< ಯಾಜಕಕಾಂಡ 27 >

1 ಯೆಹೋವ ದೇವರು ಮಾತನಾಡಿ ಮೋಶೆಗೆ ಹೇಳಿದ್ದೇನೆಂದರೆ,
וַיְדַבֵּר יְהֹוָה אֶל־מֹשֶׁה לֵּאמֹֽר׃
2 “ಇಸ್ರಾಯೇಲರ ಸಂಗಡ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ಒಬ್ಬನು ಪ್ರತ್ಯೇಕವಾಗಿ ಯೆಹೋವ ದೇವರಿಗೆ ಹರಕೆಮಾಡಿ ಪ್ರತಿಷ್ಠಿಸಿಕೊಂಡರೆ, ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕೊಡಬೇಕು.
דַּבֵּר אֶל־בְּנֵי יִשְׂרָאֵל וְאָמַרְתָּ אֲלֵהֶם אִישׁ כִּי יַפְלִא נֶדֶר בְּעֶרְכְּךָ נְפָשֹׁת לַֽיהֹוָֽה׃
3 ನೀನು ನೇಮಿಸಬೇಕಾದ ಕ್ರಯವು ಯಾವುದೆಂದರೆ, ಇಪ್ಪತ್ತರಿಂದ ಅರವತ್ತು ವಯಸ್ಸುಳ್ಳ ಪುರುಷನಿಗೆ ನೀನು ಪವಿತ್ರ ಸ್ಥಳದ ಶೆಕೆಲ್ ಅನುಸಾರವಾಗಿ ನೇಮಿಸುವ ಕ್ರಯವು ಐವತ್ತು ಶೆಕೆಲ್ ಆಗಿರಬೇಕು.
וְהָיָה עֶרְכְּךָ הַזָּכָר מִבֶּן עֶשְׂרִים שָׁנָה וְעַד בֶּן־שִׁשִּׁים שָׁנָה וְהָיָה עֶרְכְּךָ חֲמִשִּׁים שֶׁקֶל כֶּסֶף בְּשֶׁקֶל הַקֹּֽדֶשׁ׃
4 ಹೆಣ್ಣಾಗಿದ್ದರೆ, ನೀನು ನೇಮಿಸುವ ಕ್ರಯವು ಮೂವತ್ತು ಶೆಕೆಲ್ ಆಗಿರಬೇಕು.
וְאִם־נְקֵבָה הִוא וְהָיָה עֶרְכְּךָ שְׁלֹשִׁים שָֽׁקֶל׃
5 ಐದರಿಂದ ಇಪ್ಪತ್ತು ವಯಸ್ಸುಳ್ಳ ಪುರುಷನ ಕ್ರಯವು ಇಪ್ಪತ್ತು ಶೆಕೆಲ್, ಸ್ತ್ರೀ ಕ್ರಯವು ಹತ್ತು ಶೆಕೆಲ್ ಆಗಿರಬೇಕು.
וְאִם מִבֶּן־חָמֵשׁ שָׁנִים וְעַד בֶּן־עֶשְׂרִים שָׁנָה וְהָיָה עֶרְכְּךָ הַזָּכָר עֶשְׂרִים שְׁקָלִים וְלַנְּקֵבָה עֲשֶׂרֶת שְׁקָלִֽים׃
6 ಒಂದು ತಿಂಗಳಿಂದ ಐದು ವಯಸ್ಸುಳ್ಳ ಹುಡುಗನ ಕ್ರಯವು ಐದು ಶೆಕೆಲ್, ಹುಡುಗಿಯ ಕ್ರಯವು ಮೂರು ಶೆಕೆಲ್ ಆಗಿರಬೇಕು.
וְאִם מִבֶּן־חֹדֶשׁ וְעַד בֶּן־חָמֵשׁ שָׁנִים וְהָיָה עֶרְכְּךָ הַזָּכָר חֲמִשָּׁה שְׁקָלִים כָּסֶף וְלַנְּקֵבָה עֶרְכְּךָ שְׁלֹשֶׁת שְׁקָלִים כָּֽסֶף׃
7 ಅರವತ್ತು ವರುಷವೂ, ಅದಕ್ಕೂ ಹೆಚ್ಚಾದ ಪ್ರಾಯವುಳ್ಳ ಪುರುಷನಾಗಿದ್ದರೆ, ನೀನು ನೇಮಿಸುವ ಕ್ರಯವು ಹದಿನೈದು ಶೆಕೆಲ್, ಸ್ತ್ರೀಗೆ ಹತ್ತು ಶೆಕೆಲ್ ಆಗಿರಬೇಕು.
וְאִם מִבֶּן־שִׁשִּׁים שָׁנָה וָמַעְלָה אִם־זָכָר וְהָיָה עֶרְכְּךָ חֲמִשָּׁה עָשָׂר שָׁקֶל וְלַנְּקֵבָה עֲשָׂרָה שְׁקָלִֽים׃
8 ಆದರೆ ನೀನು ನೇಮಿಸಿದ ಕ್ರಯವನ್ನು ಕೊಡದಷ್ಟು ಅವನು ಬಡವನಾಗಿದ್ದರೆ, ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು. ಪ್ರಮಾಣ ಮಾಡಿದವನ ಸಂಪತ್ತಿಗೆ ತಕ್ಕಂತೆ ಯಾಜಕನು ಅವನಿಗೆ ಕ್ರಯವನ್ನು ನಿರ್ಣಯಿಸಬೇಕು.
וְאִם־מָךְ הוּא מֵֽעֶרְכֶּךָ וְהֶֽעֱמִידוֹ לִפְנֵי הַכֹּהֵן וְהֶעֱרִיךְ אֹתוֹ הַכֹּהֵן עַל־פִּי אֲשֶׁר תַּשִּׂיג יַד הַנֹּדֵר יַעֲרִיכֶנּוּ הַכֹּהֵֽן׃
9 “‘ಆದರೆ ಯೆಹೋವ ದೇವರಿಗೆ ಸಮರ್ಪಿಸಬೇಕಾದ ಪಶುಗಳ ಜಾತಿಯಲ್ಲಿ ಯಾವುದಾಗಿದ್ದರೂ, ಅವುಗಳಲ್ಲಿ ಯೆಹೋವ ದೇವರಿಗೆ ಕೊಡುವಂಥದ್ದು ಪರಿಶುದ್ಧವಾಗಿರಬೇಕು.
וְאִם־בְּהֵמָה אֲשֶׁר יַקְרִיבוּ מִמֶּנָּה קׇרְבָּן לַֽיהֹוָה כֹּל אֲשֶׁר יִתֵּן מִמֶּנּוּ לַיהֹוָה יִֽהְיֶה־קֹּֽדֶשׁ׃
10 ಅದನ್ನು ಒಳ್ಳೆಯದಕ್ಕೆ ಕೆಟ್ಟದ್ದನ್ನಾಗಲಿ, ಕೆಟ್ಟದ್ದಕ್ಕೆ ಒಳ್ಳೆಯದನ್ನಾಗಲಿ ಬದಲು ಮಾಡಬಾರದು, ಮಾರ್ಪಡಿಸಲೂಬಾರದು. ಅವನು ಗೊತ್ತುಮಾಡಿದ ಒಂದು ಪಶುವಿಗೆ ಮತ್ತೊಂದನ್ನು ಬದಲು ಮಾಡಿದರೆ, ಅದು ಮತ್ತು ಅದರ ಬದಲಾಗಿಟ್ಟ ಪಶು ಇವೆರಡೂ ಯೆಹೋವ ದೇವರಿಗೆ ಪರಿಶುದ್ಧವಾಗಿರಬೇಕು.
לֹא יַחֲלִיפֶנּוּ וְלֹֽא־יָמִיר אֹתוֹ טוֹב בְּרָע אוֹ־רַע בְּטוֹב וְאִם־הָמֵר יָמִיר בְּהֵמָה בִּבְהֵמָה וְהָֽיָה־הוּא וּתְמוּרָתוֹ יִֽהְיֶה־קֹּֽדֶשׁ׃
11 ಅದು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಆ ಪಶುವನ್ನು ಅವನು ಯಾಜಕನ ಮುಂದೆ ನಿಲ್ಲಿಸಬೇಕು.
וְאִם כׇּל־בְּהֵמָה טְמֵאָה אֲשֶׁר לֹא־יַקְרִיבוּ מִמֶּנָּה קׇרְבָּן לַֽיהֹוָה וְהֶֽעֱמִיד אֶת־הַבְּהֵמָה לִפְנֵי הַכֹּהֵֽן׃
12 ಆಗ ಯಾಜಕನು ಅದು ಒಳ್ಳೆಯದೋ, ಕೆಟ್ಟದ್ದೋ ಎಂದು ಅದಕ್ಕೆ ಕ್ರಯ ಕಟ್ಟಬೇಕು. ಯಾಜಕನು ನಿರ್ಧರಿಸಿದ ಕ್ರಯವೇ ಅಂತಿಮ ಕ್ರಯವಾಗಿರಬೇಕು.
וְהֶעֱרִיךְ הַכֹּהֵן אֹתָהּ בֵּין טוֹב וּבֵין רָע כְּעֶרְכְּךָ הַכֹּהֵן כֵּן יִהְיֶֽה׃
13 ಹರಕೆ ಮಾಡುವವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿದ್ದರೆ, ನೀನು ನಿರ್ಧರಿಸಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು.
וְאִם־גָּאֹל יִגְאָלֶנָּה וְיָסַף חֲמִישִׁתוֹ עַל־עֶרְכֶּֽךָ׃
14 “‘ಒಬ್ಬನು ತನ್ನ ಮನೆಯನ್ನು ಯೆಹೋವ ದೇವರಿಗೆ ಪರಿಶುದ್ಧವಾಗಿರಲೆಂದು ಪ್ರತಿಷ್ಠೆಪಡಿಸಿದರೆ, ಯಾಜಕನು ಅದು ಒಳ್ಳೆಯದೋ, ಕೆಟ್ಟದ್ದೋ ಎಂದು ಪರೀಕ್ಷಿಸಿ ಕ್ರಯವನ್ನು ಕಟ್ಟಬೇಕು. ಯಾಜಕನು ನಿರ್ಧರಿಸಿದ ಬೆಲೆಯೇ ಸ್ಥಿರವಾಗಿರಬೇಕು.
וְאִישׁ כִּֽי־יַקְדִּשׁ אֶת־בֵּיתוֹ קֹדֶשׁ לַֽיהֹוָה וְהֶעֱרִיכוֹ הַכֹּהֵן בֵּין טוֹב וּבֵין רָע כַּאֲשֶׁר יַעֲרִיךְ אֹתוֹ הַכֹּהֵן כֵּן יָקֽוּם׃
15 ಆದರೆ ಪ್ರತಿಷ್ಠೆ ಪಡಿಸಿದವನು ತನ್ನ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ, ಅವನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಒಂದು ಭಾಗ ಹಣವನ್ನು ಕೊಡಲಿ, ಆಗ ಅದು ಅವನದಾಗಿರುವುದು.
וְאִם־הַמַּקְדִּישׁ יִגְאַל אֶת־בֵּיתוֹ וְיָסַף חֲמִישִׁית כֶּֽסֶף־עֶרְכְּךָ עָלָיו וְהָיָה לֽוֹ׃
16 “‘ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಯೆಹೋವ ದೇವರಿಗೆ ಪ್ರತಿಷ್ಠಿಸಿದರೆ, ಅದರ ಬೀಜದ ಪ್ರಕಾರ ಕ್ರಯ ಕಟ್ಟಬೇಕು. ಒಂದು ಓಮೆರ್ ಜವೆಗೋಧಿಯನ್ನು, ಬೀಜಕ್ಕೆ ಐವತ್ತು ಬೆಳ್ಳಿ ಶೆಕೆಲ್‌ಗಳನ್ನು ಕೊಡಬೇಕಾಗುವುದು.
וְאִם ׀ מִשְּׂדֵה אֲחֻזָּתוֹ יַקְדִּישׁ אִישׁ לַֽיהֹוָה וְהָיָה עֶרְכְּךָ לְפִי זַרְעוֹ זֶרַע חֹמֶר שְׂעֹרִים בַּחֲמִשִּׁים שֶׁקֶל כָּֽסֶף׃
17 ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪ್ರತಿಷ್ಠಿಸಿದರೆ, ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು.
אִם־מִשְּׁנַת הַיֹּבֵל יַקְדִּישׁ שָׂדֵהוּ כְּעֶרְכְּךָ יָקֽוּם׃
18 ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪ್ರತಿಷ್ಠೆ ಮಾಡಿದರೆ, ಜೂಬಿಲಿ ಸಂವತ್ಸರದವರೆಗೆ ಮಿಕ್ಕ ವರ್ಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ನಿರ್ಧರಿಸಿ, ಕಟ್ಟಿದ ಕ್ರಯದಿಂದ ಕಳೆಯಬೇಕು.
וְאִם־אַחַר הַיֹּבֵל יַקְדִּישׁ שָׂדֵהוּ וְחִשַּׁב־לוֹ הַכֹּהֵן אֶת־הַכֶּסֶף עַל־פִּי הַשָּׁנִים הַנּוֹתָרֹת עַד שְׁנַת הַיֹּבֵל וְנִגְרַע מֵֽעֶרְכֶּֽךָ׃
19 ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿದವನು ಅದನ್ನು ಅವನು ವಿಮೋಚಿಸಬೇಕೆಂದಿದ್ದರೆ, ಅವನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಒಂದು ಪಾಲನ್ನು ಕೊಡಬೇಕು. ಆಗ ಅದು ಸ್ಥಿರವಾಗಿರುವುದು.
וְאִם־גָּאֹל יִגְאַל אֶת־הַשָּׂדֶה הַמַּקְדִּישׁ אֹתוֹ וְיָסַף חֲמִשִׁית כֶּֽסֶף־עֶרְכְּךָ עָלָיו וְקָם לֽוֹ׃
20 ಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ, ಇಲ್ಲವೆ ಮತ್ತೊಬ್ಬನಿಗೆ ಆ ಹೊಲವನ್ನು ಮಾರಿದ್ದರೆ, ಅದನ್ನು ಅನಂತರ ವಿಮೋಚಿಸಕೂಡದು.
וְאִם־לֹא יִגְאַל אֶת־הַשָּׂדֶה וְאִם־מָכַר אֶת־הַשָּׂדֶה לְאִישׁ אַחֵר לֹא יִגָּאֵל עֽוֹד׃
21 ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಬಿಡುಗಡೆಯಾಗುವಾಗ ಆ ಹೊಲವು ಯೆಹೋವ ದೇವರಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು, ಅದು ಯಾಜಕನಿಗೆ ಸಲ್ಲಬೇಕು.
וְהָיָה הַשָּׂדֶה בְּצֵאתוֹ בַיֹּבֵל קֹדֶשׁ לַֽיהֹוָה כִּשְׂדֵה הַחֵרֶם לַכֹּהֵן תִּהְיֶה אֲחֻזָּתֽוֹ׃
22 “‘ಆದರೆ ತನ್ನ ಹೊಲಗಳಲ್ಲಿ ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಂಥ ಹೊಲವನ್ನು ಯೆಹೋವ ದೇವರಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ,
וְאִם אֶת־שְׂדֵה מִקְנָתוֹ אֲשֶׁר לֹא מִשְּׂדֵה אֲחֻזָּתוֹ יַקְדִּישׁ לַֽיהֹוָֽה׃
23 ಯಾಜಕನು ಅವನಿಗೆ ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದವರೆಗೂ ಎಣಿಸಬೇಕು. ಅವನು ಆ ದಿವಸದಲ್ಲಿ ಕಟ್ಟಿದ ಕ್ರಯವನ್ನು ಯೆಹೋವ ದೇವರಿಗೆ ಮೀಸಲಾದದ್ದು ಎಂದು ಭಾವಿಸಿ ಕೊಡಬೇಕು.
וְחִשַּׁב־לוֹ הַכֹּהֵן אֵת מִכְסַת הָֽעֶרְכְּךָ עַד שְׁנַת הַיֹּבֵל וְנָתַן אֶת־הָעֶרְכְּךָ בַּיּוֹם הַהוּא קֹדֶשׁ לַיהֹוָֽה׃
24 ಆ ಹೊಲವು ಯಾರಿಗೆ ಸ್ವಂತವಾಗಿದ್ದು, ಯಾರಿಂದ ಕೊಂಡುಕೊಳ್ಳಲಾಗಿದೆಯೋ ಅದು ಜೂಬಿಲಿ ವರ್ಷದಲ್ಲಿ ಅವರಿಗೇ ಹಿಂದಕ್ಕೆ ಕೊಡಬೇಕು.
בִּשְׁנַת הַיּוֹבֵל יָשׁוּב הַשָּׂדֶה לַאֲשֶׁר קָנָהוּ מֵאִתּוֹ לַאֲשֶׁר־לוֹ אֲחֻזַּת הָאָֽרֶץ׃
25 ಪವಿತ್ರ ಸ್ಥಳದ ಶೆಕೆಲ್ ಅನುಸಾರವಾಗಿ ನೇಮಿಸುವ ಕ್ರಯವು ಇಪ್ಪತ್ತು ಗೇರಾ ತೂಕದ ಶೆಕೆಲ್ ಮೇರೆಗೆ ನೀವು ಕ್ರಯವನ್ನು ನಿಗದಿಮಾಡಬೇಕು.
וְכׇל־עֶרְכְּךָ יִהְיֶה בְּשֶׁקֶל הַקֹּדֶשׁ עֶשְׂרִים גֵּרָה יִהְיֶה הַשָּֽׁקֶל׃
26 “‘ಪಶುಗಳ ಚೊಚ್ಚಲ ಮರಿ ಯೆಹೋವ ದೇವರದಾದ್ದರಿಂದ ಅದನ್ನೂ ಹರಕೆಯಾಗಿ ಕೊಡಬಾರದು. ಅದು ಎತ್ತಾಗಲಿ ಇಲ್ಲವೆ ಕುರಿಯಾಗಲಿ, ಅದು ಯೆಹೋವ ದೇವರದೇ.
אַךְ־בְּכוֹר אֲשֶׁר־יְבֻכַּר לַֽיהֹוָה בִּבְהֵמָה לֹֽא־יַקְדִּישׁ אִישׁ אֹתוֹ אִם־שׁוֹר אִם־שֶׂה לַֽיהֹוָה הֽוּא׃
27 ಆದರೆ ಅದು ಅಶುದ್ಧ ಪಶುಗಳಲ್ಲಿ ಹುಟ್ಟಿದ್ದಾಗಿದ್ದರೆ, ಹರಕೆ ಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆಹೋದರೆ ಅದನ್ನು ಕಟ್ಟಿದ ಕ್ರಯದ ಪ್ರಕಾರ ಮಾರಬೇಕು.
וְאִם בַּבְּהֵמָה הַטְּמֵאָה וּפָדָה בְעֶרְכֶּךָ וְיָסַף חֲמִשִׁתוֹ עָלָיו וְאִם־לֹא יִגָּאֵל וְנִמְכַּר בְּעֶרְכֶּֽךָ׃
28 “‘ಯಾರಾದರೂ ಮನುಷ್ಯನನ್ನಾಗಲಿ, ಪಶುವನ್ನಾಗಲಿ, ಪಿತ್ರಾರ್ಜಿತ ಹೊಲವನ್ನಾಗಲಿ ತನಗಿದ್ದ ಬೇರೆ ಯಾವುದನ್ನಾಗಲಿ ಒಬ್ಬ ಮನುಷ್ಯನು ಯೆಹೋವ ದೇವರಿಗಾಗಿ ಮೀಸಲಾಗಿಟ್ಟಿದ್ದರೆ, ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು. ಮೀಸಲಾಗಿರುವ ಪ್ರತಿಯೊಂದೂ ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು.
אַךְ־כׇּל־חֵרֶם אֲשֶׁר יַחֲרִם אִישׁ לַֽיהֹוָה מִכׇּל־אֲשֶׁר־לוֹ מֵאָדָם וּבְהֵמָה וּמִשְּׂדֵה אֲחֻזָּתוֹ לֹא יִמָּכֵר וְלֹא יִגָּאֵל כׇּל־חֵרֶם קֹֽדֶשׁ־קׇדָשִׁים הוּא לַיהֹוָֽה׃
29 “‘ಯೆಹೋವ ದೇವರಿಗೆಂದು ಮೀಸಲಾದದನ್ನು ಯಾರೂ ಕ್ರಯಕೊಟ್ಟು ವಿಮೋಚಿಸಬಾರದು. ಅಂಥವನಿಗೆ ಮರಣವೇ ಆಗಬೇಕು.
כׇּל־חֵרֶם אֲשֶׁר יׇחֳרַם מִן־הָאָדָם לֹא יִפָּדֶה מוֹת יוּמָֽת׃
30 “‘ಭೂಮಿಯ ಬೀಜದಲ್ಲಾಗಲಿ, ಮರದ ಫಲದಲ್ಲಾಗಲಿ ಹತ್ತನೆಯ ಒಂದು ಪಾಲೆಲ್ಲಾ ಯೆಹೋವ ದೇವರದೇ. ಅದು ಯೆಹೋವ ದೇವರಿಗೆ ಪರಿಶುದ್ಧವಾದದ್ದು.
וְכׇל־מַעְשַׂר הָאָרֶץ מִזֶּרַע הָאָרֶץ מִפְּרִי הָעֵץ לַיהֹוָה הוּא קֹדֶשׁ לַֽיהֹוָֽה׃
31 ಯಾವನಾದರೂ ತನ್ನ ಹತ್ತನೆಯ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ, ಅದಕ್ಕಿಂತ ಹೆಚ್ಚಾಗಿ ಅದರ ಐದನೆಯ ಒಂದು ಪಾಲನ್ನು ಕೊಡಬೇಕು.
וְאִם־גָּאֹל יִגְאַל אִישׁ מִמַּֽעַשְׂרוֹ חֲמִשִׁיתוֹ יֹסֵף עָלָֽיו׃
32 ಇದಲ್ಲದೆ ದನಕುರಿಗಳಲ್ಲಿಯೂ, ಕುರುಬನು ಎಣಿಸುವ ಪಶುಗಳಲ್ಲಿಯೂ ಹತ್ತನೆಯ ಪಾಲು, ಹತ್ತರಲ್ಲಿ ಒಂದು ಯೆಹೋವ ದೇವರಿಗೆ ಪರಿಶುದ್ಧವಾಗಿರುವುದು.
וְכׇל־מַעְשַׂר בָּקָר וָצֹאן כֹּל אֲשֶׁר־יַעֲבֹר תַּחַת הַשָּׁבֶט הָֽעֲשִׂירִי יִֽהְיֶה־קֹּדֶשׁ לַֽיהֹוָֽה׃
33 ಆ ಪಶು ಒಳ್ಳೆಯದೋ ಕೆಟ್ಟದ್ದೋ ಎಂದು ಅವನು ವಿಚಾರಿಸಬಾರದು. ಅವನು ಅದನ್ನು ಬದಲಾಯಿಸಬಾರದು. ಯಾರಾದರೂ ಅದನ್ನು ಬದಲಾಯಿಸಿದ್ದಾದರೆ, ಆಗ ಎರಡೂ ಪಶುಗಳು ಯೆಹೋವ ದೇವರಿಗೆ ಸೇರುತ್ತದೆ, ಅದು ಪರಿಶುದ್ಧವಾಗಿರುತ್ತದೆ ಅದನ್ನು ವಿಮೋಚಿಸಬಾರದು.’”
לֹא יְבַקֵּר בֵּֽין־טוֹב לָרַע וְלֹא יְמִירֶנּוּ וְאִם־הָמֵר יְמִירֶנּוּ וְהָֽיָה־הוּא וּתְמוּרָתוֹ יִֽהְיֶה־קֹּדֶשׁ לֹא יִגָּאֵֽל׃
34 ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲರಿಗಾಗಿ ಕೊಟ್ಟ ಆಜ್ಞೆಗಳು ಇವೇ.
אֵלֶּה הַמִּצְוֺת אֲשֶׁר צִוָּה יְהֹוָה אֶת־מֹשֶׁה אֶל־בְּנֵי יִשְׂרָאֵל בְּהַר סִינָֽי׃

< ಯಾಜಕಕಾಂಡ 27 >