< ನ್ಯಾಯಸ್ಥಾಪಕರು 17 >

1 ಎಫ್ರಾಯೀಮ್ ಬೆಟ್ಟದ ಪ್ರಾಂತದಲ್ಲಿ ಮೀಕ ಎಂಬ ಹೆಸರುಳ್ಳ ಒಬ್ಬ ಮನುಷ್ಯನು ಇದ್ದನು.
וַֽיְהִי־אִישׁ מֵהַר־אֶפְרָיִם וּשְׁמוֹ מִיכָֽיְהוּ׃
2 ಅವನು ತನ್ನ ತಾಯಿಗೆ, “ನಿನ್ನ ಬಳಿಯಿಂದ ಸಾವಿರದ ನೂರು ಬೆಳ್ಳಿ ನಾಣ್ಯಗಳು ಕಳುವಾದಾಗ, ನೀನು ಆ ಹಣವನ್ನು ಕುರಿತು ಶಪಿಸಿದೆಯಲ್ಲಾ? ಇಗೋ, ಆ ನಾಣ್ಯಗಳು ನನ್ನ ಬಳಿಯಲ್ಲಿ ಇವೆ. ನಾನೇ ಅದನ್ನು ತೆಗೆದುಕೊಂಡೆನು,” ಎಂದನು. ಅದಕ್ಕೆ ಅವನ ತಾಯಿ, “ನನ್ನ ಮಗನೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,” ಎಂದಳು.
וַיֹּאמֶר לְאִמּוֹ אֶלֶף וּמֵאָה הַכֶּסֶף אֲשֶׁר לֻֽקַּֽח־לָךְ (ואתי) [וְאַתְּ] אָלִית וְגַם אָמַרְתְּ בְּאׇזְנַי הִנֵּה־הַכֶּסֶף אִתִּי אֲנִי לְקַחְתִּיו וַתֹּאמֶר אִמּוֹ בָּרוּךְ בְּנִי לַיהֹוָֽה׃
3 ಅವನು ಆ ಸಾವಿರದ ನೂರು ಬೆಳ್ಳಿಯ ನಾಣ್ಯಗಳನ್ನು ತನ್ನ ತಾಯಿಗೆ ತಿರುಗಿ ಕೊಟ್ಟಾಗ, ಅವನ ತಾಯಿ, “ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ಮಾಡುವುದಕ್ಕೆ ನಾನು ನನ್ನ ಕೈಯಲ್ಲಿದ್ದ ಈ ಬೆಳ್ಳಿಯನ್ನು ಯೆಹೋವ ದೇವರಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದ್ದೆನು; ಆದ್ದರಿಂದ ನಾನು ಅದನ್ನು ನಿನಗೆ ತಿರುಗಿ ಕೊಡುವೆನು,” ಎಂದಳು.
וַיָּשֶׁב אֶת־אֶלֶף־וּמֵאָה הַכֶּסֶף לְאִמּוֹ וַתֹּאמֶר אִמּוֹ הַקְדֵּשׁ הִקְדַּשְׁתִּי אֶת־הַכֶּסֶף לַיהֹוָה מִיָּדִי לִבְנִי לַֽעֲשׂוֹת פֶּסֶל וּמַסֵּכָה וְעַתָּה אֲשִׁיבֶנּוּ לָֽךְ׃
4 ಆದರೆ ಅವನು ಆ ಹಣವನ್ನು ತನ್ನ ತಾಯಿಗೆ ತಿರುಗಿ ಕೊಟ್ಟನು. ಆಗ ಅವನ ತಾಯಿ ಇನ್ನೂರು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅಕ್ಕಸಾಲಿಗನ ಕೈಯಲ್ಲಿ ಕೊಟ್ಟಳು. ಅವನು ಅವುಗಳಿಂದ ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ಮಾಡಿದನು. ಅವು ಮೀಕನ ಮನೆಯಲ್ಲಿದ್ದವು.
וַיָּשֶׁב אֶת־הַכֶּסֶף לְאִמּוֹ וַתִּקַּח אִמּוֹ מָאתַיִם כֶּסֶף וַתִּתְּנֵהוּ לַצּוֹרֵף וַֽיַּעֲשֵׂהוּ פֶּסֶל וּמַסֵּכָה וַֽיְהִי בְּבֵית מִיכָֽיְהוּ׃
5 ಈ ಮೀಕ ಎಂಬವನಿಗೆ ದೇವರ ಮನೆ ಇದ್ದುದರಿಂದ ಅವನು ಒಂದು ಏಫೋದನ್ನೂ, ಪ್ರತಿಮೆಗಳನ್ನೂ ಮಾಡಿ, ತನ್ನ ಪುತ್ರರಲ್ಲಿ ಒಬ್ಬನನ್ನು ಯಾಜಕ ಸೇವೆಗೆ ಪ್ರತಿಷ್ಠೆ ಮಾಡಿದನು.
וְהָאִישׁ מִיכָה לוֹ בֵּית אֱלֹהִים וַיַּעַשׂ אֵפוֹד וּתְרָפִים וַיְמַלֵּא אֶת־יַד אַחַד מִבָּנָיו וַֽיְהִי־לוֹ לְכֹהֵֽן׃
6 ಆ ದಿವಸಗಳಲ್ಲಿ ಇಸ್ರಾಯೇಲಿನಲ್ಲಿ ಅರಸನು ಇರಲಿಲ್ಲ. ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡುತ್ತಿದ್ದನು.
בַּיָּמִים הָהֵם אֵין מֶלֶךְ בְּיִשְׂרָאֵל אִישׁ הַיָּשָׁר בְּעֵינָיו יַעֲשֶֽׂה׃
7 ಯೆಹೂದದ ಬೇತ್ಲೆಹೇಮಿನವನಾದ ಯೆಹೂದದ ಗೋತ್ರದ ಲೇವಿಯನಾದಂಥ ಒಬ್ಬ ಪ್ರಾಯದವನಿದ್ದನು. ಅವನು ಅಲ್ಲಿ ಪ್ರವಾಸಿಯಾಗಿದ್ದನು.
וַֽיְהִי־נַעַר מִבֵּית לֶחֶם יְהוּדָה מִמִּשְׁפַּחַת יְהוּדָה וְהוּא לֵוִי וְהוּא גָֽר־שָֽׁם׃
8 ಆ ಮನುಷ್ಯನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗುವುದಕ್ಕೆ ಯೆಹೂದದ ಬೇತ್ಲೆಹೇಮ್ ಪಟ್ಟಣವನ್ನು ಬಿಟ್ಟುಹೋದನು. ಪ್ರಯಾಣ ಮಾಡುವಾಗ ಎಫ್ರಾಯೀಮ್ ಬೆಟ್ಟದಲ್ಲಿರುವ ಮೀಕನ ಮನೆಯ ಬಳಿಗೆ ಬಂದನು.
וַיֵּלֶךְ הָאִישׁ מֵהָעִיר מִבֵּית לֶחֶם יְהוּדָה לָגוּר בַּאֲשֶׁר יִמְצָא וַיָּבֹא הַר־אֶפְרַיִם עַד־בֵּית מִיכָה לַעֲשׂוֹת דַּרְכּֽוֹ׃
9 ಆಗ ಮೀಕನು ಅವನಿಗೆ, “ನೀನು ಎಲ್ಲಿಂದ ಬಂದೆ?” ಎಂದನು. ಅವನು ಮೀಕನಿಗೆ, “ನಾನು ಯೆಹೂದದ ಬೇತ್ಲೆಹೇಮಿನವನಾದ ಲೇವಿಯನು. ನನಗೆ ಸ್ಥಳ ಸಿಕ್ಕಲ್ಲಿ ಪ್ರವಾಸಿಯಾಗಬೇಕೆಂದು ಹೊರಟಿದ್ದೇನೆ,” ಎಂದನು.
וַיֹּֽאמֶר־לוֹ מִיכָה מֵאַיִן תָּבוֹא וַיֹּאמֶר אֵלָיו לֵוִי אָנֹכִי מִבֵּית לֶחֶם יְהוּדָה וְאָנֹכִי הֹלֵךְ לָגוּר בַּאֲשֶׁר אֶמְצָֽא׃
10 ಮೀಕನು ಅವನಿಗೆ, “ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ, ಯಾಜಕನಾಗಿಯೂ ಇರು. ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ, ಒಂದು ದುಸ್ತು ವಸ್ತ್ರಗಳನ್ನೂ, ಆಹಾರವನ್ನೂ ಕೊಡುವೆನು,” ಎಂದನು. ಹಾಗೆಯೇ ಲೇವಿಯನು ಹೋದನು.
וַיֹּאמֶר לוֹ מִיכָה שְׁבָה עִמָּדִי וֶֽהְיֵה־לִי לְאָב וּלְכֹהֵן וְאָנֹכִי אֶֽתֶּן־לְךָ עֲשֶׂרֶת כֶּסֶף לַיָּמִים וְעֵרֶךְ בְּגָדִים וּמִחְיָתֶךָ וַיֵּלֶךְ הַלֵּוִֽי׃
11 ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವುದಕ್ಕೆ ಸಮ್ಮತಿಸಿದನು. ಆ ಯೌವನಸ್ಥನು ಅವನಿಗೆ ಅವನ ಪುತ್ರರಲ್ಲಿ ಒಬ್ಬನ ಹಾಗೆ ಇದ್ದನು.
וַיּוֹאֶל הַלֵּוִי לָשֶׁבֶת אֶת־הָאִישׁ וַיְהִי הַנַּעַר לוֹ כְּאַחַד מִבָּנָֽיו׃
12 ಮೀಕನು ಲೇವಿಯನನ್ನು ಪ್ರತಿಷ್ಠೆ ಮಾಡಿದನು. ಆ ಯೌವನಸ್ಥನು ಅವನಿಗೆ ಯಾಜಕನಾದನು. ಅವನು ಮೀಕನ ಮನೆಯಲ್ಲಿ ಇದ್ದನು.
וַיְמַלֵּא מִיכָה אֶת־יַד הַלֵּוִי וַֽיְהִי־לוֹ הַנַּעַר לְכֹהֵן וַיְהִי בְּבֵית מִיכָֽה׃
13 ಆಗ ಮೀಕನು, “ನನಗೆ ಒಬ್ಬ ಲೇವಿಯನು ಯಾಜಕನಾಗಿರುವುದರಿಂದ, ಯೆಹೋವ ದೇವರು ನನಗೆ ಒಳ್ಳೆಯದನ್ನು ಮಾಡುವರೆಂದು ಈಗ ತಿಳಿಯುತ್ತೇನೆ,” ಎಂದುಕೊಂಡನು.
וַיֹּאמֶר מִיכָה עַתָּה יָדַעְתִּי כִּֽי־יֵיטִיב יְהֹוָה לִי כִּי הָֽיָה־לִי הַלֵּוִי לְכֹהֵֽן׃

< ನ್ಯಾಯಸ್ಥಾಪಕರು 17 >