< ಯಾಜಕಕಾಂಡ 25 >

1 ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
וַיְדַבֵּ֤ר יְהוָה֙ אֶל־מֹשֶׁ֔ה בְּהַ֥ר סִינַ֖י לֵאמֹֽר׃
2 “ಇಸ್ರಾಯೇಲರೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಬಂದಾಗ, ದೇಶವು ಯೆಹೋವ ದೇವರಿಗಾಗಿ ಸಬ್ಬತ್ ದಿನವನ್ನು ಕೈಗೊಳ್ಳಬೇಕು.
דַּבֵּ֞ר אֶל־בְּנֵ֤י יִשְׂרָאֵל֙ וְאָמַרְתָּ֣ אֲלֵהֶ֔ם כִּ֤י תָבֹ֙אוּ֙ אֶל־הָאָ֔רֶץ אֲשֶׁ֥ר אֲנִ֖י נֹתֵ֣ן לָכֶ֑ם וְשָׁבְתָ֣ה הָאָ֔רֶץ שַׁבָּ֖ת לַיהוָֽה׃
3 ಆರು ವರ್ಷ ನೀವು ನಿಮ್ಮ ಹೊಲವನ್ನು ಬಿತ್ತಬೇಕು. ಆರು ವರ್ಷ ನೀವು ನಿಮ್ಮ ದ್ರಾಕ್ಷಿತೋಟವನ್ನು ಕತ್ತರಿಸಬೇಕು, ಅವುಗಳಿಂದ ಫಲವನ್ನು ಕೂಡಿಸಬೇಕು.
שֵׁ֤שׁ שָׁנִים֙ תִּזְרַ֣ע שָׂדֶ֔ךָ וְשֵׁ֥שׁ שָׁנִ֖ים תִּזְמֹ֣ר כַּרְמֶ֑ךָ וְאָסַפְתָּ֖ אֶת־תְּבוּאָתָֽהּ׃
4 ಆದರೆ ಏಳನೆಯ ವರ್ಷವು ನೆಲಕ್ಕೆ ವಿಶ್ರಾಂತಿಕಾಲವಾಗಿರುವುದು. ಅದು ಯೆಹೋವ ದೇವರಿಗೆ ಸಬ್ಬತ್ ಕಾಲವಾಗಿರುವುದು. ನೀವು ಆ ವರ್ಷದಲ್ಲಿ ನಿಮ್ಮ ಹೊಲವನ್ನು ಬಿತ್ತಬಾರದು. ಇಲ್ಲವೆ ದ್ರಾಕ್ಷಿತೋಟವನ್ನು ಕತ್ತರಿಸಬಾರದು.
וּבַשָּׁנָ֣ה הַשְּׁבִיעִ֗ת שַׁבַּ֤ת שַׁבָּתֹון֙ יִהְיֶ֣ה לָאָ֔רֶץ שַׁבָּ֖ת לַיהוָ֑ה שָֽׂדְךָ֙ לֹ֣א תִזְרָ֔ע וְכַרְמְךָ֖ לֹ֥א תִזְמֹֽר׃
5 ತನ್ನಷ್ಟಕ್ಕೆ ತಾನೇ ಬೆಳೆದಿರುವ ಪೈರನ್ನು ನೀವು ಕೊಯ್ಯಬಾರದು. ಇಲ್ಲವೆ ಕತ್ತರಿಸದಿರುವ ದ್ರಾಕ್ಷಿಯ ಬಳ್ಳಿಯ ದ್ರಾಕ್ಷಿಹಣ್ಣುಗಳನ್ನು ಕೂಡಿಸಬಾರದು. ಏಕೆಂದರೆ ಅದು ದೇಶಕ್ಕೆ ವಿಶ್ರಾಂತಿಯ ವರ್ಷವಾಗಿರುವುದು.
אֵ֣ת סְפִ֤יחַ קְצִֽירְךָ֙ לֹ֣א תִקְצֹ֔ור וְאֶת־עִנְּבֵ֥י נְזִירֶ֖ךָ לֹ֣א תִבְצֹ֑ר שְׁנַ֥ת שַׁבָּתֹ֖ון יִהְיֶ֥ה לָאָֽרֶץ׃
6 ದೇಶದ ಆ ಸಬ್ಬತ್ ವರ್ಷದಲ್ಲಿ ತಾನಾಗಿಯೇ ಬೆಳೆದದ್ದು ನಿಮ್ಮ ಆಹಾರಕ್ಕಾಗಿ ಇರುವುದು. ಅದು ನಿಮಗೂ, ನಿಮ್ಮ ದಾಸದಾಸಿಯರಿಗೂ, ನಿಮ್ಮ ಕೂಲಿಯವರಿಗೂ, ನಿಮ್ಮೊಂದಿಗೆ ಪ್ರವಾಸಿಯಾಗಿರುವ ಪರಕೀಯರಿಗೂ,
וְ֠הָיְתָה שַׁבַּ֨ת הָאָ֤רֶץ לָכֶם֙ לְאָכְלָ֔ה לְךָ֖ וּלְעַבְדְּךָ֣ וְלַאֲמָתֶ֑ךָ וְלִשְׂכִֽירְךָ֙ וּלְתֹושָׁ֣בְךָ֔ הַגָּרִ֖ים עִמָּֽךְ׃
7 ನಿಮ್ಮ ದೇಶದಲ್ಲಿರುವ ಹುಟ್ಟುವಳಿಯೆಲ್ಲಾ ನಿಮ್ಮ ಪಶು ಮತ್ತು ಕಾಡುಮೃಗಗಳಿಗೆ ಆಹಾರವಾಗಬಹುದು.
וְלִ֨בְהֶמְתְּךָ֔ וְלַֽחַיָּ֖ה אֲשֶׁ֣ר בְּאַרְצֶ֑ךָ תִּהְיֶ֥ה כָל־תְּבוּאָתָ֖הּ לֶאֱכֹֽל׃ ס
8 “‘ಇದಲ್ಲದೆ ಏಳು ವರ್ಷಕ್ಕೆ ಒಂದರಂತೆ ಏಳು ಸಬ್ಬತ್ ವರ್ಷಗಳನ್ನು ಎಣಿಸಬೇಕು. ಆ ಏಳು ಸಬ್ಬತ್ ವರ್ಷಗಳ ಕಾಲವು ಒಟ್ಟು ನಾಲ್ವತ್ತೊಂಬತ್ತು ವರ್ಷಗಳಾಗಿರುವುವು.
וְסָפַרְתָּ֣ לְךָ֗ שֶׁ֚בַע שַׁבְּתֹ֣ת שָׁנִ֔ים שֶׁ֥בַע שָׁנִ֖ים שֶׁ֣בַע פְּעָמִ֑ים וְהָי֣וּ לְךָ֗ יְמֵי֙ שֶׁ֚בַע שַׁבְּתֹ֣ת הַשָּׁנִ֔ים תֵּ֥שַׁע וְאַרְבָּעִ֖ים שָׁנָֽה׃
9 ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೆಯ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸಬೇಕು. ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.
וְהֽ͏ַעֲבַרְתָּ֞ שֹׁופַ֤ר תְּרוּעָה֙ בַּחֹ֣דֶשׁ הַשְּׁבִעִ֔י בֶּעָשֹׂ֖ור לַחֹ֑דֶשׁ בְּיֹום֙ הַכִּפֻּרִ֔ים תַּעֲבִ֥ירוּ שֹׁופָ֖ר בְּכָל־אַרְצְכֶֽם׃
10 ಐವತ್ತನೆಯ ವರ್ಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೆಯ ವರ್ಷದ ವಾರ್ಷಿಕೋತ್ಸವವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಆಸ್ತಿಗೂ, ಅವನವನ ಕುಟುಂಬಕ್ಕೂ, ಹಿಂದಿರುಗಿ ಹೋಗಬೇಕು.
וְקִדַּשְׁתֶּ֗ם אֵ֣ת שְׁנַ֤ת הַחֲמִשִּׁים֙ שָׁנָ֔ה וּקְרָאתֶ֥ם דְּרֹ֛ור בָּאָ֖רֶץ לְכָל־יֹשְׁבֶ֑יהָ יֹובֵ֥ל הִוא֙ תִּהְיֶ֣ה לָכֶ֔ם וְשַׁבְתֶּ֗ם אִ֚ישׁ אֶל־אֲחֻזָּתֹ֔ו וְאִ֥ישׁ אֶל־מִשְׁפַּחְתֹּ֖ו תָּשֻֽׁבוּ׃
11 ಐವತ್ತನೆಯ ಆ ವರುಷವು ನಿಮಗೆ ಜೂಬಿಲಿಯಾಗಿರುವುದು. ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವುದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷಿಬಳ್ಳಿಗಳಲ್ಲಿ ದ್ರಾಕ್ಷಿಹಣ್ಣುಗಳನ್ನು ಕೂಡಿಸಲೂಬಾರದು.
יֹובֵ֣ל הִ֗וא שְׁנַ֛ת הַחֲמִשִּׁ֥ים שָׁנָ֖ה תִּהְיֶ֣ה לָכֶ֑ם לֹ֣א תִזְרָ֔עוּ וְלֹ֤א תִקְצְרוּ֙ אֶת־סְפִיחֶ֔יהָ וְלֹ֥א תִבְצְר֖וּ אֶת־נְזִרֶֽיהָ׃
12 ಏಕೆಂದರೆ ಅದು ಜೂಬಿಲಿ. ಅದು ನಿಮಗೆ ಪರಿಶುದ್ಧವಾಗಿರುವುದು. ಹೊಲದೊಳಗಿಂದ ಬೆಳೆದ ಹುಟ್ಟುವಳಿಯನ್ನು ನೀವು ತಿನ್ನಬೇಕು.
כִּ֚י יֹובֵ֣ל הִ֔וא קֹ֖דֶשׁ תִּהְיֶ֣ה לָכֶ֑ם מִן־הַ֨שָּׂדֶ֔ה תֹּאכְל֖וּ אֶת־תְּבוּאָתָֽהּ׃
13 “‘ಜೂಬಿಲಿಯ ಈ ವರ್ಷದಲ್ಲಿ ಪ್ರತಿಯೊಬ್ಬನು ತನ್ನ ಆಸ್ತಿಗೆ ಹಿಂದಿರುಗಬೇಕು.
בִּשְׁנַ֥ת הַיֹּובֵ֖ל הַזֹּ֑את תָּשֻׁ֕בוּ אִ֖ישׁ אֶל־אֲחֻזָּתֹֽו׃
14 “‘ನೆರೆಯವನಿಗೆ ಏನಾದರೂ ಮಾರಾಟ ಮಾಡಿದ್ದರೆ, ಇಲ್ಲವೆ ನೆರೆಯವನಿಂದ ಕೊಂಡುಕೊಂಡಿದ್ದರೆ, ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು.
וְכִֽי־תִמְכְּר֤וּ מִמְכָּר֙ לַעֲמִיתֶ֔ךָ אֹ֥ו קָנֹ֖ה מִיַּ֣ד עֲמִיתֶ֑ךָ אַל־תֹּונ֖וּ אִ֥ישׁ אֶת־אָחִֽיו׃
15 ಜೂಬಿಲಿಯ ತರುವಾಯ ವರ್ಷಗಳ ಲೆಕ್ಕದ ಪ್ರಕಾರ ನಿನ್ನ ನೆರೆಯವನಿಂದ ಕೊಂಡುಕೊಳ್ಳಬೇಕು. ಫಲದ ವರ್ಷಗಳ ಪ್ರಕಾರ ಅವನು ನಿನಗೆ ಮಾರಾಟಮಾಡಬೇಕು.
בְּמִסְפַּ֤ר שָׁנִים֙ אַחַ֣ר הַיֹּובֵ֔ל תִּקְנֶ֖ה מֵאֵ֣ת עֲמִיתֶ֑ךָ בְּמִסְפַּ֥ר שְׁנֵֽי־תְבוּאֹ֖ת יִמְכָּר־לָֽךְ׃
16 ವರ್ಷಗಳು ಹೆಚ್ಚಿದಂತೆಯೇ ಫಲದ ಬೆಲೆಯನ್ನೂ ಹೆಚ್ಚಿಸಬೇಕು. ವರ್ಷಗಳು ಕಡಿಮೆಯಿರುವಂತೆಯೇ ಫಲದ ಬೆಲೆಯನ್ನು ಕಡಿಮೆ ಮಾಡಬೇಕು. ಫಲದ ವರ್ಷಗಳ ಸಂಖ್ಯೆಗನುಸಾರವಾಗಿಯೇ ಅವನು ನಿನಗೆ ಮಾರಾಟಮಾಡಬೇಕು.
לְפִ֣י ׀ רֹ֣ב הַשָּׁנִ֗ים תַּרְבֶּה֙ מִקְנָתֹ֔ו וּלְפִי֙ מְעֹ֣ט הַשָּׁנִ֔ים תַּמְעִ֖יט מִקְנָתֹ֑ו כִּ֚י מִסְפַּ֣ר תְּבוּאֹ֔ת ה֥וּא מֹכֵ֖ר לָֽךְ׃
17 ಆದ್ದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು. ಆದರೆ ದೇವರಿಗೆ ನೀನು ಭಯಪಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
וְלֹ֤א תֹונוּ֙ אִ֣ישׁ אֶת־עֲמִיתֹ֔ו וְיָרֵ֖אתָ מֵֽאֱלֹהֶ֑יךָ כִּ֛י אֲנִ֥י יְהֹוָ֖ה אֱלֹהֵיכֶֽם׃
18 “‘ಹೀಗೆ ನೀವು ನನ್ನ ನಿಯಮಗಳನ್ನು ಪಾಲಿಸಬೇಕು, ನನ್ನ ನಿರ್ಣಯಗಳನ್ನು ಕೈಗೊಂಡು ನಡೆಯಬೇಕು. ಆಗ ನೀವು ದೇಶದಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.
וַעֲשִׂיתֶם֙ אֶת־חֻקֹּתַ֔י וְאֶת־מִשְׁפָּטַ֥י תִּשְׁמְר֖וּ וַעֲשִׂיתֶ֣ם אֹתָ֑ם וִֽישַׁבְתֶּ֥ם עַל־הָאָ֖רֶץ לָבֶֽטַח׃
19 ಭೂಮಿಯು ತನ್ನ ಫಲವನ್ನು ಕೊಡುವುದು. ನೀವು ತಿಂದು ತೃಪ್ತರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.
וְנָתְנָ֤ה הָאָ֙רֶץ֙ פִּרְיָ֔הּ וַאֲכַלְתֶּ֖ם לָשֹׂ֑בַע וִֽישַׁבְתֶּ֥ם לָבֶ֖טַח עָלֶֽיהָ׃
20 ನೀವು, “ನಾವು ಬಿತ್ತುವುದಿಲ್ಲ, ಇಲ್ಲವೆ ನಮ್ಮ ಹುಟ್ಟುವಳಿಯಲ್ಲಿ ಕೂಡಿಸಿಕೊಳ್ಳುವುದಿಲ್ಲ. ಏಳನೆಯ ವರ್ಷದಲ್ಲಿ ನಾವು ಏನು ತಿನ್ನೋಣ,” ಎನ್ನುವಿರಿ.
וְכִ֣י תֹאמְר֔וּ מַה־נֹּאכַ֖ל בַּשָּׁנָ֣ה הַשְּׁבִיעִ֑ת הֵ֚ן לֹ֣א נִזְרָ֔ע וְלֹ֥א נֶאֱסֹ֖ף אֶת־תְּבוּאָתֵֽנוּ׃
21 ಆಗ ನಾನು, “ಆರನೆಯ ವರ್ಷದಲ್ಲಿ ಮೂರು ವರ್ಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಕೊಡುವೆನು.
וְצִוִּ֤יתִי אֶת־בִּרְכָתִי֙ לָכֶ֔ם בַּשָּׁנָ֖ה הַשִּׁשִּׁ֑ית וְעָשָׂת֙ אֶת־הַתְּבוּאָ֔ה לִשְׁלֹ֖שׁ הַשָּׁנִֽים׃
22 ನೀವು ಎಂಟನೆಯ ವರ್ಷದಲ್ಲಿ ಬಿತ್ತಿ, ಅದರ ಫಲವನ್ನು ಒಂಬತ್ತನೆಯ ವರ್ಷದವರೆಗೆ ತಿನ್ನುವಿರಿ. ಅದರ ಫಲ ಬರುವವರೆಗೆ ತಿನ್ನುವಿರಿ, ಅದರ ಫಲ ಬರುವವರೆಗೆ ನೀವು ಸಂಗ್ರಹಿಸಿದ ಹಳೆಯದನ್ನೇ ತಿನ್ನುವಿರಿ,” ಎಂದು ಹೇಳುತ್ತೇನೆ.
וּזְרַעְתֶּ֗ם אֵ֚ת הַשָּׁנָ֣ה הַשְּׁמִינִ֔ת וַאֲכַלְתֶּ֖ם מִן־הַתְּבוּאָ֣ה יָשָׁ֑ן עַ֣ד ׀ הַשָּׁנָ֣ה הַתְּשִׁיעִ֗ת עַד־בֹּוא֙ תְּב֣וּאָתָ֔הּ תֹּאכְל֖וּ יָשָֽׁן׃
23 “‘ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು. ಏಕೆಂದರೆ ಭೂಮಿಯು ನನ್ನದು. ನನ್ನೊಂದಿಗೆ ನೀವು ಪರಕೀಯರೂ, ಪ್ರವಾಸಿಗಳೂ ಆಗಿದ್ದೀರಿ.
וְהָאָ֗רֶץ לֹ֤א תִמָּכֵר֙ לִצְמִתֻ֔ת כִּי־לִ֖י הָאָ֑רֶץ כִּֽי־גֵרִ֧ים וְתֹושָׁבִ֛ים אַתֶּ֖ם עִמָּדִֽי׃
24 ನಿಮ್ಮ ಸ್ವಾಧೀನದಲ್ಲಿರುವ ನಿಮ್ಮ ಎಲ್ಲಾ ಭೂಮಿಗೆ ಬಿಡುಗಡೆಯನ್ನು ಕೊಡಬೇಕು.
וּבְכֹ֖ל אֶ֣רֶץ אֲחֻזַּתְכֶ֑ם גְּאֻלָּ֖ה תִּתְּנ֥וּ לָאָֽרֶץ׃ ס
25 “‘ನಿಮ್ಮ ಸಹೋದರನು ಬಡತನದ ನಿಮಿತ್ತವಾಗಿ ತನ್ನ ಸೊತ್ತಿನಲ್ಲಿ ಸ್ವಲ್ಪವನ್ನು ಮಾರಿದರೆ, ಅವನ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.
כִּֽי־יָמ֣וּךְ אָחִ֔יךָ וּמָכַ֖ר מֵאֲחֻזָּתֹ֑ו וּבָ֤א גֹֽאֲלֹו֙ הַקָּרֹ֣ב אֵלָ֔יו וְגָאַ֕ל אֵ֖ת מִמְכַּ֥ר אָחִֽיו׃
26 ಬಿಡಿಸುವ ಬಂಧುವು ಇಲ್ಲದೆ ಹೋದರೆ, ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಂತಾದರೆ,
וְאִ֕ישׁ כִּ֛י לֹ֥א יִֽהְיֶה־לֹּ֖ו גֹּאֵ֑ל וְהִשִּׂ֣יגָה יָדֹ֔ו וּמָצָ֖א כְּדֵ֥י גְאֻלָּתֹֽו׃
27 ಅವನು ಅದನ್ನು ಮಾರಿದ ವರ್ಷಗಳನ್ನು ಲೆಕ್ಕಿಸಿ, ಅದನ್ನು ಮಾರಿದವನಿಗೆ ಮಿಕ್ಕ ಕ್ರಯವನ್ನು ಪೂರ್ತಿಮಾಡಿ, ತನ್ನ ಸ್ವಂತ ಹೊಲವನ್ನು ಸ್ವಾಧೀನಪಡಿಸಿಕೊಳ್ಳಬಹುದು.
וְחִשַּׁב֙ אֶת־שְׁנֵ֣י מִמְכָּרֹ֔ו וְהֵשִׁיב֙ אֶת־הָ֣עֹדֵ֔ף לָאִ֖ישׁ אֲשֶׁ֣ר מָֽכַר־לֹ֑ו וְשָׁ֖ב לַאֲחֻזָּתֹֽו׃
28 ತಿರುಗಿ ಸಲ್ಲಿಸುವುದಕ್ಕೆ ಅವನಿಗೆ ಆಗದಿದ್ದರೆ, ಅವನು ಮಾರಿದ್ದು ಜೂಬಿಲಿಯ ವರ್ಷದವರೆಗೆ ಕೊಂಡುಕೊಂಡವನ ಕೈಯಲ್ಲಿ ಇರಬೇಕು ಮತ್ತು ಸಂಭ್ರಮದ ವರ್ಷದಲ್ಲಿ ಅದು ಬಿಡುಗಡೆಯಾಗಬೇಕು, ಅವನು ತನ್ನ ಸೊತ್ತನ್ನು ಪಡೆಯಬೇಕು.
וְאִ֨ם לֹֽא־מֽ͏ָצְאָ֜ה יָדֹ֗ו דֵּי֮ הָשִׁ֣יב לֹו֒ וְהָיָ֣ה מִמְכָּרֹ֗ו בְּיַד֙ הַקֹּנֶ֣ה אֹתֹ֔ו עַ֖ד שְׁנַ֣ת הַיֹּובֵ֑ל וְיָצָא֙ בַּיֹּבֵ֔ל וְשָׁ֖ב לַאֲחֻזָּתֹֽו׃
29 “‘ಇದಲ್ಲದೆ ಒಬ್ಬನು ಗೋಡೆಯುಳ್ಳ ಪಟ್ಟಣದಲ್ಲಿರುವ ನಿವಾಸದ ಮನೆಯನ್ನು ಮಾರಿದರೆ, ಅದನ್ನು ಮಾರಿದ ಒಂದು ಪೂರ್ಣ ವರ್ಷದೊಳಗಾಗಿ ಅದನ್ನು ಬಿಡುಗಡೆ ಮಾಡಬೇಕು. ಒಂದು ಪೂರ್ಣ ವರ್ಷದೊಳಗಾಗಿ ಅದನ್ನು ಬಿಡಿಸಬಹುದು.
וְאִ֗ישׁ כִּֽי־יִמְכֹּ֤ר בֵּית־מֹושַׁב֙ עִ֣יר חֹומָ֔ה וְהָיְתָה֙ גְּאֻלָּתֹ֔ו עַד־תֹּ֖ם שְׁנַ֣ת מִמְכָּרֹ֑ו יָמִ֖ים תִּהְיֶ֥ה גְאֻלָּתֹֽו׃
30 ಆದರೆ ವರ್ಷವು ಪೂರ್ಣವಾಗುವುದರೊಳಗಾಗಿ ಅದು ಬಿಡುಗಡೆಯಾಗದಿದ್ದರೆ, ಗೋಡೆಯ ಪಟ್ಟಣದೊಳಗಿರುವ ಆ ಮನೆಯು ಅದನ್ನು ಕೊಂಡುಕೊಂಡವನಿಗೂ ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು. ಜೂಬಿಲಿಯ ವರ್ಷದಲ್ಲಿ ಅದು ಬಿಡುಗಡೆಯಾಗಬಾರದು.
וְאִ֣ם לֹֽא־יִגָּאֵ֗ל עַד־מְלֹ֣את לֹו֮ שָׁנָ֣ה תְמִימָה֒ וְ֠קָם הַבַּ֨יִת אֲשֶׁר־בָּעִ֜יר אֲשֶׁר־לֹא (לֹ֣ו) חֹמָ֗ה לַצְּמִיתֻ֛ת לַקֹּנֶ֥ה אֹתֹ֖ו לְדֹרֹתָ֑יו לֹ֥א יֵצֵ֖א בַּיֹּבֵֽל׃
31 ಆದರೆ ಸುತ್ತಲೂ ಗೋಡೆಗಳಿಲ್ಲದೆ ಹಳ್ಳಿಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಬೇಕು. ಅವುಗಳನ್ನು ಬಿಡಿಸಿಕೊಳ್ಳುವ ಅಧಿಕಾರವಿರುವದು. ಜೂಬಿಲಿಯ ವರ್ಷದಲ್ಲಿ ಅವು ಬಿಡುಗಡೆ ಆಗಬೇಕು.
וּבָתֵּ֣י הַחֲצֵרִ֗ים אֲשֶׁ֨ר אֵין־לָהֶ֤ם חֹמָה֙ סָבִ֔יב עַל־שְׂדֵ֥ה הָאָ֖רֶץ יֵחָשֵׁ֑ב גְּאֻלָּה֙ תִּהְיֶה־לֹּ֔ו וּבַיֹּבֵ֖ל יֵצֵֽא׃
32 “‘ಲೇವಿಯರ ಪಟ್ಟಣಗಳ ವಿಷಯವಾಗಿಯೂ, ಅವರ ಸ್ವಾಧೀನವಾಗಿರುವ ಪಟ್ಟಣಗಳ ಮನೆಗಳ ವಿಷಯವಾಗಿಯೂ ಲೇವಿಯರು ಯಾವ ಸಮಯದಲ್ಲಿಯಾದರೂ ಬಿಡಿಸಿಕೊಳ್ಳಬಹುದು.
וְעָרֵי֙ הַלְוִיִּ֔ם בָּתֵּ֖י עָרֵ֣י אֲחֻזָּתָ֑ם גְּאֻלַּ֥ת עֹולָ֖ם תִּהְיֶ֥ה לַלְוִיִּֽם׃
33 ಲೇವಿಯರಿಂದ ಏನಾದರೂ ಕೊಂಡುಕೊಂಡರೆ, ಕೊಂಡುಕೊಂಡ ಮನೆಯೂ, ಅವನ ಸ್ವಾಸ್ತ್ಯದ ಪಟ್ಟಣವೂ ಜೂಬಿಲಿಯ ವರ್ಷದಲ್ಲಿ ಬಿಡುಗಡೆಯಾಗಬೇಕು. ಏಕೆಂದರೆ ಲೇವಿಯರ ಪಟ್ಟಣಗಳ ಮನೆಗಳು ಇಸ್ರಾಯೇಲರ ಮಧ್ಯದಲ್ಲಿ ಅವರಿಗೆ ಸ್ವಾಧೀನವಾಗಿವೆ.
וַאֲשֶׁ֤ר יִגְאַל֙ מִן־הַלְוִיִּ֔ם וְיָצָ֧א מִמְכַּר־בַּ֛יִת וְעִ֥יר אֲחֻזָּתֹ֖ו בַּיֹּבֵ֑ל כִּ֣י בָתֵּ֞י עָרֵ֣י הַלְוִיִּ֗ם הִ֚וא אֲחֻזָּתָ֔ם בְּתֹ֖וךְ בְּנֵ֥י יִשְׂרָאֵֽל׃
34 ಆದರೆ ಅವರ ಪಟ್ಟಣಗಳ ಉಪನಗರಗಳ ಹೊಲವನ್ನು ಮಾರಬಾರದು. ಏಕೆಂದರೆ ಅದು ಅವರಿಗೆ ಶಾಶ್ವತವಾದ ಸೊತ್ತು.
וּֽשְׂדֵ֛ה מִגְרַ֥שׁ עָרֵיהֶ֖ם לֹ֣א יִמָּכֵ֑ר כִּֽי־אֲחֻזַּ֥ת עֹולָ֛ם ה֖וּא לָהֶֽם׃ ס
35 “‘ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣವಾಗಿ ಬಿದ್ದುಕೊಂಡರೆ, ಅವನು ಪರಕೀಯನಾಗಿದ್ದರೂ, ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡಬೇಕು.
וְכִֽי־יָמ֣וּךְ אָחִ֔יךָ וּמָ֥טָה יָדֹ֖ו עִמָּ֑ךְ וְהֶֽחֱזַ֣קְתָּ בֹּ֔ו גֵּ֧ר וְתֹושָׁ֛ב וָחַ֖י עִמָּֽךְ׃
36 ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವರಿಗೆ ಭಯಪಡು.
אַל־תִּקַּ֤ח מֵֽאִתֹּו֙ נֶ֣שֶׁךְ וְתַרְבִּ֔ית וְיָרֵ֖אתָ מֽ͏ֵאֱלֹהֶ֑יךָ וְחֵ֥י אָחִ֖יךָ עִמָּֽךְ׃
37 ನೀನು ಅವನಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಬಡ್ಡಿಯನ್ನು ಕೇಳಬಾರದು, ನಿನ್ನ ಆಹಾರವನ್ನು ಲಾಭಕ್ಕಾಗಿ ಸಾಲವಾಗಿ ಕೊಡಬೇಡ.
אֶ֨ת־כַּסְפְּךָ֔ לֹֽא־תִתֵּ֥ן לֹ֖ו בְּנֶ֑שֶׁךְ וּבְמַרְבִּ֖ית לֹא־תִתֵּ֥ן אָכְלֶֽךָ׃
38 ನಿನಗೆ ಕಾನಾನ್ ದೇಶವನ್ನು ಕೊಡುವಂತೆಯೂ, ನಿನಗೆ ದೇವರಾಗಿರುವಂತೆಯೂ ನಿನ್ನನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಕರತಂದ ನಿನ್ನ ದೇವರಾಗಿರುವ ಯೆಹೋವ ದೇವರು ನಾನೇ.
אֲנִ֗י יְהוָה֙ אֱלֹ֣הֵיכֶ֔ם אֲשֶׁר־הֹוצֵ֥אתִי אֶתְכֶ֖ם מֵאֶ֣רֶץ מִצְרָ֑יִם לָתֵ֤ת לָכֶם֙ אֶת־אֶ֣רֶץ כְּנַ֔עַן לִהְיֹ֥ות לָכֶ֖ם לֵאלֹהִֽים׃ ס
39 “‘ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ತನ್ನನ್ನೇ ಮಾರಿಕೊಂಡಿದ್ದರೆ, ದಾಸನ ಹಾಗೆ ಸೇವೆಯನ್ನು ಮಾಡುವಂತೆ ಅವನನ್ನು ನೀನು ಬಲಾತ್ಕರಿಸಬಾರದು.
וְכִֽי־יָמ֥וּךְ אָחִ֛יךָ עִמָּ֖ךְ וְנִמְכַּר־לָ֑ךְ לֹא־תַעֲבֹ֥ד בֹּ֖ו עֲבֹ֥דַת עָֽבֶד׃
40 ಆದರೆ ಕೂಲಿಯಾಳಂತೆಯೂ, ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ. ಜೂಬಿಲಿ ಸಂವತ್ಸರದವರೆಗೆ ನಿನಗೆ ಸೇವೆಮಾಡಲಿ.
כְּשָׂכִ֥יר כְּתֹושָׁ֖ב יִהְיֶ֣ה עִמָּ֑ךְ עַד־שְׁנַ֥ת הַיֹּבֵ֖ל יַעֲבֹ֥ד עִמָּֽךְ׃
41 ತರುವಾಯ ಅವನು ನಿನ್ನ ಬಳಿಯಿಂದ ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೆ ಹಿಂದಿರುಗಬೇಕು. ತನ್ನ ಪಿತೃಗಳ ಸೊತ್ತಿಗೂ ಅವನು ಹಿಂದಿರುಗಬೇಕು.
וְיָצָא֙ מֵֽעִמָּ֔ךְ ה֖וּא וּבָנָ֣יו עִמֹּ֑ו וְשָׁב֙ אֶל־מִשְׁפַּחְתֹּ֔ו וְאֶל־אֲחֻזַּ֥ת אֲבֹתָ֖יו יָשֽׁוּב׃
42 ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಾನು ಹೊರಗೆ ಕರತಂದ ಇಸ್ರಾಯೇಲರು ನನ್ನ ಸೇವಕರಾಗಿದ್ದಾರೆ, ದಾಸರನ್ನು ಮಾರುವಂತೆ ಅವರನ್ನು ಮಾರಬಾರದು.
כִּֽי־עֲבָדַ֣י הֵ֔ם אֲשֶׁר־הֹוצֵ֥אתִי אֹתָ֖ם מֵאֶ֣רֶץ מִצְרָ֑יִם לֹ֥א יִמָּכְר֖וּ מִמְכֶּ֥רֶת עָֽבֶד׃
43 ನೀನು ಕಠಿಣವಾಗಿ ಅವನ ಮೇಲೆ ಅಧಿಕಾರ ಚಲಾಯಿಸಬಾರದು. ನಿನ್ನ ದೇವರಿಗೆ ಭಯಪಡಬೇಕು.
לֹא־תִרְדֶּ֥ה בֹ֖ו בְּפָ֑רֶךְ וְיָרֵ֖אתָ מֵאֱלֹהֶֽיךָ׃
44 “‘ನಿನ್ನ ಸುತ್ತಲೂ ಇರುವ ಇತರ ಜನರು ನಿನಗೆ ದಾಸ ದಾಸಿಯರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು.
וְעַבְדְּךָ֥ וַאֲמָתְךָ֖ אֲשֶׁ֣ר יִהְיוּ־לָ֑ךְ מֵאֵ֣ת הַגֹּויִ֗ם אֲשֶׁר֙ סְבִיבֹ֣תֵיכֶ֔ם מֵהֶ֥ם תִּקְנ֖וּ עֶ֥בֶד וְאָמָֽה׃
45 ಇದಲ್ಲದೆ ನಿನ್ನ ಮಧ್ಯದೊಳಗಿರುವ ಪರಕೀಯ ಪ್ರವಾಸಿಗಳ ಮಕ್ಕಳಿಂದ ಮತ್ತು ನಿನ್ನ ಬಳಿಯಲ್ಲಿರುವ ಅವರ ಕುಟುಂಬಗಳಲ್ಲಿ ದೇಶದೊಳಗೆ ಅವರು ಪಡೆದವರಿಂದ ನೀನು ಕೊಂಡುಕೊಳ್ಳಬಹುದು ಮತ್ತು ಅವರು ನಿನ್ನ ಸ್ವತ್ತಾಗಿರುವರು.
וְ֠גַם מִבְּנֵ֨י הַתֹּושָׁבִ֜ים הַגָּרִ֤ים עִמָּכֶם֙ מֵהֶ֣ם תִּקְנ֔וּ וּמִמִּשְׁפַּחְתָּם֙ אֲשֶׁ֣ר עִמָּכֶ֔ם אֲשֶׁ֥ר הֹולִ֖ידוּ בְּאַרְצְכֶ֑ם וְהָי֥וּ לָכֶ֖ם לֽ͏ַאֲחֻזָּֽה׃
46 ನಿಮ್ಮ ತರುವಾಯ ಅವರನ್ನು ನಿಮ್ಮ ಮಕ್ಕಳಿಗೆ ಸ್ವತ್ತಾಗುವ ಬಾಧ್ಯತೆಯಾಗಿ ತೆಗೆದುಕೊಳ್ಳಬೇಕು. ಅವರು ಶಾಶ್ವತವಾಗಿ ನಿಮ್ಮ ದಾಸರಾಗಿರುವರು. ಆದರೆ ಇಸ್ರಾಯೇಲರಾದ ನಿಮ್ಮ ಸಹೋದರರಲ್ಲಿ ಒಬ್ಬರ ಮೇಲೊಬ್ಬರು ಕಠಿಣವಾದ ದಬ್ಬಾಳಿಕೆಯನ್ನು ನಡೆಸಬೇಡಿರಿ.
וְהִתְנַחֲלְתֶּ֨ם אֹתָ֜ם לִבְנֵיכֶ֤ם אַחֲרֵיכֶם֙ לָרֶ֣שֶׁת אֲחֻזָּ֔ה לְעֹלָ֖ם בָּהֶ֣ם תַּעֲבֹ֑דוּ וּבְאַ֨חֵיכֶ֤ם בְּנֵֽי־יִשְׂרָאֵל֙ אִ֣ישׁ בְּאָחִ֔יו לֹא־תִרְדֶּ֥ה בֹ֖ו בְּפָֽרֶךְ׃ ס
47 “‘ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾಸಿಯ ಸಂಪತ್ತು ಹೆಚ್ಚಾಗಲಾಗಿ ನಿನ್ನ ಸಹೋದರನು ಅವನ ಬಳಿಯಲ್ಲಿ ಬಡವನಾಗಿ ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾಸಿ ಇಲ್ಲವೆ ಪರಕೀಯನ ಸಂತತಿಯಲ್ಲಿ ಹುಟ್ಟಿದವನಿಗೆ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.
וְכִ֣י תַשִּׂ֗יג יַ֣ד גֵּ֤ר וְתֹושָׁב֙ עִמָּ֔ךְ וּמָ֥ךְ אָחִ֖יךָ עִמֹּ֑ו וְנִמְכַּ֗ר לְגֵ֤ר תֹּושָׁב֙ עִמָּ֔ךְ אֹ֥ו לְעֵ֖קֶר מִשְׁפַּ֥חַת גֵּֽר׃
48 ಅವನ ಸಹೋದರರಲ್ಲಿ ಒಬ್ಬನು ಈಡುಕೊಟ್ಟು ಅವನನ್ನು ವಿಮೋಚಿಸಬಹುದು.
אַחֲרֵ֣י נִמְכַּ֔ר גְּאֻלָּ֖ה תִּהְיֶה־לֹּ֑ו אֶחָ֥ד מֵאֶחָ֖יו יִגְאָלֶֽנּוּ׃
49 ಅವನ ಚಿಕ್ಕಪ್ಪನಾಗಲಿ ಇಲ್ಲವೆ ಅವನ ಚಿಕ್ಕಪ್ಪನ ಮಗನಾಗಲಿ ಇಲ್ಲವೆ ಅವನ ಕುಟುಂಬದಲ್ಲಿ ಸಮೀಪವಾಗಿರುವ ಸಂಬಂಧಿಕರಲ್ಲಿ ಯಾರಾಗಲಿ ಅವನನ್ನು ವಿಮೋಚಿಸಬಹುದು. ಇಲ್ಲವೆ ಅವನು ಶಕ್ತನಾಗಿದ್ದರೆ ತನ್ನನ್ನು ತಾನೇ ವಿಮೋಚಿಸಿಕೊಳ್ಳಬಹುದು.
אֹו־דֹדֹ֞ו אֹ֤ו בֶן־דֹּדֹו֙ יִגְאָלֶ֔נּוּ אֹֽו־מִשְּׁאֵ֧ר בְּשָׂרֹ֛ו מִמִּשְׁפַּחְתֹּ֖ו יִגְאָלֶ֑נּוּ אֹֽו־הִשִּׂ֥יגָה יָדֹ֖ו וְנִגְאָֽל׃
50 ಅವನು ತನ್ನನ್ನು ಮಾರಿಕೊಂಡ ವರುಷ ಮೊದಲುಗೊಂಡು ಮುಂದಿನ ಜೂಬಿಲಿ ಸಂವತ್ಸರದವರೆಗೆ ಅವನೊಂದಿಗೆ ಲೆಕ್ಕಮಾಡಬೇಕು. ಅವನ ಮಾರಾಟದ ಕ್ರಯವು ವರುಷಗಳ ಲೆಕ್ಕದ ಪ್ರಕಾರ ಕೂಲಿಯಾಳಿನ ಸಮಯಕ್ಕೆ ತಕ್ಕಂತೆ ಅವನೊಂದಿಗೆ ಅದು ಇರುವುದು.
וְחִשַּׁב֙ עִם־קֹנֵ֔הוּ מִשְּׁנַת֙ הִמָּ֣כְרֹו לֹ֔ו עַ֖ד שְׁנַ֣ת הַיֹּבֵ֑ל וְהָיָ֞ה כֶּ֤סֶף מִמְכָּרֹו֙ בְּמִסְפַּ֣ר שָׁנִ֔ים כִּימֵ֥י שָׂכִ֖יר יִהְיֶ֥ה עִמֹּֽו׃
51 ಜೂಬಿಲಿ ಸಂವತ್ಸರದವರೆಗೆ ಇನ್ನು ಬಹಳ ವರುಷಗಳಿದ್ದರೆ ಅವುಗಳ ಪ್ರಕಾರ ತನ್ನ ವಿಮೋಚನೆಯ ಕ್ರಯವನ್ನು ಕೊಡಬೇಕು.
אִם־עֹ֥וד רַבֹּ֖ות בַּשָּׁנִ֑ים לְפִיהֶן֙ יָשִׁ֣יב גְּאֻלָּתֹ֔ו מִכֶּ֖סֶף מִקְנָתֹֽו׃
52 ಜೂಬಿಲಿ ಸಂವತ್ಸರದವರೆಗೆ ಕೆಲವು ವರುಷಗಳು ಮಾತ್ರ ಉಳಿದಿದ್ದರೆ ಅವನೊಂದಿಗೆ ಎಣಿಸಬೇಕು. ಅವನ ವರ್ಷಗಳ ಮೇರೆಗೆ ತನ್ನ ವಿಮೋಚನೆಯ ಕ್ರಯವನ್ನು ತಿರುಗಿ ಅವನಿಗೆ ಸಲ್ಲಿಸಬೇಕು.
וְאִם־מְעַ֞ט נִשְׁאַ֧ר בַּשָּׁנִ֛ים עַד־שְׁנַ֥ת הַיֹּבֵ֖ל וְחִשַּׁב־לֹ֑ו כְּפִ֣י שָׁנָ֔יו יָשִׁ֖יב אֶת־גְּאֻלָּתֹֽו׃
53 ವರ್ಷದ ಕೂಲಿಯಾಳಿನಂತೆ ಅವನ ಬಳಿಯಲ್ಲಿ ಇರಬೇಕು. ಆದರೆ ಯಜಮಾನನು ಅವನನ್ನು ಕಠಿಣವಾಗಿ ನಡೆಸಿಕೊಳ್ಳುತ್ತಿರುವುದನ್ನು ನೀವು ನೋಡುತ್ತಾ ಸುಮ್ಮನಿರಬಾರದು.
כִּשְׂכִ֥יר שָׁנָ֛ה בְּשָׁנָ֖ה יִהְיֶ֣ה עִמֹּ֑ו לֹֽא־יִרְדֶּ֥נּֽוּ בְּפֶ֖רֶךְ לְעֵינֶֽיךָ׃
54 “‘ಈ ವರುಷಗಳಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ, ಜೂಬಿಲಿ ಸಂವತ್ಸರದಲ್ಲಿ ಅವನು ಮಕ್ಕಳೊಂದಿಗೆ ಬಿಡುಗಡೆಯಾಗಬೇಕು.
וְאִם־לֹ֥א יִגָּאֵ֖ל בְּאֵ֑לֶּה וְיָצָא֙ בִּשְׁנַ֣ת הַיֹּבֵ֔ל ה֖וּא וּבָנָ֥יו עִמֹּֽו׃
55 ಏಕೆಂದರೆ ಇಸ್ರಾಯೇಲರು ನನ್ನ ದಾಸರು ಈಜಿಪ್ಟ್ ದೇಶದೊಳಗಿಂದ ನಾನು ಹೊರಗೆ ಬರಮಾಡಿದ ಇವರು ನನ್ನ ದಾಸರೇ. ನಿನ್ನ ದೇವರಾದ ಯೆಹೋವ ದೇವರು ನಾನೇ.
כִּֽי־לִ֤י בְנֵֽי־יִשְׂרָאֵל֙ עֲבָדִ֔ים עֲבָדַ֣י הֵ֔ם אֲשֶׁר־הֹוצֵ֥אתִי אֹותָ֖ם מֵאֶ֣רֶץ מִצְרָ֑יִם אֲנִ֖י יְהוָ֥ה אֱלֹהֵיכֶֽם׃

< ಯಾಜಕಕಾಂಡ 25 >