< ಲೂಕನು 13 >

1 ಪಿಲಾತನು, ಬಲಿ ಅರ್ಪಿಸುತ್ತಿದ್ದ ಗಲಿಲಾಯದವರ ರಕ್ತವನ್ನೇ ಅವರ ಬಲಿಗಳೊಂದಿಗೆ ಬೆರೆಸಿದ ವಿಷಯವನ್ನು ಯೇಸುವಿಗೆ ತಿಳಿಸಿದ ಕೆಲವರು ಆ ಸಮಯದಲ್ಲಿ ಅಲ್ಲಿದ್ದರು.
En ce temps-là, quelques personnes qui se trouvaient là, racontèrent à Jésus ce qui était arrivé à des Galiléens, dont Pilate avait mêlé le sang avec celui de leurs sacrifices.
2 ಯೇಸು ಅವರಿಗೆ, “ಆ ಗಲಿಲಾಯದವರು ಇಂಥಾ ಕೊಲೆಗೆ ಈಡಾದ ಕಾರಣ ಅವರು ಎಲ್ಲಾ ಗಲಿಲಾಯದವರಿಗಿಂತ ದೋಷಿಗಳೆಂದು ನೀವು ಭಾವಿಸುತ್ತೀರೋ?
Et Jésus, répondant, leur dit: Pensez-vous que ces Galiléens fussent plus grands pécheurs que tous les autres Galiléens, parce qu'ils ont souffert ces choses?
3 ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ, ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ.
Non, vous dis-je; mais si vous ne vous repentez, vous périrez tous de même.
4 ಇಲ್ಲವೆ ಸಿಲೋವ ಎಂಬಲ್ಲಿ ಗೋಪುರವು ಬಿದ್ದು ಸತ್ತು ಹೋದ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ದೋಷಿಗಳೆಂದು ಭಾವಿಸುತ್ತೀರೋ?
Ou pensez-vous que ces dix-huit sur qui la tour de Siloé est tombée, et qu'elle a tués, fussent plus coupables que tous les habitants de Jérusalem?
5 ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ,” ಎಂದರು.
Non, vous dis-je; mais si vous ne vous repentez, vous périrez tous de même.
6 ಅನಂತರ ಯೇಸು ಈ ಸಾಮ್ಯವನ್ನು ಹೇಳಿದರು: “ಒಬ್ಬ ಮನುಷ್ಯನಿಗೆ ತನ್ನ ದ್ರಾಕ್ಷಿಯ ತೋಟದಲ್ಲಿ ನೆಡಲಾಗಿದ್ದ, ಒಂದು ಅಂಜೂರದ ಮರವಿತ್ತು. ಅವನು ಬಂದು ಅದರಲ್ಲಿ ಫಲವನ್ನು ಹುಡುಕಲು ಒಂದೂ ಸಿಕ್ಕಲಿಲ್ಲ.
Il dit aussi cette similitude: Un homme avait un figuier planté dans sa vigne, et il y vint chercher du fruit, et n'en trouva point.
7 ಆಗ ಅವನು ತನ್ನ ದ್ರಾಕ್ಷಿಯ ತೋಟ ಮಾಡುವವನಿಗೆ, ‘ನೋಡು, ಮೂರು ವರ್ಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕುತ್ತಾ ಬಂದಿದ್ದೇನೆ, ಆದರೆ ಏನೂ ಸಿಕ್ಕಲಿಲ್ಲ. ಇದನ್ನು ಕಡಿದುಹಾಕು! ಇದು ಏಕೆ ನೆಲವನ್ನು ಕೆಡಿಸಬೇಕು?’ ಎಂದು ಹೇಳಿದನು.
Et il dit au vigneron: Voici, il y a déjà trois ans que je viens chercher du fruit à ce figuier, et je n'en trouve point: coupe-le, pourquoi occupe-t-il la terre inutilement?
8 “ಆದರೆ ಅವನು ಉತ್ತರವಾಗಿ ಅವನಿಗೆ, ‘ಒಡೆಯನೇ, ಇನ್ನೊಂದು ವರ್ಷವೂ ಇದನ್ನು ಬಿಡು, ನಾನು ಅದರ ಸುತ್ತಲೂ ಅಗಿದು ಗೊಬ್ಬರ ಹಾಕುವೆನು.
Le vigneron lui répondit: Seigneur, laisse-le encore cette année, jusqu'à ce que je l'aie déchaussé, et que j'y aie mis du fumier.
9 ಮುಂದಿನ ವರ್ಷ ಇದು ಫಲ ಫಲಿಸಿದರೆ, ಸರಿ! ಇಲ್ಲವಾದರೆ, ನೀನು ಇದನ್ನು ಕಡಿದುಹಾಕು, ಎಂದನು.’”
Peut-être portera-t-il du fruit, sinon, tu le couperas ci-après.
10 ಯೇಸು ಸಬ್ಬತ್ ದಿನದಲ್ಲಿ ಒಂದು ಸಭಾಮಂದಿರದೊಳಗೆ ಬೋಧಿಸುತ್ತಾ ಇದ್ದರು,
Comme Jésus enseignait dans une synagogue un jour de sabbat,
11 ಆಗ, ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು. ಆಕೆ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.
Il se trouva là une femme possédée d'un esprit qui la rendait malade depuis dix-huit ans, et qui était courbée, en sorte qu'elle ne pouvait point du tout se redresser.
12 ಯೇಸು ಆಕೆಯನ್ನು ಕಂಡು, ಹತ್ತಿರಕ್ಕೆ ಕರೆದು ಆಕೆಗೆ, “ಅಮ್ಮಾ, ನೀನು ಈ ನಿನ್ನ ಬಲಹೀನತೆಯಿಂದ ಬಿಡುಗಡೆಯಾಗಿದ್ದಿ,” ಎಂದು ಹೇಳಿ,
Jésus, la voyant, l'appela et lui dit: Femme, tu es délivrée de ta maladie.
13 ಯೇಸು ಆಕೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು, ಕೂಡಲೇ ಆಕೆಯು ನೆಟ್ಟಗಾದಳು ಮತ್ತು ದೇವರನ್ನು ಸ್ತುತಿಸಿದಳು.
Et il lui imposa les mains; et à l'instant elle fut redressée, et elle donna gloire à Dieu.
14 ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಮಾಡಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ, “ಆರು ದಿವಸಗಳಲ್ಲಿ ಮನುಷ್ಯರು ಕೆಲಸ ಮಾಡತಕ್ಕದ್ದು. ಆದ್ದರಿಂದ ಆ ದಿನಗಳಲ್ಲಿ ನೀವು ಬಂದು ಸ್ವಸ್ಥರಾಗಿರಿ, ಸಬ್ಬತ್ ದಿನದಲ್ಲಿ ಬೇಡ,” ಎಂದನು.
Mais le chef de la synagogue, indigné de ce que Jésus avait fait une guérison un jour de sabbat, prit la parole et dit au peuple: Il y a six jours pour travailler; venez donc ces jours-là pour être guéris, et non pas le jour du sabbat.
15 ಅದಕ್ಕೆ ಕರ್ತದೇವರು ಅವನಿಗೆ, “ಕಪಟಿಗಳೇ! ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ, ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವುದಕ್ಕಾಗಿ ಹೋಗುವುದಿಲ್ಲವೇ?
Mais le Seigneur lui répondit: Hypocrite, chacun de vous ne détache-t-il pas son bœuf ou son âne de la crèche, le jour du sabbat, et ne le mène-t-il pas à l'abreuvoir?
16 ಅಬ್ರಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರ್ಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೇ?” ಎಂದರು.
Et ne fallait-il point, en un jour de sabbat, détacher de cette chaîne cette fille d'Abraham, que Satan tenait liée depuis dix-huit ans?
17 ಯೇಸು ಇದನ್ನು ಹೇಳುತ್ತಿರುವಾಗ, ಅವರ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು, ಆದರೆ ಇತರರು, ಅವರಿಂದ ನಡೆದ ಎಲ್ಲಾ ಮಹಿಮೆಯುಳ್ಳ ಕಾರ್ಯಗಳಿಗಾಗಿ ಸಂತೋಷಪಟ್ಟರು.
Comme il parlait ainsi, tous ses adversaires étaient confus, et tout le peuple se réjouissait de toutes les choses glorieuses qu'il faisait.
18 ಅನಂತರ ಯೇಸು, “ದೇವರ ರಾಜ್ಯವು ಯಾವುದಕ್ಕೆ ಹೋಲಿಕೆಯಾಗಿದೆ? ನಾನು ಯಾವುದಕ್ಕೆ ಅದನ್ನು ಹೋಲಿಸಲಿ?
Alors il dit: A quoi est semblable le royaume de Dieu, et à quoi le comparerai-je?
19 ಅದು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ತೆಗೆದುಕೊಂಡುಹೋಗಿ ತನ್ನ ತೋಟದಲ್ಲಿ ಬಿತ್ತಲು, ಅದು ಬೆಳೆದು ಒಂದು ದೊಡ್ಡ ಮರವಾಯಿತು. ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸಮಾಡಿದವು,” ಎಂದರು.
Il est semblable à une graine de moutarde, qu'un homme prend et met dans son jardin; et elle croît et devient un grand arbre, de sorte que les oiseaux du ciel habitent dans ses branches.
20 ಪುನಃ ಯೇಸು, “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸಲಿ?
Il dit encore: A quoi comparerai-je le royaume de Dieu?
21 ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀಯು ತೆಗೆದುಕೊಂಡು ಹುಳಿಯಿಲ್ಲದ ಸುಮಾರು ಇಪ್ಪತ್ತೇಳು ಕಿಲೋಗ್ರಾಂ ಹಿಟ್ಟಿನಲ್ಲಿ ಕಲಸಿದಾಗ ಆ ಹಿಟ್ಟೆಲ್ಲಾ ಹುಳಿಯಾಯಿತು,” ಎಂದರು.
Il est semblable au levain qu'une femme prend, et qu'elle met dans trois mesures de farine, jusqu'à ce que la pâte soit toute levée.
22 ಯೇಸು ಪಟ್ಟಣಗಳನ್ನೂ ಹಳ್ಳಿಗಳನ್ನೂ ಸಂಚರಿಸಿ, ಅಲ್ಲೆಲ್ಲಾ ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣಮಾಡಿದರು.
Et Jésus allait par les villes et par les bourgs, enseignant et tenant le chemin de Jérusalem.
23 ಒಬ್ಬನು ಯೇಸುವಿಗೆ, “ಸ್ವಾಮಿ, ರಕ್ಷಣೆ ಹೊಂದುವವರು ಕೆಲವರೋ?” ಎಂದು ಕೇಳಲು, ಯೇಸು ಅವರಿಗೆ,
Et quelqu'un lui dit: Seigneur, n'y a-t-il que peu de gens qui soient sauvés?
24 “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಪ್ರವೇಶಿಸುವುದಕ್ಕೆ ಪ್ರಯಾಸಪಡಿರಿ, ಅನೇಕರು ಒಳಗೆ ಪ್ರವೇಶಿಸುವುದಕ್ಕೆ ಪ್ರಯತ್ನಿಸಿದರೂ ಆಗುವುದಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.
Et il leur dit: Efforcez-vous d'entrer par la porte étroite; car je vous dis que plusieurs chercheront à y entrer, et qu'ils ne le pourront.
25 ಮನೆಯಜಮಾನರು ಒಂದು ಸಾರಿ ಎದ್ದು ಬಾಗಿಲನ್ನು ಮುಚ್ಚಿಕೊಂಡರೆ, ನೀವು ಹೊರಗೆ ನಿಂತುಕೊಂಡು ಬಾಗಿಲನ್ನು ತಟ್ಟುತ್ತಾ, ‘ಸ್ವಾಮಿ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದು ಹೇಳುವುದಕ್ಕೆ ಆರಂಭಿಸಿದಾಗ, “ಆತನು ನಿಮಗೆ ಉತ್ತರವಾಗಿ, ‘ನೀವು ಯಾರು? ಎಲ್ಲಿಯವರೋ ನಾನು ನಿಮ್ಮನ್ನು ಅರಿಯೆನು,’ ಎಂದು ಹೇಳುವನು.
Quand le père de famille sera entré, et qu'il aura fermé la porte, et que, vous étant dehors, vous vous mettrez à heurter et à dire: Seigneur, Seigneur, ouvre-nous; il vous répondra: Je ne sais d'où vous êtes.
26 “ಆಗ ನೀವು, ‘ನಿಮ್ಮೊಂದಿಗೆ ನಾವು ಊಟಮಾಡಿದೆವು, ಪಾನಮಾಡಿದೆವು, ನೀವು ನಮ್ಮ ಬೀದಿಗಳಲ್ಲಿ ಬೋಧಿಸಿದಿರಿ,’ ಎಂದು ಹೇಳಲಾರಂಭಿಸುವಿರಿ.
Alors vous direz: Nous avons mangé et bu en ta présence, et tu as enseigné dans nos places publiques.
27 “ಅದಕ್ಕೆ ಆತನು, ‘ನೀವು ಎಲ್ಲಿಯವರೋ ನಾನರಿಯೆ, ಅನೀತಿಯನ್ನು ಮಾಡುವವರಾದ ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳುವರು.
Et il répondra: Je vous dis que je ne sais d'où vous êtes; retirez-vous de moi, vous tous qui faites métier de l'iniquité.
28 “ಅಬ್ರಹಾಮ, ಇಸಾಕ, ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ಕಾಣುವಾಗ, ಅಲ್ಲಿ ನಿಮಗೆ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
Là seront les pleurs et les grincements de dents, quand vous verrez Abraham, Isaac, et Jacob et tous les prophètes dans le royaume de Dieu, et que vous serez jetés dehors.
29 ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಜನರು ಬಂದು, ದೇವರ ರಾಜ್ಯದಲ್ಲಿ ಹಬ್ಬದ ಔತಣಕ್ಕೆ ಕುಳಿತುಕೊಳ್ಳುವರು.
Et il en viendra d'orient et d'occident, du septentrion et du midi, qui seront à table dans le royaume de Dieu.
30 ಆಗ ಕಡೆಯವರು ಮೊದಲನೆಯವರಾಗುವರು, ಮೊದಲನೆಯವರು ಕಡೆಯವರಾಗುವರು,” ಎಂದು ಹೇಳಿದರು.
Et voici, il en est des derniers qui seront les premiers, et des premiers qui seront les derniers.
31 ಅದೇ ಸಮಯದಲ್ಲಿ ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು, “ನೀವು ಇಲ್ಲಿಂದ ಹೊರಟು ಹೋಗಿರಿ. ಹೆರೋದನು ನಿಮ್ಮನ್ನು ಕೊಲ್ಲಬೇಕೆಂದಿರುವನು,” ಎಂದು ಅವರಿಗೆ ಹೇಳಿದರು.
Ce même jour, quelques pharisiens vinrent lui dire: Retire-toi d'ici, et t'en va; car Hérode veut te faire mourir.
32 ಅದಕ್ಕೆ ಯೇಸು ಅವರಿಗೆ, “ಇಗೋ, ‘ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಓಡಿಸುತ್ತೇನೆ ಸ್ವಸ್ಥಮಾಡುತ್ತೇನೆ, ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ,’ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.
Et il leur dit: Allez et dites à ce renard: Voici, je chasse les démons et j'achève de faire des guérisons, aujourd'hui et demain, et le troisième jour je finis.
33 ಆದರೂ ಈ ದಿವಸ ಮತ್ತು ನಾಳೆ ಮತ್ತು ನಾಡಿದ್ದು ನಾನು ಪ್ರಯಾಣ ಮಾಡಲೇಬೇಕು. ಏಕೆಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲೆಗೀಡಾಗಬಾರದು!
Cependant, il me faut marcher aujourd'hui, demain et le jour suivant, parce qu'il n'arrive point qu'un prophète meure hors de Jérusalem.
34 “ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.
Jérusalem, Jérusalem, qui tues les prophètes, et qui lapides ceux qui te sont envoyés, combien de fois j'ai voulu rassembler tes enfants, comme la poule rassemble sa couvée sous ses ailes, et vous ne l'avez pas voulu!
35 ನೋಡಿರಿ, ನಿಮ್ಮ ದೇವಾಲಯವು ನಿಮಗೆ ಬರಿದಾಗಿ ಹಾಳುಬೀಳುವುದು. ಏಕೆಂದರೆ, ‘ಕರ್ತದೇವರ ಹೆಸರಿನಲ್ಲಿ ಬರುವವರು ಧನ್ಯರು,’ ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ಕಾಣುವುದೇ ಇಲ್ಲ, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.
Voici, votre habitation va vous rester déserte, et je vous dis en vérité, que vous ne me verrez plus jusqu'à ce que vous disiez: Béni soit celui qui vient au nom du Seigneur.

< ಲೂಕನು 13 >