< ಲೂಕನು 10 >
1 ಇವುಗಳಾದ ಮೇಲೆ ಕರ್ತದೇವರು ಬೇರೆ ಎಪ್ಪತ್ತೆರಡು ಮಂದಿಯನ್ನು ಸಹ ನೇಮಿಸಿ ತಾವೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತಮಗೆ ಮುಂದಾಗಿ ಕಳುಹಿಸಿದರು.
Después de esto, el Señor designó todavía otros setenta y dos, y los envió de dos en dos delante de Él a toda ciudad o lugar, adonde Él mismo quería ir.
2 ಯೇಸು ಅವರಿಗೆ, “ಬೆಳೆಯೋ ಬಹಳವಾಗಿದೆ, ಕೆಲಸದವರೋ ಕೆಲವರು. ಆದ್ದರಿಂದ, ಬೆಳೆಯ ಯಜಮಾನನನ್ನು ತನ್ನ ಬೆಳೆಗೆ ತಕ್ಕಷ್ಟು ಕೆಲಸದವರನ್ನು ಕಳುಹಿಸುವಂತೆ, ನೀವು ಬೇಡಿಕೊಳ್ಳಿರಿ.
Y les dijo: “La mies es grande, y los obreros son pocos. Rogad, pues, al Dueño de la mies que envíe obreros a su mies.
3 ಹೋಗಿರಿ! ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.
Id: os envío como corderos entre lobos.
4 ಹಣದ ಚೀಲವನ್ನಾಗಲಿ, ಪ್ರಯಾಣದ ಚೀಲವನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ; ದಾರಿಯಲ್ಲಿ ಯಾರನ್ನೂ ಕುಶಲ ವಿಚಾರ ಮಾಡಿಕೊಂಡಿರಬೇಡಿರಿ.
No llevéis ni bolsa, ni alforja, ni calzado, ni saludéis a nadie por el camino.
5 “ನೀವು ಯಾವ ಮನೆಯನ್ನಾದರೂ ಪ್ರವೇಶಿಸುವಾಗ ಮೊದಲು, ‘ಈ ಮನೆಗೆ ಸಮಾಧಾನವಾಗಲಿ,’ ಎಂದು ಹೇಳಿರಿ.
En toda casa donde entréis, decid primero: «Paz a esta casa».
6 ಅಲ್ಲಿ ಸಮಾಧಾನದ ಮನುಷ್ಯನು ಇದ್ದರೆ, ನಿಮ್ಮ ಸಮಾಧಾನವು ಅವನ ಮೇಲೆ ಇರುವುದು; ಇಲ್ಲದಿದ್ದರೆ, ಅದು ನಿಮಗೇ ಹಿಂದಿರುಗುವುದು.
Y si hay allí un hijo de paz, reposará sobre él la paz vuestra; si no, volverá a vosotros.
7 ಮನೆಯಿಂದ ಮನೆಗೆ ಹೋಗದೆ, ಅದೇ ಮನೆಯಲ್ಲಿದ್ದು, ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ. ಕೆಲಸದವನು ತನ್ನ ಕೂಲಿಗೆ ಯೋಗ್ಯನು.
Permaneced en la misma casa, comiendo y bebiendo lo que os den, porque el obrero es acreedor a su salario. No paséis de casa en casa.
8 “ಯಾವುದಾದರೂ ಒಂದು ಪಟ್ಟಣದೊಳಗೆ ನೀವು ಪ್ರವೇಶಿಸುವಾಗ, ಅವರು ನಿಮ್ಮನ್ನು ಸೇರಿಸಿಕೊಂಡರೆ ಅವರು ನೀಡಿದ್ದನ್ನು ತಿನ್ನಿರಿ.
Y en toda ciudad en donde entréis y os reciban, comed lo que os pusieren delante.
9 ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿ, ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ,’ ಎಂದು ಹೇಳಿರಿ.
Curad los enfermos que haya en ella, y decidles: «El reino de Dios está llegando a vosotros».
10 ಆದರೆ ನೀವು ಪ್ರವೇಶಿಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ, ನೀವು ಅದರ ಬೀದಿಗಳಲ್ಲಿ ಹೋಗಿ,
Y en toda ciudad en donde entrareis y no os quisieren recibir, salid por sus calles, y decid:
11 ‘ನಮ್ಮ ಪಾದಗಳಿಗೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ. ಆದರೂ ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿರಲಿ,’ ಎಂದು ಹೇಳಿರಿ.
“Aun el polvo que de vuestra ciudad se pegó a nuestros pies, lo sacudimos ( dejándolo ) para vosotros. Pero sabedlo: ¡el reino de Dios ha llegado!”
12 ಆದರೆ ನ್ಯಾಯತೀರ್ಪಿನ ದಿನ, ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿ ಹೆಚ್ಚು ತಾಳಬಹುದಾಗಿರುವುದು ಎಂದು ನಾನು ನಿಮಗೆ ಹೇಳುತ್ತೇನೆ.
Os digo que en aquel día será más tolerable para los de Sodoma que para aquella ciudad.
13 “ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಅದ್ಭುತಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು.
¡Ay de ti, Corazín! ¡Ay de ti, Betsaida! porque si en Tiro y Sidón hubiesen sido hechos los milagros que se cumplieron entre vosotros, desde hace mucho tiempo se habrían arrepentido en saco y en ceniza.
14 ಆದರೆ ನ್ಯಾಯತೀರ್ಪಿನಲ್ಲಿ ನಿಮ್ಮ ಗತಿಗಿಂತಲೂ ಟೈರ್ ಮತ್ತು ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ತಾಳಬಹುದಾಗಿರುವುದು.
Mas para Tiro y para Sidón, será más tolerable, en el juicio, que para vosotros.
15 ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ. (Hadēs )
Y tú, Cafarnaúm, ¿serás acaso exaltada hasta el cielo? ¡Hasta el abismo descenderás! (Hadēs )
16 “ನಿಮ್ಮ ಮಾತನ್ನು ಕೇಳುವವರು ನನ್ನ ಮಾತನ್ನು ಕೇಳುತ್ತಾರೆ; ನಿಮ್ಮನ್ನು ತಿರಸ್ಕರಿಸುವವರು ನನ್ನನ್ನು ತಿರಸ್ಕರಿಸುತ್ತಾರೆ; ಆದರೆ ನನ್ನನ್ನು ತಿರಸ್ಕರಿಸುವವರು ನನ್ನನ್ನು ಕಳುಹಿಸಿದಾತನನ್ನೇ ತಿರಸ್ಕರಿಸುತ್ತಾರೆ,” ಎಂದರು.
Quien a vosotros escucha, a Mí me escucha; y quien a vosotros rechaza, a Mí me rechaza; ahora bien, quien me rechaza a Mí, rechaza a Aquel que me envió”.
17 ಆ ಎಪ್ಪತ್ತೆರಡು ಮಂದಿ ಸಂತೋಷದಿಂದ ಹಿಂತಿರುಗಿ, “ಕರ್ತದೇವರೇ, ನಿಮ್ಮ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು,” ಎಂದರು.
Entretanto los setenta y dos volvieron y le dijeron llenos de gozo: “Señor, hasta los demonios se nos sujetan en tu nombre”.
18 ಯೇಸು ಅವರಿಗೆ, “ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವುದನ್ನು ನಾನು ಕಂಡೆನು.
Díjoles: “Yo veía a Satanás caer como un relámpago del cielo.
19 ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವುದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವುದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡಲಾರದು.
Mirad que os he dado potestad de caminar sobre serpientes y escorpiones y sobre todo poder del enemigo, y nada os dañará.
20 ಹೀಗಿದ್ದರೂ, ದೆವ್ವಗಳು ನಿಮಗೆ ಅಧೀನವಾಗಿವೆ ಎಂದು ಸಂತೋಷ ಪಡಬೇಡಿರಿ, ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಲಿಖಿತವಾಗಿವೆ ಎಂದು ಸಂತೋಷಿಸಿರಿ,” ಎಂದರು.
Sin embargo no habéis de gozaros en esto de que los demonios se os sujetan, sino gozaos de que vuestros nombres están escritos en el cielo”.
21 ಆ ಸಮಯದಲ್ಲಿ ಯೇಸು, ಪವಿತ್ರಾತ್ಮರ ಮುಖಾಂತರ ಆನಂದಗೊಂಡು, “ತಂದೆಯೇ, ಪರಲೋಕ, ಭೂಲೋಕಗಳ ಒಡೆಯರೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ. ಹೌದು ತಂದೆಯೇ, ಹೀಗೆ ಮಾಡುವುದು ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋಚಿತು.
En aquella hora se estremeció de gozo, en el Espíritu Santo, y dijo: “Yo te alabo, oh Padre, Señor del cielo y de la tierra, porque has mantenido estas cosas escondidas a los sabios y a los prudentes, y las has revelado a los pequeños. Sí, Padre, porque así te plugo a Ti.
22 “ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾರೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು,” ಎಂದರು.
Por mi Padre, me ha sido dado todo, y nadie sabe quién es el Hijo, sino el Padre, y quién es el Padre, sino el Hijo y aquel a quien el Hijo quisiere revelarlo”.
23 ಯೇಸು ತಮ್ಮ ಶಿಷ್ಯರ ಕಡೆಗೆ ತಿರುಗಿಕೊಂಡು, “ನೀವು ಕಾಣುತ್ತಿರುವುದನ್ನೆಲ್ಲಾ ಕಾಣುವ ಕಣ್ಣುಗಳು ಭಾಗ್ಯವುಳ್ಳವು.
Y volviéndose hacia sus discípulos en particular, dijo: “¡Felices los ojos que ven lo que vosotros veis!
24 ಏಕೆಂದರೆ ಅನೇಕ ಪ್ರವಾದಿಗಳು ಮತ್ತು ಅರಸರು ನೀವು ಕಾಣುವಂಥವುಗಳನ್ನು ಕಾಣಬೇಕೆಂದು ಅಪೇಕ್ಷಿಸಿದರೂ ಕಾಣಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.
Os aseguro: muchos profetas y reyes desearon ver lo que vosotros veis, y no lo vieron, oír lo que vosotros oís, y no lo oyeron”.
25 ಒಂದು ಸಂದರ್ಭದಲ್ಲಿ ಒಬ್ಬ ನಿಯಮ ಬೋಧಕನು ಎದ್ದು ನಿಂತು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಕೇಳಿದನು. (aiōnios )
Se levantó entonces un doctor de la Ley y, para enredarlo le dijo: “Maestro, ¿qué he de hacer para lograr la herencia de la vida eterna?” (aiōnios )
26 ಯೇಸು ಅವನಿಗೆ, “ಮೋಶೆಯ ನಿಯಮದಲ್ಲಿ ಏನು ಬರೆದಿದೆ? ನೀನು ಅದನ್ನು ಹೇಗೆ ಓದುತ್ತೀ?” ಎಂದು ಕೇಳಿದರು.
Respondiole: “En la Ley, ¿qué está escrito? ¿Cómo lees?”
27 ಅದಕ್ಕೆ ಅವನು ಉತ್ತರವಾಗಿ, “‘ನೀನು ನಿನ್ನ ದೇವರಾದ ಕರ್ತದೇವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು,’ ಮತ್ತು ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನು ಪ್ರೀತಿಸಬೇಕು,’” ಎಂದನು.
Y él replicó diciendo: “Amarás al Señor tu Dios de todo tu corazón, y con toda tu alma, y con toda tu fuerza y con toda tu mente, y a tu prójimo como a ti mismo”.
28 ಆಗ ಯೇಸು ಅವನಿಗೆ, “ನೀನು ಸರಿಯಾಗಿ ಉತ್ತರಕೊಟ್ಟೆ, ಅದರಂತೆಯೇ ಮಾಡು, ಆಗ ನೀನು ಬದುಕುವೆ,” ಎಂದರು.
Díjole ( Jesús ): “Has respondido justamente. Haz esto y vivirás”.
29 ಆದರೆ ಅವನು ತಾನೇ ನೀತಿವಂತನೆಂದು ತೋರಿಸುವುದಕ್ಕೆ, ಅಪೇಕ್ಷೆಯುಳ್ಳವನಾಗಿ ಯೇಸುವಿಗೆ, “ನನ್ನ ನೆರೆಯವನು ಯಾರು?” ಎಂದು ಕೇಳಿದನು.
Pero él, queriendo justificarse a sí mismo, dijo a Jesús: “¿Y quién es mi prójimo?”
30 ಆಗ ಯೇಸು: “ಒಬ್ಬ ಮನುಷ್ಯನು ಯೆರೂಸಲೇಮಿನಿಂದ ಯೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನ ವಸ್ತ್ರಗಳನ್ನು ಕಿತ್ತುಕೊಂಡು, ಅವನನ್ನು ಗಾಯಮಾಡಿ, ಅರೆಜೀವ ಮಾಡಿಬಿಟ್ಟು ಹೊರಟು ಹೋದರು.
Jesús repuso diciendo: “Un hombre, bajando de Jerusalén a Jericó, vino a dar entre salteadores, los cuales, después de haberlo despojado y cubierto de heridas, se fueron, dejándolo medio muerto.
31 ಆಗ ಒಬ್ಬ ಯಾಜಕನು ಅದೇ ಮಾರ್ಗವಾಗಿ ಬಂದು ಅವನನ್ನು ಕಂಡು, ದಾರಿಯ ಬೇರೆ ಕಡೆಹೋದನು.
Casualmente, un sacerdote iba bajando por ese camino; lo vio y pasó de largo.
32 ಅದೇ ಪ್ರಕಾರ ಒಬ್ಬ ಲೇವಿಯೂ ಆ ಸ್ಥಳಕ್ಕೆ ಬಂದು ಅವನನ್ನು ಕಂಡು, ದಾರಿಯ ಬೇರೆ ಕಡೆಹೋದನು.
Un levita llegó asimismo delante de ese sitio; lo vio y pasó de largo.
33 ಆದರೆ ಒಬ್ಬ ಸಮಾರ್ಯದವನು, ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ಕಂಡು, ಕನಿಕರಪಟ್ಟು,
Pero un samaritano, que iba de viaje, llegó a donde estaba, lo vio y se compadeció de él;
34 ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು, ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ವಾಹಕಪಶುವಿನ ಮೇಲೆ ಕುಳ್ಳಿರಿಸಿ, ವಸತಿಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು.
y acercándose, vendó sus heridas, echando en ellas aceite y vino; luego poniéndolo sobre su propia cabalgadura, lo condujo a una posada y cuidó de él.
35 ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ಬೆಳ್ಳಿ ನಾಣ್ಯವನ್ನು ತೆಗೆದು ಛತ್ರದ ಯಜಮಾನನಿಗೆ ಕೊಟ್ಟು ಅವನಿಗೆ, ‘ಇವನನ್ನು ಆರೈಕೆ ಮಾಡು, ನೀನು ಏನಾದರೂ ಹೆಚ್ಚು ವೆಚ್ಚಮಾಡಿದರೆ, ನಾನು ತಿರುಗಿ ಬರುವಾಗ ಕೊಟ್ಟು ತೀರಿಸುತ್ತೇನೆ,’ ಎಂದನು.
Al día siguiente, sacando dos denarios los dio al posadero y le dijo: “Ten cuidado de él, todo lo que gastares de más, yo te lo reembolsaré a mi vuelta”.
36 “ಈಗ ಆ ಕಳ್ಳರ ಕೈಗೆ ಸಿಕ್ಕಿಬಿದ್ದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?” ಎಂದು ಯೇಸು ಕೇಳಿದರು.
¿Cuál de estos tres te parece haber sido el prójimo de aquel que cayó en manos de los bandoleros?”
37 ಅದಕ್ಕೆ ನಿಯಮ ಪಂಡಿತನು, “ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ನಿನ್ನ ನೆರೆಯವನು,” ಎಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆಯೇ ಮಾಡು,” ಎಂದು ಹೇಳಿದರು.
Respondió: “El que se apiadó de él”. Y Jesús le dijo: “Ve, y haz tú lo mismo”.
38 ಯೇಸು ಮತ್ತು ಅವರ ಶಿಷ್ಯರು ಸಂಚಾರಮಾಡುತ್ತಾ, ಒಂದು ಹಳ್ಳಿಗೆ ಬಂದರು, ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಅವರನ್ನು ತನ್ನ ಮನೆಯೊಳಗೆ ಸ್ವೀಕರಿಸಿಕೊಂಡಳು.
Durante su viaje, entró en cierta aldea, y una mujer llamada Marta, lo recibió en su casa.
39 ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು, ಆಕೆಯು ಕರ್ತದೇವರ ಪಾದಗಳ ಬಳಿಯಲ್ಲಿ ಕುಳಿತು ಅವರ ವಾಕ್ಯವನ್ನು ಕೇಳುತ್ತಿದ್ದಳು.
Tenía esta una hermana llamada María, la cual, sentada a los pies del Señor, escuchaba su palabra.
40 ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಅವರ ಬಳಿಗೆ ಬಂದು, “ಕರ್ತದೇವರೇ, ಕೆಲಸ ಮಾಡುವುದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವುದು ನಿಮಗೆ ಚಿಂತೆಯಿಲ್ಲವೋ? ನನಗೆ ಸಹಾಯಮಾಡುವುದಕ್ಕಾಗಿ ಅವಳಿಗೆ ಹೇಳಿರಿ!” ಎಂದಳು.
Pero Marta, que andaba muy afanada en los múltiples quehaceres del servicio, vino a decirle: “Señor, ¿no se te da nada que mi hermana me haya dejado servir sola? Dile, pues, que me ayude”.
41 ಅದಕ್ಕೆ ಕರ್ತದೇವರು ಪ್ರತ್ಯುತ್ತರವಾಗಿ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ,
El Señor le respondió: “¡Marta, Marta! tú te afanas y te agitas por muchas cosas.
42 ಆದರೆ ಬೇಕಾದದ್ದು ಕೆಲವೇ, ಅವಶ್ಯವಾಗಿರುವುದು. ಮರಿಯಳು ಆ ಉತ್ತಮ ಭಾಗವನ್ನೇ ಆರಿಸಿಕೊಂಡಿದ್ದಾಳೆ ಅದು ಆಕೆಯಿಂದ ಯಾರೂ ತೆಗೆಯಲಾಗುವುದಿಲ್ಲ,” ಎಂದು ಹೇಳಿದರು.
Una sola es necesaria. María eligió la buena parte, que no le será quitada”.