< ನ್ಯಾಯಸ್ಥಾಪಕರು 1 >
1 ಯೆಹೋಶುವನು ಮರಣ ಹೊಂದಿದ ಬಳಿಕ ಇಸ್ರಾಯೇಲರು, “ಕಾನಾನ್ಯರೊಡನೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವ ದೇವರನ್ನು ಕೇಳಿದರು.
И бысть по скончании Иисусове, и вопрошаху сынове Израилевы Господа, глаголюще: кто взыдет нам к Хананею воевода, ратовати на них?
2 ಅದಕ್ಕೆ ಯೆಹೋವ ದೇವರು, “ಯೆಹೂದ ಗೋತ್ರದವರು ಹೋಗಲಿ; ನಾನು ಆ ದೇಶವನ್ನು ಇವರ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ,” ಎಂದರು.
И рече Господь: Иуда взыдет: се, дах землю в руку его.
3 ಯೆಹೂದ ಗೋತ್ರದವರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ, “ನೀವು ನಮ್ಮ ಸಂಗಡ ನಮ್ಮ ಪ್ರಾಂತಕ್ಕೆ ಬನ್ನಿರಿ, ಕಾನಾನ್ಯರ ಮೇಲೆ ಯುದ್ಧ ಮಾಡೋಣ. ಹಾಗೆಯೇ ನಾವು ನಿಮ್ಮ ಸಂಗಡ ನಿಮ್ಮ ಪ್ರಾಂತಕ್ಕೆ ಬರುತ್ತೇವೆ,” ಎಂದರು. ಹೀಗೆ ಸಿಮೆಯೋನ್ಯರು ಅವರ ಸಂಗಡ ಹೋದರು.
И рече Иуда к Симеону брату своему: взыди со мною в жребий мой, и ополчимся на Хананеа: и пойду и аз с тобою в жребий твой. И пойде с ним Симеон.
4 ಯೆಹೂದ ಗೋತ್ರದವರು ಹೋದಾಗ, ಯೆಹೋವ ದೇವರು ಕಾನಾನ್ಯರನ್ನೂ ಪೆರಿಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಬೆಜೆಕಿನಲ್ಲಿ ಹತ್ತು ಸಾವಿರ ಜನರನ್ನು ಕೊಂದರು.
И взыде Иуда, и предаде Господь Хананеа и Ферезеа в руце их: и избиша их в Везеце до десяти тысящ мужей.
5 ಅವರು ಬೆಜೆಕಿನಲ್ಲಿ ಅರಸನಾದ ಅದೋನೀಬೆಜೆಕನನ್ನು ಸಂಧಿಸಿ, ಅವನ ವಿರೋಧವಾಗಿ ಯುದ್ಧಮಾಡಿ, ಕಾನಾನ್ಯರನ್ನೂ ಪೆರಿಜೀಯರನ್ನೂ ಕೊಂದುಹಾಕಿದರು.
И обретоша Адонивезека в Везеце, и секошася с ним: и избиша Хананеа и Ферезеа.
6 ಆದರೆ ಅದೋನೀಬೆಜೆಕನು ಓಡಿ ಹೋದದ್ದರಿಂದ, ಅವನನ್ನು ಹಿಂದಟ್ಟಿ ಹಿಡಿದು, ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.
И побеже Адонивезек: и гнаша вслед его, и яша его, и отсекоша краи рук его и краи ног его.
7 ಆಗ ಅದೋನೀಬೆಜೆಕನು, “ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು, ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ, ದೇವರು ನನಗೆ ಮಾಡಿದ್ದಾರೆ,” ಎಂದನು. ಅವರು ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಲ್ಲಿ ಅವನು ಮರಣಹೊಂದಿದನು.
И рече Адонивезек: седмидесяти царем обсекох краи рук их и краи ног их, и быша собирающе (от крупиц) под трапезою моею: якоже убо сотворих, тако воздаде ми Бог. И приведоша его во Иерусалим, и умре тамо.
8 ಯೆಹೂದ ಗೋತ್ರದವರು ಯೆರೂಸಲೇಮಿನವರ ಮೇಲೆ ಯುದ್ಧಮಾಡಿ, ಅಲ್ಲಿದ್ದವರನ್ನು ಖಡ್ಗದಿಂದ ಸಂಹರಿಸಿ, ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
И воеваша сынове Иудины на Иерусалим, и взяша его, и поразиша его острием меча, и град сожгоша огнем.
9 ತರುವಾಯ ಯೆಹೂದ ಗೋತ್ರದವರು ಬೆಟ್ಟದಲ್ಲಿಯೂ ದಕ್ಷಿಣದಲ್ಲಿಯೂ ತಗ್ಗಿನಲ್ಲಿಯೂ ವಾಸಿಸಿದ ಕಾನಾನ್ಯರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೋದರು.
И по сих снидоша сынове Иудины воевати на Хананеа живущаго в горней к югу и в равней.
10 ಯೆಹೂದ ಗೋತ್ರದವರು ಪೂರ್ವದಲ್ಲಿ ಕಿರ್ಯತ್ ಅರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್, ತಲ್ಮೈರನ್ನು ಸೋಲಿಸಿದರು.
И пойде Иуда на Хананеа живущаго в Хевроне. И изыде Хеврон со страны: имя же бе Хеврону прежде Кариафарвок-Сефер: и убиша Сесина и Ахимана и Фолмиа, роды Енаковы.
11 ಅಲ್ಲಿಂದ ದೆಬೀರಿನ ನಿವಾಸಿಗಳ ವಿರೋಧವಾಗಿ ಹೋದರು. ದೆಬೀರಿಗೆ ಮೊದಲು ಕಿರ್ಯತ್ ಸೇಫೆರ್ ಎಂಬ ಹೆಸರಿತ್ತು.
И взыдоша оттуду к живущым в Давире: имя же Давиру бе прежде Кариафсефер, Град Писмен.
12 ಕಾಲೇಬನು, “ಕಿರ್ಯತ್ ಸೇಫೆರ ಮೇಲೆ ದಾಳಿಮಾಡಿ ತೆಗೆದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ,” ಎಂದು ಹೇಳಿದ್ದನು.
И рече Халев: иже аще поразит Град Писмен и возмет его, дам ему Асхань дщерь мою в жену.
13 ಆಗ ಕಾಲೇಬನ ತಮ್ಮನಾದ ಕೆನಾಜನ ಮಗನಾದ ಒತ್ನಿಯೇಲನು ಅದನ್ನು ಹಿಡಿದನು. ಅನಂತರ ಕಾಲೇಬನು ತನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಅವನಿಗೆ ಮದುವೆ ಮಾಡಿಕೊಟ್ಟನು.
И взя его Гофониил сын Кенеза брата Халевова юнейший, и даде ему Халев Асхань дщерь свою в жену.
14 ಒಂದು ದಿನ ಅಕ್ಷಾ ಒತ್ನಿಯೇಲನೊಂದಿಗೆ ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಇನ್ನೂ ಒಂದು ಹೊಲವನ್ನು ಕೇಳುವುದಕ್ಕೆ ಅವನನ್ನು ಪ್ರೇರೇಪಿಸಿ, ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳಿಗೆ, “ನಿನಗೆ ಏನು ಬೇಕು?” ಎಂದನು.
И бысть внегда отходити ей, и подвиже ю Гофониил просити у отца своего села, и ропташе (седящи) на осляти, и вопияше со осляти: на землю южную отдал мя еси. И рече ей Халев: что ти есть?
15 ಅದಕ್ಕೆ ಅವಳು ಅವನಿಗೆ, “ನನಗೆ ಒಂದು ಸಹಾಯಮಾಡಬೇಕು. ಮೊದಲು ದಕ್ಷಿಣ ಹೊಲವನ್ನು ನೀನು ನನಗೆ ಕೊಟ್ಟೆ; ನೀರಿನ ಬುಗ್ಗೆಗಳನ್ನು ಸಹ ನನಗೆ ಕೊಡು,” ಎಂದಳು. ಆಗ ಕಾಲೇಬನು ಅವಳಿಗೆ ಮೇಲಿನ ಹಾಗೂ ಕೆಳಗಿನ ನೀರಿನ ಬುಗ್ಗೆಗಳನ್ನು ಕೊಟ್ಟನು.
И рече ему Асхань: даждь ми благословение: яко на землю южную отдал еси мя, да даси мне и исходища водная. И даде ей Халев по сердцу ея исходища вышних и исходища нижних.
16 ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು, ಯೆಹೂದ ಗೋತ್ರದವರ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೆಹೂದದ ಗೋತ್ರದವರ ಮರುಭೂಮಿಗೆ ಬಂದು, ಅಲ್ಲಿನ ಜನರ ಸಂಗಡ ವಾಸವಾಗಿದ್ದರು.
И сынове Иофора Кинеева, ужика Моисеова, взыдоша от града Финическа к сыном Иудиным в пустыню сущую на юг Иуды ко исходу Аредову, и поидоша, и вселишася с людьми.
17 ಯೆಹೂದ ಗೋತ್ರದವರು ತನ್ನ ಸಹೋದರರಾದ ಸಿಮೆಯೋನ್ಯರ ಸಂಗಡ ಹೊರಟು, ಚೆಫೆತ್‌ನಲ್ಲಿ ವಾಸವಾಗಿರುವ ಕಾನಾನ್ಯರ ಮೇಲೆ ದಾಳಿಮಾಡಿ, ಆ ಪಟ್ಟಣವನ್ನು ನಿರ್ಮೂಲ ಮಾಡಿದರು. ಆ ಪಟ್ಟಣವು ಹೊರ್ಮಾ ಎಂದು ಕರೆಯಲಾಗಿತ್ತು.
И пойде Иуда с Симеоном братом своим, и изби Хананеа живущаго в Сефефе, и потребиша его: и прозваша имя граду Потребление.
18 ಇದಲ್ಲದೆ ಯೆಹೂದ ಗೋತ್ರದವರು ಗಾಜಾವನ್ನೂ ಅದರ ಮೇರೆಯನ್ನೂ; ಅಷ್ಕೆಲೋನನ್ನೂ, ಅದರ ಮೇರೆಯನ್ನೂ; ಎಕ್ರೋನನ್ನೂ, ಅದರ ಮೇರೆಯನ್ನೂ ತೆಗೆದುಕೊಂಡರು.
И взя Иуда Газу и предел ея, и Аскалона и предел его, и Аккарон и предел его, и Азот и окрестная его.
19 ಯೆಹೋವ ದೇವರು ಯೆಹೂದ ಗೋತ್ರದವರ ಸಂಗಡ ಇದ್ದುದರಿಂದ, ಅವರು ಬೆಟ್ಟದ ಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿಣದ ರಥಗಳಿದ್ದುದರಿಂದ, ಅವರು ಅವರನ್ನು ಹೊರಡಿಸಲಾರದೆ ಹೋದರು.
И бяше Господь со Иудою. И взя гору, яко не возмогоша потребити живущих во юдоли, зане Рихав противоста им, и колесницы железныя бяху там.
20 ಮೋಶೆಯು ಹೇಳಿದ ಪ್ರಕಾರ, ಅವರು ಹೆಬ್ರೋನನ್ನು ಕಾಲೇಬನಿಗೆ ಕೊಟ್ಟರು. ಅವರು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟರು.
И даша Халеву Хеврон, якоже глагола Моисей: и наследствова тамо три грады сынов Енаковых, и изгна оттуду три сыны Енаковы.
21 ಬೆನ್ಯಾಮೀನ್ಯರಿಗೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಯೆಬೂಸಿಯರು ಈ ದಿನದವರೆಗೂ ಬೆನ್ಯಾಮೀನರ ಸಂಗಡ ವಾಸವಾಗಿದ್ದಾರೆ.
И Иевусеа живущаго во Иерусалиме не изгнаша сынове Вениаминовы, и живяше Иевусей с сынми Вениамини во Иерусалиме даже до сего дне.
22 ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಏರಿಹೋದರು. ಯೆಹೋವ ದೇವರು ಅವರ ಸಂಗಡ ಇದ್ದರು.
И взыдоша сынове Иосифли и сии в Вефиль: и Господь бяше с ними.
23 ಆದರೆ ಮೊದಲು ಲೂಜ್ ಎಂದು ಹೆಸರಿದ್ದ ಬೇತೇಲೆಂಬ ಪಟ್ಟಣವನ್ನು ಸಂಚರಿಸಿ ನೋಡಲು, ಯೋಸೇಫನ ಮನೆಯವರನ್ನು ಕಳುಹಿಸಲಾಯಿತು.
И ополчишася, и соглядаша (сынове Иосифовы) Вефиль: имя же бе прежде граду Луза.
24 ಗೂಢಚಾರರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು. ನಾವು ನಿನಗೆ ಕರುಣೆ ತೋರಿಸುವೆವು,” ಎಂದರು.
И видеша стрегущии мужа исходящаго из града, и яша его и рекоша ему: покажи нам вход во град, и сотворим с тобою милость.
25 ಅವನು ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ಅವರಿಗೆ ತೋರಿಸಿದಾಗ, ಅವರು ಬಂದು ಪಟ್ಟಣವನ್ನು ಖಡ್ಗದಿಂದ ಹೊಡೆದು, ಆ ಮನುಷ್ಯನನ್ನೂ ಅವನ ಸಮಸ್ತ ಕುಟುಂಬವನ್ನೂ ಕಳುಹಿಸಿಬಿಟ್ಟರು.
И показа им вход градный: и поразиша град острием меча, мужа же и сродство его отпустиша.
26 ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ, ಅಲ್ಲಿ ಒಂದು ಪಟ್ಟಣವನ್ನು ಕಟ್ಟಿ, ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಈವರೆಗೂ ಅದಕ್ಕೆ ಅದೇ ಹೆಸರಿದೆ.
И отиде муж в землю Хеттиим, и созда тамо град, и прозва имя ему Луза: сие имя ему даже до дне сего.
27 ಮನಸ್ಸೆಯ ಗೋತ್ರದವರು ಬೇತ್ ಷೆಯಾನರನ್ನೂ, ಅವರ ಊರುಗಳವರನ್ನೂ; ತಾನಕದವರನ್ನೂ, ಅವರ ಊರುಗಳವರನ್ನೂ; ದೋರಿನವರನ್ನೂ, ಅವರ ಊರುಗಳವರನ್ನೂ; ಇಬ್ಲೆಯಾಮಿನವರನ್ನೂ, ಅವರ ಊರುಗಳವರನ್ನೂ, ಮೆಗಿದ್ದೋನಿನವರನ್ನೂ, ಅವರ ಊರುಗಳವರನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಆ ದೇಶದಲ್ಲಿ ವಾಸಿಸಬೇಕೆಂದಿದ್ದರು.
И не разори Манассий Вефсана, иже есть Скифский град, ниже дщерей его, ниже окрестных (предел) его, ниже Фанаха, ниже дщерей его, ниже живущих в Доре, ниже дщерей его, ниже живущих во Иевламе, ниже окрестных его, ниже дщерей его, и живущих в Магеддоне, ниже окрестных его и дщерей его. И нача Хананей жити на земли сей.
28 ಇಸ್ರಾಯೇಲರು ಬಲಗೊಂಡಾಗ, ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ, ಅವರನ್ನು ದಾಸತ್ವಕ್ಕೆ ಕಾನಾನ್ಯರಿಗೆ ನೇಮಕ ಮಾಡಿದರು.
И бысть егда укрепися Израиль, и сотвори Хананеа данника: изгнанием же не изгна его.
29 ಇದಲ್ಲದೆ ಎಫ್ರಾಯೀಮ್ಯರು ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಕಾನಾನ್ಯರು ಗೆಜೆರಿನಲ್ಲಿ ಅವರ ಸಂಗಡ ವಾಸಿಸಿದ್ದರು.
И Ефрем не изгна Хананеа живущаго в Газере: и живяше Хананей среде его в Газере, и бысть ему в данника.
30 ಜೆಬುಲೂನ್ಯರು ಕಿಟ್ರೋನಿನ ವಾಸಿಗಳನ್ನೂ ನಹಲೋಲಿನ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಅವರಲ್ಲಿ ದಾಸರಾಗಿ ವಾಸಮಾಡುವವರಾದರು.
И Завулон не изгна живущих в Хевроне и живущих во Аммане: и вселися Хананей посреде их и бысть ему данник.
31 ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ; ಸೀದೋನಿನ ವಾಸಿಗಳನ್ನೂ; ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ.
И Асир не изгна живущих во Акхоре, (и бысть ему данник, ) ни живущих в Доре, ни живущих в Сидоне, ни живущих в Далафе и во Ахазиве, и во Елве и во Афеке и в Роове.
32 ಆದರೆ ಆಶೇರ್ಯರು ಅವರನ್ನು ಹೊರಡಿಸಿಬಿಡದೆ, ಆ ದೇಶದ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸವಾಗಿದ್ದರು.
И вселися Асир посреде Хананеа живущаго на земли (той), зане не возможе изгнати его.
33 ನಫ್ತಾಲಿ ಗೋತ್ರದವರು ಬೇತ್ ಷೆಮೆಷ್ ವಾಸಿಗಳನ್ನೂ ಹೊರಡಿಸಿಬಿಡದೆ, ಆ ದೇಶವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್ ಷೆಮೆಷ್, ಬೇತ್ ಅನಾತ್ ಪಟ್ಟಣ ವಾಸಿಗಳು ಅವರಿಗೆ ದಾಸರಾದರು.
И Неффалим не изгна живущих в Вефсамисе, ниже живущих в Вефанахе: и вселися Неффалим среде Хананеа живущаго на земли (сей): живущии же в Вефсамисе и в Вефанахе быша ему данницы.
34 ಅಮೋರಿಯರು ದಾನ್ಯರನ್ನು ತಗ್ಗಿನಲ್ಲಿ ಇಳಿಯಗೊಡದೆ, ಬೆಟ್ಟಗಳಿಗೆ ಓಡಿಸಿಬಿಟ್ಟರು
И утесни Аморрей сыны Дановы в горе, яко не попусти им низходити во юдоль.
35 ಹೀಗೆ ಅಮೋರಿಯರು ಹರ್‌ಹೆರೆಸ್ ಬೆಟ್ಟದಲ್ಲಿಯೂ ಅಯ್ಯಾಲೋನಿನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಗೋತ್ರದವರ ಕೈ ಬಲ ಹೆಚ್ಚಾದದ್ದರಿಂದ ಅವರಿಗೆ ದಾಸರಾದರು.
И нача Аморрей жити в горе Чрепней, идеже медведи и лисицы, в Мирсиноне и в Салавине: и отяготе рука дому Иосифля на Аморреа, и бысть ему данник.
36 ಹೀಗೆ ಅಮೋರಿಯರ ಮೇರೆಯು ಅಕ್ರಬ್ಬೀಮನ್ನು ಹಿಡಿದು ಸೆಲ ಬಂಡೆಯಿಂದ ಮೇಲಕ್ಕೆ ವಿಸ್ತರಿಸಿಕೊಂಡಿದೆ.
И предел Аморрейский идумей от восхода Акравиня, от Камене и выше.