< ನ್ಯಾಯಸ್ಥಾಪಕರು 12 >

1 ಎಫ್ರಾಯೀಮನ ಜನರು ಕೂಡಿಕೊಂಡು ಉತ್ತರದ ಜಪೋನಿಗೆ ಹೋಗಿ, ಯೆಫ್ತಾಹನಿಗೆ, “ನೀನು ಅಮ್ಮೋನಿಯರ ಮೇಲೆ ಯುದ್ಧಮಾಡುವುದಕ್ಕೆ ಹೋದಾಗ, ನಮ್ಮನ್ನು ಏಕೆ ನಿನ್ನ ಸಂಗಡ ಹೋಗಲು ಕರೆಕಳುಹಿಸಲಿಲ್ಲ? ನಾವು ನಿನ್ನ ಮನೆಯನ್ನು ನಿನ್ನನ್ನು ಸಹಿತವಾಗಿ ಬೆಂಕಿಯಿಂದ ಸುಟ್ಟುಬಿಡುತ್ತೇವೆ,” ಎಂದರು.
וַיִּצָּעֵק֙ אִ֣ישׁ אֶפְרַ֔יִם וַֽיַּעֲבֹ֖ר צָפֹ֑ונָה וַיֹּאמְר֨וּ לְיִפְתָּ֜ח מַדּ֣וּעַ ׀ עָבַ֣רְתָּ ׀ לְהִלָּחֵ֣ם בִּבְנֵי־עַמֹּ֗ון וְלָ֙נוּ֙ לֹ֤א קָרָ֙אתָ֙ לָלֶ֣כֶת עִמָּ֔ךְ בֵּיתְךָ֕ נִשְׂרֹ֥ף עָלֶ֖יךָ בָּאֵֽשׁ׃
2 ಯೆಫ್ತಾಹನು ಅವರಿಗೆ, “ನನಗೂ, ನಮ್ಮ ಜನರಿಗೂ ಅಮ್ಮೋನಿಯರ ಸಂಗಡ ದೊಡ್ಡ ವ್ಯಾಜ್ಯವಿರುವಾಗ, ನಾನು ನಿಮ್ಮನ್ನು ಕರೆದೆನು. ಆದರೆ ನೀವು ನನ್ನನ್ನು ಅವರ ಕೈಯಿಂದ ಬಿಡಿಸಿ ರಕ್ಷಿಸಲಿಲ್ಲ.
וַיֹּ֤אמֶר יִפְתָּח֙ אֲלֵיהֶ֔ם אִ֣ישׁ רִ֗יב הָיִ֛יתִי אֲנִ֛י וְעַמִּ֥י וּבְנֵֽי־עַמֹּ֖ון מְאֹ֑ד וָאֶזְעַ֣ק אֶתְכֶ֔ם וְלֹֽא־הֹושַׁעְתֶּ֥ם אֹותִ֖י מִיָּדָֽם׃
3 ನೀವು ನನ್ನನ್ನು ರಕ್ಷಿಸುವುದಿಲ್ಲವೆಂದು ನಾನು ಕಂಡು ನನ್ನ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು, ಅಮ್ಮೋನಿಯರಿಗೆ ವಿರೋಧವಾಗಿ ಹೋದೆನು. ಯೆಹೋವ ದೇವರು ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ನೀವು ನನ್ನ ಸಂಗಡ ಯುದ್ಧಮಾಡುವುದಕ್ಕೆ ಈ ಹೊತ್ತು ನನಗೆ ವಿರೋಧವಾಗಿ ಏಕೆ ಬಂದಿರಿ?” ಎಂದನು.
וָֽאֶרְאֶ֞ה כִּֽי־אֵינְךָ֣ מֹושִׁ֗יעַ וָאָשִׂ֨ימָה נַפְשִׁ֤י בְכַפִּי֙ וָֽאֶעְבְּרָה֙ אֶל־בְּנֵ֣י עַמֹּ֔ון וַיִּתְּנֵ֥ם יְהוָ֖ה בְּיָדִ֑י וְלָמָ֞ה עֲלִיתֶ֥ם אֵלַ֛י הַיֹּ֥ום הַזֶּ֖ה לְהִלָּ֥חֶם בִּֽי׃
4 ಆಗ ಯೆಫ್ತಾಹನು ಗಿಲ್ಯಾದ್ ಜನರೆಲ್ಲರನ್ನು ಕೂಡಿಸಿ, ಎಫ್ರಾಯೀಮ್ಯರ ಸಂಗಡ ಯುದ್ಧಮಾಡಿದನು. ಏಕೆಂದರೆ, “ಎಫ್ರಾಯೀಮ್ಯರನ್ನು ಮನಸ್ಸೆಯವರ ಮಧ್ಯದಲ್ಲಿದ್ದ ಗಿಲ್ಯಾದ್ಯರಾದ ನೀವು ಸ್ವಕುಲವನ್ನು ಬಿಟ್ಟು ತಪ್ಪಿಸಿಕೊಂಡವರಾಗಿದ್ದೀರಿ,” ಎಂದು ಎಫ್ರಾಯೀಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಎಫ್ರಾಯೀಮ್ಯರನ್ನು ಹೊಡೆದರು.
וַיִּקְבֹּ֤ץ יִפְתָּח֙ אֶת־כָּל־אַנְשֵׁ֣י גִלְעָ֔ד וַיִּלָּ֖חֶם אֶת־אֶפְרָ֑יִם וַיַּכּוּ֩ אַנְשֵׁ֨י גִלְעָ֜ד אֶת־אֶפְרַ֗יִם כִּ֤י אָמְרוּ֙ פְּלִיטֵ֤י אֶפְרַ֙יִם֙ אַתֶּ֔ם גִּלְעָ֕ד בְּתֹ֥וךְ אֶפְרַ֖יִם בְּתֹ֥וךְ מְנַשֶּֽׁה׃
5 ಗಿಲ್ಯಾದ್ಯರು ಎಫ್ರಾಯೀಮ್ಯರಿಗೆ ಮುಂದುಗಡೆ ಯೊರ್ದನ್ ನದಿ ರೇವುಗಳನ್ನು ಹಿಡಿದರು. ಆಗ ಏನಾಯಿತೆಂದರೆ, ಎಫ್ರಾಯೀಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು, “ದಾಟುತ್ತೇನೆ,” ಎಂದು ಹೇಳಿದರೆ, ಗಿಲ್ಯಾದ್ಯರು, “ನೀನು ಎಫ್ರಾಯೀಮ್ಯನೋ?” ಎಂದು ಅವನನ್ನು ಕೇಳುತ್ತಿದ್ದರು. ಅವನು, “ಇಲ್ಲ,” ಎಂದರೆ, ಅವನಿಗೆ, “ನೀನು ಷಿಬ್ಬೋಲೆತ್ ಅನ್ನು,” ಎಂದು ಹೇಳುತ್ತಿದ್ದರು.
וַיִּלְכֹּ֥ד גִּלְעָ֛ד אֶֽת־מַעְבְּרֹ֥ות הַיַּרְדֵּ֖ן לְאֶפְרָ֑יִם וְֽ֠הָיָה כִּ֣י יֹאמְר֞וּ פְּלִיטֵ֤י אֶפְרַ֙יִם֙ אֶעֱבֹ֔רָה וַיֹּ֨אמְרוּ לֹ֧ו אַנְשֵֽׁי־גִלְעָ֛ד הַֽאֶפְרָתִ֥י אַ֖תָּה וַיֹּ֥אמֶֽר ׀ לֹֽא׃
6 ಆಗ ಅವನು ಹಾಗೆ ಹೇಳಲಾರದೆ, “ಸಿಬ್ಬೋಲೆತ್,” ಎಂದು ಉಚ್ಛರಿಸುವವನನ್ನು ಹಿಡಿದು ಯೊರ್ದನ್ ನದಿ ರೇವುಗಳ ಬಳಿಯಲ್ಲಿ ಕೊಂದುಹಾಕುತ್ತಿದ್ದರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ನಾಶವಾದರು.
וַיֹּ֣אמְרוּ לֹו֩ אֱמָר־נָ֨א שִׁבֹּ֜לֶת וַיֹּ֣אמֶר סִבֹּ֗לֶת וְלֹ֤א יָכִין֙ לְדַבֵּ֣ר כֵּ֔ן וַיֹּאחֲז֣וּ אֹותֹ֔ו וַיִּשְׁחָט֖וּהוּ אֶל־מַעְבְּרֹ֣ות הַיַּרְדֵּ֑ן וַיִּפֹּ֞ל בָּעֵ֤ת הַהִיא֙ מֵֽאֶפְרַ֔יִם אַרְבָּעִ֥ים וּשְׁנַ֖יִם אָֽלֶף׃
7 ಯೆಫ್ತಾಹನು ಇಸ್ರಾಯೇಲರಿಗೆ ಆರು ವರ್ಷ ನ್ಯಾಯತೀರಿಸಿದನು. ಅನಂತರ ಗಿಲ್ಯಾದ್ಯನಾದ ಯೆಫ್ತಾಹನು ಮರಣಹೊಂದಿದನು. ಅವನ ಶವವನ್ನು ಗಿಲ್ಯಾದ್ ಪಟ್ಟಣಗಳ ಒಂದರಲ್ಲಿ ಸಮಾಧಿಮಾಡಿದರು.
וַיִּשְׁפֹּ֥ט יִפְתָּ֛ח אֶת־יִשְׂרָאֵ֖ל שֵׁ֣שׁ שָׁנִ֑ים וַיָּ֗מָת יִפְתָּח֙ הַגִּלְעָדִ֔י וַיִּקָּבֵ֖ר בְּעָרֵ֥י גִלְעָֽד׃ פ
8 ಅವನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾನನು ಇಸ್ರಾಯೇಲಿಗೆ ನ್ಯಾಯತೀರಿಸಿದನು.
וַיִּשְׁפֹּ֤ט אַֽחֲרָיו֙ אֶת־יִשְׂרָאֵ֔ל אִבְצָ֖ן מִבֵּ֥ית לָֽחֶם׃
9 ಅವನಿಗೆ ಮೂವತ್ತು ಮಂದಿ ಪುತ್ರರು, ಮೂವತ್ತು ಮಂದಿ ಪುತ್ರಿಯರು ಇದ್ದರು. ಪುತ್ರಿಯರನ್ನು ಹೊರಗೆ ಮದುವೆ ಮಾಡಿಕೊಟ್ಟನು; ಹೊರಗಿನಿಂದ ಮೂವತ್ತು ಮಂದಿ ಕನ್ಯೆಯರನ್ನು ತನ್ನ ಪುತ್ರರಿಗೆ ತೆಗೆದುಕೊಂಡನು. ಅವನು ಇಸ್ರಾಯೇಲಿಗೆ ಏಳು ವರ್ಷ ನ್ಯಾಯತೀರಿಸಿದನು.
וַיְהִי־לֹ֞ו שְׁלֹשִׁ֣ים בָּנִ֗ים וּשְׁלֹשִׁ֤ים בָּנֹות֙ שִׁלַּ֣ח הַח֔וּצָה וּשְׁלֹשִׁ֣ים בָּנֹ֔ות הֵבִ֥יא לְבָנָ֖יו מִן־הַח֑וּץ וַיִּשְׁפֹּ֥ט אֶת־יִשְׂרָאֵ֖ל שֶׁ֥בַע שָׁנִֽים׃
10 ನಂತರ ಇಬ್ಚಾನನು ಮರಣಹೊಂದಿ ಬೇತ್ಲೆಹೇಮಿನಲ್ಲಿ ಸಮಾಧಿಯಾದನು.
וַיָּ֣מָת אִבְצָ֔ן וַיִּקָּבֵ֖ר בְּבֵ֥ית לָֽחֶם׃ פ
11 ಅವನ ತರುವಾಯ ಜೆಬುಲೂನಿನವನಾದ ಏಲೋನನು ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಅವನು ಹತ್ತು ವರ್ಷಗಳು ಇಸ್ರಾಯೇಲಿಗೆ ನ್ಯಾಯತೀರಿಸಿದನು.
וַיִּשְׁפֹּ֤ט אֽ͏ַחֲרָיו֙ אֶת־יִשְׂרָאֵ֔ל אֵילֹ֖ון הַזְּבֽוּלֹנִ֑י וַיִּשְׁפֹּ֥ט אֶת־יִשְׂרָאֵ֖ל עֶ֥שֶׂר שָׁנִֽים׃
12 ಜೆಬುಲೂನಿನವನಾದ ಏಲೋನನು ಮರಣಹೊಂದಿ, ಜೆಬುಲೂನ್ ದೇಶವಾದ ಅಯ್ಯಾಲೋನಿನಲ್ಲಿ ಅವನ ಶವವನ್ನು ಸಮಾಧಿಮಾಡಿದರು.
וַיָּ֖מָת אֵלֹ֣ון הַזְּבֽוּלֹנִ֑י וַיִּקָּבֵ֥ר בְּאַיָּלֹ֖ון בְּאֶ֥רֶץ זְבוּלֻֽן׃ פ
13 ಅವನ ತರುವಾಯ ಪಿರಾತೋನ್ಯನಾದ ಹಿಲ್ಲೇಲನ ಮಗನಾದ ಅಬ್ದೋನನು ಇಸ್ರಾಯೇಲಿಗೆ ನ್ಯಾಯತೀರಿಸಿದನು.
וַיִּשְׁפֹּ֥ט אַחֲרָ֖יו אֶת־יִשְׂרָאֵ֑ל עַבְדֹּ֥ון בֶּן־הִלֵּ֖ל הַפִּרְעָתֹונִֽי׃
14 ಅವನಿಗೆ ಎಪ್ಪತ್ತು ಕತ್ತೆಗಳ ಮೇಲೆ ಏರುವ ನಾಲ್ವತ್ತು ಮಂದಿ ಮಕ್ಕಳೂ, ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲಿಗೆ ಎಂಟು ವರ್ಷ ನ್ಯಾಯತೀರಿಸಿದನು.
וַיְהִי־לֹ֞ו אַרְבָּעִ֣ים בָּנִ֗ים וּשְׁלֹשִׁים֙ בְּנֵ֣י בָנִ֔ים רֹכְבִ֖ים עַל־שִׁבְעִ֣ים עֲיָרִ֑ם וַיִּשְׁפֹּ֥ט אֶת־יִשְׂרָאֵ֖ל שְׁמֹנֶ֥ה שָׁנִֽים׃
15 ಪಿರಾತೋನ್ಯನಾದ ಹಿಲ್ಲೇಲನ ಮಗನಾದ ಅಬ್ದೋನನು ಮರಣಹೊಂದಿ, ಎಫ್ರಾಯೀಮ್ ದೇಶದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಅವನ ಶವವನ್ನು ಸಮಾಧಿಮಾಡಿದರು.
וַיָּ֛מָת עַבְדֹּ֥ון בֶּן־הִלֵּ֖ל הַפִּרְעָתֹונִ֑י וַיִּקָּבֵ֤ר בְּפִרְעָתֹון֙ בְּאֶ֣רֶץ אֶפְרַ֔יִם בְּהַ֖ר הָעֲמָלֵקִֽי׃ פ

< ನ್ಯಾಯಸ್ಥಾಪಕರು 12 >