< ನ್ಯಾಯಸ್ಥಾಪಕರು 8 >

1 ಆಗ ಎಫ್ರಾಯೀಮ್ಯರು, “ನೀನು ಮಿದ್ಯಾನ್ಯರ ಮೇಲೆ ಯುದ್ಧಮಾಡುವುದಕ್ಕೆ ಹೋಗುವಾಗ, ನಮ್ಮನ್ನು ಕರೆಯದೆ ಹೋದದ್ದೇನು?” ಎಂದು ಹೇಳಿ ಅವನ ಸಂಗಡ ತೀಕ್ಷ್ಣವಾಗಿ ವಿವಾದ ಮಾಡಿದರು.
וַיֹּאמְרוּ אֵלָיו אִישׁ אֶפְרַיִם מָֽה־הַדָּבָר הַזֶּה עָשִׂיתָ לָּנוּ לְבִלְתִּי קְרֹאות לָנוּ כִּי הָלַכְתָּ לְהִלָּחֵם בְּמִדְיָן וַיְרִיבוּן אִתּוֹ בְּחׇזְקָֽה׃
2 ಅವನು ಅವರಿಗೆ, “ನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿದೆನು? ಅಬೀಯೆಜೆರನ ದ್ರಾಕ್ಷಿ ಫಲ ಕೂಡಿಸುವುದಕ್ಕಿಂತ ಎಫ್ರಾಯೀಮನ ಉಳಿದ ದ್ರಾಕ್ಷಿಗಳನ್ನು ಸಂಗ್ರಹಿಸುವುದು ಉತ್ತಮವಲ್ಲವೇ?
וַיֹּאמֶר אֲלֵיהֶם מֶה־עָשִׂיתִי עַתָּה כָּכֶם הֲלֹא טוֹב עֹלְלוֹת אֶפְרַיִם מִבְצִיר אֲבִיעֶֽזֶר׃
3 ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ಪ್ರಧಾನರಾದ ಓರೇಬನನ್ನೂ, ಜೇಬನನ್ನೂ ಒಪ್ಪಿಸಿಕೊಡಲಿಲ್ಲವೇ? ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಎಷ್ಟು?” ಎಂದನು. ಅವನು ಈ ಮಾತು ಹೇಳಿದಾಗ, ಅವನ ವಿಷಯವಾಗಿ ಅವರ ಕೋಪವು ಶಾಂತವಾಯಿತು.
בְּיֶדְכֶם נָתַן אֱלֹהִים אֶת־שָׂרֵי מִדְיָן אֶת־עֹרֵב וְאֶת־זְאֵב וּמַה־יָּכֹלְתִּי עֲשׂוֹת כָּכֶם אָז רָפְתָה רוּחָם מֵֽעָלָיו בְּדַבְּרוֹ הַדָּבָר הַזֶּֽה׃
4 ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ; ಅವನೂ, ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ, ಹಿಂದಟ್ಟುವವರಾಗಿಯೂ ಇದ್ದರು.
וַיָּבֹא גִדְעוֹן הַיַּרְדֵּנָה עֹבֵר הוּא וּשְׁלֹשׁ־מֵאוֹת הָאִישׁ אֲשֶׁר אִתּוֹ עֲיֵפִים וְרֹדְפִֽים׃
5 ಅವನು ಸುಕ್ಕೋತನವರಿಗೆ, “ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಏಕೆಂದರೆ ಅವರು ದಣಿದಿದ್ದಾರೆ. ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ, ಚಲ್ಮುನ್ನನನ್ನೂ ಹಿಂದಟ್ಟುತ್ತೇನೆ,” ಎಂದನು.
וַיֹּאמֶר לְאַנְשֵׁי סֻכּוֹת תְּנוּ־נָא כִּכְּרוֹת לֶחֶם לָעָם אֲשֶׁר בְּרַגְלָי כִּֽי־עֲיֵפִים הֵם וְאָנֹכִי רֹדֵף אַחֲרֵי זֶבַח וְצַלְמֻנָּע מַלְכֵי מִדְיָֽן׃
6 ಆದರೆ ಸುಕ್ಕೋತಿನ ಪ್ರಧಾನರು ಅವನಿಗೆ, “ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈವಶವಾಗಿದೆಯೋ?” ಎಂದರು.
וַיֹּאמֶר שָׂרֵי סֻכּוֹת הֲכַף זֶבַח וְצַלְמֻנָּע עַתָּה בְּיָדֶךָ כִּֽי־נִתֵּן לִֽצְבָאֲךָ לָֽחֶם׃
7 ಆಗ ಗಿದ್ಯೋನನು, “ಆಗ ಯೆಹೋವ ದೇವರು ಜೆಬಹನನ್ನೂ, ಚಲ್ಮುನ್ನನನ್ನೂ ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟ ತರುವಾಯ, ನಿಮ್ಮ ಮಾಂಸವನ್ನು ಮರುಭೂಮಿಯ ಮುಳ್ಳುಗಳಿಂದಲೂ, ಕಾರೆಗಿಡದ ಮುಳ್ಳುಗಳಿಂದಲೂ ಹೊಡಿಸುವೆನು,” ಎಂದನು.
וַיֹּאמֶר גִּדְעוֹן לָכֵן בְּתֵת יְהֹוָה אֶת־זֶבַח וְאֶת־צַלְמֻנָּע בְּיָדִי וְדַשְׁתִּי אֶת־בְּשַׂרְכֶם אֶת־קוֹצֵי הַמִּדְבָּר וְאֶת־הַֽבַּרְקֳנִֽים׃
8 ಅಲ್ಲಿಂದ ಪೆನೀಯೇಲಿಗೆ ಹೋಗಿ, ಆ ಊರಿನವರ ಸಂಗಡ ಆ ಪ್ರಕಾರವೇ ಮಾತನಾಡಿದನು. ಅವರು ಸುಕ್ಕೋತಿನ ಮನುಷ್ಯರು ಉತ್ತರ ಕೊಟ್ಟ ಹಾಗೆಯೇ ಉತ್ತರಕೊಟ್ಟರು.
וַיַּעַל מִשָּׁם פְּנוּאֵל וַיְדַבֵּר אֲלֵיהֶם כָּזֹאת וַיַּעֲנוּ אוֹתוֹ אַנְשֵׁי פְנוּאֵל כַּאֲשֶׁר עָנוּ אַנְשֵׁי סֻכּֽוֹת׃
9 ಆಗ ಅವನು ಪೆನೀಯೇಲಿನ ಮನುಷ್ಯರಿಗೆ ಸಹ, “ನಾನು ಸಮಾಧಾನವಾಗಿ ತಿರುಗಿ ಬರುವಾಗ, ಈ ಗೋಪುರವನ್ನು ಕೆಡವಿಬಿಡುವೆನು,” ಎಂದನು.
וַיֹּאמֶר גַּם־לְאַנְשֵׁי פְנוּאֵל לֵאמֹר בְּשׁוּבִי בְשָׁלוֹם אֶתֹּץ אֶת־הַמִּגְדָּל הַזֶּֽה׃
10 ಜೆಬಹನೂ, ಚಲ್ಮುನ್ನನೂ ತಮ್ಮ ಸೈನ್ಯದ ಹೆಚ್ಚು ಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರಷ್ಟೂ, ಖಡ್ಗ ಹಿಡಿಯತಕ್ಕ ಒಂದು ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ, ಪೂರ್ವದೇಶದ ಸಮಸ್ತ ಜನರು ಅಲ್ಲಿ ಉಳಿದರು.
וְזֶבַח וְצַלְמֻנָּע בַּקַּרְקֹר וּמַחֲנֵיהֶם עִמָּם כַּחֲמֵשֶׁת עָשָׂר אֶלֶף כֹּל הַנּוֹתָרִים מִכֹּל מַחֲנֵה בְנֵי־קֶדֶם וְהַנֹּפְלִים מֵאָה וְעֶשְׂרִים אֶלֶף אִישׁ שֹׁלֵֽף־חָֽרֶב׃
11 ಗಿದ್ಯೋನನು ನೋಬಹ, ಯೊಗ್ಬೆಹಾ ಇವುಗಳ ಪೂರ್ವದಲ್ಲಿದ್ದ ಡೇರೆಗಳಲ್ಲಿ ಸುರಕ್ಷಿತವಾಗಿ ವಾಸಿಸಿರುವವರ ಮಾರ್ಗವಾಗಿ ಹೋಗಿ ಅವರು ನಿರೀಕ್ಷಿಸದ ಸಮಯದಲ್ಲಿ ಅವರ ಮೇಲೆ ದಾಳಿಮಾಡಿದರು.
וַיַּעַל גִּדְעוֹן דֶּרֶךְ הַשְּׁכוּנֵי בׇאֳהָלִים מִקֶּדֶם לְנֹבַח וְיׇגְבְּהָה וַיַּךְ אֶת־הַֽמַּחֲנֶה וְהַֽמַּחֲנֶה הָיָה בֶֽטַח׃
12 ಜೆಬಹನೂ, ಚಲ್ಮುನ್ನನೂ ಓಡಿ ಹೋದದ್ದರಿಂದ, ಅವನು ಮಿದ್ಯಾನ್ಯರ ಇಬ್ಬರು ಅರಸುಗಳಾದ ಜೆಬಹನನ್ನೂ, ಚೆಲ್ಮುನ್ನನನ್ನೂ ಹಿಂದಟ್ಟಿ ಹಿಡಿದು ಪಾಳೆಯನ್ನೆಲ್ಲಾ ಚದರಿಸಿಬಿಟ್ಟರು.
וַיָּנֻסוּ זֶבַח וְצַלְמֻנָּע וַיִּרְדֹּף אַחֲרֵיהֶם וַיִּלְכֹּד אֶת־שְׁנֵי ׀ מַלְכֵי מִדְיָן אֶת־זֶבַח וְאֶת־צַלְמֻנָּע וְכׇל־הַֽמַּחֲנֶה הֶחֱרִֽיד׃
13 ಯೋವಾಷನ ಮಗನಾದ ಗಿದ್ಯೋನನು ಯುದ್ಧ ತೀರಿಸಿಕೊಂಡು ಹೆರೆಸ್ ಎಂಬ ಬೆಟ್ಟದ ಮಾರ್ಗವಾಗಿ ತಿರುಗಿಬಂದು,
וַיָּשׇׁב גִּדְעוֹן בֶּן־יוֹאָשׁ מִן־הַמִּלְחָמָה מִֽלְמַעֲלֵה הֶחָֽרֶס׃
14 ಸುಕ್ಕೋತಿನ ಮನುಷ್ಯರಲ್ಲಿ ಒಬ್ಬ ಯೌವನಸ್ಥನನ್ನು ಹಿಡಿದು ಅವನನ್ನು ಕೇಳಿದಾಗ ಅವನು, ಸುಕ್ಕೋತಿನ ಪ್ರಧಾನರೂ, ಹಿರಿಯರೂ ಆದ ಎಪ್ಪತ್ತೇಳು ಜನರ ಹೆಸರನ್ನು ಅವನು ಬರೆದನು.
וַיִּלְכׇּד־נַעַר מֵאַנְשֵׁי סֻכּוֹת וַיִּשְׁאָלֵהוּ וַיִּכְתֹּב אֵלָיו אֶת־שָׂרֵי סֻכּוֹת וְאֶת־זְקֵנֶיהָ שִׁבְעִים וְשִׁבְעָה אִֽישׁ׃
15 ಗಿದ್ಯೋನನು ಸುಕ್ಕೋತಿನ ಮನುಷ್ಯರ ಬಳಿಗೆ ಬಂದು, “ಇಗೋ, ದಣಿದಿರುವ ನಿನ್ನ ಮನುಷ್ಯರಿಗೆ ನಾವು ರೊಟ್ಟಿಯನ್ನು ಕೊಡುವ ಹಾಗೆ, ಜೆಬಹ, ಚೆಲ್ಮುನ್ನರ ಕೈ ಈಗಲೇ ನಿನ್ನ ಕೈವಶವಾಗಿದೆಯೋ ಎಂದು ನೀವು ನನ್ನನ್ನು ನಿಂದಿಸಿದ ಜೆಬಹನನ್ನೂ, ಚಲ್ಮುನ್ನನನ್ನೂ ನೋಡಿರಿ,” ಎಂದು ಹೇಳಿ
וַיָּבֹא אֶל־אַנְשֵׁי סֻכּוֹת וַיֹּאמֶר הִנֵּה זֶבַח וְצַלְמֻנָּע אֲשֶׁר חֵרַפְתֶּם אוֹתִי לֵאמֹר הֲכַף זֶבַח וְצַלְמֻנָּע עַתָּה בְּיָדֶךָ כִּי נִתֵּן לַאֲנָשֶׁיךָ הַיְּעֵפִים לָֽחֶם׃
16 ಪಟ್ಟಣದ ಹಿರಿಯರನ್ನು ಮತ್ತು ಸುಕ್ಕೋತಿನವರನ್ನು ಹಿಡಿದು, ಮರುಭೂಮಿಯ ಮುಳ್ಳು ಹಾಗು ಕಾರೆಗಿಡದ ಮುಳ್ಳುಗಳಿಂದ ದಂಡಿಸಿ ಅವರಿಗೆ ಪಾಠ ಕಲಿಸಿದನು.
וַיִּקַּח אֶת־זִקְנֵי הָעִיר וְאֶת־קוֹצֵי הַמִּדְבָּר וְאֶת־הַֽבַּרְקֳנִים וַיֹּדַע בָּהֶם אֵת אַנְשֵׁי סֻכּֽוֹת׃
17 ಪೆನೀಯೇಲಿನ ಗೋಪುರವನ್ನು ಕೆಡವಿ, ಆ ಪಟ್ಟಣದ ಮನುಷ್ಯರನ್ನು ಕೊಂದುಹಾಕಿದನು.
וְאֶת־מִגְדַּל פְּנוּאֵל נָתָץ וַֽיַּהֲרֹג אֶת־אַנְשֵׁי הָעִֽיר׃
18 ಅವನು ಜೆಬಹನಿಗೂ, ಚಲ್ಮುನ್ನನಿಗೂ, “ನೀವು ತಾಬೋರಿನಲ್ಲಿ ಕೊಂದುಹಾಕಿದ ಆ ಮನುಷ್ಯರು ಯಾವ ತರಹದವರಾಗಿದ್ದರು?” ಎಂದನು. ಅದಕ್ಕವರು, “ನಿನ್ನ ಹಾಗೆಯೇ ಅವರು ಒಬ್ಬೊಬ್ಬರು ರೂಪದಲ್ಲಿ ಅರಸನ ಮಕ್ಕಳಂತಿದ್ದರು,” ಎಂದರು.
וַיֹּאמֶר אֶל־זֶבַח וְאֶל־צַלְמֻנָּע אֵיפֹה הָאֲנָשִׁים אֲשֶׁר הֲרַגְתֶּם בְּתָבוֹר וַיֹּֽאמְרוּ כָּמוֹךָ כְמוֹהֶם אֶחָד כְּתֹאַר בְּנֵי הַמֶּֽלֶךְ׃
19 ಅದಕ್ಕವನು, “ಅವರು ನನ್ನ ತಾಯಿಯ ಮಕ್ಕಳು, ನನ್ನ ಸಹೋದರರು. ಯೆಹೋವ ದೇವರ ಜೀವದ ಆಣೆ ನೀವು ಅವರನ್ನು ಬದುಕಿಸಿದ್ದರೆ ನಿಮ್ಮನ್ನು ಕೊಲ್ಲುತ್ತಿರಲಿಲ್ಲ,” ಎಂದನು.
וַיֹּאמַר אַחַי בְּנֵֽי־אִמִּי הֵם חַי־יְהֹוָה לוּ הַחֲיִתֶם אוֹתָם לֹא הָרַגְתִּי אֶתְכֶֽם׃
20 ತನ್ನ ಚೊಚ್ಚಲಮಗನಾದ ಎತೆರನಿಗೆ, “ನೀನೆದ್ದು ಅವರನ್ನು ಕೊಂದುಹಾಕು,” ಎಂದನು. ಆದರೆ ಆ ಯುವಕನು ತನ್ನ ಖಡ್ಗವನ್ನು ಬಿಚ್ಚದೆ ಹೋದನು. ಏಕೆಂದರೆ ಅವನು ಇನ್ನೂ ಹುಡುಗನಾದ್ದರಿಂದ ಭಯಪಟ್ಟನು.
וַיֹּאמֶר לְיֶתֶר בְּכוֹרוֹ קוּם הֲרֹג אוֹתָם וְלֹא־שָׁלַף הַנַּעַר חַרְבּוֹ כִּי יָרֵא כִּי עוֹדֶנּוּ נָֽעַר׃
21 ಆಗ ಜೆಬಹನೂ, ಚಲ್ಮುನ್ನನೂ, “ನೀನು ಎದ್ದು ನಮ್ಮ ಮೇಲೆ ಬೀಳು. ಏಕೆಂದರೆ ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವುದು,” ಎಂದರು. ಗಿದ್ಯೋನನು ಎದ್ದು ಜೆಬಹನನ್ನೂ, ಚೆಲ್ಮುನ್ನನನ್ನೂ ಕೊಂದುಹಾಕಿ, ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದುಕೊಂಡನು.
וַיֹּאמֶר זֶבַח וְצַלְמֻנָּע קוּם אַתָּה וּפְגַע־בָּנוּ כִּי כָאִישׁ גְּבוּרָתוֹ וַיָּקׇם גִּדְעוֹן וַֽיַּהֲרֹג אֶת־זֶבַח וְאֶת־צַלְמֻנָּע וַיִּקַּח אֶת־הַשַּׂהֲרֹנִים אֲשֶׁר בְּצַוְּארֵי גְמַלֵּיהֶֽם׃
22 ಆಗ ಇಸ್ರಾಯೇಲ್ ಜನರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನರ ಕೈಯಿಂದ ತಪ್ಪಿಸಿ ರಕ್ಷಿಸಿದ್ದರಿಂದ, ನೀನೂ, ನಿನ್ನ ಪುತ್ರನೂ, ನಿನ್ನ ಪುತ್ರನ ಪುತ್ರನೂ ನಮ್ಮನ್ನು ಆಳಬೇಕು,” ಎಂದರು.
וַיֹּאמְרוּ אִֽישׁ־יִשְׂרָאֵל אֶל־גִּדְעוֹן מְשָׁל־בָּנוּ גַּם־אַתָּה גַּם־בִּנְךָ גַּם בֶּן־בְּנֶךָ כִּי הוֹשַׁעְתָּנוּ מִיַּד מִדְיָֽן׃
23 ಗಿದ್ಯೋನನು ಅವರಿಗೆ, “ನಾನು ನಿಮ್ಮನ್ನು ಆಳುವುದಿಲ್ಲ. ನನ್ನ ಮಗನೂ ನಿಮ್ಮನ್ನು ಆಳುವುದಿಲ್ಲ. ಯೆಹೋವ ದೇವರೇ ನಿಮ್ಮನ್ನು ಆಳುವರು.”
וַיֹּאמֶר אֲלֵהֶם גִּדְעוֹן לֹֽא־אֶמְשֹׁל אֲנִי בָּכֶם וְלֹא־יִמְשֹׁל בְּנִי בָּכֶם יְהֹוָה יִמְשֹׁל בָּכֶֽם׃
24 ಮತ್ತು ಗಿದ್ಯೋನನು ಅವರಿಗೆ, “ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿಯೊಬ್ಬನು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ನನಗೆ ಕೊಡಿರಿ,” ಎಂದನು. ಏಕೆಂದರೆ ಮಿದ್ಯಾನರು ಇಷ್ಮಾಯೇಲರಾಗಿದ್ದದರಿಂದ ಅವರು ಬಂಗಾರದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು.
וַיֹּאמֶר אֲלֵהֶם גִּדְעוֹן אֶשְׁאֲלָה מִכֶּם שְׁאֵלָה וּתְנוּ־לִי אִישׁ נֶזֶם שְׁלָלוֹ כִּֽי־נִזְמֵי זָהָב לָהֶם כִּי יִשְׁמְעֵאלִים הֵֽם׃
25 ಅವರು, “ನಾವು ಇಷ್ಟಪೂರ್ವಕವಾಗಿ ಕೊಡುತ್ತೇವೆ,” ಎಂದು ಹೇಳಿ, ಒಂದು ವಸ್ತ್ರವನ್ನು ಹಾಸಿ, ಅಲ್ಲಿ ಅವರವರು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ಹಾಕಿದರು.
וַיֹּאמְרוּ נָתוֹן נִתֵּן וַֽיִּפְרְשׂוּ אֶת־הַשִּׂמְלָה וַיַּשְׁלִיכוּ שָׁמָּה אִישׁ נֶזֶם שְׁלָלֽוֹ׃
26 ಆಭರಣಗಳೂ, ಕಂಠಮಾಲೆಗಳೂ, ಮಿದ್ಯಾನರ ಅರಸರು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ, ಅವರ ಒಂಟೆಗಳ ಕೊರಳೊಳಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದುಕೊಂಡ ಬಂಗಾರದ ಓಲೆಗಳ ತೂಕವು ಇಪ್ಪತ್ತು ಕಿಲೋಗ್ರಾಂ ತೂಕವಾಗಿತ್ತು.
וַיְהִי מִשְׁקַל נִזְמֵי הַזָּהָב אֲשֶׁר שָׁאָל אֶלֶף וּשְׁבַע־מֵאוֹת זָהָב לְבַד מִן־הַשַּׂהֲרֹנִים וְהַנְּטִיפוֹת וּבִגְדֵי הָאַרְגָּמָן שֶׁעַל מַלְכֵי מִדְיָן וּלְבַד מִן־הָעֲנָקוֹת אֲשֶׁר בְּצַוְּארֵי גְמַלֵּיהֶֽם׃
27 ಆ ಬಂಗಾರದಿಂದ ಗಿದ್ಯೋನನು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲರೆಲ್ಲರೂ ಅದರ ಹಿಂದೆ ಹೋಗಿ ಪೂಜಿಸಿ ದೇವದ್ರೋಹಿಗಳಾದರು, ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.
וַיַּעַשׂ אוֹתוֹ גִדְעוֹן לְאֵפוֹד וַיַּצֵּג אוֹתוֹ בְעִירוֹ בְּעׇפְרָה וַיִּזְנוּ כׇֽל־יִשְׂרָאֵל אַחֲרָיו שָׁם וַיְהִי לְגִדְעוֹן וּלְבֵיתוֹ לְמוֹקֵֽשׁ׃
28 ಮಿದ್ಯಾನ್ಯರು ತಮ್ಮ ತಲೆಯನ್ನು ತಿರುಗಿ ಎತ್ತಕೂಡದ ಹಾಗೆ ಇಸ್ರಾಯೇಲರ ಮುಂದೆ ತಗ್ಗಿಹೋದರು. ದೇಶವು ಗಿದ್ಯೋನನ ದಿವಸಗಳಲ್ಲಿ ನಲವತ್ತು ವರುಷ ವಿಶ್ರಾಂತಿಯಲ್ಲಿತ್ತು.
וַיִּכָּנַע מִדְיָן לִפְנֵי בְּנֵי יִשְׂרָאֵל וְלֹא יָסְפוּ לָשֵׂאת רֹאשָׁם וַתִּשְׁקֹט הָאָרֶץ אַרְבָּעִים שָׁנָה בִּימֵי גִדְעֽוֹן׃
29 ಯೋವಾಷನ ಮಗ ಯೆರುಬ್ಬಾಳನು ಹೋಗಿ ತನ್ನ ಸ್ವಂತ ಮನೆಯಲ್ಲಿ ವಾಸವಾಗಿದ್ದನು.
וַיֵּלֶךְ יְרֻבַּעַל בֶּן־יוֹאָשׁ וַיֵּשֶׁב בְּבֵיתֽוֹ׃
30 ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರಿದ್ದುದರಿಂದ ಅವನಿಂದ ಜನಿಸಿದ ಎಪ್ಪತ್ತು ಮಂದಿ ಮಕ್ಕಳು ಇದ್ದರು.
וּלְגִדְעוֹן הָיוּ שִׁבְעִים בָּנִים יֹצְאֵי יְרֵכוֹ כִּֽי־נָשִׁים רַבּוֹת הָיוּ לֽוֹ׃
31 ಶೆಖೆಮಿನಲ್ಲಿದ್ದ ಅವನ ಉಪಪತ್ನಿಯು ಅವನಿಗೆ ಒಬ್ಬ ಮಗನನ್ನು ಹೆತ್ತಳು. ಅವನು ಆ ಮಗನಿಗೆ ಅಬೀಮೆಲೆಕನೆಂದು ಹೆಸರಿಟ್ಟನು.
וּפִֽילַגְשׁוֹ אֲשֶׁר בִּשְׁכֶם יָֽלְדָה־לּוֹ גַם־הִיא בֵּן וַיָּשֶׂם אֶת־שְׁמוֹ אֲבִימֶֽלֶךְ׃
32 ಯೋವಾಷನ ಮಗನಾದ ಗಿದ್ಯೋನನು ಒಳ್ಳೆಯ ವೃದ್ಧಾಪ್ಯದಲ್ಲಿ ಮರಣಹೊಂದಿದಾಗ, ಅವನನ್ನು ಅಬೀಯೆಜೆರೀಯರಿಗೆ ಸೇರಿದ ಒಫ್ರದಲ್ಲಿ ತನ್ನ ತಂದೆಯಾದ ಯೋವಾಷನ ಸಮಾಧಿಯಲ್ಲಿ ಹೂಳಿಡಲಾಯಿತು.
וַיָּמׇת גִּדְעוֹן בֶּן־יוֹאָשׁ בְּשֵׂיבָה טוֹבָה וַיִּקָּבֵר בְּקֶבֶר יוֹאָשׁ אָבִיו בְּעׇפְרָה אֲבִי הָעֶזְרִֽי׃
33 ಗಿದ್ಯೋನನ ಮರಣದ ತರುವಾಯ, ಇಸ್ರಾಯೇಲರು ದೇವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜೆ ಮಾಡುತ್ತಾ ಬಾಳ್ ಬೆರೀತನ್ನು ತಮಗೆ ದೇವರಾಗಿ ಮಾಡಿಕೊಂಡರು.
וַיְהִי כַּֽאֲשֶׁר מֵת גִּדְעוֹן וַיָּשׁוּבוּ בְּנֵי יִשְׂרָאֵל וַיִּזְנוּ אַחֲרֵי הַבְּעָלִים וַיָּשִׂימוּ לָהֶם בַּעַל בְּרִית לֵאלֹהִֽים׃
34 ಸುತ್ತಲೂ ಇದ್ದ ತಮ್ಮ ಎಲ್ಲಾ ಶತ್ರುಗಳ ಕೈಯಿಂದ ತಮ್ಮನ್ನು ತಪ್ಪಿಸಿಬಿಟ್ಟ ತಮ್ಮ ದೇವರಾದ ಯೆಹೋವ ದೇವರನ್ನು ಮರೆತುಬಿಟ್ಟರು.
וְלֹא זָֽכְרוּ בְּנֵי יִשְׂרָאֵל אֶת־יְהֹוָה אֱלֹהֵיהֶם הַמַּצִּיל אוֹתָם מִיַּד כׇּל־אֹיְבֵיהֶם מִסָּבִֽיב׃
35 ಗಿದ್ಯೋನನೆಂಬ ಯೆರುಬ್ಬಾಳನು ಇಸ್ರಾಯೇಲಿಗೆ ಮಾಡಿದ ಸಕಲ ಉಪಕಾರಗಳಿಗೆ ತಕ್ಕ ಹಾಗೆ ದಯೆಯನ್ನು ಅವನ ಮನೆಗೆ ಮಾಡದೆ ಹೋದರು.
וְלֹא־עָשׂוּ חֶסֶד עִם־בֵּית יְרֻבַּעַל גִּדְעוֹן כְּכׇל־הַטּוֹבָה אֲשֶׁר עָשָׂה עִם־יִשְׂרָאֵֽל׃

< ನ್ಯಾಯಸ್ಥಾಪಕರು 8 >