< ಯಾಜಕಕಾಂಡ 21 >

1 ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ, ಅವರಿಗೆ ಹೀಗೆ ಹೇಳು: ಸತ್ತವರ ದೇಹವನ್ನು ಮುಟ್ಟುವುದರಿಂದ ಯಾವ ಯಾಜಕನೂ ಅಪವಿತ್ರನಾಗಬಾರದು.
וַיֹּאמֶר יְהֹוָה אֶל־מֹשֶׁה אֱמֹר אֶל־הַכֹּהֲנִים בְּנֵי אַהֲרֹן וְאָמַרְתָּ אֲלֵהֶם לְנֶפֶשׁ לֹֽא־יִטַּמָּא בְּעַמָּֽיו׃
2 ಆದರೆ ತನ್ನ ಹತ್ತಿರದ ಸಂಬಂಧಿಯಾಗಿ, ಅಂದರೆ ಅವನ ತಾಯಿಯಾಗಿ, ತಂದೆಯಾಗಿ, ಅವನ ಮಗನಿಗಾಗಿ, ಅವನ ಮಗಳಿಗಾಗಿ, ಅವನ ಸಹೋದರನಿಗಾಗಿ,
כִּי אִם־לִשְׁאֵרוֹ הַקָּרֹב אֵלָיו לְאִמּוֹ וּלְאָבִיו וְלִבְנוֹ וּלְבִתּוֹ וּלְאָחִֽיו׃
3 ಅವನಿಗೆ ಹತ್ತಿರದ ಗಂಡನಿಲ್ಲದ ಕನ್ನಿಕೆಯಾದ ಸಹೋದರಿಗಾಗಿ ಹೊರತು,
וְלַאֲחֹתוֹ הַבְּתוּלָה הַקְּרוֹבָה אֵלָיו אֲשֶׁר לֹֽא־הָיְתָה לְאִישׁ לָהּ יִטַּמָּֽא׃
4 ಅವನು ತನ್ನ ಜನರೊಳಗೆ ಮುಖ್ಯಸ್ಥನಾಗಿರುವುದರಿಂದ ತನ್ನನ್ನು ತಾನು ಅಪವಿತ್ರವಾಗಬಾರದು.
לֹא יִטַּמָּא בַּעַל בְּעַמָּיו לְהֵחַלּֽוֹ׃
5 “‘ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿಕೊಳ್ಳಬಾರದು. ದೇಹವನ್ನು ಗಾಯಮಾಡಿಕೊಳ್ಳಬಾರದು.
לֹֽא־[יִקְרְחוּ] (יקרחה) קׇרְחָה בְּרֹאשָׁם וּפְאַת זְקָנָם לֹא יְגַלֵּחוּ וּבִבְשָׂרָם לֹא יִשְׂרְטוּ שָׂרָֽטֶת׃
6 ಅವರು ತಮ್ಮ ಯೆಹೋವ ದೇವರಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವುದರಿಂದ, ಅವರು ತಮ್ಮ ದೇವರ ಹೆಸರನ್ನು ಅಗೌರವಪಡಿಸದೆ, ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು. ಆದಕಾರಣ ಅವರು ಪರಿಶುದ್ಧರಾಗಿರುವರು.
קְדֹשִׁים יִהְיוּ לֵאלֹהֵיהֶם וְלֹא יְחַלְּלוּ שֵׁם אֱלֹהֵיהֶם כִּי אֶת־אִשֵּׁי יְהֹוָה לֶחֶם אֱלֹהֵיהֶם הֵם מַקְרִיבִם וְהָיוּ קֹֽדֶשׁ׃
7 “‘ಯಾಜಕರು ತಮ್ಮ ದೇವರಿಗೆ ಪರಿಶುದ್ಧರಾಗಿರುವುದರಿಂದ ವೇಶ್ಯೆಯನ್ನಾಗಲಿ, ಶೀಲಭ್ರಷ್ಠ ಸ್ತ್ರೀಯನ್ನಾಗಲಿ, ಗಂಡನಿಂದ ವಿಚ್ಛೇದನ ಪಡೆದವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.
אִשָּׁה זֹנָה וַחֲלָלָה לֹא יִקָּחוּ וְאִשָּׁה גְּרוּשָׁה מֵאִישָׁהּ לֹא יִקָּחוּ כִּֽי־קָדֹשׁ הוּא לֵאלֹהָֽיו׃
8 ಅವರನ್ನು ಪರಿಶುದ್ಧರೆಣಿಸಿ, ಏಕೆಂದರೆ ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀನು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವ ದೇವರೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀನು ಭಾವಿಸಬೇಕು.
וְקִדַּשְׁתּוֹ כִּֽי־אֶת־לֶחֶם אֱלֹהֶיךָ הוּא מַקְרִיב קָדֹשׁ יִֽהְיֶה־לָּךְ כִּי קָדוֹשׁ אֲנִי יְהֹוָה מְקַדִּשְׁכֶֽם׃
9 “‘ಯಾವುದೇ ಯಾಜಕನ ಮಗಳು ವ್ಯಭಿಚಾರ ಕೃತ್ಯದಿಂದ ತನ್ನನ್ನು ಅಪವಿತ್ರ ಮಾಡಿಕೊಂಡರೆ, ಅವಳು ತನ್ನ ತಂದೆಯನ್ನು ಅಗೌರವಿಸಿದ್ದಾಳೆ. ಅವಳನ್ನು ಬೆಂಕಿಯಿಂದ ಸುಡಬೇಕು.
וּבַת אִישׁ כֹּהֵן כִּי תֵחֵל לִזְנוֹת אֶת־אָבִיהָ הִיא מְחַלֶּלֶת בָּאֵשׁ תִּשָּׂרֵֽף׃
10 “‘ತನ್ನ ಸಹೋದರರೊಳಗೆ ಮಹಾಯಾಜಕನಾಗಿದ್ದು, ಯಾವನು ತೈಲಾಭಿಷೇಕ ಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ, ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು, ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು.
וְהַכֹּהֵן הַגָּדוֹל מֵאֶחָיו אֲֽשֶׁר־יוּצַק עַל־רֹאשׁוֹ ׀ שֶׁמֶן הַמִּשְׁחָה וּמִלֵּא אֶת־יָדוֹ לִלְבֹּשׁ אֶת־הַבְּגָדִים אֶת־רֹאשׁוֹ לֹא יִפְרָע וּבְגָדָיו לֹא יִפְרֹֽם׃
11 ಯಾವ ಮೃತ ಶರೀರದ ಬಳಿಗೂ ಹೋಗಬಾರದು, ಅವನು ತನ್ನ ತಂದೆತಾಯಿಗಳ ಮರಣದ ನಿಮಿತ್ತ, ತನ್ನನ್ನು ಅಶುದ್ಧಮಾಡಿಕೊಳ್ಳಬಾರದು.
וְעַל כׇּל־נַפְשֹׁת מֵת לֹא יָבֹא לְאָבִיו וּלְאִמּוֹ לֹא יִטַּמָּֽא׃
12 ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ಮತ್ತು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು. ಏಕೆಂದರೆ ತನ್ನ ದೇವರ ಅಭಿಷೇಕ ತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನೆ. ನಾನೇ ಯೆಹೋವ ದೇವರು.
וּמִן־הַמִּקְדָּשׁ לֹא יֵצֵא וְלֹא יְחַלֵּל אֵת מִקְדַּשׁ אֱלֹהָיו כִּי נֵזֶר שֶׁמֶן מִשְׁחַת אֱלֹהָיו עָלָיו אֲנִי יְהֹוָֽה׃
13 “‘ಅವನು ಪುರುಷ ಸಂಪರ್ಕವೇ ಇಲ್ಲದ ಯುವತಿಯನ್ನು ಮದುವೆ ಮಾಡಿಕೊಳ್ಳಬೇಕೇ ಹೊರತು
וְהוּא אִשָּׁה בִבְתוּלֶיהָ יִקָּֽח׃
14 ವಿಧವೆಯನ್ನಾಗಲಿ, ಗಂಡ ಬಿಟ್ಟ ಸ್ತ್ರೀಯನ್ನಾಗಲಿ, ಇಲ್ಲವೆ ಅಪವಿತ್ರಳನ್ನಾಗಲಿ, ವೇಶ್ಯೆಯನ್ನಾಗಲಿ, ಇಂಥವರನ್ನು ಅವನು ಮದುವೆಯಾಗಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು.
אַלְמָנָה וּגְרוּשָׁה וַחֲלָלָה זֹנָה אֶת־אֵלֶּה לֹא יִקָּח כִּי אִם־בְּתוּלָה מֵעַמָּיו יִקַּח אִשָּֽׁה׃
15 ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಏಕೆಂದರೆ ಯೆಹೋವ ದೇವರಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ.’”
וְלֹֽא־יְחַלֵּל זַרְעוֹ בְּעַמָּיו כִּי אֲנִי יְהֹוָה מְקַדְּשֽׁוֹ׃
16 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
וַיְדַבֵּר יְהֹוָה אֶל־מֹשֶׁה לֵּאמֹֽר׃
17 “ಆರೋನನೊಂದಿಗೆ ಮಾತನಾಡಿ ಹೀಗೆ ಹೇಳು: ‘ನಿನ್ನ ಸಂತತಿಯ ವಂಶಾವಳಿಗಳಲ್ಲಿ ಯಾವನಿಗೆ ನ್ಯೂನತೆವಿರುತ್ತದೋ, ಅವನು ದೇವರ ರೊಟ್ಟಿಯನ್ನು ಸಮರ್ಪಿಸುವುದಕ್ಕಾಗಿ ಬರಬಾರದು.
דַּבֵּר אֶֽל־אַהֲרֹן לֵאמֹר אִישׁ מִֽזַּרְעֲךָ לְדֹרֹתָם אֲשֶׁר יִהְיֶה בוֹ מוּם לֹא יִקְרַב לְהַקְרִיב לֶחֶם אֱלֹהָֽיו׃
18 ಊನಗೊಂಡ ಮನುಷ್ಯನು ಸಮೀಪಕ್ಕೆ ಬರಬಾರದು. ಎಂದರೆ, ಕಣ್ಣಿಲ್ಲದವನು, ಕುಂಟನು, ಕುರೂಪವುಳ್ಳವನು, ಅಂಗವಿಕಲನು,
כִּי כׇל־אִישׁ אֲשֶׁר־בּוֹ מוּם לֹא יִקְרָב אִישׁ עִוֵּר אוֹ פִסֵּחַ אוֹ חָרֻם אוֹ שָׂרֽוּעַ׃
19 ಮುರಿದ ಪಾದವುಳ್ಳವನು, ಮುರಿದ ಕೈಯುಳ್ಳವನು,
אוֹ אִישׁ אֲשֶׁר־יִהְיֶה בוֹ שֶׁבֶר רָגֶל אוֹ שֶׁבֶר יָֽד׃
20 ಗೂನು ಬೆನ್ನುಳ್ಳವನು, ಗಿಡ್ಡನು, ಕಣ್ಣುಗಳಲ್ಲಿ ನ್ಯೂನತೆವುಳ್ಳವನು, ಕಜ್ಜಿತುರಿಗಳುಳ್ಳವನು, ತನ್ನನ್ನು ನಪುಂಸಕನನ್ನಾಗಿ ಮಾಡಿಕೊಂಡವನು,
אֽוֹ־גִבֵּן אוֹ־דַק אוֹ תְּבַלֻּל בְּעֵינוֹ אוֹ גָרָב אוֹ יַלֶּפֶת אוֹ מְרוֹחַ אָֽשֶׁךְ׃
21 ಯಾಜಕನಾದ ಆರೋನನ ಸಂತತಿಯಲ್ಲಿ ನ್ಯೂನತೆವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸುವುದಕ್ಕಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ಬರಬಾರದು. ನ್ಯೂನತೆವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವುದಕ್ಕಾಗಿ ಸಮೀಪ ಬರಬಾರದು.
כׇּל־אִישׁ אֲשֶׁר־בּוֹ מוּם מִזֶּרַע אַהֲרֹן הַכֹּהֵן לֹא יִגַּשׁ לְהַקְרִיב אֶת־אִשֵּׁי יְהֹוָה מוּם בּוֹ אֵת לֶחֶם אֱלֹהָיו לֹא יִגַּשׁ לְהַקְרִֽיב׃
22 ಅವನು ದೇವರ ರೊಟ್ಟಿಯಲ್ಲಿ ಪರಿಶುದ್ಧವಾದದ್ದನ್ನೂ, ಮಹಾಪರಿಶುದ್ಧವಾದದ್ದನ್ನೂ ತಿನ್ನಬಹುದು.
לֶחֶם אֱלֹהָיו מִקׇּדְשֵׁי הַקֳּדָשִׁים וּמִן־הַקֳּדָשִׁים יֹאכֵֽל׃
23 ಆದರೆ ಅವನು ನ್ಯೂನತೆವುಳ್ಳವನಾದ್ದರಿಂದ ತೆರೆಯ ಒಳಗೆ ಹೋಗಬಾರದು ಹಾಗು ಯಜ್ಞವೇದಿಯ ಬಳಿಗೆ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’”
אַךְ אֶל־הַפָּרֹכֶת לֹא יָבֹא וְאֶל־הַמִּזְבֵּחַ לֹא יִגַּשׁ כִּֽי־מוּם בּוֹ וְלֹא יְחַלֵּל אֶת־מִקְדָּשַׁי כִּי אֲנִי יְהֹוָה מְקַדְּשָֽׁם׃
24 ಮೋಶೆಯು ಅದನ್ನು ಆರೋನನಿಗೂ, ಅವನ ಪುತ್ರರಿಗೂ, ಇಸ್ರಾಯೇಲರಿಗೂ ಹೇಳಿದನು.
וַיְדַבֵּר מֹשֶׁה אֶֽל־אַהֲרֹן וְאֶל־בָּנָיו וְאֶֽל־כׇּל־בְּנֵי יִשְׂרָאֵֽל׃

< ಯಾಜಕಕಾಂಡ 21 >