< ಯಾಜಕಕಾಂಡ 1 >
1 ಯೆಹೋವ ದೇವರು ಮೋಶೆಯನ್ನು ಕರೆದು, ದೇವದರ್ಶನದ ಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ,
१यहोवा ने मिलापवाले तम्बू में से मूसा को बुलाकर उससे कहा,
2 ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನಂದರೆ: “‘ನಿಮ್ಮಲ್ಲಿ ಯಾರಾದರೂ ಯೆಹೋವ ದೇವರಿಗೆ ಒಂದು ಪ್ರಾಣಿಯನ್ನು ಕಾಣಿಕೆಯಾಗಿ ಸಮರ್ಪಿಸಲು ಆಶಿಸಿದರೆ, ಅದನ್ನು ದನಕರುಗಳಿಂದಾಗಲಿ, ಆಡು ಕುರಿಗಳಿಂದಾಗಲಿ ಆಯ್ದುಕೊಂಡು ಸಮರ್ಪಿಸಲಿ.
२“इस्राएलियों से कह कि तुम में से यदि कोई मनुष्य यहोवा के लिये पशु का चढ़ावा चढ़ाए, तो उसका बलिपशु गाय-बैलों या भेड़-बकरियों में से एक का हो।
3 “‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.
३“यदि वह गाय-बैलों में से होमबलि करे, तो निर्दोष नर मिलापवाले तम्बू के द्वार पर चढ़ाए कि यहोवा उसे ग्रहण करे।
4 ದಹನಬಲಿ ಅರ್ಪಿಸುವವನು ತನ್ನ ಕೈಯನ್ನು ಆ ಪ್ರಾಣಿಯ ತಲೆಯ ಮೇಲೆ ಇಡಬೇಕು. ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವುದು.
४वह अपना हाथ होमबलि पशु के सिर पर रखे, और वह उनके लिये प्रायश्चित करने को ग्रहण किया जाएगा।
5 ಅವನು ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು. ಆಗ ಯಾಜಕರಾದ ಆರೋನನ ಪುತ್ರರು ರಕ್ತವನ್ನು ತಂದು, ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು.
५तब वह उस बछड़े को यहोवा के सामने बलि करे; और हारून के पुत्र जो याजक हैं वे लहू को समीप ले जाकर उस वेदी के चारों ओर छिड़के जो मिलापवाले तम्बू के द्वार पर है।
6 ಅವನು ಆ ದಹನಬಲಿಯ ಚರ್ಮವನ್ನು ಸುಲಿದು, ಅದರ ದೇಹವನ್ನು ಕಡಿದು, ತುಂಡುತುಂಡಾಗಿ ಮಾಡಬೇಕು.
६फिर वह होमबलि पशु की खाल निकालकर उस पशु को टुकड़े-टुकड़े करे;
7 ಯಾಜಕನಾದ ಆರೋನನ ಪುತ್ರರು ಬಲಿಪೀಠದ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು.
७तब हारून याजक के पुत्र वेदी पर आग रखें, और आग पर लकड़ी सजा कर रखे;
8 ಆಗ ಯಾಜಕರಾದ ಆರೋನನ ಪುತ್ರರು ಅದರ ಭಾಗಗಳನ್ನು ಅಂದರೆ, ತಲೆಯನ್ನೂ ಮತ್ತು ಕೊಬ್ಬನ್ನೂ ಬಲಿಪೀಠದ ಮೇಲೆ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.
८और हारून के पुत्र जो याजक हैं वे सिर और चर्बी समेत पशु के टुकड़ों को उस लकड़ी पर जो वेदी की आग पर होगी सजा कर रखें;
9 ಅದರ ಕರುಳುಗಳನ್ನೂ, ಕಾಲುಗಳನ್ನೂ ಅವರು ನೀರಿನಲ್ಲಿ ತೊಳೆಯಬೇಕು. ಯಾಜಕನು ಎಲ್ಲವನ್ನೂ ಬಲಿಪೀಠದ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ, ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
९और वह उसकी अंतड़ियों और पैरों को जल से धोए। तब याजक सब को वेदी पर जलाए कि वह होमबलि यहोवा के लिये सुखदायक सुगन्धवाला हवन ठहरे।
10 “‘ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆಯಿಂದ ತರುವುದಾದರೆ ಅವನು ಕುರಿಗಳಲ್ಲಾಗಲಿ, ಮೇಕೆಗಳಲ್ಲಾಗಲಿ, ಕಳಂಕರಹಿತ ಒಂದು ಗಂಡನ್ನು ತರಬೇಕು.
१०“यदि वह भेड़ों या बकरों का होमबलि चढ़ाए, तो निर्दोष नर को चढ़ाए।
11 ಅವನು ಅದನ್ನು ಬಲಿಪೀಠದ ಉತ್ತರದ ಕಡೆಯಲ್ಲಿ ಯೆಹೋವ ದೇವರ ಮುಂದೆ ವಧಿಸಬೇಕು. ಇದಲ್ಲದೆ ಯಾಜಕರಾದ ಆರೋನನ ಪುತ್ರರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.
११और वह उसको यहोवा के आगे वेदी के उत्तरी ओर बलि करे; और हारून के पुत्र जो याजक हैं वे उसके लहू को वेदी के चारों ओर छिड़कें।
12 ಅರ್ಪಿಸುವವನು ಆ ಪ್ರಾಣಿಯ ದೇಹವನ್ನು ತುಂಡುತುಂಡಾಗಿ ಕಡಿದ ಮೇಲೆ, ಯಾಜಕನು ಆ ತುಂಡುಗಳನ್ನೂ, ತಲೆಯನ್ನೂ, ಕೊಬ್ಬನ್ನೂ ಬಲಿಪೀಠದ ಮೇಲಿನ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.
१२और वह उसको सिर और चर्बी समेत टुकड़े-टुकड़े करे, और याजक इन सब को उस लकड़ी पर सजा कर रखे जो वेदी की आग पर होगी;
13 ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು. ಆಗ ಯಾಜಕನು ಅವೆಲ್ಲವುಗಳನ್ನೂ ತಂದು ಬಲಿಪೀಠದ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
१३वह उसकी अंतड़ियों और पैरों को जल से धोए। और याजक वेदी पर जलाए कि वह होमबलि हो और यहोवा के लिये सुखदायक सुगन्धवाला हवन ठहरे।
14 “‘ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವಂಥದ್ದು ಪಕ್ಷಿಗಳಾಗಿದ್ದರೆ, ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯನ್ನಾಗಲಿ ಇಲ್ಲವೆ ಪಾರಿವಾಳದ ಮರಿಯನ್ನಾಗಲಿ ತರಬೇಕು.
१४“यदि वह यहोवा के लिये पक्षियों की होमबलि चढ़ाए, तो पंडुको या कबूतरों का चढ़ावा चढ़ाए।
15 ಆಗ ಯಾಜಕನು ಅದನ್ನೂ ಬಲಿಪೀಠದ ಬಳಿಗೆ ತಂದು ಅದರ ತಲೆಯನ್ನು ಮುರಿದು, ಬಲಿಪೀಠದ ಮೇಲೆ ಸುಡಬೇಕು. ಅದರ ರಕ್ತವನ್ನು ಬಲಿಪೀಠದ ಹೊರಬದಿಯಲ್ಲಿ ಹಿಂಡಬೇಕು.
१५याजक उसको वेदी के समीप ले जाकर उसका गला मरोड़कर सिर को धड़ से अलग करे, और वेदी पर जलाए; और उसका सारा लहू उस वेदी के बाजू पर गिराया जाए;
16 ಇದಲ್ಲದೆ ಅವನು ಅದರ ರೆಕ್ಕೆ ಪುಕ್ಕಗಳೊಂದಿಗೆ ಕರುಳುಗಳನ್ನೂ ಕಿತ್ತು, ಬಲಿಪೀಠದ ಬಳಿ ಪೂರ್ವ ಭಾಗದಲ್ಲಿ ಬೂದಿಯಿರುವ ಸ್ಥಳದಲ್ಲಿ ಬಿಸಾಡಬೇಕು.
१६और वह उसकी गल-थैली को मल सहित निकालकर वेदी के पूरब की ओर से राख डालने के स्थान पर फेंक दे;
17 ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು. ಆದರೆ ಬೇರೆಬೇರೆಯಾಗಿ ವಿಭಾಗಿಸಬಾರದು. ಆಗ ಯಾಜಕನು ಅದನ್ನು ಬಲಿಪೀಠದ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆ ಸುಡಬೇಕು.
१७और वह उसको पंखों के बीच से फाड़े, पर अलग-अलग न करे। तब याजक उसको वेदी पर उस लकड़ी के ऊपर रखकर जो आग पर होगी जलाए कि वह होमबलि और यहोवा के लिये सुखदायक सुगन्धवाला हवन ठहरे।