< ನ್ಯಾಯಸ್ಥಾಪಕರು 11 >
1 ಗಿಲ್ಯಾದ್ಯನಾದ ಯೆಫ್ತಾಹನು ಬಲಿಷ್ಠನಾದ ಪರಾಕ್ರಮಶಾಲಿಯಾಗಿದ್ದನು. ಅವನು ಒಬ್ಬ ವೇಶ್ಯೆಯಲ್ಲಿ ಹುಟ್ಟಿದ ಗಿಲ್ಯಾದನ ಮಗನು.
А Јефтај од Галада беше храбар јунак, али син једне курве, с којом Галад роди Јефтаја.
2 ಇದಲ್ಲದೆ ಗಿಲ್ಯಾದನ ಹೆಂಡತಿ ಅವನಿಗೆ ಪುತ್ರರನ್ನು ಪಡೆದಳು. ಅವನ ಹೆಂಡತಿಯ ಮಕ್ಕಳು ದೊಡ್ಡವರಾದಾಗ ಅವರು ಯೆಫ್ತಾಹನಿಗೆ, “ನೀನು ನಮ್ಮ ತಂದೆಯ ಮನೆಯ ಬಾಧ್ಯಸ್ಥನಲ್ಲ. ಏಕೆಂದರೆ ನೀನು ಪರಸ್ತ್ರೀಯ ಮಗನು,” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
Али Галаду и жена његова роди синове, па кад дорастоше синови те жене, отераше Јефтаја рекавши му: Нећеш имати наследство у дому оца нашег, јер си син друге жене.
3 ಆಗ ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ, ಟೋಬ್ ದೇಶದಲ್ಲಿ ವಾಸವಾಗಿದ್ದನು. ಆ ಸ್ಥಳದ ಪುಂಡಪೋಕರಿಗಳು ಯೆಫ್ತಾಹನ ಬಳಿಗೆ ಕೂಡಿಕೊಂಡು ಅವನನ್ನು ಹಿಂಬಾಲಿಸುತ್ತಿದ್ದರು.
Зато побеже Јефтај од браће своје, и настани се у земљи Тову; и стекоше се к њему људи празнови, и иђаху с њим.
4 ಕೆಲವು ದಿವಸಗಳಾದ ಮೇಲೆ ಅಮ್ಮೋನಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಿದರು.
А после неког времена завојштише синови Амонови на Израиља;
5 ಆದರೆ ಅಮ್ಮೋನಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡುವಾಗ, ಗಿಲ್ಯಾದಿನ ಹಿರಿಯರು ಯೆಫ್ತಾಹನನ್ನು ಟೋಬ್ ದೇಶದಿಂದ ಕರೆದುಕೊಂಡು ಬರಲು ಹೋಗಿ,
И кад завојштише синови Амонови на Израиља, отидоше старешине галадске да доведу Јефтаја из земље Това.
6 ಯೆಫ್ತಾಹನಿಗೆ, “ನಾವು ಅಮ್ಮೋನಿಯರ ಸಂಗಡ ಯುದ್ಧಮಾಡುವಂತೆ, ನೀನು ಬಂದು ನಮ್ಮ ಸೈನ್ಯಾಧಿಪತಿಯಾಗಿರು,” ಎಂದರು.
И рекоше Јефтају: Ходи и буди нам војвода, да војујемо са синовима Амоновим.
7 ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ, “ನೀವಲ್ಲವೇ ನನ್ನನ್ನು ಹಗೆಮಾಡಿ, ನನ್ನ ತಂದೆಯ ಮನೆಯಿಂದ ಹೊರಡಿಸಿದವರು? ಈಗ ನಿಮಗೆ ಇಕ್ಕಟ್ಟು ಬಂದಿರುವಾಗ ನನ್ನ ಬಳಿಗೆ ಏಕೆ ಬಂದಿರಿ?” ಎಂದನು.
А Јефтај рече старешинама галадским: Не мрзите ли ви на ме, и не истерасте ли ме из дома оца мог? Што сте дакле дошли к мени сада кад сте у невољи?
8 ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ನೀನು ನಮ್ಮೊಂದಿಗೆ ಬಂದು ಅಮ್ಮೋನ್ಯರಿಗೆ ವಿರೋಧವಾಗಿ ಯುದ್ಧಮಾಡಿ, ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ, ಈಗ ನಿನ್ನ ಬಳಿಗೆ ತಿರುಗಿ ಬಂದೆವು,” ಎಂದರು.
А старешине галадске рекоше Јефтају: Зато смо сада дошли опет к теби да пођеш с нама и да војујеш са синовима Амоновим и да нам будеш поглавар свима који живимо у Галаду.
9 ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ, “ಅಮ್ಮೋನಿಯರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ನೀವು ತಿರುಗಿ ನನ್ನನ್ನು ಮನೆಗೆ ಕರೆತಂದರೆ ಮತ್ತು ಯೆಹೋವ ದೇವರು ಅವರನ್ನು ನನ್ನ ಮುಂದೆ ಒಪ್ಪಿಸಿಕೊಟ್ಟರೆ, ನಾನು ನಿಮಗೆ ತಲೆಯಾಗಿರುವೆನೋ?” ಎಂದನು.
А Јефтај рече старешинама галадским: Кад хоћете да ме одведете натраг да војујем са синовима Амоновим, ако ми их да Господ, хоћу ли вам бити поглавар?
10 ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ನಾವು ಈ ನಿನ್ನ ಮಾತಿನ ಹಾಗೆ ಮಾಡದೆ ಹೋದರೆ, ಯೆಹೋವ ದೇವರು ನಮ್ಮ ಮತ್ತು ನಿನ್ನ ಮಧ್ಯದಲ್ಲಿ ಸಾಕ್ಷಿಯಾಗಿರಲಿ,” ಎಂದರು.
А старешине галадске рекоше Јефтају: Господ нека буде сведок међу нама, ако не учинимо како си казао.
11 ಹಾಗೆಯೇ ಯೆಫ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನನ್ನಾಗಿಯೂ, ಸೈನ್ಯಾಧಿಪತಿಯಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಹೇಳಿದನು.
Тада отиде Јефтај са старешинама галадским, и народ га постави поглаварем и војводом над собом: и Јефтај изговори пред Господом у Миспи све речи које беше рекао.
12 ಯೆಫ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನೀನು ನನಗೆ ವಿರೋಧವಾಗಿ ನನ್ನ ಸಂಗಡ ಯುದ್ಧಮಾಡುವುದಕ್ಕೆ ನನ್ನ ದೇಶದಲ್ಲಿ ಬರುವ ಕಾರಣವೇನು?” ಎಂದು ಹೇಳಿ ಕಳುಹಿಸಿದನು.
Потом посла Јефтај посланике к цару синова Амонових, и поручи: Шта имаш ти са мном, те си допао к мени да ратујеш по мојој земљи?
13 ಅಮ್ಮೋನಿಯ ಅರಸನು ಯೆಫ್ತಾಹನ ದೂತರಿಗೆ, “ಇಸ್ರಾಯೇಲರು ಈಜಿಪ್ಟಿನಿಂದ ಬರುವಾಗ, ಅರ್ನೋನಿನಿಂದ ಯಬ್ಬೋಕಿನವರೆಗೂ ಮತ್ತು ಯೊರ್ದನಿನವರೆಗೂ ಇರುವ ನನ್ನ ದೇಶವನ್ನು ತೆಗೆದುಕೊಂಡರು. ಆದ್ದರಿಂದ ಈಗ ಅದನ್ನು ನನಗೆ ಸಮಾಧಾನವಾಗಿ ತಿರುಗಿಕೊಡು,” ಎಂದನು.
А цар синова Амонових рече посланицима Јефтајевим: Што је узео Израиљ моју земљу кад дође из Мисира, од Ариона до Јавока и до Јордана; сада дакле врати ми је с миром.
14 ಆದರೆ ಯೆಫ್ತಾಹನು ತಿರುಗಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ,
Али Јефтај посла опет посланике к цару синова Амонових.
15 ಅವರಿಗೆ ಯೆಫ್ತಾಹನು ಹೇಳುವ ಮಾತೇನೆಂದರೆ: “ಇದೇ ಇಸ್ರಾಯೇಲರು ಮೋವಾಬಿನ ದೇಶವನ್ನಾದರೂ, ಅಮ್ಮೋನಿಯರ ದೇಶವನ್ನಾದರೂ ತೆಗೆದುಕೊಂಡಿಲ್ಲ.
И поручи му: Овако вели Јефтај: Није узео Израиљ земље моавске ни земље синова Амонових.
16 ಆದರೆ ಇಸ್ರಾಯೇಲು ಈಜಿಪ್ಟಿನಿಂದ ಬರುವಾಗ, ಮರುಭೂಮಿಯಲ್ಲಿ ಕೆಂಪು ಸಮುದ್ರದವರೆಗೆ ನಡೆದು ಕಾದೇಶಿಗೆ ಬಂದು,
Него изашавши из Мисира пређе Израиљ преко пустиње до Црвеног Мора и дође до Кадиса.
17 ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆ ಆಗಬೇಕು,’ ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದ್ದರಿಂದ ಇಸ್ರಾಯೇಲರು ಕಾದೇಶಿನಲ್ಲಿ ವಾಸಮಾಡಿದರು.
И посла Израиљ посланике к цару едомском и рече: Пусти да прођем кроз твоју земљу. Али не послуша цар едомски. Посла такође к цару моавском: , али ни он не хте. И тако стаја Израиљ у Кадису.
18 “ಮರುಭೂಮಿಯಲ್ಲಿ ನಡೆದು, ಎದೋಮ್ ದೇಶವನ್ನೂ, ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ, ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು, ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ, ಮೋವಾಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳಿದುಕೊಂಡರು.
Потом идући преко пустиње обиђе земљу едомску и земљу моавску, и дошавши с Истока земљи моавској стаде у логор с оне стране Ариона; али не пређоше преко међе моавске, јер Арион беше међа моавска.
19 “ಇಸ್ರಾಯೇಲರು ಹೆಷ್ಬೋನನ್ನು ಆಳಿದ ಅಮೋರಿಯರ ಅರಸನಾದಂಥ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ, ‘ನಮ್ಮ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವುದಕ್ಕೆ ಅಪ್ಪಣೆ ಆಗಬೇಕು,’ ಎಂದರು.
Него посла Израиљ посланике к Сиону цару аморејском, цару есевонском, и рече му Израиљ; допусти нам да прођемо кроз твоју земљу до свог места.
20 ಆದರೆ ಸೀಹೋನನು ತನ್ನ ಮೇರೆಯನ್ನು ದಾಟುವುದಕ್ಕೆ ಇಸ್ರಾಯೇಲರನ್ನು ನಂಬದೆ, ತನ್ನ ಜನರನ್ನೆಲ್ಲಾ ಕೂಡಿಸಿ, ಯಹಚಿನಲ್ಲಿ ದಂಡಿಳಿದು, ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಮಾಡಿದನು.
Али Сион не верова Израиљу да га пусти да пређе преко међе његове, него Сион скупи сав свој народ и стадоше у логор у Јаси, и поби се са Израиљем.
21 “ಆಗ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಸೀಹೋನನನ್ನೂ, ಅವನ ಸಕಲ ಜನರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿಕೊಟ್ಟರು. ಇಸ್ರಾಯೇಲರು ಸೀಹೋನನನ್ನೂ, ಅವನ ಸಕಲ ಜನರನ್ನೂ ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇಲರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು.
А Господ Бог Израиљев предаде Сиона и сав народ његов у руке синовима Израиљевим, те их побише; и зароби Израиљ сву земљу Амореја, који живљаху у оној земљи.
22 ಅರ್ನೋನಿನಿಂದ ಯಬ್ಬೋಕಿನವರೆಗೂ, ಮರುಭೂಮಿಯಿಂದ ಯೊರ್ದನಿನವರೆಗೂ ಇರುವ ಅಮೋರಿಯರ ಮೇರೆಯಾದ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು.
Задобише сву земљу аморејску од Ариона до Јавока, и од пустиње до Јордана.
23 “ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಅಮೋರಿಯರನ್ನು ತಮ್ಮ ಜನರಾದ ಇಸ್ರಾಯೇಲಿನ ಮುಂದೆ ಹೊರಡಿಸಿರುವಾಗ, ನೀನು ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿಯೋ?
Тако је дакле Господ Бог Израиљев отерао Амореје испред народа свог Израиља, па ти ли хоћеш да је земља њихова твоја?
24 ಆದರೆ ನಿನ್ನ ದೇವರಾದ ಕೆಮೋಷನು ನಿನ್ನ ಮುಂದೆ ಹೊರಡಿಸುವವರ ದೇಶವನ್ನು ನೀನು ಸ್ವಾಧೀನ ಮಾಡಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವ ದೇವರು ನಮ್ಮ ಮುಂದೆ ಹೊರಡಿಸುವವರ ದೇಶವನ್ನೆಲ್ಲಾ ನಾವು ಸ್ವಾಧೀನ ಮಾಡಿಕೊಳ್ಳುವೆವು.
Није ли твоје оно што ти да да је твоје Хемос бог твој? Тако кога год Господ Бог наш отера испред нас, оног је земља наша.
25 ಈಗ ಚಿಪ್ಪೋರನ ಮಗ ಮೋವಾಬಿನ ಅರಸ ಬಾಲಾಕನಿಗಿಂತ ಯಾವುದರಲ್ಲಾದರೂ ನೀನು ಉತ್ತಮನೋ? ಅವನು ಇಸ್ರಾಯೇಲಿಗೆ ವಿರೋಧವಾಗಿ ಎಂದಾದರೂ ವಿವಾದ ಮಾಡಿದನೋ ಅಥವಾ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನೋ?
Или си ти по чем бољи од Валака сина Сефоровог цара моавског? Је ли се он кад свађао с Израиљем? Је ли кад војевао с нама?
26 ಇಸ್ರಾಯೇಲು ಹೆಷ್ಬೋನಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ; ಅರೋಯೇರಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ; ಅರ್ನೋನಿನ ತೀರವಾದ ಎಲ್ಲಾ ಪಟ್ಟಣಗಳಲ್ಲಿಯೂ, ಮುನ್ನೂರು ವರ್ಷಗಳಿಂದ ವಾಸಿಸಿರುವಾಗ, ಇಷ್ಟರವರೆಗೆ ನೀವು ಅದನ್ನು ಬಿಡಿಸದೆ ಹೋದದ್ದೇನು?
Израиљ живи у Есевону и у селима његовим и у Ароиру и селима његовим и по свим градовима дуж Арнона три стотине година; зашто не отесте за толико времена.
27 ಆದ್ದರಿಂದ ನಾನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ. ನೀನೇ ನನ್ನ ಮೇಲೆ ಯುದ್ಧ ಮಾಡುವುದರಿಂದ ನನಗೆ ಕೆಟ್ಟದ್ದನ್ನು ಮಾಡುತ್ತೀಯೆ. ನ್ಯಾಯಾಧಿಪತಿಯಾದ ಯೆಹೋವ ದೇವರು ಈ ಹೊತ್ತು ಇಸ್ರಾಯೇಲರಿಗೂ, ಅಮ್ಮೋನಿಯರಿಗೂ ಮಧ್ಯದಲ್ಲಿ ನ್ಯಾಯತೀರಿಸಲಿ,” ಎಂದನು.
И тако нисам ја теби скривио, него ти мени чиниш зло ратујући на ме. Господ судија нек суди данас између синова Израиљевих и синова Амонових.
28 ಹೇಗಿದ್ದರೂ ಅಮ್ಮೋನಿಯರ ಅರಸನು ಯೆಫ್ತಾಹನು ತನಗೆ ಹೇಳಿ ಕಳುಹಿಸಿದ ಮಾತನ್ನು ಕೇಳದೆ ಹೋದನು.
Али цар синова Амонових не послуша речи које му поручи Јефтај.
29 ಆಗ ಯೆಹೋವ ದೇವರ ಆತ್ಮ ಯೆಫ್ತಾಹನ ಮೇಲೆ ಬಂತು. ಅವನು ಗಿಲ್ಯಾದ್, ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ, ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರೆದುರಿಗೆ ಹಾದುಹೋದನು.
И сиђе на Јефтаја дух Господњи, те прође кроз Галад и кроз Манасију, прође и Миспу галадску, и од Миспе галадске дође о синова Амонових.
30 ಯೆಫ್ತಾಹನು ಯೆಹೋವ ದೇವರಿಗೆ ಒಂದು ಪ್ರಮಾಣವನ್ನು ಮಾಡಿ, “ನೀನು ಅಮ್ಮೋನಿಯರನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ,
И заветова Јефтај завет Господу и рече: Ако ми даш синове Амонове у руке,
31 ನಾನು ಅಮ್ಮೋನಿಯರನ್ನು ಜಯಿಸಿ ಹಿಂತಿರುಗಿ ಬರುವಾಗ, ನನ್ನ ಮನೆಯ ಬಾಗಿಲಿನಿಂದ ನನ್ನನ್ನು ಎದುರುಗೊಳ್ಳಲು ಮೊದಲು ಬರುವಂಥದ್ದು ಯೆಹೋವ ದೇವರದಾಗಿರುವುದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು,” ಎಂದನು.
Шта год изиђе на врата из куће моје на сусрет мени, кад се вратим здрав од синова Амонових, биће Господње, и принећу на жртву паљеницу.
32 ಹೀಗೆ ಯೆಫ್ತಾಹನು ಅಮ್ಮೋನಿಯರ ಮೇಲೆ ಯುದ್ಧಮಾಡುವುದಕ್ಕೆ ಅವರೆದುರಿಗೆ ಹೊರಟುಹೋದನು. ಯೆಹೋವ ದೇವರು ಅವರನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟರು.
И тако дође Јефтај до синова Амонових да се бије с њима; и Господ му их даде у руке.
33 ಯೆಫ್ತಾಹನು ಅವರನ್ನು ಅರೋಯೇರಿನಿಂದ ಮಿನ್ನೀಥಿನ ದಾರಿಯವರೆಗೆ ಮತ್ತು ಆಬೇಲ್ ಕೆರಾಮೀಮಗೆ ಹೋಗುವವರೆಗೆ ಇರುವ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿದನು. ಹೀಗೆ ದೊಡ್ಡ ಜಯಹೊಂದಿ, ಅಮ್ಮೋನಿಯರು ಇಸ್ರಾಯೇಲರಿಗೆ ಶರಣಾದರು.
И поби их од Ароира па до Минита у двадесет градова и до равнице виноградске у боју врло великом; и синови Амонови бише покорени пред синовима Израиљевим.
34 ಯೆಫ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಹಿಂದಿರುಗಿ ಬರುವಾಗ, ಅವನ ಮಗಳು ದಮ್ಮಡಿಗಳಿಂದಲೂ, ನಾಟ್ಯದಿಂದಲೂ ಅವನನ್ನು ಎದುರುಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು. ಅವಳ ಹೊರತಾಗಿ ಅವನಿಗೆ ಮಗನಾಗಲಿ, ಮಗಳಾಗಲಿ ಇರಲಿಲ್ಲ.
А кад се враћаше Јефтај кући својој у Миспу, гле, кћи његова изиђе му на сусрет с бубњевима и свиралама; она му беше јединица, и осим ње не имаше ни сина ни кћери.
35 ಅವನು ಅವಳನ್ನು ನೋಡಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದೆ. ನನ್ನನ್ನು ತೊಂದರೆ ಪಡಿಸುವವರಲ್ಲಿ ನೀನೂ ಒಬ್ಬಳಾದೆ. ಏಕೆಂದರೆ ನಾನು ಯೆಹೋವ ದೇವರಿಗೆ ನನ್ನ ಬಾಯಿತೆರೆದು, ಪ್ರಮಾಣಮಾಡಿದೆನು, ಹಿಂದೆಗೆಯಲಾರೆನು,” ಎಂದನು.
Па кад је угледа, раздре хаљине своје и рече: Ах кћери моја! Веле ли ме обори! Ти си од оних што ме цвеле; јер сам отворио уста своја ка Господу и не могу порећи.
36 ಅವಳು ಅವನಿಗೆ, “ಅಪ್ಪಾ, ನೀನು ಯೆಹೋವ ದೇವರಿಗೆ ನಿನ್ನ ಬಾಯಿ ತೆರೆದೆಯಲ್ಲ. ಯೆಹೋವ ದೇವರು ಅಮ್ಮೋನಿಯರಾದ ನಿನ್ನ ಶತ್ರುಗಳಿಗೆ ನಿನ್ನಿಂದ ಮುಯ್ಯಿ ತೀರಿಸಿದ್ದರಿಂದ, ಅವರಿಗೆ ನಿನ್ನ ಬಾಯಿಂದ ಹೊರಟ ಮಾತಿನ ಪ್ರಕಾರವೇ ನನಗೆ ಮಾಡು,” ಎಂದಳು.
А она му рече: Оче мој, кад си отворио уста своја ка Господу, учини ми, како је изашло из уста твојих, кад те је Господ осветио од непријатеља твојих, синова Амонових.
37 ಇದಲ್ಲದೆ ಅವಳು ತನ್ನ ತಂದೆಗೆ, “ಈ ಕಾರ್ಯವು ನನಗೆ ಆಗಲಿ. ಆದರೆ ನಾನೂ, ನನ್ನ ಗೆಳತಿಯರೂ ಕೂಡ ನನ್ನ ಕನ್ಯಾವಸ್ಥೆಗಾಗಿ ಬೆಟ್ಟಗಳ ಮೇಲೆ ಹೋಗಿ, ನನ್ನ ಗೆಳತಿಯರ ಸಂಗಡ ಅಳುವುದಕ್ಕೆ ನನಗೆ ಎರಡು ತಿಂಗಳು ಸಮಯವನ್ನು ಕೊಡು,” ಎಂದಳು.
Још рече оцу свом: Учини ми ово: остави ме до два месеца да отидем да се попнем на горе да оплачем своје девојаштво с другама својим.
38 ಆಗ ಅವನು, “ಎರಡು ತಿಂಗಳು ಹೋಗಿ ಬಾ,” ಎಂದು ಹೇಳಿ ಮಗಳನ್ನು ಕಳುಹಿಸಿಬಿಟ್ಟನು. ಅವಳು ತನ್ನ ಗೆಳತಿಯರ ಸಂಗಡ ಹೋಗಿ, ತನ್ನ ಕನ್ಯಾವಸ್ಥೆಗಾಗಿ ಬೆಟ್ಟದಲ್ಲಿ ಅತ್ತು,
А он јој рече: Иди. И пусти је на два месеца, и она отиде с другама својим и оплакива девојаштво своје по горама.
39 ಎರಡು ತಿಂಗಳು ತೀರಿದಾಗ ತನ್ನ ತಂದೆಯ ಬಳಿಗೆ ಬಂದಳು. ಆಗ ಅವನು ಮಾಡಿದ್ದ ತನ್ನ ಪ್ರಮಾಣದ ಪ್ರಕಾರ ಅವಳಿಗೆ ತೀರ್ಪನ್ನು ಈಡೇರಿಸಿದನು. ಅವಳು ಕನ್ಯೆಯಾಗಿಯೇ ಮರಣಹೊಂದಿದಳು.
А кад прођоше два месеца, врати се к оцу свом; и он сврши на њој завет свој који беше заветовао. А она не позна човека. И поста обичај у Израиљу
40 ಹೀಗೆ ವರ್ಷಕ್ಕೆ ನಾಲ್ಕು ದಿವಸ ಇಸ್ರಾಯೇಲಿನ ಪುತ್ರಿಯರು ಹೋಗಿ, ಗಿಲ್ಯಾದ್ಯನಾದ ಯೆಫ್ತಾಹನ ಮಗಳಿಗಾಗಿ ಗೋಳಾಡುವುದು ಇಸ್ರಾಯೇಲಿನಲ್ಲಿ ಪದ್ಧತಿ ಆಯಿತು.
Да од године до године иду кћери Израиљеве да плачу за кћерју Јефтаја од Галада, четири дана у години.