< ಯೋನನು 1 >

1 ಯೆಹೋವ ದೇವರ ವಾಕ್ಯವು ಅಮಿತ್ತೈಯನ ಮಗ ಯೋನನಿಗೆ ಬಂದಿತು:
耶和华的话临到亚米太的儿子约拿,说:
2 “ನೀನು ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಪ್ರಸಂಗಿಸು, ಏಕೆಂದರೆ ಅವರ ಕೆಟ್ಟತನವು ನನ್ನ ಮುಂದೆ ಏರಿ ಬಂದಿದೆ,” ಎಂಬುದು.
“你起来往尼尼微大城去,向其中的居民呼喊,因为他们的恶达到我面前。”
3 ಆದರೆ ಯೋನನು ಯೆಹೋವ ದೇವರ ಸಮ್ಮುಖದಿಂದ ತಾರ್ಷೀಷಿಗೆ ಓಡಿಹೋಗುವುದಕ್ಕೆ ಎದ್ದು, ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು, ಪ್ರಯಾಣದ ದರವನ್ನು ಕೊಟ್ಟು, ಯೆಹೋವ ದೇವರ ಸಮ್ಮುಖದಿಂದ ತಪ್ಪಿಸಿಕೊಂಡು ಹೋಗಲು, ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ತಾರ್ಷೀಷಿಗೆ ಹೋಗುವುದಕ್ಕೆ ಅದನ್ನು ಹತ್ತಿದನು.
约拿却起来,逃往他施去躲避耶和华;下到约帕,遇见一只船,要往他施去。他就给了船价,上了船,要与船上的人同往他施去躲避耶和华。
4 ಆದರೆ ಯೆಹೋವ ದೇವರು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದರು. ಸಮುದ್ರದಲ್ಲಿ ಮಹಾ ಬಿರುಗಾಳಿ ಉಂಟಾಗಿ, ಹಡಗು ಒಡೆಯುವುದರಲ್ಲಿತ್ತು.
然而耶和华使海中起大风,海就狂风大作,甚至船几乎破坏。
5 ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ, ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸರಕುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಇಳಿದು ಹೋಗಿ, ಮಲಗಿಕೊಂಡು ಗಾಢ ನಿದ್ರೆಯಲ್ಲಿದ್ದನು.
水手便惧怕,各人哀求自己的神。他们将船上的货物抛在海中,为要使船轻些。约拿已下到底舱,躺卧沉睡。
6 ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು, “ನೀನು ನಿದ್ರೆ ಮಾಡುವುದೇಕೆ? ಎದ್ದು ನಿನ್ನ ದೇವರನ್ನು ಪ್ರಾರ್ಥಿಸು. ಒಂದು ವೇಳೆ ನಿನ್ನ ದೇವರು ನಮ್ಮ ಮೇಲೆ ಲಕ್ಷ್ಯವಿಟ್ಟು, ನಾವು ನಾಶವಾಗದಂತೆ ಕಾಪಾಡಿಯಾರು!” ಎಂದನು.
船主到他那里对他说:“你这沉睡的人哪,为何这样呢?起来,求告你的神,或者神顾念我们,使我们不致灭亡。”
7 ಆಗ ನಾವಿಕರು ಒಬ್ಬರಿಗೊಬ್ಬರು, “ಬನ್ನಿ, ಚೀಟುಗಳನ್ನು ಹಾಕೋಣ. ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ,” ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟುಗಳನ್ನು ಹಾಕಿದಾಗ, ಯೋನನ ಮೇಲೆ ಚೀಟು ಬಿತ್ತು.
船上的人彼此说:“来吧,我们掣签,看看这灾临到我们是因谁的缘故。”于是他们掣签,掣出约拿来。
8 ಆಗ ಅವರು ಅವನಿಗೆ, “ನಮಗಾಗಿ ಈ ಕಷ್ಟವನ್ನೆಲ್ಲಾ ಉಂಟುಮಾಡಿದ್ದಕ್ಕೆ ಯಾರು ಜವಾಬ್ದಾರರೆಂದು ನಮಗೆ ತೋರಿಸು. ನಿನ್ನ ಕೆಲಸವೇನು? ಎಲ್ಲಿಂದ ಬಂದೆ? ನಿನ್ನ ದೇಶ ಯಾವುದು? ನೀನು ಯಾವ ಜನಾಂಗದವನು?” ಎಂದು ಪ್ರಶ್ನಿಸಿದರು.
众人对他说:“请你告诉我们,这灾临到我们是因谁的缘故?你以何事为业?你从哪里来?你是哪一国?属哪一族的人?”
9 ಅವನು ಅವರಿಗೆ, “ನಾನು ಹಿಬ್ರಿಯನು. ಸಮುದ್ರವನ್ನೂ, ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರಲೋಕದ ದೇವರಾದ ಯೆಹೋವ ದೇವರಿಗೆ ನಾನು ಆರಾಧಿಸುವವನಾಗಿದ್ದೇನೆ,” ಎಂದು ಹೇಳಿದನು.
他说:“我是希伯来人。我敬畏耶和华—那创造沧海旱地之天上的 神。”
10 ಆಗ ಆ ಮನುಷ್ಯರು ಬಹಳ ಭಯಪಟ್ಟು, “ನೀನು ಏನು ಮಾಡಿದ್ದೀ?” ಎಂದು ಅವನನ್ನು ಕೇಳಿದರು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಅವನು ಓಡಿ ಹೋಗುತ್ತಿದ್ದಾನೆಂದು ಆ ಮನುಷ್ಯರಿಗೆ ತಿಳಿದಿತ್ತು. ಏಕೆಂದರೆ ಅವನೇ ಇದನ್ನು ಅವರಿಗೆ ಹೇಳಿದ್ದನು.
他们就大大惧怕,对他说:“你做的是什么事呢?”他们已经知道他躲避耶和华,因为他告诉了他们。
11 ಆಗ ಬಿರುಗಾಳಿ ಮತ್ತಷ್ಟು ತೀವ್ರಗೊಳ್ಳುತ್ತಿತ್ತು. ನಾವಿಕರು ಯೋನನಿಗೆ, “ಸಮುದ್ರ ಶಾಂತವಾಗಬೇಕಾದರೆ, ನಿನ್ನನ್ನು ಏನು ಮಾಡಬೇಕು? ಹೇಳು,” ಎಂದು ಕೇಳಿದರು.
他们问他说:“我们当向你怎样行,使海浪平静呢?”这话是因海浪越发翻腾。
12 ಅವನು ಅವರಿಗೆ, “ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ಶಾಂತವಾಗುವುದು. ಏಕೆಂದರೆ ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ, ನಿಮ್ಮ ಮೇಲೆ ಬಂತೆಂದು ಬಲ್ಲೆನು,” ಎಂದನು.
他对他们说:“你们将我抬起来,抛在海中,海就平静了;我知道你们遭这大风是因我的缘故。”
13 ಆದರೂ ಆ ಮನುಷ್ಯರು ದಡಕ್ಕೆ ತಿರುಗಿಕೊಳ್ಳುವ ಹಾಗೆ ಬಲವಾಗಿ ಹುಟ್ಟುಹಾಕಿದರು. ಆದರೆ ಅವರಿಂದಾಗದೆ ಹೋಯಿತು. ಏಕೆಂದರೆ ಸಮುದ್ರವು ಅವರಿಗೆ ಎದುರಾಗಿ, ಹೆಚ್ಚೆಚ್ಚಾಗಿ ತೆರೆಗಳಿಂದ ರೋಷಗೊಂಡಿತು.
然而那些人竭力荡桨,要把船拢岸,却是不能,因为海浪越发向他们翻腾。
14 ಆಗ ಅವರು ಯೆಹೋವ ದೇವರಿಗೆ ಕೂಗಿ, “ಯೆಹೋವ ದೇವರೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ. ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡಿರಿ. ಯೆಹೋವ ದೇವರೇ, ಇದೆಲ್ಲವೂ ಸಂಭವಿಸಿರುವುದು ನಿಮ್ಮ ಚಿತ್ತವಲ್ಲವೇ?” ಎಂದು ಹೇಳಿದರು.
他们便求告耶和华说:“耶和华啊,我们恳求你,不要因这人的性命使我们死亡,不要使流无辜血的罪归与我们;因为你—耶和华是随自己的意旨行事。”
15 ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು. ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿಬಿಟ್ಟಿತು.
他们遂将约拿抬起,抛在海中,海的狂浪就平息了。
16 ಆಗ ಆ ಜನರು, ಯೆಹೋವ ದೇವರಿಗೆ ಬಹಳವಾಗಿ ಭಯಪಟ್ಟು, ಅವರಿಗೆ ಬಲಿ ಅರ್ಪಿಸಿ, ಹರಕೆಗಳನ್ನು ಸಲ್ಲಿಸಿದರು.
那些人便大大敬畏耶和华,向耶和华献祭,并且许愿。
17 ಆದರೆ ಯೆಹೋವ ದೇವರು ಯೋನನನ್ನು ನುಂಗುವಂತೆ ದೊಡ್ಡ ಮೀನನ್ನು ಸಿದ್ಧಮಾಡಿದ್ದರು. ಯೋನನು ಆ ಮೀನಿನ ಹೊಟ್ಟೆಯಲ್ಲಿ ಮೂರು ಹಗಲು ಮತ್ತು ಮೂರು ರಾತ್ರಿ ಇದ್ದನು.
耶和华安排一条大鱼吞了约拿,他在鱼腹中三日三夜。

< ಯೋನನು 1 >