< ಯಾಜಕಕಾಂಡ 5 >

1 “‘ಯಾವನಾದರೂ ಆಣೆ ಇಡುವುದನ್ನು ಕೇಳಿ, ಸಾಕ್ಷಿಯಾಗಿದ್ದು, ಪಾಪಮಾಡಿದರೆ, ಅವನು ಅದನ್ನು ಕಂಡೂ ಇಲ್ಲವೆ ತಿಳಿದೂ ಅವನು ಅದನ್ನು ಹೇಳದಿದ್ದರೆ, ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.
וְנֶ֣פֶשׁ כִּֽי־תֶחֱטָ֗א וְשָֽׁמְעָה֙ קֹ֣ול אָלָ֔ה וְה֣וּא עֵ֔ד אֹ֥ו רָאָ֖ה אֹ֣ו יָדָ֑ע אִם־לֹ֥וא יַגִּ֖יד וְנָשָׂ֥א עֲוֹנֹֽו׃
2 “‘ಇಲ್ಲವೆ, ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು ಇವುಗಳ ಹೆಣವಾಗಲಿ, ಅಶುದ್ಧವಾದ ಹರಿದಾಡುವ ಕ್ರಿಮಿಗಳ ಹೆಣಗಳಾಗಲಿ ಅಥವಾ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ ಅವನಿಗೆ ತಿಳಿಯದೆ ಇದ್ದರೂ ಅವನು ಅಶುದ್ಧವಾಗಿದ್ದು ಅಪರಾಧಿಯಾಗಿರುವನು.
אֹ֣ו נֶ֗פֶשׁ אֲשֶׁ֣ר תִּגַּע֮ בְּכָל־דָּבָ֣ר טָמֵא֒ אֹו֩ בְנִבְלַ֨ת חַיָּ֜ה טְמֵאָ֗ה אֹ֚ו בְּנִבְלַת֙ בְּהֵמָ֣ה טְמֵאָ֔ה אֹ֕ו בְּנִבְלַ֖ת שֶׁ֣רֶץ טָמֵ֑א וְנֶעְלַ֣ם מִמֶּ֔נּוּ וְה֥וּא טָמֵ֖א וְאָשֵֽׁם׃
3 ಇಲ್ಲವೆ, ಅವನು ಮನುಷ್ಯನ ಅಶುದ್ಧತ್ವವನ್ನು ತಗಲಿದರೆ, ಮನುಷ್ಯನನ್ನು ಅಶುದ್ಧಪಡಿಸುವ ಯಾವುದೇ ಅಶುದ್ಧತ್ವವಾಗಿದ್ದರೂ ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಅವನು ಅಪರಾಧಿಯಾಗಿರುವನು.
אֹ֣ו כִ֤י יִגַּע֙ בְּטֻמְאַ֣ת אָדָ֔ם לְכֹל֙ טֻמְאָתֹ֔ו אֲשֶׁ֥ר יִטְמָ֖א בָּ֑הּ וְנֶעְלַ֣ם מִמֶּ֔נּוּ וְה֥וּא יָדַ֖ע וְאָשֵֽׁם׃
4 ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ, ಒಳ್ಳೆಯದನ್ನಾಗಲಿ ಮಾಡುವುದನ್ನು ತನ್ನ ತುಟಿಗಳಿಂದ ಉಚ್ಛರಿಸಿದರೆ, ಒಬ್ಬ ಮನುಷ್ಯನು ಪ್ರಮಾಣದೊಡನೆ ಉಚ್ಚರಿಸಿದ್ದು ಯಾವುದೇ ಆಗಿರಲಿ, ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಇವುಗಳೊಂದರಲ್ಲಿ ಅವನು ಅಪರಾಧಿಯಾಗಿರುವನು.
אֹ֣ו נֶ֡פֶשׁ כִּ֣י תִשָּׁבַע֩ לְבַטֵּ֨א בִשְׂפָתַ֜יִם לְהָרַ֣ע ׀ אֹ֣ו לְהֵיטִ֗יב לְ֠כֹל אֲשֶׁ֨ר יְבַטֵּ֧א הָאָדָ֛ם בִּשְׁבֻעָ֖ה וְנֶעְלַ֣ם מִמֶּ֑נּוּ וְהוּא־יָדַ֥ע וְאָשֵׁ֖ם לְאַחַ֥ת מֵאֵֽלֶּה׃
5 ಅವನು ಇವುಗಳೊಂದರಲ್ಲಿ ಅಪರಾಧಿಯಾಗಿದ್ದು, ತಾನು ಅದರಲ್ಲಿ ಪಾಪಮಾಡಿದ್ದೇನೆಂದು ಅರಿಕೆ ಮಾಡುವುದಾದರೆ,
וְהָיָ֥ה כִֽי־יֶאְשַׁ֖ם לְאַחַ֣ת מֵאֵ֑לֶּה וְהִ֨תְוַדָּ֔ה אֲשֶׁ֥ר חָטָ֖א עָלֶֽיהָ׃
6 ಅವನು ತಾನು ಮಾಡಿದ ಪಾಪಕ್ಕಾಗಿ ಯೆಹೋವ ದೇವರಿಗೆ ಅಪರಾಧ ಬಲಿಯನ್ನು ಪಾಪ ಪರಿಹಾರದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ತರಬೇಕು. ಯಾಜಕನು ಅವನ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು.
וְהֵבִ֣יא אֶת־אֲשָׁמֹ֣ו לַיהוָ֡ה עַ֣ל חַטָּאתֹו֩ אֲשֶׁ֨ר חָטָ֜א נְקֵבָ֨ה מִן־הַצֹּ֥אן כִּשְׂבָּ֛ה אֹֽו־שְׂעִירַ֥ת עִזִּ֖ים לְחַטָּ֑את וְכִפֶּ֥ר עָלָ֛יו הַכֹּהֵ֖ן מֵחַטָּאתֹֽו׃
7 “‘ಯಾರಾದರೂ ಒಂದು ಕುರಿಮರಿಯನ್ನು ತರುವುದಕ್ಕೆ ಅಶಕ್ತರಾಗಿದ್ದರೆ, ತಾವು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ, ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ಯೆಹೋವ ದೇವರಿಗೆ ತರಬೇಕು. ಒಂದನ್ನು ಪಾಪ ಪರಿಹಾರದ ಬಲಿಗಾಗಿ, ಮತ್ತೊಂದನ್ನು ದಹನಬಲಿಗಾಗಿ ತರಬೇಕು.
וְאִם־לֹ֨א תַגִּ֣יע יָדֹו֮ דֵּ֣י שֶׂה֒ וְהֵבִ֨יא אֶת־אֲשָׁמֹ֜ו אֲשֶׁ֣ר חָטָ֗א שְׁתֵּ֥י תֹרִ֛ים אֹֽו־שְׁנֵ֥י בְנֵֽי־יֹונָ֖ה לַֽיהוָ֑ה אֶחָ֥ד לְחַטָּ֖את וְאֶחָ֥ד לְעֹלָֽה׃
8 ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಅವನು ಪಾಪ ಪರಿಹಾರದ ಬಲಿಗೆ ತಂದಿರುವುದನ್ನು ಮೊದಲು ಸಮರ್ಪಿಸಿ, ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು. ಆದರೆ ಅದನ್ನು ವಿಭಾಗಿಸಬಾರದು.
וְהֵבִ֤יא אֹתָם֙ אֶל־הַכֹּהֵ֔ן וְהִקְרִ֛יב אֶת־אֲשֶׁ֥ר לַחַטָּ֖את רִאשֹׁונָ֑ה וּמָלַ֧ק אֶת־רֹאשֹׁ֛ו מִמּ֥וּל עָרְפֹּ֖ו וְלֹ֥א יַבְדִּֽיל׃
9 ಇದಲ್ಲದೆ, ಅವನು ಪಾಪ ಪರಿಹಾರದ ಬಲಿಯ ರಕ್ತವನ್ನು ಬಲಿಪೀಠದ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಬಲಿಪೀಠದ ಬದಿಯಲ್ಲಿ ಹಿಂಡಬೇಕು. ಅದು ದೋಷಪರಿಹಾರ ಬಲಿಯಾಗಿರುವುದು.
וְהִזָּ֞ה מִדַּ֤ם הַחַטָּאת֙ עַל־קִ֣יר הַמִּזְבֵּ֔חַ וְהַנִּשְׁאָ֣ר בַּדָּ֔ם יִמָּצֵ֖ה אֶל־יְסֹ֣וד הַמִּזְבֵּ֑חַ חַטָּ֖את הֽוּא׃
10 ಅವನು ಕ್ರಮದ ಪ್ರಕಾರ, ಎರಡನೆಯದನ್ನು ದಹನಬಲಿಯಾಗಿ ಸಮರ್ಪಿಸಬೇಕು. ಯಾಜಕನು ಅವನು ಮಾಡಿದ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.
וְאֶת־הַשֵּׁנִ֛י יַעֲשֶׂ֥ה עֹלָ֖ה כַּמִּשְׁפָּ֑ט וְכִפֶּ֨ר עָלָ֧יו הַכֹּהֵ֛ן מֵחַטָּאתֹ֥ו אֲשֶׁר־חָטָ֖א וְנִסְלַ֥ח לֹֽו׃ ס
11 “‘ಆದರೆ ಅವರು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅಶಕ್ತರಾಗಿದ್ದರೆ, ಪಾಪಮಾಡಿದವರು ತಮ್ಮ ಬಲಿಗಾಗಿ, ಮೂರು ಸೇರು ಗೋಧಿ ಹಿಟ್ಟನ್ನು ಪಾಪ ಪರಿಹಾರದ ಬಲಿಯಾಗಿ ತರಬೇಕು. ಅವರು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಏಕೆಂದರೆ ಅದು ದೋಷಪರಿಹಾರ ಬಲಿಯಾಗಿದೆ.
וְאִם־לֹא֩ תַשִּׂ֨יג יָדֹ֜ו לִשְׁתֵּ֣י תֹרִ֗ים אֹו֮ לִשְׁנֵ֣י בְנֵי־יֹונָה֒ וְהֵבִ֨יא אֶת־קָרְבָּנֹ֜ו אֲשֶׁ֣ר חָטָ֗א עֲשִׂירִ֧ת הָאֵפָ֛ה סֹ֖לֶת לְחַטָּ֑את לֹא־יָשִׂ֨ים עָלֶ֜יהָ שֶׁ֗מֶן וְלֹא־יִתֵּ֤ן עָלֶ֙יהָ֙ לְבֹנָ֔ה כִּ֥י חַטָּ֖את הִֽיא׃
12 ತರುವಾಯ ಅವರು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿಯಷ್ಟು ತೆಗೆದುಕೊಂಡು, ಬಲಿಪೀಠದ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಯೆಹೋವ ದೇವರಿಗಾಗಿ ಸುಡಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು.
וֶהֱבִיאָהּ֮ אֶל־הַכֹּהֵן֒ וְקָמַ֣ץ הַכֹּהֵ֣ן ׀ מִ֠מֶּנָּה מְלֹ֨וא קֻמְצֹ֜ו אֶת־אַזְכָּרָתָה֙ וְהִקְטִ֣יר הַמִּזְבֵּ֔חָה עַ֖ל אִשֵּׁ֣י יְהוָ֑ה חַטָּ֖את הִֽוא׃
13 ಇವುಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲಾಗುವುದು. ಉಳಿದದ್ದು ಯಾಜಕನಿಗಾಗಿ ಧಾನ್ಯ ಸಮರ್ಪಣೆಯಾಗಿರುವುದು.’”
וְכִפֶּר֩ עָלָ֨יו הַכֹּהֵ֜ן עַל־חַטָּאתֹ֧ו אֲשֶׁר־חָטָ֛א מֵֽאַחַ֥ת מֵאֵ֖לֶּה וְנִסְלַ֣ח לֹ֑ו וְהָיְתָ֥ה לַכֹּהֵ֖ן כַּמִּנְחָֽה׃ ס
14 ಯೆಹೋವ ದೇವರು ಮೋಶೆಗೆ,
וַיְדַבֵּ֥ר יְהוָ֖ה אֶל־מֹשֶׁ֥ה לֵּאמֹֽר׃
15 “ಯಾರಾದರೂ ಅತಿಕ್ರಮಿಸಿದ್ದರೆ ಮತ್ತು ಯೆಹೋವ ದೇವರ ಪರಿಶುದ್ಧ ಸಂಗತಿಗಳನ್ನು ಅರಿಯದೆ ಪಾಪಮಾಡಿದ್ದರೆ, ಅವರು ತಮ್ಮ ಅತಿಕ್ರಮಕ್ಕಾಗಿ ತಮ್ಮ ಹಿಂಡುಗಳಿಂದ ಕಳಂಕರಹಿತವಾದ ಟಗರನ್ನು ಸಮರ್ಪಿಸಬೇಕು. ಪವಿತ್ರ ಸ್ಥಳಕ್ಕೆ ನೇಮಕವಾದ ಎರಡು ಬೆಳ್ಳಿನಾಣ್ಯ ಅಥವಾ ಹೆಚ್ಚು ಬೆಲೆಬಾಳುವ ಟಗರನ್ನು ಹಿಂಡಿನಿಂದ ತಂದು ಪ್ರಾಯಶ್ಚಿತ್ತ ಬಲಿಗಾಗಿ ಯೆಹೋವ ದೇವರಿಗೆ ಅರ್ಪಿಸಬೇಕು.
נֶ֚פֶשׁ כִּֽי־תִמְעֹ֣ל מַ֔עַל וְחָֽטְאָה֙ בִּשְׁגָגָ֔ה מִקָּדְשֵׁ֖י יְהוָ֑ה וְהֵבִיא֩ אֶת־אֲשָׁמֹ֨ו לַֽיהוָ֜ה אַ֧יִל תָּמִ֣ים מִן־הַצֹּ֗אן בְּעֶרְכְּךָ֛ כֶּֽסֶף־שְׁקָלִ֥ים בְּשֶֽׁקֶל־הַקֹּ֖דֶשׁ לְאָשָֽׁם׃
16 ಪರಿಶುದ್ಧವಾದದ್ದಲ್ಲದೆ, ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ವಸ್ತುಗಳನ್ನು ಅದಕ್ಕೆ ಐದನೆಯ ಪಾಲನ್ನು ಕೂಡಿಸಿ, ಅದನ್ನು ಯಾಜಕನಿಗೆ ಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು,” ಎಂದನು.
וְאֵ֣ת אֲשֶׁר֩ חָטָ֨א מִן־הַקֹּ֜דֶשׁ יְשַׁלֵּ֗ם וְאֶת־חֲמִֽישִׁתֹו֙ יֹוסֵ֣ף עָלָ֔יו וְנָתַ֥ן אֹתֹ֖ו לַכֹּהֵ֑ן וְהַכֹּהֵ֗ן יְכַפֵּ֥ר עָלָ֛יו בְּאֵ֥יל הָאָשָׁ֖ם וְנִסְלַ֥ח לֹֽו׃ פ
17 “ಯಾರಾದರೂ ಯೆಹೋವ ದೇವರು ನಿಷೇಧಿಸಿದ ಆಜ್ಞೆಗಳಲ್ಲಿ ಯಾವುದನ್ನಾದರೂ ಮಾಡಿ, ಪಾಪಮಾಡಿದರೆ, ಅದು ಅವರಿಗೆ ತಿಳಿಯದಿದ್ದರೂ ಅವರು ಅಪರಾಧಿಯಾಗಿರುವರು ಮತ್ತು ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳುವರು.
וְאִם־נֶ֙פֶשׁ֙ כִּ֣י תֶֽחֱטָ֔א וְעָֽשְׂתָ֗ה אַחַת֙ מִכָּל־מִצְוֹ֣ת יְהוָ֔ה אֲשֶׁ֖ר לֹ֣א תֵעָשֶׂ֑ינָה וְלֹֽא־יָדַ֥ע וְאָשֵׁ֖ם וְנָשָׂ֥א עֲוֹנֹֽו׃
18 ಅಲ್ಲದೆ ಅವನು ಹಿಂಡಿನೊಳಗಿಂದ ಕಳಂಕರಹಿತವಾದ ಒಂದು ಟಗರನ್ನು ನಿನ್ನ ಅಂದಾಜಿಗನುಸಾರ ಪ್ರಾಯಶ್ಚಿತ್ತ ಬಲಿಗಾಗಿ, ಯಾಜಕನ ಬಳಿಗೆ ತರಬೇಕು. ಯಾಜಕನು, ಅಜ್ಞಾನದಿಂದ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ, ಪ್ರಾಯಶ್ಚಿತ್ತವನ್ನು ಮಾಡಬೇಕು. ಅವನಿಗೆ ಕ್ಷಮೆ ದೊರಕುವುದು.
וְ֠הֵבִיא אַ֣יִל תָּמִ֧ים מִן־הַצֹּ֛אן בְּעֶרְכְּךָ֥ לְאָשָׁ֖ם אֶל־הַכֹּהֵ֑ן וְכִפֶּר֩ עָלָ֨יו הַכֹּהֵ֜ן עַ֣ל שִׁגְגָתֹ֧ו אֲשֶׁר־שָׁגָ֛ג וְה֥וּא לֹֽא־יָדַ֖ע וְנִסְלַ֥ח לֹֽו׃
19 ಅವನು ನಿಶ್ಚಯವಾಗಿ ಯೆಹೋವ ದೇವರ ವಿರುದ್ಧವಾಗಿ ಅಪರಾಧ ಮಾಡಿದ್ದಾನೆ, ಅದಕ್ಕಾಗಿ ಇದು ಪ್ರಾಯಶ್ಚಿತ್ತ ಬಲಿಯಾಗಿದೆ,” ಎಂದರು.
אָשָׁ֖ם ה֑וּא אָשֹׁ֥ם אָשַׁ֖ם לַיהוָֽה׃ פ

< ಯಾಜಕಕಾಂಡ 5 >