< ಮಲಾಕಿಯನು 4 >

1 “ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
כִּֽי־הִנֵּ֤ה הַיּוֹם֙ בָּ֔א בֹּעֵ֖ר כַּתַּנּ֑וּר וְהָי֨וּ כָל־זֵדִ֜ים וְכָל־עֹשֵׂ֤ה רִשְׁעָה֙ קַ֔שׁ וְלִהַ֨ט אֹתָ֜ם הַיּ֣וֹם הַבָּ֗א אָמַר֙ יְהוָ֣ה צְבָא֔וֹת אֲשֶׁ֛ר לֹא־יַעֲזֹ֥ב לָהֶ֖ם שֹׁ֥רֶשׁ וְעָנָֽף׃
2 ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.
וְזָרְחָ֨ה לָכֶ֜ם יִרְאֵ֤י שְׁמִי֙ שֶׁ֣מֶשׁ צְדָקָ֔ה וּמַרְפֵּ֖א בִּכְנָפֶ֑יהָ וִֽיצָאתֶ֥ם וּפִשְׁתֶּ֖ם כְּעֶגְלֵ֥י מַרְבֵּֽק׃
3 ಆಗ ದುಷ್ಟರನ್ನು ತುಳಿದುಬಿಡುವಿರಿ. ಏಕೆಂದರೆ ನಾನು ಕಾರ್ಯಸಾಧಿಸುವ ದಿವಸದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
וְעַסּוֹתֶ֣ם רְשָׁעִ֔ים כִּֽי־יִהְי֣וּ אֵ֔פֶר תַּ֖חַת כַּפּ֣וֹת רַגְלֵיכֶ֑ם בַּיּוֹם֙ אֲשֶׁ֣ר אֲנִ֣י עֹשֶׂ֔ה אָמַ֖ר יְהוָ֥ה צְבָאֽוֹת׃ פ
4 “ನನ್ನ ಸೇವಕನಾದ ಮೋಶೆಯ ನಿಯಮವನ್ನು ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ವಿಧಿ ನಿಯಮಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
זִכְר֕וּ תּוֹרַ֖ת מֹשֶׁ֣ה עַבְדִּ֑י אֲשֶׁר֩ צִוִּ֨יתִי אוֹת֤וֹ בְחֹרֵב֙ עַל־כָּל־יִשְׂרָאֵ֔ל חֻקִּ֖ים וּמִשְׁפָּטִֽים׃
5 “ಇಗೋ, ಯೆಹೋವ ದೇವರ ಮಹಾ ಭಯಂಕರವಾದ ದಿವಸವು ಬರುವುದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುವೆನು.
הִנֵּ֤ה אָֽנֹכִי֙ שֹׁלֵ֣חַ לָכֶ֔ם אֵ֖ת אֵלִיָּ֣ה הַנָּבִ֑יא לִפְנֵ֗י בּ֚וֹא י֣וֹם יְהוָ֔ה הַגָּד֖וֹל וְהַנּוֹרָֽא׃
6 ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಯರ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಯರ ಕಡೆಗೂ ತಿರುಗಿಸುವನು.”
וְהֵשִׁ֤יב לֵב־אָבוֹת֙ עַל־בָּנִ֔ים וְלֵ֥ב בָּנִ֖ים עַל־אֲבוֹתָ֑ם פֶּן־אָב֕וֹא וְהִכֵּיתִ֥י אֶת־הָאָ֖רֶץ חֵֽרֶם׃

< ಮಲಾಕಿಯನು 4 >