< ಲೂಕನು 18 >
1 ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತಮ್ಮ ಶಿಷ್ಯರಿಗೆ ಒಂದು ಸಾಮ್ಯವನ್ನು ಹೇಳಿದರು.
Ma buki we tize ta nyimo, abanga a birangara ko uya uganiya. Katti wa kuri inna dumo.
2 “ಒಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೂ ಭಯಪಡುತ್ತಿರಲಿಲ್ಲ ಮನುಷ್ಯರಿಗೂ ಲಕ್ಷ್ಯಕೊಡುತ್ತಿರಲಿಲ್ಲ.
Innu gusa, “Anyumo nire nipin ure unu urusa tize ma zo meni biyau ba Aere ba dāā ma hiri anu in tice ani ce ba.
3 ಅದೇ ಪಟ್ಟಣದಲ್ಲಿ ಒಬ್ಬ ವಿಧವೆಯಿದ್ದಳು. ಆಕೆ ಪದೇಪದೇ ಅವನ ಬಳಿಗೆ ಬಂದು, ‘ನನ್ನ ವಿರೋಧಿಯ ಎದುರಾಗಿ ನನಗೆ ನ್ಯಾಯ ದೊರಕಿಸಿಕೊಡು,’ ಎಂದು ಕೇಳಿಕೊಳ್ಳುತ್ತಿದ್ದಳು.
Ure ukoro ma rani a nyimo ani pin ma ziki innu eze ahira a meme, unnu gusa, “Ben kim in kem in suri a tari ti nu ukara um.
4 “ಅವನು ಸ್ವಲ್ಪಕಾಲ ಆಕೆಗೆ ಗಮನಕೊಡಲಿಲ್ಲ. ತರುವಾಯ ಅವನು ತನ್ನೊಳಗೆ, ‘ನಾನು ದೇವರಿಗೆ ಭಯಪಡುವುದಿಲ್ಲ ಹಾಗೂ ಮನುಷ್ಯರಿಗೂ ಲಕ್ಷ್ಯಕೊಡುವುದಿಲ್ಲ,
A tiye joko ma zunusu ma benki meba, kamarka tiye cin magu nice nimeme, inda zom biyau ba Asere ba nannu hira anabu gu imum ba.
5 ಆದರೂ ಈ ವಿಧವೆಯು ನನಗೆ ತೊಂದರೆಕೊಟ್ಟು ಪದೇಪದೇ ನನ್ನ ಬಳಿಗೆ ಬಂದು, ನನ್ನನ್ನು ಕಾಡಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು,’” ಎಂದುಕೊಂಡನು.
Barki ukoro ugeme ma hum nipum.
6 ಅನಂತರ ಕರ್ತದೇವರು, “ಈ ಅನ್ಯಾಯಗಾರನಾದ ನ್ಯಾಯಾಧಿಪತಿಯು ಹೇಳಿಕೊಂಡಿದ್ದನ್ನು ಕೇಳಿರಿ.
Asere magu, “kunna imum ige sa unu rusa itize ma buki.
7 ದೇವರಾದುಕೊಂಡವರು ದೇವರಿಗೆ ಹಗಲುರಾತ್ರಿ ಮೊರೆಯಿಡುವಾಗ, ದೇವರು ಅವರ ವಿಷಯದಲ್ಲಿ ಅವರಿಗೆ ನ್ಯಾಯವನ್ನು ಕೊಡದೆ ಇರುವರೋ? ದೇವರು ನ್ಯಾಯ ಕೊಡಲು ತಡಮಾಡುವರೋ?
A ana Asere mada ayen kadundere a hira anu zonka sa wa zin na so innu wui nan niye ba?
8 ದೇವರು ಬೇಗನೇ ಅವರಿಗೆ ನ್ಯಾಯತೀರಿಸುವರೆಂದು, ನಾನು ನಿಮಗೆ ಹೇಳುತ್ತೇನೆ. ಆದರೂ, ಮನುಷ್ಯಪುತ್ರನಾದ ನಾನು ಬಂದಾಗ ಭೂಮಿಯ ಮೇಲೆ ವಿಶ್ವಾಸವನ್ನು ಕಾಣುವೆನೋ?” ಎಂದರು.
Ma buka shi agi madi e in kadundere debe. anime ani, inka vana Asere ma aye, madi kem u inko iriba a ma nyanga?
9 ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸೆಯನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ, ಯೇಸು ಈ ಸಾಮ್ಯವನ್ನು ಹೇಳಿದರು:
Monno ma kuri mabuki tize tanyimo a ayesa wa inki iriban agi wa zi lau wa izi aye.
10 “ಇಬ್ಬರು ಪ್ರಾರ್ಥನೆಮಾಡುವುದಕ್ಕೆ ದೇವಾಲಯಕ್ಕೆ ಹೋದರು. ಅವರಲ್ಲಿ ಒಬ್ಬನು ಫರಿಸಾಯನು ಮತ್ತೊಬ್ಬನು ಸುಂಕದವನು.
Anu are wa ha udenge ASere abiringara, anu bezi urusa nan nu kabsa ukirfi.
11 ಫರಿಸಾಯನು ನಿಂತುಕೊಂಡು: ‘ದೇವರೇ, ಸುಲಿಗೆ ಮಾಡುವವರು, ಅನೀತಿವಂತರು, ವ್ಯಭಿಚಾರಿಗಳು ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ನಾನಲ್ಲ. ಆದ್ದರಿಂದ ನಾನು ನಿನಗೆ ಸ್ತೋತ್ರ ಮಾಡುತ್ತೇನೆ.
Unu bezi ursa ma tonno in biringara anice nimeme, akari, anu imum ibur, anu tozoin na ney nani gu unu imum ibur, anutozo in na ney nani gu unu ukabsa ikirfi igeme.
12 ನಾನು ವಾರಕ್ಕೆ ಎರಡು ಸಾರಿ ಉಪವಾಸ ಮಾಡುತ್ತೇನೆ. ನನಗಿರುವ ಎಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ,’ ಎಂದು ಹೇಳಿ ತನಗೆ ತಾನೇ ಪ್ರಾರ್ಥಿಸಿದನು.
In kee in gam ure imum are kare ka tiya tiye sunare, in nyiza udukym anyimo ukirau vatimum sa ma kem.
13 “ಆದರೆ ಸುಂಕದವನು ದೂರದಲ್ಲಿ ನಿಂತು, ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಧೈರ್ಯಗೊಳ್ಳದೇ ತನ್ನ ಎದೆಯನ್ನು ಬಡಿದುಕೊಳ್ಳುತ್ತಾ, ‘ದೇವರೇ ಪಾಪಿಯಾದವನು ನಾನೇ ನನ್ನನ್ನು ಕರುಣಿಸು,’ ಎಂದು ಪ್ರಾರ್ಥಿಸಿದನು.
Senke unu kabsa ikirfi me, maa turi put, ma yeze aje a sere senke ma vavi nihenu ni meme, unnu gusa, Asere kunna ugogoni um una maa dini”.
14 “ನಾನು ನಿಮಗೆ ಹೇಳುತ್ತೇನೆ, ಅವನಲ್ಲ, ಇವನೇ ನೀತಿವಂತನೆಂಬ ನಿರ್ಣಯ ಪಡೆದವನಾಗಿ ತನ್ನ ಮನೆಗೆ ಹೋದನು. ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.
Ma gu imme, unun ugeme makuri a kura ameme lau, ma teki uroni me, barki vat unu uge sa ma yeze nice nimeme adi yeze me.
15 ಚಿಕ್ಕಮಕ್ಕಳನ್ನು ಯೇಸು ಮುಟ್ಟುವಂತೆ ಕೆಲವರು ಚಿಕ್ಕಮಕ್ಕಳನ್ನು ಅವರ ಬಳಿಗೆ ತಂದರು ಆಗ ಅವರ ಶಿಷ್ಯರು ಇದನ್ನು ಕಂಡು, ಜನರನ್ನು ಗದರಿಸಿದರು.
Anu me wa kuri wa e inna hana cincin, barki wa dari we, senke anu tarsa wa iri waa gwarika me.
16 ಆದರೆ ಯೇಸುವೋ ಚಿಕ್ಕಮಕ್ಕಳನ್ನು ತಮ್ಮ ಹತ್ತಿರಕ್ಕೆ ಆಹ್ವಾನಿಸಿ ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ. ಅವುಗಳಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಇಂಥವರದೇ.
Senke Yeso ma titi me, innu guna, cekini mu hana mu cincin wa e a hira am, kati ikarti weba akura Asere awe ani.
17 ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ,” ಎಂದರು.
Kadundere ma bukashi, unu yesa ma nyari me ukaba a kura Asere gu vana cingilin, madaa ribe a nyimo ba.
18 ಒಬ್ಬ ಅಧಿಕಾರಿಯು ಯೇಸುವಿಗೆ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಕೇಳಿದನು. (aiōnios )
Ure unu ugomo ma iki me, u nyettike, indi wu aneni in kem urai wa Asere? (aiōnios )
19 ಅದಕ್ಕೆ ಯೇಸು ಅವನಿಗೆ, “ನೀನು ನನ್ನನ್ನು ಒಳ್ಳೆಯವನೆಂದು ಏಕೆ ಕರೆಯುತ್ತಿ? ದೇವರೊಬ್ಬರೇ ಹೊರತು ಬೇರೆ ಯಾರೂ ಒಳ್ಳೆಯವರಲ್ಲ.
Yeso magu imme, nyani utisam unu uriri? unu uriri mazoni senke Asere cas.
20 ‘ವ್ಯಭಿಚಾರ ಮಾಡಬಾರದು, ನರಹತ್ಯೆ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,’ ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆಯಲ್ಲಾ,” ಎಂದರು.
Urusa udungurka me, kati utoti unni ney u uye ba, kati u huu uye, kati uwuzi nikari, kati u wu moco, wuza aka coo uwe me imum iriri.
21 ಅದಕ್ಕವನು, “ನನ್ನ ಬಾಲ್ಯದಿಂದಲೇ ನಾನು ಇವೆಲ್ಲವನ್ನೂ ಕೈಕೊಂಡಿದ್ದೇನೆ,” ಎಂದು ಹೇಳಿದನು.
Ugomo ma gu, “Vat timumum me ma wuzi dati innu ti nyani tum.
22 ಯೇಸು ಇವುಗಳನ್ನು ಕೇಳಿ ಅವನಿಗೆ, “ಆದರೂ ನಿನಗೆ ಒಂದು ಕೊರತೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.
Sa Yeso maa kunna magu imme, imum ineisa wa dira. udi zizi vat imum sa uzin u nya anu dira, u kabi ya zesere, u e u tarsim.
23 ಅವನು ಇದನ್ನು ಕೇಳಿ, ಬಹಳ ದುಃಖವುಳ್ಳವನಾದನು. ಏಕೆಂದರೆ ಅವನು ಬಹಳ ಸಿರಿವಂತನಾಗಿದ್ದನು.
Senke sa ugomo ma kunna timumun me, ma kunna iriba kang, barki ikirfi imeme.
24 ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ಕಂಡು, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ!
unnu ira umeme maa kunna iriba, magu, a ikunna. Unnu ikirfi maribe akura Asere.
25 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ,” ಎಂದು ಹೇಳಿದರು.
me inna banga ba U Pakumi uribe anyimo anije ni alira, unnu guna una kirfi ma ribe Akura Asere.
26 ಇದನ್ನು ಕೇಳಿದವರು, “ಹಾಗಾದರೆ ಯಾರು ರಕ್ಷಣೆ ಹೊಂದುವವರು?” ಎಂದರು.
kunna wagu, “Ani aveni madi suburka?”
27 ಅದಕ್ಕೆ ಯೇಸು, “ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ,” ಎಂದು ಹೇಳಿದರು.
makabirka, imum sa idaa hem anu ba idi hem a hira Asere.
28 ಆಗ ಪೇತ್ರನು, “ಇಗೋ, ನಾವು ಎಲ್ಲವನ್ನೂ ಬಿಟ್ಟು ನಿಮ್ಮನ್ನು ಹಿಂಬಾಲಿಸಿದ್ದೇವಲ್ಲ,” ಎಂದನು.
magu, “Ba, ta ceki tirunga tiru vat ti tarsa we?”
29 ಯೇಸು ಅವರಿಗೆ, “ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ, ಮನೆಯನ್ನಾದರೂ ಹೆಂಡತಿಯನ್ನಾದರೂ ಸಹೋದರರನ್ನಾದರೂ ತಂದೆತಾಯಿಗಳನ್ನಾದರೂ ಮಕ್ಕಳನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು,
magu in weh, kadundere maguna si, daki uye sa ma ceki akura ameme, uney, a henu nan aka coo, nan na hana, barki akuru Asere,
30 ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಕಾಲದಲ್ಲಿ ನಿತ್ಯಜೀವವನ್ನೂ ಹೊಂದುವನು,” ಎಂದರು. (aiōn , aiōnios )
madaa kaba ige sa iteki uneh nannu uney u eze, urai wa Asere. (aiōn , aiōnios )
31 ಯೇಸು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ, “ಇಗೋ, ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ, ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಪ್ರವಾದಿಗಳಿಂದ ಬರೆದಿರುವುದೆಲ್ಲವೂ ನೆರವೇರಬೇಕು.
ma ori anu tarsa a hira ameme, magu in we ira, ti haza urshalima, vat unyettike wa na kadura me abanga vana unubu idi Ngwinca.
32 ನಾನು ಯೆಹೂದ್ಯರಲ್ಲದವರ ಕೈಗೆ ಸೆರೆಯಾಗುವೆನು. ಅವರು ನನ್ನನ್ನು ಹಾಸ್ಯಮಾಡಿ, ನನಗೆ ಅವಮಾನ ಮಾಡಿ, ನನ್ನ ಮೇಲೆ ಉಗುಳುವರು.
nya me atari alumai, Wadi Wuzi me nieru, wa nya me mu ih wa wu me tobi.
33 ಇದಲ್ಲದೆ ಅವರು ನನ್ನನ್ನು ಕೊರಡೆಗಳಿಂದ ಹೊಡೆದು, ಕೊಂದುಹಾಕುವರು. ಆದರೆ ನಾನು ಮೂರನೆಯ ದಿನ ಜೀವಿತನಾಗಿ ಎದ್ದು ಬರುವೆನು,” ಎಂದರು.
wa maari utira ume, we hu me, rono utaru ma hiri.
34 ಆದರೆ ಶಿಷ್ಯರಿಗೆ ಇವುಗಳಲ್ಲಿ ಒಂದೂ ಅರ್ಥವಾಗಲಿಲ್ಲ. ಈ ಮಾತುಗಳು ಅವರಿಗೆ ಮರೆಯಾಗಿದ್ದುದರಿಂದ, ಯೇಸು ಹೇಳಿದವುಗಳನ್ನು ಅವರು ತಿಳಿದುಕೊಳ್ಳಲಿಲ್ಲ.
rusi timumum ba, a hunze Wen, daa wa rusi ba imum sa abuki ba.
35 ಯೇಸು ಯೆರಿಕೋವಿನ ಸಮೀಪಕ್ಕೆ ಬಂದಾಗ, ಒಬ್ಬ ಕುರುಡನು ದಾರಿಯ ಪಕ್ಕದಲ್ಲಿ ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು.
Yeso ma eh mamu nan uyeriko, ure urubo ma ciki upuru una unnu nyara.
36 ಜನಸಮೂಹವು ಹಾದು ಹೋಗುವುದನ್ನು ಇವನು ಕೇಳಿಸಿಕೊಂಡು, ಅದೇನೆಂದು ವಿಚಾರಿಸಿದನು.
ma kunna nigoh nanu wa aaki, ma iki,
37 “ನಜರೇತಿನ ಯೇಸು ಹಾದು ಹೋಗುತ್ತಿದ್ದಾರೆ,” ಎಂದು ಜನರು ಅವನಿಗೆ ಹೇಳಿದರು.
izi?” Wa gu imme, Yeso u Nazeret ma aka.
38 ಆಗ ಅವನು, “ಯೇಸುವೇ, ದಾವೀದನ ಪುತ್ರನೇ, ನನ್ನನ್ನು ಕರುಣಿಸಿ!” ಎಂದು ಗಟ್ಟಿಯಾಗಿ ಕೂಗಿಕೊಂಡನು.
Me ma Yeze nigwiran, magu, “Yeso, vana u Dauda, kuma ngogoni um”.
39 ಮುಂದೆ ಹೋಗುತ್ತಿದ್ದವರು ಸುಮ್ಮನಿರುವಂತೆ ಅವನನ್ನು ಗದರಿಸಿದರು, ಆದರೂ ಅವನು, “ದಾವೀದನ ಪುತ್ರರೇ, ನನ್ನನ್ನು ಕರುಣಿಸಿ,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
Sa wa haaki aje wa gwangirka urobo me, wa gu 'imme ma ingara tik. Senke ma ru aje innu hunu kang, Vana U Dauda! Kunna ugogoni um”.
40 ಆಗ ಯೇಸು ನಿಂತು ಅವನನ್ನು ತಮ್ಮ ಬಳಿಗೆ ಕರೆತರುವಂತೆ ಅಪ್ಪಣೆಕೊಟ್ಟರು. ಅವನು ಯೇಸುವಿನ ಬಳಿಗೆ ಬಂದಾಗ, ಅವರು ಅವನಿಗೆ,
Yesu ma tonno dang ma dungurka a eh innu nu me a hira a meme.
41 “ನನ್ನಿಂದ ನಿನಗೇನಾಗಬೇಕು?” ಎಂದು ಕೇಳಿದರು. ಅದಕ್ಕವನು, “ಕರ್ತದೇವರೇ, ನನಗೆ ದೃಷ್ಟಿ ಕೊಡಿ,” ಎಂದನು.
U nyara u wu we?” Magu, “Una kura, in nyara in hiri a hira?”
42 ಆಗ ಯೇಸು ಅವನಿಗೆ, “ನೀನು ದೃಷ್ಟಿ ಪಡೆ; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು.
Ma gu imme, kaba uhira, u inko iriba uwe me wa nya we ni huma.
43 ಕೂಡಲೇ ಅವನು ದೃಷ್ಟಿಯನ್ನು ಪಡೆದನು. ಆಗ ಅವನು ದೇವರನ್ನು ಸ್ತುತಿಸುತ್ತಾ, ಯೇಸುವನ್ನು ಹಿಂಬಾಲಿಸಿದನು. ಎಲ್ಲಾ ಜನರು ಅದನ್ನು ಕಂಡು, ದೇವರಿಗೆ ಸ್ತೋತ್ರ ಸಲ್ಲಿಸಿದರು.
Me maa huma, matarsi me, unnu nonzo Asere. Anu vat sa wa iri, wa nonzo Asere.