< ಯೆಹೋಶುವನು 15 >

1 ಯೆಹೂದ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವುದೆಂದರೆ: ಕಟ್ಟಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಚಿನ್ ಮರುಭೂಮಿಯ ದಕ್ಷಿಣ ಭಾಗ.
An raba wa kabilar Yahuda gādonsu ta wurin yin ƙuri’a, bisa ga iyalansu, rabon ya kai har zuwa sashen Edom, zuwa Jejin Zin can kurewar kudu.
2 ಲವಣ ಸಮುದ್ರದ ಕಡೆಯಲ್ಲಿ ದಕ್ಷಿಣ ಕಡೆಗಿರುವ ಕೊನೆಯಿಂದ,
Iyakarsu a kudanci ta tashi tun daga kurewar kudu na Tekun Gishiri,
3 ಅಕ್ರಬ್ಬೀಮ್ ಎಂಬ ಕಣಿವೆಯ ದಕ್ಷಿಣಮಾರ್ಗವಾಗಿ ಚಿನಿಗೆ ಹೋಗುವದು. ಅಲ್ಲಿಂದ ದಕ್ಷಿಣದಲ್ಲಿರುವ ಕಾದೇಶ್ ಬರ್ನೇಯಕ್ಕೂ ಅಲ್ಲಿಂದ ಹೆಚ್ರೋನನಿಂದ ಅದ್ದಾರವರೆಗೂ ಮುಂದುವರೆದು ಅಲ್ಲಿ ತಿರಿಗಿಕೊಂಡು ಕರ್ಕದವರೆಗೂ ವಿಸ್ತರಿಸಿಕೊಂಡಿತ್ತು,
zuwa kudancin Hanyar Kunama, ta ci gaba har zuwa Zin, zuwa kudancin Kadesh Barneya. Sa’an nan ta kurɗa zuwa Hezron har zuwa Addar, ta kuma karkata zuwa Karka.
4 ಅಲ್ಲಿಂದ ಈಜಿಪ್ಟನ ಅಚ್ಮೋನ ನದಿಗೆ ಬಂದು ಮೆಡಿಟೆರಿಯನ್ ಸಮುದ್ರದವರೆಗೆ ಹೋಗಿ ಸೇರುವುದು. ಇದೇ ಯೆಹೂದದ ದಕ್ಷಿಣ ಮೇರೆ.
Sai ta wuce zuwa Azmon ta haɗu da Rafin Masar, ta ƙarasa a Bahar Rum. Wannan shi ne iyakarsu ta kudu.
5 ಅದರ ಪೂರ್ವದ ಮೇರೆ, ಯೊರ್ದನ್ ನದಿ ಕೊನೆಯ ಮಟ್ಟಿಗಿರುವ ಲವಣ ಸಮುದ್ರವು. ಉತ್ತರ ಕಡೆಗೆ ಯೊರ್ದನ್ ನದಿ ಮೇರೆ ಕೊನೆ ಹತ್ತಿರ ಸಮುದ್ರದ ಮುಖದ್ವಾರದಿಂದ ಇತ್ತು;
Iyakarsu ta gabas kuwa ita ce Tekun Gishiri wadda ta zarce har zuwa gaɓar Urdun. Iyakarsu ta arewa ta fara ne daga Tekun Gishiri a bakin Urdun,
6 ಅಲ್ಲಿಂದ ಬೇತ್ ಹೊಗ್ಲಾಕ್ಕೂ, ಅಲ್ಲಿಂದ ಉತ್ತರಕ್ಕಿರುವ ಬೇತ್ ಅರಾಬನ್ನು ದಾಟಿ, ರೂಬೇನನ ಮಗ ಬೋಹನನ ಬಂಡೆಯ ವರೆಗೆ ಇತ್ತು.
wajen Bet-Hogla ta wuce har zuwa arewancin Bet-Araba, zuwa Dutsen Bohan ɗan Ruben.
7 ಅಲ್ಲಿಂದ ಆಕೋರ್ ತಗ್ಗನ್ನು ಬಿಟ್ಟು ದೆಬೀರಿಗೂ ಉತ್ತರಕ್ಕೆ ನದಿಗೆ ತಿರುಗಿಕೊಂಡು ದಕ್ಷಿಣದಲ್ಲಿರುವ ಅದುಮೀಮಿನ ದಿಬ್ಬೆಗೆ ಎದುರಾಗಿರುವ ಗಿಲ್ಗಾಲಿಗೂ, ಅಲ್ಲಿಂದ ಏನ್ ಷೆಮೆಷ್ ಎಂಬ ಬುಗ್ಗೆಗೂ, ಅಲ್ಲಿಂದ ಏನ್ ರೋಗೆಲ್‌ವರೆಗೂ ಇತ್ತು.
Sai iyakar ta haura zuwa Debir daga Kwarin Akor ta juya arewa da Gilgal, wadda take fuskantar hawan Adummim a kudancin kwari, ta ci gaba zuwa ruwan En Shemesh, ta ɓullo ta En Rogel.
8 ಅಲ್ಲಿಂದ ಯೆಬೂಸಿಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣಮಾರ್ಗವಾಗಿ ಹಿನ್ನೋಮ್ ತಗ್ಗನ್ನು ದಾಟಿ, ಉತ್ತರಕ್ಕಿರುವ ರೆಫಾಯಿಮ್ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕೆ ಬೆನ್ ಹಿನ್ನೋಮನ ತಗ್ಗಿನ ಮುಂದಿರುವ ಬೆಟ್ಟದ ಶಿಖರದವರೆಗೂ ಹೋಗುತ್ತದೆ.
Sai kuma ta gangara zuwa Kwarin Ben Hinnom a gangaren kudancin birnin Yebusiyawa (wato, Urushalima). Daga can ta haura zuwa kan tudun a yammancin Kwarin Hinnom, a arewancin ƙarshen Kwarin Refayim.
9 ಆ ಬೆಟ್ಟದ ಶಿಖರದಿಂದ ನೆಫ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣಗಳಿಗೂ ಅಲ್ಲಿಂದ ಕಿರ್ಯತ್ ಯಾರೀಮ್ ಆದ ಬಾಲಾ ಎಂಬ ಊರಿನವರೆಗೆ ಹೋಗುತ್ತದೆ.
Daga kan tudun, iyakar ta nufi maɓulɓular ruwa na Neftowa, ta ɓullo a garuruwan da suke a Dutsen Efron, ta gangara zuwa Ba’ala (wato, Kiriyat Yeyarim).
10 ಬಾಲಾದಿಂದ ಪಶ್ಚಿಮಕ್ಕಿರುವ ಸೇಯೀರ್ ಬೆಟ್ಟವನ್ನು ಸುತ್ತಿ, ಅಲ್ಲಿಂದ ಕೆಸಾಲೋನಿನ ಯಾರೀಮ್ ಬೆಟ್ಟದ ಉತ್ತರಕ್ಕೂ ಅಲ್ಲಿಂದ ಬೇತ್ ಷೆಮೆಷ್ ಕಡೆಗೆ ಇಳಿದು ತಿಮ್ನಾಗೆ ಹೋಯಿತು.
Sa’an nan ta karkata yamma daga Ba’ala zuwa Dutsen Seyir, ta wuce ta gangaren Dutsen Yeyarim (wato, Kesalon), ta ci gaba zuwa Bet-Shemesh, ta bi zuwa Timna.
11 ಅಲ್ಲಿಂದ ಉತ್ತರಕ್ಕಿರುವ ಎಕ್ರೋನಿನ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೂ, ಅಲ್ಲಿಂದ ಬಾಲಾ ಬೆಟ್ಟವನ್ನು ದಾಟಿ ಯಬ್ನೆಯೇಲಿಗೆ ಹೊರಟು ಸಮುದ್ರ ತೀರದಲ್ಲಿ ಮುಗಿಯುತ್ತದೆ.
Ta wuce zuwa gangaren arewancin Ekron, ta juya zuwa Shikkeron, ta wuce zuwa Dutsen Ba’ala, ta kai Yabneyel, iyakarta ta ƙare a teku.
12 ಅದು ಪಶ್ಚಿಮದ ಮೇರೆಯ ಮೆಡಿಟರೇನಿಯನ್ ಮಹಾಸಾಗರವಾಗಿದೆ. ಇದೇ ಯೆಹೂದ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ.
Bakin Bahar Rum nan ne iyakar yammanci. Wannan ita ce iyakar da ta kewaye jama’ar Yahuda bisa ga iyalansu.
13 ಇದಲ್ಲದೆ ಯೆಹೋಶುವನು ಯೆಹೋವ ದೇವರ ಅಪ್ಪಣೆಯ ಪ್ರಕಾರ ಯೆಫುನ್ನೆಯ ಮಗ ಕಾಲೇಬನಿಗೆ ಅನಾಕನ ತಂದೆಯ ಕಿರ್ಯತ್ ಅರ್ಬ ಎಂಬ ಹೆಬ್ರೋನನ್ನು ಯೆಹೂದನ ಮಕ್ಕಳ ನಡುವೆ ಸೊತ್ತಾಗಿ ಕೊಟ್ಟನು.
Yoshuwa ya ba Kaleb ɗan Yefunne wuri a Yahuda, Kiriyat Arba, wato, Hebron, bisa ga umarnin Ubangiji. (Arba shi ne mahaifin Anak.)
14 ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ, ಅಹೀಮನ್, ತಲ್ಮೈರನ್ನು ಹೊರಡಿಸಿಬಿಟ್ಟನು.
Daga can sai Kaleb ya kori’ya’yan Anak, maza su uku daga Hebron, wato, Sheshai, Ahiman da Talmai.
15 ಕಾಲೇಬನು ಅಲ್ಲಿಂದ ಹೊರಟು, ಕಿರ್ಯತ್ ಸೇಫೆರ್ ಎಂದು ಅನ್ನಿಸಿಕೊಳ್ಳುತ್ತಿದ್ದ ದೆಬೀರಿನ ವಾಸಿಗಳ ವಿರೋಧವಾಗಿ ಹೋದನು.
Daga can ya nufi Debir ya yi yaƙi da mutanen da suke zama a can (Dā sunan Debir, Kiriyat Sefer ne).
16 ಅಲ್ಲಿ ಕಾಲೇಬನು, “ಕಿರ್ಯತ್ ಸೇಫೆರನ್ನು ದಾಳಿಮಾಡಿ ತೆಗೆದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ,” ಎಂದು ಹೇಳಿದ್ದನು.
Kaleb ya ce, “Zan ba da’yata Aksa aure ga wanda zai ci Kiriyat Sefer da yaƙi.”
17 ಆಗ ಕಾಲೇಬನ ತಮ್ಮನಾದ ಕೆನಾಜನ ಮಗನಾದ ಒತ್ನಿಯೇಲನು ಅದನ್ನು ಹಿಡಿದನು. ಅನಂತರ ಕಾಲೇಬನು ತನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಅವನಿಗೆ ಮದುವೆ ಮಾಡಿಕೊಟ್ಟನು.
Otniyel ɗan Kenaz, ɗan’uwan Kaleb, ya ci Kiriyat Sefer da yaƙi; saboda haka Kaleb ya ba wa Aksa’yarsa, ya kuwa aure ta.
18 ಒಂದು ದಿನ ಅಕ್ಷಾ ಒತ್ನಿಯೇಲನೊಂದಿಗೆ ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಇನ್ನೂ ಒಂದು ಹೊಲವನ್ನು ಕೇಳುವುದಕ್ಕೆ ಅವನನ್ನು ಪ್ರೇರೇಪಿಸಿ, ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳಿಗೆ, “ನಿನಗೆ ಏನು ಬೇಕು?” ಎಂದನು.
Wata rana da ta zo wurin Otniyel, sai ya zuga ta ta roƙi mahaifinta fili. Da ta sauka daga kan jakinta sai Kaleb ya tambaye ta ya ce, “Me kike so in yi miki?”
19 ಅದಕ್ಕೆ ಅವಳು ಅವನಿಗೆ, “ನನಗೆ ಒಂದು ಸಹಾಯಮಾಡಬೇಕು. ಮೊದಲು ದಕ್ಷಿಣ ಹೊಲವನ್ನು ಕೊಟ್ಟೆ; ನೀರಿನ ಬುಗ್ಗೆಗಳನ್ನು ಸಹ ನೀನು ನನಗೆ ಕೊಡು,” ಎಂದಳು. ಆಗ ಕಾಲೇಬನು ಅವಳಿಗೆ ಮೇಲಿನ ಹಾಗೂ ಕೆಳಗಿನ ನೀರಿನ ಬುಗ್ಗೆಗಳನ್ನು ಕೊಟ್ಟನು.
Ta amsa ta ce, “Ka yi mini alheri na musamman, tun da ka ba ni wuri a Negeb, ina roƙonka, ka ba ni maɓulɓulan ruwa.” Kaleb kuwa ya ba ta maɓulɓulan ruwa na tuddai da na kwari.
20 ಯೆಹೂದ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸೊತ್ತಿನ ವಿವರ:
Wannan shi ne gādon kabilar Yahuda bisa ga iyalansu.
21 ದಕ್ಷಿಣದ ಕಟ್ಟಕಡೆಗಿರುವ ಎದೋಮಿನ ಮೇರೆಗೆ ಸರಿಯಾಗಿ ಯೆಹೂದ ಗೋತ್ರಕ್ಕೆ ಇರುವ ಪಟ್ಟಣಗಳು. ಅವು: ಕಬ್ಜಯೇಲ್, ಏದೆರ್, ಯಾಗೂರ್,
Garuruwan kabilar Yahuda da suke kudu cikin Negeb zuwa iyakar Edom su ne. Kabzeyel, Eder, Yagur,
22 ಕೀನಾ, ದೀಮೋನಾ, ಅದಾದಾ,
Kina, Dimona, Adada,
23 ಕೆದೆಷ್, ಹಾಚೋರ್, ಇತ್ನಾನ್,
Kedesh, Hazor, Itnan,
24 ಜೀಫ್, ಟೆಲೆಮ್, ಬೆಯಾಲೋತ್,
Zif, Telem, Beyalot,
25 ಹಾಚೋರ್ ಹದತ್ತಾ, ಕಿರ್ಯೋತ್ ಹೆಚ್ರೋನ್, ಎಂಬುವ ಹಾಚೋರ್,
Hazor-Hadatta, Keriyot Hezron (wato, Hazor),
26 ಅಮಾಮ್, ಶೆಮ, ಮೋಲಾದ,
Amam, Shema, Molada,
27 ಹಜರ್ ಗದ್ದಾ, ಹೆಷ್ಮೋನ್, ಬೇತ್ ಪೆಲೆಟ್,
Hazar Gadda, Heshmon, Bet-Felet,
28 ಹಚರ್ ಷೂವಾಲ್, ಬೇರ್ಷೆಬ, ಬಿಜ್ಯೋತ್ಯಾ,
Hazar Shuwal, Beyersheba, Biziyotiya,
29 ಬಾಲಾ, ಇಯೀಮ್, ಎಚೆಮ್,
Ba’ala, Iyim, Ezem,
30 ಎಲ್ತೋಲದ್, ಕೆಸೀಲ್, ಹೊರ್ಮಾ,
Eltolad, Kesil, Horma,
31 ಚಿಕ್ಲಗ್, ಮದ್ಮನ್ನಾ, ಸನ್ಸನ್ನಾ,
Ziklag, Madmanna, Sansanna,
32 ಲೆಬಾವೋತ್, ಶಿಲ್ಹೀಮ್, ಆಯಿನ್, ರಿಮ್ಮೋನ್ ಎಂಬವುಗಳೇ ಪಟ್ಟಣಗಳೆಲ್ಲಾ ಇಪ್ಪತ್ತೊಂಬತ್ತು ಮತ್ತು ಅವುಗಳ ಗ್ರಾಮಗಳು.
Lebayot, Shilhim, Ayin, Rimmon, jimillarsu, garuruwa da ƙauyukansu duka ashirin da tara ne.
33 ಪಶ್ಚಿಮದ ತಗ್ಗಿನ ದೇಶ ಎಷ್ಟಾವೋಲ್, ಚೊರ್ಗಾ, ಅಶ್ಣಾ,
Biranen da suke a filayen kwari su ne, Eshtawol, Zora; Ashna,
34 ಜಾನೋಹ, ಏಂಗನ್ನೀಮ್, ತಪ್ಪೂಹ, ಏನಾಮ್,
Zanowa, En Gannim, Taffuwa, Enam,
35 ಯರ್ಮೂತ್, ಅದುಲ್ಲಾಮ್, ಸೋಕೋ, ಅಜೇಕಾ,
Yarmut, Adullam, Soko, Azeka,
36 ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
Sha’arayim, Aditayim, Gedera (Gederotayim ke nan). Garuruwa goma sha huɗu ke nan da ƙauyukansu.
37 ಚೆನಾನ್, ಹದಾಷಾ, ಮಿಗ್ದಲ್ಗಾದ್,
Zenan, Hadasha, Migdal Gad,
38 ದಿಲಾನ್, ಮಿಚ್ಪೆ, ಯೊಕ್ತೇಲ್,
Dileyan, Mizfa, Yokteyel,
39 ಲಾಕೀಷ್, ಬೊಚ್ಕತ್, ಎಗ್ಲೋನ್,
Lakish, Bozkat, Eglon,
40 ಕಬ್ಬೋನ್, ಲಹ್ಮಾಸ್, ಕಿತ್ಲೀಷ್,
Kabbon, Lahman, Kitlish,
41 ಗೆದೇರೋತ್, ಬೇತ್‌ದಾಗೋನ್, ನಾಮಾ, ಮಕ್ಕೇದಾ, ಎಂಬ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳು.
Gederot, Bet-Dagon, Na’ama, Makkeda, garuruwa goma sha shida ke nan da ƙauyukansu.
42 ಇದಲ್ಲದೆ ಲಿಬ್ನಾ, ಎತೆರ್, ಆಷಾನ್,
Libna, Eter, Ashan,
43 ಇಪ್ತಾಹ, ಅಶ್ಣಾ, ನೆಜೀಬ್,
Yefta, Ashna, Nezib,
44 ಕೆಯೀಲಾ, ಅಕ್ಜೀಬ್, ಮಾರೇಷಾ, ಎಂಬ ಒಂಬತ್ತು ಪಟ್ಟಣಗಳೂ ಅವುಗಳ ಗ್ರಾಮಗಳು.
Keyila, Akzib, Maresha, garuruwa tara ke nan da ƙauyukansu.
45 ಎಕ್ರೋನ್ ಅದರ ಪಟ್ಟಣಗಳು ಗ್ರಾಮಗಳು ಸಹ.
Ekron da ƙauyukan da suke kewaye da ita;
46 ಎಕ್ರೋನಿನ ಪಶ್ಚಿಮ ಸಮುದ್ರದವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳು.
yammancin Ekron da dukan garuruwa da ƙauyukan da suke kusa da Ashdod.
47 ಅಷ್ಡೋದ್ ಪಟ್ಟಣ ಮತ್ತು ಅದರ ಸುತ್ತಲಿನ ಪಟ್ಟಣಗಳೂ ಗ್ರಾಮಗಳೂ, ಗಾಜಾ, ಅದರ ಪಟ್ಟಣಗಳು, ಅದರ ಗ್ರಾಮಗಳು. ಈಜಿಪ್ಟಿನ ಕಲ್ಲಿನ ನಾಲೆ, ಮೆಡಿಟೆರಿಯನ್ ಸಮುದ್ರ, ಅದರ ಮೇರೆ ಇವುಗಳವರೆಗೂ ಇತ್ತು.
Ashdod da garuruwa da kuma ƙauyukan da suke kewaye da ita, Gaza da garuruwanta da ƙauyukanta har zuwa Rafin Masar da kuma Bahar Rum.
48 ಬೆಟ್ಟಗಳಲ್ಲಿರುವ ಪ್ರದೇಶಗಳು: ಶಾಮೀರ್, ಯತ್ತೀರ್, ಸೋಕೋ,
Birane na cikin ƙasar tuddai kuwa, su ne, Shamir, Yattir, Soko,
49 ದನ್ನಾ, ದೆಬೀರ್ ಎಂಬ ಕಿರ್ಯತ್ ಸನ್ನಾ,
Danna, Kiriyat Sanna (wato, Debir),
50 ಅನಾಬ್, ಎಷ್ಟೆಮೋ, ಅನೀಮ್,
Anab, Eshtemo, Anim,
51 ಗೋಷೆನ್, ಹೋಲೋನ್ ಮತ್ತು ಗಿಲೋ ಎಂಬ ಹನ್ನೊಂದು ಪಟ್ಟಣಗಳು ಅವುಗಳ ಗ್ರಾಮಗಳು.
Goshen, Holon, Gilo, garuruwa goma sha ɗaya ke nan da ƙauyukansu.
52 ಅರಬ್, ರೂಮಾ, ಎಷಾನ್,
Arab, Duma, Eshan,
53 ಯಾನೂಮ್, ಬೇತ್ ತಪ್ಪೂಹ, ಅಫೇಕಾ,
Yanum, Bet-Taffuwa, Afeka,
54 ಹುಮ್ಟಾ, ಹೆಬ್ರೋನೆಂಬ ಕಿರ್ಯತ್ ಅರ್ಬ, ಚೀಯೋರ್ ಎಂಬ ಒಂಬತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳು.
Humta, Kiriyat Arba (wato, Hebron) da Ziyor, garuruwa tara ke nan da ƙauyukansu.
55 ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,
Mawon, Karmel, Zif, Yutta
56 ಇಜ್ರೆಯೇಲ್, ಯೊಗ್ದೆಯಾಮ್, ಜಾನೋಹ,
Yezireyel, Yokdeyam, Zanowa,
57 ಕಯಿನ್, ಗಿಬೆಯ, ತಿಮ್ನಾ ಎಂಬ ಹತ್ತು ಪಟ್ಟಣಗಳು, ಅವುಗಳ ಗ್ರಾಮಗಳು.
Kayin, Gibeya, Timna, garuruwa goma ke nan da ƙauyukansu.
58 ಹಲ್ಹೂಲ್, ಬೇತ್ ಚೂರ್, ಗೆದೋರ್,
Halhul, Bet-Zur, Gedor,
59 ಮಾರಾತ್, ಬೇತ್ ಅನೋತ್, ಎಲ್ಟೆಕೋನ್ ಎಂಬ ಆರು ಪಟ್ಟಣಗಳು, ಅವುಗಳ ಗ್ರಾಮಗಳು.
Ma’arat, Bet-Anot, Eltekon, garuruwa shida ke nan da ƙauyukansu.
60 ಕಿರ್ಯತ್ ಯಾರೀಮ್ ಎಂಬ ಕಿರ್ಯತ್ ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
Kiriyat Ba’al (wato, Kiriyat Yeyarim) da Rabba, garuruwa biyu ke nan da ƙauyukansu.
61 ಮರುಭೂಮಿಯಲ್ಲಿರುವ ಬೇತ್ ಅರಾಬಾ, ಮಿದ್ದೀನ್, ಸೆಕಾಕಾ,
Biranen da suke a jeji kuwa su ne, Bet-Araba, Middin, Sekaka,
62 ನಿಬ್ಷಾನ್, ಉಪ್ಪಿನ ಪಟ್ಟಣವು ಮತ್ತು ಏನ್ಗೆದಿ ಎಂಬ ಪಟ್ಟಣಗಳನ್ನು ಒಳಗೊಂಡ ಆರು ಪಟ್ಟಣಗಳು ಅವುಗಳ ಗ್ರಾಮಗಳು.
Nibshan, Birnin gishiri da En Gedi, garuruwa shida ke nan da ƙauyukansu.
63 ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೆಹೂದ ಗೋತ್ರದವರಿಂದ ಹೊರಡಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಈ ದಿವಸದವರೆಗೂ ಯೆಬೂಸಿಯರು ಯೆಹೂದ ಗೋತ್ರದವರ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
Kabilar Yahuda kuwa ba su iya korar Yebusiyawa waɗanda suke zama cikin Urushalima ba; har wa yau Yebusiyawa suna nan zaune tare da mutanen Yahuda.

< ಯೆಹೋಶುವನು 15 >