< ಪ್ರಲಾಪಗಳು 4 >

1 ಬಂಗಾರವು ಹೇಗೆ ಮಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧಸ್ಥಳದ ಕಲ್ಲುಗಳೂ ಬೀದಿಯ ಬದಿಯಲ್ಲಿ ಚೆಲ್ಲಾಪಿಲ್ಲಿಯಾಗಿವೆ.
אֵיכָה֙ יוּעַ֣ם זָהָ֔ב יִשְׁנֶ֖א הַכֶּ֣תֶם הַטּ֑וֹב תִּשְׁתַּפֵּ֙כְנָה֙ אַבְנֵי־קֹ֔דֶשׁ בְּרֹ֖אשׁ כָּל־חוּצֽוֹת׃ ס
2 ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಪುತ್ರರು, ಈಗ ಕುಂಬಾರನ ಕೈಕೆಲಸದ ಮಣ್ಣಿನ ಮಡಕೆಯಂತೆ ತಿರಸ್ಕೃತರಾಗಿದ್ದಾರಲ್ಲಾ!
בְּנֵ֤י צִיּוֹן֙ הַיְקָרִ֔ים הַמְסֻלָּאִ֖ים בַּפָּ֑ז אֵיכָ֤ה נֶחְשְׁבוּ֙ לְנִבְלֵי־חֶ֔רֶשׂ מַעֲשֵׂ֖ה יְדֵ֥י יוֹצֵֽר׃ ס
3 ನರಿಗಳೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಹಾಲು ಕುಡಿಸುತ್ತವೆ. ಆದರೆ ನನ್ನ ಜನರು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿದ್ದಾರೆ.
גַּם־תַּנִּים֙ חָ֣לְצוּ שַׁ֔ד הֵינִ֖יקוּ גּוּרֵיהֶ֑ן בַּת־עַמִּ֣י לְאַכְזָ֔ר כִּי כַּיְעֵנִ֖ים בַּמִּדְבָּֽר׃ ס
4 ಹಸುಳೆಗಳ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ. ಎಳೆಯ ಕೂಸುಗಳು ಅನ್ನ ಕೇಳುತ್ತವೆ. ಆದರೆ ಅವರಿಗೆ ಯಾರೂ ಅದನ್ನು ಕೊಡುವುದಿಲ್ಲ.
דָּבַ֨ק לְשׁ֥וֹן יוֹנֵ֛ק אֶל־חכּ֖וֹ בַּצָּמָ֑א עֽוֹלָלִים֙ שָׁ֣אֲלוּ לֶ֔חֶם פֹּרֵ֖שׂ אֵ֥ין לָהֶֽם׃ ס
5 ರುಚಿಯಾದವುಗಳನ್ನು ಒಮ್ಮೆ ತಿಂದವರು ಬೀದಿಗಳಲ್ಲಿ ಹಾಳಾಗಿದ್ದಾರೆ. ಚಿಕ್ಕಂದಿನಿಂದಲೂ ಶ್ರೇಷ್ಠ ವಸ್ತ್ರವನ್ನು ತೊಡುತ್ತಿದ್ದವರು, ತಿಪ್ಪೆಗಳಲ್ಲಿ ಬಿದ್ದುಕೊಂಡಿದ್ದಾರೆ.
הָאֹֽכְלִים֙ לְמַ֣עֲדַנִּ֔ים נָשַׁ֖מּוּ בַּחוּצ֑וֹת הָאֱמֻנִים֙ עֲלֵ֣י תוֹלָ֔ע חִבְּק֖וּ אַשְׁפַּתּֽוֹת׃ ס
6 ನನ್ನ ಜನರ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು. ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲಾಯಿತು ಮತ್ತು ಅವಳಿಗೆ ಸಹಾಯಮಾಡಲು ಯಾವ ಕೈಗಳೂ ಇರಲಿಲ್ಲ.
וַיִּגְדַּל֙ עֲוֹ֣ן בַּת־עַמִּ֔י מֵֽחַטַּ֖את סְדֹ֑ם הַֽהֲפוּכָ֣ה כְמוֹ־רָ֔גַע וְלֹא־חָ֥לוּ בָ֖הּ יָדָֽיִם׃ ס
7 ಅವಳ ರಾಜಕುಮಾರರು ಹಿಮಕ್ಕಿಂತಲೂ ಪ್ರಕಾಶಮಾನವಾಗಿದ್ದರು. ಹಾಲಿಗಿಂತಲೂ ಬೆಳ್ಳಗಿದ್ದರು. ಅವರು ಮೈಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು. ಅವರ ಹೊಳಪು ಇಂದ್ರನೀಲ ಮಣಿಯ ಹಾಗಿತ್ತು.
זַכּ֤וּ נְזִירֶ֙יהָ֙ מִשֶּׁ֔לֶג צַח֖וּ מֵחָלָ֑ב אָ֤דְמוּ עֶ֙צֶם֙ מִפְּנִינִ֔ים סַפִּ֖יר גִּזְרָתָֽם׃ ס
8 ಆದರೆ ಈಗ ಅವರ ರೂಪವು ಕಲ್ಲಿದ್ದಲಿನಂತೆ ಕಪ್ಪಾಗಿದೆ. ಬೀದಿಗಳಲ್ಲಿ ಅವರು ಯಾರೆಂಬುದು ತಿಳಿಯಲಿಲ್ಲ. ಅವರ ಚರ್ಮವು ಅವರ ಎಲುಬುಗಳಿಗೆ ಹತ್ತಿಕೊಂಡಿದೆ. ಅದು ಒಣಗಿ ಕಡ್ಡಿಯ ಹಾಗೆ ಆಗಿದೆ.
חָשַׁ֤ךְ מִשְּׁחוֹר֙ תָּֽאֳרָ֔ם לֹ֥א נִכְּר֖וּ בַּחוּצ֑וֹת צָפַ֤ד עוֹרָם֙ עַל־עַצְמָ֔ם יָבֵ֖שׁ הָיָ֥ה כָעֵֽץ׃ ס
9 ಖಡ್ಗದಿಂದ ಹತರಾದವರು ಹಸಿವೆಯಿಂದ ಹತರಾದವರಿಗಿಂತಲೂ ಲೇಸು. ಏಕೆಂದರೆ, ಇವರು ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದು, ಕ್ಷಯಿಸಿ ಹೋದರು.
טוֹבִ֤ים הָיוּ֙ חַלְלֵי־חֶ֔רֶב מֵֽחַלְלֵ֖י רָעָ֑ב שֶׁ֣הֵ֤ם יָז֙וּבוּ֙ מְדֻקָּרִ֔ים מִתְּנוּבֹ֖ת שָׂדָֽי׃ ס
10 ಕನಿಕರ ತುಂಬಿದ ಸ್ತ್ರೀಯರ ಕೈಗಳು ತಮ್ಮ ಸ್ವಂತ ಮಕ್ಕಳನ್ನೇ ಬೇಯಿಸಿದವು. ಇವರು ನನ್ನ ಜನರ ನಾಶದಲ್ಲಿ ಅವರಿಗೆ ಆಹಾರವಾದರು.
יְדֵ֗י נָשִׁים֙ רַחֲמָ֣נִיּ֔וֹת בִּשְּׁל֖וּ יַלְדֵיהֶ֑ן הָי֤וּ לְבָרוֹת֙ לָ֔מוֹ בְּשֶׁ֖בֶר בַּת־עַמִּֽי׃ ס
11 ಯೆಹೋವ ದೇವರು ತಮ್ಮ ರೋಷವನ್ನು ತೀರಿಸಿದ್ದಾರೆ. ಅವರು ತಮ್ಮ ಉಗ್ರವಾದ ಕೋಪವನ್ನು ಸುರಿದಿದ್ದಾರೆ. ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.
כִּלָּ֤ה יְהוָה֙ אֶת־חֲמָת֔וֹ שָׁפַ֖ךְ חֲר֣וֹן אַפּ֑וֹ וַיַּצֶּת־אֵ֣שׁ בְּצִיּ֔וֹן וַתֹּ֖אכַל יְסוֹדֹתֶֽיהָ׃ ס
12 ಭೂರಾಜರೂ, ವಿರೋಧಿಯೂ, ಶತ್ರುವೂ ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.
לֹ֤א הֶאֱמִ֙ינוּ֙ מַלְכֵי־אֶ֔רֶץ כֹּ֖ל יֹשְׁבֵ֣י תֵבֵ֑ל כִּ֤י יָבֹא֙ צַ֣ר וְאוֹיֵ֔ב בְּשַׁעֲרֵ֖י יְרוּשָׁלִָֽם׃ ס
13 ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ, ಅವಳ ಯಾಜಕರ ಅಕ್ರಮಗಳಿಗೋಸ್ಕರವೂ ಹೀಗಾಯಿತು. ಏಕೆಂದರೆ ಇವರು ನೀತಿವಂತರ ರಕ್ತವನ್ನು ಅವರ ಮಧ್ಯದಲ್ಲಿ ಚೆಲ್ಲಿದ್ದರು.
מֵֽחַטֹּ֣את נְבִיאֶ֔יהָ עֲוֹנ֖וֹת כֹּהֲנֶ֑יהָ הַשֹּׁפְכִ֥ים בְּקִרְבָּ֖הּ דַּ֥ם צַדִּיקִֽים׃ ס
14 ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು. ಅವರು ರಕ್ತದಿಂದ ತಮ್ಮನ್ನು ತಾವೇ ಕಲುಷಿತಗೊಳಿಸಿಕೊಂಡರು. ಆದ್ದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೇ ಹೋದರು.
נָע֤וּ עִוְרִים֙ בַּֽחוּצ֔וֹת נְגֹֽאֲל֖וּ בַּדָּ֑ם בְּלֹ֣א יֽוּכְל֔וּ יִגְּע֖וּ בִּלְבֻשֵׁיהֶֽם׃ ס
15 ಅವರು ಜನರಿಗೆ, ನೀವು ದೂರ ಹೋಗಿರಿ, ನೀವು ಅಶುದ್ಧವಾಗಿದ್ದೀರಿ; ದೂರ ಹೋಗಿರಿ, ದೂರ ಹೋಗಿರಿ, ಮುಟ್ಟಬೇಡಿರಿ, ಎಂದು ಕೂಗಿಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರುವಾಗ, ಅವರು ಇನ್ನು ಮೇಲೆ ಅಲ್ಲಿ ವಾಸಮಾಡುವುದಿಲ್ಲ, ಎಂದು ಬೇರೆ ಜನಾಂಗಗಳೊಳಗೆ ಹೇಳಿದರು.
ס֣וּרוּ טָמֵ֞א קָ֣רְאוּ לָ֗מוֹ ס֤וּרוּ ס֙וּרוּ֙ אַל־תִּגָּ֔עוּ כִּ֥י נָצ֖וּ גַּם־נָ֑עוּ אָֽמְרוּ֙ בַּגּוֹיִ֔ם לֹ֥א יוֹסִ֖יפוּ לָגֽוּר׃ ס
16 ಯೆಹೋವ ದೇವರ ಕೋಪವು ಅವರನ್ನು ಚದುರಿಸಿತು. ಅವರು ಇನ್ನು ಅವರನ್ನು ಲಕ್ಷಿಸುವುದಿಲ್ಲ. ಅವರು ಯಾಜಕರನ್ನು ಗೌರವಿಸಲಿಲ್ಲ. ಅವರು ಹಿರಿಯರಿಗೆ ದಯೆ ತೋರಿಸಲಿಲ್ಲ.
פְּנֵ֤י יְהוָה֙ חִלְּקָ֔ם לֹ֥א יוֹסִ֖יף לְהַבִּיטָ֑ם פְּנֵ֤י כֹהֲנִים֙ לֹ֣א נָשָׂ֔אוּ וּזְקֵנִ֖ים לֹ֥א חָנָֽנוּ׃ ס
17 ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು. ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.
עוֹדֵ֙ינוּ֙ תִּכְלֶ֣ינָה עֵינֵ֔ינוּ אֶל־עֶזְרָתֵ֖נוּ הָ֑בֶל בְּצִפִּיָּתֵ֣נוּ צִפִּ֔ינוּ אֶל־גּ֖וֹי לֹ֥א יוֹשִֽׁעַ׃ ס
18 ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಶತ್ರುಗಳು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ. ನಮ್ಮ ಅಂತ್ಯವು ಸಮೀಪಿಸಿತು, ನಮ್ಮ ದಿನಗಳು ತೀರಿದವು. ಏಕೆಂದರೆ ನಮ್ಮ ಅಂತ್ಯವು ಬಂದಿತು.
צָד֣וּ צְעָדֵ֔ינוּ מִלֶּ֖כֶת בִּרְחֹבֹתֵ֑ינוּ קָרַ֥ב קִצֵּ֛ינוּ מָלְא֥וּ יָמֵ֖ינוּ כִּי־בָ֥א קִצֵּֽינוּ׃ ס
19 ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರವಾಗಿದ್ದಾರೆ. ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ, ಅರಣ್ಯದಲ್ಲಿ ಹೊಂಚು ಹಾಕಿದರು.
קַלִּ֤ים הָיוּ֙ רֹדְפֵ֔ינוּ מִנִּשְׁרֵ֖י שָׁמָ֑יִם עַל־הֶהָרִ֣ים דְּלָקֻ֔נוּ בַּמִּדְבָּ֖ר אָ֥רְבוּ לָֽנוּ׃ ס
20 ಯಾರ ವಿಷಯವಾಗಿ ನಾವು ಅವನ ನೆರಳಿನ ಕೆಳಗೆ ಬೇರೆ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿಕೊಂಡೆವೋ, ನಮ್ಮ ಮೂಗಿನ ಉಸಿರಾದ ಆ ಯೆಹೋವ ದೇವರ ಅಭಿಷಿಕ್ತನು ಅವರ ಬಲೆಗಳಲ್ಲಿ ಸಿಕ್ಕಿಕೊಂಡನು.
ר֤וּחַ אַפֵּ֙ינוּ֙ מְשִׁ֣יחַ יְהוָ֔ה נִלְכַּ֖ד בִּשְׁחִיתוֹתָ֑ם אֲשֶׁ֣ר אָמַ֔רְנוּ בְּצִלּ֖וֹ נִֽחְיֶ֥ה בַגּוֹיִֽם׃ ס
21 ಎದೋಮಿನ ಪುತ್ರಿಯೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು ಮತ್ತು ಸಂತೋಷಪಡು; ಆದರೆ ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವುದು. ನೀನು ಕುಡಿದು, ಬೆತ್ತಲೆಯಾಗಿರುವೆ.
שִׂ֤ישִׂי וְשִׂמְחִי֙ בַּת־אֱד֔וֹם יוֹשֶׁ֖בֶת בְּאֶ֣רֶץ ע֑וּץ גַּם־עָלַ֙יִךְ֙ תַּעֲבָר־כּ֔וֹס תִּשְׁכְּרִ֖י וְתִתְעָרִֽי׃ ס
22 ಚೀಯೋನ್ ಪುತ್ರಿಯೇ, ನಿನ್ನ ಅಕ್ರಮದ ಶಿಕ್ಷೆಯು ತೀರಿ ಹೋಯಿತು. ಅವರು ಇನ್ನು ಮೇಲೆ ನಿನ್ನ ಗಡಿಪಾರನ್ನು ಹೆಚ್ಚಿಸುವುದಿಲ್ಲ. ಎದೋಮಿನ ಪುತ್ರಿಯೇ, ಅವರು ನಿನ್ನ ಅಕ್ರಮವನ್ನು ವಿಚಾರಿಸುವನು. ಆತನು ನಿನ್ನ ಪಾಪಗಳನ್ನು ಬಹಿರಂಗಪಡಿಸುವರು.
תַּם־עֲוֹנֵךְ֙ בַּת־צִיּ֔וֹן לֹ֥א יוֹסִ֖יף לְהַגְלוֹתֵ֑ךְ פָּקַ֤ד עֲוֹנֵךְ֙ בַּת־אֱד֔וֹם גִּלָּ֖ה עַל־חַטֹּאתָֽיִךְ׃ פ

< ಪ್ರಲಾಪಗಳು 4 >