನಪಡಿಸುತ್ತೀರಿ.
耶穌答覆說: 「我沒有附魔,我只是尊敬我的父,你們卻侮辱我。
50 ನಾನು ನನ್ನ ಮಹಿಮೆಯನ್ನು ಹುಡುಕುವುದಿಲ್ಲ. ನನಗೆ ಮಹಿಮೆಯನ್ನು ಹುಡುಕುವವರು ಒಬ್ಬರಿದ್ದಾರೆ ಅವರೇ ನ್ಯಾಯತೀರಿಸುವವರು.
然而,我不尋求我的光榮,有為我尋求而行判斷的一位。
51 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾರು ನನ್ನ ಮಾತನ್ನು ಪಾಲಿಸುತ್ತಾರೋ ಅವರು ಎಂದೆಂದಿಗೂ ಮರಣವನ್ನು ಕಾಣುವುದಿಲ್ಲ,” ಎಂದರು. (aiōn g165)
我實實在在告訴你們: 「誰如果遵行我的話, 永遠見不到死亡。」 (aiōn g165)
52 ಆಗ ಯೆಹೂದಿ ನಾಯಕರು ಯೇಸುವಿಗೆ, “ನಿನಗೆ ದೆವ್ವ ಹಿಡಿದಿದೆ ಎಂದು ನಮಗೆ ಈಗ ತಿಳಿಯಿತು. ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು. ಆದರೆ, ‘ಯಾರಾದರೂ ನನ್ನ ಮಾತನ್ನು ಪಾಲಿಸಿದರೆ ಅವರು ಎಂದೆಂದಿಗೂ ಮರಣ ಹೊಂದುವುದಿಲ್ಲ,’ ಎಂದು ನೀನು ಹೇಳುತ್ತೀಯಲ್ಲಾ? (aiōn g165)
猶太向他說: 「現在我們知道: 你附有魔鬼;亞巴郎和先知都死了;你卻說: 誰如果遵行我的話,永遠嚐不到死味。 (aiōn g165)
53 ಸತ್ತು ಹೋದ ನಮ್ಮ ತಂದೆ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು. ನೀನು ನಿನ್ನನ್ನು ಯಾರನ್ನಾಗಿ ಮಾಡಿಕೊಂಡಿರುವೆ?” ಎಂದು ಕೇಳಿದರು.
難道你比我們的父親亞巴郎還大嗎?他死了,先知們也死了。你把你自己當作什麼人呢?」
54 ಯೇಸು, “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನೀವು ಯಾರನ್ನು, ‘ಅವರೇ ನಮ್ಮ ದೇವರು’ ಎಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಮಹಿಮೆ ಪಡಿಸುವವರು.
耶穌答覆說: 「我如果光榮我自己,我的光榮算不了什麼;那光榮是我的,是我的父,就是你們所稱的「我們的天主」。
55 ನೀವು ಅವರನ್ನು ಅರಿತುಕೊಂಡಿಲ್ಲ; ಆದರೆ ನಾನು ಅವರನ್ನು ಅರಿತಿದ್ದೇನೆ. ನಾನು ಅವರನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗುವೆನು. ಆದರೆ ನಾನು ಅವರನ್ನು ಅರಿತಿದ್ದೇನೆ. ಅವರ ಮಾತನ್ನು ಪಾಲಿಸುತ್ತೇನೆ.
你們不認識他,我卻認識他;我若說我不認識他,我便像你們一樣是個撒謊者;但是,我認識他,也遵守他的話。
56 ನಿಮ್ಮ ತಂದೆ ಅಬ್ರಹಾಮನು ನನ್ನ ದಿನವನ್ನು ಕಾಣುವನೆಂದು ಆನಂದಿಸಿದನು ಮತ್ತು ಅದನ್ನು ಕಂಡು ಉಲ್ಲಾಸಪಟ್ಟನು,” ಎಂದು ಹೇಳಿದರು.
你們的父親亞巴郎曾歡欣喜樂地企望看到我的日子,他看見了極其高興。」
57 ಆಗ ಯೆಹೂದಿ ನಾಯಕರು ಯೇಸುವಿಗೆ, “ನಿನಗೆ ಇನ್ನೂ ಐವತ್ತು ವರ್ಷವಾಗಿಲ್ಲ, ನೀನು ಅಬ್ರಹಾಮನನ್ನು ಕಂಡಿದ್ದೀಯಾ?” ಎಂದರು.
猶太就對他說: 「你還沒有五十歲,就見過亞巴郎嗎?」
58 ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚೆಯೇ ನಾನು ಇದ್ದೇನೆ,” ಎಂದರು.
耶穌回答說: 「我實實在在告訴你們: 在亞巴郎出現以前我就有。」
59 ಆಗ ಅವರು ಯೇಸುವಿನ ಮೇಲೆ ಎಸೆಯಲು ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದೊಳಗಿಂದ ಹೊರಟು ಹೋದರು.
他們就拿起石頭來要向他投去;耶穌卻隱沒了,從聖殿裏出去了。

< ಯೋಹಾನನು 8 >