< ಮಾರ್ಕನು 10 >
1 ಯೇಸು ಅಲ್ಲಿಂದ ಹೊರಟು ಯೊರ್ದನ್ ನದಿಯ ಆಚೆಯ ಯೂದಾಯ ಪ್ರಾಂತಕ್ಕೆ ಬಂದರು. ಅಲ್ಲಿ ಜನರು ತಿರುಗಿ ಅವರ ಬಳಿಗೆ ಬರಲು, ಯೇಸು ತಮ್ಮ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದರು.
Rising up thence He comes into the coasts of Judea, through the region beyond the Jordan; and the multitudes again come to Him, and, as was His custom, He again taught them.
2 ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು ಅವರನ್ನು ಪರೀಕ್ಷಿಸುವುದಕ್ಕಾಗಿ ಯೇಸುವಿಗೆ, “ಒಬ್ಬ ಪುರುಷನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು.
And the Pharisees having come forward asked Him, If it is lawful for a man to send away his wife? tempting Him.
3 ಯೇಸು ಉತ್ತರವಾಗಿ ಅವರಿಗೆ, “ಮೋಶೆಯು ನಿಮಗೆ ಏನು ಅಪ್ಪಣೆಕೊಟ್ಟನು?” ಎಂದು ಕೇಳಿದರು.
And He responding said to them, What did Moses command you?
4 ಅದಕ್ಕೆ ಅವರು, “ವಿವಾಹ ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅನುಮತಿ ಕೊಟ್ಟನು,” ಎಂದರು.
And they said, Moses permitted to write a book of divorcement, and to send her away.
5 ಯೇಸು ಉತ್ತರವಾಗಿ ಅವರಿಗೆ, “ಮೋಶೆಯು ನಿಮ್ಮ ಹೃದಯ ಕಾಠಿಣ್ಯದ ನಿಮಿತ್ತವಾಗಿ ನಿಮಗೆ ಈ ಆಜ್ಞೆಯನ್ನು ಬರೆದನು.
Jesus said to them, On account of the hardness of your heart he wrote this commandment to you.
6 ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು, ‘ಅವರನ್ನು ಗಂಡು ಹೆಣ್ಣಾಗಿ ಮಾಡಿದರು.’
But from the beginning of creation God made them male and female.
7 ‘ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.
On this account a man shall leave his father and his mother,
8 ಅವರಿಬ್ಬರೂ ಒಂದೇ ಶರೀರವಾಗಿರುವರು.’ ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ.
and they two shall be one flesh; so they are no longer two, but one flesh.
9 ಆದಕಾರಣ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು,” ಎಂದರು.
And what God joined together, let no man separate.
10 ಶಿಷ್ಯರು ಮನೆಯಲ್ಲಿ ಅದೇ ವಿಷಯವನ್ನು ಯೇಸುವಿಗೆ ತಿರುಗಿ ಕೇಳಿದರು.
And His disciples again around Him in the house asked Him. And He says to them,
11 ಅದಕ್ಕೆ ಯೇಸು ಅವರಿಗೆ, “ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಯಾದರೆ, ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿದ್ದಾನೆ.
Whosoever may send away his wife, and marry another, commits adultery unto her.
12 ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ, ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ,” ಎಂದರು.
And if she having sent away her husband, may marry another, she commits adultery.
13 ಕೆಲವರು ತಮ್ಮ ಚಿಕ್ಕಮಕ್ಕಳನ್ನು ಯೇಸು ಮುಟ್ಟಬೇಕೆಂದು ಅವರ ಬಳಿಗೆ ತಂದರು. ಆದರೆ ಶಿಷ್ಯರು ಜನರನ್ನು ಗದರಿಸಿದರು.
And they continued to bring little children to Him, that He should touch them: but the disciples rebuked those bringing them.
14 ಯೇಸು ಅದನ್ನು ಕಂಡಾಗ ಕೋಪಗೊಂಡು ಅವರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ. ಅವುಗಳಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಇಂಥವರದೇ.
But Jesus seeing was displeased, and said to them, Suffer the little children to come unto me; and forbid them not: for of such is the kingdom of God.
15 ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ,” ಎಂದರು.
Truly, I say unto you, Whosoever may not receive the kingdom of God as a little child, can not enter into it.
16 ಇದಲ್ಲದೆ ಯೇಸು ಆ ಮಕ್ಕಳನ್ನು ಎತ್ತಿಕೊಂಡು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟು ಆಶೀರ್ವದಿಸಿದರು.
And taking them up in His arms, putting His hands on them, He continued to bless them copiously.
17 ಯೇಸು ಅಲ್ಲಿಂದ ಹೋಗುತ್ತಿದ್ದಾಗ ಒಬ್ಬನು ಓಡುತ್ತಾ ಬಂದು ಅವರ ಮುಂದೆ ಮೊಣಕಾಲೂರಿ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಯೇಸುವನ್ನು ಕೇಳಿದನು. (aiōnios )
And He traveling along the road, one having run to Him and worshiping Him, asked Him, Good Teacher, what shall I do in order that I may inherit eternal life? (aiōnios )
18 ಯೇಸು ಅವನಿಗೆ, “ನೀನು ನನ್ನನ್ನು ಒಳ್ಳೆಯವನೆಂದು ಏಕೆ ಕರೆಯುತ್ತಿ? ದೇವರೊಬ್ಬನೇ ಹೊರತು ಬೇರೆ ಯಾರೂ ಒಳ್ಳೆಯವರಲ್ಲ.
And Jesus said to him, Why do you call me good? No one is good but One, God.
19 ‘ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,’ ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆಯಲ್ಲಾ,” ಎಂದರು.
You know the commandments, thou must not commit adultery, thou must not murder, thou must not steal, thou must not bear false witness, thou must not defraud, honor thy father and mother.
20 ಅವನು, “ಬೋಧಕರೇ, ನಾನು ಇವೆಲ್ಲವನ್ನು ನನ್ನ ಬಾಲ್ಯದಿಂದಲೇ ಅನುಸರಿಸಿದ್ದೇನೆ,” ಎಂದು ಹೇಳಿದನು.
And he said to Him, Teacher, I have kept all these from my youth.
21 ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.
Jesus looking on him loved him, and said to him, One thing is wanting to thee: go, sell whatsoever thou hast, and give to the poor, and thou shalt have treasure in heaven: and come, follow me.
22 ಆ ಮಾತಿಗೆ ಅವನು ವ್ಯಸನಗೊಂಡು ದುಃಖದಿಂದ ಹೊರಟುಹೋದನು. ಏಕೆಂದರೆ ಅವನಿಗೆ ಬಹಳ ಆಸ್ತಿ ಇತ್ತು.
And he being grieved at the word, went away sorrowing: for he had great possessions.
23 ಯೇಸು ಸುತ್ತಲೂ ನೋಡಿ ತಮ್ಮ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ!” ಎಂದರು.
And Jesus looking around, says to His disciples; How hardly shall those having riches enter into the kingdom of God!
24 ಶಿಷ್ಯರು ಯೇಸುವಿನ ಮಾತುಗಳಿಗೆ ಬೆರಗಾದರು. ಆದರೆ ಯೇಸು ತಿರುಗಿ ಅವರಿಗೆ, “ಮಕ್ಕಳೇ, ದೇವರ ರಾಜ್ಯವನ್ನು ಪ್ರವೇಶಿಸುವುದು ಬಹಳ ಕಷ್ಟ.
And the disciples were astonished at His words, and Jesus again responding, says to them, Children, how difficult it is to enter into the kingdom of God!
25 ಒಬ್ಬ ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ,” ಎಂದು ಹೇಳಿದರು.
It is easier for a camel to go through the eye of a needle, than for a rich man to go into the kingdom of God.
26 ಅದಕ್ಕೆ ಶಿಷ್ಯರು ಅತ್ಯಂತ ಆಶ್ಚರ್ಯಪಟ್ಟು ತಮ್ಮೊಳಗೆ, “ಹಾಗಾದರೆ ಯಾರು ರಕ್ಷಣೆ ಹೊಂದುವವರು?” ಎಂದುಕೊಂಡರು.
And they were astonished exceedingly, saying to one another, And who is able to be saved?
27 ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, “ಮನುಷ್ಯರಿಗೆ ಇದು ಅಸಾಧ್ಯ, ದೇವರಿಗೆ ಅಲ್ಲ, ದೇವರಿಗೆ ಎಲ್ಲವೂ ಸಾಧ್ಯ,” ಎಂದರು.
And Jesus looking upon them says, With men it is impossible, but not with God: for all things are possible with God.
28 ಪೇತ್ರನು ಯೇಸುವಿಗೆ, “ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ,” ಎಂದು ಹೇಳಲಾರಂಭಿಸಿದನು.
Peter began to say to Him, Behold, we have left all things, and followed thee.
29 ಅದಕ್ಕೆ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಯಾರಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ ಬಿಟ್ಟುಬಿಟ್ಟರೆ,
Jesus said, Truly I say unto you, there is no one who has left house, or brothers, or sisters, or father, or mother, or children, or lands, on account of me and the gospel,
30 ಅವರು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿರನ್ನೂ ಮಕ್ಕಳನ್ನೂ ಹೊಲವನ್ನೂ ನೂರರಷ್ಟು ಪಡೆಯುವುದಲ್ಲದೆ ಮುಂದಿನ ಲೋಕದಲ್ಲಿ ನಿತ್ಯಜೀವವನ್ನು ಹೊಂದುವರು. (aiōn , aiōnios )
except he may receive a hundredfold now in this time, and brothers, and sisters, and mothers, and children, and lands, with persecutions; and in the coming age eternal life. (aiōn , aiōnios )
31 ಆದರೆ ಮೊದಲನೆಯವರಾದ ಅನೇಕರು ಕಡೆಯವರಾಗುವರು, ಕಡೆಯವರಾದವರು ಮೊದಲಿನವರಾಗುವರು,” ಎಂದರು.
But many who are first shall be last; and the last first.
32 ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು. ಯೇಸು ಅವರ ಮುಂದಾಗಿ ಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಯೇಸುವಿನ ಹಿಂದೆ ಬರುತ್ತಿದ್ದವರು ಭಯಪಟ್ಟರು. ಯೇಸು ತಮ್ಮ ಹನ್ನೆರಡು ಮಂದಿಯನ್ನು ತಿರುಗಿ ಕರೆದು ತನಗೆ ಸಂಭವಿಸುವ ಸಂಗತಿಗಳನ್ನು ಅವರಿಗೆ ಹೇಳಲಾರಂಭಿಸಿದರು:
And they were in the way, going up to Jerusalem; and Jesus was going before them: and they were amazed; and following they were afraid. And taking the twelve to Himself, again He began to tell them the things which were about to happen to Him;
33 “ಇಗೋ, ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ಮನುಷ್ಯಪುತ್ರನಾದ ನನ್ನನ್ನು ಮುಖ್ಯಯಾಜಕರ ಮತ್ತು ನಿಯಮ ಬೋಧಕರ ಕೈಗೆ ಒಪ್ಪಿಸಿಕೊಡುವರು. ಅವರು ನನಗೆ ಮರಣದಂಡನೆಯನ್ನು ವಿಧಿಸಿ ನನ್ನನ್ನು ಯೆಹೂದ್ಯರಲ್ಲದವರಿಗೆ ಒಪ್ಪಿಸುವರು.
Behold, we go up to Jerusalem; and the Son of man shall be betrayed to the chief priests and scribes; and they will condemn Him to death, and they will deliver Him to the Gentiles:
34 ಇವರು ನನ್ನನ್ನು ಹಾಸ್ಯಮಾಡಿ, ನನ್ನ ಮೇಲೆ ಉಗುಳಿ, ಕೊರಡೆಯಿಂದ ಹೊಡೆದು ನನ್ನನ್ನು ಕೊಂದುಹಾಕುವರು. ನಾನಾದರೋ ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವೆನು,” ಎಂದರು.
and they will mock Him, and will scourge Him, and will spit upon Him, and will kill Him; and He will rise the third day.
35 ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಯೇಸುವಿನ ಬಳಿಗೆ ಬಂದು, “ಬೋಧಕರೇ, ನಾವು ಕೇಳುವುದನ್ನು ನೀವು ನಮಗೋಸ್ಕರ ಮಾಡಬೇಕು,” ಎಂದರು.
James and John, the sons of Zebedee, come to Him, saying, Teacher, we wish that you may do unto us whatsoever we may ask.
36 ಅದಕ್ಕೆ ಯೇಸು ಅವರಿಗೆ, “ನಾನು ನಿಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?” ಎಂದು ಕೇಳಿದರು.
And He said to them, What do you wish for me to do for you?
37 ಅವರು ಯೇಸುವಿಗೆ, “ನಾವು ನಿನ್ನ ಮಹಿಮೆಯಲ್ಲಿ ಒಬ್ಬನು ನಿಮ್ಮ ಬಲಗಡೆಯಲ್ಲೂ ಇನ್ನೊಬ್ಬನು ನಿಮ್ಮ ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು,” ಎಂದರು.
And they said to Him, Grant unto us, that we may sit, one on thy right, and one on thy left, in thy glory.
38 ಯೇಸು ಅವರಿಗೆ, “ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯುವ ಪಾತ್ರೆಯಲ್ಲಿ ನೀವೂ ಕುಡಿಯುವಿರೋ? ನಾನು ಪಡೆಯಲಿರುವ ದೀಕ್ಷಾಸ್ನಾನವನ್ನು ನೀವೂ ಪಡೆಯುವಿರೋ?” ಎಂದರು.
And Jesus said to them, You know not what you are asking. Are you able to drink the cup which I drink? and to be baptized with the baptism with which I am baptized?
39 ಅದಕ್ಕೆ ಅವರು, “ಹೌದು, ನಮ್ಮಿಂದಾಗುವುದು,” ಎಂದು ಹೇಳಿದರು. ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಿಂದ ನೀವು ಕುಡಿಯುವಿರಿ. ನಾನು ಹೊಂದುವ ದೀಕ್ಷಾಸ್ನಾನವನ್ನು ನೀವೂ ಹೊಂದುವಿರಿ.
And they said to Him, We are able. And Jesus said to them, You shall indeed drink the cup which I drink, and be baptized with the baptism with which I am baptized:
40 ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗೋಸ್ಕರ ಸಿದ್ಧವಾಗಿದೆಯೋ ಅವರಿಗೇ ಕೊಡಲಾಗುವುದು,” ಎಂದರು.
but to sit on my right, and on my left, is not mine to give, but is for those for whom it has been prepared.
41 ಆ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ, ಯಾಕೋಬ ಮತ್ತು ಯೋಹಾನರ ಮೇಲೆ ಕೋಪಗೊಂಡರು.
And the ten hearing, began to be indignant concerning James and John.
42 ಯೇಸು ಶಿಷ್ಯರನ್ನು ತಮ್ಮ ಹತ್ತಿರಕ್ಕೆ ಕರೆದು ಅವರಿಗೆ, “ಆಳುವವರು ಎಂದೆನಿಸಿಕೊಂಡವರು ಯೆಹೂದ್ಯರಲ್ಲದವರ ಮೇಲೆ ದೊರೆತನ ಮಾಡುತ್ತಾರೆ. ಅವರಲ್ಲಿ ಉನ್ನತ ಅಧಿಕಾರಿಗಳು ಅವರ ಮೇಲೆ ಅಧಿಕಾರ ಮಾಡುತ್ತಾರೆಂದು ನೀವು ಬಲ್ಲಿರಿ.
And Jesus calling them to Him, says to them: You know that those seeming competent to rule the Gentiles domineer over them; and their great ones exercise authority over them.
43 ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿರಲಿ.
But it is not so among you: but whosoever may wish to be great among you, shall be your servant:
44 ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆಂದಿದ್ದರೆ ಎಲ್ಲರಿಗೂ ದಾಸನಾಗಿರಲಿ.
and whosoever of you may wish to be first, shall be the slave of all:
45 ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.
for the Son of man came not to be served, but to serve, and to give His soul a ransom for many.
46 ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸು ತಮ್ಮ ಶಿಷ್ಯರೊಡನೆಯೂ ಅಸಂಖ್ಯಾತ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗ ಕುರುಡ ಬಾರ್ತಿಮಾಯನು ದಾರಿಯಲ್ಲಿ ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು.
And they come into Jericho: and He and His disciples and a great multitude going out from Jericho, blind Bartimeus, the son of Timeus, was sitting by the wayside, begging.
47 ನಜರೇತಿನ ಯೇಸು ಬರುತ್ತಿದ್ದಾರೆ ಎಂದು ಅವನು ಕೇಳಿದಾಗ, “ಯೇಸುವೇ, ದಾವೀದನ ಪುತ್ರನೇ, ನನ್ನನ್ನು ಕರುಣಿಸು,” ಎಂದು ಕೂಗಿಕೊಳ್ಳಲಾರಂಭಿಸಿದನು.
And hearing that it is Jesus the Nazarene, began to cry out, and say, Jesus, son of David, have mercy on me.
48 ಸುಮ್ಮನಿರುವಂತೆ ಅನೇಕರು ಅವನಿಗೆ ಒತ್ತಾಯಪಡಿಸಿ ಹೇಳಿದರು. ಆದರೆ ಅವನು ಇನ್ನೂ ಗಟ್ಟಿಯಾಗಿ, “ದಾವೀದನ ಪುತ್ರನೇ, ನನ್ನನ್ನು ಕರುಣಿಸು,” ಎಂದು ಇನ್ನಷ್ಟು ಕೂಗಿದನು.
And many continued to rebuke him that he should keep silent: but he continued to cry out much more, O son of David, have mercy on me.
49 ಯೇಸು ನಿಂತು, ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು, ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಅವನಿಗೆ ಹೇಳಿದರು.
And Jesus standing, said, that he should be called. And they call the blind man, saying to him, Take courage: rise up, He calls you.
50 ಅವನು ತನ್ನ ಮೇಲಂಗಿಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು.
And he, casting away his cloak, rising, came to Jesus.
51 ಯೇಸು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ?” ಎಂದು ಕೇಳಲು, ಆ ಕುರುಡನು ಯೇಸುವಿಗೆ, “ಗುರುವೇ, ನನಗೆ ಕಣ್ಣು ಕಾಣುವಂತೆ ಮಾಡಬೇಕು,” ಎಂದನು.
And Jesus responding said to him, What do you wish that I shall do to you? And the blind man said to Him, Great Master, that I may look up.
52 ಅದಕ್ಕೆ ಯೇಸು ಅವನಿಗೆ, “ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು. ಕೂಡಲೇ ಅವನು ತನ್ನ ದೃಷ್ಟಿಯನ್ನು ಪಡೆದು, ದಾರಿಯಲ್ಲಿ ಯೇಸುವನ್ನು ಹಿಂಬಾಲಿಸಿದನು.
And Jesus said to him, Go; thy faith hath saved thee: and immediately he looked up, and followed Jesus in the way.