< ಯಾಜಕಕಾಂಡ 6 >
1 ಯೆಹೋವ ದೇವರು ಮೋಶೆಯೊಡನೆ ಮಾತನಾಡಿ,
१फिर यहोवा ने मूसा से कहा,
2 “ಯಾರಾದರೂ ಪಾಪಮಾಡಿದರೆ ಮತ್ತು ನೆರೆಯವರಿಗೆ ಮೋಸ ಮಾಡುವ ಮೂಲಕ ಯೆಹೋವ ದೇವರಿಗೆ ವಿಶ್ವಾಸದ್ರೋಹಿ ಆಗಿದ್ದರೆ ಅಥವಾ ಅವರ ಆರೈಕೆಯಲ್ಲಿ ಏನಾದರೂ ಉಳಿಸಿಕೊಂಡಿದ್ದರೆ ಅಥವಾ ಯಾವುದನ್ನಾದರೂ ಕದ್ದುಕೊಂಡಿದ್ದರೆ ಅಥವಾ ಅವರು ತಮ್ಮ ನೆರೆಹೊರೆಯವರಿಗೆ ಮೋಸ ಮಾಡಿದ್ದರೆ,
२“यदि कोई यहोवा का विश्वासघात करके पापी ठहरे, जैसा कि धरोहर, या लेन-देन, या लूट के विषय में अपने भाई से छल करे, या उस पर अत्याचार करे,
3 ಇಲ್ಲವೆ ಕಳೆದುಹೋಗಿದ ವಸ್ತು ಸಿಕ್ಕಿ, ಅದರ ವಿಷಯದಲ್ಲಿ ಸುಳ್ಳಾಡಿದ್ದರೆ ಮತ್ತು ಸುಳ್ಳಾಗಿ ಪ್ರಮಾಣ ಮಾಡಿದ್ದರೆ, ಇವೆಲ್ಲವುಗಳಲ್ಲಿ ಯಾವುದನ್ನಾದರೂ ಒಬ್ಬನು ಮಾಡಿದ್ದರೆ, ಅವನು ಪಾಪಮಾಡುವವನಾಗಿದ್ದಾನೆ.
३या पड़ी हुई वस्तु को पाकर उसके विषय झूठ बोले और झूठी शपथ भी खाए; ऐसी कोई भी बात क्यों न हो जिसे करके मनुष्य पापी ठहरते हैं,
4 ಅವನು ಪಾಪಮಾಡಿ, ಅಪರಾಧಿಯಾಗಿರುವುದರಿಂದ ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಇಲ್ಲವೆ ಅವನು ಮೋಸದಿಂದ ಪಡೆದ ವಸ್ತುವನ್ನೂ ಇಲ್ಲವೆ ಅವನ ವಶಕ್ಕೆ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ತಂದುಕೊಡಬೇಕು.
४तो जब वह ऐसा काम करके दोषी हो जाए, तब जो भी वस्तु उसने लूट, या अत्याचार करके, या धरोहर, या पड़ी पाई हो;
5 ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ, ಪಡೆದವುಗಳೆಲ್ಲವುಗಳನ್ನೂ ಕೂಡಿಸಿ, ಹಿಂದಕ್ಕೆ ಕೊಡಬೇಕು. ಪ್ರಾಯಶ್ಚಿತ್ತದ ಬಲಿ ಅರ್ಪಿಸುವ ದಿನದಲ್ಲಿ, ಅದರ ಯಜಮಾನನು ಯಾವನಾಗಿರುವನೋ, ಅವನಿಗೆ ಕೊಡಬೇಕು.
५चाहे कोई वस्तु क्यों न हो जिसके विषय में उसने झूठी शपथ खाई हो; तो वह उसको पूरा-पूरा लौटा दे, और पाँचवाँ भाग भी बढ़ाकर भर दे, जिस दिन यह मालूम हो कि वह दोषी है, उसी दिन वह उस वस्तु को उसके स्वामी को लौटा दे।
6 ಅವನು ತನ್ನ ಪ್ರಾಯಶ್ಚಿತ್ತಕ್ಕಾಗಿ ಕಳಂಕರಹಿತವಾದ ಒಂದು ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವ ದೇವರಿಗೆಂದು ಯಾಜಕನ ಬಳಿಗೆ ತರಬೇಕು.
६और वह यहोवा के सम्मुख अपना दोषबलि भी ले आए, अर्थात् एक निर्दोष मेढ़ा दोषबलि के लिये याजक के पास ले आए, वह उतने ही दाम का हो जितना याजक ठहराए।
7 ಯಾಜಕನು ಅವನಿಗಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಬೇಕು. ಅತಿಕ್ರಮದಲ್ಲಿ ಅವನು ಏನನ್ನಾದರೂ ಮಾಡಿದ್ದರೆ, ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು,” ಎಂದರು.
७इस प्रकार याजक उसके लिये यहोवा के सामने प्रायश्चित करे, और जिस काम को करके वह दोषी हो गया है उसकी क्षमा उसे मिलेगी।”
8 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,
८फिर यहोवा ने मूसा से कहा,
9 “ಆರೋನನಿಗೂ ಅವನ ಪುತ್ರರಿಗೂ ಆಜ್ಞಾಪಿಸಿ ಹೀಗೆ ಹೇಳು, ‘ಇದು ದಹನಬಲಿಯ ನಿಯಮವಾಗಿದೆ. ದಹನಬಲಿ ಇಡೀ ರಾತ್ರಿ, ಅಂದರೆ ಬೆಳಗಿನವರೆಗೆ ಬಲಿಪೀಠದ ಅಗ್ನಿಕುಂಡದ ಮೇಲೆ ಇರಬೇಕು. ಬಲಿಪೀಠದ ಬೆಂಕಿಯು ಅದರೊಳಗೆ ಸುಡುತ್ತಾ ಇರುವುದು.
९“हारून और उसके पुत्रों को आज्ञा देकर यह कह कि होमबलि की व्यवस्था यह है: होमबलि ईंधन के ऊपर रात भर भोर तक वेदी पर पड़ा रहे, और वेदी की अग्नि वेदी पर जलती रहे।
10 ಯಾಜಕನು ತನ್ನ ನಾರುಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರುಮಡಿಯ ಒಳಉಡುಪುಗಳನ್ನೂ ಧರಿಸಿಕೊಂಡು, ಬಲಿಪೀಠದ ಮೇಲೆ ದಹನಬಲಿಯೊಂದಿಗೆ ಸುಟ್ಟ ಬೂದಿಯನ್ನು ತೆಗೆದುಕೊಂಡು, ಅದನ್ನು ಬಲಿಪೀಠದ ಬಳಿಯಲ್ಲಿ ಹಾಕಬೇಕು.
१०और याजक अपने सनी के वस्त्र और अपने तन पर अपनी सनी की जाँघिया पहनकर होमबलि की राख, जो आग के भस्म करने से वेदी पर रह जाए, उसे उठाकर वेदी के पास रखे।
11 ಆಮೇಲೆ ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ, ಬೇರೆ ಉಡುಪುಗಳನ್ನು ಧರಿಸಿಕೊಂಡು, ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
११तब वह अपने ये वस्त्र उतारकर दूसरे वस्त्र पहनकर राख को छावनी से बाहर किसी शुद्ध स्थान पर ले जाए।
12 ಬಲಿಪೀಠದ ಮೇಲೆ ಬೆಂಕಿಯು ಅದರೊಳಗೆ ಸುಡುತ್ತಲೇ ಇರಬೇಕು. ಅದು ಆರಿಹೋಗಿರಬಾರದು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆಯನ್ನು ಹಾಕಬೇಕು. ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು. ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಬಲಿ ಅರ್ಪಣೆಗಳ ಕೊಬ್ಬನ್ನು ಸುಡಬೇಕು.
१२वेदी पर अग्नि जलती रहे, और कभी बुझने न पाए; और याजक प्रतिदिन भोर को उस पर लकड़ियाँ जलाकर होमबलि के टुकड़ों को उसके ऊपर सजा कर धर दे, और उसके ऊपर मेलबलियों की चर्बी को जलाया करे।
13 ಬಲಿಪೀಠದ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು, ಅದು ಎಂದಿಗೂ ಆರಬಾರದು.
१३वेदी पर आग लगातार जलती रहे; वह कभी बुझने न पाए।
14 “‘ಧಾನ್ಯ ಸಮರ್ಪಣೆಯ ನಿಯಮವು ಇದೇ. ಆರೋನನ ಪುತ್ರರು ಬಲಿಪೀಠದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.
१४“अन्नबलि की व्यवस्था इस प्रकार है: हारून के पुत्र उसको वेदी के आगे यहोवा के समीप ले आएँ।
15 ಯಾಜಕನು ಧಾನ್ಯ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ, ಧಾನ್ಯ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ, ಅದರ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದುಕೊಂಡು ಜ್ಞಾಪಕಾರ್ಥವಾಗಿ ಯೆಹೋವ ದೇವರಿಗೆ ಬಲಿಪೀಠದ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು.
१५और वह अन्नबलि के तेल मिले हुए मैदे में से मुट्ठी भर और उस पर का सब लोबान उठाकर अन्नबलि के स्मरणार्थ इस भाग को यहोवा के सम्मुख सुखदायक सुगन्ध के लिये वेदी पर जलाए।
16 ಅದರಲ್ಲಿ ಉಳಿದದ್ದನ್ನು ಆರೋನನೂ, ಅವನ ಪುತ್ರರೂ ತಿನ್ನಬೇಕು. ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು. ಅದನ್ನು ಅವರು ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.
१६और उसमें से जो शेष रह जाए उसे हारून और उसके पुत्र खाएँ; वह बिना ख़मीर पवित्रस्थान में खाया जाए, अर्थात् वे मिलापवाले तम्बू के आँगन में उसे खाएँ।
17 ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ಅವರು ನನಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆಗಳಲ್ಲಿ ಅವರ ಪಾಲನ್ನು ಅವರಿಗೆ ನಾನು ಕೊಟ್ಟಿದ್ದೇನೆ. ಅದು ದೋಷಪರಿಹಾರದ ಬಲಿಯ ಹಾಗೆಯೂ ಮಹಾಪರಿಶುದ್ಧವಾದದ್ದು.
१७वह ख़मीर के साथ पकाया न जाए; क्योंकि मैंने अपने हव्य में से उसको उनका निज भाग होने के लिये उन्हें दिया है; इसलिए जैसा पापबलि और दोषबलि परमपवित्र हैं वैसा ही वह भी है।
18 ಆರೋನನ ಮಕ್ಕಳಲ್ಲಿ ಎಲ್ಲಾ ಗಂಡುಮಕ್ಕಳೂ ಅದನ್ನು ತಿನ್ನಬಹುದು. ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವುದು. ಅವುಗಳನ್ನು ಮುಟ್ಟುವ ಪ್ರತಿಯೊಬ್ಬನೂ ಪರಿಶುದ್ಧನಾಗಿರಬೇಕು,’” ಎಂದರು.
१८तुम्हारी पीढ़ी-पीढ़ी में हारून के वंश के सब पुरुष उसमें से खा सकते हैं, यहोवा के हवनों में से यह उनका भाग सदैव बना रहेगा; जो कोई उन हवनों को छूए वह पवित्र ठहरेगा।”
19 ಯೆಹೋವ ದೇವರು ಮೋಶೆಯೊಡನೆ ಮಾತನಾಡಿ,
१९फिर यहोवा ने मूसा से कहा,
20 “ಆರೋನನೂ, ಅವನ ಪುತ್ರರೂ ಅಭಿಷಿಕ್ತರಾದ ದಿನದಲ್ಲಿ, ಅವರು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಬಲಿಯು ಇದೇ. ಮೂರು ಸೇರು ಗೋಧಿ ಹಿಟ್ಟಿನಲ್ಲಿ ನಿರಂತರವಾಗಿರುವ ಧಾನ್ಯ ಸಮರ್ಪಣೆಗಾಗಿ ಮುಂಜಾನೆ ಅದರಲ್ಲಿ ಅರ್ಧಭಾಗವನ್ನು ಮತ್ತು ರಾತ್ರಿ ಅದರಲ್ಲಿ ಅರ್ಧಭಾಗವನ್ನು ಸಮರ್ಪಿಸಬೇಕು.
२०“जिस दिन हारून का अभिषेक हो उस दिन वह अपने पुत्रों के साथ यहोवा को यह चढ़ावा चढ़ाए; अर्थात् एपा का दसवाँ भाग मैदा नित्य अन्नबलि में चढ़ाए, उसमें से आधा भोर को और आधा संध्या के समय चढ़ाए।
21 ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಬೇಯಿಸಿದ ಧಾನ್ಯ ಸಮರ್ಪಣೆಯ ತುಂಡುಗಳನ್ನು ನೀನು ಯೆಹೋವ ದೇವರಿಗೆ ಸುವಾಸನೆಯಾಗಿ ಸಮರ್ಪಿಸಬೇಕು.
२१वह तवे पर तेल के साथ पकाया जाए; जब वह तेल से तर हो जाए तब उसे ले आना, इस अन्नबलि के पके हुए टुकडे़ यहोवा के सुखदायक सुगन्ध के लिये चढ़ाना।
22 ಅವನ ಪುತ್ರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು. ಇದು ಯೆಹೋವ ದೇವರಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ. ಅದು ಸಂಪೂರ್ಣವಾಗಿ ಸುಟ್ಟಿರಬೇಕು.
२२हारून के पुत्रों में से जो भी उस याजकपद पर अभिषिक्त होगा, वह भी उसी प्रकार का चढ़ावा चढ़ाया करे; यह विधि सदा के लिये है, कि यहोवा के सम्मुख वह सम्पूर्ण चढ़ावा जलाया जाए।
23 ಏಕೆಂದರೆ ಯಾಜಕನಿಗಾಗಿರುವ ಪ್ರತಿಯೊಂದು ಧಾನ್ಯ ಸಮರ್ಪಣೆಯೂ ಸಂಪೂರ್ಣವಾಗಿ ಸುಟ್ಟಿರಬೇಕು. ಅದನ್ನು ತಿನ್ನಬಾರದು,” ಎಂದರು.
२३याजक के सम्पूर्ण अन्नबलि भी सब जलाए जाएँ; वह कभी न खाया जाए।”
24 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,
२४फिर यहोवा ने मूसा से कहा,
25 “ಆರೋನನಿಗೂ, ಅವನ ಪುತ್ರರಿಗೂ ಹೇಳು: ‘ಪಾಪ ಪರಿಹಾರದ ಬಲಿಯ ನಿಯಮವು ಇದೇ. ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಪಾಪ ಪರಿಹಾರದ ಬಲಿಯೂ ಯೆಹೋವ ದೇವರ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.
२५“हारून और उसके पुत्रों से यह कह कि पापबलि की व्यवस्था यह है: जिस स्थान में होमबलि पशु वध किया जाता है उसी में पापबलि पशु भी यहोवा के सम्मुख बलि किया जाए; वह परमपवित्र है।
26 ಪಾಪ ಪರಿಹಾರದ ಬಲಿಯನ್ನು ಮಾಡುವ ಯಾಜಕನು ಅದನ್ನು ತಿನ್ನಬೇಕು. ಅದನ್ನು ಸಭೆಯ ದೇವದರ್ಶನದ ಗುಡಾರದ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.
२६जो याजक पापबलि चढ़ाए वह उसे खाए; वह पवित्रस्थान में, अर्थात् मिलापवाले तम्बू के आँगन में खाया जाए।
27 ಅದರ ಮಾಂಸವನ್ನು ಮುಟ್ಟಿದ್ದೆಲ್ಲವೂ ಪರಿಶುದ್ಧವಾಗಿರುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಉಡುಪಿನ ಮೇಲೆ ಬಿದ್ದರೆ, ಅದನ್ನು ಚಿಮುಕಿಸಿದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.
२७जो कुछ उसके माँस से छू जाए, वह पवित्र ठहरेगा; और यदि उसके लहू के छींटे किसी वस्त्र पर पड़ जाएँ, तो उसे किसी पवित्रस्थान में धो देना।
28 ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು. ಅದನ್ನು ಒಂದು ಕಂಚಿನ ಪಾತ್ರೆಯಲ್ಲಿ ಬೇಯಿಸಿದ್ದಾದರೆ, ಅದನ್ನು ಬೆಳಗಿ, ನೀರಿನಿಂದ ತೊಳೆಯಬೇಕು.
२८और वह मिट्टी का पात्र जिसमें वह पकाया गया हो तोड़ दिया जाए; यदि वह पीतल के पात्र में उबाला गया हो, तो वह माँजा जाए, और जल से धो लिया जाए।
29 ಯಾಜಕರ ಕುಟುಂಬದಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು.
२९याजकों में से सब पुरुष उसे खा सकते हैं; वह परमपवित्र वस्तु है।
30 ಯಾವ ಪಾಪ ಪರಿಹಾರದ ಬಲಿಯ ರಕ್ತವನ್ನು ದೇವದರ್ಶನದ ಗುಡಾರದೊಳಗೆ ಸಮಾಧಾನಕ್ಕಾಗಿ ತರಲಾಗಿದೆಯೋ, ಆ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು, ಅದನ್ನು ಬೆಂಕಿಯಿಂದ ಸುಡಬೇಕು.
३०पर जिस पापबलि पशु के लहू में से कुछ भी लहू मिलापवाले तम्बू के भीतर पवित्रस्थान में प्रायश्चित करने को पहुँचाया जाए उसका माँस कभी न खाया जाए; वह आग में जला दिया जाए।