< ಲೂಕನು 12 >
1 ಅಷ್ಟರಲ್ಲಿ, ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿದಾಡುವಷ್ಟು ಕಿಕ್ಕಿರಿದು ಬಂದಿರಲಾಗಿ, ಯೇಸು ಮೊದಲು ತಮ್ಮ ಶಿಷ್ಯರಿಗೆ ಹೀಗೆಂದು ಮಾತನಾಡಲಾರಂಭಿಸಿದರು, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ, ಕಪಟತನದ ಬಗ್ಗೆ ನೀವು ಎಚ್ಚರವಾಗಿರಿ.
Kusenjalo sezibuthene izigidi zexuku, baze banyathelana, waqala ukukhuluma labafundi bakhe kuqala: Lina xwayani imvubelo yabaFarisi, eyikuzenzisa.
2 ಪ್ರಕಟವಾಗದಂತೆ ಯಾವುದೂ ಮರೆಯಾಗಿರುವುದಿಲ್ಲ, ತಿಳಿಯಲಾಗದಂತೆ ಯಾವುದೂ ಗುಪ್ತವಾಗಿರುವುದಿಲ್ಲ.
Njalo kakukho okumbomboziweyo, okungayikwembulwa, lokufihliweyo, okungayikwaziwa.
3 ಆದ್ದರಿಂದ ನೀವು ಕತ್ತಲೆಯಲ್ಲಿ ಯಾವುದನ್ನು ಹೇಳಿದ್ದೀರೋ ಅದು ಬೆಳಕಿನಲ್ಲಿ ಕೇಳಲಾಗುವುದು, ಕೋಣೆಗಳೊಳಗೆ ನೀವು ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು.
Ngakho loba yini eliyikhuluma emnyameni izazwakala ekukhanyeni; lelikukhulume endlebeni ezindlini zensitha kuzamenyezelwa phezu kwezindlu.
4 “ನನ್ನ ಸ್ನೇಹಿತರೇ, ದೇಹವನ್ನು ಕೊಂದು, ಅದಕ್ಕಿಂತ ಹೆಚ್ಚೇನೂ ಮಾಡಲಾರದವರಿಗೆ ಹೆದರಬೇಡಿರಿ ಎಂದು ನಿಮಗೆ ಹೇಳುತ್ತೇನೆ.
Njalo ngithi kini bangane bami: Lingabesabi ababulala umzimba, njalo emva kwalokho bengelakho ukwenza olunye ulutho.
5 ಆದರೆ ಯಾರಿಗೆ ನೀವು ಭಯಪಡಬೇಕೆಂದು ನಾನು ನಿಮಗೆ ತೋರಿಸುತ್ತೇನೆ: ನಿಮ್ಮ ದೇಹವನ್ನು ಕೊಂದ ಮೇಲೆ, ನರಕದಲ್ಲಿ ಹಾಕುವುದಕ್ಕೆ ಅಧಿಕಾರವಿರುವ ದೇವರಿಗೆ ಭಯಪಡಿರಿ. ಹೌದು, ದೇವರಿಗೇ ಭಯಪಡಿರಿ, ಎಂದು ನಾನು ನಿಮಗೆ ಹೇಳುತ್ತೇನೆ. (Geenna )
Kodwa ngizalitshengisa elifanele ukumesaba: Mesabeni lowo othi esebulele abe lamandla okuphosela esihogweni; yebo, ngithi kini: Mesabeni yena. (Geenna )
6 ಎರಡು ರೂಪಾಯಿಗಳಿಗೆ ಐದು ಗುಬ್ಬಿಗಳನ್ನು ಮಾರುವುದಿಲ್ಲವೇ? ಆದರೂ ಅವುಗಳಲ್ಲಿ ಒಂದನ್ನೂ ದೇವರು ಮರೆಯುವುದಿಲ್ಲ.
Kazithengiswa yini intaka ezinhlanu ngendibilitshi ezimbili? Kakukhohlakali lanye yazo phambi kukaNkulunkulu.
7 ನಿಮ್ಮ ತಲೆಯ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿರಿ; ಅನೇಕ ಗುಬ್ಬಿಗಳಿಗಿಂತಲೂ ನೀವು ಎಷ್ಟೋ ಮೌಲ್ಯವುಳ್ಳವರು.
Kanti lenwele zekhanda lenu zibaliwe zonke. Ngakho lingesabi; liyazedlula intaka ezinengi.
8 “ಆದರೆ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬರನ್ನು, ಮನುಷ್ಯಪುತ್ರನಾದ ನಾನು ಸಹ ದೇವದೂತರ ಮುಂದೆ ನನ್ನವರೆಂದು ಒಪ್ಪಿಕೊಳ್ಳುವೆನು.
Njalo ngithi kini: Wonke loba ngubani ongivuma phambi kwabantu, iNdodana yomuntu layo izamvuma phambi kwengilosi zikaNkulunkulu;
9 ಆದರೆ ಯಾರು ಜನರ ಮುಂದೆ ನನ್ನನ್ನು ಅಲ್ಲಗಳೆಯುವರೋ ಅವರನ್ನು ದೇವದೂತರ ಮುಂದೆ ನಾನು ಅಲ್ಲಗಳೆಯುವೆನು.
kodwa ongiphika phambi kwabantu uzaphikwa phambi kwengilosi zikaNkulunkulu.
10 ಮನುಷ್ಯಪುತ್ರನಾದ ನನಗೆ ವಿರೋಧವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ.
Laye wonke okhuluma ilizwi elimelana leNdodana yomuntu, uzathethelelwa; kodwa lowo ohlambaza uMoya oNgcwele kayikuthethelelwa.
11 “ಜನರು ನಿಮ್ಮನ್ನು ಸಭಾಮಂದಿರಗಳಿಗೂ ಆಳುವವರ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವುದನ್ನು ಕುರಿತು ಉತ್ತರಕೊಡಬೇಕೆಂದು, ಇಲ್ಲವೆ ಏನು ಹೇಳಬೇಕೆಂದು ಚಿಂತಿಸಬೇಡಿರಿ,
Njalo nxa belisa emasinagogeni lakubabusi leziphathamandla, lingakhathazeki ukuthi lizaphendula njani kumbe liphenduleni, kumbe lizakhulumani;
12 ಆ ಸಮಯದಲ್ಲಿ ನೀವು ಹೇಳಬೇಕಾದದ್ದನ್ನು ಪವಿತ್ರಾತ್ಮರು ನಿಮಗೆ ಕಲಿಸಿಕೊಡುವರು.”
ngoba uMoya oNgcwele uzalifundisa ngalelohola izinto elifanele ukuzikhuluma.
13 ಗುಂಪಿನಲ್ಲಿದ್ದ ಒಬ್ಬನು ಯೇಸುವಿಗೆ, “ಬೋಧಕರೇ, ಆಸ್ತಿಯನ್ನು ಭಾಗಮಾಡಿ ನನಗೆ ಕೊಡುವಂತೆ ನನ್ನ ಸಹೋದರನಿಗೆ ಹೇಳಿ,” ಎಂದನು.
Futhi omunye wexuku wathi kuye: Mfundisi, akutshele umfowethu abelane lami ilifa.
14 ಯೇಸು, “ಸ್ನೇಹಿತನೇ, ನಿಮ್ಮ ಮೇಲೆ ನ್ಯಾಯಾಧಿಪತಿಯಾಗಿ ಇಲ್ಲವೆ ನಿಮಗೆ ಭಾಗಮಾಡಿಕೊಡುವುದಕ್ಕೆ ನನ್ನನ್ನು ನೇಮಿಸಿದವರು ಯಾರು?” ಎಂದು ಹೇಳಿದರು.
Kodwa wathi kuye: Ndoda, ngubani ongimise ukuthi ngibe ngumahluleli loba umehlukanisi phezu kwenu?
15 ಅನಂತರ ಯೇಸು ಜನರಿಗೆ, “ಎಚ್ಚರಿಕೆ! ನೀವು ಎಲ್ಲಾ ಲೋಭದಿಂದ ನಿಮ್ಮನ್ನು ಕಾಪಾಡಿಕೊಳ್ಳಿರಿ; ಏಕೆಂದರೆ ಜೀವನವು ಸಮೃದ್ಧಿಯಾದ ಆಸ್ತಿಗೆ ಆಧಾರವಾದದ್ದಲ್ಲ,” ಎಂದರು.
Wasesithi kubo: Nanzelelani liqaphele ubuhwaba, ngoba impilo yomuntu kayikho ebunengini bezinto alazo.
16 ಅನಂತರ ಯೇಸು ಅವರಿಗೆ ಒಂದು ಸಾಮ್ಯವನ್ನು ಹೇಳಿದರು: “ಒಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆ ಕೊಟ್ಟಿತು.
Wasebatshela umfanekiso, esithi: Insimu yomuntu othile onothileyo yathela kakhulu;
17 ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನಗಿರುವ ಬೆಳೆಯನ್ನು ಇಡುವುದಕ್ಕೆ ನನಗೆ ಸ್ಥಳವಿಲ್ಲ,’ ಎಂದು ಆಲೋಚಿಸಿ ಹೀಗೆಂದುಕೊಂಡನು,
wasenakana ngaphakathi kwakhe, esithi: Ngizakwenza njani, ngoba kangilandawo lapho engingabuthela khona izithelo zami?
18 “ನಾನು ಹೀಗೆ ಮಾಡುತ್ತೇನೆ, ‘ನನ್ನ ಕಣಜಗಳನ್ನು ಮುರಿದು ಹಾಕಿಸಿ ಇನ್ನೂ ದೊಡ್ಡದಾಗಿ ಕಟ್ಟಿಸುತ್ತೇನೆ, ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನೂ ಕೂಡಿಸಿಟ್ಟುಕೊಳ್ಳುತ್ತೇನೆ.
Wasesithi: Ngizakwenza lokhu; ngizadiliza iziphala zami, ngakhe ezinkulu, ngibuthele khona izilimo zami zonke lempahla yami,
19 ಅಲ್ಲದೆ, ನಾನು ನನ್ನ ಪ್ರಾಣಕ್ಕೆ, “ಪ್ರಾಣವೇ ಅನೇಕ ವರ್ಷಗಳಿಗಾಗಿ ನಿನಗೆ ಬಹಳ ಸರಕು ಇಡಲಾಗಿದೆ. ವಿಶ್ರಮಿಸಿಕೋ; ತಿನ್ನು, ಕುಡಿ ಮತ್ತು ಆನಂದವಾಗಿರು ಎಂದು ಹೇಳಿಕೊಳ್ಳುತ್ತೇನೆ,”’ ಎಂದುಕೊಂಡನು.
besengisithi kumphefumulo wami: Mphefumulo, ulempahla ezinengi ezibekelwe iminyaka eminengi; phumula, udle, unathe, uthokoze.
20 “ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ! ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ತೆಗೆದುಕೊಳ್ಳಲಾಗುವುದು. ಆಗ ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದು ಹೇಳಿದರು.
Kodwa uNkulunkulu wathi kuye: Siphukuphuku, ngalobubusuku umphefumulo wakho uzabizwa kuwe; pho izinto ozilungisileyo zizakuba ngezikabani?
21 “ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತ ಆಗದಿರುವವನು ಇವನಂತೆಯೇ ಇರುವನು,” ಎಂದರು.
Kunjalo-ke kozibekela inotho, kodwa enganothanga kuNkulunkulu.
22 ಯೇಸು ತಮ್ಮ ಶಿಷ್ಯರಿಗೆ: “ಆದಕಾರಣ, ನೀವು ನಿಮ್ಮ ಜೀವನಕ್ಕಾಗಿ ಏನು ಊಟಮಾಡಬೇಕು; ಮತ್ತು ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
Wasesithi kubafundi bakhe: Ngakho ngithi kini: Lingakhathaleli impilo yenu, ukuthi lizakudlani; loba umzimba, ukuthi lizakwembathani.
23 ಊಟಕ್ಕಿಂತ ಜೀವನವೂ ವಸ್ತ್ರಕ್ಕಿಂತ ದೇಹವೂ ಹೆಚ್ಚಿನದು.
Impilo yedlula ukudla, lomzimba isembatho.
24 ಕಾಗೆಗಳನ್ನು ಗಮನಿಸಿರಿ: ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವಾಗಲಿ ಕಣಜವಾಗಲಿ ಇಲ್ಲ, ಆದರೂ ದೇವರು ಅವುಗಳನ್ನು ಪೋಷಿಸುತ್ತಾರೆ. ನೀವು ಪಕ್ಷಿಗಳಿಗಿಂತ ಎಷ್ಟೋ ಮೌಲ್ಯವುಳ್ಳವರಾಗಿದ್ದೀರಲ್ಲಾ!
Qaphelisisani amawabayi, ukuthi kawahlanyeli, njalo kawavuni, kawalasiphala loba isilulu, kanti uNkulunkulu uyawondla; lina lizedlula kangakanani inyoni?
25 ನಿಮ್ಮಲ್ಲಿ ಯಾರಾದರೂ ಚಿಂತೆ ಮಾಡುವುದರಿಂದ ತಮ್ಮ ಜೀವನಾವಧಿಗೆ ಒಂದು ತಾಸನ್ನು ಕೂಡಿಸಲು ಸಾಧ್ಯವೇ?
Njalo nguwuphi kini ongathi ngokuphiseka engezelele ingalo ibenye ebudeni bakhe?
26 ಅತ್ಯಲ್ಪವಾಗಿರುವುದನ್ನು ನೀವು ಮಾಡಲಾರದವರಾಗಿದ್ದರೆ, ಇತರ ವಿಷಯಗಳಿಗಾಗಿ ನೀವು ಚಿಂತೆ ಮಾಡುವುದೇನು?
Ngakho nxa lingelamandla okwenza into encinyane, liphisekelani ngokunye?
27 “ಅಡವಿಯ ಹೂವುಗಳು ಹೇಗೆ ಬೆಳೆಯುತ್ತವೆಂದು ಯೋಚಿಸಿರಿ. ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಆ ಹೂವುಗಳಲ್ಲಿ ಒಂದರಂತೆಯಾದರೂ ಉಡುಪನ್ನು ಧರಿಸಿರಲಿಲ್ಲ ಎಂದು, ನಾನು ನಿಮಗೆ ಹೇಳುತ್ತೇನೆ.
Qaphelisani imiduze ukuthi ikhula njani; kayitshikatshiki, kayiphothi, kodwa ngithi kini: LoSolomoni ebucwazicwazini bakhe bonke wayengembathiswanga njengomunye wayo.
28 ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವರಲ್ಲವೇ?
Njalo uba uNkulunkulu esembathisa ngokunjalo utshani obukhona lamuhla egangeni, kuthi kusasa buphoswa eziko, uzalembathisa ngokukhulu kangakanani, lina abokholo oluncinyane?
29 ಏನು ಊಟಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಡಬೇಡಿರಿ; ಚಿಂತೆಯೂ ಮಾಡಬೇಡಿರಿ.
Lani-ke lingadingi elizakudla lelizakunatha; njalo lingakhathazeki.
30 ದೇವರನ್ನು ಅರಿಯದವರು ಇವೆಲ್ಲವುಗಳಿಗಾಗಿ ಬೆನ್ನಟ್ಟುತ್ತಾರೆ, ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ತಿಳಿದಿದ್ದಾರೆ.
Ngoba konke lokhu izizwe zomhlaba ziyakudinga; kodwa uYihlo uyazi ukuthi liyaziswela lezizinto.
31 ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ, ಆಗ ಇವೆಲ್ಲವನ್ನು ದೇವರು ನಿಮಗೆ ಕೊಡುವರು.
Kodwa dingani umbuso kaNkulunkulu, njalo zonke lezizinto zizakwengezelelwa kini.
32 “ಚಿಕ್ಕ ಹಿಂಡೇ, ಭಯಪಡಬೇಡ, ಏಕೆಂದರೆ ನಿಮ್ಮ ತಂದೆಯು ತಮ್ಮ ರಾಜ್ಯವನ್ನು ನಿಮಗೆ ಕೊಡುವುದಕ್ಕೆ ಮೆಚ್ಚಿದ್ದಾರೆ.
Lingesabi, mhlambi omncinyane; ngoba kuyikuthanda kukaYihlo ukulinika umbuso.
33 ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ ಬಡವರಿಗೆ ಕೊಡಿರಿ. ನಿಮಗೋಸ್ಕರ ನಾಶವಾಗದ ಹಣದ ಚೀಲಗಳನ್ನೂ, ಕ್ಷಯವಾಗದ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ, ಅಲ್ಲಿ ಕಳ್ಳನು ಸಮೀಪಕ್ಕೆ ಬರುವುದಿಲ್ಲ. ನುಸಿಹಿಡಿದು ಕೆಟ್ಟುಹೋಗುವುದಿಲ್ಲ.
Thengisani impahla zenu liphe izipho. Lizenzele imixhaka engagugiyo, impahla eligugu engapheliyo emazulwini, lapho okungasondeli isela khona, lenundu engoni khona;
34 ನಿಮ್ಮ ಸಂಪತ್ತು ಇರುವಲ್ಲಿಯೇ, ನಿಮ್ಮ ಹೃದಯವು ಸಹ ಇರುವುದು,” ಎಂದು ಹೇಳಿದರು.
ngoba lapho okukhona impahla yenu eligugu, izakuba khona lapho lenhliziyo yenu.
35 “ನೀವು ವಸ್ತ್ರ ಧರಿಸಿ ಸೇವೆಗೆ ಸಿದ್ಧರಾಗಿರಿ. ನಿಮ್ಮ ದೀಪಗಳು ಉರಿಯುತ್ತಿರಲಿ,
Inkalo zenu kazihlale zibotshiwe, lezibane zenu zibhebha;
36 ನೀವಂತೂ ಮದುವೆಯ ಔತಣದಿಂದ ಹಿಂದಿರುಗುವ ತಮ್ಮ ಯಜಮಾನನಿಗಾಗಿ ಕಾಯುತ್ತಿದ್ದು, ಅವನು ಬಂದು ಬಾಗಿಲನ್ನು ತಟ್ಟಿದ ತಕ್ಷಣವೇ ಅವನಿಗಾಗಿ ತೆರೆಯುವ ಸೇವಕರಂತೆ ಇರಿ.
lani libe njengabantu abalindele inkosi yabo, lapho izabuya ivela emtshadweni, ukuze, nxa ifika iqoqoda, bahle bayivulele.
37 ಯಜಮಾನನು ಬಂದಾಗ ಯಾರು ಎಚ್ಚರವಾಗಿರುವುದನ್ನು ಅವನು ಕಾಣುವನೋ ಆ ಸೇವಕರು ಧನ್ಯರು. ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿ ನಿಂತು ಅವರನ್ನು ಊಟಕ್ಕೆ ಕೂರಿಸಿ, ಅವರಿಗೆ ತಾನೇ ಸೇವೆಮಾಡುವನು.
Zibusisiwe lezozinceku, okuzakuthi inkosi nxa ifika izifice zilindile; ngiqinisile ngithi kini: Izabhinca, izihlalise ekudleni, isondele izisebenzele.
38 ಯಜಮಾನನು ನಡು ರಾತ್ರಿಯಲ್ಲಾಗಲಿ ಮುಂಜಾನೆಯಲ್ಲಾಗಲಿ ಬಂದು, ಸೇವಕರು ಇನ್ನೂ ಎಚ್ಚರದಿಂದಿರುವುದನ್ನು ಕಂಡರೆ ಆ ಸೇವಕರು ಧನ್ಯರು.
Njalo nxa ifika ngomlindo wesibili, kumbe ifika ngomlindo wesithathu, futhi izifice zinjalo, zibusisiwe lezozinceku.
39 ಆದರೆ, ಕಳ್ಳನು ಯಾವ ಸಮಯದಲ್ಲಿ ಬರುವನೆಂಬುದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಪ್ರವೇಶಿಸಲು ಕನ್ನಾಹಾಕಲು ಬಿಡುತ್ತಿರಲಿಲ್ಲ ಎಂಬುದನ್ನು ತಿಳಿದುಕೊಳ್ಳಿರಿ.
Kodwa yazini lokhu, ukuthi uba umninindlu ebelazi ihola isela elizafika ngalo, ubezalinda, futhi ubengayikuvuma ukuthi indlu yakhe ifohlelwe.
40 ಆದಕಾರಣ ನೀವು ಸಹ ಸಿದ್ಧವಾಗಿರಿ, ಏಕೆಂದರೆ ನೀವು ನಿರೀಕ್ಷಿಸದ ಸಮಯದಲ್ಲಿ ಮನುಷ್ಯಪುತ್ರನಾದ ನಾನು ಬರುತ್ತೇನೆ,” ಎಂದು ಹೇಳಿದರು.
Ngakho lani-ke hlalani lilungile; ngoba ngehola elingalicabangeliyo iNdodana yomuntu izafika.
41 ಪೇತ್ರನು ಯೇಸುವಿಗೆ, “ಕರ್ತದೇವರೇ, ನೀವು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತೀರೋ ಅಥವಾ ಎಲ್ಲರಿಗೋ?” ಎಂದು ಕೇಳಿದನು.
UPetro wasesithi kuye: Nkosi, uwutshela thina lumfanekiso, kumbe labo bonke yini?
42 ಕರ್ತದೇವರು ಹೇಳಿದ್ದೇನೆಂದರೆ, “ತಕ್ಕ ಕಾಲದಲ್ಲಿ ತನ್ನ ಸೇವಕರಿಗೆ ಅವರ ಪಾಲಿನ ಆಹಾರವನ್ನು ಕೊಡುವುದಕ್ಕಾಗಿ, ಅವರ ಯಜಮಾನನು ತನ್ನ ಮನೆಯ ಮೇಲೆ ನೇಮಿಸಿದ ನಂಬಿಗಸ್ತನೂ ಜ್ಞಾನಿಯೂ ಆಗಿರುವ ಆಡಳಿತಗಾರನು ಯಾರು?
INkosi yasisithi: Pho ngubani umphathi wezinceku othembekileyo lohlakaniphileyo, inkosi ezambeka phezu kwabendlu yayo, ukuze abanike isabelo sabo sokudla ngesikhathi esifaneleyo?
43 ತನ್ನ ಯಜಮಾನನು ಬಂದಾಗ ಯಾವ ಸೇವಕನು ಸೇವೆ ಮಾಡುವುದನ್ನು ಕಾಣುವನೋ ಆ ಸೇವಕನು ಧನ್ಯನು.
Ibusisiwe leyonceku, okuzakuthi inkosi yayo nxa ifika iyifice isenza njalo.
44 ಅವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಯ ಮೇಲೆ ಆಡಳಿತಗಾರನಾಗಿ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
Ngiqinisile ngithi kini: Izayibeka phezu kwakho konke elakho.
45 ಆದರೆ ಆ ಸೇವಕನು, ‘ನನ್ನ ಯಜಮಾನನು ಬರುವುದಕ್ಕೆ ತಡಮಾಡುತ್ತಾನೆ,’ ಎಂದು ತನ್ನ ಹೃದಯದಲ್ಲಿ ಭಾವಿಸಿಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆದು, ತಿಂದು ಕುಡಿದು ಮತ್ತನಾಗುವುದಕ್ಕೆ ಆರಂಭಿಸಿದರೆ,
Kodwa nxa leyonceku isithi enhliziyweni yayo: Inkosi yami iphuzile ukubuya; njalo ibisiqala ukutshaya izinceku lezincekukazi, lokudla lokunatha lokudakwa,
46 ಆ ಸೇವಕನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಸಮಯದಲ್ಲಿಯೂ ಅವನ ಯಜಮಾನನು ಬಂದು, ಅವನನ್ನು ಕಠಿಣವಾಗಿ ಹೊಡಿಸಿ ಅವಿಶ್ವಾಸಿಗಳಿಗೆ ಆಗ ಸಿಕ್ಕುವ ಪಾಲನ್ನು ಅವನಿಗೆ ನೇಮಿಸುವನು.
inkosi yaleyonceku izafika ngosuku engayilindele ngalo, langehola engalaziyo; izayiquma phakathi, izanika isabelo sayo lalabo abangathembekanga.
47 “ತನ್ನ ಯಜಮಾನನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ, ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳಿಗೆ ಗುರಿಯಾಗುವನು.
Laleyonceku ebisazi intando yenkosi yayo, kodwa ingalungiselanga njalo ingenzanga ngokwentando yayo, izatshaywa imivimvinya eminengi.
48 ದಂಡನೆಗೆ ಯೋಗ್ಯವಾದದ್ದನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳಿಗೆ ಗುರಿಯಾಗುವನು. ಯಾವನಿಗೆ ಹೆಚ್ಚು ಕೊಡಲಾಗಿದೆಯೋ, ಅವನಿಂದ ಹೆಚ್ಚು ಕೇಳಲಾಗುವುದು; ಯಾವನಿಗೆ ಹೆಚ್ಚಾಗಿ ಒಪ್ಪಿಸಿರುವುದೋ, ಅವನಿಂದ ಹೆಚ್ಚಾಗಿಯೇ ಕೇಳಲಾಗುವುದು.”
Kodwa leyo ebingayazi, yenza okufanele ukutshaywa, izatshaywa imivimvinya emilutshwana. Laye wonke ophiwe okunengi, kuzadingwa okunengi kuye; lalowo ophathiswe okunengi, kuzabizwa kuye okungaphezulu.
49 “ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕುವುದಕ್ಕಾಗಿ ಬಂದೆನು, ಅದು ಈಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ!
Ngize ukuphosela umlilo emhlabeni, futhi kuyini engikufisayo nxa usubasiwe?
50 ಆದರೆ ನಾನು ಪಡೆಯಲಿರುವ ಒಂದು ದೀಕ್ಷಾಸ್ನಾನ ಉಂಟು, ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!
Kodwa ngilobhabhathizo engizabhabhathizwa ngalo, futhi ngicindezelwe kangakanani luze lupheleliswe.
51 ನಾನು ಭೂಮಿಯ ಮೇಲೆ ಸಮಾಧಾನವನ್ನು ತರುವುದಕ್ಕಾಗಿ ಬಂದಿದ್ದೇನೆಂದು ನೀವು ಭಾವಿಸುತ್ತೀರೋ? ಇಲ್ಲ, ಭಿನ್ನಭೇದಗಳನ್ನು ಉಂಟುಮಾಡುವುದಕ್ಕೆ ಬಂದಿದ್ದೇನೆಂದು, ನಿಮಗೆ ಹೇಳುತ್ತೇನೆ.
Licabanga ukuthi ngize ukunika ukuthula emhlabeni yini? Hatshi bo, ngithi kini, kodwa kulalokhu ukwehlukana.
52 ಹೇಗೆಂದರೆ ಇಂದಿನಿಂದ ಒಂದೇ ಮನೆಯಲ್ಲಿರುವ ಐದು ಮಂದಿಯಲ್ಲಿ ಇಬ್ಬರಿಗೆ ವಿರೋಧವಾಗಿ ಮೂವರೂ ಮೂವರಿಗೆ ವಿರೋಧವಾಗಿ ಇಬ್ಬರೂ ವಿಭಾಗವಾಗುವರು.
Ngoba kusukela khathesi abahlanu endlini yinye bazakwehlukana, abathathu bamelane lababili, lababili bamelane labathathu,
53 ತಂದೆಗೆ ವಿರೋಧವಾಗಿ ಮಗನು, ಮಗನಿಗೆ ವಿರೋಧವಾಗಿ ತಂದೆಯು, ತಾಯಿಗೆ ವಿರೋಧವಾಗಿ ಮಗಳು, ಮಗಳಿಗೆ ವಿರೋಧವಾಗಿ ತಾಯಿಯು, ಅತ್ತೆಗೆ ವಿರೋಧವಾಗಿ ಸೊಸೆಯು, ಸೊಸೆಗೆ ವಿರೋಧವಾಗಿ ಅತ್ತೆಯು ವಿಭಾಗವಾಗುವರು.”
bazakwehlukana, uyise amelane lendodana, lendodana imelane loyise; unina amelane lendodakazi, lendodakazi imelane lonina; uninazala amelane lomalokazana wakhe, lomalokazana amelane loninazala.
54 ಯೇಸು ಜನಸಮೂಹಕ್ಕೆ ಹೇಳಿದ್ದೇನೆಂದರೆ: “ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡಿ, ‘ಮಳೆ ಬರುತ್ತದೆ ಎನ್ನುತ್ತೀರಿ,’ ಹಾಗೆಯೇ ಆಗುವುದು.
Wasesithi lemaxukwini: Nxa libona iyezi lisukuma entshonalanga, lihle lithi: Izulu liyabuya; futhi kube njalo.
55 ದಕ್ಷಿಣ ದಿಕ್ಕಿನ ಗಾಳಿ ಬೀಸುವುದನ್ನು ನೀವು ನೋಡಿ, ‘ಸೆಕೆಯಾಗುತ್ತದೆ,’ ಎನ್ನುತ್ತೀರಿ, ಅದು ಹಾಗೆ ಆಗುತ್ತದೆ.
Njalo nxa libona umoya weningizimu uphephetha, lithi: Lizatshisa; besekusenzakala.
56 ಕಪಟಿಗಳೇ! ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಗ್ರಹಿಸಬಲ್ಲಿರಿ, ಆದರೆ ಈ ಕಾಲವನ್ನು ನೀವು ವಿವೇಚಿಸದಿರುವುದು ಹೇಗೆ?
Bazenzisi! Liyakwazi ukuhlola umumo wesibhakabhaka lowomhlaba; kodwa lesisikhathi kungani lingasihloli?
57 “ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಏಕೆ ನಿರ್ಣಯಿಸಿಕೊಳ್ಳುವುದಿಲ್ಲ?
Pho, kungani ukuthi lingahluleli lani lina uqobo lwenu okulungileyo?
58 ನೀನು ನಿನ್ನ ವಿರೋಧಿಯ ಸಂಗಡ ನ್ಯಾಯಾಧಿಪತಿಯ ಎದುರಿಗೆ ಹೋಗುವಾಗ, ಮಾರ್ಗದಲ್ಲಿಯೇ ಅವನಿಂದ ವ್ಯಾಜ್ಯ ಬಗೆಹರಿಸಿಕೊಳ್ಳಲು ಪ್ರಯತ್ನ ಮಾಡು, ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆಯಬಹುದು, ಆಗ ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆಯ ಅಧಿಕಾರಿಗೆ ಒಪ್ಪಿಸಬಹುದು ಮತ್ತು ಅಧಿಕಾರಿಯು ನಿನ್ನನ್ನು ಸೆರೆಯಲ್ಲಿ ಹಾಕಬಹುದು.
Ngoba nxa usiya lomangalelene laye kumantshi, endleleni yenza ubungcono ukuthi ukhululwe kuye; hlezi akudonsele kumahluleli, lomahluleli akunikele epholiseni, lepholisa likuphosele entolongweni.
59 ನೀನು ಕೊನೆಯ ರೂಪಾಯಿಯನ್ನು ಸಲ್ಲಿಸುವವರೆಗೂ ಅಲ್ಲಿಂದ ಹೊರಗೆ ಬರುವುದೇ ಇಲ್ಲವೆಂದು, ನಾನು ನಿನಗೆ ಹೇಳುತ್ತೇನೆ,” ಎಂದರು.
Ngithi kuwe, kawusoze waphuma khona, uze ubhadale lenhlamvu encane yemali yokucina.