< ಯೂದನು ಬರೆದ ಪತ್ರಿಕೆ 1 >
1 ಕ್ರಿಸ್ತ ಯೇಸುವಿನ ದಾಸನೂ ಯಾಕೋಬನ ಸಹೋದರನೂ ಆಗಿರುವ ಯೂದನು, ತಂದೆಯಾದ ದೇವರಿಗೆ ಪ್ರಿಯರಾದವವರಿಗೂ ಕ್ರಿಸ್ತ ಯೇಸು ಸುರಕ್ಷತೆಯನ್ನೂ ಅವರ ಕರೆಯುವಿಕೆಯನ್ನೂ ಹೊಂದಿದವರಿಗೆ ಬರೆಯುವ ಪತ್ರ:
Jude, a bondman of Jesus Christ, and brother of James, to the called, sanctified in God the Father, and kept for Jesus Christ:
2 ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
Mercy to you and peace and love be multiplied.
3 ಪ್ರಿಯ ಸ್ನೇಹಿತರೇ, ನಾವು ಹಂಚಿಕೊಳ್ಳುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಜಾಗ್ರತೆಯಿಂದ ಪ್ರಯತ್ನ ಮಾಡುತ್ತಿದ್ದಾಗ, ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲಾದ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.
Beloved, making all diligence to write to you about the common salvation, I had need to write to you exhorting you to earnestly contend for the faith that was once for all delivered to the sanctified.
4 ಏಕೆಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆಪಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡೆಸುವವರೂ ನಮ್ಮ ಒಬ್ಬರೇ ಕರ್ತ ಆಗಿರುವ ದೇವರನ್ನು ಮತ್ತು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಲ್ಲಗಳೆಯುವ ಕೆಲವು ಜನರೂ ರಹಸ್ಯವಾಗಿ ಸಭೆಯೊಳಗೆ ಹೊಕ್ಕಿದ್ದಾರೆ. ಇವರು ದಂಡನೆಗೋಸ್ಕರ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ.
For certain men have sneaked in, those written about formerly for this condemnation, irreverent men, perverting the grace of our God into licentiousness, and denying our only Master God, and our Lord Jesus Christ.
5 ಇದನ್ನು ನೀವು ಈಗಾಗಲೇ ಒಂದು ಸಾರಿ ತಿಳಿದವರಾಗಿದ್ದೀರಿ. ಆದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವುದೆಂದರೆ: ಕರ್ತದೇವರು ತಮ್ಮ ಪ್ರಜೆಯನ್ನು ಈಜಿಪ್ಟ್ ದೇಶದೊಳಗಿಂದ ರಕ್ಷಿಸಿದರೂ ತರುವಾಯ ಅವರೊಳಗೆ ನಂಬದೆ ಹೋದವರನ್ನು ಸಂಹಾರ ಮಾಡಿದರು.
Now I want to remind you, ye having known this once, that the Lord, having saved a people out of the land of Egypt, afterward destroyed those who did not believe.
6 ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ಅವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿಟ್ಟಿದ್ದಾರೆ. (aïdios )
And the agents who did not keep their own principality, but left their own habitation, he has kept reserved in eternal bonds under darkness for the judgment of the great day. (aïdios )
7 ಸೊದೋಮ ಗೊಮೋರದವರೂ ಹಾಗೆಯೇ ಅವುಗಳ ಸುತ್ತಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಅನೈತಿಕತೆಗೆ ಒಪ್ಪಿಸಿಕೊಟ್ಟರು. ಅವರು ಸ್ವಭಾವಕ್ಕೆ ವಿರುದ್ಧ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲಾಗಿದ್ದಾರೆ. (aiōnios )
As Sodom and Gomorrah, and the cities around them, the same kind of way with these who indulged in fornication, and who went rear of queer flesh, are set forth an example, undergoing the punishment of eternal fire. (aiōnios )
8 ಹಾಗೆಯೇ ಈ ದುಃಸ್ವಪ್ನದವರೂ ಶರೀರವನ್ನು ಮಲಿನಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆಮಾಡುವವರೂ ದೇವದೂತರುಗಳನ್ನು ದೂಷಿಸುವವರೂ ಆಗಿದ್ದಾರೆ.
Nevertheless in the same way also these men who dream, indeed defile flesh, and reject lordship, and speak evil of dignities.
9 ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು, ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ, ಅವನು ಸೈತಾನನನ್ನು ದೂಷಿಸುವುದಕ್ಕೆ ಧೈರ್ಯಗೊಳ್ಳದೆ, “ಕರ್ತದೇವರು ನಿನ್ನನ್ನು ಗದರಿಸಲಿ!” ಎಂದನು.
But Michael the arch-agent, when he disputed with the devil, contending about the body of Moses, dared not bring a railing judgment, but said, May the Lord rebuke thee.
10 ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ. ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
But these men indeed revile whatever they have not seen. But whatever they understand naturally, as the irrational beasts, in these things they are corrupted.
11 ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವುದಕ್ಕಾಗಿ ಬಿಳಾಮನ ದೋಷವನ್ನು ಮಾಡುವುದಕ್ಕೆ ದುರಾಶೆಯಿಂದ ಓಡುವವರಾಗಿದ್ದಾರೆ. ಅವರು ಕೋರಹನಂತೆ ಎದುರು ಮಾತನಾಡಿ ನಾಶವಾಗುವವರಾಗಿದ್ದಾರೆ. ಆದ್ದರಿಂದ ಅವರ ಗತಿ ಏನೆಂದು ಹೇಳಲಿ!
Woe to them! Because they went in the way of Cain, and rushed to the error of Balaam's reward, and perished in the rebellion of Korah.
12 ಕಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು, ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಚದುರಿ ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತು, ಹಣ್ಣು ಬಿಡದೆ ಒಣಗಿ ಹೋಗಿ ಬೇರುಸಹಿತ ಕಿತ್ತು ಬಿದ್ದ ಮರಗಳೂ
These are reefs in your love-feasts, feasting together, fearlessly tending to themselves, waterless clouds carried along by winds, autumn trees without fruit, who died twice having being uprooted,
13 ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲಕ್ಕೆ ಇಡಲಾಗಿದೆ. (aiōn )
wild waves of the sea foaming out their own shame, wandering stars for whom the gloom of darkness has been reserved into an age. (aiōn )
14 ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ, “ಇಗೋ, ಕರ್ತದೇವರು ತಮ್ಮ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು
And Enoch also, the seventh from Adam, prophesied about these men, saying, Behold, the Lord came with his holy myriads,
15 ಎಲ್ಲರಿಗೆ ನ್ಯಾಯತೀರಿಸುವುದಕ್ಕೆ ಬರುವರು. ಮಾತ್ರವಲ್ಲದೆ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರೋಧವಾಗಿ ಆಡಿದ ಎಲ್ಲಾ ದೂಷಣೆಗಳ ವಿಷಯವಾಗಿ ಅವರನ್ನು ಖಂಡಿಸಲು ಬರುವರು,” ಎಂಬುದಾಗಿ ಪ್ರವಾದಿಸಿದನು.
to execute judgment against all, and to convict all the irreverent of them about all the works of their own irreverence that they have done irreverently, and about all the harsh things that irreverent sinners spoke against him.
16 ಇವರು ಗೊಣಗುಟ್ಟುವವರೂ ದೂರುವವರೂ ತಮ್ಮ ದುರಾಶೆಗಳನ್ನು ಅನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಉದುರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
These are grumblers, fault-finders, going according to their lusts, and their mouth speaks overblown things, marveling personages for the sake of advantage.
17 ಪ್ರಿಯ ಸ್ನೇಹಿತರೇ, ನೀವಾದರೋ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.
But ye, beloved, remember the sayings previously spoken by the apostles of our Lord Jesus Christ,
18 “ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರು,” ಎಂದು ಅಪೊಸ್ತಲರು ನಿಮಗೆ ಹೇಳಿದರು.
that they told you that there will be scoffers during the last time, going according to their own desires of irreverences.
19 ಇವರು ನಿಮ್ಮಲ್ಲಿ ಭಿನ್ನಾಭಿಪ್ರಾಯವನ್ನು ಉಂಟುಮಾಡುವವರೂ ಪ್ರಾಪಂಚಿಕ ಮನುಷ್ಯರೂ ಪವಿತ್ರಾತ್ಮ ದೇವರಿಲ್ಲದವರೂ ಆಗಿದ್ದಾರೆ.
These are those who make divisions, world-soul men, not having Spirit.
20 ಪ್ರಿಯರೇ, ನೀವಾದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯಲ್ಲಿ ನಿಮ್ಮನ್ನು ನಿರ್ಮಿಸಿಕೊಂಡವರಾಗಿ ಪರಿಶುದ್ಧಾತ್ಮ ದೇವರಲ್ಲಿ ಪ್ರಾರ್ಥಿಸಿರಿ.
But ye beloved, building up yourselves in your most holy faith, praying in the Holy Spirit,
21 ನಿತ್ಯಜೀವಕ್ಕಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕರುಣೆಗೋಸ್ಕರ ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ. (aiōnios )
keep yourselves in the love of God, awaiting the mercy of our Lord Jesus Christ for eternal life. (aiōnios )
22 ಸಂಶಯಪಡುವ ಕೆಲವರಿಗೆ ಕನಿಕರವನ್ನು ತೋರಿಸಿರಿ.
And on some be ye merciful-being discerning.
23 ಬೇರೆಯವರನ್ನು ಬೆಂಕಿಯಿಂದ ಎಳೆದು ರಕ್ಷಿಸಿರಿ. ಭಯದಿಂದ ಕರುಣೆ ತೋರಿಸಿರಿ. ಪಾಪ ಕೃತ್ಯಗಳಿಂದ ಮೈಲಿಗೆಯಾದ ಅವರ ಜೀವನವನ್ನು ಸಹ ಹಗೆ ಮಾಡಿರಿ.
And in fear save some, snatching them out of the fire, hating even the garment that was stained by the flesh.
24 ಎಡವಿಬೀಳದಂತೆ ನಿಮ್ಮನ್ನು ಕಾಪಾಡುವುದಕ್ಕೂ ತಮ್ಮ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ಅತ್ಯಂತ ಹರ್ಷದೊಡನೆ ನಿರ್ದೋಷಿಗಳನ್ನಾಗಿ ನಿಲ್ಲಿಸುವುದಕ್ಕೂ ಶಕ್ತರಾಗಿರುವ
Now to him who is able to keep them non-stumbling, and to present before his glory, unblemished in gladness,
25 ನಮ್ಮ ರಕ್ಷಕರಾದ ಒಬ್ಬರೇ ದೇವರಿಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಬಲವು, ಅಧಿಕಾರಗಳು ಎಂದೂ ಇದ್ದಂತೆ ಈಗಲೂ ಯಾವಾಗಲೂ ಇರಲಿ. ಆಮೆನ್. (aiōn )
to the only wise God our Savior, is glory, majesty, dominion and power, both now and into all the ages. Truly. (aiōn )