< ಲೂಕನು 2 >
1 ಆ ದಿನಗಳಲ್ಲಿ ಇಡೀ ರೋಮನ್ ರಾಜ್ಯದಲ್ಲಿ ಜನಗಣತಿಯಾಗಬೇಕೆಂದು ಕೈಸರ್ ಔಗುಸ್ತನಿಂದ ಶಾಸನವು ಹೊರಟಿತು.
В те дни вышло от кесаря Августа повеление сделать перепись по всей земле.
2 ಕುರೇನ್ಯನು ಸಿರಿಯ ಪ್ರಾಂತಕ್ಕೆ ಅಧಿಪತಿಯಾಗಿದ್ದಾಗ, ಈ ಜನಗಣತಿಯು ಮೊದಲನೆಯ ಸಾರಿ ನಡೆಯಿತು.
Эта перепись была первая в правление Квириния Сириею.
3 ಆಗ ಎಲ್ಲರೂ ತಮ್ಮ ಹೆಸರುಗಳನ್ನು ದಾಖಲೆ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮ ತಮ್ಮ ಸ್ವಂತ ಪಟ್ಟಣಗಳಿಗೆ ಹೋದರು.
И пошли все записываться, каждый в свой город.
4 ಯೋಸೇಫನು ದಾವೀದನ ಕುಟುಂಬದವನೂ ವಂಶದವನೂ ಆಗಿದ್ದರಿಂದ, ಅವನು ಸಹ ಗಲಿಲಾಯ ಪ್ರಾಂತದ ನಜರೇತೆಂಬ ಪಟ್ಟಣದಿಂದ ಯೂದಾಯ ಪ್ರಾಂತದ ಬೇತ್ಲೆಹೇಮ್ ಎಂಬ ದಾವೀದನ ಪಟ್ಟಣಕ್ಕೆ ಹೋದನು.
Пошел также и Иосиф из Галилеи, из города Назарета, в Иудею, в город Давидов, называемый Вифлеем, потому что он был из дома и рода Давидова,
5 ಅವನು ತನಗೆ ನಿಶ್ಚಯಿಸಿದ್ದ ಮತ್ತು ಪೂರ್ಣ ಗರ್ಭಿಣಿಯಾಗಿದ್ದ ಮರಿಯಳೊಂದಿಗೆ ಜನಗಣತಿಯ ದಾಖಲೆ ಮಾಡಿಸಿಕೊಳ್ಳುವುದಕ್ಕಾಗಿ ಹೋದನು.
записаться с Мариею, обрученною ему женою, которая была беременна.
6 ಅವರು ಬೇತ್ಲೆಹೇಮಿನಲ್ಲಿ ಇದ್ದಾಗ, ಆಕೆಗೆ ಹೆರಿಗೆಯ ಕಾಲ ಸಮೀಪಿಸಿತು.
Когда же они были там, наступило время родить ей;
7 ಮರಿಯಳು ತನ್ನ ಚೊಚ್ಚಲು ಮಗನನ್ನು ಹೆತ್ತು, ಬಟ್ಟೆಗಳಿಂದ ಸುತ್ತಿ, ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಶಿಶುವನ್ನು ದನದ ಕೊಟ್ಟಿಗೆಯಲ್ಲಿ ಮಲಗಿಸಿದಳು.
и родила Сына своего Первенца, и спеленала Его, и положила Его в ясли, потому что не было им места в гостинице.
8 ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು, ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.
В той стране были на поле пастухи, которые содержали ночную стражу у стада своего.
9 ಆಗ ಕರ್ತದೇವರ ದೂತನು ಅವರಿಗೆ ಪ್ರತ್ಯಕ್ಷನಾದನು. ಕರ್ತದೇವರ ಮಹಿಮೆಯು ಅವರ ಸುತ್ತಲೂ ಪ್ರಕಾಶಿಸಿತು, ಅವರು ಬಹಳವಾಗಿ ಹೆದರಿದರು.
Вдруг предстал им Ангел Господень, и слава Господня осияла их; и убоялись страхом великим.
10 ಆ ದೂತನು ಅವರಿಗೆ, “ಹೆದರಬೇಡಿರಿ. ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಶುಭಸಮಾಚಾರವನ್ನು ನಾನು ನಿಮಗೆ ತಿಳಿಸುತ್ತೇನೆ.
И сказал им Ангел: не бойтесь; я возвещаю вам великую радость, которая будет всем людям:
11 ಅದೇನೆಂದರೆ, ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕರು ಹುಟ್ಟಿದ್ದಾರೆ. ಅವರು ಯಾರೆಂದರೆ ಕರ್ತದೇವರು ಆಗಿರುವ ಕ್ರಿಸ್ತ.
ибо ныне родился вам в городе Давидовом Спаситель, Который есть Христос Господь;
12 ಅಲ್ಲಿ ಬಟ್ಟೆಯಿಂದ ಸುತ್ತಿರುವ ಶಿಶುವು ಕೊಟ್ಟಿಗೆಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ. ಇದೇ ನಿಮಗೆ ಗುರುತು,” ಎಂದು ಹೇಳಿದನು.
и вот вам знак: вы найдете Младенца в пеленах, лежащего в яслях.
13 ತಕ್ಷಣವೇ ಆ ದೂತನ ಸಂಗಡ ಇದ್ದ ಪರಲೋಕ ಸೈನ್ಯದ ಸಮೂಹವು ದೇವರನ್ನು ಕೊಂಡಾಡುತ್ತಾ ಹೀಗೆ ಹೇಳಿದರು:
И внезапно явилось с Ангелом многочисленное воинство небесное, славящее Бога и взывающее:
14 “ಮಹೋನ್ನತದಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರ ಮೆಚ್ಚುಗೆ, ಮಾನವರಿಗೆ ಸಮಾಧಾನ.”
слава в вышних Богу, и на земле мир, в человеках благоволение!
15 ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು, “ದೇವರು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
Когда Ангелы отошли от них на небо, пастухи сказали друг другу: пойдем в Вифлеем и посмотрим, что там случилось, о чем возвестил нам Господь.
16 ಅವರು ಅವಸರದಿಂದ ಹೋಗಿ ಮರಿಯಳನ್ನೂ ಯೋಸೇಫನನ್ನೂ ಕೊಟ್ಟಿಗೆಯಲ್ಲಿ ಮಲಗಿದ್ದ ಶಿಶುವನ್ನು ಕಂಡರು.
И, поспешив, пришли и нашли Марию и Иосифа, и Младенца, лежащего в яслях.
17 ಅನಂತರ, ಈ ಶಿಶುವಿನ ವಿಷಯವಾಗಿ ತಮಗೆ ತಿಳಿಯಪಡಿಸಿದ ದೇವದೂತನ ಮಾತನ್ನು ಪ್ರಕಟಮಾಡಿದರು.
Увидев же, рассказали о том, что было возвещено им о Младенце Сем.
18 ಕುರುಬರು ಹೇಳಿದ ವಿಷಯಗಳನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.
И все слышавшие дивились тому, что рассказывали им пастухи.
19 ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟುಕೊಂಡು ಆಲೋಚಿಸುತ್ತಿದ್ದಳು.
А Мария сохраняла все слова сии, слагая в сердце Своем.
20 ತಮಗೆ ತಿಳಿಸಿದ ಪ್ರಕಾರವೇ ಕುರುಬರು ತಾವು ಕೇಳಿ, ಕಂಡ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ, ಕೊಂಡಾಡುತ್ತಾ ಹಿಂದಿರುಗಿ ಹೋದರು.
И возвратились пастухи, славя и хваля Бога за все то, что слышали и видели, как им сказано было.
21 ಶಿಶುವಿಗೆ ಸುನ್ನತಿ ಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಮರಿಯಳು ಗರ್ಭಿಣಿಯಾಗುವುದಕ್ಕೆ ಮುಂಚೆಯೇ ದೂತನು ಸೂಚಿಸಿದ್ದಂತೆ “ಯೇಸು” ಎಂದು ನಾಮಕರಣ ಮಾಡಿದರು.
По прошествии восьми дней, когда надлежало обрезать Младенца, дали Ему имя Иисус, нареченное Ангелом прежде зачатия Его во чреве.
22 ಮೋಶೆಯ ನಿಯಮದ ಪ್ರಕಾರ ಮರಿಯಳಿಗೆ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ, ಯೋಸೇಫನು ಮತ್ತು ಮರಿಯಳು ಶಿಶುವನ್ನು ಕರ್ತದೇವರಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತಂದರು.
А когда исполнились дни очищения их по закону Моисееву, принесли Его в Иерусалим, чтобы представить пред Господа,
23 ಕರ್ತದೇವರ ನಿಯಮದಲ್ಲಿ ಬರೆದಿರುವಂತೆ, “ಪ್ರತಿಯೊಂದು ಚೊಚ್ಚಲ ಗಂಡು ಮಗು ಕರ್ತದೇವರಿಗೆ ಪವಿತ್ರವಾಗಿ ಸಮರ್ಪಿಸಬೇಕು,”
как предписано в законе Господнем, чтобы всякий младенец мужеского пола, разверзающий ложесна, был посвящен Господу,
24 ಎಂತಲೂ, “ಒಂದು ಜೊತೆ ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಬಲಿ ಅರ್ಪಿಸಬೇಕು,” ಎಂತಲೂ ಕರ್ತದೇವರ ನಿಯಮದಲ್ಲಿ ಹೇಳಿರುವ ಪ್ರಕಾರ ಅವರು ಸಮರ್ಪಿಸಿದರು.
и чтобы принести в жертву, по реченному в законе Господнем, две горлицы или двух птенцов голубиных.
25 ಆಗ ಸಿಮೆಯೋನನೆಂಬ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಅವನು ನೀತಿವಂತನೂ ಭಕ್ತನೂ ಆಗಿದ್ದನು. ಅವನು ಇಸ್ರಾಯೇಲರನ್ನು ಸಂತೈಸುವ ಒಬ್ಬರ ಬರುವಿಕೆಗಾಗಿ ಕಾಯುತ್ತಿದ್ದನು. ಪವಿತ್ರಾತ್ಮ ದೇವರ ಪ್ರಸನ್ನತೆ ಅವನ ಮೇಲಿತ್ತು.
Тогда был в Иерусалиме человек, именем Симеон. Он был муж праведный и благочестивый, чающий утешения Израилева; и Дух Святый был на нем.
26 ಇದಲ್ಲದೆ, ಅವನು ಕರ್ತದೇವರು ಕಳುಹಿಸಲಿರುವ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ಮರಣ ಹೊಂದುವುದಿಲ್ಲವೆಂದು ಪವಿತ್ರಾತ್ಮನಿಂದ ಅವನಿಗೆ ಪ್ರಕಟನೆಯಾಗಿತ್ತು.
Ему было предсказано Духом Святым, что он не увидит смерти, доколе не увидит Христа Господня.
27 ಅವನು ಪವಿತ್ರಾತ್ಮ ಪ್ರೇರಣೆಯಿಂದ ದೇವಾಲಯದ ಅಂಗಳದೊಳಗೆ ಬಂದನು, ಆಗ ನಿಯಮವನ್ನು ಪೂರೈಸಲು ತಂದೆತಾಯಿಗಳು ಶಿಶು ಯೇಸುವನ್ನು ಒಳಗೆ ತಂದರು.
И пришел он по вдохновению в храм. И, когда родители принесли Младенца Иисуса, чтобы совершить над Ним законный обряд,
28 ಆಗ ಸಿಮೆಯೋನನು ಶಿಶುವನ್ನು ತನ್ನ ಕೈಗಳಲ್ಲಿ ತೆಗೆದುಕೊಂಡು ದೇವರನ್ನು ಕೊಂಡಾಡುತ್ತಾ ಹೀಗೆಂದನು:
он взял Его на руки, благословил Бога и сказал:
29 “ಸರ್ವೇಶ್ವರರಾದ ಕರ್ತದೇವರೇ, ನಿಮ್ಮ ವಾಗ್ದಾನದ ಪ್ರಕಾರ, ನಿಮ್ಮ ದಾಸನನ್ನು ಸಮಾಧಾನದಿಂದ ಈಗ ಕಳುಹಿಸಿರಿ.
Ныне отпускаешь раба Твоего, Владыко, по слову Твоему, с миром,
30 ನನ್ನ ಕಣ್ಣುಗಳು ನಿಮ್ಮ ರಕ್ಷಣೆಯನ್ನು ಕಂಡವು,
ибо видели очи мои спасение Твое,
31 ಈ ರಕ್ಷಣೆಯನ್ನು ನೀವು ಎಲ್ಲಾ ಜನಗಳ ಮುಂದೆ ಸಿದ್ಧಪಡಿಸಿದ್ದೀರಿ:
которое Ты уготовал пред лицем всех народов,
32 ಅದು ಯೆಹೂದ್ಯರಲ್ಲದವರಿಗೆ ಪ್ರಕಟಣೆಯ ಬೆಳಕೂ, ನಿಮ್ಮ ಪ್ರಜೆಯಾದ ಇಸ್ರಾಯೇಲರ ಮಹಿಮೆಯೂ ಆಗಿದೆ.”
свет к просвещению язычников и славу народа Твоего Израиля.
33 ಶಿಶುವಿನ ವಿಷಯವಾಗಿ ಸಿಮೆಯೋನನು ಹೇಳಿದ ಮಾತುಗಳಿಗೆ ಶಿಶುವಿನ ತಂದೆತಾಯಿಗಳು ಆಶ್ಚರ್ಯಪಟ್ಟರು.
Иосиф же и матерь Его дивились сказанному о Нем.
34 ಅನಂತರ ಸಿಮೆಯೋನನು ಅವರನ್ನು ಆಶೀರ್ವದಿಸಿ, ಶಿಶುವಿನ ತಾಯಿ ಮರಿಯಳಿಗೆ, “ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವುದಕ್ಕೂ ಏಳುವುದಕ್ಕೂ ಈ ಮಗು ನೇಮಕವಾಗಿದೆ, ಜನರು ಎದುರು ಮಾತನಾಡುವುದಕ್ಕೆ ಈ ಮಗು ಗುರುತಾಗಿರುವದು.
И благословил их Симеон и сказал Марии, матери Его: се, лежит Сей на падение и на восстание многих в Израиле и в предмет пререканий, -
35 ಹೀಗೆ ಅನೇಕ ಹೃದಯಗಳ ಆಲೋಚನೆಗಳು ಪ್ರಕಟವಾಗುವವು. ನಿನ್ನ ಸ್ವಂತ ಪ್ರಾಣವನ್ನು ಸಹ ಖಡ್ಗವು ತಿವಿಯುವುದು” ಎಂದನು.
и тебе самой оружие пройдет душу, - да откроются помышления многих сердец.
36 ಅಲ್ಲಿ ಆಶೇರನ ಗೋತ್ರದ ಫನೂಯೇಲನ ಮಗಳಾದ ಅನ್ನಳೆಂಬ ಒಬ್ಬ ಬಹು ಮುಪ್ಪಿನ ಪ್ರವಾದಿನಿಯಿದ್ದಳು. ಅವಳು ಮದುವೆಯಾಗಿ ಗಂಡನೊಂದಿಗೆ ಏಳು ವರ್ಷ ಬಾಳಿದ್ದಳು.
Тут была также Анна пророчица, дочь Фануилова, от колена Асирова, достигшая глубокой старости, прожив с мужем от девства своего семь лет,
37 ಅವಳು ಎಂಬತ್ತನಾಲ್ಕು ವರ್ಷ ವಿಧವೆಯಾಗಿದ್ದು, ದೇವಾಲಯವನ್ನು ಬಿಟ್ಟುಹೋಗದೆ ಉಪವಾಸಗಳಿಂದಲೂ ಪ್ರಾರ್ಥನೆಗಳಿಂದಲೂ ರಾತ್ರಿ ಹಗಲೂ ಆರಾಧನೆ ಮಾಡುತ್ತಿದ್ದಳು.
вдова лет восьмидесяти четырех, которая не отходила от храма, постом и молитвою служа Богу день и ночь.
38 ಆ ಸಂದರ್ಭದಲ್ಲಿ ಅನ್ನಳು ಬಂದು, ದೇವರನ್ನು ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಶಿಶುವಿನ ವಿಷಯವಾಗಿ ಮಾತನಾಡಿದಳು.
И она в то время, подойдя, славила Господа и говорила о Нем всем, ожидавшим избавления в Иерусалиме.
39 ಯೋಸೇಫನೂ ಮರಿಯಳೂ ಕರ್ತದೇವರ ನಿಯಮದ ಪ್ರಕಾರ ಎಲ್ಲವನ್ನು ಮಾಡಿ ಮುಗಿಸಿದ ಮೇಲೆ, ತಮ್ಮ ಊರಾಗಿದ್ದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.
И когда они совершили все по закону Господню, возвратились в Галилею, в город свой Назарет.
40 ಆ ಶಿಶುವು ಬೆಳೆದು ಬಲಗೊಂಡು; ಜ್ಞಾನದಲ್ಲಿ ವೃದ್ಧಿಯಾಯಿತು ಮತ್ತು ದೇವರ ಕೃಪೆಯು ಶಿಶುವಿನ ಮೇಲೆ ಇತ್ತು.
Младенец же возрастал и укреплялся духом, исполняясь премудрости, и благодать Божия была на Нем.
41 ಯೇಸುವಿನ ತಂದೆತಾಯಿಗಳು ಪ್ರತಿವರ್ಷವೂ ಪಸ್ಕಹಬ್ಬಕ್ಕೆ ಯೆರೂಸಲೇಮಿಗೆ ಹೋಗುತ್ತಿದ್ದರು.
Каждый год родители Его ходили в Иерусалим на праздник Пасхи.
42 ಯೇಸುವಿಗೆ ಹನ್ನೆರಡು ವರ್ಷವಾದಾಗ, ಪದ್ಧತಿಯ ಪ್ರಕಾರ ಅವರು ಹಬ್ಬಕ್ಕಾಗಿ ಯೆರೂಸಲೇಮಿಗೆ ಹೋದರು.
И когда Он был двенадцати лет, пришли они также по обычаю в Иерусалим на праздник.
43 ಅವರು ಆ ಹಬ್ಬವನ್ನು ಮುಗಿಸಿಕೊಂಡು ಹಿಂದಿರುಗಿ ಬರುವಾಗ ಬಾಲಕ ಯೇಸು ಯೆರೂಸಲೇಮಿನಲ್ಲಿಯೇ ಉಳಿದದ್ದು, ತಂದೆತಾಯಿಗಳಿಗೆ ತಿಳಿದಿರಲಿಲ್ಲ.
Когда же, по окончании дней праздника, возвращались, остался Отрок Иисус в Иерусалиме; и не заметили того Иосиф и Матерь Его,
44 ಯೇಸು ಗುಂಪಿನಲ್ಲಿ ಇದ್ದಿರಬಹುದೆಂದು ಅವರು ಭಾವಿಸಿ, ಒಂದು ದಿನದ ಪ್ರಯಾಣವನ್ನು ಮಾಡಿದ ಮೇಲೆ ತಮ್ಮ ಬಳಗದವರಲ್ಲಿಯೂ ಪರಿಚಿತರಲ್ಲಿಯೂ ಬಾಲಕ ಯೇಸುವನ್ನು ಹುಡುಕಿದರು.
но думали, что Он идет с другими. Пройдя же дневной путь, стали искать Его между родственниками и знакомыми
45 ಆದರೆ ಅವರು ಯೇಸುವನ್ನು ಕಂಡುಕೊಳ್ಳದೆ ಹೋದುದರಿಂದ, ಅವರನ್ನು ಹುಡುಕುತ್ತಾ ಪುನಃ ಯೆರೂಸಲೇಮಿಗೆ ಹಿಂತಿರುಗಿ ಬಂದರು.
и, не найдя Его, возвратились в Иерусалим, ища Его.
46 ಮೂರು ದಿವಸಗಳಾದ ಮೇಲೆ ಯೇಸುವನ್ನು ದೇವಾಲಯದಲ್ಲಿ ಕಂಡರು. ಬೋಧಕರ ನಡುವೆ ಕೂತುಕೊಂಡು, ಬಾಲಕ ಯೇಸು ಅವರ ಮಾತುಗಳನ್ನು ಕೇಳಿಸಿಕೊಳ್ಳುತ್ತಾ, ಪ್ರಶ್ನಿಸುತ್ತಾ ಇರುವುದನ್ನು ಅವರು ಕಂಡರು.
Через три дня нашли Его в храме, сидящего посреди учителей, слушающего их и спрашивающего их;
47 ಯೇಸು ಆಡಿದ ಮಾತುಗಳನ್ನು ಕೇಳಿದವರೆಲ್ಲರೂ ಅವರ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾದರು.
все слушавшие Его дивились разуму и ответам Его.
48 ತಂದೆತಾಯಿಗಳು ಯೇಸುವನ್ನು ಕಂಡಾಗ ಆಶ್ಚರ್ಯಪಟ್ಟರು. ಆತನ ತಾಯಿಯು, “ಮಗು, ನೀನು ನಮಗೆ ಹೀಗೇಕೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಗೊಂಡು ನಿನ್ನನ್ನು ಹುಡುಕಿದೆವು,” ಎಂದಳು.
И, увидев Его, удивились; и матерь Его сказала Ему: Чадо! что Ты сделал с нами? Вот, отец Твой и я с великою скорбью искали Тебя.
49 ಯೇಸು ಅವರಿಗೆ, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕೆಂಬುದು ನಿಮಗೆ ತಿಳಿಯಲಿಲ್ಲವೋ?” ಎಂದರು.
Он сказал им: зачем было вам искать Меня? или вы не знали, что Мне должно быть в том, что принадлежит Отцу Моему?
50 ಆದರೆ ಯೇಸು ಅವರಿಗೆ ಹೇಳಿದ ಮಾತನ್ನು ಅವರು ಗ್ರಹಿಸಲಿಲ್ಲ.
Но они не поняли сказанных Им слов.
51 ಬಳಿಕ ಯೇಸು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನರಾಗಿದ್ದರು. ಆದರೆ ಯೇಸುವಿನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.
И Он пошел с ними и пришел в Назарет; и был в повиновении у них. И Матерь Его сохраняла все слова сии в сердце Своем.
52 ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆದು, ದೇವರ ಮೆಚ್ಚುಗೆ ಮತ್ತು ಮನುಷ್ಯರ ಮೆಚ್ಚುಗೆ ಹೆಚ್ಚಾಗಿ ಅವರಿಗೆ ದೊರೆಯಿತು.
Иисус же преуспевал в премудрости и возрасте и в любви у Бога и человеков.