< ನ್ಯಾಯಸ್ಥಾಪಕರು 10 >

1 ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲರನ್ನು ರಕ್ಷಿಸುವುದಕ್ಕೆ ಎದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸಮಾಡಿದನು.
阿彼默肋客之後,有依撒加爾人多多的孫子,普阿的兒子托拉起來整救以色列。他住在厄弗辣因山地的沙米爾,
2 ಇಸ್ರಾಯೇಲಿಗೆ ಇಪ್ಪತ್ಮೂರು ವರುಷ ನ್ಯಾಯ ತೀರಿಸಿದ ತರುವಾಯ, ಅವನು ಮರಣಹೊಂದಿ ಶಾಮೀರಲ್ಲಿ ಸಮಾಧಿಯಾದನು.
做以色列民長有二十三年之久,死後葬在紗米爾。雅依爾民長
3 ಅವನ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಾಯೇಲರನ್ನು ಇಪ್ಪತ್ತೆರಡು ವರುಷ ನ್ಯಾಯತೀರಿಸಿದನು.
在他以後,有基肋阿得人雅依爾興起,作以色列民長二十二年之久。
4 ಅವನಿಗೆ ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುವ ಮೂವತ್ತು ಮಂದಿ ಪುತ್ರರು ಇದ್ದರು. ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳು ಅವರ ಅಧಿಕಾರದಲ್ಲಿದ್ದವು. ಅವುಗಳಿಗೆ ಈ ದಿನದವರೆಗೂ ಹವೋತ್ ಯಾಯೀರ್ ಎಂಬ ಹೆಸರಿದೆ.
他有三十個兒子,騎著三十四驢駒;他們有三十座城,這些城稱作哈沃特雅依爾,直到今日,都在基肋阿得地。
5 ಯಾಯೀರನು ಮರಣಹೊಂದಿ, ಕಾಮೋನಿನಲ್ಲಿ ಸಮಾಧಿಯಾದನು.
雅依爾死後埋葬在卡孟。以民犯罪受罰
6 ಇಸ್ರಾಯೇಲರು ಪುನಃ ಯೆಹೋವ ದೇವರ ಮುಂದೆ ಕೆಟ್ಟತನವನ್ನು ಮಾಡಿ, ಬಾಳನನ್ನೂ, ಅಷ್ಟೋರೆತನ್ನೂ, ಅರಾಮ್ ದೇಶದ ದೇವರುಗಳನ್ನೂ, ಸೀದೋನಿನ ದೇವರುಗಳನ್ನೂ, ಮೋವಾಬಿನ ದೇವರುಗಳನ್ನೂ, ಅಮ್ಮೋನಿಯರ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸಿದರು.
那時以色列子民又行了上主視為惡的事,事奉巴耳和阿市托勒特眾神,以及阿蘭的神,漆冬的神,摩阿布的神,阿孟子民的神,培肋舍特人的神;他們背棄上主,不事奉他。
7 ಅವರು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ಯೆಹೋವ ದೇವರು ಇಸ್ರಾಯೇಲ್ಯರ ಮೇಲೆ ಕೋಪವುಳ್ಳವರಾಗಿ ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಮಾರಿಬಿಟ್ಟರು.
上主向以色列發怒,把他們交在培肋舍特人和阿孟子民手中。
8 ಇವರು ಆ ವರ್ಷ ಮೊದಲುಗೊಂಡು ಹದಿನೆಂಟು ವರ್ಷ ಯೊರ್ದನಿಗೆ ಆಚೆ ಗಿಲ್ಯಾದಿನಲ್ಲಿ ಅಮೋರಿಯರ ದೇಶದಲ್ಲಿರುವ ಇಸ್ರಾಯೇಲರನ್ನೆಲ್ಲಾ ಬಾಧಿಸಿ ಕುಂದಿಸಿದರು.
從那一年起,他們迫害壓制以色列子民,即所有住在約但河對岸,在阿摩黎人境內基肋阿得地方的以色列子民,一連十八年。
9 ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದ ಹಾಗೂ ಬೆನ್ಯಾಮೀನರಿಗೆ ವಿರೋಧವಾಗಿಯೂ, ಎಫ್ರಾಯೀಮರ ಮನೆಗೆ ವಿರೋಧವಾಗಿಯೂ ಯುದ್ಧಮಾಡುವುದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹು ಸಂಕಟವಾಯಿತು.
阿孟子民也過約但河來攻擊猷大、本雅明和厄弗辣因家族;因此以色列人很是困苦。
10 ಆಗ ಇಸ್ರಾಯೇಲರು ಯೆಹೋವ ದೇವರಿಗೆ ಕೂಗಿ, “ನಮ್ಮ ದೇವರನ್ನು ಬಿಟ್ಟು, ಬಾಳನನ್ನು ಸೇವಿಸಿದ್ದರಿಂದ, ನಾವು ನಿಮಗೆ ವಿರೋಧವಾಗಿ ಪಾಪಮಾಡಿದೆವು,” ಎಂದರು.
以色列子民遂向上主呼籲說:「我們得罪了你,因為我們背棄了我們的天主,事奉了巴耳諸神! 」
11 ಯೆಹೋವ ದೇವರು ಇಸ್ರಾಯೇಲರಿಗೆ, “ನಾನು ನಿಮ್ಮನ್ನು ಈಜಿಪ್ಟ್, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ,
上主對以色列子民說:「當埃及人、阿摩黎人、阿孟子民、培肋舍特人、
12 ಸೀದೋನ್ಯ, ಅಮಾಲೇಕ್ಯ, ಮಾವೋನ್ಯ ಈ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವುಗಳಿಂದ ನಿಮ್ಮನ್ನು ತಪ್ಪಿಸಿಬಿಡಲಿಲ್ಲವೋ?
漆冬人、阿瑪肋人、米德楊人難為你們的時後,你們向我哀號,我豈沒有從他們手中拯救了你們﹖
13 ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸುತ್ತಾ ಬಂದಿರಿ; ಆದ್ದರಿಂದ ಇನ್ನು ನಾನು ನಿಮ್ಮನ್ನು ರಕ್ಷಿಸುವುದಿಲ್ಲ.
但是你們背棄了我,事奉了別的神,因此我不再拯救你們,
14 ನೀವು ಹೋಗಿ ನಿಮಗೆ ನೀವೇ ಆಯ್ದುಕೊಂಡ ದೇವರುಗಳಿಗೆ ಕೂಗಿರಿ, ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ,” ಎಂದರು.
去呼籲你們所選擇的神罷! 讓他們在你們遭難時來拯救你們! 」
15 ಇಸ್ರಾಯೇಲರು ಯೆಹೋವ ದೇವರಿಗೆ, “ನಾವು ಪಾಪಮಾಡಿದೆವು. ನೀವು ನಿಮಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ನಮಗೆ ಮಾಡಿರಿ. ಆದರೆ ಈ ಹೊತ್ತು ನಮ್ಮನ್ನು ರಕ್ಷಿಸಿರಿ,” ಎಂದು ಬೇಡಿಕೊಂಡರು.
以色列子民對上主說:「我們犯了罪,你任意對待我們,只求你今日援救我們! 」
16 ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು, ಯೆಹೋವ ದೇವರನ್ನು ಸೇವಿಸಿದರು. ಆಗ ಯೆಹೋವ ದೇವರು ಇಸ್ರಾಯೇಲಿನ ಕಷ್ಟಕ್ಕೋಸ್ಕರ ಮನಸ್ಸಿನಲ್ಲಿ ಬಹಳ ನೊಂದುಕೊಂಡರು.
以色列子民遂從他們中間除去外邦的神,而事奉上主;上主再不能容忍以色列受苦。
17 ಅಮ್ಮೋನಿಯರು ಏಕವಾಗಿ ಕೂಡಿಕೊಂಡು, ಗಿಲ್ಯಾದಿನಲ್ಲಿ ಪಾಳೆಯಮಾಡಿಕೊಂಡರು. ಆದರೆ ಇಸ್ರಾಯೇಲರು ಏಕವಾಗಿ ಕೂಡಿ, ಮಿಚ್ಪೆಯಲ್ಲಿ ಪಾಳೆಯಮಾಡಿಕೊಂಡರು.
那時阿孟子民集合在基肋阿得紮營,以色列子民也集合在米茲帕安營。
18 ಆಗ ಗಿಲ್ಯಾದಿನ ಜನರೂ, ಪ್ರಧಾನರೂ ಒಬ್ಬರಿಗೊಬ್ಬರು, “ಯಾವನು ಅಮ್ಮೋನಿಯರ ಮೇಲೆ ಯುದ್ಧಮಾಡಲಾರಂಭಿಸುವನೋ, ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ತಲೆಯಾಗಿರುವನು,” ಎಂದು ಮಾತನಾಡಿಕೊಂಡರು.
基肋阿得人民的首領彼此說:「誰開始攻打阿孟子民,誰就作全基肋阿得居民的首領。」

< ನ್ಯಾಯಸ್ಥಾಪಕರು 10 >