< ಯೋಹಾನನು 9 >

1 ಯೇಸು ನಡೆದು ಹೋಗುತ್ತಿದ್ದಾಗ, ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡರು.
И, проходя, увидел человека, слепого от рождения.
2 ಯೇಸುವಿನ ಶಿಷ್ಯರು, “ಬೋಧಕರೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಈ ಮನುಷ್ಯನ ಪಾಪದಿಂದಲೋ ಇವನ ತಂದೆತಾಯಿಗಳ ಪಾಪದಿಂದಲೋ?” ಎಂದು ಅವರನ್ನು ಕೇಳಿದರು.
Ученики Его спросили у Него: Равви! кто согрешил, он или родители его, что родился слепым?
3 ಯೇಸು, “ಈ ಮನುಷ್ಯನಾಗಲಿ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ವ್ಯಕ್ತವಾಗುವಂತೆ ಹೀಗಾಯಿತು.
Иисус отвечал: не согрешил ни он, ни родители его, но это для того, чтобы на нем явились дела Божии.
4 ನನ್ನನ್ನು ಕಳುಹಿಸಿದ ತಂದೆಯ ಕೆಲಸಗಳನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬಂದಾಗ ಯಾರಿಗೂ ಕೆಲಸ ಮಾಡಲಾಗದು.
Мне должно делать дела Пославшего Меня, доколе есть день; приходит ночь, когда никто не может делать.
5 ನಾನು ಈ ಲೋಕದಲ್ಲಿರುವಾಗ ಲೋಕದ ಬೆಳಕಾಗಿದ್ದೇನೆ,” ಎಂದರು.
Доколе Я в мире, Я свет миру.
6 ಯೇಸು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಮಣ್ಣಿನ ಲೇಪಮಾಡಿ ಆ ಲೇಪವನ್ನು ಅವನ ಕಣ್ಣುಗಳಿಗೆ ಹಚ್ಚಿದರು.
Сказав это, Он плюнул на землю, сделал брение из плюновения, и помазал брением глаза слепому,
7 ಅವನಿಗೆ, “ಹೋಗು, ಸಿಲೋವ ಕೊಳದಲ್ಲಿ ತೊಳೆದುಕೋ,” ಎಂದರು. ಸಿಲೋವ ಎಂದರೆ, “ಕಳುಹಿಸಲಾದವನು” ಎಂದರ್ಥ. ಕುರುಡನು ಹೋಗಿ ಕಣ್ಣು ತೊಳೆದುಕೊಂಡು ದೃಷ್ಟಿಹೊಂದಿದವನಾಗಿ ಬಂದನು.
и сказал ему: пойди, умойся в купальне Силоам, что значит посланный. Он пошел, и умылся, и пришел зрячим.
8 ಆಗ ನೆರೆಯವರು ಮತ್ತು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ಕಂಡವರು, “ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೇ?” ಎಂದರು.
Тут соседи и видевшие прежде, что он был слеп, говорили: не тот ли это, который сидел и просил милостыни?
9 ಕೆಲವರು, “ಹೌದು, ಇವನೇ,” ಎಂದರು. ಇನ್ನೂ ಬೇರೆಯವರು, “ಇಲ್ಲಾ, ಇವನು ಅವನ ಹಾಗೆ ಇದ್ದಾನೆ,” ಎಂದರು. ಅವನಾದರೋ, “ನಾನೇ ಅವನು,” ಎಂದು ಹೇಳಿದನು.
Иные говорили: это он, а иные: похож на него. Он же говорил: это я.
10 ಕೆಲವರು ಅವನಿಗೆ, “ಹಾಗಾದರೆ ನಿನಗೆ ದೃಷ್ಟಿ ಹೇಗೆ ಬಂತು?” ಎಂದು ಕೇಳಲು,
Тогда спрашивали у него: как открылись у тебя глаза?
11 ಅವನು, “ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನ ಲೇಪಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, ‘ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ,’ ಎಂದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು, ನನಗೆ ದೃಷ್ಟಿ ಬಂತು,” ಎಂದನು.
Он сказал в ответ: Человек, называемый Иисус, сделал брение, помазал глаза мои и сказал мне: пойди на купальню Силоам и умойся. Я пошел, умылся и прозрел.
12 ಅವರು ಅವನಿಗೆ, “ಆತನು ಎಲ್ಲಿದ್ದಾನೆ?” ಎಂದು ಕೇಳಲು, ಅವನು, “ನನಗೆ ಗೊತ್ತಿಲ್ಲ,” ಎಂದನು.
Тогда сказали ему: где Он? Он отвечал: не знаю.
13 ಜನರು ಮೊದಲು ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು.
Повели сего бывшего слепца к фарисеям.
14 ಯೇಸು ಮಣ್ಣಿನ ಲೇಪಮಾಡಿ ಅವನಿಗೆ ದೃಷ್ಟಿಕೊಟ್ಟ ದಿನವು ಯೆಹೂದ್ಯರ ಸಬ್ಬತ್ ದಿನವಾಗಿತ್ತು.
А была суббота, когда Иисус сделал брение и отверз ему очи.
15 ಆದ್ದರಿಂದ ಫರಿಸಾಯರು ಅವನಿಗೆ, ಹೇಗೆ ದೃಷ್ಟಿ ಬಂತು ಎಂದು ತಿರುಗಿ ಅವನನ್ನು ಕೇಳಲು, ಅವನು ಅವರಿಗೆ, “ಯೇಸು ಮಣ್ಣಿನ ಲೇಪವನ್ನು ನನ್ನ ಕಣ್ಣುಗಳ ಮೇಲಿಡಲು ನಾನು ತೊಳೆದುಕೊಂಡೆನು. ಈಗ ನೋಡುತ್ತೇನೆ,” ಎಂದನು.
Спросили его также и фарисеи, как он прозрел. Он сказал им: брение положил Он на мои глаза, и я умылся, и вижу.
16 ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ. ಏಕೆಂದರೆ ಆತನು ಯೆಹೂದ್ಯರ ಸಬ್ಬತ್ ದಿನವನ್ನು ಕೈಗೊಳ್ಳುವುದಿಲ್ಲ,” ಎಂದರು. ಬೇರೆ ಕೆಲವರು, “ಹಾಗಾದರೆ ಪಾಪಿಯಾದ ಮನುಷ್ಯನು ಇಂಥ ಸೂಚಕಕಾರ್ಯಗಳನ್ನು ಮಾಡುವುದು ಹೇಗೆ?” ಎಂದರು. ಹೀಗೆ ಅವರಲ್ಲಿ ಭೇದ ಉಂಟಾಯಿತು.
Тогда некоторые из фарисеев говорили: не от Бога Этот Человек, потому что не хранит субботы. Другие говорили: как может человек грешный творить такие чудеса? И была между ними распря.
17 ಅವರು ತಿರುಗಿ, “ಆತನು ನಿನಗೆ ದೃಷ್ಟಿಕೊಟ್ಟದ್ದರಿಂದ ಆತನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದಾಗ, ಅವನು, “ಅವರು ಒಬ್ಬ ಪ್ರವಾದಿ,” ಎಂದನು.
Опять говорят слепому: ты что скажешь о Нем, потому что Он отверз тебе очи? Он сказал: это пророк.
18 ದೃಷ್ಟಿಹೊಂದಿದವನ ತಂದೆತಾಯಿಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ, ಅವನು ಕುರುಡನಾಗಿದ್ದು ದೃಷ್ಟಿಹೊಂದಿದನೆಂದು ನಂಬಲಿಲ್ಲ.
Тогда Иудеи не поверили, что он был слеп и прозрел, доколе не призвали родителей сего прозревшего
19 ಅವರು, “ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಇವನಿಗೆ ಕಣ್ಣು ಕಾಣುವುದು ಹೇಗೆ?” ಎಂದು ಅವರನ್ನು ಕೇಳಿದರು.
и спросили их: это ли сын ваш, о котором вы говорите, что родился слепым? как же он теперь видит?
20 ಅವನ ತಂದೆತಾಯಿಗಳು ಅವರಿಗೆ, “ಇವನು ನಮ್ಮ ಮಗನೆಂದೂ ಇವನು ಕುರುಡನಾಗಿ ಹುಟ್ಟಿದನೆಂದೂ ನಾವು ಬಲ್ಲೆವು.
Родители его сказали им в ответ: мы знаем, что это сын наш и что он родился слепым,
21 ಆದರೆ ಇವನಿಗೆ ಈಗ ಕಣ್ಣು ಕಾಣುವುದು ಹೇಗೆಂದು ನಮಗೆ ಗೊತ್ತಿಲ್ಲ. ಯಾರು ಇವನ ಕಣ್ಣುಗಳನ್ನು ತೆರೆದರೆಂದೂ ನಮಗೆ ಗೊತ್ತಿಲ್ಲ, ಇವನನ್ನೇ ಕೇಳಿರಿ; ಇವನು ಪ್ರಾಯದವನಾಗಿದ್ದಾನೆ. ಇವನೇ ತನ್ನ ವಿಷಯವಾಗಿ ಮಾತನಾಡುವನು,” ಎಂದು ಹೇಳಿದರು.
а как теперь видит, не знаем, или кто отверз ему очи, мы не знаем. Сам в совершенных летах; самого спросите; пусть сам о себе скажет.
22 ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಭಯಪಟ್ಟಿದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ, ಅವರನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯ ನಾಯಕರು ಈ ಮೊದಲೇ ಗೊತ್ತುಮಾಡಿದ್ದರು.
Так отвечали родители его, потому что боялись Иудеев; ибо Иудеи сговорились уже, чтобы, кто признает Его за Христа, того отлучать от синагоги.
23 ಆದ್ದರಿಂದ ಅವನ ತಂದೆತಾಯಿಗಳು, “ಇವನು ಪ್ರಾಯದವನಾಗಿದ್ದಾನೆ, ಇವನನ್ನೇ ಕೇಳಿ,” ಎಂದು ಹೇಳಿದರು.
Посему-то родители его и сказали: он в совершенных летах; самого спросите.
24 ಅವರು ಕುರುಡನಾಗಿದ್ದವನನ್ನು ಮತ್ತೊಮ್ಮೆ ಕರೆದು ಅವನಿಗೆ, “ದೇವರಿಗೆ ಮಹಿಮೆಯನ್ನು ಸಲ್ಲಿಸು, ಆ ಮನುಷ್ಯ ಪಾಪಿ ಎಂದು ನಾವು ಬಲ್ಲೆವು,” ಎಂದರು.
Итак, вторично призвали человека, который был слеп, и сказали ему: воздай славу Богу; мы знаем, что Человек Тот грешник.
25 ಅದಕ್ಕೆ ಅವನು, “ಅವರು ಪಾಪಿಯೋ ಏನೋ ನನಗೆ ಗೊತ್ತಿಲ್ಲ. ಒಂದು ಮಾತ್ರ ಬಲ್ಲೆ, ನಾನು ಕುರುಡನಾಗಿದ್ದೆನು; ಈಗ ನನಗೆ ಕಾಣುತ್ತದೆ,” ಎಂದು ಉತ್ತರಕೊಟ್ಟನು.
Он сказал им в ответ: грешник ли Он, не знаю; одно знаю, что я был слеп, а теперь вижу.
26 ಆದ್ದರಿಂದ ಅವರು ಅವನಿಗೆ, “ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು?” ಎಂದು ಕೇಳಿದ್ದಕ್ಕೆ,
Снова спросили его: что сделал Он с тобою? как отверз твои очи?
27 ಅವನು ಉತ್ತರವಾಗಿ, “ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ. ಆದರೆ ನೀವು ಕೇಳಲಿಲ್ಲ, ನೀವು ತಿರುಗಿ ಏಕೆ ಕೇಳುತ್ತೀರಿ? ನೀವು ಸಹ ಅವರ ಶಿಷ್ಯರಾಗುವುದಕ್ಕೆ ಬಯಸುತ್ತೀರೋ?” ಎಂದನು.
Отвечал им: я уже сказал вам, и вы не слушали; что еще хотите слышать? или и вы хотите сделаться Его учениками?
28 ಆಗ ಅವರು ಅವನನ್ನು ದೂಷಿಸಿ, “ನೀನು ಆತನ ಶಿಷ್ಯನು. ಆದರೆ ನಾವು ಮೋಶೆಯ ಶಿಷ್ಯರು.
Они же укорили его и сказали: ты ученик Его, а мы Моисеевы ученики.
29 ಮೋಶೆಯ ಮೂಲಕ ದೇವರು ಮಾತನಾಡಿದನೆಂದು ನಾವು ಬಲ್ಲೆವು. ಆದರೆ ಈತನು ಎಲ್ಲಿಂದ ಬಂದನೋ ನಮಗೆ ಗೊತ್ತಿಲ್ಲ,” ಎಂದರು.
Мы знаем, что с Моисеем говорил Бог; Сего же не знаем, откуда Он.
30 ಅದಕ್ಕೆ ಅವನು ಅವರಿಗೆ, “ಏನಾಶ್ಚರ್ಯ! ಅವರು ನನ್ನ ಕಣ್ಣುಗಳನ್ನು ತೆರೆದರೂ ಅವರು ಎಲ್ಲಿಂದ ಬಂದವನೆಂದು ನಿಮಗೆ ತಿಳಿಯದೆ ಇರುವುದು.
Человек прозревший сказал им в ответ: это и удивительно, что вы не знаете, откуда Он, а Он отверз мне очи.
31 ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲ; ಆದರೆ ಯಾರು ದೇವರಿಗೆ ಭಯಪಡುವವರಾಗಿದ್ದು ಅವರ ಚಿತ್ತದಂತೆ ನಡೆಯುತ್ತಾರೋ, ಅಂಥವರಿಗೆ ಕಿವಿಗೊಡುತ್ತಾರೆಂದು ನಾವು ಬಲ್ಲೆವು.
Но мы знаем, что грешников Бог не слушает; но кто чтит Бога и творит волю Его, того слушает.
32 ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾರಾದರೂ ತೆರೆದಿದ್ದನ್ನು ಎಂದಿಗೂ ಒಬ್ಬರೂ ಕೇಳಿಲ್ಲ. (aiōn g165)
От века не слыхано, чтобы кто отверз очи слепорожденному. (aiōn g165)
33 ಅವರು ದೇವರಿಂದ ಬಂದವರಲ್ಲದಿದ್ದರೆ ಅವರಿಂದ ಏನೂ ಮಾಡಲಾಗುತ್ತಿರಲಿಲ್ಲ,” ಎಂದನು.
Если бы Он не был от Бога, не мог бы творить ничего.
34 ಅದಕ್ಕೆ ಅವರು, “ನೀನು ಪಾಪದಲ್ಲಿಯೇ ಪೂರ್ಣವಾಗಿ ಹುಟ್ಟಿದವನು. ನೀನು ನಮಗೆ ಬೋಧಿಸುತ್ತೀಯಾ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
Сказали ему в ответ: во грехах ты весь родился, и ты ли нас учишь? И выгнали его вон.
35 ಯೆಹೂದಿ ನಾಯಕರು ಅವನನ್ನು ಸಭಾಮಂದಿರದಿಂದ ಹೊರಗೆ ಹಾಕಿದ್ದನ್ನು ಯೇಸು ಕೇಳಿ, ಅವನನ್ನು ಕಂಡು, “ನೀನು ಮನುಷ್ಯಪುತ್ರನನ್ನು ನಂಬುತ್ತೀಯಾ?” ಎಂದರು.
Иисус, услышав, что выгнали его вон, и найдя его, сказал ему: ты веруешь ли в Сына Божия?
36 ಅದಕ್ಕೆ ಅವನು, “ಸ್ವಾಮೀ, ನಾನು ಅವರನ್ನು ನಂಬುವಂತೆ ಅವರು ಯಾರೆಂದು ತಿಳಿಸಿರಿ,” ಎಂದನು.
Он отвечал и сказал: а кто Он, Господи, чтобы мне веровать в Него?
37 ಯೇಸು ಅವನಿಗೆ, “ನೀನು ಆತನನ್ನು ಕಂಡಿದ್ದೀ ಮತ್ತು ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು,” ಎಂದು ಹೇಳಿದರು.
Иисус сказал ему: и видел ты Его, и Он говорит с тобою.
38 ಆಗ ಅವನು, “ಸ್ವಾಮೀ, ನಾನು ನಂಬುತ್ತೇನೆ,” ಎಂದು ಹೇಳಿ ಯೇಸುವಿಗೆ ಅಡ್ಡಬಿದ್ದನು.
Он же сказал: верую, Господи! И поклонился Ему.
39 ಯೇಸು, “ಕುರುಡರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನಾನು ನ್ಯಾಯತೀರ್ಪು ಮಾಡುವುದಕ್ಕಾಗಿ ಈ ಲೋಕಕ್ಕೆ ಬಂದಿದ್ದೇನೆ,” ಎಂದರು.
И сказал Иисус: на суд пришел Я в мир сей, чтобы невидящие видели, а видящие стали слепы.
40 ಯೇಸುವಿನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತುಗಳನ್ನು ಕೇಳಿ, “ನಾವು ಸಹ ಕುರುಡರೋ?” ಎಂದು ಯೇಸುವನ್ನು ಪ್ರಶ್ನಿಸಿದರು.
Услышав это, некоторые из фарисеев, бывших с Ним, сказали Ему: неужели и мы слепы?
41 ಅದಕ್ಕೆ ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ, ‘ನಮಗೆ ಕಾಣುತ್ತದೆ,’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪವು ನಿಮಗೆ ಉಳಿದಿದೆ,” ಎಂದರು.
Иисус сказал им: если бы вы были слепы, то не имели бы на себе греха; но как вы говорите, что видите, то грех остается на вас.

< ಯೋಹಾನನು 9 >