< ಲೂಕನು 19 >

1 ಯೇಸು ಯೆರಿಕೋ ಪಟ್ಟಣವನ್ನು ಪ್ರವೇಶಿಸಿ ಅಲ್ಲಿಂದ ಪ್ರಯಾಣ ಮಾಡುತ್ತಿದ್ದರು.
And having come in He passed through Jericho.
2 ಅಲ್ಲಿ ಜಕ್ಕಾಯ ಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಸುಂಕದವರಲ್ಲಿ ಮುಖಂಡನೂ ಐಶ್ವರ್ಯವಂತನೂ ಆಗಿದ್ದನು.
And behold, a certain man by name called Zaccheus; and he was chief of the publicans, and he was rich.
3 ಅವನು ಯೇಸು ಯಾರೆಂದು ಕಾಣಬೇಕೆಂದು ಅಪೇಕ್ಷಿಸಿದರೂ ತಾನು ಕುಳ್ಳನಾಗಿದ್ದದರಿಂದ ಜನರ ಗುಂಪಿನ ನಿಮಿತ್ತವಾಗಿ ಅವರನ್ನು ಕಾಣಲಾರದೆ ಇದ್ದನು.
And he was seeking to see Jesus, who He is; and was not able on account of the multitude, because he was small in stature.
4 ಆಗ ಯೇಸುವನ್ನು ಕಾಣುವಂತೆ ಅವನು ಮುಂದಾಗಿ ಓಡಿಹೋಗಿ, ಒಂದು ಅತ್ತಿಮರವನ್ನು ಹತ್ತಿದನು. ಏಕೆಂದರೆ ಯೇಸು ಆ ಮಾರ್ಗವಾಗಿಯೇ ಬರುತ್ತಿದ್ದರು.
And having run forward in advance, he went up in a sycamore-tree in order that he might see Him: because He was about to pass that way.
5 ಯೇಸು ಆ ಸ್ಥಳಕ್ಕೆ ಬಂದು, ಮೇಲಕ್ಕೆ ನೋಡಿ ಅವನಿಗೆ, “ಜಕ್ಕಾಯನೇ, ತಕ್ಷಣವೇ ಇಳಿದು ಬಾ. ನಾನು ಇಂದು ನಿನ್ನ ಮನೆಯಲ್ಲಿ ತಂಗಬೇಕು,” ಎಂದರು.
And when He came to the place, Jesus looking up, saw him, and said to him, Zaccheus, hastening, come down; for it behooveth me to abide in thy house this day.
6 ಜಕ್ಕಾಯನು ತಕ್ಷಣವೇ ಇಳಿದುಬಂದು ಅವರನ್ನು ಸಂತೋಷದಿಂದ ಬರಮಾಡಿಕೊಂಡನು.
And hastening, he came down, and received Him rejoicing.
7 ಇದನ್ನು ಕಂಡವರೆಲ್ಲರೂ, “ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ,” ಎಂದು ಗೊಣಗುಟ್ಟಿದರು.
And all seeing, murmured, saying, that He is come in to abide with a sinner man.
8 ಆದರೆ ಜಕ್ಕಾಯನು ನಿಂತುಕೊಂಡು ಕರ್ತದೇವರಿಗೆ, “ಸ್ವಾಮೀ, ಇಗೋ, ನನ್ನ ಸ್ವತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಟ್ಟುಬಿಡುತ್ತೇನೆ. ನಾನು ಯಾರಿಗಾದರೂ ಏನಾದರೂ ಮೋಸಮಾಡಿ ಅವರಿಂದ ತೆಗೆದುಕೊಂಡಿದ್ದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.
And Zaccheus standing, said to the Lord, Behold, Lord, the half of my goods I give to the poor; and if I have taken any thing from any one fraudulently, I restore fourfold.
9 ಯೇಸು ಅವನಿಗೆ, “ಈ ದಿನವೇ ಈ ಮನೆಗೆ ರಕ್ಷಣೆ ಬಂದಿದೆ. ಏಕೆಂದರೆ ಇವನು ಸಹ ಅಬ್ರಹಾಮನ ಪುತ್ರನಲ್ಲವೇ?
And Jesus said to him, This day salvation has come to this house, because he also is a son of Abraham;
10 ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.
for the Son of man came to seek and to save that which is lost.
11 ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ, ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದುದರಿಂದಲೂ ದೇವರ ರಾಜ್ಯವು ಕೂಡಲೇ ಪ್ರತ್ಯಕ್ಷವಾಗುವುದೆಂದು ಅವರು ಭಾವಿಸಿದ್ದರಿಂದ
And they hearing these things, proceeding, He spoke a parable, because he is nigh unto Jerusalem, and they think the kingdom of God is about to be made manifest immediately.
12 ಯೇಸು ಇನ್ನೊಂದು ಸಾಮ್ಯವನ್ನು ಹೇಳಿದರು: “ಘನವಂತನಾಗಿದ್ದ ಒಬ್ಬನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರುಗಿ ಬರುವುದಕ್ಕಾಗಿ ದೂರದೇಶಕ್ಕೆ ಹೊರಟುಹೋದನು.
Then He said, A certain nobleman went to a far country, to receive for himself a kingdom, and return.
13 ಆ ವ್ಯಕ್ತಿ ತನ್ನ ಹತ್ತು ಕೆಲಸಗಾರರನ್ನು ಕರೆದು, ಅವರಿಗೆ ಹತ್ತು ನಾಣ್ಯಗಳನ್ನು ಒಪ್ಪಿಸಿ, ‘ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರಿ,’ ಎಂದು ಹೇಳಿದನು.
And calling his ten servants, he gave to them ten pounds, and said to them, Operate till I come.
14 “ಆದರೆ ಅವನ ನಾಡಿನವರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮ್ಮ ಅರಸನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ಪ್ರತಿನಿಧಿಗಳನ್ನು ಕಳುಹಿಸಿದರು.
But his citizens continued to hate him, and sent an embassy after him, saying, We do not wish this man to rule over us.
15 “ಆದರೂ ಅವನು ತನ್ನ ರಾಜ್ಯವನ್ನು ಪಡೆದು ಹಿಂದಿರುಗಿದಾಗ, ವ್ಯಾಪಾರದಿಂದ ಇನ್ನೂ ಎಷ್ಟು ಲಾಭಗಳಿಸಿದರೆಂದು ತಿಳಿದುಕೊಳ್ಳುವಂತೆ, ತಾನು ಹಣ ಕೊಟ್ಟ ಆ ಕೆಲಸಗಾರರನ್ನು ತನ್ನ ಬಳಿಗೆ ಕರೆತರಲು ಆಜ್ಞಾಪಿಸಿದನು.
And it came to pass, when he returned, having received the kingdom, and he said, that those servants should be called, to whom he had given the money, in order that he might know what each one had gained by their merchandise.
16 “ಆಗ ಮೊದಲನೆಯವನು ಬಂದು, ‘ಸ್ವಾಮಿ, ನಿಮ್ಮ ಒಂದು ನಾಣ್ಯದಿಂದ ಇನ್ನೂ ಹತ್ತು ನಾಣ್ಯಗಳನ್ನು ಸಂಪಾದಿಸಿದೆ,’ ಎಂದನು.
And the first came, saying, Lord, thy pound has gained ten pounds.
17 “ಅದಕ್ಕೆ ಅವನು, ‘ಚೆನ್ನಾಗಿ ಮಾಡಿದಿ, ಒಳ್ಳೆಯ ಸೇವಕನೇ. ನೀನು ಅತ್ಯಂತ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ, ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು,’ ಎಂದನು.
And he said to him, Well done, thou good servant: because thou hast been faithful in the least, have thou authority over ten cities.
18 “ಎರಡನೆಯವನು ಬಂದು, ‘ಸ್ವಾಮಿ, ನಿನ್ನ ಒಂದು ನಾಣ್ಯದಿಂದ ಇನ್ನೂ ಐದು ನಾಣ್ಯಗಳನ್ನು ಸಂಪಾದಿಸಿದೆ,’ ಎಂದನು.
And the second one came, saying, Lord, thy pound has gained five pounds.
19 “ಅದಕ್ಕೆ ಅವನು, ‘ನೀನು ಐದು ಪಟ್ಟಣಗಳ ಮೇಲೆ ಅಧಿಕಾರಿಯಾಗಿರು,’ ಎಂದು ಅವನಿಗೆ ಹೇಳಿದನು.
And he also said to him, Be thou over five cities.
20 “ಆಗ ಮತ್ತೊಬ್ಬನು ಬಂದು, ‘ಸ್ವಾಮಿ, ಇಗೋ, ನಾನು ಕರವಸ್ತ್ರದಲ್ಲಿ ಕಟ್ಟಿಟ್ಟಿದ್ದ ನಿಮ್ಮ ನಾಣ್ಯ ಇದೇ.
And the other one came, saying, Lord, behold, thy pound, which I had laid away in a napkin:
21 ನೀವು ಕಠಿಣ ಮನುಷ್ಯರೆಂದು ನಾನು ನಿಮಗೆ ಭಯಪಟ್ಟೆನು. ನೀನು ಕೂಡಿಡದಿರುವುದನ್ನು ತೆಗೆದುಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ,’ ಎಂದನು.
for I feared thee, because thou art an austere man: thou takest up that which thou hadst not laid down, and thou reapest that which thou hast not sown.
22 “ಆಗ ಆ ಯಜಮಾನನು, ‘ಕೆಟ್ಟ ಸೇವಕನೇ! ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿಸುವೆನು. ನಾನು ಕೂಡಿಡದೆ ಇರುವಲ್ಲಿ ತೆಗೆದುಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
And he says to him, Out of thine own mouth I will judge thee, thou wicked servant. Didst thou know that I am an austere man, taking up what I have not laid down, and reaping what I have not sown?
23 ಹಾಗಿದ್ದರೆ ನನ್ನ ಹಣವನ್ನು ಬಡ್ಡಿ ಅಂಗಡಿಯಲ್ಲಿ ಏಕೆ ಹಾಕಲಿಲ್ಲ, ನಾನು ಹಿಂದಿರುಗಿದಾಗ ಹಣವನ್ನು ಬಡ್ಡಿ ಸಮೇತವಾಗಿ ತೆಗೆದುಕೊಳ್ಳುತ್ತಿದ್ದೆನು,’ ಎಂದು ಹೇಳಿದನು.
Wherefore indeed didst thou not put my money in the bank? and having come I would have received the same with the product.
24 “ಯಜಮಾನನು ಹತ್ತಿರ ನಿಂತಿದ್ದವರಿಗೆ, ‘ಇವನಿಂದ ಆ ನಾಣ್ಯವನ್ನು ತೆಗೆದುಕೊಂಡು ಹತ್ತು ನಾಣ್ಯಗಳಿದ್ದವನಿಗೆ ಕೊಡಿರಿ,’ ಎಂದನು.
And he said to the bystanders, Take the pound from him, and give it to the one having ten pounds.
25 “ಆಗ ಅವರು, ‘ಸ್ವಾಮಿ, ಅವನಿಗೆ ಈಗಾಗಲೇ ಹತ್ತು ನಾಣ್ಯಗಳಿವೆಯಲ್ಲಾ!’ ಎಂದರು.
And they said to him, Lord, he has ten pounds.
26 “ಆಗ ಯಜಮಾನನು, ‘ಇದ್ದ ಪ್ರತಿಯೊಬ್ಬರಿಗೆ ಕೊಡಲಾಗುವುದು ಮತ್ತು ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ಕಸಿದುಕೊಳ್ಳಲಾಗುವುದು.
I say unto you, that to every one having it shall be given; and from every one not having, it shall be taken away even that which he hath.
27 ಆದರೆ ತಮ್ಮ ಮೇಲೆ ನಾನು ಆಳಿಕೆ ಮಾಡುವುದನ್ನು ಇಷ್ಟಪಡದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ,’ ಎಂದನು.”
Moreover bring these my enemies, not wishing me to rule over them, hither, and slay them before me.
28 ಯೇಸು ಹೀಗೆ ಹೇಳಿದ ತರುವಾಯ, ಶಿಷ್ಯರಿಗೆ ಮುಂದಾಗಿ, ಯೆರೂಸಲೇಮಿಗೆ ಹೊರಟರು.
And speaking these things, He was journeying before them, going up to Jerusalem.
29 ಇದಾದ ಮೇಲೆ ಅವರು ಓಲಿವ್ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ, ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕರೆದು,
And it came to pass, when He drew nigh unto Bethphage and Bethany, to the mount called the Mount of Olives, and He sent away two of His disciples,
30 “ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ, ನೀವು ಅದರೊಳಗೆ ಪ್ರವೇಶಿಸುತ್ತಿರುವಾಗ, ಅಲ್ಲಿ ಕಟ್ಟಿರುವ ಮತ್ತು ಯಾರೂ ಅದರ ಮೇಲೆ ಸವಾರಿ ಮಾಡದಿರುವ ಒಂದು ಕತ್ತೆಮರಿಯನ್ನು ಅಲ್ಲಿ ಕಾಣುವಿರಿ. ಅದನ್ನು ಬಿಚ್ಚಿ ಇಲ್ಲಿಗೆ ತೆಗೆದುಕೊಂಡು ಬನ್ನಿರಿ.
saying, Go into the village over against you; in which entering you will find a colt tied, on which no one of men ever sat: loosing, lead him hither.
31 ಯಾರಾದರೂ ನಿಮಗೆ, ‘ಏಕೆ ಅದನ್ನು ಬಿಚ್ಚುತ್ತೀರಿ?’ ಎಂದು ಕೇಳಿದರೆ, ನೀವು ಅವರಿಗೆ, ‘ಇದು ಕರ್ತದೇವರಿಗೆ ಬೇಕಾಗಿದೆ,’ ಎಂದು ಹೇಳಿರಿ,” ಎಂದರು.
And if any one may ask you, Why do you loose him? thus say to him, that the Lord hath need of him:
32 ಆ ಶಿಷ್ಯರಿಬ್ಬರೂ ತಮ್ಮ ಮಾರ್ಗವಾಗಿ ಹೊರಟುಹೋಗಿ ಯೇಸು ತಮಗೆ ಹೇಳಿದಂತೆಯೇ ಕಂಡರು.
and those having been sent, departing, found as Jesus told them.
33 ಅವರು ಆ ಕತ್ತೆಮರಿಯನ್ನು ಬಿಚ್ಚುತ್ತಿರುವಾಗ, ಅದರ ಯಜಮಾನರು ಅವರಿಗೆ, “ನೀವು ಕತ್ತೆಮರಿಯನ್ನು ಯಾಕೆ ಬಿಚ್ಚುತ್ತೀರಿ?” ಎಂದು ಕೇಳಿದ್ದಕ್ಕೆ,
And they loosing the donkey, his master said to them, Why do you loose the donkey?
34 ಅವರು, “ಇದು ಕರ್ತದೇವರಿಗೆ ಬೇಕಾಗಿದೆ,” ಎಂದರು.
And they said, The Lord hath need of him.
35 ಶಿಷ್ಯರು ಅದನ್ನು ಯೇಸುವಿನ ಬಳಿಗೆ ತಂದು, ತಮ್ಮ ಬಟ್ಟೆಗಳನ್ನು ಕತ್ತೆಮರಿಯ ಮೇಲೆ ಹಾಕಿ, ಅದರ ಮೇಲೆ ಯೇಸುವನ್ನು ಕೂರಿಸಿದರು.
And they led him to Jesus: and casting their garments on the colt, they mounted Jesus on them.
36 ಯೇಸು ಹೋಗುತ್ತಿರುವಾಗ, ಜನರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.
And He going forward, they were strewing their garments in the road.
37 ಇದಲ್ಲದೆ ಯೇಸು ಓಲಿವ್ ಗುಡ್ಡದಿಂದ ಇಳಿಜಾರನ್ನು ಸಮೀಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ಕಂಡ ಎಲ್ಲ ಮಹತ್ಕಾರ್ಯಗಳಿಗಾಗಿ ಸಂತೋಷಪಡುತ್ತಾ, ಮಹಾ ಸ್ವರದಿಂದ ದೇವರನ್ನು ಹೀಗೆ ಕೊಂಡಾಡಲಾರಂಭಿಸಿದರು:
And He already drawing nigh to the descension of the Mount of Olives, the whole multitude of the disciples began to praise God with a loud voice for all those miracles which they saw; shouting,
38 “ಕರ್ತದೇವರ ಹೆಸರಿನಲ್ಲಿ ಬರುವ ಅರಸನು ಆಶೀರ್ವಾದ ಹೊಂದಲಿ!” “ಪರಲೋಕದಲ್ಲಿ ಸಮಾಧಾನ, ಅತ್ಯುನ್ನತದಲ್ಲಿ ಮಹಿಮೆ!”
saying, Blessed is the King coming in the name of the Lord: peace in heaven, and glory in the highest.
39 ಜನಸಮೂಹದಲ್ಲಿದ್ದ ಕೆಲವು ಫರಿಸಾಯರು ಯೇಸುವಿಗೆ, “ಬೋಧಕರೇ, ನಿಮ್ಮ ಶಿಷ್ಯರನ್ನು ಗದರಿಸಿ!” ಎಂದರು.
And certain ones of the Pharisees from the multitude said to Him, Teacher, rebuke thy disciples:
40 ಆಗ ಯೇಸು ಅವರಿಗೆ, “ಇವರು ಸುಮ್ಮನಾದರೆ, ಈ ಕಲ್ಲುಗಳು ಕೂಗುವವು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.
and He responding said to them, I say unto you, that if these may keep silent, the rocks will cry out.
41 ತರುವಾಯ ಯೇಸು ಯೆರೂಸಲೇಮ ಪಟ್ಟಣವನ್ನೂ ಅದರ ಸ್ಥಿತಿಯನ್ನೂ ಕಂಡು, ಅದರ ಸಲುವಾಗಿ ಅತ್ತು,
And when He drew near, seeing the city He wept over it,
42 “ನೀನು ಇಂದಾದರೂ ನಿನ್ನ ಸಮಾಧಾನದ ವಿಷಯಗಳನ್ನು ಅರಿತುಕೊಂಡಿದ್ದರೆ, ಚೆನ್ನಾಗಿತ್ತು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.
saying, If thou indeed hadst known, truly in this thy day, the things appertaining to thy peace! but now they are hidden from thy eyes.
43 ನಿನ್ನ ಶತ್ರುಗಳು ನಿನ್ನ ಸುತ್ತಲೂ ಅಡ್ಡಗೋಡೆಯನ್ನು ಕಟ್ಟಿ, ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಬಂಧಿಸುವ ದಿನಗಳು ಬರುವವು.
Because the days will come upon thee, and thine enemies will cast a fortification about thee, and surround thee, and press in on thee from all directions,
44 ಇದಲ್ಲದೆ ಅವರು ಗೋಡೆಯೊಳಗಿನ ನಿನ್ನನ್ನೂ ನಿನ್ನ ಮಕ್ಕಳನ್ನೂ ನೆಲಕ್ಕೆ ಬಡಿಯುವರು. ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ ದೇವರು ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲ,” ಎಂದರು.
and will slay thee, and thy children in thee; and will leave in thee not a stone upon a stone; because thou hast not known the time of thy visitation.
45 ಅನಂತರ ಯೇಸು ದೇವಾಲಯದ ಅಂಗಳದೊಳಗೆ ಹೋಗಿ, ಅದರಲ್ಲಿ ವ್ಯಾಪಾರಮಾಡುವವರನ್ನು ಹೊರಗೆ ಹಾಕುವುದಕ್ಕೆ ಪ್ರಾರಂಭಿಸಿ,
And having come into the temple, He began to cast out those buying and selling,
46 ಅವರಿಗೆ, “‘ನನ್ನ ಮನೆಯು ಪ್ರಾರ್ಥನೆಯ ಮನೆಯಾಗಿದೆ,’ ಎಂದು ಬರೆದದೆ. ನೀವೋ ಅದನ್ನು, ‘ಕಳ್ಳರ ಗವಿಯನ್ನಾಗಿ’ ಮಾಡಿದ್ದೀರಿ,” ಎಂದರು.
saying to them; It has been written, My house shall be a house of prayer: but you have made it a den of thieves.
47 ಯೇಸು ಪ್ರತಿದಿನವೂ ದೇವಾಲಯದಲ್ಲಿ ಬೋಧಿಸುತ್ತಿದ್ದರು. ಆದರೆ ಮುಖ್ಯಯಾಜಕರೂ ನಿಯಮ ಬೋಧಕರೂ ಜನರ ಪ್ರಮುಖರೂ ಯೇಸುವನ್ನು ಕೊಲ್ಲುವುದಕ್ಕೆ ಹವಣಿಸುತ್ತಿದ್ದರು.
And He was teaching daily in the temple, and the chief priests and scribes and the first men of the people were seeking to destroy Him.
48 ಜನರೆಲ್ಲರೂ ಯೇಸು ಹೇಳುವ ಒಂದೊಂದು ಮಾತಿಗೂ ಬಹಳ ಲಕ್ಷ್ಯಕೊಟ್ಟು ಯೇಸುವಿನ ಉಪದೇಶವನ್ನು ಕೇಳುತ್ತಿದ್ದುದರಿಂದ, ಅವರಿಗೆ ಏನು ಮಾಡಬೇಕೋ ತೋಚಲಿಲ್ಲ.
And they were not finding what they might do; for all the people hung on Him, hearing Him.

< ಲೂಕನು 19 >