< ಪ್ರಲಾಪಗಳು 5 >
1 ಯೆಹೋವ ದೇವರೇ, ನಮಗೆ ಏನು ಸಂಭವಿಸಿದೆ ಎಂದು ಜ್ಞಾಪಕಮಾಡಿಕೊಳ್ಳಿರಿ. ಪರಿಗಣಿಸಿ, ನಮ್ಮ ನಿಂದೆಯನ್ನು ನೋಡಿರಿ.
Opomeni se, Gospode, što nas zadesi; pogledaj i vidi sramotu našu.
2 ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ, ನಮ್ಮ ಮನೆಗಳು ಪರರಿಗೂ ವಶವಾದವು.
Našljedstvo naše privali se tuðincima, domovi naši inostrancima.
3 ನಾವು ಅನಾಥರು, ತಂದೆ ಇಲ್ಲದವರು, ನಮ್ಮ ತಾಯಂದಿರು ವಿಧವೆಯರು.
Postasmo sirote, bez oca, matere naše kao udovice.
4 ನಾವು ನಮ್ಮ ನೀರನ್ನು ಹಣಕೊಟ್ಟು ಕುಡಿಯಬೇಕಾಗಿದೆ. ನಮ್ಮ ಸೌದೆಯು ನಮಗೇ ಮಾರಲಾಗಿದೆ.
Svoju vodu pijemo za novce, svoja drva kupujemo.
5 ನಮ್ಮನ್ನು ಹಿಂಬಾಲಿಸುವವರು ನಮ್ಮ ನೆರಳಿನಲ್ಲೇ ಇದ್ದಾರೆ; ನಾವು ದಣಿದಿದ್ದೇವೆ ಮತ್ತು ವಿಶ್ರಾಂತಿಯನ್ನು ಕಾಣುವುದಿಲ್ಲ.
Na vratu nam je jaram, i gone nas; umoreni nemamo odmora.
6 ಸಾಕಷ್ಟು ರೊಟ್ಟಿಯನ್ನು ಪಡೆಯಲು ನಾವು ಈಜಿಪ್ಟ್ ಮತ್ತು ಅಸ್ಸೀರಿಯಕ್ಕೆ ಅಧೀನರಾಗಿದ್ದೇವೆ.
Pružamo ruku k Misircima i Asircima, da se nasitimo hljeba.
7 ನಮ್ಮ ತಂದೆಗಳು ಪಾಪಮಾಡಿ ಇಲ್ಲವಾದರು. ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.
Oci naši zgriješiše, i nema ih, a mi nosimo bezakonja njihova.
8 ಆಳುಗಳು ನಮ್ಮ ಮೇಲೆ ಆಳಿದ್ದಾರೆ. ಯಾರೂ ಅವರ ಕೈಯಿಂದ ನಮ್ಮನ್ನು ತಪ್ಪಿಸುವುದಿಲ್ಲ.
Robovi nam gospodare, nema nikoga da izbavi iz ruku njihovijeh.
9 ಅಡವಿಯ ಖಡ್ಗದ ನಿಮಿತ್ತ ಪ್ರಾಣ ಸಂಕಟದಿಂದ ನಮಗೆ ರೊಟ್ಟಿ ಸಿಕ್ಕಿದೆ.
Sa strahom za život svoj od maèa u pustinji donosimo sebi hljeb.
10 ಭಯಂಕರವಾದ ಕ್ಷಾಮದಿಂದ ನಮ್ಮ ಚರ್ಮ ಒಲೆಯ ಹಾಗೆ ಕಪ್ಪಾಗಿದೆ.
Koža nam pocrnje kao peæ od ljute gladi.
11 ಅವರು ಚೀಯೋನಿನಲ್ಲಿ ಸ್ತ್ರೀಯರ ಮೇಲೆ ಮತ್ತು ಯೆಹೂದದ ನಗರಗಳಲ್ಲಿ ಕನ್ಯೆಯರ ದೌರ್ಜನ್ಯ ಮಾಡಲಾಗಿದೆ.
Sramote žene na Sionu i djevojke po gradovima Judinijem.
12 ರಾಜಕುಮಾರರ ಕೈಗಳನ್ನು ಗಲ್ಲಿಗೆ ನೇತುಹಾಕಿದ್ದಾರೆ. ಹಿರಿಯರಿಗೆ ಗೌರವವಿಲ್ಲ.
Knezove vješaju svojim rukama, ne poštuju lica staraèkoga.
13 ಅವರು ಯೌವನಸ್ಥರನ್ನು ಅರೆಯುವುದಕ್ಕೆ ತೆಗೆದುಕೊಂಡರು ಮತ್ತು ಹುಡುಗರು ಕಟ್ಟಿಗೆಯ ಕೆಳಗೆ ಬಿದ್ದರು.
Mladiæe uzimaju pod žrvnje, i djeca padaju pod drvima.
14 ಪಟ್ಟಣದ ದ್ವಾರದಿಂದ ಹಿರಿಯರು ಹೋಗಿದ್ದಾರೆ. ಯುವಜನರು ತಮ್ಮ ಸಂಗೀತವನ್ನು ನಿಲ್ಲಿಸಿದ್ದಾರೆ.
Staraca nema više na vratima, ni mladiæa na pjevanju.
15 ನಮ್ಮ ಹೃದಯಾನಂದವು ತೀರಿತು. ನಮ್ಮ ನರ್ತನವು ಶೋಕವಾಗಿ ಮಾರ್ಪಟ್ಟಿತು.
Nesta radosti srcu našemu, igra naša pretvori se u žalost.
16 ಕಿರೀಟವು ನಮ್ಮ ತಲೆಯ ಮೇಲಿನಿಂದ ಬಿದ್ದುಹೋಯಿತು. ಅಯ್ಯೋ, ನಾವು ಪಾಪಮಾಡಿದ್ದೇವೆ.
Pade vijenac s glave naše; teško nama, što zgriješismo!
17 ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ. ಏಕೆಂದರೆ ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.
Stoga je srce naše žalosno, stoga oèi naše potamnješe,
18 ಏಕೆಂದರೆ ಚೀಯೋನ್ ಪರ್ವತವು ಹಾಳಾಗಿರುವುದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡುವುವು.
Sa gore Siona, što opustje, i lisice idu po njoj.
19 ಯೆಹೋವ ದೇವರೇ, ನೀವು ಎಂದೆಂದಿಗೂ ಇರುತ್ತೀರಿ. ನಿಮ್ಮ ಸಿಂಹಾಸನವು ತಲತಲಾಂತರಗಳವರೆಗೂ ಇರುವುದು.
Ti, Gospode, ostaješ dovijeka, prijesto tvoj od koljena do koljena.
20 ನೀವು ನಮ್ಮನ್ನು ಯಾವಾಗಲೂ ಮರೆಯುವುದೇಕೆ? ಇಷ್ಟುಕಾಲ ನಮ್ಮನ್ನು ಮರೆತಿರುವುದೇಕೆ?
Zašto hoæeš da nas zaboraviš dovijeka, da nas ostaviš zadugo?
21 ಯೆಹೋವ ದೇವರೇ, ನಾವು ನಿಮ್ಮ ಕಡೆ ಹಿಂದಿರುಗುವಂತೆ, ನಮ್ಮನ್ನು ನಿಮ್ಮ ಕಡೆಗೆ ಪುನಃ ಸ್ಥಾಪಿಸಿಕೊಳ್ಳಿ. ನಮ್ಮ ದಿನಗಳನ್ನು ಹಿಂದಿನಂತೆಯೇ ನವೀಕರಿಸಿರಿ.
Obrati nas, Gospode, k sebi, i obratiæemo se; ponovi dane naše kako bijahu prije.
22 ಯೆಹೋವ ದೇವರೇ, ನೀವು ನಮ್ಮ ಮೇಲೆ ಮಿತಿಮೀರಿ ಸಿಟ್ಟುಗೊಂಡಿರುವಿರೋ? ನಮ್ಮನ್ನು ಸಂಪೂರ್ಣವಾಗಿ ಕೈಬಿಟ್ಟಿರುವಿರೋ?
Jer eda li æeš nas sasvijem odbaciti i gnjeviti se na nas veoma?