< ಯಾಜಕಕಾಂಡ 24 >

1 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
וַיְדַבֵּר יְהֹוָה אֶל־מֹשֶׁה לֵּאמֹֽר׃
2 “ಬೆಳಕಿಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿರುವಂತೆ ಅವರು ಕುಟ್ಟಿದ ಶುದ್ಧವಾದ ಓಲಿವ್ ಎಣ್ಣೆಯನ್ನು ನನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕು.
צַו אֶת־בְּנֵי יִשְׂרָאֵל וְיִקְחוּ אֵלֶיךָ שֶׁמֶן זַיִת זָךְ כָּתִית לַמָּאוֹר לְהַעֲלֹת נֵר תָּמִֽיד׃
3 ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ನಿಮಗೆ ಮತ್ತು ನಿಮ್ಮ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರುವುದು.
מִחוּץ לְפָרֹכֶת הָעֵדֻת בְּאֹהֶל מוֹעֵד יַעֲרֹךְ אֹתוֹ אַהֲרֹן מֵעֶרֶב עַד־בֹּקֶר לִפְנֵי יְהֹוָה תָּמִיד חֻקַּת עוֹלָם לְדֹרֹֽתֵיכֶֽם׃
4 ದೀಪಗಳು ಚೊಕ್ಕ ಬಂಗಾರದ ದೀಪಸ್ತಂಭದ ಮೇಲೆ ಯೆಹೋವ ದೇವರ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.
עַל הַמְּנֹרָה הַטְּהֹרָה יַעֲרֹךְ אֶת־הַנֵּרוֹת לִפְנֵי יְהֹוָה תָּמִֽיד׃
5 “ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು. ಪ್ರತಿಯೊಂದು ರೊಟ್ಟಿ ಎರಡೆರಡು ಓಮರನಷ್ಟು ಇರಬೇಕು.
וְלָקַחְתָּ סֹלֶת וְאָפִיתָ אֹתָהּ שְׁתֵּים עֶשְׂרֵה חַלּוֹת שְׁנֵי עֶשְׂרֹנִים יִהְיֶה הַֽחַלָּה הָאֶחָֽת׃
6 ಅವುಗಳನ್ನು ಚೊಕ್ಕ ಬಂಗಾರದ ಮೇಜಿನ ಮೇಲೆ ಯೆಹೋವ ದೇವರ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ, ಎರಡು ಸಾಲುಗಳನ್ನಾಗಿ ಇಡಬೇಕು.
וְשַׂמְתָּ אוֹתָם שְׁתַּיִם מַֽעֲרָכוֹת שֵׁשׁ הַֽמַּעֲרָכֶת עַל הַשֻּׁלְחָן הַטָּהֹר לִפְנֵי יְהֹוָֽה׃
7 ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾಗಿ ಇರುವಂತೆಯೂ, ಬೆಂಕಿಯ ಮೂಲಕ ಯೆಹೋವ ದೇವರಿಗೆ ಸಮರ್ಪಣೆಯಾಗುವಂತೆಯೂ, ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.
וְנָתַתָּ עַל־הַֽמַּעֲרֶכֶת לְבֹנָה זַכָּה וְהָיְתָה לַלֶּחֶם לְאַזְכָּרָה אִשֶּׁה לַֽיהֹוָֽה׃
8 ಪ್ರತಿಯೊಂದು ಸಬ್ಬತ್ ದಿನದಲ್ಲಿಯೂ ಯೆಹೋವ ದೇವರ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮಪಡಿಸಬೇಕು. ಇದು ಇಸ್ರಾಯೇಲರ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.
בְּיוֹם הַשַּׁבָּת בְּיוֹם הַשַּׁבָּת יַֽעַרְכֶנּוּ לִפְנֵי יְהֹוָה תָּמִיד מֵאֵת בְּנֵֽי־יִשְׂרָאֵל בְּרִית עוֹלָֽם׃
9 ಅದು ಆರೋನನ ಮತ್ತು ಅವನ ಪುತ್ರರದಾಗಿರಬೇಕು. ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಏಕೆಂದರೆ ಅದು ನಿತ್ಯವಾದ ನಿಯಮವಾಗಿ ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವವುಗಳಲ್ಲಿ ಅವನಿಗೆ ಮಹಾಪರಿಶುದ್ಧವಾಗಿರುವುದು.”
וְהָֽיְתָה לְאַהֲרֹן וּלְבָנָיו וַאֲכָלֻהוּ בְּמָקוֹם קָדֹשׁ כִּי קֹדֶשׁ קׇֽדָשִׁים הוּא לוֹ מֵאִשֵּׁי יְהֹוָה חׇק־עוֹלָֽם׃
10 ಇಸ್ರಾಯೇಲಿನವಳಾದ ಒಬ್ಬ ಸ್ತ್ರೀಗೂ, ಈಜಿಪ್ಟಿನವನಾದ ಪುರುಷನಿಗೂ ಹುಟ್ಟಿದ ಮಗನು ಇಸ್ರಾಯೇಲರ ಪಾಳ್ಯಕ್ಕೆ ಬಂದನು. ಇಸ್ರಾಯೇಲಿನವಳಾದ ಸ್ತ್ರೀಯ ಈ ಮಗನು ಇಸ್ರಾಯೇಲಿನ ಒಬ್ಬ ಮನುಷ್ಯನೊಂದಿಗೆ ಪಾಳೆಯದಲ್ಲಿ ಜಗಳವಾಡಿದರು.
וַיֵּצֵא בֶּן־אִשָּׁה יִשְׂרְאֵלִית וְהוּא בֶּן־אִישׁ מִצְרִי בְּתוֹךְ בְּנֵי יִשְׂרָאֵל וַיִּנָּצוּ בַּֽמַּחֲנֶה בֶּן הַיִּשְׂרְאֵלִית וְאִישׁ הַיִּשְׂרְאֵלִֽי׃
11 ಇಸ್ರಾಯೇಲ್ ಸ್ತ್ರೀಯ ಮಗನು ಯೆಹೋವ ದೇವರ ನಾಮವನ್ನು ದೂಷಿಸಿ, ಶಪಿಸಿದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು. ಅವನ ತಾಯಿಯ ಹೆಸರು ಶೆಲೋಮಿತ್. ಇವಳು ದಾನ್ ಕುಲದ ದಿಬ್ರೀಯನ ಮಗಳು.
וַיִּקֹּב בֶּן־הָֽאִשָּׁה הַיִּשְׂרְאֵלִית אֶת־הַשֵּׁם וַיְקַלֵּל וַיָּבִיאוּ אֹתוֹ אֶל־מֹשֶׁה וְשֵׁם אִמּוֹ שְׁלֹמִית בַּת־דִּבְרִי לְמַטֵּה־דָֽן׃
12 ಯೆಹೋವ ದೇವರ ಮನಸ್ಸನ್ನು ತಿಳಿಯುವಂತೆ ಅವನನ್ನು ಕಾವಲಲ್ಲಿ ಬಿಟ್ಟರು.
וַיַּנִּיחֻהוּ בַּמִּשְׁמָר לִפְרֹשׁ לָהֶם עַל־פִּי יְהֹוָֽה׃
13 ಆಗ ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
וַיְדַבֵּר יְהֹוָה אֶל־מֹשֶׁה לֵּאמֹֽר׃
14 “ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ, ಅವನಿಂದ ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.
הוֹצֵא אֶת־הַֽמְקַלֵּל אֶל־מִחוּץ לַֽמַּחֲנֶה וְסָמְכוּ כׇֽל־הַשֹּׁמְעִים אֶת־יְדֵיהֶם עַל־רֹאשׁוֹ וְרָגְמוּ אֹתוֹ כׇּל־הָעֵדָֽה׃
15 ನೀನು ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ಶಪಿಸುವವನು, ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
וְאֶל־בְּנֵי יִשְׂרָאֵל תְּדַבֵּר לֵאמֹר אִישׁ אִישׁ כִּֽי־יְקַלֵּל אֱלֹהָיו וְנָשָׂא חֶטְאֽוֹ׃
16 ಯೆಹೋವ ದೇವರ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು. ಸಭೆಯವರೆಲ್ಲರೂ ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ಸ್ವದೇಶೀಯನಾಗಿರಲಿ, ಪರಕೀಯನಾಗಿರಲಿ ಯೆಹೋವ ದೇವರ ಹೆಸರನ್ನು ದೂಷಣೆ ಮಾಡಿದಾಗ, ಅವನನ್ನು ಮರಣ ಶಿಕ್ಷೆಗೆ ಒಳಪಡಿಸಬೇಕು.
וְנֹקֵב שֵׁם־יְהֹוָה מוֹת יוּמָת רָגוֹם יִרְגְּמוּ־בוֹ כׇּל־הָעֵדָה כַּגֵּר כָּֽאֶזְרָח בְּנׇקְבוֹ־שֵׁם יוּמָֽת׃
17 “‘ಯಾರಾದರೂ ಮನುಷ್ಯನನ್ನು ಕೊಂದರೆ, ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.
וְאִישׁ כִּי יַכֶּה כׇּל־נֶפֶשׁ אָדָם מוֹת יוּמָֽת׃
18 ಪಶುವನ್ನು ಕೊಲ್ಲುವವರು, ಅದಕ್ಕೆ ಪ್ರತಿಯಾಗಿ ಒಂದು ಪಶುವನ್ನು ಕೊಡಬೇಕು.
וּמַכֵּה נֶֽפֶשׁ־בְּהֵמָה יְשַׁלְּמֶנָּה נֶפֶשׁ תַּחַת נָֽפֶשׁ׃
19 ಯಾರಾದರೂ ತಮ್ಮ ನೆರೆಯವನಿಗೆ ಊನವಾಗುವಂತೆ ಮಾಡಿದರೆ, ಅವರು ಮಾಡಿದಂತೆಯೇ ಅವರಿಗೆ ಮಾಡಬೇಕು.
וְאִישׁ כִּֽי־יִתֵּן מוּם בַּעֲמִיתוֹ כַּאֲשֶׁר עָשָׂה כֵּן יֵעָשֶׂה לּֽוֹ׃
20 ಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವರು ಒಬ್ಬರಿಗೆ ಊನ ಮಾಡಿದ ಹಾಗೆಯೇ ಅವರಿಗೂ ಮಾಡಬೇಕು.
שֶׁבֶר תַּחַת שֶׁבֶר עַיִן תַּחַת עַיִן שֵׁן תַּחַת שֵׁן כַּאֲשֶׁר יִתֵּן מוּם בָּֽאָדָם כֵּן יִנָּתֶן בּֽוֹ׃
21 ಪಶುವನ್ನು ಕೊಲ್ಲುವವರು ಅದಕ್ಕೆ ಬದಲುಕೊಡಬೇಕು. ಮನುಷ್ಯರನ್ನು ಕೊಲ್ಲುವವರನ್ನು ಮರಣಕ್ಕೆ ಒಳಪಡಿಸಬೇಕು.
וּמַכֵּה בְהֵמָה יְשַׁלְּמֶנָּה וּמַכֵּה אָדָם יוּמָֽת׃
22 ನಿಮಗೆ ಒಂದೇ ವಿಧವಾದ ನಿಯಮವಿರಬೇಕು. ಸ್ವದೇಶಸ್ಥನಿಗೆ ಇರುವಂತೆಯೇ ಪರಕೀಯನಿಗೂ ಇರಬೇಕು. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’”
מִשְׁפַּט אֶחָד יִהְיֶה לָכֶם כַּגֵּר כָּאֶזְרָח יִהְיֶה כִּי אֲנִי יְהֹוָה אֱלֹהֵיכֶֽם׃
23 ಶಪಿಸಿದವನನ್ನು ಪಾಳೆಯದ ಹೊರಗೆ ತಂದು, ಅವನನ್ನು ಕಲ್ಲುಗಳಿಂದ ಹೊಡೆಯುವಂತೆ ಮೋಶೆಯು ಇಸ್ರಾಯೇಲರೊಂದಿಗೆ ಮಾತನಾಡಿದನು. ಆಗ ಇಸ್ರಾಯೇಲರು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.
וַיְדַבֵּר מֹשֶׁה אֶל־בְּנֵי יִשְׂרָאֵל וַיּוֹצִיאוּ אֶת־הַֽמְקַלֵּל אֶל־מִחוּץ לַֽמַּחֲנֶה וַיִּרְגְּמוּ אֹתוֹ אָבֶן וּבְנֵֽי־יִשְׂרָאֵל עָשׂוּ כַּֽאֲשֶׁר צִוָּה יְהֹוָה אֶת־מֹשֶֽׁה׃

< ಯಾಜಕಕಾಂಡ 24 >