< ಲೂಕನು 9 >
1 ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ಎಲ್ಲಾ ದೆವ್ವಗಳನ್ನು ಓಡಿಸುವುದಕ್ಕೂ ರೋಗಗಳನ್ನು ಸ್ವಸ್ಥಮಾಡುವುದಕ್ಕೂ ಅವರಿಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು,
Исусо стидя екхэтанэ дэшудуен апостолонэн и дя лэнди зор и баримос тэ вытрадэн бэнгэн и тэ састярэн насвалимастар.
2 ಶಿಷ್ಯರು ದೇವರ ರಾಜ್ಯವನ್ನು ಸಾರುವುದಕ್ಕೂ ರೋಗಿಗಳನ್ನು ಸ್ವಸ್ಥಮಾಡುವುದಕ್ಕೂ ಯೇಸು ಅವರನ್ನು ಕಳುಹಿಸಿಕೊಟ್ಟರು.
И бишалдя лэн тэ роспхэнэн палав Дэвлэско Тхагаримос и тэ састярэн насвалэн.
3 ಯೇಸು ಅವರಿಗೆ, “ನೀವು ಪ್ರಯಾಣಕ್ಕಾಗಿ ಕೋಲು, ಚೀಲ, ರೊಟ್ಟಿ ಅಥವಾ ಹಣವನ್ನು ತೆಗೆದುಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.
Пхэндя лэнди: — Нисо на лэнтэ пэса андо дром: ни дэсто, ни траста, ни марно, ни ловэ, ни авэр йида.
4 ನೀವು ಯಾವುದಾದರೂ ಮನೆಯನ್ನು ಪ್ರವೇಶಿಸಿದಾಗ, ಅಲ್ಲೇ ಇದ್ದು ಆ ಪಟ್ಟಣದಿಂದ ಹೋಗುವವರೆಗೆ ಆ ಮನೆಯಲ್ಲೇ ವಾಸವಾಗಿದ್ದು, ಅಲ್ಲಿಂದಲೇ ಹೊರಡಿರಿ.
Андэ саво чер тумэ тэ зажан, котэ ашэнпэ и котар жан майдур.
5 ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ, ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ,” ಎಂದರು.
Сар мануша тумэн на прилэна, тунчи, сар авэна тэ выжан колэ форостар, обмарэн пош тумарэ пэрнэндар, мэк када авэла важ лэнди шпэра.
6 ಶಿಷ್ಯರು ಪ್ರತಿಯೊಂದು ಹಳ್ಳಿಗೆ ಹೋಗುತ್ತಾ, ಸುವಾರ್ತೆಯನ್ನು ಸಾರುತ್ತಾ, ಎಲ್ಲಾ ಕಡೆಗಳಲ್ಲಿ ರೋಗಿಗಳನ್ನು ಸ್ವಸ್ಥಮಾಡುತ್ತಾ ಹೋದರು.
Дэшудуй жыле андо дром, пэрэжанас гав гавэстэ, роспхэнэнас Радосаво Лав, и андэ всаворэ тхана састярэнас насвалэн.
7 ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಏಕೆಂದರೆ ಯೋಹಾನನು ಸತ್ತವರೊಳಗಿಂದ ಎದ್ದಿದ್ದಾನೆಂದು ಕೆಲವರು ಹೇಳುತ್ತಿದ್ದರು.
Дума пала вся када дожыля кав рай тетрархо Иродо. Вов дивосайля, колэстар со екх пхэнэнас: када Иоано жундиля андай мулэ,
8 ಕೆಲವರು ಎಲೀಯನು ಪ್ರತ್ಯಕ್ಷನಾಗಿದ್ದಾನೆಂದೂ ಇನ್ನೂ ಕೆಲವರು ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ತಿರುಗಿ ಎದ್ದಿದ್ದಾನೆಂದೂ ಹೇಳುತ್ತಿದ್ದರು.
авэр — со када сикадяпэ Илия, ай авэр — со када жундиля андай мулэ екх андай дэлмутно пророко.
9 ಆದರೆ ಹೆರೋದನು, “ನಾನು ಯೋಹಾನನನ್ನು ಶಿರಚ್ಛೇದನ ಮಾಡಿದೆ, ನಾನು ಯಾರನ್ನು ಕುರಿತು, ಈ ವಿಷಯಗಳನ್ನು ಕೇಳುತ್ತಿರುವೆ, ಈತನು ಯಾರು?” ಎಂದು ಹೇಳಿ ಅವನು ಯೇಸುವನ್ನು ಕಾಣಲು ಪ್ರಯತ್ನಿಸಿದನು.
Иродо пхэндя: — Иоаности мэ отшындэм шэро. А ко тунчи Кадва Мануш, пала саво мэ ашунав? И вов родэлас тэ дикхэл Исусос.
10 ಅಪೊಸ್ತಲರು ಹಿಂದಿರುಗಿ ಬಂದು, ತಾವು ಮಾಡಿದವುಗಳನ್ನೆಲ್ಲಾ ಯೇಸುವಿಗೆ ತಿಳಿಸಿದರು. ಆಗ ಯೇಸು ಬೇತ್ಸಾಯಿದ ಎಂಬ ಹೆಸರಿನ ಪಟ್ಟಣಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದರು.
Апостолоря рисайле и роспхэндэ Исусости пала вся, со онэ стердэ. Тунчи Вов ля лэн Пэса, и онэ жыле ежэнэ биманушэнго кав форо, саво акхарэлпэ Вифсаида.
11 ಆದರೆ ಜನರು ಅದನ್ನು ತಿಳಿದು ಯೇಸುವನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವೀಕರಿಸಿ, ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥಮಾಡಿದರು.
Нэ бут мануша ужангле пала када и жыле палав Исусо. Вов мишто лэн приля, пхэнэлас лэнди палав Дэвлэско Тхагаримос и кадя ж састярэлас колэн, касти када сас трэбуй.
12 ಸಂಜೆಯಾಗುತ್ತಿದ್ದಾಗ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಊಟವಸತಿಯನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡಿ. ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲ,” ಎಂದರು.
Вряма жалас кай рят, и дэшудуй поджыле кав Исусо и пхэндэ: — Отмук манушэн, соб онэ тэ жан андэ пашэ тхана и гава тэ аракхэн, кай тэ ратярэн и тэ хан, колэстар со амэ катэ андэ биманушэнго тхан.
13 ಆದರೆ ಯೇಸು ಅವರಿಗೆ, “ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದರು. ಅದಕ್ಕೆ ಅವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನುಗಳಿಗಿಂತ ಹೆಚ್ಚೇನು ಇಲ್ಲ. ನಾವು ಹೋಗಿ ಈ ಜನರಿಗೆ ಬೇಕಾಗುವಷ್ಟು ಆಹಾರವನ್ನು ಕೊಂಡುಕೊಂಡು ಬರಬೇಕೆ?” ಎಂದರು.
Исусо пхэндя лэнди: — Тумэ дэнтэ лэнди тэ хан. Сытярнэ дивосайле: — Амэндэ качи панч марнэ и дуй маще. Со амэнди, тэ жас тэ тинас хамос важ всаворэ акала мануш?
14 ಅಲ್ಲಿ ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಮಂದಿ ಇದ್ದರು. ಆಗ ಯೇಸು ತಮ್ಮ ಶಿಷ್ಯರಿಗೆ, “ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂರಿಸಿರಿ,” ಎಂದರು.
Котэ сас екхэн муршэн варикай панч мии. Исусо пхэндя сытярнэнди: — Розбэшлярэн манушэн по пандэша.
15 ಅವರು ಹಾಗೆಯೇ ಮಾಡಿ, ಎಲ್ಲರನ್ನೂ ಕುಳ್ಳಿರಿಸಿದರು.
Сытярнэ кадя тердэ. Кала всаворэ бэшле,
16 ತರುವಾಯ ಯೇಸು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚುವಂತೆ ತಿಳಿಸಿದರು.
Исусо ля панч марнэ и дуй маще, вазгля якха по болыбэн и пхэндя наис палав хамос. Тунчи Вов ля тэ пхагэл марно и мащё и тэ дэл Пэстирэ сытярнэнди, кай кола тэ роздэн манушэнди.
17 ಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿಗಳು ತುಂಬಿದವು.
Всаворэ ханас и чялиле, и стидэ инке котора савэ ашылепэ, андэ дэшудуй барэ трасты.
18 ಯೇಸು ಏಕಾಂತವಾಗಿ ಪ್ರಾರ್ಥಿಸುತ್ತಿದ್ದಾಗ ಅವರ ಶಿಷ್ಯರು ಅವರೊಂದಿಗೆ ಇದ್ದರು, ಆಗ ಯೇಸು ಅವರಿಗೆ, “ಜನರು ನನ್ನನ್ನು ಯಾರೆನ್ನುತ್ತಾರೆ?” ಎಂದು ಕೇಳಿದರು.
Екхварэс, кала Исусо мангэласпэ Дэвлэс ежэно, найдур Лэстар сас Лэстирэ сытярнэ. Вов пушля лэндар: — Пала кастэ прилэн Ман мануша?
19 ಅವರು ಉತ್ತರವಾಗಿ, “ಸ್ನಾನಿಕನಾದ ಯೋಹಾನನು ಎನ್ನುತ್ತಾರೆ. ಆದರೆ ಕೆಲವರು ಎಲೀಯನು. ಬೇರೆ ಕೆಲವರು ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ಪುನಃ ಜೀವಂತನಾಗಿದ್ದಾನೆ ಎನ್ನುತ್ತಾರೆ,” ಎಂದು ಹೇಳಿದರು.
Онэ пхэндэ: — Палав Иоано Болдэмарё, ай авэр — палав Илия, ай авэр пхэнэн, со екх андай дэлмутно пророко жундиля.
20 ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಿದರು. ಆಗ ಪೇತ್ರನು, “ನೀವು ದೇವರು ಕಳುಹಿಸಿಕೊಟ್ಟ ಕ್ರಿಸ್ತನು,” ಎಂದು ಹೇಳಿದನು.
— А тумэ важ касти прилэн Ман? — пушля лэн Исусо. — Дэвлэско Христосо, — пхэндя Пэтро.
21 ಯೇಸು ಈ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಖಂಡಿತವಾಗಿ ಆಜ್ಞಾಪಿಸಿದರು.
Нэ Исусо припхэндя лэнди, кай никасти тэ на роспхэнэн пала када.
22 ಅನಂತರ ಯೇಸು, “ಮನುಷ್ಯಪುತ್ರನಾದ ನಾನು ಅನೇಕ ಕಷ್ಟಗಳನ್ನು ಅನುಭವಿಸಿ ಜನನಾಯಕರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ, ಕೊಲೆಗೆ ಗುರಿಯಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಏಳುವುದು ಅಗತ್ಯವಾಗಿದೆ,” ಎಂದು ಎಚ್ಚರಿಸಿದರು.
Пхэндя: — Шаво Манушыкано авэла андэ бари грыжа, и Лэс на прилэна пхурэдэра, барэ рашая и сытяримаря Законостирэ. Вов авэла умардо, ай по трито дес жундёла.
23 ಯೇಸು ಅವರೆಲ್ಲರಿಗೆ: “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Тунчи Исусо пхэндя лэнди: — Сар ко камэл тэ жал пала Мандэ, мэк отпхэндёл ежэно пэстар, кажно дес лэл пэско трушул и жал пала Мандэ.
24 ಯಾರಾದರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವವರು, ಅದನ್ನು ಕಳೆದುಕೊಳ್ಳುವರು, ಆದರೆ ನನ್ನ ನಿಮಿತ್ತವಾಗಿ ಯಾರಾದರೂ ತಮ್ಮ ಪ್ರಾಣವನ್ನು ಕಳೆದುಕೊಳ್ಳುವವರು ಅದನ್ನು ಕಂಡುಕೊಳ್ಳುವರು.
Кодва, ко камэл тэ фэрисарэл пэско жувимос, хасарэла лэс, а ко хасарэла пэско жувимос важ Манди, кодва фэрисарэла лэс.
25 ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡು, ತನ್ನನ್ನು ತಾನೇ ಹಾಳು ಮಾಡಿಕೊಂಡರೆ, ಇಲ್ಲವೆ ನಷ್ಟಪಡಿಸಿಕೊಂಡರೆ, ಆ ವ್ಯಕ್ತಿಗೆ ಪ್ರಯೋಜನವೇನು?
Со за мищимос манушэсти, сар вов лэла всавори люма, а ежэно хасавэла и терэла грыжа пэсти?
26 ಯಾರಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವುದಾದರೆ, ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯೊಡನೆಯೂ ಪರಿಶುದ್ಧ ದೂತರೊಡನೆಯೂ ಬರುವಾಗ, ಅವರ ವಿಷಯದಲ್ಲಿ ನಾಚಿಕೊಳ್ಳುವೆನು.
Ко лажала Мандар и Мэрнэ лавэндар, колэстар лажала и Шаво Манушыкано, кала авэла андэ Пэстири слава и андэ слава лэ Дадэстири, и свэнтонэнца ангелонэнца.
27 “ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವನ್ನು ಕಾಣುವತನಕ ಮರಣವನ್ನು ಹೊಂದುವುದೇ ಇಲ್ಲ,” ಎಂದರು.
Пхэнав тумэнди чячимос: исин машкар тумэндэ кола, савэ тэрдён катэ, онэ на мэрэна, сар удикхэна о Тхагаримос Дэвлэско.
28 ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಯೇಸು, ಪೇತ್ರ, ಯೋಹಾನ ಮತ್ತು ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟವನ್ನೇರಿದರು.
Кала прожыля варикай охта деса, сар Исусо пхэндя кала лава, Вов ля Пэтрос, Иоанос и Иаковос и вазгляпэ по плай тэ мангэлпэ Дэвлэс.
29 ಯೇಸು ಪ್ರಾರ್ಥನೆ ಮಾಡುತ್ತಿದ್ದಾಗ, ಅವರ ಮುಖಭಾವವು ಬದಲಾಯಿತು ಮತ್ತು ಅವರ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂತು.
Андэ кодья вряма, сар мангэласпэ, Лэско муй парудиля, Лэстири йида ашыля парни тай свэтосавэлас.
30 ಮೋಶೆ ಮತ್ತು ಎಲೀಯನು ಎಂಬ ಇಬ್ಬರು ಪುರುಷರು ಯೇಸುವಿನೊಂದಿಗೆ ಮಾತನಾಡುತ್ತಿದ್ದರು.
И акэ, авиле дуй мурш, савэ линэ тэ дэн дума Исусоса, — када сас Моисеё и Илия.
31 ಇವರು ಮಹಿಮೆಯಲ್ಲಿ ಕಾಣಿಸಿಕೊಂಡು, ಯೇಸು ಯೆರೂಸಲೇಮಿನಲ್ಲಿ ಪೂರೈಸುವುದಕ್ಕಿದ್ದ ಅವರ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.
Онэ авиле андэ бари слава и пхэнэнас, со Лэсти трэбуй тэ жал андо Иерусалимо кай тэ ашавэл кадья люма.
32 ಆದರೆ ಪೇತ್ರನು ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು, ಅವರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಅವರ ಕೂಡ ನಿಂತಿದ್ದ ಇಬ್ಬರು ಪುರುಷರನ್ನೂ ಕಂಡರು.
Пэтро и ко сас лэса засутэ. Но сар просутэпэ, удикхле слава Исусостири и дуен муршэн, савэ тэрдёнас паша Лэстэ.
33 ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ನಮಗೆ ಒಳ್ಳೆಯದು, ನಾವು ನಿಮಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು, ಹೀಗೆ ಮೂರು ಗುಡಾರಗಳನ್ನು ಕಟ್ಟುವೆವು,” ಎಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು.
Кала мурша линэ тэ жантар, Пэтро пхэндя Исусости: — Сытяримари! Амэнди катэ фартэ мишто! Амэ стераса трин катуны: екх Тути, екх Моисеёсти и екх Илиясти. Ежэно на полэлас, со дэлас дума.
34 ಹೀಗೆ ಪೇತ್ರನು ಮಾತನಾಡುತ್ತಿದ್ದಾಗಲೇ, ಮೇಘವು ಬಂದು ಅವರನ್ನು ಕವಿದುಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇಶಿಸುತ್ತಿದ್ದಾಗ ಶಿಷ್ಯರು ಭಯಪಟ್ಟರು.
Кала вов дэлас дума, авиля облако пэр лэндэ и онэ попэле талав лэстэ. Сар попэле андо облако, онэ фартэ пэрэдарайле.
35 ಆಗ ಮೇಘದೊಳಗಿಂದ, “ಈತನು, ನಾನು ಆರಿಸಿಕೊಂಡ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂದು ಹೇಳುವ ಧ್ವನಿಯಾಯಿತು.
Андав облако пхэндя гласо: — Када Мэрно Шаво, Мэрно вытидо. Лэс ашунэн!
36 ಧ್ವನಿಯಾದ ನಂತರ, ಅವರು ಯೇಸುವನ್ನು ಮಾತ್ರ ಕಂಡರು. ಅವರು ಕಂಡವುಗಳನ್ನು ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು.
Сар гласо на ашыля, онэ удикхле екхэс Исусос. Онэ ашэнас мулком пала кода и андэ кодья вряма никасти на роспхэнэнас, со онэ дикхле.
37 ಮರುದಿನ, ಅವರು ಬೆಟ್ಟದಿಂದ ಕೆಳಗಿಳಿದು ಬಂದಾಗ, ಬಹಳ ಜನರು ಯೇಸುವನ್ನು ಸಂಧಿಸಿದರು.
Пэ авэр дес, кала онэ змукэнаспэ пав плай, Исусос ажутярэнас фартэ бут мануша.
38 ಆಗ ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ, “ಬೋಧಕರೇ, ನನ್ನ ಮಗನ ಮೇಲೆ ದೃಷ್ಟಿಯಿಡಿರಿ ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ, ಏಕೆಂದರೆ ಅವನು ನನಗೆ ಒಬ್ಬನೇ ಮಗನು.
И екх мануш андар лэндэ зацыписайля: — Сытяримари! Мангав Тут, подикх по мэрно шаво, вов екх мандэ.
39 ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಬಾಯಲ್ಲಿ ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವುದಲ್ಲದೆ ಜಜ್ಜುತ್ತದೆ. ಅದು ಅವನನ್ನು ಬಿಟ್ಟು ಹೋಗುವುದು ಕಷ್ಟ.
Лэс схутилэл и тасавэл духо, и тунчи шаворо лэл тэ цыписавэл, тэ тиносавэл и тэ мукэл саля. Духо фартэ марэл лэс и тунчи цыра отжал лэстар.
40 ಅದನ್ನು ಓಡಿಸುವಂತೆ, ನಾನು ನಿಮ್ಮ ಶಿಷ್ಯರನ್ನು ಬೇಡಿಕೊಂಡೆನು, ಆದರೆ ಅದು ಅವರಿಂದ ಆಗಲಿಲ್ಲ,” ಎಂದನು.
Мэ манглем Тирэн сытярнэн тэ вытрадэн лэс, но онэ на вытрадэ.
41 ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಿಮ್ಮನ್ನು ಸಹಿಸಲಿ?” ಎಂದು ಹೇಳಿ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ,” ಎಂದರು.
— Напатимаско и билажавардо родо, — пхэндя Исусо. — Скачи Манди тэ авав тумэнца и тэ тэрписарав тумэн? Ан тирэс шавэс кардэ.
42 ಅವನು ಇನ್ನೂ ಬರುತ್ತಿದ್ದಾಗಲೇ, ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ದೆವ್ವವನ್ನು ಗದರಿಸಿ ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಪುನಃ ಒಪ್ಪಿಸಿದರು.
Кала шаворо инке жалас, бэнг шутя лэс пэ пхув и ля тэ марэл лэс. Но Исусо запхэндя найжужэ духости, састярдя шаворэс и отдя лэстирэ дадэсти.
43 ಆಗ ಜನರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು. ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ, ಯೇಸು ತಮ್ಮ ಶಿಷ್ಯರಿಗೆ,
Всаворэ дивосайле, саво баро Дэл. Андэ кодья вряма, сар всаворэ дивосавэнас колэсти, со тердя Исусо, Вов пхэндя Пэстирэ сытярнэнди:
44 “ಈ ಮಾತುಗಳನ್ನು ಆಳವಾಗಿ ಗ್ರಹಿಸಿಕೊಳ್ಳಿರಿ: ಏಕೆಂದರೆ ಮನುಷ್ಯಪುತ್ರನಾದ ನಾನು ಮನುಷ್ಯರ ಕೈವಶವಾಗುವೆನು,” ಎಂದು ಹೇಳಿದರು.
— Ашунэн мишто, со Мэ тумэнди икхатар пхэнава: Шаво Манушыкано сыго авэла отдино андэ васт манушэндирэ.
45 ಆದರೆ ಶಿಷ್ಯರು ಈ ಮಾತನ್ನು ತಿಳಿದುಕೊಳ್ಳಲಿಲ್ಲ. ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು, ಆ ಮಾತನ್ನು ಕುರಿತು ಯೇಸುವನ್ನು ಕೇಳುವುದಕ್ಕೆ ಅವರು ಭಯಪಟ್ಟರು.
Но онэ на полинэ, со Вов пхэндя. Лэнди када сас затердо, и онэ на полинэ, со сас пхэндо, а тэ пушэн Лэс пала када лав даранас.
46 ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡವನು ಎಂಬ ತರ್ಕವು ಶಿಷ್ಯರೊಳಗೆ ಎದ್ದಿತು.
Машкар сытярнэ екхвар сас дума пала кода, ко лэндар майбаро.
47 ಯೇಸು, ಅವರ ಮನದ ಆಲೋಚನೆಯನ್ನು ತಿಳಿದವರಾಗಿ, ಒಂದು ಮಗುವನ್ನು ತಮ್ಮ ಬಳಿಯಲ್ಲಿ ನಿಲ್ಲಿಸಿ,
Исусо жангля, со онэ гындонас андэ водя, ля цэкнэс бэятос и тходя паша Пэстэ.
48 “ಯಾರು ಈ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿಕೊಳ್ಳುತ್ತಾರೋ ಅವರು ನನ್ನನ್ನೇ ಸ್ವೀಕರಿಸಿಕೊಳ್ಳುತ್ತಾರೆ; ಯಾರು ನನ್ನನ್ನು ಸ್ವೀಕರಿಸಿಕೊಳ್ಳುತ್ತಾರೋ ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುತ್ತಾರೆ. ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡವನಾಗಿರುವನು,” ಎಂದರು.
— Ко важ Мэрно алав прилэл акацавэс бэятос, — пхэндя Исусо, — кодва и Ман прилэл, а ко прилэл Ман, кодва прилэл Колэс, ко Бишалдя Ман. Ко машкар тумэндэ майцэкно всаворэндар, кодва и майбаро.
49 ಯೋಹಾನನು, “ಬೋಧಕರೇ, ಒಬ್ಬನು ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವುದನ್ನು ನಾವು ಕಂಡು ಅವನಿಗೆ ಅಡ್ಡಿಮಾಡಿದೆವು, ಏಕೆಂದರೆ ಅವನು ನಮ್ಮೊಂದಿಗೆ ಸೇರಿದವನಲ್ಲ,” ಎಂದನು.
Иоано пхэндя Лэсти: — Сытяримари! Амэ дикхле манушэс, саво Тирэ алавэса вытрадэл бэнгэн. Амэ запхэндэ лэсти, колэстар со вов на пхирэл пала Тутэ екхэтанэ амэнца.
50 ಅದಕ್ಕೆ ಯೇಸು, “ಅವನನ್ನು ತಡೆಯಬೇಡಿರಿ, ನಿಮಗೆ ವಿರೋಧವಾಗಿರದವನು ನಿಮ್ಮ ಪಕ್ಷದವನೇ,” ಎಂದು ಹೇಳಿದರು.
— На запхэнэн, — пхэндя лэсти Исусо. — Ко на жал пэ тумэндэ, кодва пала тумэндэ.
51 ಯೇಸು ತಾವು ಸ್ವರ್ಗಕ್ಕೆ ಏರಿಹೋಗುವ ಕಾಲ ಬಂದಾಗ, ಯೆರೂಸಲೇಮಿಗೆ ಹೋಗುವುದಕ್ಕಾಗಿ ತಮ್ಮ ಮನಸ್ಸನ್ನು ದೃಢಮಾಡಿಕೊಂಡು
Кала Исусости поджыля вряма тэ ваздэлпэ по болыбэн, Вов ля андэ годи со трэбуй тэ жал андо Иерусалимо.
52 ತಮಗೆ ಮುಂದಾಗಿ ಶಿಷ್ಯರನ್ನು ದೂತರನ್ನಾಗಿ ಕಳುಹಿಸಿದರು. ಅವರು ಹೋಗಿ ಅವರಿಗಾಗಿ ಎಲ್ಲವನ್ನೂ ಸಿದ್ಧಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.
Англал Пэстэ Вов бишалдя пэстирэ манушэн, онэ жыле андо екх андай самариятирэ гава тэ пригытон вся.
53 ಆದರೆ ಸಮಾರ್ಯದವರು ಯೇಸುವನ್ನು ಸ್ವೀಕರಿಸಲಿಲ್ಲ, ಏಕೆಂದರೆ ಯೇಸು ಯೆರೂಸಲೇಮಿಗೆ ಹೋಗುವವರಾಗಿದ್ದರು.
Нэ мануша, савэ жувэнас котэ, на прилинэ Лэс, колэстар со Вов жалас андо Иерусалимо.
54 ಯೇಸುವಿನ ಶಿಷ್ಯರಾದ ಯಾಕೋಬ ಮತ್ತು ಯೋಹಾನರು ಇದನ್ನು ಕಂಡು, “ಕರ್ತದೇವರೇ, ಎಲೀಯನು ಮಾಡಿದ ಪ್ರಕಾರ ಇವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿಮಗೆ ಒಪ್ಪಿಗೆ ಇದೆಯೋ?” ಎಂದು ಕೇಳಿದರು.
Лэстирэ сытярнэ, Иаково тай Иоано, дикхле када и пхэндэ: — Рай! Камэс, амэ припхэнаса ягати тэ сжал пав болыбэн и всаворэн лэн тэ спхабарэл?
55 ಆದರೆ ಯೇಸು ಅವರ ಕಡೆ ತಿರುಗಿ ಅವರನ್ನು ಗದರಿಸಿ, “ನೀವು ಎಂಥ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
Исусо обрисайля, запхэндя лэнди. И онэ жыле андэ авэр гав.
56 ಮನುಷ್ಯಪುತ್ರನಾದ ನಾನು ಮನುಷ್ಯರ ಪ್ರಾಣಗಳನ್ನು ನಾಶಮಾಡುವುದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವುದಕ್ಕಾಗಿ ಬಂದೆನು,” ಎಂದು ಹೇಳಿದರು. ಅನಂತರ ಅವರು ಮತ್ತೊಂದು ಹಳ್ಳಿಗೆ ಹೋದರು.
57 ಅವರು ದಾರಿಯಲ್ಲಿ ಹೋಗುತ್ತಿರುವಾಗ, ಒಬ್ಬನು ಯೇಸುವಿಗೆ, “ನೀವು ಎಲ್ಲಿಗೆ ಹೋದರೂ ನಾನು ನಿಮ್ಮನ್ನು ಹಿಂಬಾಲಿಸುವೆನು” ಎಂದನು.
Сар онэ жанас пав дром, екх мануш пхэндя Исусости: — Мэ жава пала Тутэ андо всаворэ тхана, кай Ту жаса.
58 ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು.
Исусо пхэндя лэсти: — Кай лисоря исин тхана, кай онэ жувэн, и кай чирикля болыбнастирэ — пэско тхан, а Шавэсти Манушыканэсти най кай шэро тэ тховэл.
59 ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು,” ಎಂದರು. ಆದರೆ ಅವನು, “ಕರ್ತದೇವರೇ, ಮೊದಲು ನಾನು ಹೋಗಿ ನನ್ನ ತಂದೆಯ ಶವಸಂಸ್ಕಾರ ಮಾಡಿಬರಲು ಅನುಮತಿಕೊಡಿರಿ,” ಎಂದನು.
Аврэсти манушэсти Исусо пхэндя: — Жа пала Мандэ. Кодва пхэндя: — Рай, дэ манди майанглал тэ жав и тэ гаравав пэстирэ дадэс.
60 ಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರನ್ನು ಸಮಾಧಿ ಮಾಡಿಕೊಳ್ಳಲಿ, ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು,” ಎಂದರು.
— Мэк мулэ ежэнэ гаравэн пэстирэн мулэн, а ту жа и роспхэн пала Тхагаримос Дэвлэско, — пхэндя лэсти Исусо.
61 ಇದಲ್ಲದೆ ಮತ್ತೊಬ್ಬನು ಸಹ, “ಕರ್ತದೇವರೇ, ನಾನು ನಿಮ್ಮನ್ನು ಹಿಂಬಾಲಿಸುವೆನು, ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರನ್ನು ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡಿ,” ಎಂದನು.
Инке екх мануш пхэндя Лэсти: — Рай, Мэ жава пала Тутэ! Нэ дэ манди майанглал тэ жав и тэ дикхав пэско йири.
62 ಆಗ ಯೇಸು ಅವನಿಗೆ, “ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ಯೋಗ್ಯನಲ್ಲ,” ಎಂದರು.
Исусо пхэндя: — Ни екх мануш, саво тховэла васт пэско по плуго и обдикхэлпэ палпалэ, на поджал важ Тхагаримос Дэвлэско.