< ಯಾಜಕಕಾಂಡ 19 >

1 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,
上主訓示梅瑟說:」
2 “ಇಸ್ರಾಯೇಲರ ಸಭೆಯವರೆಲ್ಲರ ಸಂಗಡ ಮಾತನಾಡಿ, ಅವರಿಗೆ ಹೀಗೆ ಹೇಳಬೇಕು: ‘ನೀವು ಪರಿಶುದ್ಧರಾಗಿರಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರಾದ ನಾನು ಪರಿಶುದ್ಧನಾಗಿದ್ದೇನೆ.
你告訴以色列子民全會眾說:你們應該是聖的,因為我,上主,你們的天主是聖的。
3 “‘ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತಾಯಿಗೂ ತನ್ನ ತಂದೆಗೂ ಭಯಪಟ್ಟು, ನನ್ನ ವಿಶ್ರಾಂತಿಯ ದಿನಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
你們每人應孝敬母親和父親,應遵守我的安息日。我,上主是你們的天主。
4 “‘ನೀವು ವಿಗ್ರಹಗಳ ಕಡೆಗೆ ತಿರುಗಿಕೊಳ್ಳಬೇಡಿರಿ. ಇಲ್ಲವೆ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
你們不要歸依偶像,也不要為自己鑄造神像:我,上主是你們的天主。
5 “‘ನೀವು ನಿಮ್ಮ ಯೆಹೋವ ದೇವರಿಗೆ ಸಮಾಧಾನದ ಬಲಿಯನ್ನು ಸಮರ್ಪಿಸುವುದಾದರೆ, ನೀವು ಆತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿಯೇ ಅರ್ಪಿಸಬೇಕು.
若你們給上主獻祭和平祭,要奉獻可蒙受悅納的。
6 ಅದನ್ನು ನೀವು ಸಮರ್ಪಿಸಿದ ದಿನದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು. ಆದರೆ ಅದು ಮೂರನೆಯ ದಿನದವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು.
祭肉,應在你們祭獻的當天或第二天吃盡;有剩下的,到第三天應用火燒了。
7 ಅದನ್ನು ಮೂರನೆಯ ದಿನದಲ್ಲಿ ತಿಂದದ್ದೇ ಆದರೆ, ಅದು ಅಸಹ್ಯವಾದದ್ದು, ಅದು ಅಂಗೀಕೃತವಾಗುವುದಿಲ್ಲ.
若還有人在第三天吃,這肉已不潔,必不蒙悅納。
8 ಆದ್ದರಿಂದ ಅದನ್ನು ತಿನ್ನುವ ಪ್ರತಿಯೊಬ್ಬರೂ ತಮ್ಮ ಅಪರಾಧವನ್ನು ಹೊತ್ತುಕೊಳ್ಳಬೇಕು. ಏಕೆಂದರೆ ಯೆಹೋವ ದೇವರಿಗೆ ಪವಿತ್ರವಾದದ್ದನ್ನು ಅವರು ಅಶುದ್ಧಮಾಡಿದ್ದಾನೆ. ಅಂಥವರನ್ನು ತಮ್ಮ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.
那吃的人,必負罪債,因為他褻瀆了上主的聖物;這人應由民間剷除。
9 “‘ನೀವು ನಿಮ್ಮ ಭೂಮಿಯ ಪೈರನ್ನು ಕೊಯ್ಯುವಾಗ, ನಿಮ್ಮ ಹೊಲದ ಮೂಲೆಗಳಲ್ಲಿ ಸಂಪೂರ್ಣವಾಗಿ ಕೊಯ್ಯಬಾರದು. ಇಲ್ಲವೆ ನಿಮ್ಮ ಸುಗ್ಗಿಯ ಹಕ್ಕಲುಗಳನ್ನು ಕೂಡಿಸಬಾರದು.
當你們收割田地的莊稼時,你不可割到地邊;收穫後剩下的穗子,不可再拾。
10 ನಿಮ್ಮ ದ್ರಾಕ್ಷಿತೋಟದಲ್ಲಿ ಹಕ್ಕಲಾಯಬಾರದು. ಇಲ್ಲವೆ ಪ್ರತಿಯೊಂದು ದ್ರಾಕ್ಷಿಯನ್ನೂ ಕೂಡಿಸಬಾರದು. ನೀವು ಅವುಗಳನ್ನು ಬಡವರಿಗಾಗಿಯೂ ಪರಕೀಯರಿಗಾಗಿಯೂ ಬಿಟ್ಟುಬಿಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
葡萄摘後不應去搜;葡萄園內掉下的,不應拾取,應留給窮人和外方人:我,上主是你們的天主。
11 “‘ಕದಿಯಬಾರದು. “‘ಸುಳ್ಳಾಡಬಾರದು. “‘ಒಬ್ಬರಿಗೊಬ್ಬರು ಮೋಸಮಾಡಬಾರದು.
你們不要偷竊,不要詐欺,不要彼此哄騙;
12 “‘ನನ್ನ ಹೆಸರಿನಲ್ಲಿ ಸುಳ್ಳು ಪ್ರಮಾಣ ಮಾಡಬಾರದು. ನಿಮ್ಮ ದೇವರ ಹೆಸರನ್ನು ಅಗೌರವಿಸಬಾರದು. ನಾನೇ ಯೆಹೋವ ದೇವರು.
不要奉我的名妄發虛誓,而褻瀆你天主的名字:我是上主。
13 “‘ನಿಮ್ಮ ನೆರೆಯವನನ್ನು ವಂಚಿಸಬಾರದು. “‘ಇಲ್ಲವೆ ಅವನನ್ನು ಸುಲಿದುಕೊಳ್ಳಬಾರದು. ಕೂಲಿಯಾಳಿನ ಕೂಲಿಯು ನಿಮ್ಮ ಬಳಿಯಲ್ಲಿ ರಾತ್ರಿಯೆಲ್ಲಾ ಮತ್ತು ಮುಂಜಾನೆಯವರೆಗೆ ಇರಬಾರದು.
你不要欺壓剝削你的近人,傭人的工錢不可在你處過夜,留到第二天早晨。
14 “‘ಕಿವುಡನನ್ನು ಶಪಿಸಬಾರದು. ಇಲ್ಲವೆ ಕಣ್ಣು ಕಾಣದವನನ್ನು ಮುಗ್ಗರಿಸುವಂತೆ ಮಾಡಬಾರದು. ನಿಮ್ಮ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು.
不可咒罵聾子;不可將障礙物放在瞎子面前;但應敬畏你的天主:我是天主。
15 “‘ವ್ಯಾಜ್ಯ ತೀರಿಸುವಾಗ ನೀನು ಅನ್ಯಾಯ ಮಾಡದಿರು. ಬಡವನ ಮುಖ ದಾಕ್ಷಿಣ್ಯವನ್ನಾಗಲಿ, ಬಲಿಷ್ಠನ ಘನತೆಯನ್ನಾಗಲಿ ಲಕ್ಷಿಸದೆ ನಿಷ್ಪಕ್ಷಪಾತವಾಗಿ ತೀರ್ಪುಕೊಡು. ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯವಾಗಿ ತೀರ್ಪುಮಾಡು.
審判時,你們不要違背正義;不可袒護窮人,也不可重視有權勢的人,只依正義審判你的同胞。
16 “‘ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ. “‘ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ. ನಾನೇ ಯೆಹೋವ ದೇವರು.
不可去毀謗你本族人,也不可危害人的性命:我是上主。
17 “‘ನಿನ್ನ ಹೃದಯದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ, ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
不可心存懷恨你的兄弟,應坦白勸戒你的同胞,免得為了他而負罪債。
18 “‘ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸದವನಾಗಿಯೂ, ಸೇಡು ತೀರಿಸದೆಯೂ ಇರು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು. ನಾನೇ ಯೆಹೋವ ದೇವರು.
不可復仇,對你本國人,不可心懷怨恨;但應愛人如己:我是上主。
19 “‘ನೀನು ನನ್ನ ಆಜ್ಞೆಗಳನ್ನು ಕೈಗೊಳ್ಳಬೇಕು. “‘ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ. “‘ನಿನ್ನ ಹೊಲದಲ್ಲಿ ಮಿಶ್ರವಾದ ಬೀಜಗಳನ್ನು ಬಿತ್ತಬೇಡ. “‘ಇದಲ್ಲದೆ ನಾರು ಮತ್ತು ಉಣ್ಣೆ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು.
你們應遵守我的法令:不可使你的家畜與不同類配合;一快田內,不可播上不同的種子;用兩種織成的衣服,不可穿在你的身上。
20 “‘ಒಬ್ಬ ಪುರುಷನಿಗೆ ನಿಶ್ಚಿತವಾಗಿರುವ ದಾಸಿಯಾದ ಒಬ್ಬ ಸ್ತ್ರೀಯೊಂದಿಗೆ ಒಬ್ಬ ಮನುಷ್ಯನು ಸಂಗಮಿಸುವುದಕ್ಕಾಗಿ ಮಲಗಿದರೆ ಅವಳು ಬಿಡುಗಡೆಯನ್ನು ಹೊಂದಿರದಿದ್ದರೆ, ಇಲ್ಲವೆ ಅವಳಿಗೆ ಸ್ವಾತಂತ್ರ್ಯವನ್ನು ಕೊಡದಿರದಿದ್ದರೆ, ತಕ್ಕ ಶಿಕ್ಷೆಯಾಗಬೇಕು. ಅವಳು ಸ್ವತಂತ್ರಳಲ್ಲದ ಕಾರಣ ಅವಳಿಗೆ ಮರಣದಂಡನೆಯನ್ನು ವಿಧಿಸಬಾರದು.
若人同以許配於人,尚未贖回,或沒有獲得自由的卑女同寢,應受處罰,但不該死,因為她還沒有自由。
21 ಅವನು ಪ್ರಾಯಶ್ಚಿತ್ತ ಬಲಿಯ ಟಗರಾದ ತನ್ನ ಪ್ರಾಯಶ್ಚಿತ್ತ ಬಲಿಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಎದುರಿನಲ್ಲಿ ತರಬೇಕು.
但是,這人卻應把一隻贖過祭的公綿羊,牽到會幕門口,獻給上主,作為他的贖過祭。
22 ಅವನು ಮಾಡಿದ ಪಾಪಕ್ಕಾಗಿ ಪ್ರಾಯಶ್ಚಿತ್ತ ಬಲಿಯಾಗಿರುವ ಟಗರಿನಿಂದ ಯಾಜಕನು ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನು ಮಾಡಿದ ಪಾಪವನ್ನು ಅವನಿಗೆ ಕ್ಷಮಿಸಲಾಗುವುದು.
司祭用這贖過祭的公綿羊,上主面前,代他為他所犯的罪行贖罪禮;他犯的罪最方可得赦。
23 “‘ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ, ಅದರ ಫಲವನ್ನು ಮೂರು ವರುಷಗಳವರೆಗೆ ಅಶುದ್ಧವೆಂದೆಣಿಸಿ ಅದನ್ನು ತಿನ್ನಬಾರದು.
幾時你們進了那地方,栽種了什麼果樹,樹上的果子,你們應視為不潔;三年以內你們算是不潔,不可以吃;
24 ಆದರೆ ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಫಲವು ಯೆಹೋವ ದೇವರ ಸ್ತೋತ್ರಕ್ಕಾಗಿ ಪರಿಶುದ್ಧವಾಗಿರುವುದು.
到第四年,結的一切果實,都是聖的,應做讚頌上主的禮品;
25 ಐದನೆಯ ವರುಷದಲ್ಲಿ ಅದರ ಫಲವನ್ನು ನೀವು ತಿನ್ನಬೇಕು. ಆಗ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸುವುದು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
到第五年,才可吃樹上結的果實,使樹為你們增加出產;我,上主是你們的天主。
26 “‘ರಕ್ತದೊಂದಿಗೆ ಯಾವುದನ್ನೂ ನೀವು ತಿನ್ನಬಾರದು. “‘ಇದಲ್ಲದೆ ಮಂತ್ರವನ್ನು ಮಾಡಬಾರದು. ಇಲ್ಲವೆ ಶಕುನಗಳನ್ನು ನೋಡಬಾರದು.
你們不可吃任何帶血的食物,不可占普,不可念咒;
27 “‘ನಿಮ್ಮ ತಲೆಯ ಮೂಲೆಗಳನ್ನು ದುಂಡಗೆ ಕತ್ತರಿಸಬಾರದು. ಇದಲ್ಲದೆ ನಿಮ್ಮ ಗಡ್ಡದ ಮೂಲೆಯನ್ನು ಕೆಡಿಸಬಾರದು.
不可將兩邊的頭髮剃圓;兩邊得鬍鬚,也不可修剪。
28 “‘ಸತ್ತವರಿಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು. ನಿಮ್ಮ ಮೇಲೆ ಯಾವ ಹಚ್ಚೆಗಳನ್ನೂ ಹಚ್ಚಿಸಿಕೊಳ್ಳಬಾರದು. ನಾನೇ ಯೆಹೋವ ದೇವರು.
不可為死者割傷你們的身體,也不可在你們身上刺花紋:我是上主。
29 “‘ನಿನ್ನ ಮಗಳು ವೇಶ್ಯೆಯಾಗುವಂತೆ ವ್ಯಭಿಚಾರಕ್ಕೆ ಬಿಡಬಾರದು. ಹಾಗೆ ಮಾಡಿದರೆ, ದೇಶವು ವೇಶ್ಯೆತನಕ್ಕೆ ಒಳಪಡುವುದು ಮತ್ತು ಕೆಟ್ಟತನದಿಂದ ತುಂಬಿಹೋಗುವುದು.
不可褻瀆你的女兒,令她賣淫,免得這地方成為淫場,充滿淫亂。
30 “‘ನನ್ನ ವಿಶ್ರಾಂತಿಯ ದಿನಗಳನ್ನು ನೀವು ಆಚರಿಸಬೇಕು. ನನ್ನ ಪರಿಶುದ್ಧಸ್ಥಳದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನೇ ಯೆಹೋವ ದೇವರು.
應遵守我的安息日,應敬畏我的聖所:我是上主。
31 “‘ಮಾಟಗಾರರನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಅಶುದ್ಧವಾಗದಂತೆ ಭೂತಪ್ರೇತಗಳನ್ನು ವಿಚಾರಿಸುವವರನ್ನು ಅನುಸರಿಸಬೇಡ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
不可去探詢亡魂,亦不可詢問占普者,而為他們所玷汙:我,上主是你們的天主。
32 “‘ತಲೆ ನೆರೆತ ವೃದ್ಧರ ಮುಂದೆ ಎದ್ದು ನಿಂತುಕೊಳ್ಳಬೇಕು, ಅವರ ಸಮ್ಮುಖವನ್ನು ಗೌರವಿಸು. ನಿನ್ನ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು.
在白髮老人前,應起立;對老年人要尊敬,應敬畏你的天主:我是上主。
33 “‘ಒಬ್ಬ ಪರಕೀಯನು ನಿಮ್ಮ ದೇಶದಲ್ಲಿ ನಿನ್ನೊಂದಿಗೆ ಪ್ರವಾಸಿಯಾಗಿದ್ದರೆ, ಅವನನ್ನು ಉಪದ್ರವ ಪಡಿಸಬೇಡಿರಿ.
若外方人在你們地域內,與你住在一起,不可欺壓他;
34 ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೇ ಸ್ವದೇಶದವನಂತಿರಲಿ. ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಏಕೆಂದರೆ ನೀವು ಸಹ ಈಜಿಪ್ಟ್ ದೇಶದಲ್ಲಿ ಪರಕೀಯರಾಗಿದ್ದಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
對與你們住在一起的外方人,應看作你們中的一個同鄉,愛他如愛你自己,因為你們在埃及地也作過外方人:我,上主是你們的天主。
35 “‘ನಿಮ್ಮ ನಿರ್ಣಯದಲ್ಲಿಯೂ, ಅಳೆಯುವುದರಲ್ಲಿಯೂ, ತೂಕದಲ್ಲಿಯೂ, ಅಳತೆಯಲ್ಲಿಯೂ ನೀವು ಅನ್ಯಾಯ ಮಾಡಬೇಡಿರಿ.
再審斷度、量、衡上,不可不公平;
36 ತಕ್ಕಡಿ, ತೂಕದ ಕಲ್ಲುಗಳು, ಕಿಲೋಗ್ರಾಂ ಮತ್ತು ಲೀಟರ್ ನ್ಯಾಯಯುತವಾಗಿರಲಿ. ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಯೆಹೋವ ದೇವರು ನಾನೇ.
天平、法碼、升、勺,都應正確。我是領你們出離埃及地的上主你們的天主。
37 “‘ಆದ್ದರಿಂದ ನನ್ನ ಎಲ್ಲಾ ಆಜ್ಞೆಗಳನ್ನೂ, ನನ್ನ ಎಲ್ಲಾ ನ್ಯಾಯಗಳನ್ನೂ ನೀವು ಅನುಸರಿಸಿ ನಡೆಯಬೇಕು. ನಾನೇ ಯೆಹೋವ ದೇವರು,’” ಎಂದು ಹೇಳಿದರು.
你們應遵守我的一切法令和我的一切規定,一一依照執行:我是上主。」

< ಯಾಜಕಕಾಂಡ 19 >