< ಯಾಜಕಕಾಂಡ 4 >

1 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
Y habló Jehová a Moisés, diciendo:
2 “ಇಸ್ರಾಯೇಲರಿಗೆ ಹೀಗೆ ಹೇಳು: ‘ಯಾರಾದರೂ ಉದ್ದೇಶವಿಲ್ಲದೆ ಪಾಪಮಾಡಿದರೆ ಹಾಗೂ ಯೆಹೋವ ದೇವರ ಆಜ್ಞೆಗಳಲ್ಲಿ ನಿಷೇಧಿಸಿದ ಯಾವುದನ್ನಾದರೂ ಮಾಡಿದರೆ, ಅವರು ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಕೈಗೊಳ್ಳಬೇಕು:
Habla a los hijos de Israel, diciendo: cuando alguna persona pecare por yerro en alguno de los mandamientos de Jehová, que no se han de hacer, e hiciere alguno de ellos;
3 “‘ಅಭಿಷಿಕ್ತನಾದ ಯಾಜಕನು ಪಾಪಮಾಡಿ ಜನರ ಮೇಲೆ ಅಪರಾಧವನ್ನು ತಂದರೆ, ತಾನು ಮಾಡಿದ ಪಾಪಕ್ಕಾಗಿ ಕಳಂಕರಹಿತವಾದ ಒಂದು ಎಳೆಯ ಹೋರಿಯನ್ನು ದೋಷಪರಿಹಾರಕ ಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.
Si sacerdote ungido pecare, según el pecado del pueblo, ofrecerá por su pecado, que pecó, un novillo hijo de vaca perfecto a Jehová por expiación.
4 ಅವನು ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಎದುರಿಗೆ ತರಬೇಕು. ತನ್ನ ಕೈಯನ್ನು ಆ ಹೋರಿಯ ತಲೆಯ ಮೇಲಿಟ್ಟು, ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು.
Y traerá el novillo a la puerta del tabernáculo del testimonio delante de Jehová, y pondrá su mano sobre la cabeza del novillo, y degollarlo ha delante de Jehová.
5 ಆಗ ಅಭಿಷಿಕ್ತನಾದ ಯಾಜಕನು ಆ ಹೋರಿಯ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಳಿಗೆ ತರಬೇಕು.
Y el sacerdote ungido tomará de la sangre del novillo, y traerla ha al tabernáculo del testimonio.
6 ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ, ಯೆಹೋವ ದೇವರ ಮುಂದಿನ ಪವಿತ್ರ ಸ್ಥಳದ ತೆರೆಯ ಮುಂದೆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.
Y mojará el sacerdote su dedo en la sangre, y esparcirá de aquella sangre siete veces delante de Jehová hacia el velo del santuario.
7 ಯಾಜಕನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಸುವಾಸನೆಯುಳ್ಳ ಧೂಪವನ್ನು ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಮುಂದೆ ಹಚ್ಚಬೇಕು. ಅಲ್ಲದೆ ಆ ಹೋರಿಯ ಎಲ್ಲಾ ರಕವನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.
Y pondrá el sacerdote de aquesta sangre sobre los cuernos del altar del perfume aromático delante de Jehová, que está en el tabernáculo del testimonio; y toda la otra sangre del novillo echará al cimiento del altar del holocausto, que está a la puerta del tabernáculo del testimonio.
8 ಅವನು ಪಾಪ ಪರಿಹಾರದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು. ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ,
Y todo el sebo del novillo de la expiación tomará de él, el sebo que cubre los intestinos, y todo el sebo que está sobre ellos,
9 ಎರಡು ಮೂತ್ರಪಿಂಡಗಳನ್ನು ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ, ಮೂತ್ರಪಿಂಡದೊಂದಿಗೂ ಕಾಳಿಜದ ಉತ್ತಮ ಭಾಗವನ್ನೂ ಅವನು ತೆಗೆಯಬೇಕು.
Y los dos riñones, y el sebo que está sobre ellos, y el que está sobre los ijares, y el redaño de sobre el hígado quitará con los riñones,
10 ಸಮಾಧಾನದ ಬಲಿಯನ್ನು ಹೋರಿಯಿಂದ ತೆಗೆದಂತೆಯೇ ತೆಗೆಯಬೇಕು. ಯಾಜಕನು ದಹನಬಲಿಯ ಪೀಠದ ಮೇಲೆ ಅವುಗಳನ್ನು ಸುಡಬೇಕು.
De la manera que se quita del buey del sacrificio de las paces, y hará el sacerdote perfume de ello sobre el altar del holocausto.
11 ಆ ಹೋರಿಯ ಚರ್ಮವನ್ನು, ಅದರ ಎಲ್ಲಾ ಮಾಂಸವನ್ನು, ಅದರ ತಲೆ, ಅದರ ಕಾಲುಗಳು, ಅದರ ಕರುಳುಗಳು, ಅದರ ಸಗಣಿಯೊಂದಿಗೆ
Y el cuero del novillo, y toda su carne con su cabeza y sus piernas, y sus intestinos y su estiércol;
12 ಎಂದರೆ ಇಡೀ ಹೋರಿಯನ್ನು ಪಾಳೆಯದ ಹೊರಗೆ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು, ಕಟ್ಟಿಗೆಯ ಮೇಲೆ ಬೆಂಕಿಯಿಂದ ಅದನ್ನು ಸುಡಬೇಕು.
Finalmente todo el novillo sacará fuera del campo a un lugar limpio, a donde se echan las cenizas, y quemarlo ha en fuego sobre la leña: en el lugar donde se echan las cenizas será quemado.
13 “‘ಮಾಡಬಾರದ ಕೆಲಸಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ಯಾವುದನ್ನಾದರೂ ಇಸ್ರಾಯೇಲರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಮತ್ತು ಅದು ಸಮೂಹಕ್ಕೆ ಕಣ್ಮರೆಯಾಗಿದ್ದರೆ
Y si toda la multitud de Israel hubiere errado, y el negocio fuere oculto a la congregación, y hubieren hecho alguno de los mandamientos de Jehová, que no se han de hacer, y hubieren pecado:
14 ಅವರು ಮಾಡಿದ ಪಾಪವು ಗೊತ್ತಾದಾಗ, ಆ ಪಾಪಕ್ಕಾಗಿ ಸಮಾಜವು ಒಂದು ಎಳೆಯ ಹೋರಿಯನ್ನು ದೇವದರ್ಶನದ ಗುಡಾರದ ಮುಂದೆ ಪಾಪ ಪರಿಹಾರದ ಬಲಿಯಾಗಿ ತರಬೇಕು.
Desde que fuere entendido el pecado sobre que pecaron, entonces la congregación ofrecerá un novillo hijo de vaca por expiación, y traerlo han delante del tabernáculo del testimonio.
15 ಸಮಾಜದ ಹಿರಿಯರು ಯೆಹೋವ ದೇವರ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು.
Y los ancianos de la congregación pondrán sus manos sobre la cabeza del novillo delante de Jehová, y degollarán el novillo delante de Jehová.
16 ಅಭಿಷಿಕ್ತನಾದ ಯಾಜಕನು ಆ ಹೋರಿಯ ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗೆ ತಂದು,
Y el sacerdote ungido meterá de la sangre del novillo en el tabernáculo del testimonio.
17 ಅದರಲ್ಲಿ ಬೆರಳನ್ನು ಅದ್ದಿ ಅದನ್ನು ಯೆಹೋವ ದೇವರ ಮುಂದೆ ಅಂದರೆ ತೆರೆಯ ಮುಂದೆ ಏಳು ಸಾರಿ ಚಿಮುಕಿಸಬೇಕು.
Y mojará el sacerdote su dedo en la misma sangre, y esparcirá siete veces delante de Jehová hacia el velo.
18 ಇದಲ್ಲದೆ ಅವನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಎದುರಿನಲ್ಲಿ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.
Y de aquella sangre pondrá sobre los cuernos del altar que está delante de Jehová en el tabernáculo del testimonio, y toda la otra sangre derramará al cimiento del altar del holocausto, que está a la puerta del tabernáculo del testimonio.
19 ಅವನು ಅದರ ಎಲ್ಲಾ ಕೊಬ್ಬನ್ನೂ ತೆಗೆದುಕೊಂಡು ಬಲಿಪೀಠದ ಮೇಲೆ ಸುಡಬೇಕು.
Y quitarle ha todo el sebo, y hará del perfume sobre el altar.
20 ಪಾಪ ಪರಿಹಾರದ ಬಲಿಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ, ಈ ಹೋರಿಗೂ ಮಾಡಬೇಕು. ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವರಿಗೆ ಕ್ಷಮಾಪಣೆಯಾಗುವುದು.
Y con el novillo hará como hizo del novillo de la expiación así hará de él; y así los expiará el sacerdote, y habrán perdón.
21 ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ, ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡಬೇಕು. ಅದು ಸಮಾಜಕ್ಕೆ ಪಾಪ ಪರಿಹಾರದ ಬಲಿಯಾಗಿ ಇರುವುದು.
Y sacará el novillo fuera del campo, y quemarlo ha como quemó el primer novillo; y esto será expiación de la congregación.
22 “‘ಒಬ್ಬ ಅಧಿಪತಿಯು ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,
Y cuando pecare el príncipe, e hiciere por yerro alguno de todos los mandamientos de Jehová su Dios, que no se han de hacer, y pecare:
23 ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದುಬಂದರೆ, ಅವನು ಬಲಿಗಾಗಿ ಹೋತಗಳಲ್ಲಿ ಕಳಂಕರಹಿತವಾದ ಒಂದು ಹೋತವನ್ನು ತಂದು ಸಮರ್ಪಿಸಬೇಕು.
Desde que le fuere notificado su pecado en que pecó, entonces ofrecerá por su ofrenda un macho de cabrío, macho perfecto;
24 ಅವನು ತನ್ನ ಕೈಯನ್ನು ಆ ಹೋತದ ತಲೆಯ ಮೇಲೆ ಇಟ್ಟು, ಯೆಹೋವ ದೇವರ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು.
Y pondrá su mano sobre la cabeza, del macho cabrío, y degollarlo ha en el lugar donde se degüella el holocausto delante de Jehová; y esto será expiación.
25 ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಮೇಲೆ ಅಡಿಯಲ್ಲಿ ಹೊಯ್ಯಬೇಕು.
Y tomará el sacerdote con su dedo de la sangre de la expiación, y pondrá sobre los cuernos del altar del holocausto: y la otra sangre derramará al cimiento del altar del holocausto.
26 ಅವರು ಸಮಾಧಾನದ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಯಾಜಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.
Y todo su sebo quemará sobre el altar, como el sebo del sacrificio de las paces: así lo expiará el sacerdote de su pecado, y habrá perdón.
27 “‘ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡಬಾರದವುಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,
Ítem, si alguna persona del pueblo de la tierra pecare por yerro, haciendo alguno de los mandamientos de Jehová, que no se han de hacer, y pecare:
28 ಇಲ್ಲವೆ ಅವರು ಮಾಡಿದ ಪಾಪವು ಅವರಿಗೆ ತಿಳಿದುಬಂದರೆ, ಅವರು ಪಾಪ ಪರಿಹಾರಕ್ಕಾಗಿ ಕಳಂಕರಹಿತವಾದ ಒಂದು ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.
Desde que le fuere notorio su pecado que pecó, traerá por su ofrenda una cabra de las cabras, sin tacha, hembra, por su pecado que pecó.
29 ಅವರು ತಮ್ಮ ಕೈಯನ್ನು ಪಾಪದ ಬಲಿಯ ಮೇಲಿಟ್ಟು, ಆ ಪಾಪ ಪರಿಹಾರದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು.
Y pondrá su mano sobre la cabeza de la expiación, y degollará la expiación en el lugar del holocausto.
30 ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು, ದಹನಬಲಿಯ ಪೀಠದ ಕೊಂಬುಗಳಿಗೆ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ಆ ಬಲಿಪೀಠದ ಅಡಿಯಲ್ಲಿ ಸುರಿಯಬೇಕು.
Luego tomará el sacerdote en su dedo de su sangre, y pondrá sobre los cuernos del altar del holocausto, y toda la otra sangre derramará al cimiento del altar.
31 ಅವನು ಸಮಾಧಾನ ಬಲಿಯ ಕೊಬ್ಬನ್ನು ತೆಗೆದಂತೆ, ಅದರ ಎಲ್ಲಾ ಕೊಬ್ಬನ್ನು ತೆಗೆಯಬೇಕು. ಯಾಜಕನು ಅದನ್ನು ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯಾಗಿ ಸುಡಬೇಕು. ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.
Y quitarle ha todo su sebo, de la manera que fue quitado el sebo del sacrificio de las paces, y hará perfume el sacerdote sobre el altar en olor de holganza a Jehová; y así le reconciliará el sacerdote, y habrá perdón.
32 “‘ಯಾರಾದರೂ ಪಾಪ ಪರಿಹಾರದ ಬಲಿಗಾಗಿ ಒಂದು ಕುರಿಮರಿಯನ್ನು ತರುವುದಾದರೆ, ಕಳಂಕರಹಿತವಾದ ಒಂದು ಹೆಣ್ಣನ್ನು ತರಬೇಕು.
Y si trajere cordero para su ofrenda por el pecado, hembra perfecta traerá.
33 ಅವರು ಪಾಪ ಪರಿಹಾರದ ಬಲಿಯ ತಲೆಯ ಮೇಲೆ ತಮ್ಮ ಕೈಯನ್ನು ಇಟ್ಟು, ದೋಷಪರಿಹಾರ ಬಲಿಯಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು.
Y pondrá su mano sobre la cabeza de la expiación, y degollarla ha por expiación en el lugar donde se degüella el holocausto.
34 ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಕೊಂಬುಗಳಿಗೆ ಹಚ್ಚಬೇಕು. ಉಳಿದ ಎಲ್ಲಾ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ಯಬೇಕು.
Después tomará el sacerdote con su dedo de la sangre de la expiación, y pondrá sobre los cuernos del altar del holocausto; y toda la otra sangre derramará al cimiento del altar.
35 ಇದಲ್ಲದೆ ಸಮಾಧಾನ ಬಲಿಗಳ ಕುರಿಮರಿಯ ಕೊಬ್ಬಿನಂತೆಯೇ, ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು. ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಯೆಹೋವ ದೇವರಿಗೆ ಮಾಡಿದಂತೆಯೇ, ಬಲಿಪೀಠದ ಮೇಲೆ ಅವುಗಳನ್ನು ಸುಡಬೇಕು. ಯಾಜಕನು ಅವನು ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.
Y quitarle ha todo su sebo, como fue quitado el sebo del sacrificio de las paces, y hará el sacerdote perfume de ello sobre el altar en ofrenda encendida a Jehová; y así le reconciliará el sacerdote de su pecado, que pecó, y habrá perdón.

< ಯಾಜಕಕಾಂಡ 4 >