< ಲೂಕನು 24 >

1 ವಾರದ ಮೊದಲನೆಯ ದಿನದ, ಬೆಳಗಿನ ಜಾವದಲ್ಲಿ, ಆ ಸ್ತ್ರೀಯರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಹೋದರು.
Jumapili, alfajiri na mapema, wale wanawake walikwenda kaburini wakichukua yale manukato waliyotayarisha.
2 ಆಗ ಸಮಾಧಿಯಿಂದ ಬಂಡೆ ಉರುಳಿಸಲಾಗಿದ್ದನ್ನು ಅವರು ಕಂಡರು,
Walikuta lile jiwe limeviringishwa mbali na kaburi.
3 ಅವರು ಅದರ ಒಳಗೆ ಪ್ರವೇಶಿಸಿದಾಗ, ಅಲ್ಲಿ ಕರ್ತದೇವರು ಯೇಸುವಿನ ದೇಹವನ್ನು ಕಾಣಲಿಲ್ಲ.
Walipoingia ndani, hawakuona mwili wa Bwana Yesu.
4 ಅವರು ಬಹಳವಾಗಿ ಗಲಿಬಿಲಿಗೊಂಡರು. ಆಗ ಮಿಂಚಿನಂತೆ ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಫಕ್ಕನೆ ಅವರ ಬಳಿ ನಿಂತಿದ್ದರು.
Walipokuwa bado wanashangaa juu ya jambo hilo, mara watu wawili waliovaa mavazi yenye kung'aa sana, wakasimama karibu nao.
5 ಆ ಸ್ತ್ರೀಯರು ಭಯಪಟ್ಟು ತಮ್ಮ ದೃಷ್ಟಿಯನ್ನು ನೆಲದ ಕಡೆಗೆ ನಾಟಿರಲು, ಆ ಪುರುಷರು ಅವರಿಗೆ, “ಜೀವಿಸುವವರನ್ನು ಸತ್ತವರೊಳಗೆ ನೀವು ಏಕೆ ಹುಡುಕುತ್ತೀರಿ?
Hao wanawake wakaingiwa na hofu, wakainama chini. Ndipo wale watu wakawaambia, “Kwa nini mnamtafuta aliye hai kati ya wafu?
6 ಅವರು ಇಲ್ಲಿಲ್ಲ; ಜೀವಂತರಾಗಿ ಎದ್ದಿದ್ದಾರೆ! ಅವರು ಇನ್ನೂ ಗಲಿಲಾಯದಲ್ಲಿದ್ದಾಗಲೇ:
Hayuko hapa; amefufuka. Kumbukeni aliyowaambieni alipokuwa kule Galilaya:
7 ‘ಮನುಷ್ಯಪುತ್ರನಾದ ನಾನು ಪಾಪಿಷ್ಠರ ಕೈಗೆ ಒಪ್ಪಿಸಿದವನಾಗಿ, ಶಿಲುಬೆಗೆ ಹಾಕಲಾಗಿ ಮೂರನೆಯ ದಿನದಲ್ಲಿ ತಿರುಗಿ ಜೀವಂತನಾಗಿ ಏಳುವೆನು,’ ಎಂದು ನಿಮಗೆ ಹೇಳಿದ್ದನ್ನು ನೀವು ನೆನಪುಮಾಡಿಕೊಳ್ಳಿರಿ,” ಎಂದರು.
Ni lazima Mwana wa Mtu atolewe kwa watu waovu, nao watamsulubisha, na siku ya tatu atafufuka.”
8 ಆಗ ಆ ಸ್ತ್ರೀಯರು ಯೇಸುವಿನ ಮಾತುಗಳನ್ನು ನೆನಪು ಮಾಡಿಕೊಂಡರು.
Hapo wanawake wakayakumbuka maneno yake,
9 ಸಮಾಧಿಯಿಂದ ಆ ಸ್ತ್ರೀಯರು ಹಿಂತಿರುಗಿ ಹೋಗಿ, ಆ ಹನ್ನೊಂದು ಮಂದಿಗೂ ಉಳಿದವರೆಲ್ಲರಿಗೂ ಈ ಎಲ್ಲಾ ವಿಷಯಗಳನ್ನು ತಿಳಿಸಿದರು.
wakarudi kutoka kaburini, wakawapa mitume wale kumi na mmoja na wengine habari za mambo hayo yote.
10 ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು ಅಪೊಸ್ತಲರಿಗೆ ಈ ವಿಷಯಗಳನ್ನು ಹೇಳಿದರು.
Hao waliotoa habari hizo kwa mitume ni: Maria Magdalene, Yoana na Maria mama wa Yakobo, pamoja na wanawake wengine walioandamana nao.
11 ಅವರಿಗಾದರೋ ಈ ಸ್ತ್ರೀಯರು ಹೇಳಿದ್ದು ಕಟ್ಟು ಕಥೆಗಳಂತೆ ಕಂಡವು, ಅವರು ಅವುಗಳನ್ನು ನಂಬಲಿಲ್ಲ.
Mitume waliyachukua maneno hayo kama yasiyo na msingi, hivyo hawakuamini.
12 ಆಗ ಪೇತ್ರನು ಎದ್ದು, ಸಮಾಧಿ ಬಳಿಗೆ ಓಡಿಹೋಗಿ, ಅದರೊಳಗೆ ಬಗ್ಗಿ ನೋಡಿದಾಗ, ಅಲ್ಲಿ ನಾರುಬಟ್ಟೆಗಳು ಮಾತ್ರ ಬಿದ್ದಿರುವುದನ್ನು ಕಂಡು ನಡೆದ ಸಂಭವಕ್ಕಾಗಿ ತನ್ನೊಳಗೆ ಆಶ್ಚರ್ಯಪಡುತ್ತಾ ಹೊರಟುಹೋದನು.
Lakini Petro alitoka, akaenda mbio hadi kaburini. Alipoinama kuchungulia ndani, akaiona tu ile sanda. Akarudi nyumbani huku akiwa anashangaa juu ya hayo yaliyotokea.
13 ಅದೇ ದಿನ ಶಿಷ್ಯರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಹನ್ನೊಂದು ಕಿಲೋಮೀಟರು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಿದ್ದರು.
Siku hiyohiyo, wawili kati ya wafuasi wake Yesu wakawa wanakwenda katika kijiji kimoja kiitwacho Emau, umbali wa kilomita kumi na moja kutoka Yerusalemu.
14 ಅವರು ನಡೆದ ಈ ಎಲ್ಲಾ ಸಂಭವಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಿದ್ದರು.
Wakawa wanazungumza juu ya hayo yote yaliyotukia.
15 ಅವರು ಮಾತನಾಡಿಕೊಂಡು ಚರ್ಚಿಸುತ್ತಾ ಹೋಗಲು, ಯೇಸು ತಾವೇ ಅವರನ್ನು ಸಮೀಪಿಸಿ ಅವರ ಜೊತೆಯಲ್ಲಿ ಹೋದರು;
Walipokuwa wakizungumza na kujadiliana, Yesu mwenyewe akatokea, akatembea pamoja nao.
16 ಆದರೆ ಅವರಿಗೆ ತಿಳಿಯದ ಹಾಗೆ ಕಣ್ಣಿಗೆ ಮರೆಯಾಗಿದ್ದರಿಂದ ಅವರು ಯೇಸುವಿನ ಗುರುತು ಹಿಡಿಯಲಿಲ್ಲ.
Walimwona kwa macho, lakini hawakumtambua.
17 ಆಗ ಯೇಸು ಅವರಿಗೆ, “ನೀವು ದಾರಿಯಲ್ಲಿ ಒಬ್ಬರಿಗೊಬ್ಬರು ಚರ್ಚೆಮಾಡಿಕೊಂಡು ಹೋಗುತ್ತಿದ್ದೀರಲ್ಲಾ ಏನು ವಿಷಯ?” ಎಂದು ಕೇಳಿದರು. ಅವರು ತಕ್ಷಣವೇ ನಿಂತರು, ಅವರ ಮುಖ ದುಖಃಭರಿತವಾಗಿತ್ತು.
Akawauliza, “Mnazungumza nini huku mnatembea?” Nao wakasimama kimya, nyuso zao wamezikunja kwa huzuni.
18 ಆಗ ಅವರಲ್ಲಿ ಒಬ್ಬನಾದ, ಕ್ಲೆಯೊಫ ಎಂಬುವನು ಯೇಸುವಿಗೆ, “ಇತ್ತೀಚೆಗೆ ಯೆರೂಸಲೇಮಿನೊಳಗೆ ನಡೆದಿರುವ ಘಟನೆಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನೇ ಆಗಿದ್ದೀಯಾ?” ಎಂದು ಕೇಳಿದನು.
Mmoja, aitwaye Kleopa, akamjibu, “Je, wewe ni mgeni peke yako Yerusalemu ambaye hujui yaliyotukia huko siku hizi?”
19 ಅದಕ್ಕೆ ಯೇಸು ಅವರಿಗೆ, “ಯಾವ ಘಟನೆ?” ಎಂದು ಕೇಳಲು, ಅವರು ಯೇಸುವಿಗೆ, “ನಜರೇತಿನ ಯೇಸುವಿನ ವಿಷಯಗಳೇ, ಅವರು ಕೃತ್ಯಗಳಲ್ಲಿಯೂ ಮಾತುಗಳಲ್ಲಿಯೂ ದೇವರ ದೃಷ್ಟಿಯಲ್ಲಿಯೂ ಜನರೆಲ್ಲರ ದೃಷ್ಟಿಯಲ್ಲಿಯೂ ಬಹುಶಕ್ತಿವಂತರಾಗಿದ್ದ ಪ್ರವಾದಿಯಾಗಿದ್ದರು.
Naye akawajibu, “Mambo gani?” Wao wakamjibu, “Mambo yaliyompata Yesu wa Nazareti. Yeye alikuwa nabii mwenye uwezo wa kutenda na kufundisha mbele ya Mungu na mbele ya watu wote.
20 ಮುಖ್ಯಯಾಜಕರೂ ನಮ್ಮ ಅಧಿಕಾರಿಗಳೂ ಯೇಸುವನ್ನು ಮರಣದಂಡನೆಗೆ ಒಪ್ಪಿಸಿಕೊಟ್ಟು, ಅವರನ್ನು ಶಿಲುಬೆಗೆ ಹಾಕಿದರು.
Makuhani na watawala wetu walimtoa ahukumiwe kufa, wakamsulubisha.
21 ಆದರೆ ಇಸ್ರಾಯೇಲರನ್ನು ವಿಮೋಚಿಸುವವರು ಆ ಯೇಸುವೇ ಎಂದು ನಾವು ನಂಬಿಕೊಂಡಿದ್ದೆವು. ಇದಲ್ಲದೆ ಈ ಘಟನೆಗಳು ನಡೆದು ಇದು ಮೂರನೆಯ ದಿನವಾಗಿದೆ.
Lakini sisi tulitumaini kwamba yeye ndiye angeikomboa Israeli. Zaidi ya hayo yote, leo ni siku ya tatu tangu mambo hayo yalipotendeka.
22 ನಮ್ಮವರಲ್ಲಿ, ಕೆಲವು ಸ್ತ್ರೀಯರು ಇಂದು ಬೆಳಗಿನ ಜಾವದಲ್ಲಿ ಸಮಾಧಿಗೆ ಹೋಗಿದ್ದರು.
Tena, wanawake wengine wa kwetu wametushtua. Walikwenda kaburini mapema asubuhi,
23 ಅಲ್ಲಿ ಅವರು ಯೇಸುವಿನ ದೇಹವನ್ನು ಕಾಣದೆ ಬಂದು, ಯೇಸು ಜೀವದಿಂದ ಎದ್ದಿದ್ದಾರೆ, ಎಂದು ಹೇಳಿದ ದೇವದೂತರನ್ನೂ ಕಂಡಿದ್ದ ದೃಶ್ಯವನ್ನೂ ನಮಗೆ ಹೇಳಿದರು.
wasiukute mwili wake. Wakarudi wakasema kwamba walitokewa na malaika waliowaambia kwamba alikuwa hai.
24 ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ, ಆ ಸ್ತ್ರೀಯರು ಹೇಳಿದ್ದನ್ನೇ ಕಂಡರು. ಆದರೆ ಅವರು ಯೇಸುವನ್ನು ಮಾತ್ರ ಕಾಣಲಿಲ್ಲ,” ಎಂದರು.
Wengine wetu walikwenda kaburini wakashuhudia yale waliyosema hao wanawake; ila yeye hawakumwona.”
25 ಆಗ ಯೇಸು ಅವರಿಗೆ, “ಎಂಥ ಬುದ್ಧಿಹೀನರು ನೀವು, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವುದರಲ್ಲಿ ಮಂದ ಹೃದಯದವರೇ!
Kisha Yesu akawaambia, “Mbona mu wapumbavu kiasi hicho na mioyo yenu ni mizito hivyo kusadiki yote yaliyonenwa na manabii?
26 ಶ್ರಮೆಗಳನ್ನು ಅನುಭವಿಸಿದ ಮೇಲೆ ಕ್ರಿಸ್ತನು ಮಹಿಮೆಯಲ್ಲಿ ಪ್ರವೇಶಿಸುವುದು ಅಗತ್ಯವಾಗಿತ್ತಲ್ಲವೇ?” ಎಂದು ಹೇಳಿ,
Je, haikumpasa Kristo kuteswa, na hivyo aingie katika utukufu wake?”
27 ಮೋಶೆಯ ಮತ್ತು ಎಲ್ಲಾ ಪ್ರವಾದಿಗಳಿಂದ ಆರಂಭಿಸಿ, ಪವಿತ್ರ ವೇದಗಳಲ್ಲಿ ತನ್ನ ವಿಷಯವಾಗಿ ಬರೆದವುಗಳನ್ನು ಯೇಸು ಅವರಿಗೆ ವಿವರಿಸಿದರು.
Akawafafanulia mambo yote yaliyomhusu yeye katika Maandiko Matakatifu kuanzia Mose hadi manabii wote.
28 ಅವರು ಹೋಗಬೇಕಾಗಿದ್ದ ಹಳ್ಳಿಯನ್ನು ಸಮೀಪಿಸುತ್ತಿದ್ದಾಗ, ಯೇಸು ಮುಂದೆ ಹೋಗುವವರಂತೆ ವರ್ತಿಸಿದರು.
Walipokikaribia kile kijiji walikokuwa wanakwenda, Yesu akafanya kana kwamba anaendelea na safari;
29 ಆದರೆ ಅವರು ಯೇಸುವಿಗೆ, “ನಮ್ಮೊಂದಿಗೆ ಇರು, ಈಗ ಸಂಜೆಯಾಯಿತು. ಕತ್ತಲಾಯಿತು,” ಎಂದು ಹೇಳಿ, ಆತನನ್ನು ಬಲವಂತ ಮಾಡಿದರು. ಆಗ ಯೇಸು ಅವರೊಂದಿಗೆ ಇರುವುದಕ್ಕಾಗಿ ಹೋದರು.
lakini wao wakamsihi wakisema, “Kaa pamoja nasi, maana kunakuchwa, na usiku unakaribia.” Basi, akaingia kijijini, akakaa pamoja nao.
30 ಯೇಸು ಆ ಇಬ್ಬರು ಶಿಷ್ಯರೊಂದಿಗೆ ಊಟಕ್ಕೆ ಕುಳಿತುಕೊಂಡಿರಲು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ, ಮುರಿದು ಅವರಿಗೆ ಕೊಟ್ಟರು.
Alipoketi kula chakula pamoja nao, akachukua mkate, akaubariki, akaumega, akawapa.
31 ಆಗ ಅವರ ಕಣ್ಣುಗಳು ತೆರೆದವು. ಅವರು ಯೇಸುವಿನ ಗುರುತು ಹಿಡಿದರು ಮತ್ತು ಯೇಸು ಅವರ ದೃಷ್ಟಿಗೆ ಅದೃಶ್ಯರಾದರು.
Mara macho yao yakafumbuliwa, wakamtambua; lakini yeye akatoweka kati yao.
32 ಅವರು ಒಬ್ಬರಿಗೊಬ್ಬರು, “ಅವರು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ, ಪವಿತ್ರ ವೇದವನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ಬೆಂಕಿಯಂತೆ ದಹಿಸಿತಲ್ಲವೇ?” ಎಂದುಕೊಂಡರು.
Basi, wakaambiana, “Je, mioyo yetu haikuwa inawaka ndani yetu wakati alipokuwa anatufafanulia Maandiko Matakatifu kule njiani?”
33 ಆ ಇಬ್ಬರು ಶಿಷ್ಯರು ಅದೇ ಗಳಿಗೆಯಲ್ಲಿ ಎದ್ದು ಯೆರೂಸಲೇಮಿಗೆ ಹಿಂದಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿಕೊಂಡಿರುವುದನ್ನು ಕಂಡರು.
Wakaondoka saa ileile, wakarudi Yerusalemu: wakawakuta wale mitume kumi na mmoja na wale wengine waliokuwa pamoja nao, wamekusanyika
34 ಅಲ್ಲಿದ್ದವರು, “ಇದು ನಿಜವೇ! ಕರ್ತದೇವರು ಜೀವಂತರಾಗಿ ಎದ್ದಿದ್ದಾರೆ ಮತ್ತು ಸೀಮೋನನಿಗೆ ಕಾಣಿಸಿಕೊಂಡಿದ್ದಾರೆ,” ಎಂದು ಹೇಳಿದರು.
wakisema, “Hakika Bwana amefufuka, amemtokea Simoni.”
35 ಆಗ ಆ ಇಬ್ಬರು ಶಿಷ್ಯರು ದಾರಿಯಲ್ಲಿ ನಡೆದವುಗಳನ್ನೂ ರೊಟ್ಟಿ ಮುರಿಯುವುದರಲ್ಲಿ ಅವರು ಹೇಗೆ ಯೇಸುವಿನ ಗುರುತು ಹಿಡಿದರೆಂದೂ ವಿವರಿಸಿದರು.
Basi, hao wafuasi wawili wakawajulisha yale yaliyowapata njiani, na jinsi walivyomtambua katika kumega mkate.
36 ಅವರೆಲ್ಲರೂ ಹೀಗೆ ಮಾತನಾಡುತ್ತಿರುವಾಗ, ಯೇಸು ತಾವೇ ಅವರ ನಡುವೆ ನಿಂತು ಅವರಿಗೆ, “ನಿಮಗೆ ಸಮಾಧಾನವಾಗಲಿ,” ಎಂದರು.
Wanafunzi wote wawili walipokuwa wakiwaambia hayo, Yesu mwenyewe akasimama kati yao, akawaambia “Amani kwenu.”
37 ಅವರು ತಾವು ಕಾಣುತ್ತಿರುವುದು ಭೂತವೆಂದು ಭಾವಿಸಿ, ದಿಗಿಲುಬಿದ್ದು ಭಯಹಿಡಿದವರಾದರು.
Wakashtuka na kushikwa na hofu wakidhani wameona mzimu.
38 ಆದರೆ ಯೇಸು ಅವರಿಗೆ, “ಏಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಸಂಶಯಗಳು ಹುಟ್ಟುವುದು ಏಕೆ?
Lakini yeye akawaambia, “Kwa nini mnafadhaika? Mbona mnakuwa na mashaka mioyoni mwenu?
39 ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ. ನಾನೇ ಆತನು! ನನ್ನನ್ನು ಮುಟ್ಟಿ ನೋಡಿರಿ; ನೀವು ಕಾಣುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ,” ಎಂದರು.
Angalieni mikono na miguu yangu, ya kwamba ni mimi mwenyewe. Nipapaseni mkanione, maana mzimu hauna mwili na mifupa kama mnionavyo.”
40 ಹೀಗೆ ಯೇಸು ಮಾತನಾಡಿದ ಮೇಲೆ, ತನ್ನ ಕೈಗಳನ್ನು ತನ್ನ ಕಾಲುಗಳನ್ನು ಅವರಿಗೆ ತೋರಿಸಿದರು.
Baada ya kusema hayo, akawaonyesha mikono na miguu.
41 ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರುವಾಗ ಯೇಸು ಅವರಿಗೆ, “ನಿಮ್ಮಲ್ಲಿ ಆಹಾರವೇನಾದರೂ ಇದೆಯೋ?” ಎಂದು ಕೇಳಿದರು.
Wakiwa bado katika hali ya kutosadiki kwa sababu ya furaha yao, na wakiwa wanastaajabu, akawauliza, “Mnacho chakula chochote hapa?”
42 ಅವರು ಯೇಸುವಿಗೆ ಒಂದು ತುಂಡು ಸುಟ್ಟ ಮೀನನ್ನು ಕೊಟ್ಟರು.
Wakampa kipande cha samaki wa kuokwa.
43 ಯೇಸು ತೆಗೆದುಕೊಂಡು ಅವರ ಮುಂದೆ ತಿಂದರು.
Akakichukua, akala, wote wakimwona.
44 ಯೇಸು ಶಿಷ್ಯರಿಗೆ, “ಮೋಶೆಯ ನಿಯಮದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆದಿರುವುದೆಲ್ಲವೂ ನೆರವೇರುವುದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ನಿಮಗೆ ಹೇಳಿದ್ದೇನೆ,” ಎಂದರು.
Halafu akawaambia, “Hii ndiyo maana ya maneno niliyowaambia nilipokuwa pamoja nanyi: kwamba ilikuwa lazima kukamilisha yote yaliyoandikwa juu yangu katika Sheria ya Mose na katika vitabu vya manabii na katika kitabu cha Zaburi.”
45 ತರುವಾಯ ಅವರು ಪವಿತ್ರ ವೇದಗಳನ್ನು ಅರ್ಥಮಾಡಿಕೊಳ್ಳುವಂತೆ ಯೇಸು ಅವರ ಬುದ್ಧಿಯನ್ನು ತೆರೆದರು.
Kisha, akaziangazia akili zao ili wapate kuelewa Maandiko Matakatifu.
46 ಯೇಸು ಅವರಿಗೆ, “ಕ್ರಿಸ್ತನು ಹೀಗೆ ಬಾಧೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವುದು ಅಗತ್ಯವಾಗಿತ್ತೆಂತಲೂ
Akawaambia, “Ndivyo ilivyoandikwa, kwamba Kristo atateswa na siku ya tatu atafufuka kutoka wafu,
47 ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ.
na kwamba ni lazima, kwa jina lake, mataifa yote kuanzia na Yerusalemu yahubiriwe juu ya kutubu na kusamehewa dhambi.
48 ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾಗಿದ್ದೀರಿ.
Ninyi ni mashahidi wa mambo hayo.
49 ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮಗೆ ಕಳುಹಿಸುವೆನು; ಆದರೆ ನೀವು ಪರಲೋಕದ ಶಕ್ತಿಯನ್ನು ಹೊದಿಸುವ ತನಕ, ಈ ಪಟ್ಟಣದಲ್ಲಿಯೇ ಕಾದುಕೊಂಡಿರಿ,” ಎಂದರು.
Nami mwenyewe nitawapelekeeni yule ambaye Baba aliahidi kumtuma, lakini ngojeni huku mjini mpaka mtakapopewa ile nguvu itokayo juu.”
50 ಯೇಸು ಶಿಷ್ಯರನ್ನು ಬೇಥಾನ್ಯದವರೆಗೆ ಕರೆದುಕೊಂಡು ಹೋಗಿ, ತಮ್ಮ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದರು.
Kisha akawaongoza nje ya mji hadi Bethania, akainua mikono yake juu, akawabariki.
51 ಯೇಸು ಅವರನ್ನು ಆಶೀರ್ವದಿಸುತ್ತಿರುವಾಗಲೇ ಅವರನ್ನು ಬಿಟ್ಟು ಮೇಲೆ ಪರಲೋಕಕ್ಕೆ ಏರಿದರು.
Alipokuwa anawabariki, akawaacha; akachukuliwa mbinguni.
52 ಆಗ ಶಿಷ್ಯರು ಯೇಸುವನ್ನು ಆರಾಧಿಸಿ, ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂದಿರುಗಿದರು.
Wao wakamwabudu, wakarudi Yerusalemu wakiwa na furaha kubwa:
53 ಅವರು ಯಾವಾಗಲೂ ದೇವಾಲಯದಲ್ಲಿ, ದೇವರನ್ನು ಸ್ತುತಿಸುತ್ತಾ ಇದ್ದರು.
wakakaa muda wote Hekaluni wakimsifu Mungu.

< ಲೂಕನು 24 >