< ಯೆಹೋಶುವನು 20 >

1 ಯೆಹೋವ ದೇವರು ಯೆಹೋಶುವನಿಗೆ,
上主訓示說:「
2 “ನಾನು ಮೋಶೆಯ ಮುಖಾಂತರ ನಿನಗೆ ಹೇಳಿದ ಆಶ್ರಯದ ಪಟ್ಟಣಗಳನ್ನು ಗೊತ್ತುಮಾಡಿಕೊಳ್ಳುವಂತೆ ನೀನು ಇಸ್ರಾಯೇಲರಿಗೆ ಹೇಳು.
你應告訴以色列子民說:他們應向照我藉梅瑟向你們所提及的,指定一些避難城,
3 ಯಾವನಾದರು ಅರಿಯದೆ ಅಕಸ್ಮಾತ್ತಾಗಿ ಕೈತಪ್ಪಿ ಕೊಂದುಹಾಕಿದರೆ, ಅಂಥವನು ಅಲ್ಲಿಗೆ ಓಡಿಹೋಗಲಿ. ಅವನಿಗೆ ರಕ್ತದ ಸೇಡು ತೀರಿಸುವವನಿಂದ ತಪ್ಪಿಸಿಕೊಳ್ಳುವ ಆಶ್ರಯವಾಗಿರಲಿ.
好使無心誤殺人的能逃到那裏去。這些城市作為你們逃避血仇者的地方
4 ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಬಂದವನು, ಪಟ್ಟಣದ ಬಾಗಿಲ ದ್ವಾರದಲ್ಲಿ ನಿಂತುಕೊಂಡು, ಆ ಪಟ್ಟಣದ ಹಿರಿಯರ ಮುಂದೆ ತನ್ನ ವ್ಯಾಜ್ಯವನ್ನು ತಿಳಿಸಬೇಕು. ಅವರು ಅವನನ್ನು ಪಟ್ಟಣದೊಳಗೆ ಸೇರಿಸಿಕೊಳ್ಳಲಿ. ಅವರು ತಮ್ಮ ಬಳಿಯಲ್ಲಿ ವಾಸವಾಗಿರಲು ಅವನಿಗೆ ಸ್ಥಳವನ್ನು ಕೊಡಲಿ.
那誤殺人的,只要逃往這些城中的一座,立於城門口,將自己的事,報告給這城的長老聽;長老就該將他接入城中,給他地方,讓他往在他們中間。
5 ರಕ್ತದ ಸೇಡು ತೀರಿಸಿಕೊಳ್ಳುವವನು ಅವನನ್ನು ಹಿಂದಟ್ಟಿ ಬಂದರೆ, ಕೊಲೆ ಮಾಡಿದವನನ್ನು ಅವನ ಕೈಗೆ ಒಪ್ಪಿಸಿಕೊಡಬಾರದು. ಏಕೆಂದರೆ ಅವನು ತನ್ನ ನೆರೆಯವನನ್ನು ಅಕಸ್ಮಾತ್ತಾಗಿ ಕೊಂದನು ಮತ್ತು ಪೂರ್ವದಲ್ಲಿ ಅವನ ಬಗ್ಗೆ ದ್ವೇಷ ಇರಲಿಲ್ಲ.
如果報血仇者追來了,長老不可將他交於報血仇者手中,因為他殺人原是出於無心,素無仇恨。
6 ಇದಲ್ಲದೆ ಅವನು ನ್ಯಾಯ ವಿಚಾರಣೆಗೋಸ್ಕರ ಸಭೆಯ ಮುಂದೆ ಬಂದು ನಿಲ್ಲುವವರೆಗೂ ಆ ದಿವಸಗಳಲ್ಲಿ ಇರುವ ಮಹಾಯಾಜಕನು ಮರಣ ಹೊಂದುವವರೆಗೂ ಆ ಪಟ್ಟಣದಲ್ಲೇ ವಾಸವಾಗಿರಬೇಕು. ತರುವಾಯ ಕೊಂದವನು ತಾನು ಬಿಟ್ಟು ಓಡಿ ಹೋದ ತನ್ನ ಪಟ್ಟಣಕ್ಕೂ, ತನ್ನ ಮನೆಗೂ ತಿರುಗಿಬರಬಹುದು,” ಎಂದು ಹೇಳಿದರು.
殺人者應往在這城內,直到他在會眾前出庭受審,直到現任的大司祭去世之後,方可回到本城本家,即由之逃出城市。」
7 ಅದರಂತೆ ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ, ಎಫ್ರಾಯೀಮನ ಬೆಟ್ಟಗಳಲ್ಲಿರುವ ಶೆಕೆಮನ್ನೂ, ಯೆಹೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯತ್ ಅರ್ಬವನ್ನೂ ನೇಮಿಸಿದರು.
以色列人於是在納斐塔里山區,指定了加里肋亞的刻德士;在厄弗辣因山區指定了舍根;在猶大山區指定了克黎雅特阿爾耳巴,即赫貝龍;
8 ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನ್ ನದಿ ಆಚೆ ರೂಬೇನನ ಗೋತ್ರಕ್ಕಿರುವ ಸಮ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನು ಗಾದನ ಗೋತ್ರಕ್ಕೆ ಗಿಲ್ಯಾದಿನ ರಾಮೋತನ್ನೂ, ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾನನ್ನೂ ಕೊಟ್ಟರು.
在約旦河東岸,耶利哥東面,在曠野高原裏,勒烏本支派內指定了貝責爾;在加得支派內,指定了基肋阿得的辣摩特;在默納協支派內,指定了巴商的哥藍。
9 ಕೈತಪ್ಪಿ ಅರಿಯದೆ ಅಕಸ್ಮಾತ್ತಾಗಿ ಕೊಂದವನು ಯಾವನಾದರೂ ನ್ಯಾಯಸಭೆಯ ಮುಂದೆ ಬಂದು ನಿಲ್ಲುವ ತನಕ, ಸೇಡು ತೀರಿಸಿಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿಹೋಗುವುದಕ್ಕೆ ಇಸ್ರಾಯೇಲರೆಲ್ಲರಿಗೂ, ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲಾದ ಪಟ್ಟಣಗಳು ಇವೇ.
以上是為所有的以色列人和寄他們中間的外方人指定的城市,使凡誤殺人的,能逃往那裏去,在他未出庭受會眾審判以前,不致死在報血仇者的手裏。

< ಯೆಹೋಶುವನು 20 >