< ನ್ಯಾಯಸ್ಥಾಪಕರು 9 >

1 ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ, ಅವರ ಸಂಗಡ ಮತ್ತು ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆಲ್ಲರ ಸಂಗಡ ಮಾತನಾಡಿ,
וַיֵּ֨לֶךְ אֲבִימֶ֤לֶךְ בֶּן־יְרֻבַּ֙עַל֙ שְׁכֶ֔מָה אֶל־אֲחֵ֖י אִמּ֑וֹ וַיְדַבֵּ֣ר אֲלֵיהֶ֔ם וְאֶל־כָּל־מִשְׁפַּ֛חַת בֵּית־אֲבִ֥י אִמּ֖וֹ לֵאמֹֽר׃
2 “ನೀವು ದಯಮಾಡಿ ಶೆಕೆಮಿನ ಹಿರಿಯರಿಗೆ, ‘ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವುದು ಒಳ್ಳೆಯದೋ? ಒಬ್ಬನು ಆಳುವುದು ಒಳ್ಳೆಯದೋ?’ ಎಂದು ವಿಚಾರಿಸಿರಿ. ನಾನು ನಿಮ್ಮ ಎಲುಬೂ, ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕಮಾಡಿಕೊಳ್ಳಿರಿ,” ಎಂದನು.
דַּבְּרוּ־נָ֞א בְּאָזְנֵ֨י כָל־בַּעֲלֵ֣י שְׁכֶם֮ מַה־טּ֣וֹב לָכֶם֒ הַמְשֹׁ֨ל בָּכֶ֜ם שִׁבְעִ֣ים אִ֗ישׁ כֹּ֚ל בְּנֵ֣י יְרֻבַּ֔עַל אִם־מְשֹׁ֥ל בָּכֶ֖ם אִ֣ישׁ אֶחָ֑ד וּזְכַרְתֶּ֕ם כִּֽי־עַצְמֵכֶ֥ם וּבְשַׂרְכֶ֖ם אָנִֽי׃
3 ಹಾಗೆಯೇ ಅವನ ತಾಯಿಯ ಸಹೋದರರು ಅವನನ್ನು ಕುರಿತು ಶೆಕೆಮಿನ ಹಿರಿಯರೆಲ್ಲರೂ ಕೇಳುವಂತೆ ಈ ಮಾತುಗಳನ್ನೆಲ್ಲಾ ಹೇಳಿದರು. ಅವರು, “ಇವನು ನಮ್ಮ ಸಹೋದರನು,” ಎಂದು ಹೇಳಿದ್ದರಿಂದ, ಆ ಜನರ ಹೃದಯವು ಅಬೀಮೆಲೆಕನ ಕಡೆಗೆ ತಿರುಗಿತು.
וַיְדַבְּר֨וּ אֲחֵֽי־אִמּ֜וֹ עָלָ֗יו בְּאָזְנֵי֙ כָּל־בַּעֲלֵ֣י שְׁכֶ֔ם אֵ֥ת כָּל־הַדְּבָרִ֖ים הָאֵ֑לֶּה וַיֵּ֤ט לִבָּם֙ אַחֲרֵ֣י אֲבִימֶ֔לֶךְ כִּ֥י אָמְר֖וּ אָחִ֥ינוּ הֽוּא׃
4 ಅವರು ಬಾಳ್ ಬೆರೀತಿನ ಮನೆಯೊಳಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ಪುಂಡಪೋಕರಿಗಳನ್ನು ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.
וַיִּתְּנוּ־לוֹ֙ שִׁבְעִ֣ים כֶּ֔סֶף מִבֵּ֖יתּ בַ֣עַל בְּרִ֑ית וַיִּשְׂכֹּ֨ר בָּהֶ֜ם אֲבִימֶ֗לֶךְ אֲנָשִׁ֤ים רֵיקִים֙ וּפֹ֣חֲזִ֔ים וַיֵּלְכ֖וּ אַחֲרָֽיו׃
5 ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ, ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಪುತ್ರರನ್ನು ಒಂದು ಬಂಡೆಯ ಮೇಲೆ ಕೊಂದುಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗ ಯೋತಾಮನು ಒಬ್ಬನೇ ಉಳಿದನು. ಏಕೆಂದರೆ ಅವನು ಅಡಗಿಕೊಂಡನು.
וַיָּבֹ֤א בֵית־אָבִיו֙ עָפְרָ֔תָה וַֽיַּהֲרֹ֞ג אֶת־אֶחָ֧יו בְּנֵֽי־יְרֻבַּ֛עַל שִׁבְּעִ֥ים אִ֖ישׁ עַל־אֶ֣בֶן אֶחָ֑ת וַיִּוָּתֵ֞ר יוֹתָ֧ם בֶּן־יְרֻבַּ֛עַל הַקָּטֹ֖ן כִּ֥י נֶחְבָּֽא׃ ס
6 ಶೆಕೆಮಿನ ಜನರೆಲ್ಲರೂ, ಮಿಲ್ಲೋನಿನ ಮನೆಯವರೆಲ್ಲರೂ ಕೂಡಿಕೊಂಡು ಹೋಗಿ, ಶೆಕೆಮಿನ ಬಯಲಲ್ಲಿ ಇರುವ ಸ್ತಂಭದ ಬಳಿ ಇರುವ ಅಲ್ಲೋನ್ ಮರದ ಹತ್ತಿರ ಸೇರಿ ಅಬೀಮೆಲೆಕನನ್ನು ಅರಸನನ್ನಾಗಿ ನೇಮಿಸಿದರು.
וַיֵּאָ֨סְפ֜וּ כָּל־בַּעֲלֵ֤י שְׁכֶם֙ וְכָל־בֵּ֣ית מִלּ֔וֹא וַיֵּ֣לְכ֔וּ וַיַּמְלִ֥יכוּ אֶת־אֲבִימֶ֖לֶךְ לְמֶ֑לֶךְ עִם־אֵל֥וֹן מֻצָּ֖ב אֲשֶׁ֥ר בִּשְׁכֶֽם׃
7 ಯೋತಾಮನಿಗೆ ಇದನ್ನು ತಿಳಿಸಿದಾಗ, ಅವನು ಹೋಗಿ ಗೆರಿಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು, ತನ್ನ ಸ್ವರವನ್ನೆತ್ತಿ ಕೂಗಿ ಅವರಿಗೆ, “ಶೆಕೆಮಿನ ಹಿರಿಯರೇ, ದೇವರು ನಿಮ್ಮನ್ನು ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.
וַיַּגִּ֣דוּ לְיוֹתָ֗ם וַיֵּ֙לֶךְ֙ וַֽיַּעֲמֹד֙ בְּרֹ֣אשׁ הַר־גְּרִזִ֔ים וַיִּשָּׂ֥א קוֹל֖וֹ וַיִּקְרָ֑א וַיֹּ֣אמֶר לָהֶ֗ם שִׁמְע֤וּ אֵלַי֙ בַּעֲלֵ֣י שְׁכֶ֔ם וְיִשְׁמַ֥ע אֲלֵיכֶ֖ם אֱלֹהִֽים׃
8 ಮರಗಳು ತಮ್ಮ ಮೇಲೆ ಒಬ್ಬ ಅರಸನನ್ನು ಅಭಿಷೇಕಿಸಿಕೊಳ್ಳುವುದಕ್ಕಾಗಿ ಹೊರಟುಹೋಗಿ, ಹಿಪ್ಪೆಯ ಮರಕ್ಕೆ, ‘ನೀನು ನಮ್ಮನ್ನು ಆಳು,’ ಎಂದವು.
הָל֤וֹךְ הָֽלְכוּ֙ הָעֵצִ֔ים לִמְשֹׁ֥חַ עֲלֵיהֶ֖ם מֶ֑לֶךְ וַיֹּאמְר֥וּ לַזַּ֖יִת מלוכה עָלֵֽינוּ׃
9 “ಹಿಪ್ಪೆಯ ಮರ ಅವುಗಳಿಗೆ, ‘ಯಾವುದರಿಂದ ದೇವರನ್ನೂ, ಮನುಷ್ಯನನ್ನೂ ಘನಪಡಿಸುತ್ತಾರೋ, ಈ ನನ್ನ ಎಣ್ಣೆಯನ್ನು ಬಿಟ್ಟು, ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು.
וַיֹּ֤אמֶר לָהֶם֙ הַזַּ֔יִת הֶחֳדַ֙לְתִּי֙ אֶת־דִּשְׁנִ֔י אֲשֶׁר־בִּ֛י יְכַבְּד֥וּ אֱלֹהִ֖ים וַאֲנָשִׁ֑ים וְהָ֣לַכְתִּ֔י לָנ֖וּעַ עַל־הָעֵצִֽים׃
10 “ಮರಗಳು ಅಂಜೂರದ ಗಿಡಕ್ಕೆ, ‘ನೀನು ಬಂದು ನಮ್ಮ ಮೇಲೆ ಆಳಬೇಕು,’ ಎಂದವು.
וַיֹּאמְר֥וּ הָעֵצִ֖ים לַתְּאֵנָ֑ה לְכִי־אַ֖תְּ מָלְכִ֥י עָלֵֽינוּ׃
11 “ಆದರೆ ಅಂಜೂರದ ಗಿಡಗಳು ಅವುಗಳಿಗೆ, ‘ನಾನು ನನ್ನ ಮಧುರವನ್ನೂ, ನನ್ನ ಒಳ್ಳೆಯ ಫಲವನ್ನೂ ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು.
וַתֹּ֤אמֶר לָהֶם֙ הַתְּאֵנָ֔ה הֶחֳדַ֙לְתִּי֙ אֶת־מָתְקִ֔י וְאֶת־תְּנוּבָתִ֖י הַטּוֹבָ֑ה וְהָ֣לַכְתִּ֔י לָנ֖וּעַ עַל־הָעֵצִֽים׃
12 “ಮರಗಳು ದ್ರಾಕ್ಷಿ ಗಿಡಕ್ಕೆ, ‘ನೀನು ಬಂದು ನಮ್ಮನ್ನು ಆಳು,’ ಎಂದವು.
וַיֹּאמְר֥וּ הָעֵצִ֖ים לַגָּ֑פֶן לְכִי־אַ֖תְּ מלוכי עָלֵֽינוּ׃
13 “ಆದರೆ ದ್ರಾಕ್ಷಿ ಗಿಡವು ಅವುಗಳಿಗೆ, ‘ದೇವರನ್ನೂ, ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು, ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು.
וַתֹּ֤אמֶר לָהֶם֙ הַגֶּ֔פֶן הֶחֳדַ֙לְתִּי֙ אֶת־תִּ֣ירוֹשִׁ֔י הַֽמְשַׂמֵּ֥חַ אֱלֹהִ֖ים וַאֲנָשִׁ֑ים וְהָ֣לַכְתִּ֔י לָנ֖וּעַ עַל־הָעֵצִֽים׃
14 “ಆಗ ಎಲ್ಲಾ ಮರಗಳು ಮುಳ್ಳಿನ ಗಿಡಕ್ಕೆ, ‘ನೀನು ಬಂದು ನಮ್ಮನ್ನು ಆಳು,’ ಎಂದವು.
וַיֹּאמְר֥וּ כָל־הָעֵצִ֖ים אֶל־הָאָטָ֑ד לֵ֥ךְ אַתָּ֖ה מְלָךְ־עָלֵֽינוּ׃
15 “ಮುಳ್ಳಿನ ಗಿಡವು ಮರಗಳಿಗೆ, ‘ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವುದು ಸತ್ಯವಾದರೆ, ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು, ಲೆಬನೋನಿನ ದೇವದಾರುಗಳು ದಹಿಸಿಬಿಡಲಿ,’ ಎಂದಿತು.
וַיֹּ֣אמֶר הָאָטָד֮ אֶל־הָעֵצִים֒ אִ֡ם בֶּאֱמֶ֣ת אַתֶּם֩ מֹשְׁחִ֨ים אֹתִ֤י לְמֶ֙לֶךְ֙ עֲלֵיכֶ֔ם בֹּ֖אוּ חֲס֣וּ בְצִלִּ֑י וְאִם־אַ֕יִן תֵּ֤צֵא אֵשׁ֙ מִן־הָ֣אָטָ֔ד וְתֹאכַ֖ל אֶת־אַרְזֵ֥י הַלְּבָנֽוֹן׃
16 “ನೀವು ಈಗ ಅಬೀಮೆಲೆಕನನ್ನು ಅರಸನಾಗಿ ಮಾಡಿದ್ದು ಸತ್ಯದಲ್ಲಿಯೂ, ಯಥಾರ್ಥದಿಂದಲೂ ಮಾಡಿರುವುದಾದರೆ ಮತ್ತು ಯೆರುಬ್ಬಾಳನಿಗೂ, ಅವನ ಮನೆಗೂ ಒಳ್ಳೆಯದನ್ನು ಮಾಡಿದ್ದರೆ,
וְעַתָּ֗ה אִם־בֶּאֱמֶ֤ת וּבְתָמִים֙ עֲשִׂיתֶ֔ם וַתַּמְלִ֖יכוּ אֶת־אֲבִימֶ֑לֶךְ וְאִם־טוֹבָ֤ה עֲשִׂיתֶם֙ עִם־יְרֻבַּ֣עַל וְעִם־בֵּית֔וֹ וְאִם־כִּגְמ֥וּל יָדָ֖יו עֲשִׂ֥יתֶם לֽוֹ׃
17 ನನ್ನ ತಂದೆಯಾದ ಅವನು ನಿಮಗೋಸ್ಕರ ಯುದ್ಧಮಾಡಿದವನಾಗಿಯೂ, ತನ್ನ ಪ್ರಾಣವನ್ನು ಲೆಕ್ಕಿಸದೆ, ಮಿದ್ಯಾನಿನ ಕೈಯಿಂದ ನಿಮ್ಮನ್ನು ತಪ್ಪಿಸಿದವನಾಗಿಯೂ ಇರಲಾಗಿ,
אֲשֶׁר־נִלְחַ֥ם אָבִ֖י עֲלֵיכֶ֑ם וַיַּשְׁלֵ֤ךְ אֶת־נַפְשׁוֹ֙ מִנֶּ֔גֶד וַיַּצֵּ֥ל אֶתְכֶ֖ם מִיַּ֥ד מִדְיָֽן׃
18 ನೀವು ಈ ಹೊತ್ತು ನನ್ನ ತಂದೆಯ ಮನೆಗೆ ವಿರೋಧವಾಗಿ ಎದ್ದು, ಅವನ ಎಪ್ಪತ್ತು ಮಕ್ಕಳನ್ನು ಒಂದೇ ಬಂಡೆ ಮೇಲೆ ಕೊಂದು, ಅವನ ದಾಸಿಯ ಮಗನಾದ ಅಬೀಮೆಲೆಕನನ್ನು, ಅವನು ನಿಮ್ಮ ಸಹೋದರನಾಗಿರುವುದರಿಂದ ಶೆಕೆಮಿನ ಜನರ ಮೇಲೆ ಅರಸನಾಗಿ ಇಟ್ಟದ್ದು,
וְאַתֶּ֞ם קַמְתֶּ֨ם עַל־בֵּ֤ית אָבִי֙ הַיּ֔וֹם וַתַּהַרְג֧וּ אֶת־בָּנָ֛יו שִׁבְעִ֥ים אִ֖ישׁ עַל־אֶ֣בֶן אֶחָ֑ת וַתַּמְלִ֜יכוּ אֶת־אֲבִימֶ֤לֶךְ בֶּן־אֲמָתוֹ֙ עַל־בַּעֲלֵ֣י שְׁכֶ֔ם כִּ֥י אֲחִיכֶ֖ם הֽוּא׃
19 ಯೆರುಬ್ಬಾಳನ ಯೋಗ್ಯತೆಗೆ ತಕ್ಕದ್ದಾಗಿದ್ದರೆ ಮತ್ತು ಈ ಹೊತ್ತು ಅವನಿಗೂ, ಅವನ ಮಗನಿಗೂ ನೀವು ಸತ್ಯದಲ್ಲಿಯೂ, ಯಥಾರ್ಥತೆಯಲ್ಲಿಯೂ ಕಾರ್ಯ ಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ. ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ.
וְאִם־בֶּאֱמֶ֨ת וּבְתָמִ֧ים עֲשִׂיתֶ֛ם עִם־יְרֻבַּ֥עַל וְעִם־בֵּית֖וֹ הַיּ֣וֹם הַזֶּ֑ה שִׂמְחוּ֙ בַּאֲבִימֶ֔לֶךְ וְיִשְׂמַ֥ח גַּם־ה֖וּא בָּכֶֽם׃
20 ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿ ಹೊರಟು ಶೆಕೆಮಿನ ಹಿರಿಯರನ್ನೂ, ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನರಿಂದಲೂ, ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ,” ಎಂದನು.
וְאִם־אַ֕יִן תֵּ֤צֵא אֵשׁ֙ מֵאֲבִימֶ֔לֶךְ וְתֹאכַ֛ל אֶת־בַּעֲלֵ֥י שְׁכֶ֖ם וְאֶת־בֵּ֣ית מִלּ֑וֹא וְתֵצֵ֨א אֵ֜שׁ מִבַּעֲלֵ֤י שְׁכֶם֙ וּמִבֵּ֣ית מִלּ֔וֹא וְתֹאכַ֖ל אֶת־אֲבִימֶֽלֶךְ׃
21 ಆಗ ಯೋತಾಮನು ತಪ್ಪಿಸಿಕೊಂಡು ಓಡಿ ಬೇರಕ್ಕೆ ಹೋಗಿ, ತನ್ನ ಸಹೋದರನಾದ ಅಬೀಮೆಲೆಕನ ಭಯದ ನಿಮಿತ್ತವಾಗಿ ಅಲ್ಲಿ ವಾಸವಾಗಿದ್ದನು.
וַיָּ֣נָס יוֹתָ֔ם וַיִּבְרַ֖ח וַיֵּ֣לֶךְ בְּאֵ֑רָה וַיֵּ֣שֶׁב שָׁ֔ם מִפְּנֵ֖י אֲבִימֶ֥לֶךְ אָחִֽיו׃ פ
22 ಅಬೀಮೆಲೆಕನು ಇಸ್ರಾಯೇಲನ್ನು ಮೂರು ವರ್ಷ ಆಳಿದ ತರುವಾಯ,
וַיָּ֧שַׂר אֲבִימֶ֛לֶךְ עַל־יִשְׂרָאֵ֖ל שָׁלֹ֥שׁ שָׁנִֽים׃
23 ದೇವರು ಅಬೀಮೆಲೆಕ ಮತ್ತು ಶೆಕೆಮಿನ ಹಿರಿಯರ ನಡುವೆ ಒಂದು ದುರಾತ್ಮನನ್ನು ಕಳುಹಿಸಿದರು. ಆಗ ಶೆಕೆಮಿನವರು ಅಬೀಮೆಲೆಕನಿಗೆ ದ್ರೋಹಮಾಡಿದರು.
וַיִּשְׁלַ֤ח אֱלֹהִים֙ ר֣וּחַ רָעָ֔ה בֵּ֣ין אֲבִימֶ֔לֶךְ וּבֵ֖ין בַּעֲלֵ֣י שְׁכֶ֑ם וַיִּבְגְּד֥וּ בַעֲלֵי־שְׁכֶ֖ם בַּאֲבִימֶֽלֶךְ׃
24 ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ, ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಅವನ ಸಹೋದರರನ್ನು ಕೊಲ್ಲುವುದಕ್ಕೆ ಅವನ ಕೈಗಳನ್ನು ಬಲಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ, ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹಮಾಡಿದರು.
לָב֕וֹא חֲמַ֖ס שִׁבְעִ֣ים בְּנֵֽי־יְרֻבָּ֑עַל וְדָמָ֗ם לָשׂ֞וּם עַל־אֲבִימֶ֤לֶךְ אֲחִיהֶם֙ אֲשֶׁ֣ר הָרַ֣ג אוֹתָ֔ם וְעַל֙ בַּעֲלֵ֣י שְׁכֶ֔ם אֲשֶׁר־חִזְּק֥וּ אֶת־יָדָ֖יו לַהֲרֹ֥ג אֶת־אֶחָֽיו׃
25 ಶೆಕೆಮಿನ ಹಿರಿಯರು ಪರ್ವತ ಶಿಖರಗಳ ಮೇಲೆ ಅವನಿಗೋಸ್ಕರ ಹೊಂಚುಗಾರರನ್ನು ಇಟ್ಟು, ತಮ್ಮ ಸಮೀಪವಾಗಿ ಮಾರ್ಗದಲ್ಲಿ ಹಾದುಹೋಗುವ ಎಲ್ಲರನ್ನು ಸುಲಿದುಕೊಂಡರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು.
וַיָּשִׂ֣ימוּ לוֹ֩ בַעֲלֵ֨י שְׁכֶ֜ם מְאָרְבִ֗ים עַ֚ל רָאשֵׁ֣י הֶהָרִ֔ים וַיִּגְזְל֗וּ אֵ֛ת כָּל־אֲשֶׁר־יַעֲבֹ֥ר עֲלֵיהֶ֖ם בַּדָּ֑רֶךְ וַיֻּגַּ֖ד לַאֲבִימֶֽלֶךְ׃ פ
26 ಆಗ ಏಬೆದನ ಮಗನಾದ ಗಾಳನೂ, ಅವನ ಸಹೋದರರೂ ಶೆಕೆಮಿಗೆ ದಾಟಿ ಬಂದರು. ಆದರೆ ಶೆಕೆಮಿನ ಹಿರಿಯರು ಅವನಲ್ಲಿ ಭರವಸೆಯಿಟ್ಟು,
וַיָּבֹ֞א גַּ֤עַל בֶּן־עֶ֙בֶד֙ וְאֶחָ֔יו וַיַּעַבְר֖וּ בִּשְׁכֶ֑ם וַיִּבְטְחוּ־ב֖וֹ בַּעֲלֵ֥י שְׁכֶֽם׃
27 ಹೊರಗೆ ಹೋಗಿ ತಮ್ಮ ದ್ರಾಕ್ಷಿ ಫಲಗಳನ್ನು ಕೊಯ್ದು, ಅವುಗಳನ್ನು ತುಳಿದು ಸಂತೋಷಪಟ್ಟು, ತಮ್ಮ ದೇವರ ಮನೆಯೊಳಗೆ ಹೋಗಿ, ತಿಂದು ಕುಡಿದು ಅಬೀಮೆಲೆಕನನ್ನು ಶಪಿಸಿದರು.
וַיֵּצְא֨וּ הַשָּׂדֶ֜ה וַֽיִּבְצְר֤וּ אֶת־כַּרְמֵיהֶם֙ וַֽיִּדְרְכ֔וּ וַֽיַּעֲשׂ֖וּ הִלּוּלִ֑ים וַיָּבֹ֙אוּ֙ בֵּ֣ית אֱֽלֹֽהֵיהֶ֔ם וַיֹּֽאכְלוּ֙ וַיִּשְׁתּ֔וּ וַֽיְקַלְל֖וּ אֶת־אֲבִימֶֽלֶךְ׃
28 ಆಗ ಏಬೆದನ ಮಗನಾದ ಗಾಳನು, “ನಾವು ಅವನನ್ನು ಸೇವಿಸುವ ಹಾಗೆ ಅಬೀಮೆಲೆಕನು ಯಾರು? ಶೆಕೆಮನು ಯಾರು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪ್ರಧಾನನು ಜೆಬೂಲನಲ್ಲವೋ? ಶೆಕೆಮಿನ ತಂದೆಯಾದ ಹಮೋರನ ಮನುಷ್ಯರನ್ನೇ ಸೇವಿಸಿರಿ. ಇವನನ್ನು ನಾವು ಏಕೆ ಸೇವಿಸಬೇಕು?
וַיֹּ֣אמֶר ׀ גַּ֣עַל בֶּן־עֶ֗בֶד מִֽי־אֲבִימֶ֤לֶךְ וּמִֽי־שְׁכֶם֙ כִּ֣י נַעַבְדֶ֔נּוּ הֲלֹ֥א בֶן־יְרֻבַּ֖עַל וּזְבֻ֣ל פְּקִיד֑וֹ עִבְד֗וּ אֶת־אַנְשֵׁ֤י חֲמוֹר֙ אֲבִ֣י שְׁכֶ֔ם וּמַדּ֖וּעַ נַעַבְדֶ֥נּוּ אֲנָֽחְנוּ׃
29 ಈ ಜನರನ್ನು ದೇವರು ನನ್ನ ಕೈಗೆ ಒಪ್ಪಿಸಿದರೆ ಚೆನ್ನಾಗಿತ್ತು, ಆಗ ನಾನು ಅಬೀಮೆಲೆಕನನ್ನು ತೆಗೆದುಹಾಕುತ್ತಿದ್ದೆನು. ತರುವಾಯ ಅಬೀಮೆಲೆಕನಿಗೆ, ‘ನೀನು ನಿನ್ನ ಸೈನ್ಯವನ್ನು ಹೆಚ್ಚಿಸಿಕೊಂಡು ಹೊರಟು ಬಾ,’ ಎಂದು ಹೇಳುತ್ತಿದ್ದೆನು,” ಎಂದನು.
וּמִ֨י יִתֵּ֜ן אֶת־הָעָ֤ם הַזֶּה֙ בְּיָדִ֔י וְאָסִ֖ירָה אֶת־אֲבִימֶ֑לֶךְ וַיֹּ֙אמֶר֙ לַאֲבִימֶ֔לֶךְ רַבֶּ֥ה צְבָאֲךָ֖ וָצֵֽאָה׃
30 ಆ ಪಟ್ಟಣದ ಅಧಿಪತಿಯಾದ ಜೆಬೂಲನು, ಏಬೆದನ ಮಗ ಗಾಳನು ಹೇಳಿದ ಮಾತುಗಳನ್ನು ಕೇಳಿದಾಗ ಕೋಪಗೊಂಡು,
וַיִּשְׁמַ֗ע זְבֻל֙ שַׂר־הָעִ֔יר אֶת־דִּבְרֵ֖י גַּ֣עַל בֶּן־עָ֑בֶד וַיִּ֖חַר אַפּֽוֹ׃
31 ಅವನು ಅಬೀಮೆಲೆಕನ ಬಳಿಗೆ ರಹಸ್ಯವಾಗಿ ದೂತರನ್ನು ಕಳುಹಿಸಿ, “ಏಬೆದನ ಮಗ ಗಾಳನೂ, ಅವನ ಸಹೋದರರೂ ಶೆಕೆಮಿಗೆ ಬಂದಿದ್ದಾರೆ. ಅವರು ಪಟ್ಟಣವನ್ನು ನಿನಗೆ ವಿರೋಧವಾಗಿ ಬಲಪಡಿಸುತ್ತಿದ್ದಾರೆ.
וַיִּשְׁלַ֧ח מַלְאָכִ֛ים אֶל־אֲבִימֶ֖לֶךְ בְּתָרְמָ֣ה לֵאמֹ֑ר הִנֵּה֩ גַ֨עַל בֶּן־עֶ֤בֶד וְאֶחָיו֙ בָּאִ֣ים שְׁכֶ֔מָה וְהִנָּ֛ם צָרִ֥ים אֶת־הָעִ֖יר עָלֶֽיךָ׃
32 ಆದ್ದರಿಂದ ಈಗ ನೀನೂ, ನಿನ್ನ ಸಂಗಡ ಇರುವ ಜನರೂ ಕೂಡಿ, ರಾತ್ರಿಯಲ್ಲಿ ಎದ್ದು, ಹೊಲದಲ್ಲಿ ಹೊಂಚುಹಾಕಿಕೊಂಡಿರಬೇಕು.
וְעַתָּה֙ ק֣וּם לַ֔יְלָה אַתָּ֖ה וְהָעָ֣ם אֲשֶׁר־אִתָּ֑ךְ וֶאֱרֹ֖ב בַּשָּׂדֶֽה׃
33 ಹೊತ್ತಾರೆ ಸೂರ್ಯನು ಉದಯಿಸುವಾಗ, ನೀನು ಎದ್ದು ಪಟ್ಟಣದ ಮೇಲೆ ಬೀಳಬೇಕು. ಗಾಳನೂ, ಅವನ ಸಂಗಡ ಇರುವ ಜನರೂ ನಿಮಗೆದುರಾಗಿ ಹೊರಟು ಬರುವಾಗ, ನೀನು ನಿನ್ನ ಕೈಗೆ ಸರಿಬಂದ ಹಾಗೆ ಅವನಿಗೆ ಮಾಡಬೇಕು,” ಎಂದು ಹೇಳಿದನು.
וְהָיָ֤ה בַבֹּ֙קֶר֙ כִּזְרֹ֣חַ הַשֶּׁ֔מֶשׁ תַּשְׁכִּ֖ים וּפָשַׁטְתָּ֣ עַל־הָעִ֑יר וְהִנֵּה־ה֞וּא וְהָעָ֤ם אֲשֶׁר־אִתּוֹ֙ יֹצְאִ֣ים אֵלֶ֔יךָ וְעָשִׂ֣יתָ לּ֔וֹ כַּאֲשֶׁ֖ר תִּמְצָ֥א יָדֶֽךָ׃ ס
34 ಹಾಗೆಯೇ ಅಬೀಮೆಲೆಕನೂ, ಅವನ ಸಂಗಡ ಇದ್ದ ಸಮಸ್ತ ಜನರೂ ರಾತ್ರಿಯಲ್ಲಿ ಎದ್ದು, ಶೆಕೆಮಿಗೆ ವಿರೋಧವಾಗಿ ನಾಲ್ಕು ಗುಂಪಾಗಿ ಹೊಂಚಿಕಾಯುತ್ತಿದ್ದರು.
וַיָּ֧קָם אֲבִימֶ֛לֶךְ וְכָל־הָעָ֥ם אֲשֶׁר־עִמּ֖וֹ לָ֑יְלָה וַיֶּאֶרְב֣וּ עַל־שְׁכֶ֔ם אַרְבָּעָ֖ה רָאשִֽׁים׃
35 ಏಬೆದನ ಮಗ ಗಾಳನು ಹೊರಟುಬಂದು ಪಟ್ಟಣದ ಬಾಗಿಲಿನ ದ್ವಾರದಲ್ಲಿ ನಿಂತನು. ಆಗ ಹೊಂಚುಹಾಕೊಕೊಂಡಿದ್ದ ಅಬೀಮೆಲೆಕನೂ, ಅವನ ಸಂಗಡ ಇದ್ದ ಜನರೂ ಎದ್ದು ಬಂದರು.
וַיֵּצֵא֙ גַּ֣עַל בֶּן־עֶ֔בֶד וַיַּעֲמֹ֕ד פֶּ֖תַח שַׁ֣עַר הָעִ֑יר וַיָּ֧קָם אֲבִימֶ֛לֶךְ וְהָעָ֥ם אֲשֶׁר־אִתּ֖וֹ מִן־הַמַּאְרָֽב׃
36 ಗಾಳನು ಆ ಜನರನ್ನು ಕಂಡಾಗ, “ಬೆಟ್ಟದ ಶಿಖರಗಳಿಂದ ಜನರು ಬರುತ್ತಾರೆ,” ಎಂದು ಜೆಬೂಲನಿಗೆ ಹೇಳಿದರು. ಜೆಬೂಲನು ಅವನಿಗೆ, “ನೀನು ಬೆಟ್ಟಗಳ ನೆರಳನ್ನು ಮನುಷ್ಯರಂತೆ ಕಾಣುತ್ತೀ,” ಎಂದನು.
וַיַּרְא־גַּעַל֮ אֶת־הָעָם֒ וַיֹּ֣אמֶר אֶל־זְבֻ֔ל הִנֵּה־עָ֣ם יוֹרֵ֔ד מֵרָאשֵׁ֖י הֶהָרִ֑ים וַיֹּ֤אמֶר אֵלָיו֙ זְבֻ֔ל אֵ֣ת צֵ֧ל הֶהָרִ֛ים אַתָּ֥ה רֹאֶ֖ה כָּאֲנָשִֽׁים׃ ס
37 ಗಾಳನು ತಿರುಗಿ ಅವನ ಸಂಗಡ ಮಾತನಾಡಿ, “ಇಗೋ, ಜನರು ಭೂಮಧ್ಯ ಸ್ಥಳದಿಂದ ಇಳಿದು ಬರುತ್ತಾರೆ. ಕಣಿಹೇಳುವವರ ಮರದ ಮಾರ್ಗವಾಗಿ ಇನ್ನೊಂದು ಗುಂಪು ಬರುತ್ತಿದೆ,” ಎಂದನು.
וַיֹּ֨סֶף ע֣וֹד גַּעַל֮ לְדַבֵּר֒ וַיֹּ֕אמֶר הִנֵּה־עָם֙ יֽוֹרְדִ֔ים מֵעִ֖ם טַבּ֣וּר הָאָ֑רֶץ וְרֹאשׁ־אֶחָ֣ד בָּ֔א מִדֶּ֖רֶךְ אֵל֥וֹן מְעוֹנְנִֽים׃
38 ಆಗ ಜೆಬೂಲನು ಅವನಿಗೆ, “ನಾವು ಅವನನ್ನು ಸೇವಿಸುವ ಹಾಗೆ ಅಬೀಮೆಲೆಕನು ಯಾರು, ಎಂದು ನೀನು ಹೇಳಿದ ನಿನ್ನ ಬಾಯಿ ಈಗ ಎಲ್ಲಿ? ಅದು ನೀನು ಅಲಕ್ಷ್ಯಮಾಡಿದ ಜನರಲ್ಲವೋ? ಈಗ ನೀನು ಹೊರಟು ಅವರ ಸಂಗಡ ಯುದ್ಧ ಮಾಡು,” ಎಂದನು.
וַיֹּ֨אמֶר אֵלָ֜יו זְבֻ֗ל אַיֵּ֨ה אֵפ֥וֹא פִ֙יךָ֙ אֲשֶׁ֣ר תֹּאמַ֔ר מִ֥י אֲבִימֶ֖לֶךְ כִּ֣י נַעַבְדֶ֑נּוּ הֲלֹ֨א זֶ֤ה הָעָם֙ אֲשֶׁ֣ר מָאַ֣סְתָּה בּ֔וֹ צֵא־נָ֥א עַתָּ֖ה וְהִלָּ֥חֶם בּֽוֹ׃ ס
39 ಗಾಳನು ಶೆಕೆಮಿನವರ ನಾಯಕನಾಗಿ ಹೊರಟು, ಅಬೀಮೆಲೆಕನ ಸಂಗಡ ಯುದ್ಧಮಾಡಿದನು.
וַיֵּ֣צֵא גַ֔עַל לִפְנֵ֖י בַּעֲלֵ֣י שְׁכֶ֑ם וַיִּלָּ֖חֶם בַּאֲבִימֶֽלֶךְ׃
40 ಆದರೆ ಅಬೀಮೆಲೆಕನು ಅವನನ್ನು ಹಿಂದಟ್ಟಿದಾಗ, ಗಾಳನು ಅವನ ಮುಂದೆ ಓಡಿಹೋದನು. ಬಾಗಿಲ ಹತ್ತಿರದವರೆಗೆ ಅನೇಕರು ಸಂಹಾರವಾಗಿ, ಅನೇಕರು ಗಾಯಗೊಂಡರು.
וַיִּרְדְּפֵ֣הוּ אֲבִימֶ֔לֶךְ וַיָּ֖נָס מִפָּנָ֑יו וַֽיִּפְּל֛וּ חֲלָלִ֥ים רַבִּ֖ים עַד־פֶּ֥תַח הַשָּֽׁעַר׃
41 ಆಗ ಅಬೀಮೆಲೆಕನು ಅರೂಮದಲ್ಲಿ ವಾಸಮಾಡಿದನು. ಆದರೆ ಜೆಬೂಲನು ಗಾಳನನ್ನೂ, ಅವನ ಸಹೋದರರನ್ನೂ ಶೆಕೆಮಿನಲ್ಲಿ ಇರದ ಹಾಗೆ ಹೊರಡಿಸಿಬಿಟ್ಟನು.
וַיֵּ֥שֶׁב אֲבִימֶ֖לֶךְ בָּארוּמָ֑ה וַיְגָ֧רֶשׁ זְבֻ֛ל אֶת־גַּ֥עַל וְאֶת־אֶחָ֖יו מִשֶּׁ֥בֶת בִּשְׁכֶֽם׃
42 ಮಾರನೆಯ ದಿನ ಶೆಕೆಮಿನ ಜನರು ಹೊಲಕ್ಕೆ ಹೊರಟರು. ಸೈನಿಕರು ಅದನ್ನು ಅಬೀಮೆಲೆಕನಿಗೆ ತಿಳಿಸಿದರು.
וַֽיְהִי֙ מִֽמָּחֳרָ֔ת וַיֵּצֵ֥א הָעָ֖ם הַשָּׂדֶ֑ה וַיַּגִּ֖דוּ לַאֲבִימֶֽלֶךְ׃
43 ಅವನು ಸೈನಿಕರನ್ನು ತೆಗೆದುಕೊಂಡು, ಅವರನ್ನು ಮೂರು ಗುಂಪುಗಳಾಗಿ ಮಾಡಿ, ಹೊಲದಲ್ಲಿ ಹೊಂಚಿಹಾಕಿಕೊಂಡನು. ಆಗ ಜನರು ಪಟ್ಟಣದಿಂದ ಹೊರಗೆ ಬಂದರು. ಅವನು ಅವರ ಮೇಲೆ ಎದ್ದು ಬಂದು, ಅವರನ್ನು ಹೊಡೆದನು.
וַיִּקַּ֣ח אֶת־הָעָ֗ם וַֽיֶּחֱצֵם֙ לִשְׁלֹשָׁ֣ה רָאשִׁ֔ים וַיֶּאֱרֹ֖ב בַּשָּׂדֶ֑ה וַיַּ֗רְא וְהִנֵּ֤ה הָעָם֙ יֹצֵ֣א מִן־הָעִ֔יר וַיָּ֥קָם עֲלֵיהֶ֖ם וַיַּכֵּֽם׃
44 ಅಬೀಮೆಲೆಕನೂ, ಅವನ ಸಂಗಡ ಇದ್ದ ಸೈನಿಕರ ಗುಂಪೂ ಮುಂದಕ್ಕೆ ಓಡಿ, ಪಟ್ಟಣದ ಬಾಗಿಲಿನ ಬಳಿ ನಿಂತರು. ಮಿಕ್ಕಾದ ಎರಡು ಗುಂಪಿನ ಜನರು, ಹೊಲದಲ್ಲಿರುವವರೆಲ್ಲರ ಮೇಲೆ ಬಿದ್ದು ಅವರನ್ನು ಹತಮಾಡಿದರು.
וַאֲבִימֶ֗לֶךְ וְהָרָאשִׁים֙ אֲשֶׁ֣ר עִמּ֔וֹ פָּשְׁט֕וּ וַיַּ֣עַמְד֔וּ פֶּ֖תַח שַׁ֣עַר הָעִ֑יר וּשְׁנֵ֣י הָֽרָאשִׁ֗ים פָּֽשְׁט֛וּ עַֽל־כָּל־אֲשֶׁ֥ר בַּשָּׂדֶ֖ה וַיַּכּֽוּם׃
45 ಅಬೀಮೆಲೆಕನು ಆ ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ, ಪಟ್ಟಣವನ್ನು ಹಿಡಿದು, ಅದರಲ್ಲಿದ್ದ ಜನರನ್ನು ಕೊಂದು, ಪಟ್ಟಣವನ್ನು ಕೆಡವಿಬಿಟ್ಟು, ಅದರಲ್ಲಿ ಉಪ್ಪು ಎರಚಿಬಿಟ್ಟನು.
וַאֲבִימֶ֜לֶךְ נִלְחָ֣ם בָּעִ֗יר כֹּ֚ל הַיּ֣וֹם הַה֔וּא וַיִּלְכֹּד֙ אֶת־הָעִ֔יר וְאֶת־הָעָ֥ם אֲשֶׁר־בָּ֖הּ הָרָ֑ג וַיִּתֹּץ֙ אֶת־הָעִ֔יר וַיִּזְרָעֶ֖הָ מֶֽלַח׃ פ
46 ಅದನ್ನು ಶೆಕೆಮಿನ ಗೋಪುರದಲ್ಲಿ ಜನರೆಲ್ಲರೂ ಕೇಳಿದಾಗ, ಅವರು ಬೆರೀತೆಂಬ ದೇವರ ಮನೆಯ ಭದ್ರವಾದ ಸ್ಥಳದಲ್ಲಿ ಅಡಗಿಕೊಂಡರು.
וַֽיִּשְׁמְע֔וּ כָּֽל־בַּעֲלֵ֖י מִֽגְדַּל־שְׁכֶ֑ם וַיָּבֹ֣אוּ אֶל־צְרִ֔יחַ בֵּ֖ית אֵ֥ל בְּרִֽית׃
47 ಆದರೆ ಶೆಕೆಮಿನ ಗೋಪುರದಲ್ಲಿದ್ದ ಜನರೆಲ್ಲರೂ ಅಲ್ಲಿ ಕೂಡಿದ್ದಾರೆಂದು ಅಬೀಮೆಲೆಕನಿಗೆ ಗೊತ್ತಾದಾಗ,
וַיֻּגַּ֖ד לַאֲבִימֶ֑לֶךְ כִּ֣י הִֽתְקַבְּצ֔וּ כָּֽל־בַּעֲלֵ֖י מִֽגְדַּל־שְׁכֶֽם׃
48 ಅಬೀಮೆಲೆಕನು ತನ್ನ ಸಂಗಡ ಇದ್ದ ಸೈನಿಕರೆಲ್ಲರ ಸಹಿತವಾಗಿ ಚಲ್ಮೋನ್ ಬೆಟ್ಟವನ್ನೇರಿ, ತನ್ನ ಕೈಯಲ್ಲಿ ಕೊಡಲಿಯನ್ನು ಹಿಡಿದು, ಒಂದು ಮರದ ಕೊಂಬೆಯನ್ನು ಕಡಿದು, ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು, ತನ್ನ ಕೂಡ ಇದ್ದ ಜನರಿಗೆ, “ನಾನು ಮಾಡಿದ್ದನ್ನು ನೋಡಿ ಹಾಗೆಯೇ ತೀವ್ರವಾಗಿ ಮಾಡಿರಿ,” ಎಂದನು.
וַיַּ֨עַל אֲבִימֶ֜לֶךְ הַר־צַלְמ֗וֹן הוּא֮ וְכָל־הָעָ֣ם אֲשֶׁר־אִתּוֹ֒ וַיִּקַּח֩ אֲבִימֶ֨לֶךְ אֶת־הַקַּרְדֻּמּ֜וֹת בְּיָד֗וֹ וַיִּכְרֹת֙ שׂוֹכַ֣ת עֵצִ֔ים וַיִּ֨שָּׂאֶ֔הָ וַיָּ֖שֶׂם עַל־שִׁכְמ֑וֹ וַיֹּ֜אמֶר אֶל־הָעָ֣ם אֲשֶׁר־עִמּ֗וֹ מָ֤ה רְאִיתֶם֙ עָשִׂ֔יתִי מַהֲר֖וּ עֲשׂ֥וּ כָמֽוֹנִי׃
49 ಸೈನಿಕರೆಲ್ಲರಲ್ಲಿ ಒಬ್ಬೊಬ್ಬನು ಒಂದೊಂದು ಕೊಂಬೆಯನ್ನು ಕಡಿದು, ಅಬೀಮೆಲೆಕನ ಹಿಂದೆ ಹೋಗಿ, ಅವುಗಳನ್ನು ಆ ಭದ್ರವಾದ ಸ್ಥಳಕ್ಕೆ ಹಾಕಿ, ಅದಕ್ಕೆ ಬೆಂಕಿಯನ್ನು ಹಚ್ಚಿದರು. ಆಗ ಶೆಕೆಮಿನ ಗೋಪುರದಲ್ಲಿರುವವರೆಲ್ಲರೂ ಹೆಚ್ಚು ಕಡಿಮೆ ಸಾವಿರ ಜನರು ಸತ್ತುಹೋದರು. ಅವರು ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು.
וַיִּכְרְת֨וּ גַם־כָּל ־הָעָ֜ם אִ֣ישׁ שׂוֹכֹ֗ה וַיֵּ֨לְכ֜וּ אַחֲרֵ֤י אֲבִימֶ֙לֶךְ֙ וַיָּשִׂ֣ימוּ עַֽל־הַצְּרִ֔יחַ וַיַּצִּ֧יתוּ עֲלֵיהֶ֛ם אֶֽת־הַצְּרִ֖יחַ בָּאֵ֑שׁ וַיָּמֻ֜תוּ גַּ֣ם כָּל־אַנְשֵׁ֧י מִֽגְדַּל־שְׁכֶ֛ם כְּאֶ֖לֶף אִ֥ישׁ וְאִשָּֽׁה׃ פ
50 ಆಗ ಅಬೀಮೆಲೆಕನು ತೆಬೇಚಿಗೆ ಹೋಗಿ, ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಿ, ಅದನ್ನು ಹಿಡಿದನು.
וַיֵּ֥לֶךְ אֲבִימֶ֖לֶךְ אֶל־תֵּבֵ֑ץ וַיִּ֥חַן בְּתֵבֵ֖ץ וַֽיִּלְכְּדָֽהּ׃
51 ಆದರೆ ಪಟ್ಟಣದ ಒಳಗೆ ಬಲವಾದ ಗೋಪುರ ಇತ್ತು. ಆ ಪಟ್ಟಣದಲ್ಲಿರುವ ಸಮಸ್ತ ಸ್ತ್ರೀ ಪುರುಷರು ಅಲ್ಲಿಗೆ ಓಡಿಹೋಗಿ, ಅದರಲ್ಲಿ ಹೊಕ್ಕು, ತಮ್ಮ ಹಿಂದಿನಿಂದ ಬಾಗಿಲನ್ನು ಮುಚ್ಚಿ ಗೋಪುರದ ಮೇಲೆ ಏರಿದರು.
וּמִגְדַּל־עֹז֮ הָיָ֣ה בְתוֹךְ־הָעִיר֒ וַיָּנֻ֨סוּ שָׁ֜מָּה כָּל־הָאֲנָשִׁ֣ים וְהַנָּשִׁ֗ים וְכֹל֙ בַּעֲלֵ֣י הָעִ֔יר וַֽיִּסְגְּר֖וּ בַּעֲדָ֑ם וַֽיַּעֲל֖וּ עַל־גַּ֥ג הַמִּגְדָּֽל׃
52 ಆಗ ಅಬೀಮೆಲೆಕನು ಆ ಗೋಪುರಕ್ಕೆ ಬಂದು, ಅದರ ವಿರುದ್ಧ ಯುದ್ಧಮಾಡಿ, ಗೋಪುರದ ಬಾಗಿಲನ್ನು ಸುಟ್ಟು ಬಿಡುವುದಕ್ಕೆ ಅದರ ಬಳಿಗೆ ಬಂದನು.
וַיָּבֹ֤א אֲבִימֶ֙לֶךְ֙ עַד־הַמִּגְדָּ֔ל וַיִּלָּ֖חֶם בּ֑וֹ וַיִּגַּ֛שׁ עַד־פֶּ֥תַח הַמִּגְדָּ֖ל לְשָׂרְפ֥וֹ בָאֵֽשׁ׃
53 ಆದರೆ ಒಬ್ಬ ಸ್ತ್ರೀಯು ಒಂದು ಬೀಸುವ ಕಲ್ಲಿನ ತುಂಡನ್ನು ಅಬೀಮೆಲೆಕನ ತಲೆಯ ಮೇಲೆ ಹಾಕಿದಳು. ಅದರಿಂದ ಅವನ ತಲೆಯನ್ನು ಒಡೆದು ಹಾಕಿದಳು.
וַתַּשְׁלֵ֞ךְ אִשָּׁ֥ה אַחַ֛ת פֶּ֥לַח רֶ֖כֶב עַל־רֹ֣אשׁ אֲבִימֶ֑לֶךְ וַתָּ֖רִץ אֶת־גֻּלְגָּלְתּֽוֹ׃
54 ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕನನ್ನು ಕರೆದು ಅವನಿಗೆ, “ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಖಡ್ಗದಿಂದ ಇರಿದು, ನನ್ನನ್ನು ಕೊಲ್ಲು,” ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು. ಅವನು ಮರಣಹೊಂದಿದನು.
וַיִּקְרָ֨א מְהֵרָ֜ה אֶל־הַנַּ֣עַר ׀ נֹשֵׂ֣א כֵלָ֗יו וַיֹּ֤אמֶר לוֹ֙ שְׁלֹ֤ף חַרְבְּךָ֙ וּמ֣וֹתְתֵ֔נִי פֶּן־יֹ֥אמְרוּ לִ֖י אִשָּׁ֣ה הֲרָגָ֑תְהוּ וַיִּדְקְרֵ֥הוּ נַעֲר֖וֹ וַיָּמֹֽת׃
55 ಅಬೀಮೆಲೆಕನು ಮರಣಹೊಂದಿದ್ದನ್ನು ಇಸ್ರಾಯೇಲರು ಕಂಡಾಗ, ಅವರು ತಮ್ಮ ತಮ್ಮ ಮನೆಗಳಿಗೆ ಹೋದರು.
וַיִּרְא֥וּ אִֽישׁ־יִשְׂרָאֵ֖ל כִּ֣י מֵ֣ת אֲבִימֶ֑לֶךְ וַיֵּלְכ֖וּ אִ֥ישׁ לִמְקֹמֽוֹ׃
56 ಈ ಪ್ರಕಾರ ಅಬೀಮೆಲೆಕನು ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿದ್ದರಿಂದ, ತನ್ನ ತಂದೆಗೆ ಮಾಡಿದ ಕೇಡನ್ನು ದೇವರು ಅವನ ಮೇಲೆ ತಿರುಗಿ ಬರಮಾಡಿದರು.
וַיָּ֣שֶׁב אֱלֹהִ֔ים אֵ֖ת רָעַ֣ת אֲבִימֶ֑לֶךְ אֲשֶׁ֤ר עָשָׂה֙ לְאָבִ֔יו לַהֲרֹ֖ג אֶת־שִׁבְעִ֥ים אֶחָֽיו׃
57 ಇದಲ್ಲದೆ ಶೆಕೆಮಿನವರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದರು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂದಿತು.
וְאֵ֗ת כָּל־רָעַת֙ אַנְשֵׁ֣י שְׁכֶ֔ם הֵשִׁ֥יב אֱלֹהִ֖ים בְּרֹאשָׁ֑ם וַתָּבֹ֣א אֲלֵיהֶ֔ם קִֽלֲלַ֖ת יוֹתָ֥ם בֶּן־יְרֻבָּֽעַל׃ פ

< ನ್ಯಾಯಸ್ಥಾಪಕರು 9 >