< ಯಾಜಕಕಾಂಡ 2 >
1 “‘ಯಾರಾದರೂ ಯೆಹೋವ ದೇವರಿಗೆ ಧಾನ್ಯ ಸಮರ್ಪಣೆಯನ್ನು ಸಮರ್ಪಿಸುವುದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಸಬೇಕು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.
कसैले परमप्रभुको निम्ति अन्नबलि ल्याउँदा, त्यसको बलि मसिनो पिठोको होस्, र त्यसले त्यसमा तेल खन्याओस् र त्यसमा धूप हालोस् ।
2 ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಪುತ್ರರ ಬಳಿಗೆ ತರಬೇಕು. ಅವನು ಹಿಟ್ಟಿನಲ್ಲಿಯೂ, ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜಕನು ಅದನ್ನು ಜ್ಞಾಪಕಾರ್ಥವಾಗಿ ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.
त्यसले त्यो भेटी हारूनका छोराहरू, अर्थात् पुजारीहरूकहाँ लगोस्, र त्यहाँ तेल र धूपसहित त्यस मसिनो पिठोबाट पुजारीले एक मुट्ठी निकालोस् । त्यसपछि बलिको रूपमा पुजारीले त्यसलाई जलाओस् । त्यसले परमप्रभुको निम्ति मिठो सुगन्ध दिने छ; यो उहाँको निम्ति आगोद्वारा गरिएको बलि हुने छ ।
3 ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.
अन्नबलिबाट जे बाँकी रहन्छ त्यो हारून र तिनका छोराहरूको हुने छ । परमप्रभुको निम्ति आगोबाट गरिएका बलिहरूमध्ये यो अति पवित्र हुने छ ।
4 “‘ನೀನು ಒಲೆಯಲ್ಲಿ ಸುಟ್ಟ ಧಾನ್ಯ ಸಮರ್ಪಣೆಯನ್ನು ಕಾಣಿಕೆಯಾಗಿ ತರುವುದಾದರೆ, ಅದು ಹುಳಿಯಿಲ್ಲದ ಮತ್ತು ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು.
चुलोमा पकाइएको अखमिरी अन्नबलि चढाउँदा, त्यो तेल मिसाइएको मसिनो पिठोको नरम रोटी होस्, वा त्यो तेल लगाइएको अखमिरी कडा रोटी होस् ।
5 ನಿನ್ನ ಕಾಣಿಕೆಯು ಬೋಗುಣಿಯಲ್ಲಿ ಬೇಯಿಸಿದ ಧಾನ್ಯ ಸಮರ್ಪಣೆಯಾಗಿದ್ದರೆ, ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.
यदि तिमीहरूको अन्नबलि च्याप्टो फलामको तावामा पकाइएको हो भने, त्यो तेल मिसाइएको अखमिरी मसिनो पिठोको होस् ।
6 ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ, ಅದರ ಮೇಲೆ ಎಣ್ಣೆ ಸುರಿಯಬೇಕು, ಅದು ಆಹಾರ ಸಮರ್ಪಣೆಯಾಗಿದೆ.
त्यसलाई टुक्रा-टुक्रा पार्नू र त्यसमा तेल खन्याउनू । यो अन्नबलि हो ।
7 ನಿನ್ನ ಕಾಣಿಕೆಯು ತವೆಯಲ್ಲಿ ಬೇಯಿಸಿದ ಧಾನ್ಯವಾಗಿದ್ದರೆ, ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು.
यदि तिमीहरूको अन्नबलि तावामा पकाइएको हो भने, त्यो मसिनो पिठो र तेलबाट बनाउनू ।
8 ನೀನು ಇವುಗಳಿಂದ ಮಾಡಿದ ಧಾನ್ಯ ಸಮರ್ಪಣೆಯನ್ನು ಯೆಹೋವ ದೇವರಿಗೆ ತರಬೇಕು. ಅದು ಯಾಜಕನಿಗೆ ಒಪ್ಪಿಸಿದಾಗ, ಅವನು ಅದನ್ನು ಬಲಿಪೀಠದ ಬಳಿಗೆ ತರುವನು.
यी कुराहरूले बनाइएको अन्नबलि तिमीहरूले परमप्रभुकहाँ ल्याउनू, र त्यो पुजारीकहाँ लगियोस्, अनि त्यसले त्यो वेदीमा लैजाओस् ।
9 ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾಗಿ ಧಾನ್ಯ ಸಮರ್ಪಣೆಯನ್ನಾಗಿ ತೆಗೆದುಕೊಂಡು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು, ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿರುವುದು.
त्यसपछि पुजारीले त्यस अन्नबलिबाट केही झिकेर वेदीमा जलाओस् । यो आगोद्वारा गरिएको बलि हुने छ, र यसले परमप्रभुको निम्ति मिठो सुगन्ध दिने छ ।
10 ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.
अन्नबलिबाट बाँकी रहेका सबै हारून र त्यसका छोराहरूको हुने छ । आगोद्वारा परमप्रभुलाई चढाइएका बलिहरूमध्ये यो परमप्रभुको निम्ति अति पवित्र हुने छ ।
11 “‘ಯೆಹೋವ ದೇವರಿಗೆ ನೀನು ತರುವ ಧಾನ್ಯ ಸಮರ್ಪಣೆಯು ಯಾವುದೂ ಹುಳಿಯಿಂದ ಮಾಡಿದ್ದಾಗಿರಬಾರದು. ಏಕೆಂದರೆ ಯೆಹೋವ ದೇವರಿಗೆ ನೀವು ಬೆಂಕಿಯಿಂದ ಮಾಡುವ ಯಾವ ಸಮರ್ಪಣೆಯಲ್ಲಿ ಹುಳಿಯನ್ನಾಗಲಿ, ಜೇನನ್ನಾಗಲಿ ಬೆರೆಸಬಾರದು.
तिमीहरूले परमप्रभुलाई चढाउने कुनै पनि अन्नबलि खमिरद्वारा बनाइनुहुँदैन, किनभने परमप्रभुको निम्ति आगोद्वारा गरिएको बलिमा खमिर वा मह नजलाउनू ।
12 ಪ್ರಥಮ ಫಲದ ಕಾಣಿಕೆಯ ವಿಷಯದಲ್ಲಿಯಾದರೋ ನೀವು ಅವುಗಳನ್ನು ಯೆಹೋವ ದೇವರಿಗೆ ಸಮರ್ಪಿಸಬೇಕು. ಆದರೆ ಅವುಗಳನ್ನು ಬಲಿಪೀಠದ ಮೇಲೆ ಸುವಾಸನೆಗಾಗಿ ಸುಡಬಾರದು.
तिमीहरूले ती परमप्रभुलाई पहिलो फलहरूको भेटीको रूपमा चढाउनू, तर वेदीमा मिठो सुगन्ध दिनलाई ती प्रयोग नहोऊन् ।
13 ನಿನ್ನ ಪ್ರತಿಯೊಂದು ಧಾನ್ಯ ಸಮರ್ಪಣೆಯೂ ಉಪ್ಪಿನಲ್ಲಿ ಬೆರಕೆಯಾಗಿರಬೇಕು. ನಿನ್ನ ದೇವರ ಒಡಂಬಡಿಕೆಯ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು. ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.
तिमीहरूले आफ्ना सबै अन्नबलिहरूमा नून मिसाउनू । आफ्नो अन्नबलिमा आफ्ना परमेश्वरको प्रतिज्ञाको नून कहिल्यै नछुटाउनू । आफ्ना सबै भेटीहरूमा तिमीहरूले नून चढाउनू ।
14 “‘ನೀನು ನಿನ್ನ ಪ್ರಥಮ ಫಲಗಳ ಧಾನ್ಯ ಸಮರ್ಪಣೆಯನ್ನು ಯೆಹೋವ ದೇವರಿಗೆ ಮಾಡಿದರೆ, ನಿನ್ನ ಪ್ರಥಮ ಫಲ ಧಾನ್ಯ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸಬೇಕು.
परमप्रभुलाई पहिलो फलहरूको अन्नबलि चढाउँदा, आगोमा सेकाइएको र पिसिएको ताजा अन्न चढाउनू ।
15 ನೀನು ಅದರ ಮೇಲೆ ಎಣ್ಣೆಯನ್ನು ಸಾಂಬ್ರಾಣಿಯನ್ನು ಹಾಕು. ಇದೇ ಧಾನ್ಯ ಸಮರ್ಪಣೆ.
त्यसपछि त्यसमा तेल र धूप राख्नू । यो अन्नबलि हो ।
16 ಯಾಜಕನು ಬಡಿದ ಕಾಳುಗಳಲ್ಲಿ ಕೆಲವು ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿಯನ್ನು ಜ್ಞಾಪಕಾರ್ಥವಾಗಿ ಸುಡಬೇಕು. ಇದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.
त्यसपछि पुजारीले पिसिएको अन्न, तेल र धूपबाट केही जलाओस् । यो परमप्रभुको निम्ति आगोद्वारा गरिएको बलि हो ।