< ಯಾಜಕಕಾಂಡ 7 >

1 “‘ಇವು ಪ್ರಾಯಶ್ಚಿತ್ತ ಬಲಿಯ ನಿಯಮಗಳು: ಇದು ಮಹಾಪರಿಶುದ್ಧವಾದದ್ದು.
“फिर दोषबलि की व्यवस्था यह है। वह परमपवित्र है;
2 ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಪ್ರಾಯಶ್ಚಿತ್ತದ ಬಲಿಯನ್ನು ವಧಿಸಬೇಕು. ಅದರ ರಕ್ತವನ್ನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಬೇಕು.
जिस स्थान पर होमबलि पशु का वध करते हैं उसी स्थान पर दोषबलि पशु भी बलि करें, और उसके लहू को याजक वेदी पर चारों ओर छिड़के।
3 ಅದರ ಎಲ್ಲಾ ಕೊಬ್ಬನ್ನೂ, ಅಂದರೆ ಬಾಲದ ಕೊಬ್ಬನ್ನೂ ಕರುಳಿನ ಸುತ್ತಲಿರುವ ಕೊಬ್ಬನ್ನು,
और वह उसमें की सब चर्बी को चढ़ाए, अर्थात् उसकी मोटी पूँछ को, और जिस चर्बी से अंतड़ियाँ ढपी रहती हैं वह भी,
4 ಬದಿಯಲ್ಲಿರುವ ಎರಡು ಮೂತ್ರ ಜನಕಾಂಗಗಳನ್ನೂ, ಅವುಗಳ ಮೇಲಿರುವ ಕೊಬ್ಬನ್ನೂ, ಪಕ್ಕೆಯ ಬದಿಯಲ್ಲಿಯ ಪೊರೆಯನ್ನೂ ಮೂತ್ರಜನಕಾಂಗಗಳೊಂದಿಗೆ ತೆಗೆದುಕೊಂಡು ಅರ್ಪಿಸಬೇಕು.
और दोनों गुर्दे और जो चर्बी उनके ऊपर और कमर के पास रहती है, और गुर्दों समेत कलेजे के ऊपर की झिल्ली; इन सभी को वह अलग करे;
5 ಆಗ ಯಾಜಕನು ಅವುಗಳನ್ನು ಬೆಂಕಿಯಿಂದ ಯೆಹೋವ ದೇವರಿಗೆ ಸಮರ್ಪಿಸುವ ಬಲಿಪೀಠದ ಮೇಲೆ ಸುಡಬೇಕು. ಇದು ಪ್ರಾಯಶ್ಚಿತ್ತದ ಬಲಿಯಾಗಿದೆ.
और याजक इन्हें वेदी पर यहोवा के लिये हवन करे; तब वह दोषबलि होगा।
6 ಯಾಜಕರಲ್ಲಿ ಪ್ರತಿಯೊಬ್ಬ ಪುರುಷನು ಅದನ್ನು ತಿನ್ನಬೇಕು. ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು.
याजकों में के सब पुरुष उसमें से खा सकते हैं; वह किसी पवित्रस्थान में खाया जाए; क्योंकि वह परमपवित्र है।
7 “‘ಪಾಪ ಪರಿಹಾರದ ಬಲಿಯ ಹಾಗೆಯೇ ಪ್ರಾಯಶ್ಚಿತ್ತದ ಬಲಿಯೂ ಆಗಿದೆ. ಅವುಗಳಿಗೆ ಇರುವುದು ಒಂದೇ ನಿಯಮ, ಅವುಗಳಿಂದ ಪ್ರಾಯಶ್ಚಿತ್ತ ಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.
जैसा पापबलि है वैसा ही दोषबलि भी है, उन दोनों की एक ही व्यवस्था है; जो याजक उन बलियों को चढ़ा के प्रायश्चित करे वही उन वस्तुओं को ले ले।
8 ದಹನಬಲಿಯನ್ನು ಸಮರ್ಪಿಸುವ ಯಾಜಕನು ತಾನು ಸಮರ್ಪಿಸಿದ ದಹನಬಲಿಯ ತೊಗಲನ್ನು ತಾನೇ ತೆಗೆದುಕೊಳ್ಳಬೇಕು.
और जो याजक किसी के लिये होमबलि को चढ़ाए उस होमबलि पशु की खाल को वही याजक ले ले।
9 ಒಲೆಯಲ್ಲಿ ಬೇಯಿಸಿದ ಬಾಂಡ್ಲಿಯಲ್ಲಿಯೂ ಬೋಗುಣಿಯಲ್ಲಿಯೂ ತಯಾರಿಸಿದ ಎಲ್ಲಾ ಧಾನ್ಯ ಸಮರ್ಪಣೆಯು ಸಮರ್ಪಿಸಿದ ಯಾಜಕನದಾಗಿರಬೇಕು.
और तंदूर में, या कढ़ाही में, या तवे पर पके हुए सब अन्नबलि उसी याजक की होंगी जो उन्हें चढ़ाता है।
10 ಎಣ್ಣೆಯಿಂದ ಮಿಶ್ರಿತವಾದ ಮತ್ತು ಒಣಗಿದ್ದ ಪ್ರತಿಯೊಂದು ಧಾನ್ಯ ಸಮರ್ಪಣೆಯನ್ನೂ ಆರೋನನ ಪುತ್ರರು ಸರಿ ಸಮಾನವಾಗಿ ತೆಗೆದುಕೊಳ್ಳಬೇಕು.
१०और सब अन्नबलि, जो चाहे तेल से सने हुए हों चाहे रूखे हों, वे हारून के सब पुत्रों को एक समान मिले।
11 “‘ಅವನು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಸಮಾಧಾನದ ಬಲಿಗಳ ನಿಯಮವು ಇದೇ.
११“मेलबलि की जिसे कोई यहोवा के लिये चढ़ाए व्यवस्था यह है:
12 “‘ಅವನು ಉಪಕಾರ ಸ್ತುತಿಗಾಗಿ ಅರ್ಪಿಸುವುದಾದರೆ, ಕೃತಜ್ಞತಾಸ್ತುತಿ ಬಲಿಯನ್ನು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಗಳೊಂದಿಗೆ, ಎಣ್ಣೆ ಹೊಯ್ದ ಹುಳಿಯಿಲ್ಲದ ದೋಸೆಗಳೊಂದಿಗೆ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದ ರೊಟ್ಟಿಗಳೊಂದಿಗೆ ಸಮರ್ಪಿಸಬೇಕು.
१२यदि वह उसे धन्यवाद के लिये चढ़ाए, तो धन्यवाद-बलि के साथ तेल से सने हुए अख़मीरी फुलके, और तेल से चुपड़ी हुई अख़मीरी रोटियाँ, और तेल से सने हुए मैदे के फुलके तेल से तर चढ़ाए।
13 ರೊಟ್ಟಿಗಳಲ್ಲದೆ, ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಬಲಿಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು.
१३और वह अपने धन्यवादवाले मेलबलि के साथ अख़मीरी रोटियाँ, भी चढ़ाए।
14 ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಕಾಣಿಕೆಯನ್ನಾಗಿ ಯೆಹೋವ ದೇವರಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದ್ದಾಗಬೇಕು.
१४और ऐसे एक-एक चढ़ावे में से वह एक-एक रोटी यहोवा को उठाने की भेंट करके चढ़ाए; वह मेलबलि के लहू के छिड़कनेवाले याजक की होगी।
15 ಉಪಕಾರ ಸ್ತುತಿಗಾಗಿ ಅವನು ಸಮಾಧಾನ ಬಲಿಯ ಮಾಂಸವನ್ನು ಅರ್ಪಿಸಲಾದ ದಿನವೇ ತಿನ್ನಬೇಕು. ಅವನು ಅದರಲ್ಲಿ ಬೆಳಗಿನವರೆಗೆ ಯಾವುದನ್ನೂ ಉಳಿಸಬಾರದು.
१५और उस धन्यवादवाले मेलबलि का माँस बलिदान चढ़ाने के दिन ही खाया जाए; उसमें से कुछ भी भोर तक शेष न रह जाए।
16 “‘ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಯಿಚ್ಛೆಯಾದ ಸಮರ್ಪಣೆಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ಅದನ್ನು ತಿನ್ನಬೇಕು. ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬಹುದು.
१६पर यदि उसके बलिदान का चढ़ावा मन्नत का या स्वेच्छा का हो, तो उस बलिदान को जिस दिन वह चढ़ाया जाए उसी दिन वह खाया जाए, और उसमें से जो शेष रह जाए वह दूसरे दिन भी खाया जाए।
17 ಆದರೆ ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿಯಿಂದ ಸುಡಬೇಕು.
१७परन्तु जो कुछ बलिदान के माँस में से तीसरे दिन तक रह जाए वह आग में जला दिया जाए।
18 ತನ್ನ ಸಮಾಧಾನ ಬಲಿಯ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಬಲಿಯಾಗುವುದಿಲ್ಲ, ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರುವುದಿಲ್ಲ. ಅದು ಅಶುಚಿಯಾಗಿರುವುದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.
१८और उसके मेलबलि के माँस में से यदि कुछ भी तीसरे दिन खाया जाए, तो वह ग्रहण न किया जाएगा, और न उसके हित में गिना जाएगा; वह घृणित कर्म समझा जाएगा, और जो कोई उसमें से खाए उसका अधर्म उसी के सिर पर पड़ेगा।
19 “‘ಅಶುದ್ಧವಾದ ಯಾವುದನ್ನಾದರೂ ಮುಟ್ಟಿದ ಮಾಂಸವನ್ನು ತಿನ್ನಬಾರದು, ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದರಲ್ಲಿ ತಿನ್ನಬಹುದು.
१९“फिर जो माँस किसी अशुद्ध वस्तु से छू जाए वह न खाया जाए; वह आग में जला दिया जाए। फिर मेलबलि का माँस जितने शुद्ध हों वे ही खाएँ,
20 ಆದರೆ ಯೆಹೋವ ದೇವರಿಗೆ ಸಂಬಂಧಪಟ್ಟ ಸಮಾಧಾನದ ಬಲಿಯ ಯಜ್ಞದ ಮಾಂಸವನ್ನು ಯಾವನಾದರೂ ಅಶುದ್ಧನಾಗಿದ್ದು ತಿನ್ನುವನೋ, ಅಂಥವರನ್ನು ತಮ್ಮ ಜನರಿಂದ ತೆಗೆದುಹಾಕಬೇಕು.
२०परन्तु जो अशुद्ध होकर यहोवा के मेलबलि के माँस में से कुछ खाए वह अपने लोगों में से नाश किया जाए।
21 ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧ ವಸ್ತುವನ್ನೇ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧವಸ್ತುವನ್ನಾಗಲಿ ಮುಟ್ಟಿದರೆ ಮತ್ತು ಯೆಹೋವ ದೇವರಿಗೆ ಸಂಬಂಧಿಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು,’” ಎಂದರು.
२१और यदि कोई किसी अशुद्ध वस्तु को छूकर यहोवा के मेलबलि पशु के माँस में से खाए, तो वह भी अपने लोगों में से नाश किया जाए, चाहे वह मनुष्य की कोई अशुद्ध वस्तु या अशुद्ध पशु या कोई भी अशुद्ध और घृणित वस्तु हो।”
22 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,
२२फिर यहोवा ने मूसा से कहा,
23 “ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ನೀವು ಎತ್ತು ಇಲ್ಲವೆ ಕುರಿ ಇಲ್ಲವೆ ಮೇಕೆಗಳ ಕೊಬ್ಬನ್ನು ತಿನ್ನಬಾರದು.
२३“इस्राएलियों से इस प्रकार कह: तुम लोग न तो बैल की कुछ चर्बी खाना और न भेड़ या बकरी की।
24 ತಾನಾಗಿಯೇ ಸತ್ತ ಪ್ರಾಣಿಯ ಕೊಬ್ಬನ್ನೂ, ಕಾಡುಮೃಗಗಳು ಸೀಳಿದ್ದರ ಕೊಬ್ಬನ್ನೂ ಬೇರೆ ಯಾವುದಕ್ಕಾದರೂ ಉಪಯೋಗಿಸಬಹುದು. ಆದರೆ ನೀವು ಅದನ್ನು ಎಷ್ಟು ಮಾತ್ರವೂ ತಿನ್ನಬಾರದು.
२४और जो पशु स्वयं मर जाए, और जो दूसरे पशु से फाड़ा जाए, उसकी चर्बी और अन्य काम में लाना, परन्तु उसे किसी प्रकार से खाना नहीं।
25 ಏಕೆಂದರೆ ಮನುಷ್ಯರು ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸಿದ ಬಲಿ, ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ, ಅಂಥವರನ್ನು ತಮ್ಮ ಜನರಿಂದ ತೆಗೆದುಹಾಕಬೇಕು.
२५जो कोई ऐसे पशु की चर्बी खाएगा जिसमें से लोग कुछ यहोवा के लिये हवन करके चढ़ाया करते हैं वह खानेवाला अपने लोगों में से नाश किया जाएगा।
26 ಇದಲ್ಲದೆ ನೀವು ಯಾವ ತರದ ರಕ್ತವನ್ನೂ ಅಂದರೆ ಅದು ಪಕ್ಷಿಯದಾಗಿರಲಿ, ಪ್ರಾಣಿಯದಾಗಿರಲಿ ನಿಮ್ಮ ಯಾವ ನಿವಾಸಗಳಲ್ಲಿಯೂ ತಿನ್ನಬಾರದು.
२६और तुम अपने घर में किसी भाँति का लहू, चाहे पक्षी का चाहे पशु का हो, न खाना।
27 ಯಾವುದೇ ತರದ ರಕ್ತವನ್ನು ತಿಂದವನು ಯಾವನೇ ಆಗಿರಲಿ, ಅಂಥವನನ್ನು ತನ್ನ ಜನರಿಂದ ತೆಗೆದುಹಾಕಬೇಕು.’”
२७हर एक प्राणी जो किसी भाँति का लहू खाएगा वह अपने लोगों में से नाश किया जाएगा।”
28 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,
२८फिर यहोवा ने मूसा से कहा,
29 “ನೀನು ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ಯೆಹೋವ ದೇವರಿಗೆ ಸಮಾಧಾನ ಬಲಿಯನ್ನು ಅರ್ಪಿಸುವವನು, ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಯೆಹೋವ ದೇವರಿಗೆ ತರಬೇಕು.
२९“इस्राएलियों से इस प्रकार कह: जो यहोवा के लिये मेलबलि चढ़ाए वह उसी मेलबलि में से यहोवा के पास भेंट ले आए;
30 ಅವನು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಯೆಹೋವ ದೇವರ ಮುಂದೆ ನೈವೇದ್ಯರೂಪವಾಗಿ ನಿವಾಳಿಸುವದಕ್ಕೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು.
३०वह अपने ही हाथों से यहोवा के हव्य को, अर्थात् छाती समेत चर्बी को ले आए कि छाती हिलाने की भेंट करके यहोवा के सामने हिलाई जाए।
31 ಯಾಜಕನು ಆ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳಿಗೆ ಸೇರುವುದು.
३१और याजक चर्बी को तो वेदी पर जलाए, परन्तु छाती हारून और उसके पुत्रों की होगी।
32 ಬಲಭುಜವನ್ನು ನೀವು ಯಾಜಕನಿಗೆ ಸಮಾಧಾನದ ಬಲಿಯಾಗಿ ಕೊಡಬೇಕು.
३२फिर तुम अपने मेलबलियों में से दाहिनी जाँघ को भी उठाने की भेंट करके याजक को देना;
33 ಸಮಾಧಾನದ ಬಲಿಗಳ ರಕ್ತವನ್ನೂ, ಕೊಬ್ಬನ್ನೂ ಸಮರ್ಪಿಸುವ ಆರೋನನ ಪುತ್ರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ.
३३हारून के पुत्रों में से जो मेलबलि के लहू और चर्बी को चढ़ाए दाहिनी जाँघ उसी का भाग होगा।
34 ಏಕೆಂದರೆ ನೈವೇದ್ಯ ಮಾಡಿದ ಎದೆಯನ್ನು ಮತ್ತು ನಿವಾಳಿಸುವ ಭುಜವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಬಲಿಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಯಾಜಕನಾದ ಆರೋನನಿಗೂ, ಅವನ ಪುತ್ರರಿಗೂ ಇಸ್ರಾಯೇಲರಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಅವರಿಗೆ ಕೊಟ್ಟಿದ್ದೇನೆ.’”
३४क्योंकि इस्राएलियों के मेलबलियों में से हिलाने की भेंट की छाती और उठाने की भेंट की जाँघ को लेकर मैंने याजक हारून और उसके पुत्रों को दिया है, कि यह सर्वदा इस्राएलियों की ओर से उनका हक़ बना रहे।
35 ಆರೋನನ ಅಭಿಷೇಕದ ಮತ್ತು ಅವನ ಮಕ್ಕಳ ಅಭಿಷೇಕದ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಯೆಹೋವ ದೇವರಿಗೆ ಒಪ್ಪಿಸಿಕೊಳ್ಳುವಾಗ, ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸುವ ಬಲಿಗಳಲ್ಲಿ ಇರುವ ಪಾಲು ಇದೆ.
३५“जिस दिन हारून और उसके पुत्र यहोवा के समीप याजकपद के लिये लाए गए, उसी दिन यहोवा के हव्यों में से उनका यही अभिषिक्त भाग ठहराया गया;
36 ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಯೆಹೋವ ದೇವರು ಇಸ್ರಾಯೇಲರಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾರೆ.
३६अर्थात् जिस दिन यहोवा ने उनका अभिषेक किया उसी दिन उसने आज्ञा दी कि उनको इस्राएलियों की ओर से ये भाग नित्य मिला करें; उनकी पीढ़ी-पीढ़ी के लिये उनका यही हक़ ठहराया गया।”
37 ದಹನಬಲಿ, ಧಾನ್ಯ ಬಲಿ, ಪಾಪ ಪರಿಹಾರದ ಬಲಿ, ಪ್ರಾಯಶ್ಚಿತ್ತದ ಬಲಿ, ಪ್ರತಿಷ್ಠೆಗಳ ಮತ್ತು ಸಮಾಧಾನದ ಬಲಿಗಳ ಉಪದೇಶಗಳು ಇವೇ.
३७होमबलि, अन्नबलि, पापबलि, दोषबलि, याजकों के संस्कार बलि, और मेलबलि की व्यवस्था यही है;
38 ಇವುಗಳನ್ನು ಯೆಹೋವ ದೇವರು ಇಸ್ರಾಯೇಲರಿಗೆ ಅವರು ತಮ್ಮ ಕಾಣಿಕೆಗಳನ್ನು ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಸೀನಾಯಿ ಮರುಭೂಮಿಯ ಸೀನಾಯಿ ಬೆಟ್ಟದಲ್ಲಿ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದರು.
३८जब यहोवा ने सीनै पर्वत के पास के जंगल में मूसा को आज्ञा दी कि इस्राएली मेरे लिये क्या-क्या चढ़ावा चढ़ाएँ, तब उसने उनको यही व्यवस्था दी थी।

< ಯಾಜಕಕಾಂಡ 7 >