< ಯಾಜಕಕಾಂಡ 11 >

1 ಯೆಹೋವ ದೇವರು ಮೋಶೆ ಆರೋನರಿಗೆ ಹೀಗೆ ಹೇಳಿದರು,
וַיְדַבֵּ֧ר יְהוָ֛ה אֶל־מֹשֶׁ֥ה וְאֶֽל־אַהֲרֹ֖ן לֵאמֹ֥ר אֲלֵהֶֽם׃
2 “ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳಬೇಕು: ‘ಭೂಮಿಯ ಮೇಲೆ ಇರುವ ಎಲ್ಲಾ ನೀವು ತಿನ್ನತಕ್ಕ ಪ್ರಾಣಿಗಳು ಯಾವವಂದರೆ:
דַּבְּר֛וּ אֶל־בְּנֵ֥י יִשְׂרָאֵ֖ל לֵאמֹ֑ר זֹ֤את הַֽחַיָּה֙ אֲשֶׁ֣ר תֹּאכְל֔וּ מִכָּל־הַבְּהֵמָ֖ה אֲשֶׁ֥ר עַל־הָאָֽרֶץ׃
3 ಪ್ರಾಣಿಗಳಲ್ಲಿ ಕಾಲ್ಗೊರಸು ಸೀಳಿದ ಮತ್ತು ಮೇವನ್ನು ಮೆಲುಕಾಡಿಸುವುದನ್ನೂ ನೀವು ತಿನ್ನಬಹುದು.
כֹּ֣ל ׀ מַפְרֶ֣סֶת פַּרְסָ֗ה וְשֹׁסַ֤עַת שֶׁ֙סַע֙ פְּרָסֹ֔ת מַעֲלַ֥ת גֵּרָ֖ה בַּבְּהֵמָ֑ה אֹתָ֖הּ תֹּאכֵֽלוּ׃
4 “‘ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವುದಾದರೂ ಅದಕ್ಕೆ ಸೀಳುಗೊರಸು ಇಲ್ಲ. ಅದು ನಿಮಗೆ ಅಶುದ್ಧ.
אַ֤ךְ אֶת־זֶה֙ לֹ֣א תֹֽאכְל֔וּ מִֽמַּעֲלֵי֙ הַגֵּרָ֔ה וּמִמַּפְרִיסֵ֖י הַפַּרְסָ֑ה אֶֽת־הַ֠גָּמָל כִּֽי־מַעֲלֵ֨ה גֵרָ֜ה ה֗וּא וּפַרְסָה֙ אֵינֶ֣נּוּ מַפְרִ֔יס טָמֵ֥א ה֖וּא לָכֶֽם׃
5 ಬೆಟ್ಟದ ಕುಣಿ ಮೊಲವು ಮೇವನ್ನು ಮೆಲುಕುಹಾಕುವುದಾದರೂ, ಆದರೂ ಸೀಳುಗೊರಸು ಇಲ್ಲವಾದದ್ದರಿಂದ ಅದು ನಿಮಗೆ ಅಶುದ್ಧವಾಗಿರುವುದು.
וְאֶת־הַשָּׁפָ֗ן כִּֽי־מַעֲלֵ֤ה גֵרָה֙ ה֔וּא וּפַרְסָ֖ה לֹ֣א יַפְרִ֑יס טָמֵ֥א ה֖וּא לָכֶֽם׃
6 ಮೊಲವು ಮೆಲುಕುಹಾಕುವುದಾದರೂ, ಆದರೂ ಸೀಳುಗೊರಸು ಇಲ್ಲವಾದದ್ದರಿಂದ ಅದು ನಿಮಗೆ ಅಶುದ್ಧವಾಗಿರುವುದು.
וְאֶת־הָאַרְנֶ֗בֶת כִּֽי־מַעֲלַ֤ת גֵּרָה֙ הִ֔וא וּפַרְסָ֖ה לֹ֣א הִפְרִ֑יסָה טְמֵאָ֥ה הִ֖וא לָכֶֽם׃
7 ಹಂದಿಯ ಗೊರಸು ಸೀಳಿದ್ದರೂ ಅದು ಮೇವನ್ನು ಮೆಲುಕು ಹಾಕುವುದಿಲ್ಲ, ಅದು ನಿಮಗೆ ಅಶುದ್ಧವಾಗಿರುವುದು.
וְאֶת־הַ֠חֲזִיר כִּֽי־מַפְרִ֨יס פַּרְסָ֜ה ה֗וּא וְשֹׁסַ֥ע שֶׁ֙סַע֙ פַּרְסָ֔ה וְה֖וּא גֵּרָ֣ה לֹֽא־יִגָּ֑ר טָמֵ֥א ה֖וּא לָכֶֽם׃
8 ಅವುಗಳ ಮಾಂಸವನ್ನು ನೀವು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು. ಅವು ನಿಮಗೆ ಅಶುದ್ಧವಾಗಿವೆ.
מִבְּשָׂרָם֙ לֹ֣א תֹאכֵ֔לוּ וּבְנִבְלָתָ֖ם לֹ֣א תִגָּ֑עוּ טְמֵאִ֥ים הֵ֖ם לָכֶֽם׃
9 “‘ನೀರಿನಲ್ಲಿ ಬಾಳುವ ಎಲ್ಲವುಗಳಲ್ಲಿ ಅಂದರೆ ಸಮುದ್ರದಲ್ಲಿ ಮತ್ತು ನದಿಯಲ್ಲಿ ಇರುವ ಈಜು ರೆಕ್ಕೆಗಳುಳ್ಳ ಮತ್ತು ಪೊರೆ ಇರುವವುಗಳನ್ನು ತಿನ್ನಬಹುದು.
אֶת־זֶה֙ תֹּֽאכְל֔וּ מִכֹּ֖ל אֲשֶׁ֣ר בַּמָּ֑יִם כֹּ֣ל אֲשֶׁר־לֹו֩ סְנַפִּ֨יר וְקַשְׂקֶ֜שֶׂת בַּמַּ֗יִם בַּיַּמִּ֛ים וּבַנְּחָלִ֖ים אֹתָ֥ם תֹּאכֵֽלוּ׃
10 ಸಮುದ್ರಗಳಲ್ಲಿಯೂ, ನದಿಗಳಲ್ಲಿಯೂ ನೀರೊಳಗೆ ಚಲಿಸುವ ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜುರೆಕ್ಕೆ ಮತ್ತು ಪೊರೆಯಿಲ್ಲದವುಗಳು ನಿಮಗೆ ನಿಷಿದ್ಧವಾಗಿವೆ.
וְכֹל֩ אֲשֶׁ֨ר אֵֽין־לֹ֜ו סְנַפִּ֣יר וְקַשְׂקֶ֗שֶׂת בַּיַּמִּים֙ וּבַנְּחָלִ֔ים מִכֹּל֙ שֶׁ֣רֶץ הַמַּ֔יִם וּמִכֹּ֛ל נֶ֥פֶשׁ הַחַיָּ֖ה אֲשֶׁ֣ר בַּמָּ֑יִם שֶׁ֥קֶץ הֵ֖ם לָכֶֽם׃
11 ಅವು ನಿಮಗೆ ಅಶುದ್ಧವಾಗಿಯೇ ಇರುವವು. ನೀವು ಅವುಗಳ ಮಾಂಸವನ್ನು ತಿನ್ನಬಾರದು ಮತ್ತು ಅವುಗಳ ಶವಗಳು ನಿಮಗೆ ಹೇಯವಾಗಿರಬೇಕು.
וְשֶׁ֖קֶץ יִהְי֣וּ לָכֶ֑ם מִבְּשָׂרָם֙ לֹ֣א תֹאכֵ֔לוּ וְאֶת־נִבְלָתָ֖ם תְּשַׁקֵּֽצוּ׃
12 ನೀರಲ್ಲಿ ಯಾವುದಕ್ಕೆ ಈಜುರೆಕ್ಕೆ ಮತ್ತು ಪೊರೆಗಳಿಲ್ಲವೋ ಅವು ನಿಮಗೆ ಹೇಯವಾಗಿರಬೇಕು.
כֹּ֣ל אֲשֶׁ֥ר אֵֽין־לֹ֛ו סְנַפִּ֥יר וְקַשְׂקֶ֖שֶׂת בַּמָּ֑יִם שֶׁ֥קֶץ ה֖וּא לָכֶֽם׃
13 “‘ಪಕ್ಷಿಗಳಲ್ಲಿ ಇವುಗಳು ನಿಮಗೆ ನಿಷಿದ್ಧವಾಗಿವೆ. ಇವುಗಳು ನಿಮಗೆ ಅಸಹ್ಯಕರವಾದ ಮತ್ತು ತಿನ್ನಲು ನಿಷೇಧಿಸಲಾದ ಪಕ್ಷಿಗಳು ನೀವು ತಿನ್ನಬಾರದವುಗಳು ಯಾವುವೆಂದರೆ: ಗರುಡ, ರಣಹದ್ದು, ಕಪ್ಪು ರಣಹದ್ದು.
וְאֶת־אֵ֙לֶּה֙ תְּשַׁקְּצ֣וּ מִן־הָעֹ֔וף לֹ֥א יֵאָכְל֖וּ שֶׁ֣קֶץ הֵ֑ם אֶת־הַנֶּ֙שֶׁר֙ וְאֶת־הַפֶּ֔רֶס וְאֵ֖ת הָעָזְנִיָּֽה׃
14 ಕ್ರೌಂಚ, ಅದರ ಜಾತಿಯ ಹದ್ದು,
וְאֶת־הַ֨דָּאָ֔ה וְאֶת־הָאַיָּ֖ה לְמִינָֽהּ׃
15 ಅದರ ಜಾತಿಗನುಸಾರವಾದ ಪ್ರತಿಯೊಂದು ಕಾಗೆ,
אֵ֥ת כָּל־עֹרֵ֖ב לְמִינֹֽו׃
16 ಉಷ್ಟ್ರಪಕ್ಷಿ, ಚೀರು ಗೂಬೆ, ಕಡಲ ಹಕ್ಕಿ ಮತ್ತು ಅದರ ಪ್ರತಿಯೊಂದು ಜಾತಿಯ ಗಿಡುಗ.
וְאֵת֙ בַּ֣ת הַֽיַּעֲנָ֔ה וְאֶת־הַתַּחְמָ֖ס וְאֶת־הַשָּׁ֑חַף וְאֶת־הַנֵּ֖ץ לְמִינֵֽהוּ׃
17 ಸಣ್ಣ ಗೂಬೆ, ನೀರುಕಾಗೆ, ದೊಡ್ಡ ಗೂಬೆ,
וְאֶת־הַכֹּ֥וס וְאֶת־הַשָּׁלָ֖ךְ וְאֶת־הַיַּנְשֽׁוּף׃
18 ಬಿಳಿಗೂಬೆ, ಮರಳುಗಾಡು ಗೂಬೆ, ರಣಹದ್ದು,
וְאֶת־הַתִּנְשֶׁ֥מֶת וְאֶת־הַקָּאָ֖ת וְאֶת־הָרָחָֽם׃
19 ನೀರು ಕೋಳಿ, ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ ಮತ್ತು ಬಾವಲಿ.
וְאֵת֙ הַחֲסִידָ֔ה הָאֲנָפָ֖ה לְמִינָ֑הּ וְאֶת־הַדּוּכִיפַ֖ת וְאֶת־הָעֲטַלֵּֽף׃
20 “‘ನಾಲ್ಕು ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳು ನಿಮಗೆ ಹೇಯವಾಗಿರಬೇಕು.
כֹּ֚ל שֶׁ֣רֶץ הָעֹ֔וף הַהֹלֵ֖ךְ עַל־אַרְבַּ֑ע שֶׁ֥קֶץ ה֖וּא לָכֶֽם׃ ס
21 ಆದರೂ ಹಾರಾಡುವ, ಹರಿದಾಡುವ ನಾಲ್ಕು ಕಾಲುಗಳ ಮೇಲೆ ಹೋಗುವ, ತಮ್ಮ ಪಾದಗಳ ಮೇಲೆ ಕಾಲುಗಳಿದ್ದು, ಭೂಮಿಯ ಮೇಲೆ ದುಮುಕುವವುಗಳನ್ನೂ ನೀವು ತಿನ್ನಬಹುದು.
אַ֤ךְ אֶת־זֶה֙ תֹּֽאכְל֔וּ מִכֹּל֙ שֶׁ֣רֶץ הָעֹ֔וף הַהֹלֵ֖ךְ עַל־אַרְבַּ֑ע אֲשֶׁר־לֹא (לֹ֤ו) כְרָעַ֙יִם֙ מִמַּ֣עַל לְרַגְלָ֔יו לְנַתֵּ֥ר בָּהֵ֖ן עַל־הָאָֽרֶץ׃
22 ಮಿಡತೆಗಳನ್ನು ಜುಟ್ಟೆ ಮಿಡತೆಗಳನ್ನು ಅವುಗಳ ಜಾತಿಗನುಸಾರವಾಗಿ ತಿನ್ನಬಹುದು.
אֶת־אֵ֤לֶּה מֵהֶם֙ תֹּאכֵ֔לוּ אֶת־הָֽאַרְבֶּ֣ה לְמִינֹ֔ו וְאֶת־הַסָּלְעָ֖ם לְמִינֵ֑הוּ וְאֶת־הַחַרְגֹּ֣ל לְמִינֵ֔הוּ וְאֶת־הֶחָגָ֖ב לְמִינֵֽהוּ׃
23 ಆದರೆ ನಾಲ್ಕು ಪಾದವಿರುವ ಎಲ್ಲಾ ಹಾರಾಡುವ, ಹರಿದಾಡುವ ಬೇರೆಯವುಗಳು ನಿಮಗೆ ಹೇಯವಾಗಿರಬೇಕು.
וְכֹל֙ שֶׁ֣רֶץ הָעֹ֔וף אֲשֶׁר־לֹ֖ו אַרְבַּ֣ע רַגְלָ֑יִם שֶׁ֥קֶץ ה֖וּא לָכֶֽם׃
24 “‘ಇವುಗಳಿಂದ ನೀವು ಅಶುದ್ಧರಾಗುವಿರಿ. ಅಂದರೆ ಅವುಗಳ ಶವಗಳನ್ನು ಮುಟ್ಟುವವರು ಸಂಜೆಯವರೆಗೂ ಅಶುದ್ಧರಾಗಿರುವರು.
וּלְאֵ֖לֶּה תִּטַּמָּ֑אוּ כָּל־הַנֹּגֵ֥עַ בְּנִבְלָתָ֖ם יִטְמָ֥א עַד־הָעָֽרֶב׃
25 ಯಾರಾದರೂ ಅವುಗಳ ಶವವನ್ನು ಹೊತ್ತರೂ, ಅವರು ಬಟ್ಟೆಗಳನ್ನು ಒಗೆದುಕೊಂಡು ಸಂಜೆಯವರೆಗೂ ಅಶುದ್ಧರಾಗಿರುವರು.
וְכָל־הַנֹּשֵׂ֖א מִנִּבְלָתָ֑ם יְכַבֵּ֥ס בְּגָדָ֖יו וְטָמֵ֥א עַד־הָעָֽרֶב׃
26 “‘ಯಾವ ಪ್ರಾಣಿಯ ಗೊರಸು ಸ್ವಲ್ಪ ಸೀಳಿದ್ದರೂ, ಇಗ್ಗೊರಸಾಗಿಲ್ಲವೋ ಮತ್ತು ಮೆಲುಕು ಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಅವುಗಳ ಶವವನ್ನು ಮುಟ್ಟುವವರು ಅಶುದ್ಧರಾಗಿರುವರು.
לְֽכָל־הַבְּהֵמָ֡ה אֲשֶׁ֣ר הִוא֩ מַפְרֶ֨סֶת פַּרְסָ֜ה וְשֶׁ֣סַע ׀ אֵינֶ֣נָּה שֹׁסַ֗עַת וְגֵרָה֙ אֵינֶ֣נָּה מַעֲלָ֔ה טְמֵאִ֥ים הֵ֖ם לָכֶ֑ם כָּל־הַנֹּגֵ֥עַ בָּהֶ֖ם יִטְמָֽא׃
27 ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವುದೆಲ್ಲವೂ ನಿಮಗೆ ಅಶುದ್ಧವಾಗಿರುವುವು. ಯಾರಾದರೂ ಅವುಗಳ ಶವವನ್ನು ಮುಟ್ಟಿದರೆ ಅವರು ಸಂಜೆಯವರೆಗೂ ಅಶುದ್ಧರಾಗಿರುವರು.
וְכֹ֣ל ׀ הֹולֵ֣ךְ עַל־כַּפָּ֗יו בְּכָל־הַֽחַיָּה֙ הַהֹלֶ֣כֶת עַל־אַרְבַּ֔ע טְמֵאִ֥ים הֵ֖ם לָכֶ֑ם כָּל־הַנֹּגֵ֥עַ בְּנִבְלָתָ֖ם יִטְמָ֥א עַד־הָעָֽרֶב׃
28 ಅವುಗಳ ಶವವನ್ನು ಹೊರುವವರು ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೂ ಅಶುದ್ಧರಾಗಿರುವರು. ಈ ಪ್ರಾಣಿಗಳು ನಿಮಗೆ ಅಶುದ್ಧವಾದವುಗಳು.
וְהַנֹּשֵׂא֙ אֶת־נִבְלָתָ֔ם יְכַבֵּ֥ס בְּגָדָ֖יו וְטָמֵ֣א עַד־הָעָ֑רֶב טְמֵאִ֥ים הֵ֖מָּה לָכֶֽם׃ ס
29 “‘ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಇವು ಸಹ ನಿಮಗೆ ಅಶುದ್ಧವಾಗಿರಬೇಕು: ಮುಂಗುಲಿ, ಇಲಿ, ಸಕಲವಿಧವಾದ ಉಡ,
וְזֶ֤ה לָכֶם֙ הַטָּמֵ֔א בַּשֶּׁ֖רֶץ הַשֹּׁרֵ֣ץ עַל־הָאָ֑רֶץ הַחֹ֥לֶד וְהָעַכְבָּ֖ר וְהַצָּ֥ב לְמִינֵֽהוּ׃
30 ಅರೆ ಪಳಗಿಸಿದ ಪ್ರಾಣಿ, ಹಾವುರಾಣಿ, ಊಸುರುವಳ್ಳಿ, ಹಲ್ಲಿ, ಬಸವನ ಹುಳು ಮತ್ತು ಚಿಟ್ಟಿಲಿ.
וְהָאֲנָקָ֥ה וְהַכֹּ֖חַ וְהַלְּטָאָ֑ה וְהַחֹ֖מֶט וְהַתִּנְשָֽׁמֶת׃
31 ನೆಲದ ಮೇಲೆ ಹರಿದಾಡುವ ಇವು ನಿಮಗೆ ಅಶುದ್ಧ. ಸತ್ತಿರುವಾಗ ಅವುಗಳನ್ನು ಯಾರಾದರೂ ಮುಟ್ಟಿದರೆ ಅವರು ಸಂಜೆಯವರೆಗೂ ಅಶುದ್ಧರಾಗಿರುವರು.
אֵ֛לֶּה הַטְּמֵאִ֥ים לָכֶ֖ם בְּכָל־הַשָּׁ֑רֶץ כָּל־הַנֹּגֵ֧עַ בָּהֶ֛ם בְּמֹתָ֖ם יִטְמָ֥א עַד־הָעָֽרֶב׃
32 ಅವು ಸತ್ತು ಹೋಗಿ, ಯಾವುದರ ಮೇಲೆ ಬೀಳುವವೋ ಅವೆಲ್ಲಾ ಅಶುದ್ಧವಾಗಿರುವುದು. ಅದು ಮರದ ಪಾತ್ರೆಯೇ ಆಗಿರಲಿ, ಉಡುಪೇ ಆಗಿರಲಿ, ಚೀಲವೇ ಆಗಿರಲಿ, ಕೆಲಸ ಮಾಡುವ ಯಾವ ವಸ್ತುವಾಗಲಿ, ಅದು ಏನೇ ಆಗಿರಲಿ ಸಂಜೆಯವರೆಗೆ ನೀರಲ್ಲಿ ಇಡುವವರೆಗೆ ಅಶುದ್ಧವಾಗಿರುವುದು. ನಂತರ ಅದು ಶುದ್ಧವಾಗುವುದು.
וְכֹ֣ל אֲשֶׁר־יִפֹּל־עָלָיו֩ מֵהֶ֨ם ׀ בְּמֹתָ֜ם יִטְמָ֗א מִכָּל־כְּלִי־עֵץ֙ אֹ֣ו בֶ֤גֶד אֹו־עֹור֙ אֹ֣ו שָׂ֔ק כָּל־כְּלִ֕י אֲשֶׁר־יֵעָשֶׂ֥ה מְלָאכָ֖ה בָּהֶ֑ם בַּמַּ֧יִם יוּבָ֛א וְטָמֵ֥א עַד־הָעֶ֖רֶב וְטָהֵֽר׃
33 ಪ್ರತಿಯೊಂದು ಮಣ್ಣಿನ ಪಾತ್ರೆಯಲ್ಲಿ ಅವುಗಳಲ್ಲಿ ಯಾವುದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವುದು ಮತ್ತು ನೀವು ಅದನ್ನು ಒಡೆದುಹಾಕಬೇಕು.
וְכָל־כְּלִי־חֶ֔רֶשׂ אֲשֶׁר־יִפֹּ֥ל מֵהֶ֖ם אֶל־תֹּוכֹ֑ו כֹּ֣ל אֲשֶׁ֧ר בְּתֹוכֹ֛ו יִטְמָ֖א וְאֹתֹ֥ו תִשְׁבֹּֽרוּ׃
34 ಅದರಲ್ಲಿರುವ ಆಹಾರ ಪದಾರ್ಥವೆಲ್ಲಾ ನೀರಿನಿಂದ ನೆನೆದಿದ್ದರೆ ಅದು ಅಶುದ್ಧವಾಗಿರುವುದು. ಅಂಥ ಪ್ರತಿ ಪಾತ್ರೆಯಲ್ಲಿ ಕುಡಿಯುವ ಎಲ್ಲಾ ಪಾನವೂ ಅಶುದ್ಧವಾಗಿರುವುದು.
מִכָּל־הָאֹ֜כֶל אֲשֶׁ֣ר יֵאָכֵ֗ל אֲשֶׁ֨ר יָבֹ֥וא עָלָ֛יו מַ֖יִם יִטְמָ֑א וְכָל־מַשְׁקֶה֙ אֲשֶׁ֣ר יִשָּׁתֶ֔ה בְּכָל־כְּלִ֖י יִטְמָֽא׃
35 ಅವುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಅದು ಅಶುದ್ಧವಾಗಿರುವುದು. ಅದು ಹರಿವಾಣವಾಗಿದ್ದರೂ, ಮಣ್ಣುಗಳ ಒಲೆಯಾಗಿದ್ದರೂ ಅದನ್ನು ಒಡೆದುಹಾಕಬೇಕು. ಏಕೆಂದರೆ ಅವು ಅಶುದ್ಧವಾಗಿವೆ. ಅವು ನಿಮಗೆ ಅಶುದ್ಧವೇ.
וְ֠כֹל אֲשֶׁר־יִפֹּ֨ל מִנִּבְלָתָ֥ם ׀ עָלָיו֮ יִטְמָא֒ תַּנּ֧וּר וְכִירַ֛יִם יֻתָּ֖ץ טְמֵאִ֣ים הֵ֑ם וּטְמֵאִ֖ים יִהְי֥וּ לָכֶֽם׃
36 ನೀರು ಹೆಚ್ಚಾಗಿರುವ ಬುಗ್ಗೆಯಾಗಲಿ, ಹಳ್ಳವಾಗಲಿ ಶುದ್ಧವಾಗಿರುವುದು. ಅವುಗಳೊಳಗಿಂದ ಹೆಣಗಳನ್ನು ಎತ್ತಿದವರು ಅಶುದ್ಧರಾಗುವರು.
אַ֣ךְ מַעְיָ֥ן וּבֹ֛ור מִקְוֵה־מַ֖יִם יִהְיֶ֣ה טָהֹ֑ור וְנֹגֵ֥עַ בְּנִבְלָתָ֖ם יִטְמָֽא׃
37 ಯಾವ ಭಾಗವಾದರೂ ಬಿತ್ತುವ ಬೀಜದಲ್ಲಿ ಬಿದ್ದರೂ ಶುದ್ಧವಾಗಿರುವುದು.
וְכִ֤י יִפֹּל֙ מִנִּבְלָתָ֔ם עַל־כָּל־זֶ֥רַע זֵר֖וּעַ אֲשֶׁ֣ר יִזָּרֵ֑עַ טָהֹ֖ור הֽוּא׃
38 ಆದರೆ ನೀರು ಹಾಕಿ ನೆನಸಿದ ಬೀಜದ ಮೇಲೆ ಆ ಹೆಣವು ಬಿದ್ದರೆ, ಅದು ನಿಮಗೆ ಅಶುದ್ಧವಾಗಿರುವುದು.
וְכִ֤י יֻתַּן־מַ֙יִם֙ עַל־זֶ֔רַע וְנָפַ֥ל מִנִּבְלָתָ֖ם עָלָ֑יו טָמֵ֥א ה֖וּא לָכֶֽם׃ ס
39 “‘ನೀವು ತಿನ್ನುವ ಯಾವುದಾದರೂ ಪ್ರಾಣಿ ಸತ್ತಿದ್ದರೆ, ಅದರ ಶವವನ್ನು ಮುಟ್ಟಿದವರು ಸಂಜೆಯವರೆಗೆ ಅಶುದ್ಧರಾಗಿರುವರು.
וְכִ֤י יָמוּת֙ מִן־הַבְּהֵמָ֔ה אֲשֶׁר־הִ֥יא לָכֶ֖ם לְאָכְלָ֑ה הַנֹּגֵ֥עַ בְּנִבְלָתָ֖הּ יִטְמָ֥א עַד־הָעָֽרֶב׃
40 ಯಾರಾದರೂ ಅದರ ಮಾಂಸವನ್ನು ತಿಂದಲ್ಲಿ ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು. ಅದರ ಶವವನ್ನು ಹೊರುವವರೂ ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು.
וְהָֽאֹכֵל֙ מִנִּבְלָתָ֔הּ יְכַבֵּ֥ס בְּגָדָ֖יו וְטָמֵ֣א עַד־הָעָ֑רֶב וְהַנֹּשֵׂא֙ אֶת־נִבְלָתָ֔הּ יְכַבֵּ֥ס בְּגָדָ֖יו וְטָמֵ֥א עַד־הָעָֽרֶב׃
41 “‘ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಹೇಯವಾಗಿದೆ. ಅದನ್ನು ತಿನ್ನಬಾರದು.
וְכָל־הַשֶּׁ֖רֶץ הַשֹּׁרֵ֣ץ עַל־הָאָ֑רֶץ שֶׁ֥קֶץ ה֖וּא לֹ֥א יֵאָכֵֽל׃
42 ಹೊಟ್ಟೆಯಿಂದ ಹರಿದಾಡುವ ಯಾವುದನ್ನೂ, ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವುದನ್ನೂ, ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವುದನ್ನು ನೀವು ತಿನ್ನಬಾರದು. ಏಕೆಂದರೆ ಅವು ಹೇಯವಾಗಿವೆ.
כֹּל֩ הֹולֵ֨ךְ עַל־גָּחֹ֜ון וְכֹ֣ל ׀ הֹולֵ֣ךְ עַל־אַרְבַּ֗ע עַ֚ד כָּל־מַרְבֵּ֣ה רַגְלַ֔יִם לְכָל־הַשֶּׁ֖רֶץ הַשֹּׁרֵ֣ץ עַל־הָאָ֑רֶץ לֹ֥א תֹאכְל֖וּם כִּי־שֶׁ֥קֶץ הֵֽם׃
43 ಯಾವುದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು, ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಅವುಗಳಿಂದ ಮಲಿನರಾಗಬಾರದು.
אַל־תְּשַׁקְּצוּ֙ אֶת־נַפְשֹׁ֣תֵיכֶ֔ם בְּכָל־הַשֶּׁ֖רֶץ הַשֹּׁרֵ֑ץ וְלֹ֤א תִֽטַּמְּאוּ֙ בָּהֶ֔ם וְנִטְמֵתֶ֖ם בָּֽם׃
44 ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಾನೇ. ನೀವು ನಿಮ್ಮನ್ನು ಪ್ರತಿಷ್ಠಿಸಿಕೊಳ್ಳಿರಿ. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ಇದಲ್ಲದೆ ಭೂಮಿಯ ಮೇಲೆ ಹರಿದಾಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.
כִּ֣י אֲנִ֣י יְהוָה֮ אֱלֹֽהֵיכֶם֒ וְהִתְקַדִּשְׁתֶּם֙ וִהְיִיתֶ֣ם קְדֹשִׁ֔ים כִּ֥י קָדֹ֖ושׁ אָ֑נִי וְלֹ֤א תְטַמְּאוּ֙ אֶת־נַפְשֹׁ֣תֵיכֶ֔ם בְּכָל־הַשֶּׁ֖רֶץ הָרֹמֵ֥שׂ עַל־הָאָֽרֶץ׃
45 ಏಕೆಂದರೆ ನಿಮ್ಮ ದೇವರಾಗಿರುವುದಕ್ಕೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಯೆಹೋವ ದೇವರು ನಾನೇ. ನಾನು ಪರಿಶುದ್ಧನಾಗಿರುವುದರಿಂದ ನೀವು ಪರಿಶುದ್ಧರಾಗಿರಬೇಕು.
כִּ֣י ׀ אֲנִ֣י יְהוָ֗ה הַֽמַּעֲלֶ֤ה אֶתְכֶם֙ מֵאֶ֣רֶץ מִצְרַ֔יִם לִהְיֹ֥ת לָכֶ֖ם לֵאלֹהִ֑ים וִהְיִיתֶ֣ם קְדֹשִׁ֔ים כִּ֥י קָדֹ֖ושׁ אָֽנִי׃
46 “‘ಪ್ರಾಣಿಗಳು, ಪಕ್ಷಿಗಳು, ನೀರಿನಲ್ಲಿರುವ ಮತ್ತು ನೆಲದ ಮೇಲೆ ತೆವಳುವ ಪ್ರತಿಯೊಂದು ಜೀವಿಗಳಿಗೆ ಕುರಿತಾದ ನಿಯಮವು ಇದೇ.
זֹ֣את תֹּורַ֤ת הַבְּהֵמָה֙ וְהָעֹ֔וף וְכֹל֙ נֶ֣פֶשׁ הַֽחַיָּ֔ה הָרֹמֶ֖שֶׂת בַּמָּ֑יִם וּלְכָל־נֶ֖פֶשׁ הַשֹּׁרֶ֥צֶת עַל־הָאָֽרֶץ׃
47 ಅಶುದ್ಧ ಮತ್ತು ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನಲರ್ಹವಾದ ಮೃಗ ಮತ್ತು ತಿನ್ನಬಾರದ ಮೃಗಗಳ ನಡುವಿನ ವ್ಯತ್ಯಾಸವನ್ನು ಹೀಗೆ ತಿಳಿದುಕೊಳ್ಳುವಿರಿ.’”
לְהַבְדִּ֕יל בֵּ֥ין הַטָּמֵ֖א וּבֵ֣ין הַטָּהֹ֑ר וּבֵ֤ין הַֽחַיָּה֙ הַֽנֶּאֱכֶ֔לֶת וּבֵין֙ הַֽחַיָּ֔ה אֲשֶׁ֖ר לֹ֥א תֵאָכֵֽל׃ פ

< ಯಾಜಕಕಾಂಡ 11 >