< ಲೂಕನು 3 >

1 ಕೈಸರ್ ತಿಬೇರಿಯನ ಆಳ್ವಿಕೆಯ ಕಾಲದ ಹದಿನೈದನೆಯ ವರ್ಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾಯಕ್ಕೆ ಚತುರಾಧಿಪತಿಯೂ ಅವನ ಸಹೋದರ ಫಿಲಿಪ್ಪನು ಇತುರಾಯ ಮತ್ತು ತ್ರಕೋನಿತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾಧಿಪತಿಯೂ ಆಗಿದ್ದಾಗ,
A cikin shekara ta goma sha biyar da Tibariyus Kaisar ke mulki, Bilatus Babunti kuma ke jagorar Yahudiya, Hirudus yana sarautar Galili, dan'uwansa Filibus yana sarautar yankin Ituriya da Tirakonitis, Lisaniyas kuma na sarautar yankin Abiliya,
2 ಅನ್ನನು ಮತ್ತು ಕಾಯಫನು ಮಹಾಯಾಜಕರು ಆಗಿದ್ದ ಸಮಯದಲ್ಲಿ, ಅರಣ್ಯದಲ್ಲಿದ್ದ ಜಕರೀಯನ ಮಗ ಯೋಹಾನನಿಗೆ ದೇವರ ವಾಕ್ಯವುಂಟಾಯಿತು.
kuma zamanin da Hanana da Kayafa suke manyan firistoci, maganar Allah ta zo wurin Yahaya dan Zakariya, a cikin jeji.
3 ಅವನು ಯೊರ್ದನ್ ನದಿಯ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು, ಪಾಪಗಳ ಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಪಡೆಯುವದರ ಕುರಿತು ಸಾರಿ ಹೇಳಿದನು.
Ya yi tafiya cikin dukan yankuna da ke kewaye da Kogin Urdun, yana wa'azin baftismar tuba domin gafarar zunubai.
4 ಇದರ ಬಗ್ಗೆ ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಮುಂಚಿತವಾಗಿ ಹೀಗೆಂದು ಬರೆದಿದೆ: “ಅರಣ್ಯದಲ್ಲಿ ಕೂಗುವವನ ಸ್ವರವು, ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ.
Kamar yadda aka rubuta a cikin littafin annabi Ishaya, “Ga muryan wani yana kira a cikin jeji, 'Shirya hanyar Ubangiji, ka daidaita tafarkunsa!
5 ಪ್ರತಿಯೊಂದು ಹಳ್ಳಕೊಳ್ಳಗಳೂ ಭರ್ತಿಯಾಗಬೇಕು, ಎಲ್ಲಾ ಬೆಟ್ಟಗುಡ್ಡಗಳು ನೆಲಸಮವಾಗಬೇಕು; ಡೊಂಕಾದ ರಸ್ತೆಗಳು ನೆಟ್ಟಗಾಗಬೇಕು, ಮತ್ತು ಕೊರಕಲಾದ ದಾರಿಗಳು ಸರಾಗವಾಗಬೇಕು;
Za a cika kowani kwari, za a fasa kowani dutse a kuma baje kowani tudu, za a mike karkatattun hanyoyi, za a cike hanyoyi masu gargada,
6 ಮಾನವರೆಲ್ಲರೂ ದೇವರ ರಕ್ಷಣೆಯನ್ನು ಕಾಣುವರು.’”
kuma dukan mutane za su ga ceton Allah.”
7 ಆಗ ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ, ಯೋಹಾನನು, “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?
Sai Yahaya ya kara fada wa taron jama'ar da ke zuwa domin ya yi masu baftisma, “Ku 'ya'yan macizai masu dafi, wa ya gargadeku ku guje wa fushin nan mai zuwa?
8 ಹಾಗಾದರೆ ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ,’ ಎಂದು ನಿಮ್ಮೊಳಗೆ ಕೊಚ್ಚಿಕೊಳ್ಳಬೇಡಿರಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಮಕ್ಕಳನ್ನು ಹುಟ್ಟಿಸಲು ಶಕ್ತರೆಂದು ನಾನು ನಿಮಗೆ ಹೇಳುತ್ತೇನೆ.
Ku ba da 'ya'ya da sun cancanci tuba, kada ku kuma fara cewa a cikinku, 'Muna da Ibrahim a matsayin Ubanmu', domin ina gaya maku, Allah yana iya ta da wa Ibrahim 'ya'ya daga cikin wadannan duwatsu.
9 ಮರಗಳ ಬೇರಿಗೆ ಈಗಾಗಲೇ ಕೊಡಲಿ ಬಿದ್ದಿದೆ, ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕಲಾಗುವುದು,” ಎಂದು ಹೇಳಿದನು.
Yanzu kuwa, an rigaya an sa gatari a gindin itatuwa. Sabili da haka, duk itacen da bai ba da 'ya'ya masu kyau ba za a sare shi kasa a kuma jefa shi cikin wuta.”
10 ಆಗ ಜನರು, “ಹಾಗಾದರೆ ನಾವೇನು ಮಾಡಬೇಕು?” ಎಂದು ಕೇಳಿದರು.
Sai mutanen da ke cikin taron jama'ar suka tambaye shi cewa, “To me za mu yi?”
11 ಅದಕ್ಕೆ ಯೋಹಾನನು ಉತ್ತರವಾಗಿ, “ಎರಡು ಅಂಗಿಗಳಿದ್ದರೆ ಇಲ್ಲದವನಿಗೆ ಒಂದನ್ನು ಕೊಡಲಿ, ಆಹಾರವುಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಹೇಳಿದನು.
Ya amsa ya ce masu, “Idan wani yana da taguwa biyu, sai ya ba wanda bashi da ita daya, kuma wanda yake da abinci ya yi haka nan.”
12 ತರುವಾಯ ಸುಂಕದವರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಬಂದು ಯೋಹಾನನಿಗೆ, “ಬೋಧಕರೇ, ನಾವೇನು ಮಾಡಬೇಕು?” ಎಂದು ಕೇಳಿದರು.
Masu karban haraji ma suka zo domin a yi masu baftisma, suka ce masa, “Malam, me za mu yi?”
13 ಅದಕ್ಕೆ ಯೋಹಾನನು ಅವರಿಗೆ, “ನಿಮಗೆ ಆಜ್ಞಾಪಿಸಿದ್ದಕ್ಕಿಂತ ಹೆಚ್ಚೇನೂ ವಸೂಲಿ ಮಾಡಬೇಡಿರಿ,” ಎಂದನು.
Ya ce masu, “Kada ku karba kudi fiye da yadda aka umarce ku.”
14 ಅದರಂತೆಯೇ ಸೈನಿಕರು, “ನಾವೇನು ಮಾಡಬೇಕು?” ಎಂದು ಕೇಳಿದರು. ಅದಕ್ಕೆ ಯೋಹಾನನು, “ಯಾರನ್ನೂ ಬೆದರಿಸಿ ಹಣ ತೆಗೆದುಕೊಳ್ಳಬೇಡಿರಿ. ಯಾರ ಮೇಲೆಯೂ ಸುಳ್ಳು ದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ,” ಎಂದು ಹೇಳಿದನು.
Wasu sojoji ma suka tambaye shi cewa, “To, mu fa? Yaya za mu yi?” Ya ce masu, “Kada ku kwace wa wani kudi, kada ku kuma yi wa wani zargin karya. Ku dogara ga albashinku.”
15 ಆಗ ಜನರು ಕ್ರಿಸ್ತನಿಗಾಗಿ ಎದುರುನೋಡುತ್ತಾ ಇದ್ದದ್ದರಿಂದ, ಯೋಹಾನನೇ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು.
Ana nan da mutane ke sauraron zuwan Almasihu, kowa yana ta tunani a zuciyar sa game da Yahaya, ko shi ne Almasihu.
16 ಯೋಹಾನನು ಉತ್ತರವಾಗಿ ಅವರೆಲ್ಲರಿಗೆ: “ನಾನಂತೂ ನಿಮಗೆ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನಗಿಂತ ಶಕ್ತರೊಬ್ಬರು ಬರುತ್ತಾರೆ, ಅವರ ಪಾದರಕ್ಷೆಗಳ ದಾರವನ್ನು ಬಿಚ್ಚುವ ಗುಲಾಮನಾಗಿರುವುದಕ್ಕೂ ನಾನು ಯೋಗ್ಯನಲ್ಲ. ಅವರು ಪವಿತ್ರಾತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ದೀಕ್ಷಾಸ್ನಾನ ಮಾಡಿಸುವರು.
Yahaya ya amsa ya ce masu duka, “Game da ni dai, na yi maku baftisma da ruwa, amma akwai wani tafiye wanda ya fi ni iko, ban ma isa in kwance maballin takalmansa ba. Shi zai yi maku baftisma da Ruhu Mai Tsarki da kuma wuta.
17 ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣವನ್ನು ಶುದ್ಧಮಾಡಿ ಗೋಧಿಯನ್ನು ತಮ್ಮ ಕಣಜದಲ್ಲಿ ಕೂಡಿಸುವರು. ಆದರೆ ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.
Kwaryar shikarsa na hanun sa domin ya share masussukarsa da kyau ya kuma tara alkama a cikin rumbunsa. Amma zai kona buntun da wuta marar mutuwa.
18 ಯೋಹಾನನು ಇನ್ನೂ ಅನೇಕ ರೀತಿಗಳಿಂದ ಜನರನ್ನು ಎಚ್ಚರಿಸಿ ಅವರಿಗೆ ಸುವಾರ್ತೆಯನ್ನು ಸಾರುತ್ತಿದ್ದನು.
Da gargadi masu yawa ya yi wa mutanen wa'azin bishara.
19 ಚತುರಾಧಿಪತಿಯಾದ ಹೆರೋದನು, ತನ್ನ ಸಹೋದರ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಇಟ್ಟುಕೊಂಡಿದ್ದನು ಮತ್ತು ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿ ಯೋಹಾನನು ಅವನನ್ನು ಬಹಿರಂಗವಾಗಿ ಗದರಿಸಿದ್ದರಿಂದ,
Yahaya kuma ya tsauta wa sarki Hirudus domin ya auri matar dan'uwansa, Hiruduya, da kuma sauran abubuwan da Hirudus ya yi.
20 ಹೆರೋದನು ಯೋಹಾನನನ್ನು ಸೆರೆಯಲ್ಲಿ ಬಂಧಿಸಿ, ತನ್ನ ಎಲ್ಲಾ ದುಷ್ಕೃತ್ಯಗಳೊಂದಿಗೆ ಮತ್ತೊಂದನ್ನು ಕೂಡಿಸಿದ್ದನು.
Amma Hirudus ya kara yin wani mugun abu. Ya sa an kulle Yahaya a cikin kurkuku.
21 ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು, ಆಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥಿಸುತ್ತಿರುವಲ್ಲಿ, ಸ್ವರ್ಗವು ತೆರೆಯಿತು.
Ana nan, lokacin da ake yiwa dukan mutane baftisma, aka yiwa Yesu mai baftisma. Lokacin da yake yin addu'a, sai sama ta bude,
22 ಆಗ ಪವಿತ್ರಾತ್ಮರು ದೇಹಾಕಾರವಾಗಿ ಪಾರಿವಾಳದಂತೆ ಯೇಸುವಿನ ಮೇಲೆ ಇಳಿದರು. ಆಗ, “ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ,” ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.
kuma Ruhu Mai Tsarki ya sauko masa a kamanin kurciya, sai wata murya ta fito daga sama, “Kai ne kaunataccen Da na. Ina jin dadin ka.”
23 ಯೇಸು ಸೇವೆಯನ್ನು ಪ್ರಾರಂಭಿಸಿದಾಗ ಹೆಚ್ಚು ಕಡಿಮೆ ಮೂವತ್ತು ವರ್ಷದವರಾಗಿದ್ದರು. ಯೇಸು ಜನರ ಎಣಿಕೆಯಲ್ಲಿ ಯೋಸೇಫನ ಮಗನು. ಯೋಸೇಫನು, ಹೇಲೀಯ ಮಗನು,
Ana nan Yesu da kansa, da ya fara, yana kimanin shekara talatin. Shi dan (kamar yadda ake tsammani) Yusufu ne, dan Heli,
24 ಹೇಲೀಯನು ಮತ್ಥಾತನ ಮಗನು, ಮತ್ಥಾತನನು ಲೇವಿಯ ಮಗನು, ಲೇವಿಯನು ಮೆಲ್ಖಿಯ ಮಗನು, ಮೆಲ್ಖಿಯನು ಯನ್ನಾಯನ ಮಗನು, ಯನ್ನಾಯನು ಯೋಸೇಫನ ಮಗನು,
dan Matat, dan Lawi, dan Malki, dan Yanna, dan Yusufu,
25 ಯೋಸೇಫನು ಮತ್ತಥೀಯನ ಮಗನು, ಮತ್ತಥೀಯನು ಆಮೋಸನ ಮಗನು, ಆಮೋಸನು ನಹೂಮನ ಮಗನು, ನಹೂಮನು ಎಸ್ಲಿಯ ಮಗನು, ಎಸ್ಲಿಯನು ನಗ್ಗಾಯನ ಮಗನು,
dan Matatiya, dan Amos, dan Nahum, dan Hasli, dan Najjaya,
26 ನಗ್ಗಾಯನು ಮಹಾಥನ ಮಗನು, ಮಹಾಥನು ಮತ್ತಥೀಯನ ಮಗನು, ಮತ್ತಥೀಯನು ಶಿಮೀಯಿನ ಮಗನು, ಶಿಮೀಯಿನು ಯೊಸೇಖನ ಮಗನು, ಯೊಸೇಖನು ಯೋದನ ಮಗನು,
dan Ma'ata, dan Matatiya, dan Shimeya, dan Yuseka, dan Yoda,
27 ಯೋದನು ಯೋಹಾನನ ಮಗನು, ಯೋಹಾನನು ರೇಸನ ಮಗನು, ರೇಸನು ಜೆರುಬ್ಬಾಬೆಲನ ಮಗನು, ಜೆರುಬ್ಬಾಬೆಲನು ಶೆಯಲ್ತೀಯೇಲನ ಮಗನು, ಶೆಯಲ್ತಿಯೇಲನು ನೇರಿಯನ ಮಗನು,
dan Yowana, dan Resa, dan Zarubabila, dan Shiyaltiyel, dan Niri,
28 ನೇರಿಯನು ಮೆಲ್ಖಿಯನ ಮಗನು, ಮೆಲ್ಖಿಯನು ಅದ್ದಿಯನ ಮಗನು, ಅದ್ದಿಯನು ಕೋಸಾಮನ ಮಗನು, ಕೋಸಾಮನು ಎಲ್ಮದಾಮನ ಮಗನು, ಎಲ್ಮದಾಮನು ಏರನ ಮಗನು,
dan Malki, dan Addi, dan Kosama, dan Almadama, dan Er,
29 ಏರನು ಯೆಹೋಷುವನ ಮಗನು, ಯೆಹೋಷುವನು ಎಲೀಯೆಜೆರನ ಮಗನು, ಎಲಿಯೇಜರನು ಯೋರೈಮನ ಮಗನು, ಯೋರೈಮನು ಮತ್ಥಾತನ ಮಗನು, ಮತ್ಥಾತನು ಲೇವಿಯನ ಮಗನು,
dan Yosi, dan Aliyeza, dan Yorima, dan Matat, dan Lawi,
30 ಲೇವಿಯನು ಸಿಮಿಯೋನನ ಮಗನು, ಸಿಮಿಯೋನನು ಯೂದನ ಮಗನು, ಯೂದನು ಯೋಸೇಫನ ಮಗನು, ಯೋಸೇಫನು ಯೋನಾಮನ ಮಗನು, ಯೋನಾಮನು ಎಲಿಯಕೀಮನ ಮಗನು,
dan Saminu, dan Yahuda, dan Yusufu, dan Yonana, dan Aliyakima,
31 ಎಲಿಯಕೀಮನು ಮೆಲೆಯಾನ ಮಗನು, ಮೆಲೆಯಾನು ಮೆನ್ನನ ಮಗನು, ಮೆನ್ನನು ಮತ್ತಾಥನ ಮಗನು, ಮತ್ತಾಥನು ನಾತಾನನ ಮಗನು, ನಾತಾನನು ದಾವೀದನ ಮಗನು,
dan Malaya, dan Mainana, dan Matata, dan Natan, dan Dauda,
32 ದಾವೀದನು ಇಷಯನ ಮಗನು, ಇಷಯನು ಓಬೇದನ ಮಗನು, ಓಬೇದನು ಬೋವಜನ ಮಗನು, ಬೋವಜನು ಸಲ್ಮೋನನ ಮಗನು, ಸಲ್ಮೋನನು ನಹಶೋನನ ಮಗನು,
dan Yesse, dan Obida, dan Bu'aza, dan Salmon, dan Nashon,
33 ನಹಶೋನನು ಅಮ್ಮೀನಾದಾಬನ ಮಗನು, ಅಮ್ಮೀನಾದಾಬನು ಆರ್ನೈಯನ ಮಗನು, ಆರ್ನೈಯನು ಹೆಚ್ರೋನನ ಮಗನು, ಹೆಚ್ರೋನನು ಪೆರೆಸನ ಮಗನು, ಪೆರೆಸನು ಯೂದನ ಮಗನು,
dan Amminadab, dan Adimi, dan Arama, dan Hezruna, dan Feresa, dan Yahuda,
34 ಯೂದನು ಯಾಕೋಬನ ಮಗನು, ಯಾಕೋಬನು ಇಸಾಕನ ಮಗನು, ಇಸಾಕನು ಅಬ್ರಹಾಮನ ಮಗನು, ಅಬ್ರಹಾಮನು ತೇರನ ಮಗನು, ತೇರನು ನಹೋರನ ಮಗನು,
dan Yakubu, dan Ishaku, dan Ibrahim, dan Tera, dan Nahor,
35 ನಹೋರನು ಸೆರೂಗನ ಮಗನು, ಸೆರೂಗನು ರೆಗೂವನ ಮಗನು, ರೆಗೂವನು ಪೆಲೆಗನ ಮಗನು, ಪೆಲೆಗನು ಹೆಬೆರನ ಮಗನು, ಹೆಬೆರನು ಶೆಲಹ ಮಗನು,
dan Serug, dan Reyu, dan Feleg, dan Abiru, dan Shela,
36 ಶೆಲಹ ಕಯಿನಾನನ ಮಗನು, ಕಯಿನಾನನು ಅರ್ಫಕ್ಷಾದನ ಮಗನು, ಅರ್ಫಕ್ಷಾದನು ಶೇಮನ ಮಗನು, ಶೇಮನು ನೋಹನ ಮಗನು, ನೋಹನು ಲಾಮೆಕನ ಮಗನು,
dan Kainana, dan Arfakshada, dan Shem, dan Nuhu, dan Lamek,
37 ಲಾಮೆಕನು ಮತೂಷಲನ ಮಗನು, ಮತೂಷಲನು ಹನೋಕನ ಮಗನು, ಹನೋಕನು ಯೆರೆದನ ಮಗನು, ಯೆರೆದನು ಮಹಲಲೇಲನ ಮಗನು, ಮಹಲಲೇಲನು ಕಯಿನಾನನ ಮಗನು,
dan Metusela, dan Anuhu, dan Yaret, dan Mahalel, dan Kainana,
38 ಕಯಿನಾನನು ಎನೋಷನ ಮಗನು, ಎನೋಷನು ಸೇಥನ ಮಗನು, ಸೇತನು ಆದಾಮನ ಮಗನು, ಆದಾಮನು ದೇವರ ಮಗನು.
dan Enosh, dan Shitu, dan Adamu, dan Allah.

< ಲೂಕನು 3 >