< ಲೂಕನು 16 >

1 ಯೇಸು ತಮ್ಮ ಶಿಷ್ಯರಿಗೆ ಹೇಳಿದ್ದು: “ಒಬ್ಬ ಐಶ್ವರ್ಯವಂತನಿದ್ದನು, ಅವನಿಗಿದ್ದ ಒಬ್ಬ ನಿರ್ವಾಹಕನು ಅವನ ಸರಕುಗಳನ್ನು ಹಾಳು ಮಾಡುತ್ತಿದ್ದಾನೆಂದು ಅವನಿಗೆ ಯಾರೋ ದೂರು ಹೇಳಿದರು.
Jesu akatiwo kuvadzidzi vake, “Kwakanga kuno mumwe murume mupfumi aiva nomutariri akanga achipomerwa mhosva yokuparadza pfuma yake.
2 ಆಗ ಐಶ್ವರ್ಯವಂತನು ಆ ನಿರ್ವಾಹಕನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವುದು? ನಿನ್ನ ಲೆಕ್ಕವನ್ನು ಒಪ್ಪಿಸು. ನೀನು ಇನ್ನು ಮೇಲೆ ನಿರ್ವಾಹಕನಾಗಿರಲು ಆಗಲ್ಲ,’ ಎಂದನು.
Saka akamudana akamubvunza achiti, ‘Zviiko izvi zvandiri kunzwa pamusoro pako? Zvidavirire pamusoro poutariri hwako, nokuti haungarambi uri mutariri.’
3 “ಆಗ ಆ ನಿರ್ವಾಹಕನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನನ್ನು ಕೆಲಸದಿಂದ ತೆಗೆದುಬಿಡುತ್ತಾನಲ್ಲಾ. ಅಗೆಯಲು ನನಗೆ ಶಕ್ತಿಯಿಲ್ಲ, ಭಿಕ್ಷೆ ಬೇಡಲು ನನಗೆ ನಾಚಿಕೆ.
“Mutariri akafunga nechomumwoyo make akati, ‘Zvino ndichaiteiko? Tenzi wangu ava kunditorera basa rangu. Handina simba rokurima, uye ndinonyara kupemha;
4 ಕೆಲಸದಿಂದ ನನ್ನನ್ನು ತೆಗೆದುಹಾಕಿದ ಮೇಲೆ, ಜನರು ನನ್ನನ್ನು ತಮ್ಮ ಮನೆಗಳಲ್ಲಿ ಸೇರಿಸಿಕೊಳ್ಳುವಂತೆ, ನಾನು ಏನು ಮಾಡಬೇಕಾದದ್ದು ಗೊತ್ತಾಯಿತು’ ಎಂದುಕೊಂಡನು.
ndinoziva zvandichaita kuitira kuti, ndikange ndarasikirwa nebasa rangu pano, vanhu vagondigamuchira mudzimba dzavo.’
5 “ಹೀಗೆ ಅವನು ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದು ಮೊದಲನೆಯವನಿಗೆ, ‘ನೀನು ನನ್ನ ಯಜಮಾನನಿಗೆ ತೀರಿಸಬೇಕಾದ ಸಾಲವೆಷ್ಟು?’ ಎಂದು ಕೇಳಲು,
“Saka akadana mumwe nomumwe akanga ane chikwereti natenzi wake. Akabvunza wokutanga akati, ‘Une chikwereti chakaita sei iwe kuna tenzi wangu?’
6 “‘ಅವನು, 3,000 ಲೀಟರ್ ಎಣ್ಣೆ,’ ಎಂದನು. “ಆಗ ನಿರ್ವಾಹಕನು, ‘ನಿನ್ನ ಸಾಲ ಪತ್ರವನ್ನು ತೆಗೆದುಕೋ, ಬೇಗ ಕುಳಿತುಕೊಂಡು 1,500 ಲೀಟರ್ ಎಂದು ಬರೆ,’ ಎಂದು ಹೇಳಿದನು.
“Akapindura achiti, ‘Zviero zana zvamafuta omuorivhi.’ “Mutariri akati kwaari, ‘Tora tsamba yako, ugare pasi nokukurumidza, unyore makumi mashanu.’
7 “ಬಳಿಕ ಅವನು ಮತ್ತೊಬ್ಬನಿಗೆ, ‘ನೀನೆಷ್ಟು ಸಾಲ ತೀರಿಸಬೇಕು,’ ಎಂದು ಕೇಳಲು, “30 ‘ಟನ್ ಗೋಧಿ,’ ಎಂದನು. “ಆಗ ಅವನು, ‘ನಿನ್ನ ಸಾಲ ಪತ್ರವನ್ನು ತೆಗೆದುಕೊಂಡು 24 ಟನ್ ಎಂದು ಬರೆ,’ ಎಂದನು.
“Ipapo akabvunza wechipiri akati, ‘Iwe une chikwereti chakadiniko?’ “Akapindura akati, ‘Zviero zana zvegorosi.’ “Akamuudza kuti, ‘Tora tsamba yako unyore makumi masere.’
8 “ಆಗ ಯಜಮಾನನು ಆ ಅಪನಂಬಿಗಸ್ತ ನಿರ್ವಾಹಕನು ಕುಯುಕ್ತಿಯಿಂದ ಮಾಡಿದ್ದನ್ನು ಹೊಗಳಿದನು. ಯೇಸು ಮುಂದುವರಿಸಿ ಹೇಳಿದ್ದು: ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಯುಕ್ತಿಯುಳ್ಳವರಾಗಿದ್ದಾರೆ. (aiōn g165)
“Tenzi womuranda uyu akarumbidza mutariri asakarurama uyu nokuti akanga aita nokuchenjera. Nokuti vanhu venyika ino vakachenjera kwazvo pakuita kwavo kukunda vana vechiedza. (aiōn g165)
9 ನಾನು ನಿಮಗೆ ಹೇಳುವುದೇನೆಂದರೆ, ಲೌಕಿಕ ಸಂಪತ್ತಿನಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಅದು ನಿಮ್ಮನ್ನು ಬಿಟ್ಟುಹೋದಾಗ ನಿಮ್ಮನ್ನು ನಿತ್ಯ ನಿವಾಸಗಳಲ್ಲಿ ಸೇರಿಸಿಕೊಳ್ಳುವರು. (aiōnios g166)
Ndinoti kwamuri, ‘Shandisai pfuma yenyika kuti muzviwanire shamwari, kuitira kuti painopera, mugozogamuchirwa mudzimba dzisingaperi.’ (aiōnios g166)
10 “ಸ್ವಲ್ಪವಾದದ್ದರಲ್ಲಿ ನಂಬಿಗಸ್ತರಾಗಿರುವವರು ಬಹಳವಾದದ್ದರಲ್ಲಿಯೂ ನಂಬಿಗಸ್ತರಾಗಿರುವರು ಮತ್ತು ಸ್ವಲ್ಪವಾದದ್ದರಲ್ಲಿ ಅಪನಂಬಿಗಸ್ತರಾಗಿರುವವರು ಬಹಳವಾದದ್ದರಲ್ಲಿಯೂ ಅಪನಂಬಿಗಸ್ತರಾಗಿರುವರು.
“Ani naani anogona kutendeka pane zvinhu zviduku anogonawo kutendeka pane zvakawanda, uye ani naani asina kutendeka pazvinhu zviduku duku achavawo asina kutendeka pane zvakawanda.
11 ಆದ್ದರಿಂದ ಲೌಕಿಕ ಸಂಪತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಾಗಿ ಇರದಿದ್ದರೆ, ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು?
Saka kana manga musina kutendeka paupfumi hwenyika, ndianiko achavimba nemi paupfumi hwechokwadi?
12 ಮತ್ತೊಬ್ಬರಿಗೆ ಸೇರಿದ ವಸ್ತುಗಳಲ್ಲಿ ನೀವು ನಂಬಿಗಸ್ತರಾಗಿ ಇರದಿದ್ದರೆ ನಿಮ್ಮ ಪಾಲನ್ನು ನಿಮಗೆ ಯಾರು ಒಪ್ಪಿಸುವರು?
Uye kana wanga usina kutendeka pazvinhu zvomumwe, ndianiko achakupa zvinhu zvako iwe?
13 “ಯಾವ ಸೇವಕನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು. ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ,” ಎಂದರು.
“Hakuna muranda angagona kushandira vatenzi vaviri. Nokuti achavenga mumwe agoda mumwe, kana kuti achanamatira kuno mumwe uye agozvidza mumwe. Hazvigoni kuti ushandire Mwari nepfuma.”
14 ಆಗ ಹಣದಾಶೆಯಿಂದ ಕೂಡಿದ ಫರಿಸಾಯರು, ಇವುಗಳನ್ನು ಕೇಳಿ ಯೇಸುವನ್ನು ಪರಿಹಾಸ್ಯ ಮಾಡಿದರು.
VaFarisi, avo vaida mari vakanzwa zvose izvi vakatuka Jesu uye vakamuseka.
15 ಯೇಸು ಅವರಿಗೆ, “ನೀವು ಮನುಷ್ಯರ ಮುಂದೆ ನೀತಿಕರಿಸಿಕೊಳ್ಳುವವರು, ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾರೆ. ಮನುಷ್ಯರಲ್ಲಿ ಶ್ರೇಷ್ಠವೆಂದು ಎಣಿಸಿಕೊಳ್ಳುವಂಥದ್ದು ದೇವರ ದೃಷ್ಟಿಯಲ್ಲಿ ಅದು ಅಸಹ್ಯವಾಗಿದೆ.
Iye akati kwavari, “Imi munozviruramisira pamberi pavanhu, asi Mwari anoziva mwoyo yenyu. Zvinhu zvinokudzwa pakati pavanhu zvinonyangadza pamberi paMwari.
16 “ಮೋಶೆಯ ನಿಯಮವೂ ಪ್ರವಾದನೆಗಳೂ ಯೋಹಾನನವರೆಗೆ ಇದ್ದವು. ಅಂದಿನಿಂದ, ದೇವರ ರಾಜ್ಯವು ಸಾರಲಾಗಿದೆ. ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಿದ್ದಾನೆ.
“Murayiro navaprofita zvakaparidzwa kusvikira pana Johani. Kubvira panguva iyoyo, vhangeri roumambo hwaMwari riri kuparidzwa, uye mumwe nomumwe anozvimanikidzira kupinda mahuri.
17 ನಿಯಮದ ಒಂದು ಚುಕ್ಕೆಯು ಬಿದ್ದುಹೋಗುವುದಕ್ಕಿಂತ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ.
Zviri nyore kuti denga nenyika zvipfuure pano kuti kavara kaduku koMurayiro kabviswe.
18 “ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.”
“Ani naani anoramba mukadzi wake akawana mumwe mukadzi anoita upombwe, uye murume anowana mukadzi akarambwa anoita upombwe.
19 ಅನಂತರ ಯೇಸು ಹೀಗೆ ಒಂದು ಸಾಮ್ಯ ಹೇಳಿದರು, “ಬಹು ಬೆಲೆಬಾಳುವ ಹಾಗೂ ನಯವಾದ ನಾರುಮಡಿ ವಸ್ತ್ರಗಳನ್ನೂ ಧರಿಸಿಕೊಂಡು ಪ್ರತಿದಿನವೂ ಭೋಗಗಳಲ್ಲಿಯೂ ಆಡಂಭರದಲ್ಲಿಯೂ ಬಾಳುತ್ತಿದ್ದ ಒಬ್ಬ ಧನವಂತನಿದ್ದನು.
“Paiva nomumwe murume mupfumi aipfeka nguo dzepepuru nomucheka wakaisvonaka uye aigara upenyu hwakaisvonaka mazuva ose.
20 ಅವನ ಬಾಗಿಲಲ್ಲಿ, ಮೈತುಂಬಾ ಹುಣ್ಣುಗಳಿದ್ದ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದಿರುತ್ತಿದ್ದನು.
Pasuo rake paigara mupemhi ainzi Razaro, akanga azere namaronda
21 ಧನವಂತನ ಮೇಜಿನಿಂದ ಬೀಳುವ ರೊಟ್ಟಿತುಂಡುಗಳನ್ನು ತಿನ್ನುವುದಕ್ಕೆ ಆ ಲಾಜರನು ಹಂಬಲಿಸುತ್ತಿದ್ದನು. ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
uye achipanga hake kudya zvimedu zvaiwa patafura yomupfumi. Kunyange imbwa dzaiuya dzichinanzva maronda ake.
22 “ಒಂದು ದಿನ ಆ ಭಿಕ್ಷುಕನು ಸತ್ತುಹೋದನು. ದೇವದೂತರು ಅವನನ್ನು ಅಬ್ರಹಾಮನ ಬಳಿಗೆ ತೆಗೆದುಕೊಂಡು ಹೋದರು. ಧನವಂತನು ಸಹ ಸತ್ತುಹೋದನು. ಅವನಿಗೆ ಶವಸಂಸ್ಕಾರವಾಯಿತು.
“Nguva yokufa kwomupemhi yakati yasvika vatumwa vakamutora vakamuendesa pachipfuva chaAbhurahama. Mupfumi akafawo akavigwa.
23 ಅವನು ಪಾತಾಳದಲ್ಲಿ, ಯಾತನೆಪಡುತ್ತಾ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಲ್ಲಿ ಅಬ್ರಹಾಮನನ್ನೂ, ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ಕಂಡನು. (Hadēs g86)
Ari mugehena, umo maairwadziwa, akatarisa kumusoro akaona Abhurahama ari kure, naRazaro ari pachipfuva chake. (Hadēs g86)
24 ಆಗ ಧನವಂತನು, ‘ತಂದೆಯೇ ಅಬ್ರಹಾಮನೇ, ನನ್ನನ್ನು ಕರುಣಿಸು. ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ, ನನ್ನ ನಾಲಿಗೆಯನ್ನು ತಣ್ಣಗೆ ಮಾಡಲು ಅವನನ್ನು ಕಳುಹಿಸು, ಈ ಅಗ್ನಿಜ್ವಾಲೆಯಲ್ಲಿ ಯಾತನೆಪಡುತ್ತಿದ್ದೇನೆ,’ ಎಂದು ಕೂಗಿ ಹೇಳಿದನು.
Saka akadanidzira kwaari achiti, ‘Baba Abhurahama, ndinzwirei ngoni mugotuma Razaro kuti anyike muromo womunwe wake mumvura atonhodze rurimi rwangu, nokuti ndiri kurwadziwa kwazvo mumoto muno.’
25 “ಆದರೆ ಅಬ್ರಹಾಮನು, ‘ಮಗನೇ, ನೀನು ನಿನ್ನ ಜೀವಮಾನದಲ್ಲಿ ಒಳ್ಳೆಯವುಗಳನ್ನು ಹೊಂದಿದೆಯಲ್ಲಾ, ಲಾಜರನು ಕೆಟ್ಟವುಗಳನ್ನು ಅನುಭವಿಸಿದ್ದನ್ನು ನೆನಪಿಗೆ ತಂದುಕೋ, ಈಗ ಅವನು ಆದರಣೆ ಹೊಂದುತ್ತಿದ್ದಾನೆ. ನೀನು ಯಾತನೆಪಡುತ್ತಿದ್ದೀ.
“Asi Abhurahama akapindura akati, ‘Mwanakomana, rangarira kuti pamazuva oupenyu hwako wakagamuchira zvinhu zvako zvakanaka, panguva iyoyo Razaro akagamuchira zvinhu zvakaipa, asi zvino ari kunyaradzwa pano, uye iwe uri kurwadziwa.
26 ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಂತರ ಸ್ಥಾಪಿಸಿದೆ,’ ಎಂದನು.
Uye pamusoro paizvozvo zvose, pano mukaha mukuru wakaiswa pakati pedu newe, kuitira kuti vanoda kubva kuno kuti vauye ikoko vakonewe, uye hakuna munhu angayambuka achibva ikoko achiuya kwatiri.’
27 “ಆಗ ಅವನು, ‘ಅಪ್ಪಾ, ಹಾಗಾದರೆ ನೀನು ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ಬೇಡಿಕೊಳ್ಳುತ್ತೇನೆ.
“Iye akapindura achiti, ‘Zvino ndinokukumbirai, baba, tumai Razaro kumba kwababa vangu,
28 ನನಗೆ ಐದು ಮಂದಿ ಸಹೋದರರಿದ್ದಾರೆ. ಅವರೂ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಲಾಜರನು ಅವರನ್ನು ಎಚ್ಚರಿಸಲಿ,’ ಎಂದನು.
nokuti ndina vanunʼuna vashanu. Ngaaende anovayambira, kuitira kuti naivowo varege kuuya kunzvimbo ino yokurwadziwa.’
29 “ಅದಕ್ಕೆ ಅಬ್ರಹಾಮನು ಅವನಿಗೆ, ‘ಅವರಿಗೆ ಮೋಶೆಯ ಮತ್ತು ಪ್ರವಾದಿಗಳ ಗ್ರಂಥಗಳಿವೆ; ಅದರಲ್ಲಿರುವುದಕ್ಕೆ ಅವರು ಕಿವಿಗೊಡಲಿ,’ ಎಂದನು.
“Abhurahama akati, ‘Mozisi navaprofita vanavo; ngavavanzwe.’
30 “ಆಗ ಅವನು, ‘ಹಾಗಲ್ಲ, ತಂದೆ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಜೀವಂತವಾಗಿ ಅವರ ಬಳಿಗೆ ಹೋದರೆ, ಅವರು ಪಶ್ಚಾತ್ತಾಪ ಪಡುವರು,’ ಎಂದನು.
“Iye akati, ‘Kwete, baba Abhurahama, asi kana mumwe akabva kuna vakafa akaenda kwavari, vangatendeuka.’
31 “ಅದಕ್ಕೆ ಅಬ್ರಹಾಮನು ಅವನಿಗೆ, ‘ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನೇ ಅವರು ಕೇಳದೆ ಹೋದರೆ, ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವುದಿಲ್ಲ,’ ಎಂದು ಹೇಳಿದನು.”
“Iye akati kwaari, ‘Kana vasinganzwi Mozisi navaprofita, havangatendi kunyange dai mumwe akamuka kubva kuvakafa.’”

< ಲೂಕನು 16 >