< ಯೆಹೋಶುವನು 19 >

1 ಎರಡನೆಯ ಚೀಟು ಬಿದ್ದ ಭಾಗವು ಸಿಮೆಯೋನನ ಗೋತ್ರದವರದಾಗಿತ್ತು. ಸಿಮೆಯೋನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆಯಿತು. ಅವರ ಸೊತ್ತು ಯೆಹೂದ ಗೋತ್ರದ ಸೊತ್ತಿನ ಮಧ್ಯದಲ್ಲಿತ್ತು.
Второто жребие излезе за Симеона, за племето на Симеоновците според семействата им; и наследството им беше всред наследството на юдейците.
2 ಅವರಿಗೆ ಸೇರಿದ ಪಟ್ಟಣಗಳು ಯಾವುವೆಂದರೆ: ಬೇರ್ಷೆಬಾ ಅಥವಾ ಶೆಬಾ, ಮೋಲಾದಾ,
За своето наследство те имаха; Вирсавее (или Савее), Молада,
3 ಹಚರ್ ಷೂವಾಲ್, ಬಾಲಾ, ಎಚೆಮ್,
Асур-суал, Вала, Асем,
4 ಎಲ್ತೋಲದ್, ಬೆತೂಲ್, ಹೊರ್ಮಾ,
Елтолад, Ветул, Хорма,
5 ಚಿಕ್ಲಗ್, ಬೇತ್ ಮರ್ಕಾಬೋತ್, ಹಚರ್‌ಸೂಸಾ,
Сиклаг, Вет-маркавот, Асарсуса,
6 ಬೇತ್ ಲೆಬಾವೋತ್, ಶಾರೂಹೆನ್ ಎಂಬ ಹದಿಮೂರು ಪಟ್ಟಣಗಳೂ, ಅವುಗಳ ಗ್ರಾಮಗಳೂ ಆಗಿದ್ದವು.
Ветловаот и Саруен; тринадесет града със селата им;
7 ಇದಲ್ಲದೆ ಆಯಿನ್, ರಿಮ್ಮೋನ್, ಎತೆರ್, ಆಷಾನ್ ಎಂಬ ನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳೂ ಆಗಿದ್ದವು.
Аин, Римон, Етер и Асан; четири града със селата им;
8 ಇದರೊಂದಿಗೆ ಬಾಲಾತ್ ಬೇರಿನವರೆಗೂ ಇರುವ ಎಲ್ಲಾ ಪಟ್ಟಣ ಮತ್ತು ಅದರ ಗ್ರಾಮಗಳೂ ಬಾಲತ್ ಬೇರ್ ಎಂಬುದು ದಕ್ಷಿಣದಲ್ಲಿರುವ ನೆಗೇವಿನ ರಾಮದಲ್ಲಿ ಇರುತ್ತದೆ. ಇದೇ ಸಿಮೆಯೋನನ ಗೋತ್ರದವರ ಕುಟುಂಬಗಳ ಪ್ರಕಾರ ದೊರೆತ ಸೊತ್ತು.
и всичките села, които бяха около тия градове, до Ваалат-вир (който е южният Рамат). Това е наследството за племето на симеонците според семействата им.
9 ಸಿಮೆಯೋನನ ಗೋತ್ರದವರಿಗೆ ಬಾಧ್ಯತೆ ಯೆಹೂದ ಗೋತ್ರದವರ ಭಾಗದಿಂದ ಸಿಕ್ಕಿತು. ಏಕೆಂದರೆ ಯೆಹೂದ ಗೋತ್ರದ ಭಾಗವು ಅವರಿಗೆ ಹೆಚ್ಚಾಗಿದ್ದ ಕಾರಣ, ಸಿಮೆಯೋನನ ಗೋತ್ರದವರು ಯೆಹೂದ ಗೋತ್ರದವರ ಎಲ್ಲೆಯ ಒಳಗಿಂದಲೇ ತಮ್ಮ ಪಾಲನ್ನು ಹೊಂದಿದರು.
От дяла на юдейците се даде наследството на симеонците, защото делът на юдейците беше голям за тях; за това, симеонците наследиха дял всред тяхното наследство.
10 ಮೂರನೆಯ ಚೀಟು ಬಿದ್ದ ಭಾಗ ಜೆಬುಲೂನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಬಿದ್ದಿತು. ಅವರ ಬಾಧ್ಯತೆಯ ಮೇರೆ ಸಾರೀದ್ ವರೆಗೂ ಇತ್ತು.
Третото жребие излезе за завулонците, според семействата им; и пределът на наследството им беше до Сарид;
11 ಅಲ್ಲಿಂದ ಪಶ್ಚಿಮ ಕಡೆಗೆ ಹೋಗಿ, ಮರಾಳಕ್ಕೆ ಏರಿ, ದಬ್ಬೆಷೆತಿಗೆ ಹೋಗಿ, ಯೊಕ್ನೆಯಾಮಿಗೆ ಎದುರಾದ ಹಳ್ಳಕ್ಕೆ ಹೋಗುತ್ತದೆ.
и границата им отиваше западно до Марала, и досягаше Давасес и досягаше потока, който е срещу Иокнеам;
12 ಅದು ಸಾರೀದಿನಿಂದ ಸೂರ್ಯನು ಉದಯಿಸುವ ಪೂರ್ವದಿಕ್ಕಿನ ಕಿಸ್ಲೋತ್ ತಾಬೋರಿನ ಮೇರೆಗೆ ತಿರುಗಿ, ಅಲ್ಲಿಂದ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.
и от Сарид завиваше към изгрева на слънцето до междата на Кислот-тавор, и излизаше на Даврат, и възлизаше на Яфия,
13 ಅಲ್ಲಿಂದ ಪೂರ್ವದಿಕ್ಕಿನಲ್ಲಿ ಮುಂದುವರೆದು ಗತ್‌ಹೇಫೆರನ್ನು ಮತ್ತು ಎತ್‌ಕಾಚೀನನ್ನು ದಾಟಿ, ರಿಮ್ಮೋನವರೆಗೂ ಹೋಗಿ ನೇಯಗೆ ತಿರುಗುತ್ತದೆ.
и от там минаваше към изток в Гетефер, в Ита-касин, и излизаше в Римон-метоар към Нуя;
14 ಅಲ್ಲಿಂದ ಆ ಮೇರೆ ಉತ್ತರ ದಿಕ್ಕಿನಲ್ಲಿರುವ ಹನ್ನಾತೋನಿಗೆ ಸುತ್ತಿಕೊಂಡು ಇಫ್ತಯೇಲನ ಹಳ್ಳದ ತಗ್ಗಿಗೆ ಮುಗಿಯುತ್ತದೆ.
и от север границата завиваше в Анатот, и свършваше в долината Ефтаил,
15 ಈ ಮೇರೆಯಲ್ಲಿರುವ ಕಟ್ಟಾತ್, ನಹಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಮೊದಲಾದ ಹನ್ನೆರಡು ಪಟ್ಟಣಗಳು, ಅವುಗಳ ಗ್ರಾಮಗಳು ಸಹ ಒಳಪಟ್ಟಿರುತ್ತದೆ
като включваше Катат, Наадал, Симрон, Идала и Витлеем, дванадесет града със селата им.
16 ಜೆಬುಲೂನಿನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಆ ಪಟ್ಟಣಗಳೂ, ಅವುಗಳ ಗ್ರಾಮಗಳೂ ಅವರ ಬಾಧ್ಯತೆಯಾಗಿದ್ದವು.
Това е наследството на завулонците по семействата им, -тия градове със селата им.
17 ನಾಲ್ಕನೆಯ ಚೀಟು ಇಸ್ಸಾಕಾರನ ಸಂತತಿಯವರಿಗೆ ಬಿದ್ದಿತು.
Четвъртото жребие излезе за Исахара, за исахарците по семействата им.
18 ಅವರ ಮೇರೆಯು: ಇಜ್ರೆಯೇಲ್ ಕೆಸುಲೋತ್, ಶೂನೇಮ್,
Пределът им беше Езраил, Кесулот, Сунам,
19 ಹಫಾರಯಿಮ್, ಶಿಯೋನ್, ಅನಾಹರತ್,
Афераим, Сеон, Анахарат,
20 ರಬ್ಬೀತ್, ಕಿಷ್ಯೋನ್, ಎಬೆಜ್,
Равит, Кисион, Авес,
21 ರೆಮೆತ್, ಏಂಗನ್ನೀಮ್, ಏನ್ ಹದ್ದಾ, ಬೇತ್ ಪಚ್ಚೇಚ್ ಎಂಬ ತೀರಗಳನ್ನು ಒಳಗೊಂಡಿತ್ತು.
Ремет, Енганим, Енада и Вет-фасис;
22 ಆ ಎಲ್ಲೆಯು ತಾಬೋರ್, ಶಹಚೀಮಾ, ಬೇತ್ ಷೆಮೆಷ್ ಎಂಬ ಊರುಗಳಿಗೆ ಸೇರಿ ಯೊರ್ದನ್ ನದಿ ತೀರದಲ್ಲಿ ಮುಗಿಯುತ್ತದೆ. ಅಲ್ಲಿ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳೂ ಇದ್ದವು.
и границата досягаше Тавор, Сахасима и Ветсемес; и границата им свършваше при Иордан; шестнадесет града със селата им.
23 ಇಸ್ಸಾಕಾರನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಪಟ್ಟಣಗಳೂ, ಅವುಗಳ ಗ್ರಾಮಗಳೂ ಅವರಿಗೆ ದೊರೆತ ಪಾಲು.
Това е наследството за племето на исахарците по семействата им, - градовете със селата им.
24 ಚೀಟು ಬಿದ್ದ ಐದನೆಯ ಭಾಗವು ಆಶೇರನ ಗೋತ್ರಕ್ಕೆ ಅವರ ಕುಟುಂಬದ ಪ್ರಕಾರ ದೊರೆಯಿತು.
Петото жребие излезе за племето на асирците семействата им.
25 ಅವರ ಮೇರೆ: ಹೆಲ್ಕತ್, ಹಲೀ, ಬೆಟೆನ್, ಅಕ್ಷಾಫ್,
Пределът им беше Хелкат, Али, Ветен, Ахсаф,
26 ಅಲಮ್ಮೆಲೆಕ್, ಅಮಾದ್, ಮಿಷಾಲ್ ಎಂಬ ಪಟ್ಟಣಗಳನ್ನು ಸುತ್ತಿಕೊಂಡು ಅದು ಪಶ್ಚಿಮಕ್ಕೆ ಕರ್ಮೆಲ್, ಶೀಹೋರ್ ಲಿಬ್ನತ್ ಕಡೆ ಹೋಗಿ,
Аламелех, Амад и Мисал, и достигаше, до Кармил на запад и до Сихор-ливнат;
27 ಅಲ್ಲಿಂದ ಪೂರ್ವದ ಕಡೆಯಾಗಿ ಬೇತ್‌ದಾಗೋನಿಗೆ ತಿರುಗುತ್ತದೆ. ಅನಂತರ ಜೆಬುಲೂನಿಗೂ ಬೇತ್ ಏಮೆಕಿಗೆ ಉತ್ತರ ದಿಕ್ಕಿನಲ್ಲಿ ಇರುವ ಇಫ್ತಯೇಲ್ ತಗ್ಗಿಗೂ ನೆಗೀಯೇಲ್ ಕಡೆ ಹಾದು, ಎಡಭಾಗದಲ್ಲಿರುವ ಕಾಬೂಲ್ ಕಡೆ ಮುಂದುವರೆಯುತ್ತದೆ.
и границата им завиваше към изгрева на слънцето при Вет-дагон, и досягаше Завулон и долината Ефтаил на север от Ветемек и Наил, и излизаше при Хаул на ляво,
28 ಅಲ್ಲಿಂದ ಅಬ್ದೋನ್, ರೆಹೋಬ್, ಹಮ್ಮೋನ್, ಕಾನಾ ಹಾಗೂ ಸೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.
и Еврон, Роов, Амон и Кана, до големия Сидон;
29 ಅಲ್ಲಿಂದ ರಾಮಾ, ಟೈರ್ ಎಂಬ ಕೋಟೆಪಟ್ಟಣದವರೆಗೂ ಹೋಗುತ್ತದೆ. ಅಲ್ಲಿಂದ ಹೋಸಾ ಕಡೆ ಹೊರಟು ಮೆಡಿಟೆರಿಯನ್ ಸಮುದ್ರದ ಬಳಿ ಅಕ್ಜೀಬ್ ಮೇರೆಯ ಅಂಚಿಗೆ ಮುಗಿಯುತ್ತದೆ.
и границата завиваше към Рама и към укрепения град Тир; и границата завиваше към Оса, и свършваше при морето край страната на Ахзив,
30 ಅದಕ್ಕೆ ಉಮ್ಮಾ, ಅಫೇಕ್ ಮತ್ತು ರೆಹೋಬ್ ಒಟ್ಟು ಇಪ್ಪತ್ತೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ ಇದ್ದವು.
и Ама, Афен и Роов; двадесет идва града със селата им.
31 ಇದೇ ಆಶೇರನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆತ ಪಟ್ಟಣಗಳೂ, ಅವುಗಳ ಗ್ರಾಮಗಳೂ ಆಗಿರುತ್ತವೆ.
Това е наследство за племето на асирците по семействата им - тия градове със селата им.
32 ಆರನೆಯ ಚೀಟು ಬಿದ್ದ ಭಾಗವು ನಫ್ತಾಲಿಯ ಗೋತ್ರದ್ದಾಗಿತ್ತು. ನಫ್ತಾಲಿಯ ಗೋತ್ರದ ಅವರ ಕುಟುಂಬಗಳ ಪ್ರಕಾರ ಪಾಲು ದೊರೆಯಿತು.
Шестото жребие излезе за нефталимците, за нефталимците по семействата им.
33 ಅವರ ಮೇರೆಯು ಹೆಲೇಫ್ ಮತ್ತು ಚಾನನ್ನೀಮ್ ಎಂಬ ಕಡೆಯಲ್ಲಿ ಇರುವ ಅಲ್ಲೋನ್ ಮರದಿಂದ, ಆದಾಮಿ ನೆಕೆಬ್, ಯಬ್ನೆಯೇಲ್, ಇವುಗಳ ಮೇಲೆ ಹಾದು ಲಕ್ಕೂಮ್ ತನಕ ಹೋಗಿ ಯೊರ್ದನ್ ನದಿಯ ತೀರದಲ್ಲಿ ಮುಗಿಯುತ್ತದೆ.
Границата им беше от Елеф, от Алон близо при Саананим, и Адами-некев, и Явнеил, до Лакум и свършваше при Иордан;
34 ಆ ಮೇರೆಯು ಪಶ್ಚಿಮಕ್ಕೆ ಅಜ್ನೋತ್ ತಾಬೋರ್ ಕಡೆಗೆ ತಿರುಗಿ, ಅಲ್ಲಿಂದ ಹುಕ್ಕೋಕ್ ಹೊರಟು, ದಕ್ಷಿಣಕ್ಕೆ ಜೆಬುಲೂನನನ್ನೂ ಪಶ್ಚಿಮಕ್ಕೆ ಆಶೇರನ್ನೂ ಮತ್ತು ಯೆಹೂದಿಯರ ಮೇರೆಗೂ ಪೂರ್ವದಿಕ್ಕಿನಲ್ಲಿ ಯೊರ್ದನ್ ನದಿಯನ್ನು ಮುಟ್ಟಿ ಬರುವುದು.
и границата завиваше към запад до Азнот-тавор, и от там излизаше при Укок, и досягаше Завулон на юг, а досягаше Асир на запад и Юда при Иордан към изгрева на слънцето.
35 ಇದರಲ್ಲಿರುವ ಕೋಟೆಗಳುಳ್ಳ ಪಟ್ಟಣಗಳು ಯಾವುವೆಂದರೆ: ಜಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್,
А укрепените градове бяха: Сидим, Сер, Амат, Ракат Хинерот,
36 ಅದಾಮಾ, ರಾಮಾ, ಹಾಚೋರ್,
Адама, Рама, Асор,
37 ಕೆದೆಷ್, ಎದ್ರೈ, ಎನ್ ಹಾಚೋರ್,
Кедес, Едран, Енасор,
38 ಇರೋನ್, ಮಿಗ್ದಲ್ ಎಲ್, ಹೊರೇಮ್, ಬೇತ್ ಅನಾತ್ ಹಾಗೂ ಬೇತ್ ಷೆಮೆಷ್. ಮೊದಲಾದ ಹತ್ತೊಂಬತ್ತು ಕೋಟೆಪಟ್ಟಣಗಳೂ, ಅವುಗಳ ಗ್ರಾಮಗಳು.
Ирон, Мигдалил, Орам, Ветанат и Ветсемес; деветнадесет града със селата им,
39 ಇದೇ ನಫ್ತಾಲಿಯ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಸೊತ್ತಾಗಿ ಸಿಕ್ಕಿದ ಪಟ್ಟಣಗಳೂ ಅವುಗಳ ಗ್ರಾಮಗಳು.
Това е наследството за племето на нефталимците по семействата им - градовете със селата им.
40 ಇದಲ್ಲದೆ ಏಳನೆಯ ಚೀಟು ಬಿದ್ದ ಭಾಗವು ದಾನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆಯಿತು.
Седмото жребие излезе за племето на данците по семействата им.
41 ಅವರಿಗೆ ದೊರೆತ ಸೊತ್ತಿನ ವಿವರ: ಚೊರ್ಗಾ, ಎಷ್ಟಾವೋಲ್, ಈರ್ ಷೆಮೆಷ್,
Пределът, който те наследяваха, беше Саара, Естаол, Ерсемес,
42 ಶಾಲಬ್ಬೀನ್, ಅಯ್ಯಾಲೋನ್, ಇತ್ಲಾ,
Салавим, Еалон, Етла,
43 ಏಲೋನ್, ತಿಮ್ನಾ, ಎಕ್ರೋನ್,
Елон, Тамната, Акарон,
44 ಎಲ್ತೆಕೇ, ಗಿಬ್ಬೆತೋನ್, ಬಾಲಾತ್,
Елтеко, Гиветон, Ваалат,
45 ಯೆಹುದ್, ಬೆನೇ ಬೆರಕ್, ಗತ್ ರಿಮ್ಮೋನ್,
Юд, Вани-варак, Гетримон,
46 ಮೇಯರ್ಕೋನ್, ರಕ್ಕೋನ್ ಎಂಬ ಪಟ್ಟಣಗಳು. ಯೊಪ್ಪ ಊರಿಗೆ ಎದುರಾದ ಮೇರೆಯು ಸಹ ದೊರಕಿತು.
Меиаркон и Ракон, с околността, която е срещу Иопа,
47 ಇದಲ್ಲದೆ ದಾನನ ಗೋತ್ರದ ಮೇರೆಯು ಅವರಿಗೆ ಸಾಲದ್ದರಿಂದ ಅವರು ಹೊರಟುಹೋಗಿ ಲೆಷೆಮಿನ ಮೇಲೆ ಖಡ್ಗದಿಂದ ಯುದ್ಧಮಾಡಿ, ಅದನ್ನು ಸೋಲಿಸಿ, ಸ್ವಾಧೀನಮಾಡಿಕೊಂಡರು. ಅವರು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು.
А пределът на данците не им стигаше; за това данците отидоха и воюваха против Лесем, и като го превзеха и го поразиха с острото на ножа, взеха го за притежание и заселиха се в него; и Лесем наименуваха Дан, по името на праотца си Дан.
48 ಈ ಪಟ್ಟಣಗಳೂ, ಅವುಗಳ ಗ್ರಾಮಗಳೂ, ದಾನ್ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರೆತ ಬಾಧ್ಯತೆಯು ಇದೇ.
Това е наследството за племето на данците по семействата им, - тия градове със селата им.
49 ಅವರು ದೇಶವನ್ನು ಅದರ ಮೇರೆಗಳ ಪ್ರಕಾರ ಬಾಧ್ಯತೆಯಾಗಿ ಹಂಚಿಕೊಂಡ ಮೇಲೆ ಇಸ್ರಾಯೇಲರು ನೂನನ ಮಗನಾದ ಯೆಹೋಶುವನಿಗೆ ತಮ್ಮ ಮಧ್ಯದಲ್ಲಿ ಪಾಲನ್ನು ಕೊಟ್ಟರು.
А като свършиха подялбата на земята, според пределите й, израилтяните дадоха на Исуса Навиевия син наследството всред себе си;
50 ಅವನು ಕೇಳಿದ ಎಫ್ರಾಯೀಮ್ ಬೆಟ್ಟದಲ್ಲಿರುವ ತಿಮ್ನತ್ ಸೆರಹ ಎಂಬ ಪಟ್ಟಣವನ್ನು ಯೆಹೋವ ದೇವರ ಆಜ್ಞೆಯ ಪ್ರಕಾರ ಕೊಟ್ಟರು. ಅವನು ಪಟ್ಟಣವನ್ನು ಕಟ್ಟಿಕೊಂಡು ಅಲ್ಲಿಯೇ ನೆಲೆಸಿದನು.
според Господната заповед, дадоха му града, който поиска, сиреч, Тамнат-сарах в хълмистата част на Ефрема; и той съгради града и живееше в него.
51 ಯಾಜಕನಾದ ಎಲಿಯಾಜರನೂ ನೂನನ ಮಗ ಯೆಹೋಶುವನೂ ಇಸ್ರಾಯೇಲರ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ದೇವದರ್ಶನ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಸಮ್ಮುಖದಲ್ಲಿ ಚೀಟುಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಹಂಚಿಕೊಳ್ಳುವ ಕೆಲಸವನ್ನು ಪೂರೈಸಿದರು.
Тия са наследствата, който свещеникът Елеазар и Исус Навиевия син и началниците на бащините домове на племената на израилтяните разделиха с жребие в Сило пред Господа, при входа на шатъра за срещане. Така свършиха подялбата на земята.

< ಯೆಹೋಶುವನು 19 >