< ಯೆಹೋಶುವನು 18 >

1 ಇಸ್ರಾಯೇಲರ ಸಮೂಹವೆಲ್ಲಾ ಶೀಲೋವಿನಲ್ಲಿ ಒಟ್ಟು ಕೂಡಿ ಅಲ್ಲಿ ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
फिर इस्राएलियों की सारी मण्डली ने शीलो में इकट्ठी होकर वहाँ मिलापवाले तम्बू को खड़ा किया; क्योंकि देश उनके वश में आ गया था।
2 ಆದರೆ ಇಸ್ರಾಯೇಲರಲ್ಲಿ ತಮ್ಮ ಬಾಧ್ಯತೆಯನ್ನು ಇನ್ನೂ ಹೊಂದಿಕೊಳ್ಳದ ಏಳು ಗೋತ್ರಗಳು ಉಳಿದಿದ್ದವು.
और इस्राएलियों में से सात गोत्रों के लोग अपना-अपना भाग बिना पाये रह गए थे।
3 ಯೆಹೋಶುವನು ಇಸ್ರಾಯೇಲರಿಗೆ, “ನಿಮ್ಮ ತಂದೆಗಳ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಎಷ್ಟರವರೆಗೆ ಆಲಸ್ಯ ಮಾಡುವಿರಿ?
तब यहोशू ने इस्राएलियों से कहा, “जो देश तुम्हारे पूर्वजों के परमेश्वर यहोवा ने तुम्हें दिया है, उसे अपने अधिकार में कर लेने में तुम कब तक ढिलाई करते रहोगे?
4 ಒಂದೊಂದು ಗೋತ್ರಕ್ಕೆ ಮೂರು ಮಂದಿಯ ಪ್ರಕಾರ ನಿಮ್ಮೊಳಗಿಂದ ಕರೆದುಕೊಂಡು ಬನ್ನಿರಿ. ನಾನು ಅವರನ್ನು ಕಳುಹಿಸುವೆನು. ಅವರು ಎದ್ದು ದೇಶದಲ್ಲೆಲ್ಲಾ ಹೋಗಿ ತಮ್ಮ ಬಾಧ್ಯತೆಗಳ ಪ್ರಕಾರ ಅದನ್ನು ಅಳತೆಮಾಡಿ ವಿವರವಾಗಿ ಬರೆಯಲಿ. ತರುವಾಯ ನನ್ನ ಬಳಿಗೆ ಅವರು ಬರಲಿ.
अब प्रति गोत्र के पीछे तीन मनुष्य ठहरा लो, और मैं उन्हें इसलिए भेजूँगा कि वे चलकर देश में घूमें फिरें, और अपने-अपने गोत्र के भाग के प्रयोजन के अनुसार उसका हाल लिख लिखकर मेरे पास लौट आएँ।
5 ನೀವು ಅದನ್ನು ಏಳು ಪಾಲಾಗಿ ಹಂಚಬೇಕು. ದಕ್ಷಿಣದಲ್ಲಿ ಯೆಹೂದವು, ಉತ್ತರದಲ್ಲಿ ಯೋಸೇಫನ ಮನೆತನದವರೂ ನೆಲೆಸಬೇಕು.
और वे देश के सात भाग लिखें, यहूदी तो दक्षिण की ओर अपने भाग में, और यूसुफ के घराने के लोग उत्तर की ओर अपने भाग में रहें।
6 ನೀವು ದೇಶವನ್ನು ಏಳು ಪಾಲಾಗಿ ವಿತರಿಸಬೇಕು ಮತ್ತು ಅದರ ವಿವರಗಳನ್ನು ಇಲ್ಲಿ ನನ್ನ ಬಳಿಯಲ್ಲಿ ತರಬೇಕು. ಆಗ ನಾನು ಈ ಸ್ಥಳದಲ್ಲಿ ನಮ್ಮ ದೇವರಾದ ಯೆಹೋವ ದೇವರ ಮುಂದೆ ನಿಮಗಾಗಿ ಚೀಟುಗಳನ್ನು ಹಾಕುವೆನು.
और तुम देश के सात भाग लिखकर मेरे पास ले आओ; और मैं यहाँ तुम्हारे लिये अपने परमेश्वर यहोवा के सामने चिट्ठी डालूँगा।
7 ಆದರೆ ಲೇವಿಯರಿಗೆ ನಿಮ್ಮೊಳಗೆ ಪಾಲಿಲ್ಲ. ಏಕೆಂದರೆ ಅವರಿಗೆ ಯೆಹೋವ ದೇವರ ಯಾಜಕತ್ವವೇ ಅವರ ಸೊತ್ತು. ಇದಲ್ಲದೆ ಗಾದನೂ ರೂಬೇನನೂ ಮನಸ್ಸೆಯ ಅರ್ಧ ಗೋತ್ರವೂ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಯೆಹೋವ ದೇವರ ಸೇವಕನಾದ ಮೋಶೆಯಿಂದಲೇ ತಮಗೆ ಸೊತ್ತನ್ನು ತೆಗೆದುಕೊಂಡಿದ್ದಾರೆ,” ಎಂದನು.
और लेवियों का तुम्हारे मध्य में कोई भाग न होगा, क्योंकि यहोवा का दिया हुआ याजकपद ही उनका भाग है; और गाद, रूबेन, और मनश्शे के आधे गोत्र के लोग यरदन के पूर्व की ओर यहोवा के दास मूसा का दिया हुआ अपना-अपना भाग पा चुके हैं।”
8 ಆ ಮನುಷ್ಯರು ನಾಡನ್ನು ಅಳತೆ ಮಾಡುವುದಕ್ಕಾಗಿ ಹೊರಟು ಹೋಗುವುದಕ್ಕೆ ಮುಂಚೆ ಯೆಹೋಶುವನು ಅವರಿಗೆ, “ನೀವು ಹೋಗಿ ದೇಶವೆಲ್ಲಾ ಸಂಚರಿಸಿ, ಅದನ್ನು ಅಳತೆಮಾಡಿ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ. ನಾನು ಇಲ್ಲಿ ಶೀಲೋವಿನಲ್ಲಿ ಯೆಹೋವ ದೇವರ ಮುಂದೆ ನಿಮಗೆ ಚೀಟುಗಳನ್ನು ಹಾಕುವಂತೆ ನನ್ನ ಬಳಿಗೆ ಬನ್ನಿರಿ,” ಎಂದು ಅಪ್ಪಣೆಕೊಟ್ಟನು.
तब वे पुरुष उठकर चल दिए; और जो उस देश का हाल लिखने को चले उन्हें यहोशू ने यह आज्ञा दी, “जाकर देश में घूमो फिरो, और उसका हाल लिखकर मेरे पास लौट आओ; और मैं यहाँ शीलो में यहोवा के सामने तुम्हारे लिये चिट्ठी डालूँगा।”
9 ಆ ಮನುಷ್ಯರು ಆ ನಾಡಿಗೆ ಹೋಗಿ, ಅದರ ಪಟ್ಟಣಗಳ ಪ್ರಕಾರ ಏಳು ಪಾಲಾಗಿ ಒಂದು ಗ್ರಂಥದಲ್ಲಿ ಬರೆದುಕೊಂಡು ಶೀಲೋವಿನಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ತಿರುಗಿ ಬಂದರು.
तब वे पुरुष चल दिए, और उस देश में घूमें, और उसके नगरों के सात भाग करके उनका हाल पुस्तक में लिखकर शीलो की छावनी में यहोशू के पास आए।
10 ಆಗ ಯೆಹೋಶುವನು ಅವರಿಗೆ ಶೀಲೋವಿನಲ್ಲಿ ಯೆಹೋವ ದೇವರ ಮುಂದೆ ಚೀಟುಗಳನ್ನು ಹಾಕಿದನು. ಅಲ್ಲಿ ಯೆಹೋಶುವನು ಇಸ್ರಾಯೇಲರಿಗೆ ನಾಡನ್ನು ಅವರ ಗೋತ್ರಗಳ ಪ್ರಕಾರ ಪಾಲುಗಳನ್ನು ಹಂಚಿಕೊಟ್ಟನು.
१०तब यहोशू ने शीलो में यहोवा के सामने उनके लिये चिट्ठियाँ डालीं; और वहीं यहोशू ने इस्राएलियों को उनके भागों के अनुसार देश बाँट दिया।
11 ಬೆನ್ಯಾಮೀನನ ಸಂತತಿಯವರಿಗೆ ಅವರ ಕುಟುಂಬಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಸೊತ್ತು ಯೆಹೂದ ಮತ್ತು ಯೋಸೇಫನ ಗೋತ್ರದವರ ಪ್ರಾಂತಗಳಿಗೆ ನಡುವೆಯಿತ್ತು.
११बिन्यामीनियों के गोत्र की चिट्ठी उनके कुलों के अनुसार निकली, और उनका भाग यहूदियों और यूसुफियों के बीच में पड़ा।
12 ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನಿನಿಂದ ಹೊರಟು ಯೆರಿಕೋವಿನ ಉತ್ತರದ ಕಡೆಯಿಂದ ಬೆಟ್ಟಗಳಲ್ಲಿ ಪಶ್ಚಿಮದ ಕಡೆಗೆ ಏರಿ ಬೇತಾವೆನ ಮರುಭೂಮಿಗೆ ಮುಗಿಯುವುದು.
१२और उनकी उत्तरी सीमा यरदन से आरम्भ हुई, और यरीहो की उत्तरी ओर से चढ़ते हुए पश्चिम की ओर पहाड़ी देश में होकर बेतावेन के जंगल में निकली;
13 ಆ ಮೇರೆಯು ಅಲ್ಲಿಂದ ಬೇತೇಲೆಂಬ ಲೂಜಿಗೆ ಹಾದು, ಲೂಜಿನ ದಕ್ಷಿಣದ ಕಡೆಗೆ ಹೋಗಿ, ಅಟಾರೋತ್ ಅದ್ದಾರಿನ ಕೆಳಗಿನ ಬೇತ್ ಹೋರೋನಿಗೆ ದಕ್ಷಿಣದಲ್ಲಿರುವ ಬೆಟ್ಟಕ್ಕೆ ಹೋಗುವುದು.
१३वहाँ से वह लूज को पहुँची (जो बेतेल भी कहलाता है), और लूज की दक्षिणी ओर से होते हुए निचले बेथोरोन के दक्षिणी ओर के पहाड़ के पास हो अत्रोतदार को उतर गई।
14 ಇದಲ್ಲದೆ ಆ ಮೇರೆಯು ದಕ್ಷಿಣ ಎಲ್ಲೆಗೆ ಎದುರಾಗಿರುವ ಬೇತ್ ಹೋರೋನಿಗೆ ಎದುರಾಗಿ ಬೆಟ್ಟವನ್ನು ಹಿಡಿದು, ದಕ್ಷಿಣವಾಗಿ ಸುತ್ತಿಕೊಂಡು ಕಿರ್ಯತ್ ಯಾರೀಮ್ ಎಂಬ ಯೆಹೂದ ಗೋತ್ರದ ಪಟ್ಟಣವಾದ ಕಿರ್ಯತ್ ಬಾಳದ ಬಳಿಗೆ ಹೋಗಿ ಮುಗಿಯುವುದು. ಇದು ಪಶ್ಚಿಮ ಎಲ್ಲೆಯಾಗಿತ್ತು.
१४फिर पश्चिमी सीमा मुड़कर बेथोरोन के सामने और उसकी दक्षिण ओर के पहाड़ से होते हुए किर्यतबाल नामक यहूदियों के एक नगर पर निकली (जो किर्यत्यारीम भी कहलाता है); पश्चिम की सीमा यही ठहरी।
15 ಆ ದಕ್ಷಿಣ ಎಲ್ಲೆಯೂ ಕಿರ್ಯತ್ ಯಾರೀಮ್ ತುದಿಯಿಂದ ಹೊರಟು, ಪಶ್ಚಿಮಕ್ಕೆ ಹೋಗಿ, ನೆಫ್ತೋಹದ ಜಲಬುಗ್ಗೆಯ ಬಳಿ ಮುಗಿಯುತ್ತದೆ.
१५फिर दक्षिण की ओर की सीमा पश्चिम से आरम्भ होकर किर्यत्यारीम के सिरे से निकलकर नेप्तोह के सोते पर पहुँची;
16 ನೆಫ್ತೋಹ ಬುಗ್ಗೆಯ ಮೇಲೆ ಬೆನ್ ಹಿನ್ನೋಮ್ ತಗ್ಗಿನ ಈಚೆಗೂ ರೆಫಾಯಿಮ್ ತಗ್ಗಿನ ಉತ್ತರದಲ್ಲಿಯೂ ಇರುವ ಬೆಟ್ಟದ ಅಂಚಿಗೆ ಹೋಗಿ, ಅಲ್ಲಿಂದ ದಕ್ಷಿಣದಲ್ಲಿ ಯೆಬೂಸಿಯರ ಮೇರೆಯಾದ ಬೆನ್ ಹಿನ್ನೋಮಿನ ಹಳ್ಳದ ಕಣಿವೆ ಮಾರ್ಗವಾಗಿ ಏನ್ ರೋಗೆಲಿಗೆ ಬರುತ್ತದೆ.
१६और उस पहाड़ के सिरे पर उतरी, जो हिन्नोम के पुत्र की तराई के सामने और रपाईम नामक तराई के उत्तरी ओर है; वहाँ से वह हिन्नोम की तराई में, अर्थात् यबूस के दक्षिणी ओर होकर एनरोगेल को उतरी;
17 ಅಲ್ಲಿಂದ ಏನ್ ಷೆಮೆಷ್, ಅಲ್ಲಿಂದ ಅದುಮೀಮ್ ಎಂಬ ದಿಬ್ಬೆಗೆ ಎದುರಾಗಿ ಗೆಲೀಲೋತಿಗೂ, ಅಲ್ಲಿಂದ ರೂಬೇನನ ಪುತ್ರನಾದ ಬೋಹನನ ಕಲ್ಲಿಗೆ ಏರಿಹೋಗಿ,
१७वहाँ से वह उत्तर की ओर मुड़कर एनशेमेश को निकलकर उस गलीलोत की ओर गई, जो अदुम्मीम की चढ़ाई के सामने है, फिर वहाँ से वह रूबेन के पुत्र बोहन के पत्थर तक उतर गई;
18 ಅಲ್ಲಿಂದ ಬೇತ್ ಅರಾಬಾದ ಎದುರಾಗಿ ಉತ್ತರ ಭಾಗಕ್ಕೆ ಹೊರಟು, ಅರಾಬಾ ತಗ್ಗಿಗೆ ಇಳಿದು ಬರುತ್ತದೆ.
१८वहाँ से वह उत्तर की ओर जाकर अराबा के सामने के पहाड़ की ओर से होते हुए अराबा को उतरी;
19 ಅಲ್ಲಿಂದ ಆ ಮೇರೆ ಬೇತ್ ಹೊಗ್ಲಾಕ್ಕೆ ಉತ್ತರ ಕಡೆಯಾಗಿ ಹೊರಟು, ಯೊರ್ದನ್ ನದಿ ಮುಖ ದ್ವಾರಕ್ಕೆ ಉತ್ತರವಾದ ಲವಣ ಸಮುದ್ರ ಎಂಬ ಲವಣ ಸಮುದ್ರದ ಉತ್ತರ ಮೂಲೆಯಲ್ಲಿ ಮುಗಿಯುತ್ತದೆ. ಇದೇ ದಕ್ಷಿಣ ಭಾಗದ ಮೇರೆ.
१९वहाँ से वह सीमा बेथोग्ला की उत्तरी ओर से जाकर खारे ताल की उत्तर ओर के कोल में यरदन के मुहाने पर निकली; दक्षिण की सीमा यही ठहरी।
20 ಪೂರ್ವದಿಕ್ಕಿನಲ್ಲಿ ಯೊರ್ದನ್ ನದಿಯೇ ಅದರ ಮೇರೆಯಾಗಿತ್ತು. ಇದು ಬೆನ್ಯಾಮೀನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಸುತ್ತಲಿರುವ ಮೇರೆಗಳ ಸೊತ್ತಾಗಿತ್ತು.
२०और पूर्व की ओर की सीमा यरदन ही ठहरी। बिन्यामीनियों का भाग, चारों ओर की सीमाओं सहित, उनके कुलों के अनुसार, यही ठहरा।
21 ಬೆನ್ಯಾಮೀನನ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರಕಿರುವ ಪಟ್ಟಣಗಳ ವಿವರ: ಯೆರಿಕೋ, ಬೇತ್ ಹೊಗ್ಲಾ, ಏಮೆಕ್ ಕೆಚ್ಚೀಚ್ ತಗ್ಗು,
२१बिन्यामीनियों के गोत्र को उनके कुलों के अनुसार ये नगर मिले, अर्थात् यरीहो, बेथोग्ला, एमेक्कसीस,
22 ಬೇತ್ ಅರಾಬಾ, ಚೆಮಾರಯಿಮ್, ಬೇತೇಲ್,
२२बेतराबा, समारैम, बेतेल,
23 ಅವ್ವೀಮ್, ಪಾರಾ, ಒಫ್ರಾ,
२३अब्बीम, पारा, ओप्रा,
24 ಕೆಫೆರ್ ಅಮ್ಮೋನಿ, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ ಆಗಿರುತ್ತವೆ.
२४कपरम्मोनी, ओफनी और गेबा; ये बारह नगर और इनके गाँव मिले।
25 ಇದಲ್ಲದೆ ಗಿಬ್ಯೋನ್, ರಾಮಾ, ಬೇರೋತ್,
२५फिर गिबोन, रामाह, बेरोत,
26 ಮಿಚ್ಪೆ, ಕೆಫೀರಾ, ಮೋಚಾ,
२६मिस्पे, कपीरा, मोसा,
27 ರೆಕೆಮ್, ಇರ್ಪೇಲ್, ತರಲಾ,
२७रेकेम, यिर्पेल, तरला,
28 ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯ, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳೂ, ಅವುಗಳ ಗ್ರಾಮಗಳೂ ಆಗಿರುತ್ತವೆ. ಇವೇ ಬೆನ್ಯಾಮೀನ್ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆತ ಸೊತ್ತು.
२८सेला, एलेप, यबूस (जो यरूशलेम भी कहलाता है), गिबा और किर्यत; ये चौदह नगर और इनके गाँव उन्हें मिले। बिन्यामीनियों का भाग उनके कुलों के अनुसार यही ठहरा।

< ಯೆಹೋಶುವನು 18 >