< ಯೋನನು 3 >
1 ಯೆಹೋವ ದೇವರ ವಾಕ್ಯವು ಎರಡನೆಯ ಸಾರಿ ಯೋನನಿಗೆ ಬಂದಿತು.
И было слово Господне к Ионе вторично:
2 “ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ, ನಾನು ನಿನಗೆ ಹೇಳಿದ ಸಂದೇಶವನ್ನು ಅದರ ನಿವಾಸಿಗಳಿಗೆ ಸಾರು,” ಎಂದು ಹೇಳಿದರು.
встань, иди в Ниневию, город великий, и проповедуй в ней, что Я повелел тебе.
3 ಹೀಗೆ ಯೋನನು ಯೆಹೋವ ದೇವರ ಮಾತಿಗೆ ವಿಧೇಯನಾಗಿ ನಿನೆವೆಗೆ ಹೋದನು. ನಿನೆವೆಯು ಮೂರು ದಿವಸದ ಪ್ರಯಾಣದ ಮಹಾ ದೊಡ್ಡ ಪಟ್ಟಣವಾಗಿತ್ತು.
И встал Иона и пошел в Ниневию, по слову Господню; Ниневия же была город великий у Бога, на три дня ходьбы.
4 ಆಗ ಯೋನನು ಒಂದು ದಿವಸದ ಪ್ರಯಾಣಮಾಡಿ, ಪಟ್ಟಣದಲ್ಲಿ ಪ್ರವೇಶಿಸಿ, “ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ನಾಶವಾಗುವುದು,” ಎಂದು ಕೂಗಿ ಹೇಳಿದನು.
И начал Иона ходить по городу, сколько можно пройти в один день, и проповедывал, говоря: еще сорок дней, и Ниневия будет разрушена!
5 ನಿನೆವೆಯ ಮನುಷ್ಯರು, ದೇವರನ್ನು ನಂಬಿ, ಉಪವಾಸವನ್ನು ಸಾರಿ, ಅವರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನವರೆಗೂ ಗೋಣಿತಟ್ಟನ್ನು ಉಟ್ಟುಕೊಂಡರು.
И поверили Ниневитяне Богу, и объявили пост, и оделись во вретища, от большого из них до малого.
6 ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ, ಅವನು ತನ್ನ ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯಲ್ಲಿ ಕುಳಿತುಕೊಂಡನು.
Это слово дошло до царя Ниневии, и он встал с престола своего, и снял с себя царское облачение свое, и оделся во вретище, и сел на пепле,
7 ಅವನು ನಿನೆವೆಯಲ್ಲಿ ಈ ಘೋಷಣೆಯನ್ನು ಮಾಡಿದನು: “ಅರಸನ ಮತ್ತು ಶ್ರೇಷ್ಠರ ತೀರ್ಪಿನ ಪ್ರಕಾರ: “ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನನ್ನೂ ರುಚಿ ನೋಡದಿರಲಿ, ಮೇಯದಿರಲಿ, ನೀರನ್ನು ಕುಡಿಯದಿರಲಿ.
и повелел провозгласить и сказать в Ниневии от имени царя и вельмож его: “чтобы ни люди, ни скот, ни волы, ни овцы ничего не ели, не ходили на пастбище и воды не пили,
8 ಆದರೆ ಮನುಷ್ಯರೂ ಮೃಗಗಳೂ ಗೋಣಿತಟ್ಟು ಹಾಕಿಕೊಂಡು, ಜೋರಾದ ಧ್ವನಿಯಿಂದ ದೇವರಿಗೆ ಮೊರೆಯಿಡಲಿ. ಎಲ್ಲರೂ ತಮ್ಮ ತಮ್ಮ ದುರ್ಮಾರ್ಗಗಳನ್ನೂ, ತಮ್ಮ ತಮ್ಮ ಕೈಗಳಲ್ಲಿರುವ ಹಿಂಸಾಚಾರವನ್ನೂ ಬಿಟ್ಟು ತಿರುಗಲಿ.
и чтобы покрыты были вретищем люди и скот и крепко вопияли к Богу, и чтобы каждый обратился от злого пути своего и от насилия рук своих.
9 ಹೀಗೆ ಮಾಡಿದರೆ, ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ಅನುಕಂಪದಿಂದ ತಮ್ಮ ಉಗ್ರಕೋಪವನ್ನು ತಡೆದು, ನಾವು ನಾಶವಾಗದೆ ಉಳಿಸುವರೇನೋ, ಯಾರು ಬಲ್ಲರು?”
Кто знает, может быть, еще Бог умилосердится и отвратит от нас пылающий гнев Свой, и мы не погибнем”.
10 ಆಗ ದೇವರು, ನಿನೆವೆಯವರು ತಮ್ಮ ದುರ್ಮಾರ್ಗವನ್ನು ಬಿಟ್ಟು ತಿರುಗಿಕೊಂಡರೆಂದು ಕಂಡು, ತಾವು ವಿಧಿಸುವುದಾಗಿ ನುಡಿದ ವಿನಾಶವನ್ನು ಅವರ ಮೇಲೆ ಬರಮಾಡದೆ, ಅವರನ್ನು ಕನಿಕರಿಸಿದರು.
И увидел Бог дела их, что они обратились от злого пути своего, и пожалел Бог о бедствии, о котором сказал, что наведет на них, и не навел.