< ಯಾಜಕಕಾಂಡ 20 >

1 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
וַיְדַבֵּר יְהֹוָה אֶל־מֹשֶׁה לֵּאמֹֽר׃
2 “ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು: ‘ಇಸ್ರಾಯೇಲರಲ್ಲಿಯಾಗಲಿ, ಇಸ್ರಾಯೇಲಿನಲ್ಲಿ ಪ್ರವಾಸಿಯಾದ ಪರಕೀಯರಲ್ಲಿಯಾಗಲಿ ಯಾವನಾದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ, ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು. ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.
וְאֶל־בְּנֵי יִשְׂרָאֵל תֹּאמַר אִישׁ אִישׁ מִבְּנֵי יִשְׂרָאֵל וּמִן־הַגֵּר ׀ הַגָּר בְּיִשְׂרָאֵל אֲשֶׁר יִתֵּן מִזַּרְעוֹ לַמֹּלֶךְ מוֹת יוּמָת עַם הָאָרֶץ יִרְגְּמֻהוּ בָאָֽבֶן׃
3 ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. ಏಕೆಂದರೆ ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಅಶುದ್ಧಮಾಡುವಂತೆ ತನ್ನ ಮಕ್ಕಳನ್ನು ಮೋಲೆಕನಿಗೆ ಕೊಟ್ಟಿದ್ದಾನೆ.
וַאֲנִי אֶתֵּן אֶת־פָּנַי בָּאִישׁ הַהוּא וְהִכְרַתִּי אֹתוֹ מִקֶּרֶב עַמּוֹ כִּי מִזַּרְעוֹ נָתַן לַמֹּלֶךְ לְמַעַן טַמֵּא אֶת־מִקְדָּשִׁי וּלְחַלֵּל אֶת־שֵׁם קׇדְשִֽׁי׃
4 ಆ ಮನುಷ್ಯನು ತನ್ನ ಸಂತತಿಯನ್ನು ಮೋಲೆಕನಿಗೆ ಕೊಡುವಾಗ, ಜನರು ತಮ್ಮ ಕಣ್ಣುಗಳನ್ನು ಮರೆಮಾಡಿ, ಅವನನ್ನು ಕೊಲ್ಲದೆ ಹೋದರೆ,
וְאִם הַעְלֵם יַעְלִימֽוּ עַם הָאָרֶץ אֶת־עֵֽינֵיהֶם מִן־הָאִישׁ הַהוּא בְּתִתּוֹ מִזַּרְעוֹ לַמֹּלֶךְ לְבִלְתִּי הָמִית אֹתֽוֹ׃
5 ಆಗ ನಾನು ಆ ಮನುಷ್ಯನಿಗೂ, ಅವನ ಕುಟುಂಬಕ್ಕೂ ವಿರೋಧವಾಗಿಯೂ, ವಿಮುಖವಾಗಿಯೂ ಇರುವೆನು. ಮೋಲೆಕನನ್ನು ಪೂಜೆ ಮಾಡಿದ್ದಕ್ಕಾಗಿ ಅವನನ್ನೂ, ದೇವದ್ರೋಹಿಗಳಾಗಿ ಅವನನ್ನು ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
וְשַׂמְתִּי אֲנִי אֶת־פָּנַי בָּאִישׁ הַהוּא וּבְמִשְׁפַּחְתּוֹ וְהִכְרַתִּי אֹתוֹ וְאֵת ׀ כׇּל־הַזֹּנִים אַחֲרָיו לִזְנוֹת אַחֲרֵי הַמֹּלֶךְ מִקֶּרֶב עַמָּֽם׃
6 “‘ಇದಲ್ಲದೆ ಮಾಟಗಾರರನ್ನು ಮತ್ತು ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಅಂಥ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
וְהַנֶּפֶשׁ אֲשֶׁר תִּפְנֶה אֶל־הָֽאֹבֹת וְאֶל־הַיִּדְּעֹנִים לִזְנֹת אַחֲרֵיהֶם וְנָתַתִּי אֶת־פָּנַי בַּנֶּפֶשׁ הַהִוא וְהִכְרַתִּי אֹתוֹ מִקֶּרֶב עַמּֽוֹ׃
7 “‘ಆದ್ದರಿಂದ ನೀವು ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ ಮತ್ತು ಪರಿಶುದ್ಧರಾಗಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
וְהִתְקַדִּשְׁתֶּם וִהְיִיתֶם קְדֹשִׁים כִּי אֲנִי יְהֹוָה אֱלֹהֵיכֶֽם׃
8 ಇದಲ್ಲದೆ ನೀವು ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳನ್ನು ಪಾಲಿಸಬೇಕು. ನಿಮ್ಮನ್ನು ಶುದ್ಧಪಡಿಸುವ ಯೆಹೋವ ದೇವರು ನಾನೇ.
וּשְׁמַרְתֶּם אֶת־חֻקֹּתַי וַעֲשִׂיתֶם אֹתָם אֲנִי יְהֹוָה מְקַדִּשְׁכֶֽם׃
9 “‘ತನ್ನ ತಂದೆಯಾನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವರಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಯಾರು ತನ್ನ ತಂದೆಯಾನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವರೋ, ಅವರ ಪಾಪವು ಸ್ವಯಂಕೃತವಾದುದು.
כִּֽי־אִישׁ אִישׁ אֲשֶׁר יְקַלֵּל אֶת־אָבִיו וְאֶת־אִמּוֹ מוֹת יוּמָת אָבִיו וְאִמּוֹ קִלֵּל דָּמָיו בּֽוֹ׃
10 “‘ಇದಲ್ಲದೆ ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿಚಾರ ಮಾಡಿದರೆ, ವ್ಯಭಿಚಾರ ಮಾಡುವವನಿಗೂ ಮತ್ತು ವ್ಯಭಿಚಾರ ಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
וְאִישׁ אֲשֶׁר יִנְאַף אֶת־אֵשֶׁת אִישׁ אֲשֶׁר יִנְאַף אֶת־אֵשֶׁת רֵעֵהוּ מֽוֹת־יוּמַת הַנֹּאֵף וְהַנֹּאָֽפֶת׃
11 “‘ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಗೆ ಮಾನಭಂಗ ಮಾಡಿದಂತೆ. ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಅವರ ರಕ್ತವು ಅವರ ಮೇಲೆ ಇರುವುದು.
וְאִישׁ אֲשֶׁר יִשְׁכַּב אֶת־אֵשֶׁת אָבִיו עֶרְוַת אָבִיו גִּלָּה מֽוֹת־יוּמְתוּ שְׁנֵיהֶם דְּמֵיהֶם בָּֽם׃
12 “‘ಒಬ್ಬನು ತನ್ನ ಸೊಸೆಯೊಂದಿಗೆ ಸಂಗಮಿಸಿದರೆ, ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಅವರು ವಿಕೃತವನ್ನು ಮಾಡಿದ್ದಾರೆ, ಅವರ ಪಾಪವು ಅವರ ಮೇಲೆ ಇರುವುದು.
וְאִישׁ אֲשֶׁר יִשְׁכַּב אֶת־כַּלָּתוֹ מוֹת יוּמְתוּ שְׁנֵיהֶם תֶּבֶל עָשׂוּ דְּמֵיהֶם בָּֽם׃
13 “‘ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ, ಅವರಿಬ್ಬರೂ ಅಸಹ್ಯವಾದದ್ದನ್ನು ಮಾಡಿದವರಾಗಿದ್ದಾರೆ. ಅವರಿಗೆ ನಿಶ್ಚಯವಾಗಿಯೂ ಮರಣದಂಡನೆ ವಿಧಿಸಬೇಕು. ಅವರ ರಕ್ತವು ಅವರ ಮೇಲೆ ಇರುವುದು.
וְאִישׁ אֲשֶׁר יִשְׁכַּב אֶת־זָכָר מִשְׁכְּבֵי אִשָּׁה תּוֹעֵבָה עָשׂוּ שְׁנֵיהֶם מוֹת יוּמָתוּ דְּמֵיהֶם בָּֽם׃
14 “‘ಒಬ್ಬ ಮನುಷ್ಯನು ಒಬ್ಬ ಸ್ತ್ರೀಯನ್ನೂ, ಅವಳ ತಾಯಿಯನ್ನೂ ಮದುವೆ ಮಾಡಿಕೊಂಡರೆ ಅದು ದುಷ್ಟತನವಾಗಿದೆ. ಆದ್ದರಿಂದ ನಿಮ್ಮಲ್ಲಿ ದುಷ್ಟತನವು ಇರದಂತೆ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು.
וְאִישׁ אֲשֶׁר יִקַּח אֶת־אִשָּׁה וְאֶת־אִמָּהּ זִמָּה הִוא בָּאֵשׁ יִשְׂרְפוּ אֹתוֹ וְאֶתְהֶן וְלֹא־תִהְיֶה זִמָּה בְּתוֹכְכֶֽם׃
15 “‘ಒಬ್ಬನು ಪಶುವಿನೊಂದಿಗೆ ಸಂಗಮಿಸಿದರೆ ಅವನಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು ಮತ್ತು ನೀವು ಆ ಪಶುವನ್ನು ವಧಿಸಬೇಕು.
וְאִישׁ אֲשֶׁר יִתֵּן שְׁכׇבְתּוֹ בִּבְהֵמָה מוֹת יוּמָת וְאֶת־הַבְּהֵמָה תַּהֲרֹֽגוּ׃
16 “‘ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವುದಕ್ಕಾಗಿ ಮಲಗಿಕೊಂಡರೆ, ನೀವು ಆ ಸ್ತ್ರೀಯನ್ನೂ, ಆ ಪಶುವನ್ನೂ ಕೊಲ್ಲಬೇಕು. ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು. ಅವರ ಪಾಪವು ಅವರ ಮೇಲೆ ಇರುವುದು.
וְאִשָּׁה אֲשֶׁר תִּקְרַב אֶל־כׇּל־בְּהֵמָה לְרִבְעָהֿ אֹתָהּ וְהָרַגְתָּ אֶת־הָאִשָּׁה וְאֶת־הַבְּהֵמָה מוֹת יוּמָתוּ דְּמֵיהֶם בָּֽם׃
17 “‘ಒಬ್ಬನು ತನ್ನ ತಂದೆಯ ಇಲ್ಲವೆ ತನ್ನ ತಾಯಿಯ ಮಗಳಾದ ತನ್ನ ಸಹೋದರಿಯ ಬೆತ್ತಲೆತನವನ್ನು ನೋಡಿದರೆ, ಇಲ್ಲವೆ ಅವಳು ಅವನ ಬೆತ್ತಲೆತನವನ್ನು ನೋಡಿದರೆ ಅದು ದುಷ್ಟತನವೇ. ಅವರನ್ನು ತಮ್ಮ ಜನರ ಮಧ್ಯದಿಂದ ತೆಗೆದುಹಾಕಬೇಕು. ಅವರ ರಕ್ತವು ಅವರ ಮೇಲೆ ಇರುವುದು. ಅವನು ತನ್ನ ಸಹೋದರಿಯನ್ನು ಸಂಗಮಿಸಿದ್ದರಿಂದ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳುವನು.
וְאִישׁ אֲשֶׁר־יִקַּח אֶת־אֲחֹתוֹ בַּת־אָבִיו אוֹ בַת־אִמּוֹ וְרָאָה אֶת־עֶרְוָתָהּ וְהִֽיא־תִרְאֶה אֶת־עֶרְוָתוֹ חֶסֶד הוּא וְנִכְרְתוּ לְעֵינֵי בְּנֵי עַמָּם עֶרְוַת אֲחֹתוֹ גִּלָּה עֲוֺנוֹ יִשָּֽׂא׃
18 “‘ಒಬ್ಬ ಮನುಷ್ಯನು ಮುಟ್ಟಾದ ಸ್ತ್ರೀಯೊಂದಿಗೆ ಮಲಗಿ, ಆಕೆಯೊಂದಿಗೆ ಲೈಂಗಿಕ ಸಂಪರ್ಕ ಮಾಡಿದರೆ, ಅವನು ಆಕೆಯ ಮುಟ್ಟಿನ ಮೂಲವನ್ನು ಬಹಿರಂಗಪಡಿಸಿದ್ದಾನೆ. ಆಕೆ ಅದನ್ನು ಬಹಿರಂಗಪಡಿಸಿದ್ದಾಳೆ. ಅವರಿಬ್ಬರನ್ನೂ ಸ್ವಜನರಿಂದ ಬಹಿಷ್ಕರಿಸಬೇಕು.
וְאִישׁ אֲשֶׁר־יִשְׁכַּב אֶת־אִשָּׁה דָּוָה וְגִלָּה אֶת־עֶרְוָתָהּ אֶת־מְקֹרָהּ הֶֽעֱרָה וְהִוא גִּלְּתָה אֶת־מְקוֹר דָּמֶיהָ וְנִכְרְתוּ שְׁנֵיהֶם מִקֶּרֶב עַמָּֽם׃
19 “‘ನೀನು ನಿನ್ನ ತಾಯಿಯ ಸಹೋದರಿ ಇಲ್ಲವೆ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಪರ್ಕ ಮಾಡಬೇಡ. ಅದು ಸಮೀಪ ಬಂಧುವನ್ನು ಅಗೌರವಿಸಿದ ಹಾಗೆ ಅದಕ್ಕೆ ನೀವಿಬ್ಬರೂ ಜವಾಬ್ದಾರರು.
וְעֶרְוַת אֲחוֹת אִמְּךָ וַאֲחוֹת אָבִיךָ לֹא תְגַלֵּה כִּי אֶת־שְׁאֵרוֹ הֶעֱרָה עֲוֺנָם יִשָּֽׂאוּ׃
20 “‘ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ, ಅವನು ತನ್ನ ಚಿಕ್ಕಪ್ಪನನ್ನು ಅಗೌರವಿಸಿದಂತೆ. ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು. ಅವರು ಮಕ್ಕಳಿಲ್ಲದೆ ಸಾಯುವರು.
וְאִישׁ אֲשֶׁר יִשְׁכַּב אֶת־דֹּדָתוֹ עֶרְוַת דֹּדוֹ גִּלָּה חֶטְאָם יִשָּׂאוּ עֲרִירִים יָמֻֽתוּ׃
21 “‘ಒಬ್ಬನು ತನ್ನ ಸಹೋದರನ ಹೆಂಡತಿಯನ್ನು ತೆಗೆದುಕೊಂಡರೆ, ಅದು ಅಶುದ್ಧವಾದದ್ದು. ಏಕೆಂದರೆ ಅವನು ತನ್ನ ಸಹೋದರನನ್ನು ಅಗೌರವಿಸಿದ್ದಾನೆ. ಅವರು ಮಕ್ಕಳಿಲ್ಲದವರಾಗುವರು.
וְאִישׁ אֲשֶׁר יִקַּח אֶת־אֵשֶׁת אָחִיו נִדָּה הִוא עֶרְוַת אָחִיו גִּלָּה עֲרִירִים יִהְיֽוּ׃
22 “‘ನೀವು ನನ್ನ ಎಲ್ಲಾ ನಿಯಮಗಳನ್ನೂ, ನನ್ನ ಎಲ್ಲಾ ನ್ಯಾಯಗಳನ್ನೂ ಕೈಗೊಂಡು ಪಾಲಿಸಬೇಕು. ಹೀಗಿದ್ದರೆ ನೀವು ವಾಸಿಸುವುದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವುದಿಲ್ಲ.
וּשְׁמַרְתֶּם אֶת־כׇּל־חֻקֹּתַי וְאֶת־כׇּל־מִשְׁפָּטַי וַעֲשִׂיתֶם אֹתָם וְלֹא־תָקִיא אֶתְכֶם הָאָרֶץ אֲשֶׁר אֲנִי מֵבִיא אֶתְכֶם שָׁמָּה לָשֶׁבֶת בָּֽהּ׃
23 ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು. ಏಕೆಂದರೆ ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ. ಆದಕಾರಣ ನಾನು ಅವರನ್ನು ಕಂಡು ಅಸಹ್ಯಗೊಂಡಿದ್ದೇನೆ.
וְלֹא תֵֽלְכוּ בְּחֻקֹּת הַגּוֹי אֲשֶׁר־אֲנִי מְשַׁלֵּחַ מִפְּנֵיכֶם כִּי אֶת־כׇּל־אֵלֶּה עָשׂוּ וָאָקֻץ בָּֽם׃
24 ಆದರೆ, “ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ.” ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
וָאֹמַר לָכֶם אַתֶּם תִּֽירְשׁוּ אֶת־אַדְמָתָם וַאֲנִי אֶתְּנֶנָּה לָכֶם לָרֶשֶׁת אֹתָהּ אֶרֶץ זָבַת חָלָב וּדְבָשׁ אֲנִי יְהֹוָה אֱלֹֽהֵיכֶם אֲשֶׁר־הִבְדַּלְתִּי אֶתְכֶם מִן־הָֽעַמִּֽים׃
25 “‘ಆದ್ದರಿಂದ ನೀವು ಶುದ್ಧವಾದ ಮತ್ತು ಅಶುದ್ಧವಾದ ಪಶುಗಳ ಮಧ್ಯದಲ್ಲಿಯೂ, ಅಶುದ್ಧವಾದ ಮತ್ತು ಶುದ್ಧವಾದ ಪಕ್ಷಿಗಳ ಮಧ್ಯದಲ್ಲಿಯೂ ವ್ಯತ್ಯಾಸ ಮಾಡಬೇಕು. ಇದಲ್ಲದೆ ನಾನು ನಿಮ್ಮಿಂದ ಪ್ರತ್ಯೇಕಿಸಿದ ಅಶುದ್ಧವಾದ ಪಶುಗಳಿಂದಲೂ ಇಲ್ಲವೆ ಪಕ್ಷಿಗಳಿಂದಲೂ ಇಲ್ಲವೆ ಭೂಮಿಯ ಮೇಲೆ ಚಲಿಸುವ ಯಾವ ತರವಾದ ಜೀವಿಯಿಂದಲೂ ನೀವು ನಿಮ್ಮ ಪ್ರಾಣಗಳನ್ನು ಅಶುದ್ಧಮಾಡಿಕೊಳ್ಳಬಾರದು.
וְהִבְדַּלְתֶּם בֵּֽין־הַבְּהֵמָה הַטְּהֹרָה לַטְּמֵאָה וּבֵין־הָעוֹף הַטָּמֵא לַטָּהֹר וְלֹֽא־תְשַׁקְּצוּ אֶת־נַפְשֹֽׁתֵיכֶם בַּבְּהֵמָה וּבָעוֹף וּבְכֹל אֲשֶׁר תִּרְמֹשׂ הָֽאֲדָמָה אֲשֶׁר־הִבְדַּלְתִּי לָכֶם לְטַמֵּֽא׃
26 ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ ಯೆಹೋವ ದೇವರಾದ ನಾನು ಪರಿಶುದ್ಧನಾಗಿರುವುದರಿಂದ, ನೀವು ನನಗೆ ಪರಿಶುದ್ಧರಾಗಿರಬೇಕು.
וִהְיִיתֶם לִי קְדֹשִׁים כִּי קָדוֹשׁ אֲנִי יְהֹוָה וָאַבְדִּל אֶתְכֶם מִן־הָֽעַמִּים לִהְיוֹת לִֽי׃
27 “‘ಪುರುಷನಾಗಲಿ, ಸ್ತ್ರೀಯಾಗಲಿ ಮಾಟಗಾರರಾಗಿದ್ದರೆ ಇಲ್ಲವೆ ಭೂತಪ್ರೇತಗಳನ್ನು ವಿಚಾರಿಸುವವರಾಗಿದ್ದರೆ, ಅವರನ್ನು ನಿಶ್ಚಯವಾಗಿ ಕೊಲ್ಲಬೇಕು. ಅವರ ಪಾಪವು ಅವರ ಮೇಲೆ ಇರುವುದು.’”
וְאִישׁ אֽוֹ־אִשָּׁה כִּֽי־יִהְיֶה בָהֶם אוֹב אוֹ יִדְּעֹנִי מוֹת יוּמָתוּ בָּאֶבֶן יִרְגְּמוּ אֹתָם דְּמֵיהֶם בָּֽם׃

< ಯಾಜಕಕಾಂಡ 20 >