< ಯೆಹೋಶುವನು 21 >

1 ಲೇವಿ ಗೋತ್ರದ ಹಿರಿಯರು, ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲರ ಗೋತ್ರಗಳ ಹಿರಿಯರ ಬಳಿಗೂ ಯಾಜಕನಾದ ಎಲಿಯಾಜರನ ಬಳಿಗೂ ಬಂದರು.
וַֽיִּגְּשׁוּ רָאשֵׁי אֲבוֹת הַלְוִיִּם אֶל־אֶלְעָזָר הַכֹּהֵן וְאֶל־יְהוֹשֻׁעַ בִּן־נוּן וְאֶל־רָאשֵׁי אֲבוֹת הַמַּטּוֹת לִבְנֵי יִשְׂרָאֵֽל׃
2 ಅವರು ಕಾನಾನ್ ದೇಶದ ಶೀಲೋವಿನಲ್ಲಿ ಅವರನ್ನು ಸಂಧಿಸಿ, “ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ್ದಾರೆ,” ಎಂದರು.
וַיְדַבְּרוּ אֲלֵיהֶם בְּשִׁלֹה בְּאֶרֶץ כְּנַעַן לֵאמֹר יְהֹוָה צִוָּה בְיַד־מֹשֶׁה לָתֶת־לָנוּ עָרִים לָשָׁבֶת וּמִגְרְשֵׁיהֶן לִבְהֶמְתֵּֽנוּ׃
3 ಹಾಗೆಯೇ ಇಸ್ರಾಯೇಲರು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಯೆಹೋವ ದೇವರ ಆಜ್ಞೆಯ ಪ್ರಕಾರ ಪಟ್ಟಣಗಳನ್ನೂ ಗೋಮಾಳಗಳನ್ನೂ ಕೊಟ್ಟರು. ಅವುಗಳ ವಿವರ:
וַיִּתְּנוּ בְנֵי־יִשְׂרָאֵל לַלְוִיִּם מִנַּחֲלָתָם אֶל־פִּי יְהֹוָה אֶת־הֶעָרִים הָאֵלֶּה וְאֶת־מִגְרְשֵׁיהֶֽן׃
4 ಕೊಹಾತ್ಯರ ಗೋತ್ರಗಳಿಗೆ ಚೀಟು ಬಂದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೆಹೂದದ ಗೋತ್ರದಲ್ಲಿಯೂ, ಸಿಮೆಯೋನನ ಗೋತ್ರದಲ್ಲಿಯೂ, ಬೆನ್ಯಾಮೀನನ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ಚೀಟಿಯಿಂದ ದೊರಕಿದವು.
וַיֵּצֵא הַגּוֹרָל לְמִשְׁפְּחֹת הַקְּהָתִי וַיְהִי לִבְנֵי אַהֲרֹן הַכֹּהֵן מִן־הַלְוִיִּם מִמַּטֵּה יְהוּדָה וּמִמַּטֵּה הַשִּׁמְעֹנִי וּמִמַּטֵּה בִנְיָמִן בַּגּוֹרָל עָרִים שְׁלֹשׁ עֶשְׂרֵֽה׃
5 ಕೊಹಾತ್ಯರಿಗೆ ಎಫ್ರಾಯೀಮನ ಗೋತ್ರದಲ್ಲಿಯೂ, ದಾನನ ಗೋತ್ರದಲ್ಲಿಯೂ, ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹತ್ತು ಪಟ್ಟಣಗಳು ಚೀಟಿಯಿಂದ ದೊರಕಿದವು.
וְלִבְנֵי קְהָת הַנּֽוֹתָרִים מִמִּשְׁפְּחֹת מַטֵּֽה־אֶפְרַיִם וּֽמִמַּטֵּה־דָן וּמֵחֲצִי מַטֵּה מְנַשֶּׁה בַּגּוֹרָל עָרִים עָֽשֶׂר׃
6 ಗೇರ್ಷೋನ್ಯರಿಗೆ ಇಸ್ಸಾಕಾರನ ಗೋತ್ರದಲ್ಲಿಯೂ, ಆಶೇರನ ಗೋತ್ರದಲ್ಲಿಯೂ, ನಫ್ತಾಲಿಯ ಗೋತ್ರದಲ್ಲಿಯೂ, ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ಚೀಟಿಯಿಂದ ದೊರಕಿದವು.
וְלִבְנֵי גֵרְשׁוֹן מִמִּשְׁפְּחוֹת מַטֵּֽה־יִשָּׂשכָר וּמִמַּטֵּֽה־אָשֵׁר וּמִמַּטֵּה נַפְתָּלִי וּמֵחֲצִי מַטֵּה מְנַשֶּׁה בַבָּשָׁן בַּגּוֹרָל עָרִים שְׁלֹשׁ עֶשְׂרֵֽה׃
7 ಇದಲ್ಲದೆ ಮೆರಾರೀಯರಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ, ಗಾದನ ಗೋತ್ರದಲ್ಲಿಯೂ, ಜೆಬುಲೂನನ ಗೋತ್ರದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು.
לִבְנֵי מְרָרִי לְמִשְׁפְּחֹתָם מִמַּטֵּה רְאוּבֵן וּמִמַּטֵּה־גָד וּמִמַּטֵּה זְבוּלֻן עָרִים שְׁתֵּים עֶשְׂרֵֽה׃
8 ಈ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗೋಮಾಳಗಳನ್ನೂ ಇಸ್ರಾಯೇಲರು ಯೆಹೋವ ದೇವರು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ, ಲೇವಿಯರಿಗೆ ಚೀಟು ಹಾಕಿಕೊಟ್ಟರು.
וַיִּתְּנוּ בְנֵֽי־יִשְׂרָאֵל לַלְוִיִּם אֶת־הֶעָרִים הָאֵלֶּה וְאֶת־מִגְרְשֵׁיהֶן כַּאֲשֶׁר צִוָּה יְהֹוָה בְּיַד־מֹשֶׁה בַּגּוֹרָֽל׃
9 ಅವರು ಯೆಹೂದನ ಗೋತ್ರದಲ್ಲಿಯೂ ಸಿಮೆಯೋನನ ಗೋತ್ರದಲ್ಲಿಯೂ ಕೆಲವು ಪಟ್ಟಣಗಳನ್ನು ಕೊಟ್ಟರು.
וַֽיִּתְּנוּ מִמַּטֵּה בְּנֵי יְהוּדָה וּמִמַּטֵּה בְּנֵי שִׁמְעוֹן אֵת הֶעָרִים הָאֵלֶּה אֲשֶׁר־יִקְרָא אֶתְהֶן בְּשֵֽׁם׃
10 ಲೇವಿಯರಿಗೆ ಮೊದಲನೆಯ ಚೀಟು ಬಿದ್ದ ಕಾರಣ, ಲೇವಿ ಗೋತ್ರಕ್ಕೆ ಸೇರಿದ ಕೊಹಾತ್ಯರಾದ ಆರೋನನ ಸಂತತಿಯರಿಗೆ ಯೆಹೂದ ಗೋತ್ರದಲ್ಲಿಯೂ, ಸಿಮೆಯೋನನ ಗೋತ್ರದಲ್ಲಿಯೂ ಕೂಡಲಾದ ಪಟ್ಟಣಗಳ ವಿವರ:
וַֽיְהִי לִבְנֵי אַהֲרֹן מִמִּשְׁפְּחוֹת הַקְּהָתִי מִבְּנֵי לֵוִי כִּי לָהֶם הָיָה הַגּוֹרָל רִאישֹׁנָֽה׃
11 ಯೆಹೂದದ ಬೆಟ್ಟಗಳಲ್ಲಿರುವ ಅನಾಕನ ಪಿತೃವಾದ ಕಿರ್ಯತ್ ಅರ್ಬನ ಹೆಸರಿದ್ದ ಪಟ್ಟಣವಾದ ಹೆಬ್ರೋನನ್ನೂ, ಅದರ ಸುತ್ತಲಿರುವ ಗೋಮಾಳಗಳನ್ನೂ ಅವರಿಗೆ ಕೊಟ್ಟರು.
וַיִּתְּנוּ לָהֶם אֶת־קִרְיַת אַרְבַּע אֲבִי הָעֲנוֹק הִיא חֶבְרוֹן בְּהַר יְהוּדָה וְאֶת־מִגְרָשֶׁהָ סְבִיבֹתֶֽיהָ׃
12 ಆದರೆ ಆ ಪಟ್ಟಣದ ಹೊಲಗಳನ್ನೂ, ಅದರ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೂ ಬಾಧ್ಯತೆಯಾಗಿ ಕೊಟ್ಟರು.
וְאֶת־שְׂדֵה הָעִיר וְאֶת־חֲצֵרֶיהָ נָתְנוּ לְכָלֵב בֶּן־יְפֻנֶּה בַּאֲחֻזָּתֽוֹ׃
13 ಹೀಗೆಯೇ ಯಾಜಕನಾದ ಆರೋನನ ವಂಶದವರಿಗೆ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಕೊಟ್ಟರು. ಲಿಬ್ನಾವನ್ನೂ
וְלִבְנֵי ׀ אַֽהֲרֹן הַכֹּהֵן נָֽתְנוּ אֶת־עִיר מִקְלַט הָרֹצֵחַ אֶת־חֶבְרוֹן וְאֶת־מִגְרָשֶׁהָ וְאֶת־לִבְנָה וְאֶת־מִגְרָשֶֽׁהָ׃
14 ಯತ್ತೀರನ್ನೂ ಎಷ್ಟೆಮೋವನ್ನೂ
וְאֶת־יַתִּר וְאֶת־מִגְרָשֶׁהָ וְאֶֽת־אֶשְׁתְּמֹעַ וְאֶת־מִגְרָשֶֽׁהָ׃
15 ಹೋಲೋನನ್ನೂ ದೆಬೀರನ್ನೂ
וְאֶת־חֹלֹן וְאֶת־מִגְרָשֶׁהָ וְאֶת־דְּבִר וְאֶת־מִגְרָשֶֽׁהָ׃
16 ಆಯಿನ್, ಯುಟ್ಟಾ, ಬೇತ್ ಷೆಮೆಷ್ ಎಂಬ ಆ ಎರಡು ಗೋತ್ರಗಳಿಂದ ಈ ಒಂಬತ್ತು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಟ್ಟರು.
וְאֶת־עַיִן וְאֶת־מִגְרָשֶׁהָ וְאֶת־יֻטָּה וְאֶת־מִגְרָשֶׁהָ אֶת־בֵּית שֶׁמֶשׁ וְאֶת־מִגְרָשֶׁהָ עָרִים תֵּשַׁע מֵאֵת שְׁנֵי הַשְּׁבָטִים הָאֵֽלֶּה׃
17 ಇದಲ್ಲದೆ ಬೆನ್ಯಾಮೀನನ ಗೋತ್ರದಲ್ಲಿ ಗಿಬ್ಯೋನನ್ನೂ ಗೆಬಾನನ್ನೂ
וּמִמַּטֵּה בִנְיָמִין אֶת־גִּבְעוֹן וְאֶת־מִגְרָשֶׁהָ אֶת־גֶּבַע וְאֶת־מִגְרָשֶֽׁהָ׃
18 ಅನಾತೋತನ್ನೂ ಅಲ್ಮೋನನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಟ್ಟರು.
אֶת־עֲנָתוֹת וְאֶת־מִגְרָשֶׁהָ וְאֶת־עַלְמוֹן וְאֶת־מִגְרָשֶׁהָ עָרִים אַרְבַּֽע׃
19 ಯಾಜಕನಾದ ಆರೋನನ ವಂಶದವರಿಗೆ ಒಟ್ಟು ಹದಿಮೂರು ಪಟ್ಟಣಗಳೂ, ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
כׇּל־עָרֵי בְנֵֽי־אַהֲרֹן הַכֹּהֲנִים שְׁלֹשׁ־עֶשְׂרֵה עָרִים וּמִגְרְשֵׁיהֶֽן׃
20 ಇದಲ್ಲದೆ ಲೇವಿಯರಾದ ಕೊಹಾತ್ಯನ ಗೋತ್ರದ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯೀಮನ ಗೋತ್ರದಲ್ಲಿ ಚೀಟಿಯಿಂದ ದೊರಕಿದ ಪಟ್ಟಣಗಳ ವಿವರ:
וּלְמִשְׁפְּחוֹת בְּנֵֽי־קְהָת הַלְוִיִּם הַנּֽוֹתָרִים מִבְּנֵי קְהָת וַֽיְהִי עָרֵי גֽוֹרָלָם מִמַּטֵּה אֶפְרָֽיִם׃
21 ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯೀಮನ ಬೆಟ್ಟಗಳಲ್ಲಿರುವ, ಶೆಕೆಮನ್ನೂ ಗೆಜೆರನ್ನೂ
וַיִּתְּנוּ לָהֶם אֶת־עִיר מִקְלַט הָרֹצֵחַ אֶת־שְׁכֶם וְאֶת־מִגְרָשֶׁהָ בְּהַר אֶפְרָיִם וְאֶת־גֶּזֶר וְאֶת־מִגְרָשֶֽׁהָ׃
22 ಕಿಬ್‌ಚೈಮ್ ಮತ್ತು ಬೇತ್ ಹೋರೋನ್ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
וְאֶת־קִבְצַיִם וְאֶת־מִגְרָשֶׁהָ וְאֶת־בֵּית חוֹרֹן וְאֶת־מִגְרָשֶׁהָ עָרִים אַרְבַּֽע׃
23 ಇದಲ್ಲದೆ ದಾನ್ಯನ ಗೋತ್ರದಲ್ಲಿ, ಎಲ್ತೆಕೇಯನ್ನೂ ಗಿಬ್ಬೆತೋನನ್ನೂ
וּמִמַּטֵּה־דָן אֶֽת־אֶלְתְּקֵא וְאֶת־מִגְרָשֶׁהָ אֶֽת־גִּבְּתוֹן וְאֶת־מִגְרָשֶֽׁהָ׃
24 ಅಯ್ಯಾಲೋನನ್ನೂ ಗತ್ ರಿಮ್ಮೋನನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
אֶת־אַיָּלוֹן וְאֶת־מִגְרָשֶׁהָ אֶת־גַּת־רִמּוֹן וְאֶת־מִגְרָשֶׁהָ עָרִים אַרְבַּֽע׃
25 ಮನಸ್ಸೆಯ ಅರ್ಧಗೋತ್ರದಲ್ಲಿ, ತಾನಕನ್ನೂ ಗತ್ ರಿಮ್ಮೋನನ್ನೂ ಹೀಗೆ ಎರಡು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
וּמִֽמַּחֲצִית מַטֵּה מְנַשֶּׁה אֶת־תַּעְנַךְ וְאֶת־מִגְרָשֶׁהָ וְאֶת־גַּת רִמּוֹן וְאֶת־מִגְרָשֶׁהָ עָרִים שְׁתָּֽיִם׃
26 ಹೀಗೆ ಉಳಿದಂಥ ಕೊಹಾತ್ಯನ ಗೋತ್ರಗಳಲ್ಲಿ ಹತ್ತು ಪಟ್ಟಣಗಳೂ ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
כׇּל־עָרִים עֶשֶׂר וּמִגְרְשֵׁיהֶן לְמִשְׁפְּחוֹת בְּנֵי־קְהָת הַנּוֹתָרִֽים׃
27 ಲೇವಿ ಗೋತ್ರದ ಗೇರ್ಷೋನ್ಯರಿಗೆ ಮನಸ್ಸೆಯ ಅರ್ಧಗೋತ್ರದಲ್ಲಿ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿನಲ್ಲಿರುವ ಗೋಲಾನನ್ನೂ ಬೆಯೆಷ್ಟೆರಾವನ್ನೂ ಹೀಗೆ ಎರಡು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
וְלִבְנֵי גֵֽרְשׁוֹן מִמִּשְׁפְּחֹת הַלְוִיִּם מֵחֲצִי מַטֵּה מְנַשֶּׁה אֶת־עִיר מִקְלַט הָרֹצֵחַ אֶת־[גּוֹלָן] (גלון) בַּבָּשָׁן וְאֶת־מִגְרָשֶׁהָ וְאֶת־בְּעֶשְׁתְּרָה וְאֶת־מִגְרָשֶׁהָ עָרִים שְׁתָּֽיִם׃
28 ಇದಲ್ಲದೆ ಇಸ್ಸಾಕಾರನ ಗೋತ್ರದ ಸೊತ್ತಿನಿಂದ ಕಿಷ್ಯೋನನ್ನೂ ದಾಬೆರತನ್ನೂ
וּמִמַּטֵּה יִשָּׂשכָר אֶת־קִשְׁיוֹן וְאֶת־מִגְרָשֶׁהָ אֶת־דָּבְרַת וְאֶת־מִגְרָשֶֽׁהָ׃
29 ಯರ್ಮೂತ್ ಮತ್ತು ಏಂಗನ್ನೀಮನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
אֶת־יַרְמוּת וְאֶת־מִגְרָשֶׁהָ אֶת־עֵין גַּנִּים וְאֶת־מִגְרָשֶׁהָ עָרִים אַרְבַּֽע׃
30 ಆಶೇರನ ಗೋತ್ರದ ಸೊತ್ತಿನಿಂದ ಮಿಷಾಲನ್ನೂ, ಅಬ್ದೋನನ್ನೂ
וּמִמַּטֵּה אָשֵׁר אֶת־מִשְׁאָל וְאֶת־מִגְרָשֶׁהָ אֶת־עַבְדּוֹן וְאֶת־מִגְרָשֶֽׁהָ׃
31 ಹೆಲ್ಕತನ್ನೂ ರೆಹೋಬನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
אֶת־חֶלְקָת וְאֶת־מִגְרָשֶׁהָ וְאֶת־רְחֹב וְאֶת־מִגְרָשֶׁהָ עָרִים אַרְבַּֽע׃
32 ನಫ್ತಾಲಿಯ ಗೋತ್ರದಲ್ಲಿ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಹಮ್ಮೋತ್ ದೋರನ್ನೂ ಕರ್ತಾನನ್ನೂ ಹೀಗೆ ಮೂರು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
וּמִמַּטֵּה נַפְתָּלִי אֶת־עִיר ׀ מִקְלַט הָרֹצֵחַ אֶת־קֶדֶשׁ בַּגָּלִיל וְאֶת־מִגְרָשֶׁהָ וְאֶת־חַמֹּת דֹּאר וְאֶת־מִגְרָשֶׁהָ וְאֶת־קַרְתָּן וְאֶת־מִגְרָשֶׁהָ עָרִים שָׁלֹֽשׁ׃
33 ಗೇರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಹದಿಮೂರು ಪಟ್ಟಣಗಳೂ ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
כׇּל־עָרֵי הַגֵּרְשֻׁנִּי לְמִשְׁפְּחֹתָם שְׁלֹשׁ־עֶשְׂרֵה עִיר וּמִגְרְשֵׁיהֶֽן׃
34 ಉಳಿದ ಲೇವಿಯರಾದ ಮೆರಾರೀಯ ಕುಟುಂಬಗಳಿಗೆ ಜೆಬುಲೂನನ ಗೋತ್ರದ ಸೊತ್ತಿನಿಂದ ಯೊಕ್ನೆಯಾಮ್, ಕರ್ತಾ,
וּלְמִשְׁפְּחוֹת בְּנֵי־מְרָרִי הַלְוִיִּם הַנּוֹתָרִים מֵאֵת מַטֵּה זְבוּלֻן אֶֽת־יׇקְנְעָם וְאֶת־מִגְרָשֶׁהָ אֶת־קַרְתָּה וְאֶת־מִגְרָשֶֽׁהָ׃
35 ದಿಮ್ನಾ, ನಹಲಾಲ್, ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
אֶת־דִּמְנָה וְאֶת־מִגְרָשֶׁהָ אֶֽת־נַהֲלָל וְאֶת־מִגְרָשֶׁהָ עָרִים אַרְבַּֽע׃
36 ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಯಹಚವನ್ನೂ
37 ಕೆದೇಮೋತನ್ನೂ ಮೇಫಾತನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
38 ಗಾದ್ಯರ ಗೋತ್ರದಲ್ಲಿ, ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನ ರಾಮೋತನ್ನೂ, ಮಹನಯಿಮನ್ನೂ,
וּמִמַּטֵּה־גָד אֶת־עִיר מִקְלַט הָרֹצֵחַ אֶת־רָמֹת בַּגִּלְעָד וְאֶת־מִגְרָשֶׁהָ וְאֶֽת־מַחֲנַיִם וְאֶת־מִגְרָשֶֽׁהָ׃
39 ಹೆಷ್ಬೋನನ್ನೂ ಯಜ್ಜೇರನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
אֶת־חֶשְׁבּוֹן וְאֶת־מִגְרָשֶׁהָ אֶת־יַעְזֵר וְאֶת־מִגְרָשֶׁהָ כׇּל־עָרִים אַרְבַּֽע׃
40 ಹೀಗೆಯೇ ಲೇವಿ ಗೋತ್ರದ ಉಳಿದಂಥ ಮೆರಾರೀಯರ ಕುಟುಂಬಗಳ ಪ್ರಕಾರ ಚೀಟಿಯಿಂದ ದೊರೆತ ಪಟ್ಟಣಗಳು ಹನ್ನೆರಡು.
כׇּל־הֶעָרִים לִבְנֵי מְרָרִי לְמִשְׁפְּחֹתָם הַנּוֹתָרִים מִמִּשְׁפְּחוֹת הַלְוִיִּם וַֽיְהִי גּוֹרָלָם עָרִים שְׁתֵּים עֶשְׂרֵֽה׃
41 ಇಸ್ರಾಯೇಲರ ನಡುವೆ ಲೇವಿಯರಿಗೆ ಒಟ್ಟು ನಾಲ್ವತ್ತೆಂಟು ಪಟ್ಟಣಗಳು ಅವುಗಳ ಗೋಮಾಳ ಸಹಿತವಾಗಿ ದೊರಕಿದವು.
כֹּל עָרֵי הַלְוִיִּם בְּתוֹךְ אֲחֻזַּת בְּנֵֽי־יִשְׂרָאֵל עָרִים אַרְבָּעִים וּשְׁמֹנֶה וּמִגְרְשֵׁיהֶֽן׃
42 ಈ ಪಟ್ಟಣಗಳ ಸುತ್ತಲೂ ಪ್ರತಿ ಒಂದಕ್ಕೂ ಗೋಮಾಳಗಳಿದ್ದವು. ಎಲ್ಲ ಪಟ್ಟಣಗಳಿಗೂ ಹೀಗೆಯೇ ಇದ್ದವು.
תִּֽהְיֶינָה הֶעָרִים הָאֵלֶּה עִיר עִיר וּמִגְרָשֶׁיהָ סְבִיבֹתֶיהָ כֵּן לְכׇל־הֶעָרִים הָאֵֽלֶּה׃
43 ಈ ರೀತಿಯಾಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುವೆನೆಂದು ಆಣೆಯಿಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟರು. ಇಸ್ರಾಯೇಲರು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸವಾಗಿದ್ದರು.
וַיִּתֵּן יְהֹוָה לְיִשְׂרָאֵל אֶת־כׇּל־הָאָרֶץ אֲשֶׁר נִשְׁבַּע לָתֵת לַאֲבוֹתָם וַיִּרָשׁוּהָ וַיֵּשְׁבוּ בָֽהּ׃
44 ಯೆಹೋವ ದೇವರು ಅವರ ತಂದೆಗಳಿಗೆ ಆಣೆಯಿಟ್ಟ ಪ್ರಕಾರವೇ ಅವರ ಸುತ್ತಲೂ ಅವರಿಗೆ ವಿಶ್ರಾಂತಿಕೊಟ್ಟರು. ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ. ಅವರ ಶತ್ರುಗಳನ್ನೆಲ್ಲಾ ಯೆಹೋವ ದೇವರು ಅವರ ಕೈಗಳಿಗೆ ಒಪ್ಪಿಸಿದರು.
וַיָּנַח יְהֹוָה לָהֶם מִסָּבִיב כְּכֹל אֲשֶׁר־נִשְׁבַּע לַאֲבוֹתָם וְלֹא־עָמַד אִישׁ בִּפְנֵיהֶם מִכׇּל־אֹיְבֵיהֶם אֵת כׇּל־אֹיְבֵיהֶם נָתַן יְהֹוָה בְּיָדָֽם׃
45 ಯೆಹೋವ ದೇವರು ಇಸ್ರಾಯೇಲರಿಗೆ ಹೇಳಿದ ಅತಿ ಶ್ರೇಷ್ಠವಾಗ್ದಾನಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ. ಎಲ್ಲಾ ನೆರವೇರಿದವು.
לֹא־נָפַל דָּבָר מִכֹּל הַדָּבָר הַטּוֹב אֲשֶׁר־דִּבֶּר יְהֹוָה אֶל־בֵּית יִשְׂרָאֵל הַכֹּל בָּֽא׃

< ಯೆಹೋಶುವನು 21 >