< ಲೂಕನು 8 >

1 ಇದಾದ ಮೇಲೆ, ಯೇಸು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಹೋಗಿ, ದೇವರ ರಾಜ್ಯದ ವಿಷಯ ಪ್ರಚಾರ ಮಾಡುತ್ತಾ ಸುವಾರ್ತೆಯನ್ನು ಸಾರುತ್ತಾ ಇದ್ದರು. ಹನ್ನೆರಡು ಮಂದಿ ಶಿಷ್ಯರು ಅವರೊಂದಿಗೆ ಇದ್ದರು.
不久之后,耶稣周游各城各村讲道,宣扬上帝之国的福音,十二门徒与他同行。
2 ಇದಲ್ಲದೆ ದುರಾತ್ಮಗಳಿಂದಲೂ ರೋಗಗಳಿಂದಲೂ ಬಿಡುಗಡೆ ಹೊಂದಿದ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟುಹೋಗಿದ್ದ ಮಗ್ದಲಿನ ಎಂದು ಕರೆಯಲಾದ ಮರಿಯಳು,
同行的还有几名女人,都曾受耶稣驱赶恶鬼和治愈疾病。抹大拉的玛利亚就是其中之一,耶稣从她身上驱赶了七个恶鬼。
3 ಹೆರೋದನ ಅರಮನೆಯ ಗೃಹ ನಿರ್ವಾಹಕನಾದ ಕೂಜನ ಪತ್ನಿ ಯೋಹಾನಳು, ಸುಸನ್ನಳು ಮತ್ತು ಬೇರೆ ಅನೇಕರು ತಮ್ಮ ಆಸ್ತಿಯಿಂದ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರಮಾಡುತ್ತಿದ್ದರು.
还有约亚拿,她是希律的管家古撒的妻子。此外还有苏珊娜和其他女性,她们都在用自己的财物供养耶稣和门徒。
4 ಪ್ರತಿಯೊಂದು ಪಟ್ಟಣದಿಂದ ಬಹುಜನರು ಅವರ ಬಳಿಗೆ ಒಟ್ಟಾಗಿ ಸೇರಿ ಬರಲು ಯೇಸು ಒಂದು ಸಾಮ್ಯವನ್ನು ಅವರಿಗೆ ಹೇಳಿದರು.
当时有许多人聚在一起,还有人从其他城市来到耶稣这里,于是耶稣就讲了一个比喻故事:
5 “ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುತ್ತಿರುವಾಗ, ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು; ಅವು ಕಾಲ್ತುಳಿತಕ್ಕೆ ಒಳಗಾದವು, ಆಕಾಶದ ಪಕ್ಷಿಗಳು ಅವುಗಳನ್ನು ಹೆಕ್ಕಿ ತಿಂದವು.
“有一个农夫出去撒种,这个过程中,有的种子落在路旁,被人踩踏或被空中的飞鸟吃掉。
6 ಇದಲ್ಲದೆ ಕೆಲವು ಬೀಜಗಳು ಕಲ್ಲುಭೂಮಿಯ ಮೇಲೆ ಬಿದ್ದವು, ಅವು ಮೊಳೆತ ಕೂಡಲೇ ತೇವ ಇಲ್ಲದಿರುವ ಕಾರಣ ಒಣಗಿಹೋದವು.
有的种子落在石头地上,刚长出来就枯萎了,因为得不着滋润。
7 ಇನ್ನು ಕೆಲವು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು, ಆಗ ಮುಳ್ಳುಗಿಡಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
有的落在荆棘丛中,荆棘生长的过程中,让种子无法长大。
8 ಉಳಿದ ಬೀಜಗಳು ಒಳ್ಳೆಯ ನೆಲದ ಮೇಲೆ ಬಿದ್ದವು. ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು.” ಇದನ್ನು ಯೇಸು ಹೇಳಿ, “ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ,” ಎಂದು ಒತ್ತಿ ಹೇಳಿದರು.
有的落在肥沃土壤里,于是就蓬勃生长,结出百倍的果实。”耶稣说完这番话,便大声说:“如果你有耳朵,就好好听着!”
9 ಯೇಸುವಿನ ಶಿಷ್ಯರು ಅವರನ್ನು ಈ ಸಾಮ್ಯದ ಅರ್ಥ ಏನಾಗಿರಬಹುದು? ಎಂದು ಕೇಳಿದರು.
但门徒还是问他:“这比喻是什么意思?。”
10 ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವುದಕ್ಕೆ ನಿಮಗೆ ಅನುಮತಿಸಲಾಗಿದೆ, ಆದರೆ ಉಳಿದವರಿಗೆ, “‘ಅವರು ಕಣ್ಣಾರೆ ನೋಡಿದರೂ ಕಾಣದಂತೆಯೂ; ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯಗಳಲ್ಲಿ ಮರೆಯಾಗಿವೆ.’
他说:“上帝之国的奥秘,只给你们知道。对其他人只能用比喻,‘让他们看,他们却看不见,让他们听,他们却听不懂。’
11 “ಆ ಸಾಮ್ಯದ ಅರ್ಥ ಹೀಗಿದೆ: ಬೀಜ ಎಂದರೆ ದೇವರ ವಾಕ್ಯ.
这比喻的含义是:种子是上帝之道。
12 ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆ ಹೊಂದಿಕೊಳ್ಳದಂತೆ, ಪಿಶಾಚನು ಬಂದು ಅವರ ಹೃದಯದೊಳಗಿಂದ, ಆ ವಾಕ್ಯವನ್ನು ತೆಗೆದುಬಿಡುತ್ತಾನೆ, ಇವರೇ ಆ ಬೀಜಗಳು ಬಿದ್ದ ಪಕ್ಕದ ದಾರಿಯಾಗಿದ್ದಾರೆ.
落在路旁的种子,意思是人们听到正道后,魔鬼随即来到,将真理从他们思想中夺走,因为魔鬼害怕他们因信任上帝而获得救赎。
13 ಬೀಜ ಬಿದ್ದ ಕಲ್ಲುಭೂಮಿಯು ಯಾರೆಂದರೆ ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಸ್ವೀಕರಿಸುವವರು, ಆದರೆ ಇವರು ಬೇರಿಲ್ಲದಿರುವುದರಿಂದ, ಸ್ವಲ್ಪಕಾಲ ನಂಬಿ, ಶೋಧನೆ ಬಂದಾಗ ಬಿದ್ದುಹೋಗುವವರು.
落在石头地中的种子,意思是人们听到正道后高兴地接受,但是这道并未在思想中扎根,他们只是暂时相信,遭遇困难的时候就会放弃。
14 ಬೀಜ ಬಿದ್ದ ಮುಳ್ಳುನೆಲವು ಯಾರೆಂದರೆ ವಾಕ್ಯವನ್ನು ಕೇಳಿದ ಮೇಲೆ ಮುಂದುವರಿದು, ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಮತ್ತು ಭೋಗಗಳಿಂದಲೂ ಅದುಮಿಬಿಟ್ಟು, ಪರಿಪಕ್ವತೆಗೆ ಫಲಕೊಡದಿದ್ದವರು.
落在荆棘中的种子,意思是人们听到了正道,但他们却被今世的忧虑、财富和欢喜所占据,无法产生任何结果。
15 ಆದರೆ ಬೀಜ ಬಿದ್ದ ಒಳ್ಳೆಯ ಭೂಮಿಯವರು ಯಾರೆಂದರೆ ಯಥಾರ್ಥವಾದ ಒಳ್ಳೆಯ ಹೃದಯದಿಂದ, ವಾಕ್ಯವನ್ನು ಕೇಳಿ ಅದನ್ನು ಕೈಕೊಂಡು, ತಾಳ್ಮೆಯಿಂದ ಫಲಿಸುವವರೇ,” ಎಂದು ಹೇಳಿದರು.
落在肥沃土壤里的种子,意思是那些为人诚实、行为正确的人,他们听到了真理的正道,然后始终坚守,熬过困难,直到结出果实。
16 “ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆಯಿಂದ ಮುಚ್ಚುವುದಿಲ್ಲ, ಇಲ್ಲವೆ ಮಂಚದ ಕೆಳಗೆ ಇಡುವುದಿಲ್ಲ. ಆದರೆ ಮನೆಯೊಳಗೆ ಪ್ರವೇಶಿಸುವವರು ಬೆಳಕನ್ನು ಕಾಣುವಂತೆ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
你点灯的时候不会用器皿将其盖上,也不会将灯放在床下,而是要放在灯台上,让进来的人都看得见光。
17 ಪ್ರಕಟವಾಗದಂತೆ ಯಾವುದೂ ಮರೆಯಾಗಿರುವುದಿಲ್ಲ, ಬೆಳಕಿಗೆ ಬಾರದೆ ಇರುವ ರಹಸ್ಯವು ಯಾವುದೂ ಇಲ್ಲ.
因为隐藏之事最终会显现,遮蔽之事最终会暴露,为众人所知。
18 ಆದ್ದರಿಂದ ನೀವು ಕೇಳುವ ವಿಷಯಗಳಲ್ಲಿ ಎಚ್ಚರಿಕೆಯಾಗಿರಿ. ಏಕೆಂದರೆ ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು; ಇಲ್ಲದವರ ಕಡೆಯಿಂದ ತಮಗಿದೆ ಎಂದುಕೊಳ್ಳುವುದನ್ನು ಸಹ, ಅವರಿಂದ ಕಿತ್ತುಕೊಳ್ಳಲಾಗುವುದು,” ಎಂದು ಹೇಳಿದರು.
所以应留心怎样‘听’。如果你已经被给予,就会被给予更多。如果你从未被给予,就连你自以为拥有的,也会被夺走!”
19 ಯೇಸುವಿನ ತಾಯಿ ಮತ್ತು ಸಹೋದರರು ಅವರಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಅವರ ಬಳಿಗೆ ಹೋಗಲಾರದೆ ಇದ್ದರು.
耶稣的母亲和弟弟来到他那里,因为人多,所以无法上前。
20 ಆಗ ಒಬ್ಬನು ಯೇಸುವಿಗೆ, “ನಿಮ್ಮ ತಾಯಿಯೂ ಸಹೋದರರೂ ನಿಮ್ಮನ್ನು ಕಾಣಬೇಕೆಂದು, ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ,” ಎಂದನು.
有人转告耶稣:“你母亲和弟弟站在外面要见你。”
21 ಅದಕ್ಕೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನ್ನ ತಾಯಿ ಮತ್ತು ನನ್ನ ಸಹೋದರರು ಆಗಿದ್ದಾರೆ,” ಎಂದು ಹೇಳಿದರು.
他回答:“听从上帝之道并遵守之人,才是我的母亲,我的兄弟。”
22 ಒಂದು ದಿನ ಯೇಸು ತಮ್ಮ ಶಿಷ್ಯರಿಗೆ, “ನಾವು ಕೆರೆಯ ಆಚೆದಡಕ್ಕೆ ಹೋಗೋಣ,” ಎಂದು ಹೇಳಿದರು, ಆಗ ಅವರು ದೋಣಿಯನ್ನು ಹತ್ತಿ ಹೊರಟರು.
有一天,耶稣对他的门徒们说:“我们坐船到湖那边去吧。”于是他们就上船出发了。
23 ಆದರೆ ಅವರು ಪ್ರಯಾಣ ಮಾಡುತ್ತಿದ್ದಾಗ, ಯೇಸು ನಿದ್ರಿಸುತ್ತಿದ್ದರು. ಆಗ ಬಿರುಗಾಳಿಯು ಸರೋವರದ ಮೇಲೆ ಬೀಸಲು, ದೋಣಿಯು ನೀರಿನಿಂದ ತುಂಬಿದ್ದರಿಂದ, ಅವರು ಅಪಾಯಕ್ಕೊಳಗಾದರು.
在船航行的过程中,耶稣睡着了。湖上忽然刮起风暴,船体灌进大量的水,很可能会沉没。
24 ಆಗ ಶಿಷ್ಯರು ಯೇಸುವಿನ ಬಳಿ ಬಂದು ಅವರನ್ನು ಎಬ್ಬಿಸಿ, “ಗುರುವೇ, ಗುರುವೇ, ನಾವು ಮುಳುಗುತ್ತಿದ್ದೇವೆ!” ಎಂದರು. ಆಗ ಯೇಸು ಎದ್ದು ಬಿರುಗಾಳಿಯನ್ನೂ ರಭಸವಾಗಿ ಬರುತ್ತಿದ್ದ ಅಲೆಗಳನ್ನೂ ಗದರಿಸಿದರು; ಆಗ ಬಿರುಗಾಳಿಯು ನಿಂತು ಹೋಗಿ, ಎಲ್ಲಾ ಪ್ರಶಾಂತವಾಯಿತು.
门徒叫醒耶稣,说:“主人!主人啊!我们要沉没了!”耶稣醒过来,命令风浪退去,于是风浪就停止了,一切归于平静。
25 ಆಗ ಯೇಸು ತಮ್ಮ ಶಿಷ್ಯರಿಗೆ, “ನಿಮ್ಮ ನಂಬಿಕೆ ಎಲ್ಲಿ?” ಎಂದರು. ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು, “ಇವರು ಯಾರಿರಬಹುದು? ಗಾಳಿಗೂ ನೀರಿಗೂ ಸಹ ಅಪ್ಪಣೆ ಕೊಡುತ್ತಾರಲ್ಲಾ. ಅವು ಇವರು ಹೇಳಿದ ಹಾಗೆ ಕೇಳುತ್ತಾವಲ್ಲಾ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
耶稣对他们说:“你们的信心到哪里去了?”他们又惧怕、又惊奇,对彼此说:“这到底是谁?他可以命令风浪,连风浪都听他的!”
26 ಅವರು ಗಲಿಲಾಯಕ್ಕೆ ಎದುರಾಗಿದ್ದ, ಗೆರಸೇನರ ಸೀಮೆಗೆ ತಲುಪಿದರು.
一行人航行来到了加利利对面,这里是格拉森人的地区。
27 ಯೇಸು ದಡಕ್ಕೆ ಸೇರಿದಾಗ, ಬಹುಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆ ಯಾವ ಮನೆಯಲ್ಲಿ ಇರದೆ ಸಮಾಧಿಯ ಗುಹೆಗಳಲ್ಲಿ ವಾಸಿಸುತ್ತಿದ್ದ ಒಬ್ಬ ಮನುಷ್ಯನನ್ನು ಯೇಸು ಸಂಧಿಸಿದರು.
耶稣一上岸,迎面就看到城里一个被恶鬼附体之人。很久以来,这个人都没有穿衣服,也没有住在自己的家中,只能栖身坟墓。
28 ಅವನು ಯೇಸುವನ್ನು ಕಂಡಾಗ, ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಮಹೋನ್ನತ ದೇವಪುತ್ರರೇ, ನನ್ನ ಗೊಡವೆ ನಿಮಗೆ ಏಕೆ? ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.
他一见耶稣,就俯伏在耶稣脚边,大声说:“至高上帝之子耶稣,你想要我怎样呢?不要折磨我,求你!”
29 ಏಕೆಂದರೆ, ದೆವ್ವಕ್ಕೆ ಅವನಿಂದ ಹೊರಗೆ ಬರಬೇಕೆಂದು ಯೇಸು ಅಪ್ಪಣೆ ಕೊಟ್ಟಿದ್ದರು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿದ್ದುದರಿಂದ, ಅವನು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿತನಾದರೂ ಅವನು ಆ ಬಂಧನಗಳನ್ನು ಮುರಿದು ಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಏಕಾಂತ ಸ್ಥಳಕ್ಕೆ ಓಡಿಸಿಕೊಂಡು ಹೋಗುತ್ತಿತ್ತು.
因为耶稣曾对这人驱赶过恶灵,但这恶灵总是附在他身上,人们不得不把他用铁链和脚炼捆住,再派人看管。但他总是能挣断锁链,在魔鬼的驱使下进入荒野。
30 ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದರು. ಅದಕ್ಕವನು, “ಸೇನೆ,” ಎಂದನು. ಏಕೆಂದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು.
耶稣问他:“你叫什么名字?”他说:“众鬼。”因为有很多恶鬼附体在他的身上。
31 ಅವು ತಮ್ಮನ್ನು ಪಾತಾಳಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಯೇಸುವನ್ನು ಬೇಡಿಕೊಂಡವು. (Abyssos g12)
众鬼求耶稣,不要赶它们进入无底深渊。 (Abyssos g12)
32 ಆಗ ಅಲ್ಲಿ ಬೆಟ್ಟದ ಮೇಲೆ ಹಂದಿಗಳ ಹಿಂಡು ಮೇಯುತ್ತಿದ್ದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು, ಅವರು ಅವುಗಳಿಗೆ ಅನುಮತಿ ಕೊಟ್ಟರು.
附近山坡上有一大群猪正在吃东西。恶鬼们求耶稣准它们进入猪群。耶稣准许了。
33 ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು, ಹಂದಿಗಳೊಳಗೆ ಸೇರಿದವು. ಆ ಗುಂಪು ಚುರುಕಾಗಿ ಓಡಿ, ಕಡಿದಾದ ಬದಿಯಿಂದ ಸರೋವರಕ್ಕೆ ಬಿದ್ದು ಮುಳುಗಿಹೋಯಿತು.
恶鬼们就从那人身上出来,进入猪群,猪群闯下山崖,掉在海里淹死了。
34 ಹಂದಿಗಳನ್ನು ಮೇಯಿಸುತ್ತಿದ್ದವರು ನಡೆದದ್ದನ್ನು ಕಂಡು, ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ಅದನ್ನು ತಿಳಿಯಪಡಿಸಿದರು,
猪倌看见所发生的事就跑开了,到城市和乡村中讲述这件事。
35 ಆಗ ಜನರು ನಡೆದ ಸಂಗತಿ ಏನೆಂದು ಕಾಣುವುದಕ್ಕಾಗಿ ಹೊರಟು ಯೇಸುವಿನ ಬಳಿಗೆ ಬಂದರು. ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ, ಬಳಿಯಲ್ಲಿ ಕುಳಿತಿರುವುದನ್ನು ಕಂಡು ಭಯಪಟ್ಟರು.
众人纷纷过来查看发生了什么事。来到耶稣那里,看见恶鬼已经被驱赶。那人已经身穿衣服,神志清醒,坐在耶稣脚前,众人感到害怕。
36 ನಡೆದದ್ದನ್ನು ಕಂಡವರು, ಯಾವ ರೀತಿಯಲ್ಲಿ ದೆವ್ವಪೀಡಿತನಾಗಿದ್ದವನು ಮತ್ತೆ ಸ್ವಸ್ಥನಾದನೆಂದು ಅವರಿಗೆ ತಿಳಿಯಪಡಿಸಿದರು.
当时目睹这一幕的众人,把鬼附体之人如何得到治愈的经过说给大家听。
37 ಆಗ ಗೆರಸೇನರ ಸೀಮೆಯ ಸುತ್ತಮುತ್ತಲಿನ ಜನಸಮೂಹವೆಲ್ಲವು, ಬಹಳ ಭಯಹಿಡಿದವರಾದುದರಿಂದ ಅವರು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಯೇಸುವನ್ನು ಬೇಡಿಕೊಂಡರು. ಯೇಸು ದೋಣಿಯನ್ನು ಹತ್ತಿ ಹಿಂದಿರುಗಿದರು.
于是格拉森地区的人要求耶稣离开他们,因为他们感到特别恐惧。于是耶稣便上船返回。
38 ಆಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ತಾನೂ ಅವರ ಜೊತೆಯಲ್ಲಿ ಬರುವೆನೆಂದು, ಯೇಸುವನ್ನು ಬೇಡಿಕೊಂಡನು, ಆದರೆ ಯೇಸು ಅವನಿಗೆ,
被驱魔的那人想要追随耶稣,于是就求耶稣。但耶稣让他回去,说:
39 “ನೀನು ನಿನ್ನ ಮನೆಗೆ ಹಿಂದಿರುಗಿ ಹೋಗಿ ದೇವರು ನಿನಗೆ ಎಂಥಾ ಮಹಾಕಾರ್ಯಗಳನ್ನು ಮಾಡಿದ್ದಾರೆಂಬುದನ್ನು ಹೇಳು,” ಎಂದು ಅವನನ್ನು ಕಳುಹಿಸಿಬಿಟ್ಟರು. ಅವನು ತನ್ನ ಮಾರ್ಗವಾಗಿ ಹೊರಟುಹೋಗಿ ಯೇಸು ತನಗೆ ಮಾಡಿದ ಮಹಾಕಾರ್ಯಗಳನ್ನು ಊರೆಲ್ಲಾ ಸಾರಿದನು.
“你回家去吧,告诉众人上帝为你做了什么。”于是那人走遍全城,讲述耶稣为他所做的事情。
40 ಯೇಸು ಹಿಂತಿರುಗಿ ಬಂದಾಗ ಅವರ ಬರುವಿಕೆಯನ್ನು ಎದುರುನೋಡುತ್ತಿದ್ದ ಜನರೆಲ್ಲರೂ ಅವರನ್ನು ಸ್ವಾಗತಿಸಿದರು.
耶稣回来的时候,众人欢迎他,因为大家都在热切地等着他。
41 ಆಗ ಸಭಾಮಂದಿರದ ಅಧಿಕಾರಿಯಾಗಿದ್ದ, ಯಾಯೀರನೆಂಬವನು ಬಂದು ಯೇಸುವಿನ ಪಾದಗಳ ಮುಂದೆ ಅಡ್ಡಬಿದ್ದು, ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು
有一个名叫睚鲁的会堂主管,他俯伏在耶稣脚前,求耶稣去他家,
42 ಏಕೆಂದರೆ ಸುಮಾರು ಹನ್ನೆರಡು ವರ್ಷದ, ಅವನ ಒಬ್ಬಳೇ ಮಗಳು, ಸಾಯುವ ಹಾಗಿದ್ದಳು. ಯೇಸು ದಾರಿಯಲ್ಲಿ ಹೋಗುತ್ತಿದ್ದಾಗ, ಜನರು ಅವರನ್ನು ನೂಕಾಡುತ್ತಿದ್ದರು.
因为他大约 12 岁的独生女快要死了。在耶稣去往那人家中的路上,身边一直围绕着众多民众。
43 ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು. ಅವಳು ತನ್ನ ಆಸ್ತಿಯನ್ನೆಲ್ಲಾ ವೆಚ್ಚಮಾಡಿದ್ದರೂ ಆಕೆಯನ್ನು ಗುಣಪಡಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.
人群中有一个女人患有十二年的血漏病,治病花光了她所有积蓄,却始终没能医好。
44 ಅವಳು ಯೇಸುವಿನ ಹಿಂದೆ ಬಂದು ಅವರ ಉಡುಪಿನ ಅಂಚನ್ನು ಮುಟ್ಟಿದಳು, ಕೂಡಲೇ ಆಕೆಯ ರಕ್ತಸ್ರಾವವು ನಿಂತುಹೋಯಿತು.
她从人群后面挤上前来,摸着耶稣的斗篷,血立刻止住了。
45 ಯೇಸು, “ನನ್ನನ್ನು ಮುಟ್ಟಿದವರು ಯಾರು?” ಎಂದರು. ಎಲ್ಲರೂ ನಿರಾಕರಿಸಿದರು, ಪೇತ್ರನು ಯೇಸುವಿಗೆ, “ಬೋಧಕರೇ, ಇಷ್ಟೊಂದು ಜನರು ನಿಮ್ಮನ್ನು ನೂಕುತ್ತಾ ನಿಮ್ಮನ್ನು ಒತ್ತುತ್ತಿದ್ದಾರಲ್ಲಾ” ಎಂದನು.
耶稣问:“谁在触摸我?”众人都说不是自己。 彼得说:“主啊,众人都簇拥在你身边,他们推推搡搡会碰到你。”
46 ಆದರೆ ಯೇಸು, “ಯಾರೋ ಒಬ್ಬರು ನನ್ನನ್ನು ಮುಟ್ಟಿದ್ದಾರೆ; ನನ್ನಿಂದ ಗುಣಪಡಿಸುವ ಶಕ್ತಿಯು ಹೊರಟಿತೆಂದು ನನಗೆ ತಿಳಿಯಿತು,” ಎಂದರು.
耶稣回答:“一定是有人触摸我,我知道,因为一股力量从我身体流出去了。”
47 ಆ ಸ್ತ್ರೀಯು, ತಾನು ಇನ್ನು ಮರೆಮಾಡಲು ಸಾಧ್ಯವಿಲ್ಲವೆಂದು ತಿಳಿದು, ನಡುಗುತ್ತಾ ಬಂದು ಯೇಸುವಿನ ಮುಂದೆ ಅಡ್ಡಬಿದ್ದು, ಯಾವ ಕಾರಣದಿಂದ ಆಕೆಯು ಯೇಸುವನ್ನು ಮುಟ್ಟಿದಳೆಂದೂ ಹೇಗೆ ತಾನು ಕೂಡಲೇ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಅವರಿಗೆ ತಿಳಿಯಪಡಿಸಿದಳು.
那女人见不能隐瞒,就战战兢兢地走上前,俯伏在他面前,当着众人的面讲述触摸他的原因,以及如何立刻痊愈。
48 ಆಗ ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು,” ಎಂದರು.
耶稣对她说:“女儿,你的信任已经拯救了你,安心地去吧。”
49 ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಸಭಾಮಂದಿರದ ಅಧಿಕಾರಿಯಾದ ಯಾಯೀರನ ಮನೆಯಿಂದ ಒಬ್ಬನು ಬಂದು ಅಧಿಕಾರಿಗೆ, “ನಿನ್ನ ಮಗಳು ತೀರಿಹೋದಳು, ಇನ್ನೂ ಗುರುವಿಗೆ ತೊಂದರೆಪಡಿಸುವುದೇಕೆ?” ಎಂದನು.
耶稣说话的过程中,有人从会堂主管家里过来,说:“你的女儿死了,不必再劳烦老师了。”
50 ಯೇಸು ಅದನ್ನು ಕೇಳಿ, ಆ ಅಧಿಕಾರಿಗೆ, “ಭಯಪಡಬೇಡ; ನಂಬಿಕೆ ಮಾತ್ರ ಇರಲಿ, ಅವಳು ಬದುಕುವಳು,” ಎಂದು ಹೇಳಿದರು.
耶稣听见这句话,就对主管说:“不要怕,只要你有信心,她必会痊愈。”
51 ಯೇಸು ಯಾಯೀರನ ಮನೆಯೊಳಕ್ಕೆ ಬಂದಾಗ ಪೇತ್ರ, ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಬರಗೊಡಲಿಲ್ಲ.
到了主管的房子后,除了彼得、约翰、雅各和女孩的父母以外,他不准任何人与他走进屋子。
52 ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಯೇಸು, “ಅಳಬೇಡಿರಿ, ಆಕೆಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ,” ಎಂದರು.
众人都在为女孩痛哭哀号。 他说:“不要哭,她没有死,只是睡着了。”
53 ಆಕೆಯು ಸತ್ತಿದ್ದಾಳೆಂದು ತಿಳಿದು ಅಳುತ್ತಿದ್ದವರು ಯೇಸುವನ್ನು ಹಾಸ್ಯಮಾಡಿದರು.
众人知道女孩已经死了,于是就嘲笑他。
54 ಆದರೆ ಯೇಸು ಆಕೆಯ ಕೈಹಿಡಿದು, “ಮಗಳೇ, ಎದ್ದೇಳು!” ಎಂದು ಕರೆದರು.
他走进去拉着女孩的手,大声对她说:“孩子,起来!”
55 ಆಗ ಆಕೆಯ ಪ್ರಾಣವು ಹಿಂದಿರುಗಿ ಬಂತು. ಕೂಡಲೇ ಆಕೆಯು ಎದ್ದಳು. ಆಕೆಗೆ ತಿನ್ನಲು ಏನಾದರೂ ಕೊಡುವಂತೆ ಯೇಸು ಅಪ್ಪಣೆಕೊಟ್ಟರು.
于是她就死而复生,立刻站起来。耶稣吩咐众人给她东西吃。
56 ಆಕೆಯ ತಂದೆತಾಯಿಗಳು ಬೆರಗಾದರು, ಆಗ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಯೇಸು ಅವರಿಗೆ ಆಜ್ಞಾಪಿಸಿದರು.
她父母非常震惊。耶稣嘱咐他们不要把这件事告诉其他人。

< ಲೂಕನು 8 >